ಭಾರತದ ವೈವಿಧ್ಯತೆಯನ್ನು ಸಂಕೇತಿಸುವ ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಈ ಬಾರಿ ಧರಿಸಿದ್ದರು. ಜೊತೆಗೆ ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್, ಬಂದಗಾಲ ಪೈಜಾಮಾ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದರು.
ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು.
ಬೆಂಗಳೂರು: ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು (Freedom Fighters) ಮೂಲೆಗೆ ತಳ್ಳಿದ್ದು ಕಾಂಗ್ರೆಸ್ (Congress) ಪಕ್ಷ ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಗಣರಾಜ್ಯೋತ್ಸವದ (Republic Day 2025) ಶುಭಾಶಯ ಕೋರಿದರು. ಅಂಬೇಡ್ಕರ್ ಬರೆದ ಸಂವಿಧಾನವನ್ನು ಅರ್ಪಿಸಿಕೊಂಡು 75 ವರ್ಷವಾಗಿದೆ. ಇಂದು 76ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ. ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲು ಗಟ್ಟಿಯಾದ ಸಂವಿಧಾನವನ್ನು ನೀಡಿದ ದಿನವನ್ನೇ ಗಣರಾಜ್ಯೋತ್ಸವವಾಗಿ ಆಚರಿಸುತ್ತಿದ್ದೇವೆ. ದೇಶವನ್ನು ಯಾವರೀತಿ ನಡೆಸಬೇಕು ಎನ್ನುವುದು ಸಂವಿಧಾನದಲ್ಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Kotekar Bank Robbery; ಕೇವಲ 4 ದಿನದಲ್ಲಿ ಪ್ರಕರಣ ಭೇದಿಸಿ ಎಲ್ಲಾ ಚಿನ್ನಾಭರಣ ವಶಕ್ಕೆ: ಗುಂಡೂರಾವ್
ಸಂವಿಧಾನ ನಿರ್ಮಾಣ ಮಾಡಿದ ದಿನವನ್ನು ನಕಲಿ ಗಾಂಧಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದ ನಂತರವೂ ಗಾಂಧಿ ಕುಟುಂಬದವರು ಅಧಿಕಾರವನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಕೇವಲ ಅಧಿಕಾರಿಕ್ಕಾಗಿ ಮಾತ್ರ ನಾನು ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಈ ಸರ್ಕಾರದಲ್ಲಿ ಲೂಟಿ, ಭ್ರಷ್ಟಾಚಾರ ಮಾತ್ರ ನಿರಂತರವಾಗಿ ನಡೆಯುತ್ತಲೇ ಬರುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ
– ಭದ್ರಾ, ಮೇಕೆದಾಟು ಅನುಮತಿಗಾಗಿ ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ: ಡಿಸಿಎಂ
ಬೆಂಗಳೂರು: ಕಾಂಗ್ರೆಸ್ ನಮ್ಮ ಕುಟುಂಬ, ಯಾವುದೇ ದಾಯಾದಿ ಕಲಹ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲರ ಪುಣ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ಮಾಡಿದ್ದಾರೆ. ಇಂದು ನಮ್ಮ ಸಂವಿಧಾನ ಅನುಷ್ಠಾನ ತಂದ ಪವಿತ್ರ ದಿನ. ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ. ಎಲ್ಲರ ಧರ್ಮ, ಜಾತಿ ಒಂದೇ ಎಂದು ಸಾರಿದ ಪವಿತ್ರವಾದ ದಿನವಿದು. ಸಂವಿಧಾನ ನಮ್ಮ ಬದಕು, ಇದನ್ನು ನೆಹರು ನಾಯಕತ್ವದಲ್ಲಿ ಅಂಬೇಡ್ಕರ್ ಅವರಿಗೆ ಜವಾಬ್ದಾರಿ ಕೊಟ್ಟರು. ಸಂವಿಧಾನ ನಮಗೆ ನಾವು ಅರ್ಪಿಸಿದ ದಿನ. ಸಂವಿಧಾನ ಇಲ್ಲದಿದ್ದರೆ ನಮ್ಮ ಪ್ರಜಾಪ್ರಭುತ್ವ ಆತ್ಮ ಇರುತ್ತಿರಲಿಲ್ಲ. ಈ ಸಂವಿಧಾನವನ್ನು ಉಳಿಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದರು.ಇದನ್ನೂ ಓದಿ: ರಾಜ್ಯಗಳ ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ – ಥಾವರ್ ಚಂದ್ ಗೆಹ್ಲೋಟ್
ಈ ಪೂರ್ತಿ ವರ್ಷ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಸಮಾವೇಶ ಆಗಬೇಕು. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಆಗಬೇಕು. ಈ ಸಮಾವೇಶ ಸಂಬಂಧಿಸಿದಂತೆ ಸಂವಿಧಾನ ರಕ್ಷಣೆಗೆ ವ್ಯಾಪಕವಾಗಿ ಚರ್ಚೆ ಆಗಬೇಕು. ಸರ್ಕಾರಿ ಶಾಲಾ ಕಾಲೇಜಿನಲ್ಲಿ ಚರ್ಚೆಯಾಗಬೇಕು. 224 ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಸಲು ತಯಾರಿ ನಡೆಸುತ್ತಿದ್ದೇವೆ. ಸರ್ಕಾರದಲ್ಲಿ ಚರ್ಚೆ ಮಾಡಿ ಕಾರ್ಯಕ್ರಮ ರೂಪಿಸುತ್ತೇವೆ ಎಂದು ಹೇಳಿದರು.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ @Kharge ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾನು ಜೊತೆಗಿದ್ದೆವು. ಸಂವಿಧಾನ ಜಾರಿಯಾದ ಈ ಐತಿಹಾಸಿಕ ದಿನದಂದು ಅದರ ಮೌಲ್ಯಗಳನ್ನು ಎತ್ತಿಹಿಡಿಯುವ ಪಣ ತೊಡೋಣ. #RepublicDaypic.twitter.com/8uZTE9vGyT
ಇದೇ ವೇಳೆ ಬೆಂಗಳೂರು ಅಭಿವೃದ್ಧಿಗೆ ಕೇಂದ್ರಕ್ಕೆ ಪತ್ರ ಬರೆದ ವಿಚಾರವಾಗಿ ಮಾತನಾಡಿ, ಬೆಂಗಳೂರು ಮುಖಾಂತರ ಭಾರತ ನೋಡಲಾಗುತ್ತಿದೆ. ಇದೀಗ ಬೆಂಗಳೂರು ಅಂತಾರಾಷ್ಟ್ರೀಯ ನಗರವಾಗಿದೆ. ಜೊತೆಗೆ ಅತೀ ಹೆಚ್ಚು ತೆರಿಗೆ ಸಂಗ್ರಹಣೆ ಆಗುತ್ತಿದೆ. ಹೀಗಾಗಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇವೆ. ಬೇರೆ ದೇಶದ ದೂತವಾಸ ಕಚೇರಿಗಳು ಇಲ್ಲಿವೆ. ಯಾವುದೇ ಗಡವು ನಾವು ಕೊಡುವುದಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದೇವೆ. ಅವರು ಇಲ್ಲಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ. ಜೋಶಿ, ಶೆಟ್ಟರ್ ಸೇರಿದಂತೆ ಅನೇಕ ಹಿರಿಯ ನಾಯಕರಿದ್ದಾರೆ ಅವರಿಗೆ ಭದ್ರಾ, ಮೇಕೆದಾಟುವಿಗೆ ಅನುಮತಿ ಕೊಡಿಸಬೇಕಾಗಿ ಮನವಿ ಮಾಡಿದ್ದೇವೆ ಎಂದರು.
ಇದು ಖರ್ಗೆ ಅವರೇ ಕಟ್ಟಿಸಿದ ಕಚೇರಿ. ನಾನು ಹೊರಗಡೆ ಮುಖವಾಡ ಬದಲಾವಣೆ ಮಾಡಿದ್ದೇನೆ. ಫ್ಯಾಮಿಲಿ ವಿಷಯಗಳನ್ನು ಬಹಿರಂಗವಾಗಿ ಹೇಳಲು ಆಗಲ್ಲ. ಆದರೆ ಕಾಂಗ್ರೆಸ್ ಇಸ್ ಅವರ್ ಫ್ಯಾಮಿಲಿ. ಯಾವುದೇ ದಾಯಾದಿ ಕಲಹ ಇಲ್ಲ. ಮೊನ್ನೆ ಸಿಎಂ ಕೂಡ ಚಿತ್ರದುರ್ಗದಲ್ಲಿ ಎಲ್ಲ ಪರದೆ ಬಿಚ್ಚಿಟ್ಟಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ರಾಜ್ಯಗಳ ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ – ಥಾವರ್ ಚಂದ್ ಗೆಹ್ಲೋಟ್
– 139 ಸಾಧಕರಿಗೆ ಪದ್ಮ ಪ್ರಶಸ್ತಿ
– 5,000 ಕಲಾವಿದರಿಂದ ಸಾಂಸ್ಕೃತಿಕ ಮೆರವಣಿಗೆ
ನವದೆಹಲಿ: ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಇಂದು ದೆಹಲಿಯ ಕರ್ಥವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ.
76ನೇ ಗಣರಾಜೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆ ಸಜ್ಜಾಗಿದ್ದು, ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಕರ್ನಾಟಕದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿದೆ.
ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ವಿಶೇಷ ಅತಿಥಿ ಇಂಡೋನೇಷ್ಯಾ ಅಧ್ಯಕ್ಷರು ಸೇರಿ ಇತರ ಗಣ್ಯರು ಸಾಕ್ಷಿಯಾಗಲಿದ್ದಾರೆ. 10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.
ಹೇಗಿದೆ ಭದ್ರತೆ?
ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗಲಿದ್ದಾರೆ. ಹಾಗಾಗಿ ಕರ್ತವ್ಯ ಪಥದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ.
ಒಟ್ಟು 6 ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.
139 ಸಾಧಕರಿಗೆ ಪದ್ಮ ಪ್ರಶಸ್ತಿ:
ಗಣರಾಜ್ಯೋತ್ಸವದ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಯಿತು. ಇದರ ಅಡಿಯಲ್ಲಿ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗುವ ವ್ಯಕ್ತಿಗಳ ಹೆಸರನ್ನು ಘೋಷಿಸಲಾಯಿತು. ಈ ಬಾರಿ ರಾಷ್ಟ್ರಪತಿಗಳು 139 ಪದ್ಮ ಪ್ರಶಸ್ತಿಗಳನ್ನು ಅನುಮೋದಿಸಿದ್ದಾರೆ.
ಪಟ್ಟಿಯಲ್ಲಿ ಏಳು ಪದ್ಮವಿಭೂಷಣ ಮತ್ತು 19 ಪದ್ಮಭೂಷಣ ಪ್ರಶಸ್ತಿಗಳು ಸೇರಿವೆ. ಇದಲ್ಲದೇ, 113 ಪದ್ಮಶ್ರೀ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 23 ಮಹಿಳೆಯರು ಸೇರಿದ್ದಾರೆ. ಈ ಪಟ್ಟಿಯಲ್ಲಿ 10 ವಿದೇಶಿಯರು, NRIಗಳು, ಪಿಐಒಗಳು, ಒಸಿಐ ವರ್ಗದ ವ್ಯಕ್ತಿಗಳು ಸೇರಿದ್ದಾರೆ. ಅದೇ ಸಮಯದಲ್ಲಿ, 13 ಮರಣೋತ್ತರ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಇದರಲ್ಲಿ ಭೋಜ್‌ಪುರಿ ಗಾಯಕಿ ಶಾರದಾ ಸಿನ್ಹಾ (ಮರಣೋತ್ತರ), ನ್ಯಾಯಮೂರ್ತಿ (ನಿವೃತ್ತ) ಜಗದೀಶ್ ಸಿಂಗ್ ಖೇಹರ್ ಮತ್ತು ಸುಜುಕಿ ಕಂಪನಿಯ ಒಸಾಮು ಸುಜುಕಿ (ಮರಣೋತ್ತರ), ಬಿಬೇಕ್ ಡೆಬ್ರಾಯ್, ಸುಶೀಲ್ ಮೋದಿ ಮತ್ತು ಮನೋಹರ್ ಜೋಶಿ (ಮರಣೋತ್ತರ) ಅವರ ಹೆಸರುಗಳು ಸೇರಿವೆ. ಪ್ರಮುಖವಾಗಿ ತಮಿಳು ನಟ ಅಜಿತ್ ಕುಮಾರ್ ಹಾಗೂ ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಬಭೂಷಣ, ಟೀಂ ಇಂಡಿಯಾದ ನಿರ್ಗಮಿತ ಸ್ಟಾರ್ ಆಟಗಾರ ಆರ್. ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.
ಪದ್ಮವಿಭೂಷಣ
ಪಿಟೀಲು ವಾದಕ ಲಕ್ಷ್ಮೀನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ.
ಪದ್ಮಭೂಷಣ
ಸ್ಯಾಂಡಲ್‌ವುಡ್ ಹಿರಿಯ ನಟ ಅನಂತನಾಗ್, ಶಿಕ್ಷಣ ತಜ್ಞ ಹಾಗೂ ಅಂಕಣಕಾರ ಎ.ಸೂರ್ಯಪ್ರಕಾಶ್ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪದ್ಮಶ್ರೀ
ಗ್ರಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್, ವೈದ್ಯಕೀಯ ಕ್ಷೇತ್ರದ ವಿಜಯಲಕ್ಷ್ಮಿ ದೇಶಮಾನೆ, ಕಲಾ ಕ್ಷೇತ್ರದಲ್ಲಿ ವೆಂಕಪ್ಪ ಅಂಬಾಜಿ, ಹಾಸನ ರಘು, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ, ಕೈಗಾರಿಕಾ ಕ್ಷೇತ್ರದಲ್ಲಿ ಪ್ರಶಾಂತ್ ಪ್ರಕಾಶ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.
ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ, ಬಿಐಇಸಿ ನಡೆಯುತ್ತಿರುವ ಕಾರ್ಯಕ್ರಮ, ಶಾಲೆ ಮತ್ತು ಕಾಲೇಜುಗಳಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್(BMRCL) ಈ ಕ್ರಮವನ್ನು ಕೈಗೊಂಡಿದೆ. ಇದರ ಜೊತೆ ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ 20 ಹೆಚ್ಚುವರಿ ಮೆಟ್ರೋ ರೈಲುಗಳನ್ನು ಓಡಿಸಲು ಮುಂದಾಗಿದೆ.
ಲಾಲ್‌ಭಾಗ್ ಮೆಟ್ರೋ ನಿಲ್ದಾಣದಲ್ಲಿ ಬೆ. 10 ರಿಂದ ರಾತ್ರಿ 8 ರವರೆಗೆ ಪೇಪರ್ ಟಿಕೆಟ್ ಸಿಗಲಿದೆ. ಪೇಪರ್ ಟಿಕೆಟ್ ಮೂಲಕ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ.
ಕೊಪ್ಪಳ: ದೆಹಲಿಯಲ್ಲಿ ಈ ಬಾರಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕೊಪ್ಪಳ (Koppal) ತಾಲೂಕು ಕಿನ್ನಾಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ವೇತಾ ಡಂಬಳ ಹಾಗೂ ಅವರ ಪತಿಗೆ ಕೇಂದ್ರ ಪಂಚಾಯತ್ ರಾಜ್ ಸಚಿವಾಲಯ ಆಹ್ವಾನ ನೀಡಿದೆ.
ಕಳೆದ ಕೆಲ ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನರೇಗಾದಲ್ಲಿ ಸಾಧನೆ ಮಾಡಿರುವವರು ಸೇರಿ ನಾನಾ ಯೋಜನೆಯಲ್ಲಿ ಗಣನೀಯ ಸಾಧನೆ ಮಾಡಿರುವ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಗುಂಪಿನ ಸಾಧಕರಿಗೆ ಆಹ್ವಾನ ನೀಡುತ್ತಿದ್ದಾರೆ. ಇದರ ಭಾಗವಾಗಿ ಈ ಬಾರಿ ದೇಶಾದ್ಯಂತ 750 ಗ್ರಾ.ಪಂ ಅಧ್ಯಕ್ಷರನ್ನು ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬರೀ ಊಹಾಪೋಹ, ಯಾವುದೇ ಚರ್ಚೆ ನಡೆದಿಲ್ಲ – ಶರಣಪ್ರಕಾಶ್ ಪಾಟೀಲ್
ಈ ಪೈಕಿ ರಾಜ್ಯದ 12 ಗ್ರಾ.ಪಂ ಅಧ್ಯಕ್ಷರಿಗೆ ಅವಕಾಶ ದೊರೆತಿದೆ. ಕೇಂದ್ರದ ಆಹ್ವಾನದ ಹಿನ್ನೆಲೆ ರಾಜ್ಯ ಪಂಚಾಯತ್, ರಾಜ್ ಆಯುಕ್ತಾಲಯ ಸಂಬಂಧಿಸಿದ ಜಿಲ್ಲೆಯ ಜಿ.ಪಂ ಸಿಇಒಗಳಿಗೆ ಪತ್ರ ಬರೆದು ದೆಹಲಿಗೆ ಕಳುಹಿಸಲು ಕ್ರಮ ವಹಿಸಬೇಕು. ಸಾರಿಗೆ ಮತ್ತು ವಸತಿ ಸಹಿತ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಿ ದೆಹಲಿಗೆ ಕಳುಹಿಸಬೇಕು ಎಂದು ಸೂಚಿಸಿದೆ.
ಪತ್ರದಲ್ಲಿ ಏನಿದೆ?
ರಾಜ್ಯದ 12 ಗ್ರಾಪಂ ಅಧ್ಯಕ್ಷರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ಬಂದಿದೆ. ಅದರಲ್ಲಿ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಪಂ ಅಧ್ಯಕ್ಷೆ ಕೂಡಾ ಒಬ್ಬರು. ರಾಜ್ಯದಿಂದ ಹಾವೇರಿ, ಮೈಸೂರು, ಹಾಸನ, ಮಂಡ್ಯ, ಕೊಡಗು, ಚಿತ್ರದುರ್ಗ, ಗದಗ, ಬೀದರ್ ಮತ್ತು ಉಡುಪಿ ಜಿಲ್ಲೆಗೆ ಸೇರಿರುವ ಒಟ್ಟು 12 ಗ್ರಾಮ ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದಾರೆ.
ಗ್ರಾಪಂ ಅಧ್ಯಕ್ಷರ ಜೊತೆ ಅವರ ಪತಿ ಅಥವಾ ಪತ್ನಿಯನ್ನು ಕರೆದೊಯ್ಯಲು ಅವಕಾಶವಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹೋಗುವ ಗ್ರಾಪಂ ಅಧ್ಯಕ್ಷರು ಮತ್ತು ಅವರ ಕುಟುಂಬದ ಒಬ್ಬರಿಗೆ ಹೋಗಿ ಬರಲು ಮತ್ತು ತಂಗಲು ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ. ಅಧ್ಯಕ್ಷರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬರಲು ಅನುಕೂಲ ಆಗಲು ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಅವರಿಗೂ ಕೂಡ ಪತಿ ಅಥವಾ ಪತ್ನಿಗೆ ದೆಹಲಿಗೆ ಹೋಗಲು ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.
ಏಕೆ ಆಯ್ಕೆ?
ಕಿನ್ನಾಳ ಗ್ರಾಮವು ರಾಜ್ಯದ ಮಹಿಳಾ ಸ್ನೇಹಿ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿದೆ. ಕಿನ್ನಾಳ ಗ್ರಾಮ ಪಂಚಾಯತ್ ಅನೇಕ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸುವುದು, ಸಾಮಾನ್ಯ ಸಭೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯಲ್ಲಿ ಗಮನಾರ್ಹ ಸಾಧನೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಂಚಾಯತಿ ಪುರಸ್ಕಾರವನ್ನು ಕಳೆದ ತಿಂಗಳು ರಾಷ್ಟ್ರಪತಿಗಳು ಕಿನ್ನಾಳ ಗ್ರಾಪಂಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಿನ್ನಾಳ ಗ್ರಾಮ ಪಂಚಾಯತ್ ಅಧ್ಯಕ್ಷೆಯನ್ನು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ. ಇದೇ ರೀತಿ ಸರ್ಕಾರದ ಯೋಜನೆಗಳನ್ನು ಗಮನಾರ್ಹವಾಗಿ ಜಾರಿಗೊಳಿಸಿದ 12 ಗ್ರಾಪಂ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ.ಇದನ್ನೂ ಓದಿ: Champions | ವಿಜಯ್ ಹಜಾರೆ ಟ್ರೋಫಿ – 5ನೇ ಬಾರಿ ಕರ್ನಾಟಕ ಚಾಂಪಿಯನ್
– 2 ವರ್ಷದ ಬಳಿಕ ರಾಜ್ಯದ ಟ್ಯಾಬ್ಲೋ ಆಯ್ಕೆ – 11ನೇ ಶತಮಾನದ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಕಪ್ಪು ಶಿಲೆಯಿಂದ ನಿರ್ಮಾಣ
ಗದಗ: ಇತ್ತೀಚೆಗೆ ಪ್ರಾಚ್ಯವಸ್ತು ವಿಶೇಷ ಸಂಗ್ರಹಣೆಯಲ್ಲಿ ರಾಜ್ಯಾದ್ಯಂತ ಸದ್ದು ಮಾಡಿದ್ದ ಲಕ್ಕುಂಡಿ ಗ್ರಾಮದ ಬ್ರಹ್ಮ ಜಿನಾಲಯ (Brahma Jinalaya, Lakkundi) ಜನವರಿ 26 ರಂದು ದೆಹಲಿ ಗಣರಾಜ್ಯೋತ್ಸವದ ಪರೇಡ್‌ಗೆ (Republic Day Parade) ಆಯ್ಕೆ ಆಗಿದೆ.
ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡಿಸುವ ಪ್ರಕ್ರಿಯೆಗೆ ಮತ್ತು ಪ್ರಾಚ್ಯವಸ್ತು ಸಂರಕ್ಷಣೆಗೆ ಪೂರಕವಾಗಿ ಈ ಬೆಳವಣಿಗೆ ಮಹತ್ವ ಪಡೆದಿದೆ. ಎಚ್.ಕೆ. ಪಾಟೀಲ್ (HK Patol) ಪ್ರವಾಸೋದ್ಯಮ ಇಲಾಖೆ ಸಚಿವರಾದ ನಂತರ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಕಾರಾತ್ಮಕ ಬೆಳವಣಿಗೆ ನಡೆಯುತ್ತಿದ್ದು, ಜೈನ ದೇವಾಲಯ ದೆಹಲಿಯ ಪರೇಡ್ ಗೆ ಆಯ್ಕೆ ಆಗಿದ್ದು, ಈ ಭಾಗದ ಜನರಲ್ಲಿನ ಸಂತಸ ಇಮ್ಮಡಿಗೊಳಿಸಿದೆ.
ಕಳೆದ ಎರಡು ವರ್ಷದಿಂದ ಕರ್ನಾಟಕದಿಂದ ಯಾವುದೇ ಟ್ಯಾಬ್ಲೋ (Tableau) ಆಯ್ಕೆ ಆಗಿರಲಿಲ್ಲ. ಈ ವರ್ಷ ಲಕ್ಕುಂಡಿ ಬ್ರಹ್ಮ ಜಿನಾಲಯ ಸ್ತಬ್ಧ ಚಿತ್ರಕ್ಕೆ ಆಯ್ಕೆಯಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ದೆಹಲಿಯಲ್ಲಿ ಟ್ಯಾಬ್ಲೋ ನಿರ್ಮಾಣ ಕಾರ್ಯ ಆರಂಭವಾಗಿದೆ. ನುರಿತ ಕಲಾವಿದರು ಫೈಬರ್‌ನಿಂದ ಬ್ರಹ್ಮ ಜಿನಾಲಯದ ಸ್ತಬ್ಧ ಚಿತ್ರ ತಯಾರಿಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಬಂಪರ್ ಕೊಡುಗೆ – ಧಾರವಾಡಕ್ಕೆ ಬಂತು ಪ್ರತ್ಯೇಕ ಪಾಲಿಕೆ
ದೇವಾಲಯದ ವಿಶೇಷತೆ ಏನು?
11ನೇ ಶತಮಾನದ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಕಪ್ಪು ಶಿಲೆಯಿಂದ ನಿರ್ಮಾಣ ಮಾಡಲಾಗಿದೆ. ಮೇಲ್ಭಾಗದಲ್ಲಿ ದ್ರಾವಿಡ ಶೈಲಿ ಹೊಂದಿರುವ ಬ್ರಹ್ಮ ಜಿನಾಲಯವು ಪೂರ್ವಾಭಿಮುಖವಾಗಿ ನಿರ್ಮಾಣಗೊಂಡಿದೆ. ಗರ್ಭಗೃಹ, ಅಂತರಾಳ, ಗೂಢ ಮಂಟಪ, ಅಗಮ ಮಂಟಪದಂತಹ ತಲವಿನ್ಯಾಸದಿಂದ ಕೂಡಿದೆ. ಚೌಕಾಕಾರದ ಗರ್ಭಗೃಹದ ಮಧ್ಯದಲ್ಲಿ ಎತ್ತರವಾದ ಸಿಂಹಪೀಠದ ಮೇಲೆ ತೀರ್ಥಂಕರನ ಶಿಲ್ಪವಿದೆ. ಇಕ್ಕೆಲದಲ್ಲಿ ಇಬ್ಬರು ಚಾಮರಧಾರಿಗಳಿದ್ದಾರೆ. ಪೀಠದ ಸುತ್ತಲೂ ಮಕರ ತೋರಣದ ಅಲಂಕರಣೆಯಿದ್ದು, ಮೇಲ್ಬಾಗದಲ್ಲಿ ರತ್ನತ್ರಯರ ಪ್ರತೀಕವಾದ ಮುಕ್ಕೊಡೆಯಿದೆ.
ತೀರ್ಥಂಕರನನ್ನು ಈಗ ನೇಮಿನಾಥ ಎಂದು ಕರೆಯಲಾಗುತ್ತಿದೆ. ಗರ್ಭ ಗೃಹಕ್ಕೆ ಹೊಂದಿಕೊಂಡು ಅಂತರಾಳವಿದ್ದು, ಮೂಲೆಗಳಲ್ಲಿ ಅರ್ಧಕಂಬಗಳಿವೆ. ಮುಂಭಾಗದಲ್ಲಿ ಎರಡು ಭದ್ರಕ ರೀತಿಯ ಸ್ತಂಭಗಳಿವೆ. ಅಂತರಾಳಕ್ಕೆ ಹೊಂದಿಕೊಂಡಂತೆ ಗೂಢಮಂಟಪವಿದೆ. ಮಧ್ಯದಲ್ಲಿ ನಾಲ್ಕು ಸ್ವತಂತ್ರ ಶ್ರೀಕಾರ ಸ್ತಂಭಗಳಿದ್ದು, ಪೀಠ, ಓಂ, ಕಾಂಡ ಮಾಲಾಸ್ಥಾನ, ಕುಂಭ, ಕಲಶ, ಲಕ ಮತ್ತು ಬೋದಿಗೆ ಭಾಗಗಳನ್ನು ಹೊಂದಿವೆ. ಇಕ್ಕೆಲದಲ್ಲಿ ಚತುಮುರ್ಖ ಬ್ರಹ್ಮ ಮತ್ತು ಪದ್ಮಾವತಿ ಶಿಲ್ಪಗಳಿವೆ. ಮಧ್ಯದಲ್ಲಿ ಪದ್ಮದ ಉಬ್ಬು ಅಲಂಕಾರವಿದೆ. ಸ್ತಂಭಗಳ ಪೀಠ ಭಾಗದಲ್ಲಿ ದರ್ಪಣ ಸುಂದರಿ, ನರ್ತಕಿ, ತಾಯಿ ಮತ್ತು ಮಗು, ಕೊಳಲು ನುಡಿಸುವ ಸ್ತ್ರೀಯ ಉಬ್ಬು ಶಿಲ್ಪಗಳನ್ನು ಕೆತ್ತಲಾಗಿದೆ.
ಬ್ರಹ್ಮ ಜಿನಾಲಯದ ಬಾಹ್ಯ ವಾಸ್ತು:
ಜೈನ ದೇವಾಲಯವು ಕಪೋತಬಂಧ, ಅಧಿಷ್ಠಾನವನ್ನು ಹೊಂದಿದ್ದು, ಅದಕ್ಕೆ ಕ್ರಮವಾಗಿ ಖುರಕ, ಪದ್ಮ, ಅಂತರೀತ, ತ್ರಿಪಟ್ಟ ಕುಮುದ, ಅಂತರೀತ, ಕಪೋತ ಮತ್ತು ಮಕರಪಟ್ಟಿಕೆ ಭಾಗಗಳಿವೆ. ಮಕರ ಪಟ್ಟಿಕೆಯಲ್ಲಿ ಪ್ರಾಣಿಗಳ ಮತ್ತು ಕೀತಿರ್ಮುಖಗಳ ಅಲಂಕಾರವಿದೆ. ಕಪೋತದ ಮೇಲೆ ನಾಸಿಗಳ ಅಲಂಕಾರವಿದೆ. ಗರ್ಭಗೃಹದ ಮೇಲಿನ ಶಿಖರವು ಚತುಸ್ಥಲ ದ್ರಾವಿಡ ಮಾದರಿಯದ್ದಾಗಿದೆ. ಮೊದಲನೆಯ ಮಹಡಿಯಲ್ಲಿ ಹಾರವು ಕೂಟ, ಪಂಜರ, ಶಾಲಾಗಳಿಂದ ಕೂಡಿದೆ.
ಕಪೋತದ ಮೇಲೆ ವೇದಿಕೆ ಇದೆ. ಕೂಟ ಮತ್ತು ಪಂಜರಗಳಲ್ಲಿ ಕೀತಿರ್ಮುಖಗಳ ಅಲಂಕಾರವಿದೆ. ಶಾಲಾದಲ್ಲಿ ಜಿನಬಿಂಬಗಳನ್ನು ಮತ್ತು ಶಿವ, ಸೂರ್ಯನ ಶಿಲ್ಪಗಳನ್ನು ಕೆತ್ತಲಾಗಿದೆ. 2 ಮತ್ತು 3ನೇ ಮಹಡಿಗಳಲ್ಲಿಯೂ ಇದೇ ರೀತಿಯ ಹಾರದ ಅಲಂಕಾರವಿದೆ. ಅದರ ಮೇಲೆ ಕಪೋತವಿದೆ. ಮೇಲ್ಬಾಗದಲ್ಲಿ ಕಲಶವಿದೆ. ಶಿಖರದ ಮುಂಭಾಗದಲ್ಲಿಯ ಶುಕನಾಸಿಯು ಗವಾದ ಅಲಂಕಾರದಿಂದ ಕೂಡಿದ್ದು ಮಧ್ಯದಲ್ಲಿ ಶಿಲ್ಪವಿಲ್ಲ. ಅದರ ಮೇಲೆ ಕೀತಿರ್ ಮುಖವಿದೆ.
ಐತಿಹಾಸಿಕ ಲಕ್ಕುಂಡಿ ಇತಿಹಾಸವನ್ನು ದೇಶಕ್ಕೆ ಪರಿಚಯಿಸಬೇಕೆಂಬ ಮಹದಾಸೆಯೊಂದಿಗೆ ಸಚಿವರಾದ ಎಚ್.ಕೆ. ಪಾಟೀಲ ಅವರು ವಿಶೇಷ ಆಸಕ್ತಿ ವಹಿಸಿ ಇಲ್ಲಿನ 13 ಸ್ಮಾರಕಗಳ ಜೀರ್ಣೋದ್ಧಾರಕ್ಕಾಗಿ 5 ಕೋಟಿ ರೂ. ಬಿಡುಗಡೆ ಮಾಡಿದ್ದರು. ಈಗ ಜೀರ್ಣೋದ್ಧಾರ ಕಾಮಗಾರಿಗೆ ಪ್ರಗತಿಯಲ್ಲಿದೆ. ಲಕ್ಕುಂಡಿ ಭಾಗದಲ್ಲಿ ಅನ್ವೇಷಣೆ ಮಾಡಿದಷ್ಟು ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ಆದರೆ ಹಲವು ವರ್ಷಗಳಿಂದ ಈ ಭಾಗದಲ್ಲಿ ಅನ್ವೇಷಣೆ ಮತ್ತು ಜೀರ್ಣೋದ್ಧಾರ ನಡೆದಿರಲಿಲ್ಲ. ಈಗ ಇಂತಹ ಅಭಿವೃದ್ಧಿಗೆ ಶುಕ್ರದೆಸೆ ಕೂಡಿಬಂದಿದ್ದು, ಲಕ್ಕುಂಡಿ ಗ್ರಾಮಕ್ಕೆ ಕಲಸ ಪ್ರಾಯವಾಗಿದೆ. ಪ್ರವಾಸಿಗಿರಿಂದ ಲಕ್ಕುಂಡಿಯ ಆಥಿರ್ಕ ಸಂಪನ್ಮೂಲದ ಪ್ರಗತಿ ಸಾಧಿಸಲಿದೆ ಅಂತಿದ್ದಾರೆ ಲಕ್ಕುಂಡಿ ಪ್ರಾಧಿಕಾರದ ಸದಸ್ಯ ಸಿದ್ಧಲಿಂಗೇಶ್ವರ ಪಾಟೀಲ.
ಲಕ್ಕುಂಡಿ ಗ್ರಾಮದಲ್ಲಿ 16 ಜೈನ ಬಸದಿಗಳು, 5 ವೈಷ್ಣವ ದೇವಾಲಯಗಳು, 1 ಬೌದ್ಧ ಮಂದಿರ, 101 ದೇವಸ್ಥಾನ, 101 ಈಶ್ವರ ಲಿಂಗಗಳು, 101 ಬಾವಿಗಳು ಹಾಗೂ 22 ವೀರಶೈವ ಲಿಂಗಾಯತ ಮಠಗಳಿದ್ದವು ಎಂಬುದಾಗಿ ಶಿಲಾಶಾಸನಗಳಿಂದ ತಿಳಿದು ಬಂದಿದೆ. ಇತಿಹಾಸದ ಶಿಲೆಗಳ ಪತ್ತೆಗೆ ವಿಶೇಷ ಯೋಜನೆ ರೂಪಿಸುವಲ್ಲಿ ನಿರತರಾಗಿದ್ದಾರೆ. ಈ ನಡುವೆ ದೆಹಲಿಯ ಗಣರಾಜ್ಯೋತ್ಸವ ಪರೇಡ್ ಗೆ ಬ್ರಹ್ಮ ಜಿನಾಲಯ ಸ್ತಬ್ಧ ಚಿತ್ರಆಯ್ಕೆ ಆಗಿರುವುದು ಲಕ್ಕುಂಡಿಗೆ ಹಿರಿಮೆ ತಂದಿದೆ ಅಂತಿದ್ದಾರೆ, ಲಕ್ಕುಂಡಿ ಪ್ರಾಧಿಕಾರದ ಆಯುಕ್ತ ಶರಣು ಗೊಗೇರಿ.
– ಶೀಷ್ ಮಹಲ್ ಟ್ಯಾಬ್ಲೋ ಪ್ರದರ್ಶನ ಮಾಡ್ತೀರಾ? – ಬಿಜೆಪಿ ವ್ಯಂಗ್ಯ
ನವದೆಹಲಿ: ರಾಜಪಥದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಗಣರಾಜ್ಯೋತ್ಸವದ (Republic Day) ಪರೇಡ್‌ನಲ್ಲಿ ದೆಹಲಿಯ ಟ್ಯಾಬ್ಲೋ (Delhi Tableau) ಇರುವುದಿಲ್ಲ. ನಾಲ್ಕನೇ ಬಾರಿ ಈ ರೀತಿ ದೆಹಲಿಯ ಟ್ಯಾಬ್ಲೋ ತಿರಸ್ಕಾರಗೊಂಡಿದ್ದು, ಆಪ್ (AAP) ಹಾಗೂ ಬಿಜೆಪಿ (BJP) ನಡುವೆ ಮತ್ತೆ ಸಂಘರ್ಷಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಕಳೆದ ಕೆಲವು ವರ್ಷಗಳಿಂದ ದೆಹಲಿಯ ಟ್ಯಾಬ್ಲೋಗೆ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದು ಯಾವ ರೀತಿಯ ರಾಜಕೀಯ? ಬಿಜೆಪಿಯವರು ದೆಹಲಿಯ ಜನರನ್ನು ಏಕೆ ದ್ವೇಷಿಸುತ್ತಾರೆ? ದೆಹಲಿಯ ಜನರು ಅವರಿಗೆ ಏಕೆ ಮತ ಹಾಕಬೇಕು? ಎಂದು ಕಿಡಿಕಾರಿದ್ದಾರೆ.
ಬಿಜೆಪಿಗೆ ದೆಹಲಿಯ ಜನರ ಬಗ್ಗೆ ಯಾವುದೇ ದೂರದೃಷ್ಟಿ ಇಲ್ಲ. ಅವರು ಸುಮ್ಮನೆ ಕೇಜ್ರಿವಾಲ್‌ರನ್ನು ನಿಂದಿಸುತ್ತಾರೆ. ಇದಕ್ಕಾಗಿ ನಾವು ಅವರಿಗೆ ಮತ ಹಾಕಬೇಕೇ? ಜನವರಿ 26 ರ ಪರೇಡ್‌ನಲ್ಲಿ ಭಾಗವಹಿಸದಂತೆ ಟ್ಯಾಬ್ಲೋ ಮತ್ತು ದೆಹಲಿಯ ಜನರನ್ನು ಏಕೆ ತಡೆಯಲಾಗುತ್ತಿದೆ? ಎಂದು ಅವರು ಪ್ರಶ್ನಸಿದ್ದಾರೆ.
ದೆಹಲಿಯು ಭಾರತದ ರಾಜಧಾನಿಯಾಗಿದೆ ಮತ್ತು ಪ್ರತಿ ವರ್ಷ ಜನವರಿ 26 ರ ಮೆರವಣಿಗೆಯಲ್ಲಿ ನಮ್ಮ ಟ್ಯಾಬ್ಲೋ ಪ್ರತಿನಿಧಿಸಬೇಕು ಎಂದು ಅವರು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್, ಕೇಜ್ರಿವಾಲ್ ಹೇಳಿಕೆಗಳು ಅರಾಜಕತಾವಾದಿ ಸ್ವಭಾವವನ್ನು ಸೂಚಿಸುತ್ತದೆ. ಏನನ್ನು ಪ್ರದರ್ಶಿಸಲು ಅವರು ಬಯಸಿದ್ದರು? ಪ್ರವಾಹದಲ್ಲಿ 60 ಕ್ಕೂ ಹೆಚ್ಚು ಜನರ ಸಾವನ್ನು ತೋರಿಸುತ್ತಾರೆಯೇ? ಅಥವಾ ಜನರ ಹಣವನ್ನು ಲೂಟಿ ಮಾಡಿ ಅವರು ಕಟ್ಟಿದ ʻಶೀಷ್ ಮಹಲ್ʼನ್ನು ತೋರಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಇಡೀ ದೇಶದ ಟ್ಯಾಬ್ಲೋವನ್ನು ಪ್ರದರ್ಶಿಸಲಾಗುತ್ತದೆ. ಸಮಿತಿಯು ಟ್ಯಾಬ್ಲೋ ಬಗ್ಗೆ ನಿರ್ಧರಿಸುತ್ತದೆ. ಈಗ, ಅರವಿಂದ್ ಕೇಜ್ರಿವಾಲ್ ಇದರಲ್ಲೂ ರಾಜಕೀಯ ಮಾಡಲು ಬಯಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
2021ರ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕೊನೆಯ ಬಾರಿಗೆ ದೆಹಲಿಯ ಟ್ಯಾಬ್ಲೋ ಕಾಣಿಸಿಕೊಂಡಿತ್ತು. ಇದು ಶಹಜಹಾನಾಬಾದ್ ನಗರಾಭಿವೃದ್ಧಿ ಯೋಜನೆಯನ್ನು ಪ್ರದರ್ಶಿಸಿತ್ತು.