Tag: ಗಣರಾಜ್ಯೋತ್ಸವ

  • 75th Republic Day: ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ

    75th Republic Day: ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ

    ಬೆಳಗಾವಿ: ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು (75th Republic Day) ಆಚರಿಸಲಾಗುತ್ತಿದೆ. ಅದರಂತೆ ದೆಹಲಿಯಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧರೊಬ್ಬರು ಆಯ್ಕೆಯಾಗಿದ್ದಾರೆ.

    ಹೌದು. ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಯೋಧ ಅದೃಶ್ಯ ಮಾವಿನಕಟ್ಟಿ ಆಯ್ಕೆಯಾಗಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ಕ್ರೊಪ ವೆಲ್ಲಿಂಗ್ಟನ್ ನಲ್ಲಿ ತರಬೇತಿ ಪಡೆದಿದ್ದಾರೆ.

    ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎನ್ ಸಿಸಿ (NCC) ತರಬೇತಿ ಕೂಡ ಪಡೆದಿದ್ದಾರೆ. ಇದೀಗ ದೆಹಲಿಯಲ್ಲಿ ನಡೆಯುವ ಪೆರೇಡ್‌ನಲ್ಲಿ ಅದೃಶ್ಯ ಭಾಗಿಯಾಗಿರುವುದು ಕುಟುಂಬಸ್ಥರು ಸೇರಿದಂತೆ ಎಲ್ಲರಿಗೂ ಸಂತಸ ತಂದಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲೇ ಹಿಂದೂ ದೇವಾಲಯವಿತ್ತು – ಪುರಾತತ್ವ ಇಲಾಖೆ ವರದಿ ಬಹಿರಂಗ

  • Republic Day 2024: ಈ ಬಾರಿಯ ವಿಶೇಷತೆ ಏನು ಗೊತ್ತಾ?

    Republic Day 2024: ಈ ಬಾರಿಯ ವಿಶೇಷತೆ ಏನು ಗೊತ್ತಾ?

    ನವದೆಹಲಿ: ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಸ್ಥಾಪನೆಗೋಸ್ಕರ ಅವಿರತವಾಗಿ ಶ್ರಮಿಸಬೇಕೆಂದು ಅಂದಿನ ರಾಷ್ಟ್ರೀಯ ಕಾಂಗ್ರೆಸ್ 1929ರ ಜನವರಿ 26ರಂದು ಪ್ರತಿಜ್ಞೆ ಮಾಡಿತ್ತು. 1950ರ ಜನವರಿ 26ರಂದು ಈ ಕನಸು ನನಸಾಯಿತು. ಈ ದಿನ ಭಾರತವು ಗಣರಾಜ್ಯವಾಗಿ ತನ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ರೂಪಿಸಿಕೊಂಡಿತು.

    ಸಂವಿಧಾನದ ರಚನೆಗೆ 2 ವರ್ಷ, 11 ತಿಂಗಳು, 17 ದಿನಗಳು ಬೇಕಾಯಿತು. ಭಾರತದ ಸಂವಿಧಾನ ಸಂಪೂರ್ಣ ಲಿಖಿತವಾಗಿದ್ದು, ಅದರಲ್ಲಿ 22 ಅಧ್ಯಾಯಗಳು ಮತ್ತು 395 ಅನುಚ್ಛೇದಗಳಿವೆ. ಭಾರತದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನ ಪರಮೋಚ್ಛವಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂತೆಯೇ ಜನವರಿ 26ರ ದಿನವನ್ನು ಗಣರಾಜ್ಯ ದಿನವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತದೆ. ಭಾರತವು ತನ್ನ 75ನೇ ಗಣರಾಜ್ಯೋತ್ಸವವನ್ನು ಇಂದು ಆಚರಿಸಿಕೊಳ್ಳುತ್ತಿದೆ. ಗಣರಾಜ್ಯೋತ್ಸವ ಒಟ್ಟು ಮೂರು ದಿನಗಳ ಕಾಲ ನಡೆಯಲಿದ್ದು, ಜನವರಿ 29ರಂದು ಬೀಟಿಂಗ್ ರಿಟ್ರೀಟ್ ಸಮಾರಂಭದೊಂದಿಗೆ ಕೊನೆಗೊಳ್ಳುತ್ತದೆ.

    ಜ.26 ಅನ್ನು ಗಣರಾಜ್ಯ ದಿನ ಎಂದು ಏಕೆ ಗುರುತಿಸಲಾಗಿದೆ?
    ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ‍್ಯ ಗಳಿಸಿತು. ಸಂವಿಧಾನವನ್ನು ನವೆಂಬರ್ 26, 1949 ರಂದು ಸಂವಿಧಾನ ಸಭೆಯು ಅಂಗೀಕರಿಸಿತು ಮತ್ತು ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಈ ದಿನದಂದು ರಾಷ್ಟ್ರಧ್ವಜವನ್ನು ಹಾರಿಸಿದರು. ಭಾರತದ ಗಣರಾಜ್ಯೋತ್ಸವ ಎಂದು ಗುರುತಿಸಲ್ಪಟ್ಟ ನಂತರ ಈ ದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲಾಯಿತು.

    ಗಣರಾಜ್ಯೋತ್ಸವ ಪರೇಡ್‌ನಲ್ಲಿ ಏನಾಗುತ್ತದೆ?
    ಪ್ರತಿ ವರ್ಷ, ದಿನವನ್ನು ಗುರುತಿಸುವ ಆಚರಣೆಗಳು ಅದ್ಭುತವಾದ ಮಿಲಿಟರಿ ಮತ್ತು ಸಾಂಸ್ಕೃತಿಕ ಪ್ರದರ್ಶನವನ್ನು ಒಳಗೊಂಡಿರುತ್ತವೆ. ನಮ್ಮ ಶ್ರೀಮಂತ ಸಾಂಸ್ಕೃತಿಕ ಮತ್ತು ಮಿಲಿಟರಿ ಪರಂಪರೆಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಪ್ರದರ್ಶಿಸಲಾಗುತ್ತದೆ. ಇದರಲ್ಲಿ ಇತರ ದೇಶಗಳ ಗೌರವಾನ್ವಿತ ಗಣ್ಯರು, ಭಾರತೀಯ ರಾಜಕಾರಣಿಗಳು ಮತ್ತು ಸಾರ್ವಜನಿಕರು ಭಾಗವಹಿಸುತ್ತಾರೆ. ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರ್ಣರಂಜಿತ ಕೋಷ್ಟಕಗಳ ಮೂಲಕ ಇತರ ವಿಷಯಗಳ ಜೊತೆಗೆ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸುತ್ತವೆ. ಅಲ್ಲದೇ ವಿವಿಧ ರಾಜ್ಯಗಳ ಟ್ಯಾಬ್ಲೋ ಪ್ರದರ್ಶನ ನಡೆಯುತ್ತದೆ. ಕರ್ತವ್ಯ ಪಥದಲ್ಲಿ ಪಥ ಸಂಚಲನ ನಡೆಯಲಿದೆ.

    ಗಣರಾಜ್ಯೋತ್ಸವ 2024ರ ಮುಖ್ಯ ಅತಿಥಿ ಯಾರು?
    ಭಾರತದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಆಹ್ವಾನಿಸಲಾಗಿದ್ದು, ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಮ್ಯಾಕ್ರನ್ ಆಗಮಿಸಿದ್ದಾರೆ. ಕಳೆದ ವರ್ಷ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಮುಖ್ಯ ಅತಿಥಿಯಾಗಿದ್ದರು.

    ಈ ವರ್ಷದ ಮೆರವಣಿಗೆಯ ವಿಶೇಷತೆ ಏನು?
    ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಕ್ಷಣಾ ಪಡೆಗಳ ಮಹಿಳಾ ತುಕಡಿಗಳು ಪಥಸಂಚಲನ ನಡೆಸಿಕೊಡಲಿದ್ದಾರೆ.

    ಗಣರಾಜ್ಯೋತ್ಸವ 2024ರ ಥೀಮ್ ಏನು?
    2024ರ ಗಣರಾಜ್ಯೋತ್ಸವದ ಥೀಮ್ ‘ಭಾರತ – ಪ್ರಜಾಪ್ರಭುತ್ವದ ತಾಯಿ’ ಮತ್ತು “ವಿಕಸಿತ ಭಾರತ” (ಅಭಿವೃದ್ಧಿ ಹೊಂದಿದ ಭಾರತ) ಆಗಿದೆ.

    ಮೊದಲ ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿದ್ದವರು ಯಾರು?
    ಜನವರಿ 26, 1950 ರಂದು ನಡೆದ ಭಾರತದ ಮೊದಲ ಗಣರಾಜ್ಯೋತ್ಸವದ ಪರೇಡ್‌ನ ಮೊದಲ ಮುಖ್ಯ ಅತಿಥಿ ಇಂಡೋನೇಷಿಯಾದ ಅಧ್ಯಕ್ಷ ಸುಕರ್ನೊ ಆಗಿದ್ದರು.

    2024ರ ಗಣರಾಜ್ಯ ಪರೇಡ್ ಅನ್ನು ಆನ್‌ಲೈನ್ ಮತ್ತು ಟಿವಿಯಲ್ಲಿ ನೋಡುವುದು ಹೇಗೆ?
    ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿ ಗಣರಾಜ್ಯೋತ್ಸವ ಪರೇಡ್ ಕಾಮೆಂಟರಿಯೊಂದಿಗೆ ಪ್ರಸಾರವಾಗಲಿದೆ. ನಿಮ್ಮ ಮೊಬೈಲ್, ಪಿಸಿ ಅಥವಾ ಸ್ಮಾರ್ಟ್ ಟಿವಿಯಲ್ಲಿ ಈವೆಂಟ್ ಅನ್ನು ಲೈವ್‌ಸ್ಟ್ರೀಮ್ ಮಾಡಲು ನೀವು ದೂರದರ್ಶನದ ಅಧಿಕೃತ ಯೂಟ್ಯೂಬ್ ಚಾನೆಲ್ ಅಥವಾ ಪ್ರೆಸ್ ಬ್ಯೂರೋ ಆಫ್ ಇಂಡಿಯಾವನ್ನು ಸಹ ಪರಿಶೀಲಿಸಬಹುದು.

  • Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ..

    Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ..

    – ವೆಂಕಯ್ಯ ನಾಯ್ಡುಗೆ ಪದ್ಮವಿಭೂಷಣ
    – ಕನ್ನಡಿಗರಾದ ಸೀತಾರಾಮ್‌ ಜಿಂದಾಲ್‌ಗೆ ಪದ್ಮಭೂಷಣ

    ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಗುರುವಾರ ಪ್ರಕಟಗೊಂಡಿದೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಸಾಧಕರನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

    5 ಜನರಿಗೆ ಪದ್ಮ ವಿಭೂಷಣ, 17 ಜನರಿಗೆ ಪದ್ಮಭೂಷಣ ಹಾಗೂ 110 ಜನರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ‘ಪದ್ಮ’ ಪ್ರಶಸ್ತಿ ಭಾಜನರಾದ 9 ಕನ್ನಡಿಗರು
    ಪದ್ಮಭೂಷಣ ಪ್ರಶಸ್ತಿಗೆ ಕನ್ನಡಿಗರಾದ ಸೀತಾರಾಮ್‌ ಜಿಂದಾಲ್‌ (ವ್ಯಾಪಾರ ಮತ್ತು ಕೈಗಾರಿಕೆ) ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ರೋಹನ್‌ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್‌ (ವೈದ್ಯಕೀಯ), ಅನುಪಮಾ ಹೊಸಕೆರೆ (ಕಲೆ), ಶ್ರೀಧರ್‌ ಮಕಮ್‌ ಕೃಷ್ಣಮೂರ್ತಿ (ಸಾಹಿತ್ಯ ಮತ್ತು ಶಿಕ್ಷಣ), ಕೆ.ಎಸ್‌.ರಾಜಣ್ಣ (ಸಾಮಾಜಿಕ ಕಾರ್ಯ), ಚಂದ್ರಶೇಖರ್‌ ಚನ್ನಪಟ್ಟಣ ರಾಜಣ್ಣಾಚಾರ್‌ (ವೈದ್ಯಕೀಯ), ಸೋಮಣ್ಣ (ಸಾಮಾಜಿಕ ಕಾರ್ಯ), ಶಶಿ ಸೋನಿ (ವ್ಯಾಪಾರ ಮತ್ತು ಕೈಗಾರಿಕೆ).

    ಪದ್ಮ ವಿಭೂಷಣ ಪುರಸ್ಕೃತರು

    ಪದ್ಮಭೂಷಣ ಪುರಸ್ಕೃತರು

    ಪದ್ಮಶ್ರೀ ಪುರಸ್ಕೃತರು

     

  • ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಕ್ಷಣ: ದ್ರೌಪದಿ ಮುರ್ಮು

    ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಕ್ಷಣ: ದ್ರೌಪದಿ ಮುರ್ಮು

    – 75ನೇ ಗಣರಾಜ್ಯೋತ್ಸವಕ್ಕೂ ಮುನ್ನ ದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮಾತು

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 75 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು (ಬುಧವಾರ) ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದು ಯುಗ ಬದಲಾವಣೆಯ ಅವಧಿಯಾಗಿದೆ ಆಶಯ ವ್ಯಕ್ತಪಡಿಸಿದ್ದಾರೆ.

    ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ರಾಷ್ಟ್ರಪತಿ ಸ್ಮರಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಮತ್ತು ಮಹತ್ವದ ಕ್ಷಣವಾಗಿದೆ ಎಂದು ಬಣ್ಣಿಸಿದ್ದಾರೆ.

    ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಭವಿಷ್ಯದ ಇತಿಹಾಸಕಾರರು ಭಾರತದ ನಾಗರಿಕತೆಯ ಪರಂಪರೆಯ ಮರು ಅನ್ವೇಷಣೆಯಲ್ಲಿ ಹೆಗ್ಗುರುತಾಗಿ ನೋಡುತ್ತಾರೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ದೇವಾಲಯದ ನಿರ್ಮಾಣವು ಪ್ರಾರಂಭವಾಯಿತು. ಈಗ ಅದು ಭವ್ಯ ಸೌಧವಾಗಿ ನಿಂತಿದೆ. ಇದು ಜನರ ನಂಬಿಕೆಗೆ ಸೂಕ್ತವಾದ ಅಭಿವ್ಯಕ್ತಿಯನ್ನು ನೀಡುತ್ತದೆ. ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ಅಗಾಧ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಕರ್ಪೂರಿ ಜೀ ಅವರ ಕೊಡುಗೆಯಿಂದ ಸಾರ್ವಜನಿಕ ಜೀವನವನ್ನು ಶ್ರೀಮಂತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದು, ಅವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ.

    1988 ರಲ್ಲಿ ನಿಧನರಾದ ಎರಡು ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ಅವರು ಬಡವರು ಮತ್ತು ಹಿಂದುಳಿದ ವರ್ಗಗಳ ಉನ್ನತಿಗೆ ನೀಡಿದ ಕೊಡುಗೆಗಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ. ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಲಾಗಿದೆ.

    ಜ.22 ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪನೆ ನೆರವೇರಿತು.

  • ಹನಿಮೂನ್‍ಗೆ ಹೋಗದೆ ಬೀಚ್ ಕ್ಲೀನ್ ಮಾಡಿದ್ದ ಜೋಡಿಗೆ ಗಣರಾಜ್ಯೋತ್ಸವಕ್ಕೆ ಆಮಂತ್ರಣ

    ಹನಿಮೂನ್‍ಗೆ ಹೋಗದೆ ಬೀಚ್ ಕ್ಲೀನ್ ಮಾಡಿದ್ದ ಜೋಡಿಗೆ ಗಣರಾಜ್ಯೋತ್ಸವಕ್ಕೆ ಆಮಂತ್ರಣ

    ಉಡುಪಿ: ಮದುವೆಯಾಗಿ ಹನಿಮೂನ್‍ಗೆ ಹೋಗದೆ ತಮ್ಮ ಊರಿನ ಸೋಮೇಶ್ವರ ಸಮುದ್ರ ತೀರವನ್ನು ಸ್ವಚ್ಛ ಮಾಡಿದ್ದ ಉಡುಪಿಯ ಜೋಡಿಗೆ ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ. ಬೈಂದೂರಿನ ಅನುದೀಪ್, ಮಿನೂಷಾ ದೆಹಲಿಗೆ ಹಾರಿದ್ದಾರೆ. ನಮ್ಮ ಪ್ರವಾಸಿ ತಾಣಗಳು ನಮ್ಮ ಸಂಪತ್ತು. ಕಡಲ ತೀರಗಳನ್ನು ಸುಂದರವಾಗಿ ಇಡೋಣ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮನ್ ಕಿ ಬಾತ್ ನಲ್ಲಿ ಕರೆ ಕೊಟ್ಟಿದ್ದರು. ಅನುದೀಪ್ ಮಿನೂಷಾ ಜೋಡಿಯ ಕೆಲಸವನ್ನು ಉಲ್ಲೇಖ ಮಾಡಿದ್ದರು.

    ಕೇಂದ್ರ ಸರ್ಕಾರದಿಂದ ಇಬ್ಬರಿಗೂ ಗಣರಾಜ್ಯೋತ್ಸವದ ಆಮಂತ್ರಣ (Republic Day Invitation) ಬಂದಿದೆ. ಉಡುಪಿ ಜಿಲ್ಲೆ ಜೋಡಿ ದೆಹಲಿ ತಲುಪಿದೆ. ನಾಳಿನ 75 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ಈ ಸಂತೋಷವನ್ನು ಇಬ್ಬರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಿದ್ಧಾಂತಕ್ಕೆ ಬದ್ಧರಾದವರು ಬೇರೆ ಪಕ್ಷಕ್ಕೆ ಒಗ್ಗಲ್ಲ: ಶೆಟ್ಟರ್ ಬಿಜೆಪಿಗೆ ಮರಳಿದ್ದಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ

    ಭಾರತ ಸರ್ಕಾರಕ್ಕೆ, ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಈ ಜೋಡಿ ಧನ್ಯವಾದ ಹೇಳಿದ್ದಾರೆ. 2020ರಲ್ಲಿ ಮದುವೆಯಾಗಿದ್ದ ಅನುದೀಪ್ ಮತ್ತು ಮಿನುಷಾ ಹೊರಗಡೆ ಓಡಾಡುವ ಅವಕಾಶವನ್ನು ಕಳೆದುಕೊಂಡಿದ್ದರು ಕರೋನ ಕಾಲದ ನಿರ್ಬಂಧ ಇರುವುದರಿಂದ ಎಲ್ಲೂ ಸಂಚಾರ ಮಾಡುವ ಅವಕಾಶಗಳು ಇರಲಿಲ್ಲ. ಹಾಗೆ ಸೋಮೇಶ್ವರ ಬೈಂದೂರು ಸುತ್ತಮುತ್ತ ಸುಮಾರು 700 ಮೀಟರ್ ನಷ್ಟು ಕಡಲ ತಡೆಯನ್ನ ಕ್ಲೀನ್ ಮಾಡಿದ್ದಾರೆ. ಈ ಜೋಡಿಹ ಕೆಲಸಕ್ಕೆ ಸುತ್ತಮುತ್ತಲಿನ ಯುವಕ ಯುವತಿಯರು ಕೈಜೋಡಿಸಿದ್ದರು. ಸುಮಾರು 500 ಕೆಜಿಯಷ್ಟು ಕಸ ಸಂಗ್ರಹ ಮಾಡಿದ್ದರು.

    ಪ್ರವಾಸಕ್ಕೆಂದು ಹೋಗುವ ಯಾರೂ ಪರಿಸರವನ್ನು ಕಲುಷಿತ ಮಾಡಬೇಡಿ. ತಿರುಗಾಟಕ್ಕೆ ಕೊಂಡು ಹೋದ ವಸ್ತುವನ್ನು ಎಲ್ಲೂ ಎಸೆಯಬೇಡಿ ಎಂದು ಈ ಜೋಡಿ ಕರೆ ನೀಡಿದೆ.

  • ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ – ಟ್ಯಾಬ್ಲೋ ಚಿತ್ರ ನೋಡಿ..

    ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ – ಟ್ಯಾಬ್ಲೋ ಚಿತ್ರ ನೋಡಿ..

    -ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ
    -ಸಿಎಂ ಸಿದ್ದರಾಮಯ್ಯ ಮನವಿಯಿಂದಲೂ ಆಗಿಲ್ಲ ಪ್ರಯೋಜನ

    ಬೆಂಗಳೂರು: 75ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯಲ್ಲಿ ಪಥ ಸಂಚಲನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಲಾಗಿದೆ.

    ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ ನೀಡಲಾಗಿದೆ. ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕರ್ನಾಟಕವು ಸ್ತಬ್ಧಚಿತ್ರವನ್ನು ತಯಾರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕರ್ತವ್ಯ ಪಥದಲ್ಲಿ ಪಥ ಸಂಚಲನ ನಡೆಯಲಿದೆ. ಇದನ್ನೂ ಓದಿ: ಕರ್ನಾಟಕ ಜನರ ಭಾವನೆಗಳಿಗೆ ನೋವುಂಟಾಗಿದೆ; ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಮನವಿ

    ಕರ್ತವ್ಯ ಪಥದಲ್ಲಿ ನಡೆಯಲಿರುವ 2024ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕವನ್ನು ಸೇರಿಸಲಾಗಿಲ್ಲ. ಬದಲಾಗಿ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವ್ ವಿಭಾಗದಲ್ಲಿ ಇರಿಸಲಾಗಿದೆ. ಈ ಸಂಬಂಧ ಕೇಂದ್ರ ರಕ್ಷಣಾ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

    ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋಗೆ ಅವಕಾಶ ನೀಡದಿರುವ ನಿರ್ಧಾರವು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ. ಸ್ತಬ್ಧಚಿತ್ರವನ್ನು ಪರೇಡ್‌ನಿಂದ ಹೊರಗಿಟ್ಟಿರುವುದು ಕರ್ನಾಟಕದ ಜನತೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ಏಳು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು, 2024 ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಾಂಡ್ ಬೆಂಗಳೂರು ಸ್ತಬ್ದಚಿತ್ರ ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

  • ಮೋದಿ ಮೆಚ್ಚಿದ್ದ ರಾಜ್ಯದ ಕವಿ ಮಂಜುನಾಥ್‌ಗೆ ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ

    ಮೋದಿ ಮೆಚ್ಚಿದ್ದ ರಾಜ್ಯದ ಕವಿ ಮಂಜುನಾಥ್‌ಗೆ ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ

    ಚಾಮರಾಜನಗರ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚಿದ್ದ ಕವಿ ಮಂಜುನಾಥ್‌ಗೆ (Poet Manjunath) ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

    ಜೋಗುಳ ಪದ ರಚಿಸಿದ್ದ ಕೊಳ್ಳೇಗಾಲದ ಕವಿ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರದ ದೆಹಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಬಂದಿದೆ. ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರರಾಗಿರುವ ಮಂಜುನಾಥ್‌, ಪ್ರವೃತ್ತಿಯಲ್ಲಿ ಕವಿಯಾಗಿದ್ದಾರೆ. ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ರಾಜ್ಯದ ಲಾಲಿಹಾಡು ಪ್ರಸಾರ – ʼಮಲಗು ಕಂದʼ ಹಾಡಿಗೆ ಪ್ರಧಾನಿ ಮೋದಿ ಪ್ರಶಂಸೆ

    ಕೋವಿಡ್ ವೇಳೆ ‘ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ’ ಎಂಬ ಸಾಲಿನಿಂದ ಜೋಗುಳ ಪದ ರಚಿಸಿದ್ದರು. ಕೇಂದ್ರ ಸರ್ಕಾರದ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಆನ್‌ಲೈನ್ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆ ಆಯೋಜಿಸಲಾಗಿತ್ತು. ಪುತ್ರನ ಒತ್ತಾಸೆಗೆ ಮಣಿದು ಜೋಗುಳದ ಹಾಡು ರಚಿಸಿದ್ದ ಕವಿ ಮಂಜುನಾಥ್.

    ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಪೆನ್ ಎ ಲೋರಿ ಎಂಬ ಜೋಗುಳ ಗೀತೆ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಯ ಕವಿ ಮಂಜುನಾಥ್ ಪ್ರಥಮ ಸ್ಥಾನ ಪಡೆದಿದ್ದರು. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಹಿನ್ನೆಲೆ ಹೈಅಲರ್ಟ್ – ಜ.22ರಂದು ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಜೆ ಇಲ್ಲ..?

    “ಮಲಗು ಕಂದ, ಮಲಗು ಕೂಸೆ” ಎಂಬ ಈ ಲಾಲಿಹಾಡಿಗೆ ಅವರ ತಾಯಿ, ಅಜ್ಜಿ ಹಾಡುತ್ತಿದ್ದ ಜೋಗುಳಗಳೇ ಸ್ಫೂರ್ತಿಯಾಗಿವೆ. ಇದನ್ನು ಕೇಳಿದರೆ ನಿಮಗೂ ಆನಂದವಾಗುತ್ತದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಪ್ರಶಂಸಿಸಿದ್ದರು.

    ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗೆ ಪಾತ್ರವಾಗಿದ್ದ ಹಾಡಿಗೆ 6 ಲಕ್ಷ ರೂ. ನಗದು ಬಹುಮಾನದ ಮನ್ನಣೆ ಸಿಕ್ಕಿತ್ತು. ಈಗ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಕವಿ ಮಂಜುನಾಥ್‌ ಅವರಿಗಾಗಿ ಟಿಕೆಟ್ ಬುಕ್ ಮಾಡಲಾಗಿದೆ. ಮಂಜುನಾಥ್‌ ದಂಪತಿ ಗಣರಾಜ್ಯೋತ್ಸವದಂದು ದೆಹಲಿಗೆ ತೆರಳಲಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್‌

  • ಕರ್ನಾಟಕ ಜನರ ಭಾವನೆಗಳಿಗೆ ನೋವುಂಟಾಗಿದೆ; ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಮನವಿ

    ಕರ್ನಾಟಕ ಜನರ ಭಾವನೆಗಳಿಗೆ ನೋವುಂಟಾಗಿದೆ; ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಮನವಿ

    ಬೆಂಗಳೂರು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರ ಬರೆದು ಮನವಿ ಮಾಡಿದ್ದಾರೆ.

    ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಸ್ತಬ್ಧಚಿತ್ರಕ್ಕೆ (Karnatakas Tableau) ಅವಕಾಶ ನಿರಾಕರಿಸಲಾಗಿದೆ. ಈ ಸಂಬಂಧ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಜನರ ಭಾವನೆಗಳಿಗೆ ನೋವುಂಟಾಗಿದೆ. ಕರ್ನಾಟಕದಿಂದ 5 ಸ್ತಬ್ಧಚಿತ್ರಗಳ ಥೀಮ್‌ಗಳನ್ನು ಕೊಡಲಾಗಿತ್ತು. ಆದರೆ ರಾಜ್ಯ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ ಸರಿಯಲ್ಲ. ‘ಬ್ರ್ಯಾಂಡ್‌ ಬೆಂಗಳೂರು’ ಸ್ತಬ್ಧಚಿತ್ರಕ್ಕೆ ಅವಕಾಶ ಕೊಡಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

    ಮನವಿ ಪತ್ರದಲ್ಲೇನಿದೆ?
    ಕರ್ನಾಟಕವು ಕಳೆದ 14 ವರ್ಷಗಳಿಂದ ಸತತವಾಗಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನವದೆಹಲಿಯ ಕರ್ತವ್ಯ ಪಥದಲ್ಲಿ ಭಾಗವಹಿಸುತ್ತಿದೆ. ಭಗವಾನ್ ಬಾಹುಬಲಿಯ ಮಹಾ ಮಸ್ತಕಾಭಿಷೇಕ (2005), ಹೊಯ್ಸಳರ ಆರ್ಕಿಟೆಕ್ಚರ್ (2008), ಬೀದರ್‌ನ ಬಿದರಿ ಆರ್ಟ್ (2011), ಭೂತಾರಾಧನೆ (2012), ಚನ್ನಪಟ್ಟಣ ಆಟಿಕೆಗಳು (2005) ಮುಂತಾದ ವಿವಿಧ ವಿಷಯಗಳೊಂದಿಗೆ ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಕರ್ನಾಟಕವು ಹಲವಾರು ಬಹುಮಾನಗಳನ್ನು ಗೆದ್ದಿದೆ. ಕರ್ಮಾಟಕದ ಪ್ರತಿಯೊಂದು ಕೋಷ್ಟಕವು ರಾಜ್ಯದ ಶ್ರೀಮಂತ ಸಂಸ್ಕೃತಿ, ಜಾನಪದ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುತ್ತಿದೆ.

    2024 ರ ಗಣರಾಜ್ಯೋತ್ಸವ ಪರೇಡ್‌ಗಾಗಿ ಕರ್ನಾಟಕವು ಪ್ರಸ್ತಾಪಿಸಿದ 5 ಥೀಮ್‌ಗಳಿಂದ ‘BRAND BENGALURU’ ಥೀಮ್ ಅನ್ನು ಆಯ್ಕೆ ಮಾಡಲಾಗಿದೆ. ರಕ್ಷಣಾ ಸಚಿವಾಲಯ ಕರೆದಿರುವ ಎಲ್ಲಾ ಸಭೆಗಳಿಗೆ ಕರ್ನಾಟಕ ಹಾಜರಾಗಿದೆ. ರಾಜ್ಯವು ಪ್ರಮುಖ ಮಾದರಿ ಮತ್ತು ಸಂಗೀತವನ್ನು ಆಯ್ಕೆ ಸಮಿತಿಯ ಮುಂದೆ ಪ್ರಸ್ತುತಪಡಿಸಿದೆ. ಸಮಿತಿಯು ಕೆಲವು ಮಾರ್ಪಾಡುಗಳೊಂದಿಗೆ ಮುಂದಿನ ಸಭೆಗೆ ಹಾಜರಾಗಲು ನಮ್ಮನ್ನು ಕೇಳಿದೆ. ಕರ್ತವ್ಯ ಪಥದಲ್ಲಿ ನಡೆಯಲಿರುವ 2024ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕವನ್ನು ಸೇರಿಸಲಾಗಿಲ್ಲ. ಬದಲಾಗಿ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವ್ ವಿಭಾಗದಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಸ್ತಬ್ಧಚಿತ್ರ ವಿಷಯದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ: ವಿಜಯೇಂದ್ರ

    ಕರ್ಮಾಟಕ ರಾಜ್ಯವನ್ನು ಪ್ರತಿನಿಧಿಸುವ ಟ್ಯಾಬ್ಲೋ ‘ಬ್ರಾಂಡ್ ಬೆಂಗಳೂರು’ ಐಕಾನಿಕ್ ನಗರವಾದ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಮುನ್ನಡೆದಿದೆ ಮತ್ತು ಅದರ ಸಂಸ್ಕೃತಿ, ಸಂಪ್ರದಾಯದಲ್ಲಿ ಹೇಗೆ ಬೇರೂರಿದೆ ಎಂಬುದನ್ನು ಚಿತ್ರಿಸುತ್ತದೆ. ವಿಕಾಸ ಭಾರತಕ್ಕೆ ರಾಜ್ಯದ ಕೊಡುಗೆ ಅಪಾರ. ಅದು ತಂತ್ರಜ್ಞಾನವೇ ಆಗಿರಬಹುದು. ಉದ್ಯಮಶೀಲತೆ ಅಥವಾ ತೆರಿಗೆ ಕೊಡುಗೆಯೂ ಆಗಿರಬಹುದು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರ್ಯಾಂಡ್ ಟರ್ಮಿನಲ್ 2 ಅನ್ನು UINESCO ವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣವೆಂದು ಘೋಷಿಸಿದೆ.

    ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ಮಾಟಕ ಟ್ಯಾಬ್ಲೋಗೆ ಅವಕಾಶ ನೀಡದಿರುವ ನಿರ್ಧಾರವು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ. ಸ್ತಬ್ಧಚಿತ್ರವನ್ನು ಪರೇಡ್‌ನಿಂದ ಹೊರಗಿಟ್ಟಿರುವುದು ಕರ್ನಾಟಕದ ಜನತೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ಏಳು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು, 2024 ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಾಂಡ್ ಬೆಂಗಳೂರು ಸ್ತಬ್ದಚಿತ್ರ ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯದಿಂದ ಸ್ಪರ್ಧಿಸುವಂತೆ ಕುಮಾರಸ್ವಾಮಿಗೆ ಮುಖಂಡರು, ನಾಯಕರ ಒತ್ತಾಯ

  • ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

    ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

    – ಸಿಎಂ ಆರೋಪಕ್ಕೆ ಜೋಶಿ ಪ್ರತ್ಯುತ್ತರ

    ಬೆಂಗಳೂರು: ಗಣರಾಜ್ಯೋತ್ಸವಕ್ಕೆ (Republic Day) ಕರುನಾಡಿನ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿವಿಮಾತು ಹೇಳಿದ್ದಾರೆ.

    ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು (Tableau) ಆಯ್ಕೆ ಮಾಡದೆ ಕರುನಾಡಿಗೆ ಕೇಂದ್ರ ಸರ್ಕಾರ (Central Govt) ಅವಮಾನ ಮಾಡಿದೆ ಎಂಬ ಸಿದ್ದರಾಮಯ್ಯ (Siddaramaih) ಟೀಕೆಗೆ ಜೋಶಿ ಅವರು ಎಕ್ಸ್‌ ಮೂಲಕ ಪ್ರತ್ಯುತ್ತರ ಕೊಟ್ಟಿದ್ದಾರೆ.

    ಎಕ್ಸ್‌ನಲ್ಲೇನಿದೆ..?: ಸಿದ್ದರಾಮಯ್ಯನವರೇ ರಾಜಕೀಯ ಮಾಡಬೇಕು ನಿಜ. ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ, ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಶ್ರೀರಾಮಚಂದ್ರನನ್ನು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ: ಸಿಎಂ

    2015 ರಿಂದ 2023 ರವರೆಗೆ ಕರ್ನಾಟಕ ಪ್ರತಿ ವರ್ಷ ಗಣರಾಜ್ಯೋತ್ಸವ ವೇಳೆ ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ. ಅದನ್ನರಿತು ರಾಜಕಾರಣ ಮಾಡಿ ಎಂದು ಸಲಹೆ ನೀಡಿದ್ದಾರೆ. ಜೊತೆಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಈವರೆಗೆ ಕರ್ನಾಟಕಕ್ಕೆ ಸ್ತಬ್ಧಚಿತ್ರ ಪ್ರದರ್ಶಿಸಲು ಬರೋಬ್ಬರಿ 14 ಅವಕಾಶಗಳಿದ್ದವು. ಅಂದರೆ ಕೇಂದ್ರದಲ್ಲಿ ಬಿಜೆಪಿ (BJP) ಇದ್ದಾಗಲೇ 10 ಬಾರಿ ಕರುನಾಡಿನ ಸ್ತಬ್ಧಚಿತ್ರ ಪ್ರದರ್ಶನವಾಗಿದೆ. ಸಿಎಂ ಇದನ್ನು ಮರೆತಂತೆ ಇದೆ ಎಂದು ಜೋಶಿ ಲೇವಡಿ ಮಾಡಿದ್ದಾರೆ.

    2007, 2009 ಹಾಗೂ 2010 ರಲ್ಲಿ ಕರ್ನಾಟಕಕ್ಕೆ ಸ್ತಬ್ಧಚಿತ್ರ ಪ್ರದರ್ಶಿಸಲು ಅವಕಾಶ ಸಿಗಲಿಲ್ಲವಲ್ಲ. ಆಗ ಎಲ್ಲಿ ಹೋಗಿತ್ತು ನಿಮ್ಮ ನಾಡಪ್ರೇಮ? ಆಗ ಏಕೆ ಪ್ರಶ್ನಿಸಲಿಲ್ಲ? ಆ ಅವಧಿಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಕರ್ನಾಟಕಕ್ಕೆ ಅವಮಾನ ಆಗಿರಲಿಲ್ಲವೇ? ಎಂದು ಸಚಿವ ಜೋಶಿ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ಆಗಿಲ್ಲದ ಅವಮಾನ ಪದ ಈಗೇಕೆ? ಎಂಬುದು ಜನರಿಗೆ ಅರ್ಥವಾಗುತ್ತದೆ. ಜನರೇನು ಮೂರ್ಖರಲ್ಲ ಎಂದು ಕೇಂದ್ರ ಸಚಿವರು ಕಿಡಿಕಾರಿದ್ದಾರೆ.

    ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡುವುದು ನಮ್ಮ ಕೈಯಲಿಲ್ಲ. ಎಲ್ಲವೂ ನ್ಯಾಯ ಬದ್ಧವಾಗಿಯೇ ನಡೆದಿದೆ. ಆಯ್ಕೆಗಾಗಿ ಆಯಾ ಕ್ಷೇತ್ರದ ಹೆಸರಾಂತ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಅದರಂತೆ ಆಯ್ಕೆ ನಡೆದಿದೆ. ಸಂಸ್ಕ್ರತಿ, ಕಲೆ, ದೇಶ- ರಾಜ್ಯದ ಗೌರವ ಬಿಂಬಿಸುವ, ಸಾದರಪಡಿಸುವ ವಿಷಯದಲ್ಲಿ ಬಿಜೆಪಿ ಎಂದೂ ರಾಜಕಾರಣ ಮಾಡುವುದಿಲ್ಲ. ಅದೇನಿದ್ದರೂ ಕಾಂಗ್ರೆಸ್ ನ (Congress) ಚಾಳಿ ಎಂದು ಪ್ರಹ್ಲಾದ್ ಜೋಶಿ ಸಿಎಂಗೆ ಛಾಟಿ ಬೀಸಿದ್ದಾರೆ.

    ಕೇಂದ್ರ ಸರ್ಕಾರ ರಾಜ್ಯಗಳ ವಿಷಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತೆ ಮಾಡುವುದಿಲ್ಲ. ಸಿದ್ದರಾಮಯ್ಯ ಅವರು ಒಬ್ಬ ಮುಖ್ಯಮಂತ್ರಿ ಆಗಿ ನಮ್ಮ ಸ್ತಬ್ಧಚಿತ್ರವನ್ನು ಮೊದಲು ಪ್ರದರ್ಶನ ಮಾಡಲು ಬಿಡಲಿಲ್ಲ. ಅವಮಾನವಾಯಿತು ಎನ್ನುವುದು ತರವಲ್ಲ ಎಂದು ಖಂಡಿಸಿದ್ದಾರೆ.

  • ಗಣರಾಜ್ಯೋತ್ಸವದಲ್ಲಿ ಗ್ರೂಪ್ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ಆರೋಗ್ಯ ಇಲಾಖೆ ಸಿಬ್ಬಂದಿ ಸಾವು

    ಗಣರಾಜ್ಯೋತ್ಸವದಲ್ಲಿ ಗ್ರೂಪ್ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ಆರೋಗ್ಯ ಇಲಾಖೆ ಸಿಬ್ಬಂದಿ ಸಾವು

    ರಾಯಚೂರು: ಗಣರಾಜ್ಯೋತ್ಸವ (Republic Day) ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗ್ರೂಪ್‌ ಡ್ಯಾನ್‌ ಮಾಡುವಾಗ ಕುಸಿದು ಬಿದ್ದು ಆರೋಗ್ಯ ಇಲಾಖೆ ಸಿಬ್ಬಂದಿ ಸಾವಿಗೀಡಾಗಿರುವ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ನಡೆದಿದೆ.

    42 ವರ್ಷ ವಯಸ್ಸಿನ ಮಹಾಂತೇಶ್ ಪೂಜಾರಿ ಮೃತ ವ್ಯಕ್ತಿ. ಜಿಲ್ಲೆಯ ಸಿಂಧನೂರು ತಾಲೂಕು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಸಿಂಧನೂರು ತಾಲೂಕು ಆಸ್ಪತ್ರೆ ಸಿಬ್ಬಂದಿಯಿಂದ ನೃತ್ಯ ಪ್ರದರ್ಶನವಿತ್ತು. ಇದನ್ನೂ ಓದಿ: 74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ‌ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್‌

    ಸಾಂದರ್ಭಿಕ ಚಿತ್ರ

    ಗ್ರೂಪ್‌ ಡ್ಯಾನ್ಸ್‌ ಮಾಡುವ ವೇಳೆ ದಿದ್ದಿಗಿ ಗ್ರಾಮದ ನಿವಾಸಿ ಮಹಾಂತೇಶ್‌ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಎಆರ್‌ಟಿ ಅಧಿಕಾರಿಯಾಗಿದ್ದ ಮಹಾಂತೇಶ್, ಮ್ಯಾಸಿವ್ ಹಾರ್ಟ್ ಅಟ್ಯಾಕ್ ಹಿನ್ನೆಲೆ ಮೃತಪಟ್ಟಿದ್ದಾರೆ. ಮಹಾಂತೇಶ್‌ ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k