ಮಡಿಕೇರಿ: ಭಾರತ ಸಂವಿಧಾನವನ್ನು ಒಪ್ಪದ ಮನಸ್ಸುಗಳಿಂದ ಶಿವಮೊಗ್ಗದ ಬಜರಂಗದಳದ ಯುವಕ ಹರ್ಷ ಹತ್ಯೆಯಾಗಿದ್ದು, ಎಸ್‍ಡಿಪಿಐ, ಸಿಎಫ್‍ಐಗಳ ಕೈವಾಡವಿದೆ ಮಾಜಿ ಎಂಎಲ್‍ಸಿ ಗಣೇಶ್ ಕಾರ್ಣಿಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಪುನರುತ್ಥಾನ ಸಹಿಸದವರಿಂದ ಈ ಕೃತ್ಯ ನಡೆದಿದೆ. ಶಾಂತವಾಗಿರುವ ಜಿಲ್ಲೆಯಲ್ಲಿ ಅಶಾಂತಿಯನ್ನು ಸೃಷ್ಟಿ ಮಾಡಲು ಹೊರಟಿದ್ದಾರೆ. ನಾವು ಪ್ರತ್ಯೇಕ, ಇದೊಂದು ಇಸ್ಲಾಂ ರಾಷ್ಟ್ರವಾಗಬೇಕೆಂಬ ಭಾವನೆಯೊಂದಿಗೆ ಶಾಂತಿ ಸುವ್ಯವಸ್ಥೆ ಹಾಳು ಮಾಡಲಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್‍ಗೆ ಮೋದಿ ಟಾಂಗ್
ಹರ್ಷನ ಹತ್ಯೆ ಮಾಡಿರುವವರಿಗೂ ಹರ್ಷನಿಗೂ ಯಾವುದೇ ವೈಯಕ್ತಿಕ ದ್ವೇಷಗಳಿರಲಿಲ್ಲ. ಆದರೆ ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಹರ್ಷ ಎಲ್ಲಿಗೆ, ಎಷ್ಟೊತ್ತಿಗೆ ಹೋಗುತ್ತಾನೆ ಎಂಬುದನ್ನು ಪ್ಲಾನ್ ಮಾಡಲಾಗಿದೆ. ಹತ್ಯೆಯ ಹಿಂದೆ ಹಿಜಬ್ ವಿಚಾರ ಕೂಡ ತಳಕು ಹಾಕಿಕೊಂಡಿದೆ. ಇದರ ಹಿಂದೆ ಎಸ್‍ಡಿಪಿಐ, ಸಿಎಫ್‍ಐಗಳ ಕೈವಾಡವಿದೆ. ಅದೆಲ್ಲವನ್ನೂ ಸರ್ಕಾರ ಪತ್ತೆ ಹಚ್ಚಬೇಕಾಗಿದೆ. ಶಿವಮೊಗ್ಗದಲ್ಲಿ ನಡೆದಿರುವ ಇದೊಂದೆ ಘಟನೆಯಲ್ಲ. ದೇಶದಾದ್ಯಂತ ಭಯವನ್ನುಟ್ಟಿಸಿ ಭಯೋತ್ಪಾದನೆ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ಮಲಯಾಳಂ ಗೊತ್ತಿದ್ರೆ ಮಾತ್ರ ಸರ್ಕಾರಿ ಉದ್ಯೋಗ ಎಂದ ಸಿಎಂ – ಗಡಿಭಾಗದ ಕನ್ನಡಿಗರಲ್ಲಿ ಆತಂಕ
ಬೆಂಗಳೂರು: ಅನಿವಾಸಿ ಕನ್ನಡಿಗರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ನೇತೃತ್ವದಲ್ಲಿ ವಿಶ್ವದ 30ಕ್ಕೂ ಹೆಚ್ಚಿನ ದೇಶಗಳ 120ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ ನಡೆದ “ಎನ್‍ಆರೈ ಅಪೀಲ್ ಡೇ’ ಟ್ವಿಟ್ಟರ್ ಅಭಿಯಾನ ಯಶಸ್ವಿಯಾಗಿ ಪರಿಣಾಮಕಾರಿಯಾಗಿ ನಡೆಯಿತು.
ಅನಿವಾಸಿ ಕನ್ನಡಿಗರು 20 ಸಾವಿರಕ್ಕೂ ಹೆಚ್ಚು ಟ್ವೀಟ್ ಮೂಲಕ 50 ಲಕ್ಷ ಜನರನ್ನು ತಲುಪುವಲ್ಲಿ ಯಶಸ್ವಿಯಾಯಿತು. ಹಲವು ವಿರೋಧ ಪಕ್ಷದ ನಾಯಕರು, ಶಾಸಕರು, ಆಡಳಿತ ಪಕ್ಷದ ನಾಯಕರೂ ಟ್ವಿಟ್ಟರ್ ಅಭಿಯಾನ ಕೈ ಜೋಡಿಸಿ ಅನಿವಾಸಿಗಳ ಬೇಡಿಕೆ ಕುರಿತು ಮುಖ್ಯಮಂತ್ರಿಯವರ ಗಮನ ಸೆಳೆಯುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: 30 ದೇಶಗಳ ಅನಿವಾಸಿ ಕನ್ನಡಿಗರಿಂದ ಇಂದು ‘ಎನ್ಆರ್‌ಐ ಅಪೀಲ್ ಡೇ’ ಟ್ವಿಟ್ಟರ್ ಅಭಿಯಾನ
#NRIappealDay Compliments on a very successful Twitter Abhiyan with a genuine concern for a solution for this most imp issue. I assure you that I will take it up with the Hon'ble CM, as a personal commitment. My best wishes for an early redressal.@BSBommai@BJP4Karnataka
ಟ್ವಿಟ್ಟರ್ ಅಭಿಯಾನ ಪಾಲ್ಗೊಂಡ ಎಲ್ಲಾ ಕನ್ನಡ ಪರ ಮನಸುಗಳಿಗೆ ಅನಿವಾಸಿ ಕನ್ನಡಿಗರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಅನಿವಾಸಿಗಳ ಬೇಡಿಕೆ ಈಡೇರಿಸಲು ನಮ್ಮ ಹೋರಾಟ ಟ್ವಿಟ್ಟರ್ ಅಭಿಯಾನಕ್ಕೆ ಸೀಮಿತವಾಗಿಲ್ಲ, ಅನಿವಾಸಿಗಳ ಬೇಡಿಕೆಗಳ ಮನವಿಯನ್ನು ಮಾಜಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಖುದ್ದಾಗಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತಲುಪಿಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಬೇಡಿಕೆ ಈಡೇರಿಸುವರೆಂಬ ಆಶಾಭಾವನೆ ಇದೆ. ಆದರೆ ಭರವಸೆ ಈಡೇರುವವರೆಗೂ ಸರ್ಕಾರಕ್ಕೆ ದಿನನಿತ್ಯ ವಿಭಿನ್ನ ರೀತಿಯಲ್ಲಿ ನಮ್ಮ ಬೇಡಿಕೆ ನೆನಪಿಸಲಿದ್ದೇವೆ. ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕರ ಹಿದಾಯತ್ ಅಡ್ಡೂರು ತಿಳಿಸಿದ್ದಾರೆ.
ಬೆಂಗಳೂರು: ಬಿಟ್‍ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಷ್ಟು ದಿನ ಬಿಜೆಪಿ ವಿರುದ್ಧ ಆರೋಪ ಮಾಡ್ತಿದ್ದ ಪ್ರಿಯಾಂಕ್ ಖರ್ಗೆ ವಿರುದ್ಧವೇ ಕಮಲ ಪಡೆ ಹೊಸ ಬಾಂಬ್ ಸಿಡಿಸಿದೆ. ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಎನ್ನಲಾದ ಶ್ರೀಕಿಗೆ ಪ್ರಿಯಾಂಕ್ ಖರ್ಗೆ ಸಂಪರ್ಕ ಇತ್ತು ಎಂದು ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆರೋಪ ಮಾಡಿದ್ದಾರೆ.
ಪ್ರಿಯಾಂಕ್ ಐಟಿ ಬಿಟಿ ಮಂತ್ರಿ ಆಗಿದ್ದಾಗ ಶ್ರೀಕಿಯನ್ನು ಭೇಟಿ ಮಾಡಿ ಬಿಟ್ ಕಾಯಿನ್ ಹಗರಣದಿಂದ ಕಪ್ಪು ಹಣ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ಪ್ರಿಯಾಂಕ್ ಖರ್ಗೆ ಬಳಿ 50 ಸಾವಿರ ಕೋಟಿ ಮೌಲ್ಯದ ಆಸ್ತಿ ಇದೆ ಎನ್ನಲಾಗಿದ್ದು, ಅವರು ತಮ್ಮ ಕಪ್ಪು ಹಣವನ್ನು ಬಿಟ್ ಕಾಯಿನ್‍ನಲ್ಲಿ ತೊಡಗಿಸಿದ್ದಾರೆ ಎಂಬ ಆರೋಪ ಇದೆ.. ಇದಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಬೇಕು ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಟ್‌ಕಾಯಿನ್ ಹಗರಣಕ್ಕೆ ಸಿಎಂ ತಲೆದಂಡವಾಗಲಿದೆ : ಪ್ರಿಯಾಂಕ್ ಖರ್ಗೆ
ಶ್ರೀಕಿಗೆ ಭದ್ರತೆ ಕೊಡಬೇಕೆಂಬ ಸಿದ್ದರಾಮಯ್ಯ ಒತ್ತಾಯದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಶ್ರೀಕಿಗೆ ಸರ್ಕಾರಕ್ಕಿಂತ್ಲೂ ಕಾಂಗ್ರೆಸ್‍ನವರೇ ಹೆಚ್ಚು ರಕ್ಷಣೆ ಕೊಡ್ತಾರೆ ಎಂದು ಟಾಂಗ್ ನೀಡಿದ್ದಾರೆ.
ಬೆಂಗಳೂರು: ಬ್ಲೂ ಫಿಲಂ ಬಗ್ಗೆ ಹೆಚ್‍ಡಿಕೆಗೆ ಹೇಗೆ ಗೊತ್ತಾಯ್ತು? ಹೇಗೆ ಕಲಿತ್ಕೊಂಡ್ರು ಅವ್ರು? ಬ್ಲೂ-ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ ಎಂದು ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅಶ್ವತ್ ನಾರಾಯಣ ಅವರು, ಉಪಚುನಾವಣೆ ಬಂದಾಗ ಕುಮಾರಸ್ವಾಮಿ ಕೂಗುಮಾರಿ ಥರ ಮಾತಾಡ್ತಾರೆ. ಉಪಚುನಾವಣೆಯ ವೇಳೆ ಹೆಚ್‍ಡಿಕೆ ಮನಸ್ಥಿತಿ ಕಳ್ಕೊಂಡು ಮಾತಾಡ್ತಾರೆ. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಹೆಚ್‍ಡಿಕೆ ಸ್ಥಿಮಿತ ಕಳ್ಕೊಂಡು ಬೇಜವಾಬ್ದಾರಿ ಹೇಳಿಕೆ ಕೊಡ್ತಿದ್ದಾರೆ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಕಟೀಲ್ ಆರೋಪಕ್ಕೆ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ಸಾಕ್ಷ್ಯ ನೀಡಿದ ಬಿಜೆಪಿ
ಹೆಚ್‍ಡಿಕೆ ಆರ್‌ಎಸ್‌ಎಸ್ ಬಗ್ಗೆ ಆರೋಪ ಮಾಡಿದ್ದಾರೆ. ಹೆಚ್‍ಡಿಕೆ ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಅಪ್ರಸ್ತುತವಾಗಿ ಹೆಚ್‍ಡಿಕೆ ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡಿ ಪ್ರಸ್ತುತರಾಗಲು ಪ್ರಯತ್ನ ಪಡ್ತಿದ್ದಾರೆ. ಆರ್‌ಎಸ್‌ಎಸ್ ಕಚೇರಿಗೆ ಬಂದು ನೋಡಿ ಎಂದು ಹೆಚ್‍ಡಿಕೆಗೆ ಕಟೀಲ್ ಅವರು ಆಹ್ವಾನಿಸಿದ್ದಾರೆ. ಆದರೆ ಹೆಚ್‍ಡಿಕೆ ಅವರು ಆರ್‌ಎಸ್‌ಎಸ್ ಶಾಖೆಗೆ ಬ್ಲೂ-ಫಿಲಂ ನೋಡಲು ಬರ್ಲಾ ಎಂದು ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಕಿಡಿಕಾರಿದರು.
ಬ್ಲೂ ಫಿಲಂ ಬಗ್ಗೆ ಹೆಚ್‍ಡಿಕೆಗೆ ಹೇಗೆ ಗೊತ್ತಾಯ್ತು? ಹೇಗೆ ಕಲಿತ್ಕೊಂಡ್ರು ಅವ್ರು? ಬ್ಲೂ-ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ. ಸಿಂದಗಿ, ಹಾನಗಲ್ ನಲ್ಲಿ ಜೆಡಿಎಸ್‍ಗೆ ಜನ ಛೀಮಾರಿ ಹಾಕ್ತಾರೆ. ಜನರಿಗೂ ಗೊತ್ತಿದೆ ಜೆಡಿಎಸ್ ಬಂಡವಾಳ. ಸಿದ್ದರಾಮಯ್ಯ ಮತ್ತು ಹೆಚ್‍ಡಿಕೆ ಅವರು ಏಕೆ ಹೀಗೆ ಮಾತಾಡ್ತಿದ್ದಾರೆ ಎಂದು ಅವರವರ ಪಕ್ಷದ ಕಾರ್ಯಕರ್ತರಿಗೂ ಗೊತ್ತಿದೆ. ಸಾಧನೆಗಳನ್ನು ಹೇಳಿಕೊಂಡು ಮತಕೇಳಿ ಹೆಚ್‍ಡಿಕೆ ಮಾನಸಿಕ ಸ್ಥಿಮಿತ ಕಳ್ಕೊಂಡಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ಹೆಚ್‍ಡಿಕೆ ಕ್ಷಮೆ ಕೇಳಿ ಹೇಳಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ
– ಬಿಜೆಪಿ ನಾಯಕರಿಂದ ಕಾಂಗ್ರೆಸ್ ವಿರುದ್ಧ ಸುದ್ದಿಗೋಷ್ಠಿ
– ಕಟೀಲ್ ಹೇಳಿಕೆ ಸುಳ್ಳು ಅಂತ ಕಾಂಗ್ರೆಸ್‍ನವರು ಹೇಳಲಿ
ಬೆಂಗಳೂರು: ಇದ್ದಿದ್ದನ್ನು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದ ಹಾಗಾಗಿದೆ ಎಂದು ವಕ್ತಾರರಾದ ಗಣೇಶ್ ಕಾರ್ಣಿಕ್ ರಾಜ್ಯಾಧ್ಯಕ್ಷರ ನಳಿನ್ ಕಟೀಲ್ ಅವರ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್, ಡ್ರಗ್ಗಿಸ್ಟ್ ಎಂಬ ಹೇಳಿಕೆ ಸಮರ್ಥಿಸಿ ಮಾತನಾಡಿದ್ದಾರೆ.
ಕಟೀಲ್ ಅವರ ಬಗ್ಗೆ ಕರ್ನಾಟಕ ಕಾಂಗ್ರೆಸ್ ಖಾತೆಯ ಟ್ವೀಟ್ ನಲ್ಲಿ ಅವಹೇಳನ ಪದ ಬಳಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ, ವಕ್ತಾರರಾದ ಗಣೇಶ್ ಕಾರ್ಣಿಕ್, ಚಲವಾದಿ ನಾರಾಯಣ ಸ್ವಾಮಿ ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿದರು. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಗಣೇಶ್ ಕಾರ್ಣಿಕ್ ಅವರು, ಇದ್ದಿದ್ದನ್ನು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದ ಹಾಗಾಗಿದೆ. 2016 ರಲ್ಲಿ ನಡೆದ ಘಟನೆ ಬಗ್ಗೆ ವರದಿಯಾಗಿತ್ತು. ವರದಿಯಲ್ಲಿ ಉಲ್ಲೇಖವಾದ ವಿಚಾರವನ್ನು ಕಟೀಲ್ ಅವರು ಭಾಷಣದಲ್ಲಿ ಪ್ರಸ್ತಾಪಿಸಿದರು ಎಂದರು.
ಸುಬ್ರಮಣಿಯನ್ ಸ್ವಾಮಿ ಅವರು ಖಾಸಗಿ ವಾಹಿನಿಯಲ್ಲಿ ರಾಹುಲ್ ಗಾಂಧಿ ಅವರು ಮಾದಕ ವಸ್ತುಗಳ ಬಳಕೆ ಬಗ್ಗೆ ಪ್ರಸ್ತಾಪ ಮಾಡಿದ್ದರು. 2001ರಲ್ಲಿ 1.60 ಲಕ್ಷ ಡಾಲರ್ ಮೌಲ್ಯದ ಡ್ರಗ್ಸ್ ರಾಹುಲ್ ಗಾಂಧಿ ಬಳಿ ಪತ್ತೆ ಆಗಿತ್ತು. ಈ ಸಂಬಂಧ ಅಮೆರಿಕದ ಎಫ್‍ಬಿಐ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿತ್ತು. ಈ ವೇಳೆ ಯುಪಿಎ ಅಧ್ಯಕ್ಷೆ ಆಗಿದ್ದ ಸೋನಿಯಾ ಗಾಂಧಿ ಅವರ ಮನವಿಯ ಮೇರೆಗೆ ಅಮರಿಕದ ಅಧ್ಯಕ್ಷ ಬುಷ್ ಅವರಿಗೆ ಪ್ರಧಾನಿ ವಾಜಪೇಯಿ ಮಾತನಾಡಿ ರಾಹುಲ್ ಗಾಂಧಿ ಅವರಿಗೆ ಬಿಡುಗಡೆಯ ಭಾಗ್ಯ ಒದಗಿಸಿದ್ದರು ಎಂದು ಮಾಹಿತಿ ನೀಡಿದರು.
ಈ ವರದಿಗಳ ಬಗ್ಗೆ ನಮ್ಮ ರಾಜ್ಯಾಧ್ಯಕ್ಷರು ನಿನ್ನೆ ಭಾಷಣದಲ್ಲಿ ಉಲ್ಲೇಖಿಸಿದ್ದರು. ರಾಹುಲ್ ಗಾಂಧಿ ಅವರ ಹೇಳಿಕೆ ಸುಳ್ಳು ಅಂತ ಯಾರೂ ಹೇಳಿಲ್ಲ. ಕಾಂಗ್ರೆಸ್‍ನವರು ಅನಗತ್ಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಖುದ್ದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇ ಕಟೀಲ್ ಹೇಳಿಕ ವಿರೋಧ ಮಾಡಿಲ್ಲ. ಅಲ್ಲಿಗೆ ಆ ಆರೋಪ ನಿಜ ಅನ್ಸುತ್ತೆ ಅಲ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ: ಸಿಎಂ
ಕಾಂಗ್ರೆಸ್ ಪ್ರತಿಪಕ್ಷದಲ್ಲಿರಲು ಅನರ್ಹ. ಇತ್ತೀಚೆಗೆ ಆರ್‌ಎಸ್‌ಎಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಶೋಚನೀಯ ಪರಿಸ್ಥಿತಿ ಇದೆ. ಕಾಂಗ್ರೆಸ್ ನಲ್ಲಿ ಅಧ್ಯಕ್ಷರಾಗಲು ತಾಯಿ-ಮಗನಲ್ಲಿಯೇ ಸ್ಪರ್ಧೆ ಇದೆ ಎಂದು ಸಮರ್ಥಿಸಿಕೊಂಡರು.
ನಮ್ಮಲ್ಲಿ ಮೂರು ವರ್ಷಕ್ಕೆ ಆಂತರಿಕ ಚುನಾವಣೆ ನಡೆಯುತ್ತದೆ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಮ್ಮ ಪಕ್ಷ ನೋಡಿ ಕಾಂಗ್ರೆಸ್ ಕಲಿಯಲಿ. ಕಟೀಲ್ ಅವರು ರಾಹುಲ್ ಗಾಂಧಿ ಅವರ ಬಗ್ಗೆ ಹೇಳಿದ್ದರಲ್ಲಿ ಸತ್ಯ ಇದೆ ಎಂದು ತಿಳಿಸಿದರು.
ಮಂಗಳೂರು: ಕೆಪಿಸಿಸಿ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರಿಗೆ ಕ್ವಾರಂಟೈನ್ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಜುಲೈ.31ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅದೇ ದಿನ ಕೊರೊನಾ ಪಾಸಿಟಿವ್ ಬಂದಿದ್ದ ಐವನ್ ಡಿಸೋಜಾ ಹಾಗೂ 12 ದಿನದ ಮೊದಲು ಕೊರೊನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜಿಲ್ಲಾ ಪ್ರವಾಸದಲ್ಲಿ ಇದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.
ಇದೀಗ ಐವಾನ್ ಡಿಸೋಜಾ ಅವರಿಗೆ ಕೊರೊನಾ ದೃಢಪಟ್ಟಿದ್ದು, ಇವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಕೂಡ ಇದ್ದರು. ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರು ಯಾವಾಗ ಕ್ವಾರಂಟೈನ್ ಆಗುತ್ತಾರೆ, ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ, ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರಿಗೆ ವಿನಾಯಿತಿ ಇದೆಯೇ ಎಂಬುದನ್ನು ಕಾಂಗ್ರೆಸ್ ನಾಯಕರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.