Tag: ಗಣೇಶ್

  • ಬ್ಯೂಟಿಫುಲ್ ಹುಡುಗಿಯರ ಜೊತೆ ಬಾನ ದಾರಿಯಲ್ಲಿ ಕುಣಿದ ಗೋಲ್ಡನ್ ಸ್ಟಾರ್

    ಬ್ಯೂಟಿಫುಲ್ ಹುಡುಗಿಯರ ಜೊತೆ ಬಾನ ದಾರಿಯಲ್ಲಿ ಕುಣಿದ ಗೋಲ್ಡನ್ ಸ್ಟಾರ್

    ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ  ‘ಬಾನದಾರಿಯಲ್ಲಿ’ ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಕವಿರಾಜ್ ಬರೆದಿರುವ ‘ನಿನ್ನನ್ನು ನೋಡಿದ ನಂತರ’ ಎಂಬ ಗೀತೆ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಬಗ್ಗೆ ಮಾತನಾಡಿದರು.

    ‘ಇದು ಕೊರೋನ ಸಮಯದಲ್ಲಿ ಅಂದರೆ ಸುಮಾರು ಎರಡುವರೆ ವರ್ಷಗಳ ಹಿಂದೆ ನಾನು ಹಾಗೂ ಪ್ರೀತಾ ಜಯರಾಂ ಸೇರಿ ಮಾಡಿದ ಕಥೆ. ರಾಜ್ಯದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಿ ಇದೀಗ ಸಂಪೂರ್ಣ ಚಿತ್ರೀಕರಣ ಮುಗಕ್ತಾಯವಾಗಿದೆ. ನಾವು ಅಂದುಕೊಂಡಿದ್ದಕ್ಕಿಂತಲೂ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಸಿನಿಮಾದ ಮೊದಲ ಹಾಡನ್ನು ಈಗ ಬಿಡುಗಡೆ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು’ ನಿರ್ದೇಶಕ  ಪ್ರೀತಂ ಗುಬ್ಬಿ. ಇದನ್ನೂ ಓದಿ: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್

    ನಾಯಕನ ನಟ ಗಣೇಶ್ ಮಾತನಾಡಿ, ‘ ಈ ಹಾಡನ್ನು ಕವಿರಾಜ್ ಬರೆದಿದ್ದಾರೆ. ಹುಡುಗಾಟ ಚಿತ್ರದ ಮಂದಾಕಿನಿಯೇ ಹಾಡಿನಿಂದ ಶುರುವಾದ ನಮ್ಮ ಜರ್ನಿ ಈ ಹಾಡಿನ ತನಕ ಮುಂದುವರೆದಿದೆ. ನನ್ನ ಅನೇಕ ಹಿಟ್ ಹಾಡುಗಳನ್ನು ಕವಿರಾಜ್ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರದ ಮತ್ತೊಂದು ಹೈಲೆಟ್ . ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿದ್ದಾರೆ. ಸಾಮಾನ್ಯವಾಗಿ ನಾನು ಡಬ್ಬಿಂಗ್ ಸಮಯದಲ್ಲಿ ಚಿತ್ರದ ಬಗ್ಗೆ ಹೇಳಿ ಬಿಡುತ್ತೇನೆ. ಈ ಚಿತ್ರದ ಡಬ್ಬಿಂಗ್ ಮಾಡಬೇಕಾದರೆ ಕೆಲವೊಮ್ಮೆ ತುಂಬಾ ಭಾವುಕನಾದೆ. ನಾಯಕಿಯರಾದ ರುಕ್ಮಿಣಿ ವಸಂತ್ ಹಾಗೂ ರೀಷ್ಮಾ ನಾಣಯ್ಯ ಸೇರಿದಂತೆ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಕೀನ್ಯಾ ಭಾಗದ  ಚಿತ್ರೀಕರಣವನ್ನು  ಮರೆಯಲು ಸಾಧ್ಯವಾಗುತ್ತಿಲ್ಲ. ನಾನು ಈ ಚಿತ್ರದಲ್ಲಿ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ ಗಣೇಶ್.

    ಚಿತ್ರ ತುಂಬಾ ಚೆನ್ನಾಗಿದೆ. ಇಂದು ಬಿಡುಗಡೆಯಾಗಿರುವ ಹಾಡು ಅಷ್ಟೇ ಇಂಪಾಗಿದೆ. ನಾನು ಈ ಹಾಡಿಗಾಗಿ ಸರ್ಫಿಂಗ್ ಅಭ್ಯಾಸ ಮಾಡಿದ್ದೇನೆ ಎಂದು ನಾಯಕಿ ರುಕ್ಮಿಣಿ ವಸಂತ್ ಹೇಳಿದರೆ, ಗಣೇಶ್ ಹಾಗೂ ರಂಗಾಯಣ ರಘು ಅವರು ನನಗೆ ಸಾಕಷ್ಟು ಹೇಳಿಕೊಟ್ಟಿದ್ದಾರೆ.  ಕಳೆದ ವರ್ಷ ಅನೇಕ ಕನ್ನಡ ಚಿತ್ರಗಳು ಗೆದ್ದು ದಾಖಲೆ ನಿರ್ಮಿಸಿವೆ. ಈ ವರ್ಷವೂ ಎಲ್ಲಾ ಕನ್ನಡ ಚಿತ್ರಗಳು ದೊಡ್ಡಮಟ್ಟದ ಯಶಸ್ಸು ಕಾಣಲಿ. ಅದರಲ್ಲಿ ಬಾನದಾರಿಯಲ್ಲಿ ಚಿತ್ರವೂ ಇರಲಿ ಎನ್ನುತ್ತಾರೆ ಚಿತ್ರದ ಮತ್ತೊಬ್ಬ ನಾಯಕಿ ರೀಷ್ಮಾ ನಾಣಯ್ಯ.

    ಬಾನದಾರಿಯಲ್ಲಿ ಹಾಡು ಹುಟ್ಟಿದ ಸಮಯವನ್ನು ವರ್ಣಿಸಿದ  ಗೀತರಚನೆಕಾರ ಕವಿರಾಜ್, ಮುಂಬೈನ ಖ್ಯಾತ ಯಶ್ ರಾಜ್ ಸ್ಟುಡಿಯೋದಲ್ಲಿ ಈ ಹಾಡಿನ ರೆಕಾರ್ಡಿಂಗ್ ನಡೆದಿದೆ. ಖ್ಯಾತ ಗಾಯಕ ಸೋನು ನಿಗಮ್ ಸುಮಧುರವಾಗಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ ಎಂದು ತಿಳಿಸಿದರು.  ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ ಸೇರಿದಂತೆ ಅನೇಕ ತಂತ್ರಜ್ಞರು ತಮ್ಮ ಅನುಭವ ಹಂಚಿಕೊಂಡರು. ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸಂತೋಷ್ ಹಾಗೂ ವೇಣು ಬಂಡವಾಳ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಳೆಯೇ ಜೀ ಕನ್ನಡದಲ್ಲಿ ಯೋಗರಾಜ್ ಭಟ್ಟರ ‘ಗಾಳಿಪಟ 2 ‘ ಹಾರಾಟ

    ನಾಳೆಯೇ ಜೀ ಕನ್ನಡದಲ್ಲಿ ಯೋಗರಾಜ್ ಭಟ್ಟರ ‘ಗಾಳಿಪಟ 2 ‘ ಹಾರಾಟ

    ಗಾಳಿಪಟ 2 (Gaalipata 2) ಈ ವರ್ಷ ಬಿಡುಗಡೆಗೊಂಡು ಭರ್ಜರಿಯಾಗಿ ಪ್ರೇಕ್ಷಕರ ಮನಗೆದ್ದ ಸೂಪರ್ ಹಿಟ್ ಸಿನಿಮಾ. ಕನ್ನಡ ಭಾಷಾ ವಿಶೇಷತೆ , ಅಸ್ಮಿತೆಯನ್ನು ಸಾರುವ ಈ ಚಿತ್ರ ಇದೇ ಶನಿವಾರ ಮತ್ತು ಭಾನುವಾರ ಸಂಜೆ 4:30ಕ್ಕೆ ಕನ್ನಡದ ನವೆಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ.

    ತನ್ನ ವೀಕ್ಷಕರಿಗೆ ವಿಶೇಷ ಕಾರ್ಯಕ್ರಮಗಳು ನೀಡುವುದರ ಮೂಲಕ ಸದಾ ಮುಂಚೂಣಿಯಲ್ಲಿರುವ ಜೀ ಕನ್ನಡ ವಾಹಿನಿ ಈಗಾಗಲೇ ಹಲವಾರು ಸೂಪರ್ ಹಿಟ್ ಕನ್ನಡ ಸಿನಿಮಾಗಳನ್ನು ಪ್ರಸಾರ ಮಾಡಿದ್ದು ಇದೀಗ ಗಾಳಿಪಟ 2 ಚಲನಚಿತ್ರವನ್ನು ತನ್ನ ವೀಕ್ಷಕರ ಮುಂದಿಡಲು ಸಜ್ಜಾಗಿದೆ. ಇದನ್ನೂ ಓದಿ:Breaking-ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

    ವಿಕಟ ಕವಿ, ಯೋಗರಾಜ್ ಭಟ್ (Yogaraj Bhatt) ನಿರ್ದೇಶನವಿರುವ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Ganesh) , ದಿಗಂತ್ (Diganth), ಪವನ್ ಕುಮಾರ್ (Pawan Kumar), ಹಿರಿಯನಟ ಅನಂತ್ ನಾಗ್ (Ananth Nag) , ಶರ್ಮಿಳಾ ಮಾಂಡ್ರೆ ಸೇರಿದಂತೆ ಇನ್ನೂ ಅನೇಕ ಜನಪ್ರಿಯ ಕಲಾವಿದರು ಅಭಿನಯಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ ಅವರು ಸಂಗೀತ ಸಂಯೋಜನೆ ಮಾಡಿದ್ದು ಹಾಡುಗಳು ಸಂಗೀತಪ್ರಿಯರ ಹೃದಯಕ್ಕೆ ಹತ್ತಿರವಾಗಿರುವುದು ವಿಶೇಷ.

    ಅಳು, ನಗು ಸಂಬಂಧಗಳ ಮೌಲ್ಯವನ್ನು ತಿಳಿಸುವ ಬದುಕಿನ ಭಾವುಕತೆ ತೆರೆದಿಡುತ್ತಲೇ ತಾಜಾ ಅನುಭವ ನೀಡುವ ಸಿನಿಮಾ ಇದ್ದಾಗಿದ್ದು ಬಾಕ್ಸ್ ಆಫೀಸ್‌ನ್ನೂ ಲೂಟಿ ಮಾಡಿತ್ತು. ಅಷ್ಟೇ ಅಲ್ಲದೆ ಜೀ5 ನಲ್ಲೂ 100Cr+ ವೀಕ್ಷಣೆ ಪಡೆದ ಚಲನಚಿತ್ರವಾಗಿದೆ ಈ ಗಾಳಿಪಟ 2. ಇನ್ನೂ ಇದೇ ಶನಿವಾರ ಮತ್ತು ಭಾನುವಾರ ಸಂಜೆ 4:30ಕ್ಕೆ ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಒಟಿಟಿಯಲ್ಲೂ ಕಮಾಲ್ ಮಾಡಿದ ಗಣಿ ಅಂಡ್ ಭಟ್ರ ಗಾಳಿಪಟ 2 ಕಾಂಬಿನೇಶನ್

    ಒಟಿಟಿಯಲ್ಲೂ ಕಮಾಲ್ ಮಾಡಿದ ಗಣಿ ಅಂಡ್ ಭಟ್ರ ಗಾಳಿಪಟ 2 ಕಾಂಬಿನೇಶನ್

    ಗೋಲ್ಡನ್ ಸ್ಟಾರ್ ಗಣೇಶ್’ (Ganesh), ಯೋಗರಾಜ್ ಭಟ್ ಹಿಟ್ ಕಾಂಬಿನೇಶನ್ ಒಳಗೊಂಡ ‘ಗಾಳಿಪಟ-2’ ಸಿನಿಮಾ ತೆರೆಮೇಲೆ ಮೋಡಿ ಮಾಡಿತ್ತು. ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಯಿ ಮಾಡಿದ್ದ ಈ ಚಿತ್ರಕ್ಕೆ ಸಿನಿರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಗಸ್ಟ್ 12ರಂದು ರಾಜ್ಯಾದ್ಯಂತ ತೆರೆಕಂಡ  ‘ಗಾಳಿಪಟ 2′ ಸಿನಿಮಾ ಹೊಸ ದಾಖಲೆ ಬರೆದಿತ್ತು. ಸ್ನೇಹ, ಪ್ರೇಮ, ವಿರಹ, ತ್ಯಾಗ ಒಳಗೊಂಡ ಸಿನಿಮಾ ಚಿತ್ರಮಂದಿರದ ಪ್ರೇಕ್ಷಕರ ಮನಗೆದ್ದಿತ್ತು. ಇದೀಗ ದಸರಾ ಹಬ್ಬಕ್ಕೆ ಜೀ5 ಒಟಿಟಿಗೆ ಕಾಲಿಟ್ಟಿದ್ದ ಗಣಿ ಗ್ಯಾಂಗ್ ಕಡಿಮೆ ಅವಧಿಯಲ್ಲಿ ಇಲ್ಲೂ ಕೂಡ ದಾಖಲೆ ಬರೆದಿದೆ.

    ಹೌದು, ದಸರಾ ಹಬ್ಬಕ್ಕೆ ‘ಗಾಳಿಪಟ-2’ ಜೀ5 ಒಟಿಟಿಗೆ ಲಗ್ಗೆ ಇಟ್ಟಿತ್ತು. ಬಿಡುಗಡೆಯಾದ 48 ಗಂಟೆಯಲ್ಲಿ ಗಾಳಿಪಟ-2 (Galipata 2)ಸಿನಿಮಾ ದಾಖಲೆ ಬರೆದಿದೆ.  ಕೇವಲ 48 ಗಂಟೆಯಲ್ಲಿ ಬರೋಬ್ಬರಿ 10ಕೋಟಿ ಸ್ಟ್ರೀಮಿಂಗ್ ಮಿನಿಟ್ ಕಂಡಿದೆ. ಈ ಮೂಲಕ ಗಣಿ ಅಂಡ್ ಭಟ್ರ (Yogaraj Bhatt) ಕಾಂಬಿನೇಶನ್ ಒಟಿಟಿಯಲ್ಲೂ ಹೊಸ ದಾಖಲೆ ಬರೆದು ಕಮಾಲ್ ಮಾಡಿದೆ.

    ಗೋಲ್ಡನ್ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ (Digant) ಹಾಗೂ ನಿರ್ದೇಶಕ ಪವನ್ ಕುಮಾರ್ (Pawan Kumar)ನಾಯಕರಾಗಿ ನಟಿಸಿದ್ದ ಈ ಚಿತ್ರದಲ್ಲಿ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತಾ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಗಣೇಶ್ ಪುತ್ರ ವಿಹಾನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಹಿರಿಯ ನಟ ಅನಂತ್ ನಾಗ್, ಪದ್ಮಜಾ ರಾವ್, ಸುಧಾ ಬೆಳವಾಡಿ, ರಂಗಾಯಣ ರಘು ಸೇರಿದಂತೆ ಮುಂತಾದವರ ತಾರಾಬಳಗವಿದೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾ ವರ್ಕ್, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕಿದ್ದು, ರಮೇಶ್ ರೆಡ್ಡಿ ನಿರ್ಮಾಣದಲ್ಲಿ ಮೂಡಿಬಂದಿದ್ದ ಗಾಳಿಪಟ 2 ಸಿನಿಮಾ ಚಿತ್ರಮಂದಿರ ಹಾಗೂ ಒಟಿಟಿ ಎರಡೂ ಕಡೆ ದಾಖಲೆ ಬರೆದಿದೆ.

    Live Tv
    [brid partner=56869869 player=32851 video=960834 autoplay=true]

  • ದಸರಾ ಧಮಾಕ : ಒಟಿಟಿಗೆ ಬರ್ತಿದೆ ಯೋಗರಾಜ್ ಭಟ್, ಗಣೇಶ್ ಕಾಂಬಿನೇಷನ್ನ ‘ಗಾಳಿಪಟ-2’

    ದಸರಾ ಧಮಾಕ : ಒಟಿಟಿಗೆ ಬರ್ತಿದೆ ಯೋಗರಾಜ್ ಭಟ್, ಗಣೇಶ್ ಕಾಂಬಿನೇಷನ್ನ ‘ಗಾಳಿಪಟ-2’

    ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ರು (Yogaraj Bhatt) ಸಮಾಗಮಾದ ಗಾಳಿಪಟ 2 (Gaalipata 2) ಸಿನಿಮಾ ತೆರೆಮೇಲೆ ಮತ್ತೆ ಮೋಡಿ ಮಾಡಿತ್ತು. ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡಿದ್ದ ಈ ಚಿತ್ರಕ್ಕೆ ಸಿನಿಮಾ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಗಸ್ಟ್ 12ರಂದು ರಾಜ್ಯ ಸೇರಿದಂತೆ ಹೊರ ರಾಜ್ಯ ಹಾಗೂ ವಿದೇಶಗಳಲ್ಲಿಯೂ ಹಾರಿದ್ದ ಗಾಳಿಪಟ 2 ಸಿನಿಮಾ ಹೊಸ ದಾಖಲೆ ಬರೆದಿತ್ತು. ಸ್ನೇಹ, ಪ್ರೇಮ, ವಿರಹ, ತ್ಯಾಗ, ಭಾವನೆಯ ಜೊತೆಗೆ ಒಂದಿಷ್ಟು ಮಸಾಲೆ ಸೇರಿಸಿ ಭಟ್ರು ತಯಾರಿಸಿದ್ದ ಸಿನಿಮಾ ಈಗ ಒಟಿಟಿಗೆ (OTT) ಎಂಟ್ರಿ ಕೊಡಲು ಸಜ್ಜಾಗಿದೆ.

    ಗೋಲ್ಡನ್‌ ಸ್ಟಾರ್ ಗಣೇಶ್ (Ganesh), ದೂದ್ ಪೇಡ ದಿಗಂತ್ (Diganth) ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ನಟಿಸಿದ್ದ ಈ ಚಿತ್ರದಲ್ಲಿ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಣೇಶ್‌ ಅವರ ಪುತ್ರ ವಿಹಾನ್‌ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಒಂದೊಳ್ಳೆ ಫ್ಯಾಮಿಲಿ ಎಂಟರ್ ಟೈನರ್ ಆಗಿರುವ ಗಾಳಿಪಟ 2 ಸಿನಿಮಾ ಅಕ್ಟೋಬರ್ 5ರಂದು ದಸರಾ ಹಬ್ಬದ ಸ್ಪೆಷಲ್ ಆಗಿ ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಇದನ್ನೂ ಓದಿ:ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

    ಹಿರಿಯ ನಟ ಅನಂತ್ ನಾಗ್ (Anant Nag) ಕನ್ನಡ ಮೇಷ್ಟ್ರು ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಪದ್ಮಜಾ ರಾವ್‌, ಸುಧಾ ಬೆಳವಾಡಿ, ರಂಗಾಯಣ ರಘು ಸೇರಿದಂತೆ ಮುಂತಾದವರು ನಟಿಸುತ್ತಿದ್ದಾರೆ. ಸಂತೋಷ್‌ ರೈ ಪಾತಾಜೆ ಕ್ಯಾಮೆರಾ ವರ್ಕ್, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.  ರಮೇಶ್‌ ರೆಡ್ಡಿ ನಿರ್ಮಾಣದಲ್ಲಿ ಮೂಡಿಬಂದಿದ್ದ ಗಾಳಿಪಟ 2 ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಈಗ ಮನೆಯಲ್ಲಿಯೇ ಕುಳಿತು ನೋಡಬಹುದು.

    ಈಗಾಗಲೇ ಜೀ5 ಒಟಿಟಿಯಲ್ಲಿ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಹಂಗಾಮ ಸೃಷ್ಟಿಸಿದ್ದು, ಟಾಪ್ ಟ್ರೇಡಿಂಗ್ ಮೂರನೇ ಸ್ಥಾನ ಪಡೆದುಕೊಂಡಿದೆ. ಕೋಟಿ ಗಟ್ಟಲೆ ಮಿಲಿಯನ್ ವೀವ್ಸ್ ಪಡೆದಿರುವ ವಿಕ್ರಾಂತ್ ರೋಣ ಚಿತ್ರವನ್ನು ಥಿಯೇಟರ್ ನಲ್ಲಿ‌‌ ಮಿಸ್ ಮಾಡಿದವರು ಮನೆಯಲ್ಲಿ ನೋಡಬಹುದು. ಹಾಗಿದ್ರೆ ಮತ್ಯಾಕೆ ತಡ ಜೀ5ಒಟಿಟಿಗೆ ಲಾಗಿನ್ ಆಗಿ. ಎರಡು ಬಹುನಿರೀಕ್ಷಿತ ಕನ್ನಡ ಸಿನಿಮಾ ನೋಡಿ.

    Live Tv
    [brid partner=56869869 player=32851 video=960834 autoplay=true]

  • ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರಕ್ಕಾಗಿ ಹಾಡಿದ ಚಂದನ್ ಹಾಗೂ ಮಂಗ್ಲಿ

    ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರಕ್ಕಾಗಿ ಹಾಡಿದ ಚಂದನ್ ಹಾಗೂ ಮಂಗ್ಲಿ

    ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” (Triple Riding) ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ (Chandan Shetty) ಹಾಗೂ ಮಂಗ್ಲಿ(Mangli) ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

    ನಾನು “ಮುಂಗಾರು‌ ಮಳೆ” ಸಮಯದಿಂದ ಗಣೇಶ್ (Ganesh) ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್ ರೈಡಿಂಗ್” ಸ್ವಮೇಕ್ ಚಿತ್ರ. ಆಕ್ಷನ್, ಥ್ರಿಲ್ಲರ್, ಕಾಮಿಡಿ, ಸ್ವಲ್ಪ ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಎಲ್ಲವೂ ಇದೆ. ನಾಲ್ಕು  ಹಾಡುಗಳಿದೆ‌. ಆದರಲ್ಲಿ ಒಂದು ಹಾಡು ಇಂದು ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು (Song) ಒಂದಕ್ಕಿಂತ ಒಂದು ಚೆನ್ನಾಗಿದೆ. ಸಾಯಿಕಾರ್ತಿಕ್ ಈ ಸಂಗೀತ ನಿರ್ದೇಶಕರು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಸುಮಧುರವಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಸಿನಿಮಾ‌ ಮಾಡಿದ್ದೇವೆ. ಅದಕ್ಕೆ ಕಾರಣರಾದ ನಿರ್ಮಾಪಕ ರಾಮ್ ಗೋಪಾಲ್ ಅವರಿಗೆ ಧನ್ಯವಾದ. ನಿಮ್ಮೆಲ್ಲರ ಹಾರೈಕೆಯಿರಲಿ ಎಂದರು ನಿರ್ದೇಶಕ ಮಹೇಶ್ ಗೌಡ.

    ನಿರ್ದೇಶಕ ಮಹೇಶ್ (Mahesh Gowda) ನನಗೆ “ಮುಂಗಾರು ಮಳೆ” ಯಿಂದ ಪರಿಚಯ. ಆ ಚಿತ್ರಕ್ಕೆ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗಲೇ ನನಗೆ ಒಂದು ಕಥೆ ಮಾಡುತ್ತೀನಿ ಎಂದಿದ್ದರು‌. ಹದಿನಾಲ್ಕು ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದರು. ಒಳ್ಳೆಯ ಪಾತ್ರ ಕೊಟ್ಟಿರುವುದಕ್ಕೆ ಧನ್ಯವಾದ. ಮೊದಲ ಬಾರಿ ನಿರ್ಮಾಣ ಮಾಡಿರುವ ರಾಮ್ ಗೋಪಾಲ್ ಅವರಿಗೆ ಒಳ್ಳೆಯದಾಗಲಿ. ಚಿತ್ರದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟು, ಟರ್ನ್ ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಚಿತ್ರ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್ ರೈಡಿಂಗ್” ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನ ಇದರಲ್ಲಿ ನೋಡಬಹುದು.  ಈ ಚಿತ್ರದಲ್ಲಿ ಮೂವರು ನಾಯಕಿಯರು. ಅದಿತಿ ಪ್ರಭುದೇವ,  ಮೇಘ ಶೆಟ್ಟಿ ಹಾಗೂ ರಚನಾ ಇಂದರ್. ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ. ನೋಡಿ ಹರಸಿ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

    ನನ್ನದು ಈ ಚಿತ್ರದಲ್ಲಿ ಡಾಕ್ಟರ್ ಪಾತ್ರ. ಗಣೇಶ್ ಸರ್ ಜೊತೆ ನನ್ನ ಮೊದಲ ಸಿನಿಮಾ. ಹಾಡು ಹಾಗೂ ಸಿನಿಮಾ ಎರಡು ಚೆನ್ನಾಗಿದೆ ಎಂದು ಮೇಘ ಶೆಟ್ಟಿ ತಿಳಿಸಿದರು. “ಲವ್ ಮಾಕ್ಟೇಲ್” ನಂತರ ನಾನು‌ ಒಪ್ಪಿಕೊಂಡ ಚಿತ್ರ ಇದು. ಹಠಮಾರಿ ಹೆಣ್ಣಿನ ಪಾತ್ರ ನನ್ನದು. ಏನಾದರೂ ಬೇಕೆಂದರೆ ಅದು ಬೇಕು ಎಂದು ಪಡೆದುಕೊಳ್ಳುತ್ತೇನೆ. ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಧನ್ಯವಾದ ಎಂದರು ರಚನಾ ಇಂದರ್. ಇದನ್ನೂ ಓದಿ:ಮಸ್ತಾಗಿದೆ `ಕಬ್ಜ’ ಟೀಸರ್: ಹೇಗಿದೆ ಗೊತ್ತಾ ಉಪೇಂದ್ರ- ಸುದೀಪ್ ಜುಗಲ್‌ಬಂದಿ

    ಗಣೇಶ್ ಸರ್ ಗೆ ಈ ಹಿಂದೆ ಎರಡು ಹಾಡು ಹಾಡಿದೆ. ಇದು ಮೂರನೇ ಹಾಡು. ಸಾಯಿಕಾರ್ತಿಕ್ ತುಂಬಾ ಚೆನ್ನಾಗಿ ಸಂಗೀತ ನೀಡಿದ್ದಾರೆ. ಹಾಡು ಹಾಗೂ ಸಿನಿಮಾ ಎರಡೂ ಹಿಟ್ ಆಗಲಿ ಎಂದು ಚಂದನ್ ಶೆಟ್ಟಿ ಹಾರೈಸಿದರು. ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಾಮ್ ಗೋಪಾಲ್ ವೈ.ಎಂ. ಹಾಡುಗಳ ಹಾಗೂ ಹಾಡಿರುವವರ ಬಗ್ಗೆ ಸಂಗೀತ ನಿರ್ದೇಶಕ  ಸಾಯಿಕಾರ್ತಿಕ್ ಮಾತನಾಡಿದರು. ಚಿತ್ರತಂಡದ ಅನೇಕ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

    ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

    ಗೋಲ್ಡನ್ ಸ್ಟಾರ್ ಗಣೇಶ್ (Ganesh) – ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬರುತ್ತಿದೆ ಮತ್ತೊಂದು ಸುಂದರ ಚಿತ್ರ. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಈ ಹಿಂದೆ ಕೆಲವು ಚಿತ್ರಗಳು ಪ್ರೇಕ್ಷಕರನ್ನು ಮೋಡಿ ಮಾಡಿದೆ. ಈಗ ಇದೇ ಕಾಂಬಿನೇಷನ್ ನಲ್ಲಿ ” ಬಾನ ದಾರಿಯಲ್ಲಿ” (Banadariyalli) ಚಿತ್ರ ಬರುತ್ತಿದೆ.

    ಸ್ಪೋರ್ಟ್ಸ್ ಜಾನರ್ ನ ಈ ಚಿತ್ರದಲ್ಲಿ ಗಣೇಶ್ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ರುಕ್ಮಿಣಿ ವಸಂತ್ (Rukmini Vasanth) ಈಜುಗಾರ್ತಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್‌ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ (Africa) ನಡೆಯಲಿದ್ದು, ಸದ್ಯದಲ್ಲೇ ಚಿತ್ರತಂಡ ಆಫ್ರಿಕಾಗೆ ತೆರಳಲಿದೆ.

    ಪ್ರೀತಂ ಗುಬ್ಬಿ (Pritam Gubbi) ನಿರ್ದೇಶನದ ಈ ಚಿತ್ರದ ಕಥೆ ಪ್ರೀತಾ ಜಯರಾಂ ಅವರದು. ಮಾಸ್ತಿ ಸಂಭಾಷಣೆ,  ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಬಾನ ದಾರಿಯಲ್ಲಿ” ಚಿತ್ರದ ತಾರಾಬಳಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರೀಶ್ಮಾ ನಾಣಯ್ಯ, ರಂಗಾಯಣ ರಘು ಮುಂತಾದವರಿದ್ದಾರೆ‌. ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿನಯದ ಹಾಡೊಂದರ ಸಾಲು ಚಿತ್ರದ ಶೀರ್ಷಿಕೆಯಾಗಿದ್ದು, “ಬಾನ ದಾರಿಯಲ್ಲಿ” ಶೀರ್ಷಿಕೆ ಈಗಾಗಲೇ ಜನರ ಮನ ಗೆದ್ದಿದೆ.

    Live Tv
    [brid partner=56869869 player=32851 video=960834 autoplay=true]

  • ಶಾರುಖ್ ಖಾನ್ ಮನೆಯಲ್ಲಿ ಗಣೇಶ: ಮನ್ನತ್ ನಿವಾಸದಲ್ಲಿ ಕಳೆಗಟ್ಟಿದ ಸಂಭ್ರಮ

    ಶಾರುಖ್ ಖಾನ್ ಮನೆಯಲ್ಲಿ ಗಣೇಶ: ಮನ್ನತ್ ನಿವಾಸದಲ್ಲಿ ಕಳೆಗಟ್ಟಿದ ಸಂಭ್ರಮ

    ಬಾಲಿವುಡ್ ಬಹುತೇಕ ಸ್ಟಾರ್ ನಟ ನಟಿಯರು ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಬಹುತೇಕರು ಕಲಾವಿದರು ಮತ್ತು ತಂತ್ರಜ್ಞರು ಶೂಟಿಂಗ್ ಬಂದ್ ಮಾಡಿ, ತಮ್ಮ ಮನೆಯಲ್ಲಿ ಗಣೇಶ ಪೂಜೆ ಮಾಡುತ್ತಾರೆ. ಅದರಂತೆಯೇ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮನೆಯಲ್ಲೂ ಕೂಡ ಗಣೇಶನನ್ನು ಪತ್ರಿಷ್ಠಾಪಿಸಲಾಗಿತ್ತು.

    ತಮ್ಮ ನಿವಾಸ ಮನ್ನತ್ ನಲ್ಲಿ ಗಣೇಶನ ಹಬ್ಬವನ್ನು ಸಡಗರಿಂದ ಮಾಡಿದ ಫೋಟೋವನ್ನು ಶಾರುಖ್ ಹಂಚಿಕೊಂಡಿದ್ದು, ಮೋದಕ ತಿಂದು ಸಂತೃಪ್ತನಾದ ಬಗ್ಗೆ ಹೇಳಿದ್ದಾರೆ. ಎಲ್ಲರಿಗೂ ವಿಘ್ನ ವಿನಾಶಕ ಗಣಪತಿ ಒಳ್ಳೆಯದ್ದನ್ನು ಮಾಡಲಿ ಎಂದು ಕೇಳಿಕೊಂಡಿದ್ದಾರೆ. ದೇವರ ಮೇಲಿನ ನಂಬಿಕೆ ಮತ್ತು ಪರಿಶ್ರಮದಿಂದ ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಪ್ರೇರಕವಾದ ಸಾಲುಗಳನ್ನೂ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಶಾರುಖ್ ಖಾನ್ ನಿವಾಸದಲ್ಲಿ ಇಡಲಾದ ಗಣೇಶನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಶಾರುಖ್ ಖಾನ್ ಅವರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಧಾರ್ಮಿಕ ಗಲಾಟೆಯ ಮಧ್ಯ ಶಾರುಖ್ ಖಾನ್ ಹಿಂದೂ ದೇವರನ್ನು ಪೂಜಿಸುವ ಮೂಲಕ ಉತ್ತಮ ಸಂದೇಶ ಸಾರಿದ್ದಾರೆ ಎಂದು ಅಭಿಮಾನಿಗಳು ಮೆಚ್ಚುಗೆಯ ಕಾಮೆಂಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಖ ಮುಚ್ಕೊಂಡೆ ಮನೆಗೆ ಗಣಪತಿ ಕರೆತಂದ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ

    ಮುಖ ಮುಚ್ಕೊಂಡೆ ಮನೆಗೆ ಗಣಪತಿ ಕರೆತಂದ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ

    ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೋರ್ನ್ ವಿಡಿಯೋ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಮೇಲೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ತೀರಾ ಅಪರೂಪವಾಗಿದೆ. ಕಾಣಿಸಿಕೊಂಡರೂ, ಅವರು ಪೂರ್ಣ ಮುಖ ಮುಚ್ಚಿಕೊಂಡೆ ಇರುತ್ತಾರೆ. ಜೈಲಿನಿಂದ ಆಚೆ ಬಂದ ಮೇಲೆ ಈವರೆಗೂ ಅವರು ತಮ್ಮ ಪೂರ್ಣ ಮುಖ ತೋರಿಸಿಲ್ಲ. ತೋರಿಸುವುದಕ್ಕೂ ಅವರು ಇಷ್ಟ ಪಡುತ್ತಿಲ್ಲ ಎನ್ನುತ್ತಾರೆ ಶಿಲ್ಪಾ ಶೆಟ್ಟಿ.

    ಪ್ರತಿ ವರ್ಷದಂತೆ ಈ ವರ್ಷವೂ ಶಿಲ್ಪಾ ಶೆಟ್ಟಿ ಮನೆಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಹೀಗಾಗಿ ನಿನ್ನೆಯೇ ರಾಜ್ ಕುಂದ್ರಾ ಗಣಪತಿ ತರುವುದಕ್ಕಾಗಿ ಮಾರುಕಟ್ಟೆಗೆ ಹೋಗಿದ್ದರು. ಈ ಸಮಯದಲ್ಲೂ ಅವರು ತಮ್ಮ ಮುಖದ ಮಾಸ್ಕ್ ಹಾಕುವುದನ್ನು ಮರೆತಿಲ್ಲ. ಹಾಗೆಯೇ ಹೋಗಿ ಗಣಪತಿ ಮೂರ್ತಿಯನ್ನು ಮನೆಗೆ ತಂದಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಇದನ್ನೂ ಓದಿ:ಬಿಗ್ ಬಾಸ್: ಹೋಟೆಲ್ ಊಟದತ್ತ ವಾಲಿದ ಜಶ್ವಂತ್- ನಂದು ಕಣ್ಣೀರು

    ಏರ್ ಪೋರ್ಟ್ ಸೇರಿದಂತೆ ಯಾವುದೇ ಸ್ಥಳದಲ್ಲಿ ರಾಜ್ ಕುಂದ್ರಾ ಕಂಡರೂ, ಮುಖಕ್ಕೆ ಪೂರ್ತಿ ಮಾಸ್ಕ್ ಹಾಕಿಕೊಂಡೆ ಇರುತ್ತಾರೆ. ಕ್ಯಾಮೆರಾಗಳಿಂದ ಆದಷ್ಟು ದೂರ ಇರಲು ಬಯಸುತ್ತಾರೆ. ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಅವರು ಬಂಧನವಾಗಿದ್ದರು. ಹಾಗೂ ಹಲವು ದಿನಗಳ ಕಾಲ ಜೈಲಿನಲ್ಲೂ ಇದ್ದರು. ಜೈಲಿನಿಂದ ಆಚೆ ಬಂದ ಮೇಲೆ ಅವರು ಈ ರೀತಿಯಾಗಿ ಬದಲಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ‘ಗಾಳಿಪಟ 2’ ಹಾರಾಟ : ಮತ್ತೆ ಗೋಲ್ಡನ್ ಡೇಸ್ ಗೆ ಮರಳಿದ ಗಣೇಶ್

    ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ‘ಗಾಳಿಪಟ 2’ ಹಾರಾಟ : ಮತ್ತೆ ಗೋಲ್ಡನ್ ಡೇಸ್ ಗೆ ಮರಳಿದ ಗಣೇಶ್

    ಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್  ಮತ್ತೆ ವರ್ಕೌಟ್ ಆಗಿದೆ. ಗಾಳಿಪಟ 2 ಸಿನಿಮಾ ಸಾವಿರಾರು ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಗಣೇಶ್ ಮತ್ತೆ ಗೋಲ್ಡನ್ ಡೇಸ್ ಗೆ ಮರಳಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ವೀಕೆಂಡ್ ಮತ್ತು ಸ್ವಾತಂತ್ರ್ಯ ದಿನದ ರಜೆಗಳನ್ನು ಚಿತ್ರತಂಡ ಸಮರ್ಥವಾಗಿ ಬಳಸಿಕೊಂಡು ದಾಖಲೆ ನಿರ್ಮಿಸಲು ಮುಂದಾಗಿದೆ.

    ಮುಂಗಾರು ಮಳೆ ಮೂಲಕ ಗಣೇಶ್ ಮತ್ತು ಯೋಗರಾಜ್ ಭಟ್ ಕನ್ನಡ ಸಿನಿಮಾ ರಂಗದಲ್ಲಿ ದಾಖಲೆ ಬರೆದಿದ್ದರೆ, ಗಾಳಿಪಟ 2 ಮೂಲಕ ತಮ್ಮ ದಾಖಲೆಯನ್ನೇ ತಾವೇ ಬ್ರೇಕ್ ಮಾಡಿದ್ದಾರೆ. ಗಣೇಶ್ ಅವರ ವೃತ್ತಿ ಜೀವನದಲ್ಲಿ ಸಿನಿಮಾ ರಿಲೀಸ್ ಆಗಿ ಕೆಲವೇ ದಿನಗಳಲ್ಲೇ ಗಾಳಿಪಟ 2 ದಾಖಲೆ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ದಿನದಿಂದ ದಿನಕ್ಕೆ ಥಿಯೇಟರ್ ಸಂಖ್ಯೆಯನ್ನೂ ಅದು ಹೆಚ್ಚಿಸಿಕೊಳ್ಳುತ್ತಿದೆ. ಇದನ್ನೂ ಓದಿ:ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

    ಸಾಮಾನ್ಯವಾಗಿ ವೀಕೆಂಡ್ ನಲ್ಲಿ ಥಿಯೇಟರ್ ಸಂಖ್ಯೆ ಹೆಚ್ಚುವುದನ್ನು ಕೇಳಿದ್ದೇವೆ. ಆದರೆ, ವೀಕ್ ಡೇಸ್ ನಲ್ಲೂ ಈ ಸಿನಿಮಾ ಥಿಯೇಟರ್ ಸಂಖ್ಯೆ ಹೆಚ್ಚಿಸಿಕೊಂಡಿದೆ. ಈ ಸೋಮವಾರ ಮೂವತ್ತಕ್ಕೂ ಹೆಚ್ಚು ಸ್ಕ್ರೀನ್ ಗಳು ಮತ್ತೆ ಸೇರ್ಪಡೆಯಾಗಿವೆ. ‘ನಿರೀಕ್ಷೆಗೂ ಮೀರಿ ಜನರು ಸಿನಿಮಾಗೆ ಸ್ಪಂದಿಸುತ್ತಿದ್ದಾರೆ. ಈ ಸೋಮವಾರದಿಂದ ಮತ್ತಷ್ಟು ಸ್ಕ್ರೀನ್ ಗಳಲ್ಲಿ ಗಾಳಿಪಟ 2 ರಿಲೀಸ್ ಆಗಿದೆ ಎನ್ನುತ್ತಾರೆ ನಿರ್ಮಾಪಕ ರಮೇಶ್ ರೆಡ್ಡಿ.

    ಗಾಳಿಪಟ 2 ಸಿನಿಮಾದ ಟ್ರೈಲರ್ ರಿಲೀಸ್ ಆದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿತ್ತು. ಹಾಡುಗಳು ಕೂಡ ಮೋಡಿ ಮಾಡಿದ್ದವು. ಇದೀಗ ಸಿನಿಮಾ ಕೂಡ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ. ಯೋಗರಾಜ್ ಭಟ್ ಮತ್ತು ರಮೇಶ್ ರೆಡ್ಡಿ ಅವರ ಕಾಂಬಿನೇಷನ್ ಇದೇ ಮೊದಲ ಬಾರಿಗೆ ಒಂದಾಗಿದ್ದರೂ, ಪ್ರೇಕ್ಷಕರನ್ನು ಮೋಡಿ ಮಾಡುವಲ್ಲಿ ಈ ಜೋಡಿ ಗೆದ್ದಿದೆ.

    Live Tv

     

  • ಗಾಳಿಪಟ 2 ಸಿನಿಮಾದ ‘ಪ್ರಾಯಶಃ’ ಸಾಂಗ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ಗಾಳಿಪಟ 2 ಸಿನಿಮಾದ ‘ಪ್ರಾಯಶಃ’ ಸಾಂಗ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಗಾಳಿಪಟ 2 ಸಿನಿಮಾದ ಮತ್ತೊಂದು ಹಾಡು ಬಿಡುಗಡೆ ಆಗಿದ್ದು, ಪ್ರಾಯಶಃ ಹೆಸರಿನೊಂದಿಗೆ ಬಂದಿರುವ ಈ ಗೀತೆಯನ್ನು ಕಿಚ್ಚ ಸುದೀಪ್ ಇಂದು ಬಿಡುಗಡೆ ಮಾಡಿದ್ದಾರೆ. ಹಾಡಿನ ಕುರಿತು ಮಾತನಾಡಿ, ಒಂದೊಳ್ಳೆ ಸಿನಿಮಾ ಇದಾಗಲಿದೆ ಎಂದು ಶುಭ ಹಾರೈಸಿದ್ದಾರೆ.

    ಯೋಗರಾಜ್ ಭಟ್ ಮತ್ತು ಗಣೇಶ್ ಕಾಂಬಿನೇಷನ್ ನಲ್ಲಿ ಈ ಹಿಂದೆ ಗಾಳಿಪಟ ಸಿನಿಮಾ  ರಿಲೀಸ್ ಆಗಿತ್ತು. ಆ ಗಾಳಿಪಟದಲ್ಲಿ ಗಣೇಶ್, ದಿಗಂತ್ ಮತ್ತು ಗಾಯಕ ರಾಜೇಶ್ ಕೃಷ್ಣನ್ ತಾರಾ ಬಳಗದಲ್ಲಿದ್ದರು. ಈ ಬಾರಿ ರಾಜೇಶ್ ಕೃಷ್ಣನ್ ಬದಲು, ಪವನ್ ಕುಮಾರ್ ಬಂದಿದ್ದಾರೆ. ಉಳಿದಂತೆ ಗಣೇಶ್ ಮತ್ತು ದಿಗಂತ್ ತಮ್ಮ ತಮ್ಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.  ಇದನ್ನೂ ಓದಿ:ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಈಗಾಗಲೇ ಗಾಳಿಪಟ 2 ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದ್ಭುತ ರೆಸ್ಪಾನ್ಸ್ ಬಂದಿದೆ. ಅಲ್ಲದೇ, ಎರಡು ಹಾಡುಗಳು ಕೂಡ ಬಿಡುಗಡೆಯಾಗಿ ಜನರನ್ನು ರಂಜಿಸಿವೆ. ಹೀಗಾಗಿ ಗಾಳಿಪಟ 2 ಸಿನಿಮಾ ಕೂಡ ಭರವಸೆ ಮೂಡಿಸಿದೆ. ಯೋಗರಾಜ್ ಭಟ್ ಮತ್ತು ನಿರ್ಮಾಪಕ ರಮೇಶ್ ರೆಡ್ಡಿ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ.

    Live Tv
    [brid partner=56869869 player=32851 video=960834 autoplay=true]