Tag: ಗಣೇಶ್

  • ಹುಟ್ಟು ಹಬ್ಬದ ದಿನದಂದು ಈ ಬಾರಿಯೂ ಅಭಿಮಾನಿಗಳಿಗೆ ಸಿಗುವುದಿಲ್ಲ ಗೋಲ್ಡನ್ ಸ್ಟಾರ್ ಗಣೇಶ್

    ಹುಟ್ಟು ಹಬ್ಬದ ದಿನದಂದು ಈ ಬಾರಿಯೂ ಅಭಿಮಾನಿಗಳಿಗೆ ಸಿಗುವುದಿಲ್ಲ ಗೋಲ್ಡನ್ ಸ್ಟಾರ್ ಗಣೇಶ್

    ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಜು.2 ರಂದು ತಮ್ಮ ನೆಚ್ಚಿನ ನಟನ ಬರ್ತಡೇ ಆಚರಿಸಲು ನಾನಾ ರೀತಿಯಲ್ಲಿ ಅಭಿಮಾನಿಗಳು ತಯಾರಿ ಕೂಡ ನಡೆಸಿದ್ದಾರೆ. ಆದರೆ, ಈ ಬಾರಿಯೂ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಮತ್ತು ಅಭಿಮಾನಿಗಳಿಗೆ ತಾವು ಸಿಗುವುದಿಲ್ಲವೆಂದು ಅಧಿಕೃವಾಗಿ ಹೇಳಿಕೊಂಡಿದ್ದಾರೆ ಗಣೇಶ್.

    ಈ ಕುರಿತು ಸುದೀರ್ಘ ಪತ್ರ ಬರೆದಿರುವ ಗಣೇಶ್, “ನನ್ನ ಕಲಾ ಬದುಕಿನ ಆರಂಭದ ದಿನಗಳಿಂದ ಶುರುವಾಗಿ ಇಲ್ಲಿಯ ತನಕ ನನ್ನ ಈ ಬಣ್ಣದ ಹಾದಿಯ ಪ್ರತಿ ಹೆಜ್ಜೆಯಲ್ಲೂ ನನ್ನೊಂದಿಗೆ ಹೆಜ್ಜೆ ಹಾಕಿ, ನನ್ನ ಯಶಸ್ಸನ್ನು ನಿಮ್ಮದೇ ಯಶಸ್ಸು ಎನ್ನುವಂತೆ ಸಂಭ್ರಮಿಸಿ ನೀವೆಲ್ಲರೂ ಖುಷಿ ಪಟ್ಟಿದ್ದೀರಿ. ಪ್ರತಿ ವರ್ಷವೂ ನನ್ನ ಹುಟ್ಟಿದ ದಿನದಂದು ರಾಜ್ಯದ ಮೂಲೆ ಮೂಲೆಗಳಿಂದ ನನ್ನ ಮನೆಯ ಬಳಿ ಬಂದು ಅತೀವ ಅಭಿಮಾನದಿಂದ ನನ್ನನ್ನು ಆಲಂಗಿಸಿ ಹರಿಸಿದ್ದೀರಿ. ನಿಮ್ಮ ಅಭಿಮಾನದ ಸವಿಯನ್ನು ಇಡೀ ದಿನ ಖುಷಿಯಿಂದ ಸವಿಯು ಹಂಬಲ ನನಗೂ ಇದೆ. ಆದರೆ, ಕಳೆದ ಬಾರಿಯಂತೆ ಈ ಬಾರಿಯೂ ಸಮಯ ಅದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ಮಲಯಾಳಂ ನಟಿ ಅಂಬಿಕಾ ರಾವ್ ನಿಧನ

    ಜುಲೈ 2ರಂದು ಗಣೇಶ್ ಅವರು ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಅಭಿಮಾನಿಗಳಿಗೆ ಅವರು ಕ್ಷಮೆ ಕೇಳಿದ್ದಾರೆ. ಅಭಿಮಾನದ ಹಾರು, ತುರಾಯಿ, ಕೇಕ್ ಇತ್ಯಾದಿ ಬದಲಿಗೆ ಅಗತ್ಯ ಇರುವವರಿಗೆ ನಿಮ್ಮ ಕೈಲಾದಷ್ಟು ನೆರವು ನೀಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಅರ್ಥಪೂರ್ಣಗೊಳಿಸಲು ಅವರು ವಿನಂತಿಸಿದ್ದಾರೆ.

    Live Tv

  • ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡ ಯೋಧನ ಮೃತದೇಹ ಪತ್ತೆ

    ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡ ಯೋಧನ ಮೃತದೇಹ ಪತ್ತೆ

    ಚಿಕ್ಕಮಗಳೂರು: ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್‍ನಲ್ಲಿ ಪತ್ತೆಯಾಗಿದೆ.

    ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ಸೇನಾ ತಂಡ ಕೂಡಿಕೊಳ್ಳಬೇಕಾದ ಕಾರಣ ಜೂನ್ 9ರಂದು ಮನೆಯಿಂದ ವಾಪಸ್ ಹೋಗಿದ್ದರು. ಇಂದು ಸೇನಾ ತಂಡ ಕೂಡಿಕೊಳ್ಳಬೇಕಿತ್ತು. ಆದರೆ ಸೇನೆಗೆ ಹೋಗುವ ಮುನ್ನವೇ ಬಿಹಾರದ ಕಿಶನ್‍ಗಂಜ್‍ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: 2 ವಾರದಿಂದ ಸಿಕ್ಕಿಲ್ಲ ಸೈನಿಕರು – ಮುಂದುವರಿದ ಶೋಧಕಾರ್ಯ

    ನಿನ್ನೆ ಬೆಳಗ್ಗೆ ಅವರ ಪತ್ನಿ ಗಣೇಶ್ ಜೊತೆ ಮಾತನಾಡಿದ್ದರು. ಆಗ ಅವರು ಮುಖ ತೊಳೆಯುತ್ತಿದ್ದೇನೆ ಎಂದು ಹೇಳಿದ್ದರು. ಆದರೆ ಮಧ್ಯಾಹ್ನದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮತ್ತೆ ಕರೆ ಮಾಡಿಲ್ಲ. ಆದರೆ ನಿನ್ನೆ ರಾತ್ರಿ ಸೇನೆ ಅಧಿಕಾರಿಗಳು ಕರೆ ಮಾಡಿ ಗಣೇಶ್ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಹಾರದ ಕಿಶನ್ ಗಂಜ್‍ನಲ್ಲಿ ಅವರ ಮೃತದೇಹ ಕಂಡ ಅಂಬುಲೆನ್ಸ್ ಚಾಲಕ ಜೇಬಿನಲ್ಲಿದ್ದ ಐಡಿ ಕಾರ್ಡ್ ಹಾಗೂ ಆರ್ಮಿಯ ಪಾಸ್‍ ನೋಡಿ ಈತ ಯೋಧ ಎಂದು ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಸೇನೆಗೆ ವಾಪಸ್ ಹೋಗೇ ಇಲ್ಲ. ಅವರು ಹೇಗೆ ಸಾವನ್ನಪ್ಪಿದರು ಎಂಬುದು ಕುಟುಂಬಸ್ಥರು ಹಾಗೂ ಸ್ಥಳಿಯರಲ್ಲಿ ಯಕ್ಷಪ್ರಶ್ನೆಯಾಗಿದೆ. ತಾಲೂಕಿನ ಮಸಿಗದ್ದೆ ಗ್ರಾಮದ ನಾಗಯ್ಯ-ಗಂಗಮ್ಮ ದಂಪತಿಯ ಪುತ್ರನಾದ ಗಣೇಶ್ ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಯೋಧ ಗಣೇಶ್ ಪ್ರಸ್ತುತ ಜಮ್ಮುವಿನಲ್ಲಿ ಸಿಗ್ನಲ್ ರೆಜಿಮೆಂಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗಣೇಶ್‌ಗೆ ಐದು ವರ್ಷದ ಹೆಣ್ಣು ಮಗಳಿದ್ದಾಳೆ. ಇದನ್ನೂ ಓದಿ: ಪೊಲೀಸರನ್ನ ಹತ್ಯೆ ಮಾಡಿದ್ದ ಭಯೋತ್ಪಾದಕ ಎನ್‍ಕೌಂಟರ್

    ಕಳೆದ ಮೂರು ವರ್ಷಗಳ ಹಿಂದೆ ನಾಗಯ್ಯ-ಗಂಗಮ್ಮ ದಂಪತಿಯ ಇನ್ನೊಬ್ಬ ಮಗ ಹಾಗೂ ಯೋಧ ಗಣೇಶ್ ಸಹೋದರ ಕೂಡ ತೀರಿಕೊಂಡಿದ್ದರು. ಇದೀಗ ಯೋಧ ಗಣೇಶ್ ಕೂಡ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬಕ್ಕೆ ಆಧಾರವೇ ಇಲ್ಲದಂತಾಗಿದೆ. ಯೋಧನ ಸಾವಿನಿಂದ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತ ಯೋಧ ಗಣೇಶ್ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

  • ಡಾಲಿ ಧನಂಜಯ್ ವರ್ಸಸ್ ಗೋಲ್ಡನ್ ಸ್ಟಾರ್ ಗಣೇಶ್

    ಡಾಲಿ ಧನಂಜಯ್ ವರ್ಸಸ್ ಗೋಲ್ಡನ್ ಸ್ಟಾರ್ ಗಣೇಶ್

    ಭಾರೀ ಬಜೆಟ್ ಮತ್ತು ಸ್ಟಾರ್ ನಟರ ಚಿತ್ರಗಳು ಒಂದೇ ದಿನಕ್ಕೆ ತೆರೆಗೆ ಬಂದಾಗ, ಅಲ್ಲೊಂದು ಗೊಂದಲ ಶುರುವಾಗುತ್ತದೆ. ಅದರಲ್ಲೂ ಎರಡೂ ಚಿತ್ರಗಳು ನಿರೀಕ್ಷೆ ಮೂಡಿಸಿದಾಗ ನೋಡುಗರಿಗೆ ಇನ್ನೂ ತಿಕ್ಕಾಟವಾಗುತ್ತದೆ. ಇಂಥದ್ದೊಂದು ಗೊಂದಲಕ್ಕೆ ಕಾರಣರಾಗಿದ್ದಾರೆ ಡಾಲಿ ಧನಂಜಯ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

    ನಿನ್ನೆಯಷ್ಟೇ ಡಾಲಿ ಧನಂಜಯ್ ನಟನೆಯ ‘ಮನ್ಸೂನ್ ರಾಗ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿತ್ತು. ಆಗಸ್ಟ್ 12 ರಂದು ಥಿಯೇಟರ್ ಗೆ ಬರುವುದಾಗಿ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿತ್ತು. ಇದೀಗ ಗಣೇಶ್ ನಟನೆಯ ‘ಗಾಳಿಪಟ 2’ ಸಿನಿಮಾ ಟೀಮ್ ಕೂಡ ಅದೇ ದಿನದಂದು  ತಮ್ಮ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದೆ. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

    ಗಾಳಿಪಟ 2 ಸಿನಿಮಾವನ್ನು ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದು, ಗಣೇಶ್, ದಿಗಂತ್ ಮತ್ತು ಲೂಸಿಯಾ ಪವನ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಿರಿಯ ನಟ ಅನಂತ್ ನಾಗ್ ಕೂಡ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ರಮೇಶ್ ರೆಡ್ಡಿ ಅವರ ಅದ್ದೂರಿ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದೆ. ಹೀಗಾಗಿ ಈ ಚಿತ್ರದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ : ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ಡಾಲಿ ಧನಂಜಯ್ ಈಗಾಗಲೇ ಗೆಲುವಿನ ಕುದುರೆ ಏರಿ ಕೂತಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಕೂಡ ಮಾಡಿದೆ. ಡಾಲಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ ‘ಮನ್ಸೂನ್ ರಾಗ’ ಚಿತ್ರದ ಟ್ರೇಲರ್ ಕೂಡ ಈಗಾಗಲೇ ಸದ್ದು ಮಾಡಿದೆ. ಒಳ್ಳೆಯ ಮೇಕಿಂಗ್ ಇರುವಂತಹ ಸಿನಿಮಾ ಎಂದು ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಈ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ.

    ಎರಡು ಚಿತ್ರಗಳು ಹೀಗೆ ಒಟ್ಟೊಟ್ಟಿಗೆ ಬಂದಾಗ, ಯಾವ ಸಿನಿಮಾ ನೋಡಬೇಕು, ಯಾವುದನ್ನು ಬಿಡಬೇಕು ಎನ್ನುವ ಪ್ರಶ್ನೆ ಮೂಡುವುದು ಸಹಜ. ಅಲ್ಲದೇ, ಈ ಸಂದರ್ಭದಲ್ಲಿ ಬೇರೆ ನಟರ ಅಥವಾ ಭಾಷೆಯ ಸಿನಿಮಾಗಳು ಬಂದಾಗ ಥಿಯೇಟರ್ ಕೊರತೆಯೂ ಎದುರಾಗಬಹುದು. ಇಂತಹ ಸಮಸ್ಯೆಗಳಿಂದ ದಾಟಿಕೊಳ್ಳುವಂತಹ ವ್ಯವಸ್ಥೆಯು ತುರ್ತಾಗಿ ಸಿನಿಮಾ ರಂಗದಲ್ಲಿ ಆಗಬೇಕಿದೆ. ಎರಡೂ ಚಿತ್ರಗಳಿಗೂ ನಿರೀಕ್ಷೆ ಇರುವುದರಿಂದ ಪ್ರೇಕ್ಷಕ ಯಾರ ಕೈ ಹಿಡಿಯುತ್ತಾನೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ.

  • ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಯುಗಾದಿ ಹಬಕ್ಕೆ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಡುವುದಾಗಿ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿಕೊಂಡಿದ್ದರು. ಅದರಂತೆ ಅವರು ಹೊಸ ಸಿನಿಮಾದ ಟೈಟಲ್ ಅನ್ನು ಸೋಷಿಯಲ್ ಮೀಡಿಯಾ ಮೂಲಕ ಅನಾವರಣ ಮಾಡಿದ್ದಾರೆ ಗಣೇಶ್. ತಮ್ಮ ತಮ್ಮ ಗೆಳೆಯ ಪ್ರೀತಮ್ ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ.’ ಎಂದು ಟೈಟಲ್ ಇಟ್ಟಿದ್ದಾರೆ. ಇದು 1981ರಲ್ಲಿ ತೆರೆಕಂಡ ಪುನೀತ್ ರಾಜ್ ಕುಮಾರ್ ನಟನೆಯ ‘ಭಾಗವಂತ’ ಸಿನಿಮಾದ ಪಾಪ್ಯುಲರ್ ಹಾಡು. ಬಾಲ್ಯದ ಅಪ್ಪು ತಮ್ಮ ತೊದಲ ನುಡಿಗಳಲ್ಲಿ ‘ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ’ ಎಂದು ಹಾಡಿದ್ದರು. ಈಗ ಅದನ್ನೇ ತಮ್ಮ ಶೀರ್ಷಿಕೆಯನ್ನಾಗಿ ಇಟ್ಟುಕೊಂಡು ಕುತೂಹಲ ಮೂಡಿಸಿದ್ದಾರೆ ನಿರ್ದೇಶಕ ಪ್ರೀತಮ್ ಗುಬ್ಬಿ.  ಇದನ್ನೂ ಓದಿ : ಜುಲೈ 28ರಂದು ಗುಮ್ಮನ ಕಥೆ – ಯುಗಾದಿ ದಿನ ಡಬಲ್ ಖುಷಿ ಕೊಟ್ಟ ‘ವಿಕ್ರಾಂತ್ ರೋಣ’ ಟೀಮ್

    ಸ್ಯಾಂಡಲ್‌ವುಡ್‌ನ ಗೋಲ್ಡ್ನ್ ಸ್ಟಾರ್ ಗಣೇಶ್ ಮತ್ತೆ ಮಳೆ ಹುಡುಗನಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ..ಯುಗಾದಿ ಹಬ್ಬದ ಪ್ರಯುಕ್ತ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡೋದಾಗಿ ನಟ ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಅನೌನ್ಸ್ ಮಾಡಿದ್ರು..ಅದರಂತೆಯೇ ಹೊಸ ಚಿತ್ರದ ಟೈಟಲ್ ಲಾಂಚ್ ಮಾಡಿದ್ದಾರೆ. ಮುಂಗಾರು ಮಳೆಯಿಂದ ಶುರುವಾದ ಈ ಜೋಡಿಯ ಪಯಣ, ‘ಮಳೆಯಲಿ ಜೊತೆಯಲಿ’, ‘ದಿಲ್ ರಂಗೀಲಾ’, `೯೯’ ಚಿತ್ರದವರೆಗೂ ಸಾಗಿದೆ. ಅಷ್ಟೂ ಸಿನಿಮಾಗಳು ಸಿನಿಪ್ರಿಯರನ್ನು ಮೋಡಿ ಮಾಡಿವೆ. ಇದೀಗ `ಬಾನದಾರಿಯಲ್ಲಿ’ ಈ ಕಾಂಬಿನೇಷನ್ ನ ನಾಲ್ಕನೇ ಸಿನಿಮಾ. ಇದನ್ನೂ ಓದಿ: ಏ. 2 ರಂದು ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ : ತೆಲುಗಿನಲ್ಲಿ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ ಲಾಲ್

    `ಬಾನದಾರಿಯಲ್ಲಿ’ ಅನ್ನೋ ಕ್ಯಾಚಿ ಟೈಟಲ್ ಜೊತೆಗೆ `ನೋಡು ಎಂಥ ಚೆಂದ’ ಅನ್ನೋ ಅಡಿ ಬರಹ ಕೂಡ ಇದೆ. ಅದನ್ನು ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಹೊಸ ಚಿತ್ರದ ಟೈಟಲ್ ರಿವೀಲ್ ಮಾಡುವುದರ ಜೊತೆಗೆ ಯುಗಾದಿ ಹಬ್ಬದ ಶುಭಾಶಯಗಳು ಹರೆಯದ ಹೃದಯಗಳೇ ಹರಸಿ ಅಂತಾ ಬರೆದುಕೊಂಡಿದ್ದಾರೆ.  ಅಪ್ಪು, ಗಣೇಶ್ ಮತ್ತು `ಬಾನದಾರಿಯಲ್ಲಿ’ ಎಂಬ ಡಿಫರೆಂಟ್ ಟೈಟಲ್  ಸಿನಿಪ್ರಿಯರಿಗೆ ಕನೆಕ್ಟ್ ಆಗುವುದರ ಜೊತೆಗೆ ಮೋಡಿ ಮಾಡುವುದಂತೂ ಸುಳ್ಳಲ್ಲ. ಇದನ್ನೂ ಓದಿ: ದೆಹಲಿಯಲ್ಲಿ ರಾಕಿಬಾಯ್ ನೋಡಲು ಮುಗಿಬಿದ್ದ ಅಭಿಮಾನಿಗಳು

    ಸಿನಿಮಾದ ಟೈಟಲ್ ನಲ್ಲಿರುವ ಅಂಶಗಳನ್ನು ಗಮನಿಸಿದರೆ ಗಣೇಶ್ ನಟನೆಯ ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರ ಕೂಡ ಒಂದು ಅದ್ಭುತ ಲವ್ ಸ್ಟೋರಿ ಆಗಿರಲಿದೆ. ಈಗಾಗಲೇ ಭಿನ್ನ ಲವ್ ಸ್ಟೋರಿ, ಮತ್ತು ಬಗೆ ಬಗೆಯ ಪಾತ್ರಗಳ ಮೂಲಕ ಕಮಾಲ್ ಮಾಡಿರುವ ಗಣೇಶ್, ಹೊಸ ಸಿನಿಮಾದಲ್ಲೂ ಮುಂದುವರೆಸಲಿದ್ದಾರೆ. ಈ ಚಿತ್ರವನ್ನು ಪ್ರತಿಭಾವಂತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶನ ಮಾಡುತ್ತಿದ್ದರೆ, ಶ್ರೀವಾರಿ ಟಾಕೀಸ್ ಬಂಡವಾಳ ಹೂಡುತ್ತಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿವೆ.

  • ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ಲಾಂಚ್

    ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ಲಾಂಚ್

    ಣೇಶ್ ಮತ್ತು ಪ್ರೀತಂ ಗುಬ್ಬಿ ಕಾಂಬಿನೇಷನ್ ನಲ್ಲಿ ಮತ್ತೊಂದು ಹೊಸ ಸಿನಿಮಾ ಬರಲಿದೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಬ್ರೇಕ್ ಮಾಡಿತ್ತು. ಇದೀಗ ಆ ಸಿನಿಮಾದ ಟೈಟಲ್ ಲಾಂಚ್ ಗೆ ಸಿದ್ಧತೆ ನಡೆದಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ತಮ್ಮ ಹೊಸ ಸಿನಿಮಾದ ಶೀರ್ಷಿಕೆ ರಿವಿಲ್ ಮಾಡುವುದಾಗಿ ಸ್ವತಃ ಗಣೇಶ್ ಅವರೇ ಟ್ವಿಟ್ ಮಾಡಿದ್ದಾರೆ. ಇದನ್ನೂ ಓದಿ : ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ‘ನವ ಸಂವತ್ಸರ ಯುಗಾದಿಯಂದು ಹೊಸ ಚಿತ್ರದ ಟೈಟಲ್ ಲಾಂಚ್. ನಾನು, ಪ್ರೀತಮ್ ಗುಬ್ಬಿ ಮುಂಗಾರು ಮಳೆಯಿಂದ ಸಿನಿ ಪಯಣದಲ್ಲಿ ಜೊತೆಯಾದವರು. ನಮ್ಮ ಜೋಡಿಯ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಮತ್ತು 99 ಚಿತ್ರಗಳನ್ನು ನೋಡಿ ತಾವು ಹರಿಸಿದ್ದೀರಿ. ಈಗ ಶ್ರೀವಾರಿ ಟಾಕೀಸ್ ನೊಂದಿಗೆ ಮತ್ತೊಂದು ಹೊಸ ಕನಸಿನ ಪಯಣ ಪ್ರಾರಂಭ. ಹರೆಯದ ಹೃದಯಗಳೇ ಹರಸಿ’ ಎಂದು ಗಣೇಶ್ ಹೊಸ ಸಿನಿಮಾದ ಬಗ್ಗೆ ಬರೆದುಕೊಂಡಿದ್ದಾರೆ.

    ಗಣೇಶ್ ಅವರೇ ಹೇಳಿಕೊಂಡಂತೆ ಪ್ರೀತಮ್ ಗುಬ್ಬಿ ಮತ್ತು ಗಣೇಶ್ ಸ್ನೇಹಿತರು. ಆರಂಭದ ದಿನಗಳಲ್ಲಿ ಒಟ್ಟಿಗೆ ಒಂದೇ ರೂಮ್ ನಲ್ಲಿ ಕಾಲಕಳೆದವರು. ಗಣೇಶ್ ಅವರ ಮುಂಗಾರು ಮಳೆ ಚಿತ್ರಕ್ಕೆ ಪ್ರೀತಮ್ ಕಥೆ ಬರೆದದ್ದು. ಅಲ್ಲದೇ ಗಣೇಶ್ ಜತೆಗೆ ಈವರೆಗೂ ಮೂರು ಸಿನಿಮಾಗಳಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಗೆಳೆಯನಿಗಾಗಿಯೇ ಗಣೇಶ್ ಮಳೆಯಲಿ ಜೊತೆಯಲಿ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಇದನ್ನೂ ಓದಿ:  ‘ಕೆಜಿಎಫ್ 2’ ರಿಲೀಸ್ ದಿನವೇ ಪುನೀತ್ ‘ಜೇಮ್ಸ್’ ಸಿನಿಮಾ ಓಟಿಟಿಯಲ್ಲಿ ರಿಲೀಸ್

    ಗಣೇಶ್ ಮತ್ತು ಪ್ರೀತಮ್ ಕಾಂಬಿನೇಷನ್ ನ ‘99’ ಸಿನಿಮಾದ ನಂತರ ಈ ಹೊಸ ಸಿನಿಮಾ ಲಾಂಚ್ ಆಗುತ್ತಿದೆ. ಈ ಕಾಂಬಿನೇಷನ್ ನಲ್ಲಿ ಈವರೆಗೂ ಲವ್ ಸ್ಟೋರಿಗಳನ್ನೇ ಸಿನಿಮಾ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಹೊಸ ಸಿನಿಮಾದಲ್ಲೂ ಪ್ರೇಮಕಥೆಯೇ ಇರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 2 ರಂದು ಕೆಲವು ಸುದ್ದಿಗಳು ಹೊರ ಬೀಳಲಿವೆ.

  • ಮಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಸೆಲೆಬ್ರೇಟ್‌ ಮಾಡಿದ ಗೋಲ್ಡನ್ ಸ್ಟಾರ್

    ಮಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಸೆಲೆಬ್ರೇಟ್‌ ಮಾಡಿದ ಗೋಲ್ಡನ್ ಸ್ಟಾರ್

    ಸ್ಯಾಂಡಲ್‍ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಮಗಳು ಚಾರಿತ್ರ್ಯ ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಸೆಲೆಬ್ರೇಟ್‌ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ಗಣೇಶ್ ಮತ್ತು ಶಿಲ್ಪಾ ಗಣೇಶ್ ದಂಪತಿಯ ಪುತ್ರಿ ಚಾರಿತ್ರ್ಯಗೆ ಇಂದು ಜನ್ಮದಿನದ ಸಂಭ್ರಮ. ಮಗಳ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಗಣೇಶ್ ಮತ್ತು ಶಿಲ್ಪಾ ಅವರು ಶುಭಾಶಯ ಕೋರಿದ್ದಾರೆ.

    ಗಣೇಶ್ ಪುತ್ರಿ ಚಾರಿತ್ರ್ಯ ಹುಟ್ಟುಹಬ್ಬವನ್ನು ಕಲರ್‌ಫುಲ್ ಆಗಿ ಆಚರಿಸಲಾಗಿದೆ. ಹಸಿರು ಬಣ್ಣದ ಮಿರಿಮಿರಿ ಮಿಂಚುವ ಗೌನ್ ಚಾರಿತ್ರ್ಯ ಧರಿಸಿದ್ದಾಳೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು, ಚಾರಿತ್ರ್ಯ ಫ್ರೆಂಡ್ಸ್ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗಿವೆ. ಅಭಿಮಾನಿಗಳು ಕಮೆಂಟ್‍ಗಳ ಮೂಲಕ ಚಾರಿತ್ರ್ಯಗೆ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ನೂರು ಕಾಲ ಖುಷಿಯಾಗಿ ಬಾಳಲಿ ಎಂದು ಹಾರೈಸುತ್ತಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ – ನಾನು ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

     

    View this post on Instagram

     

    A post shared by Ganesh (@goldenstar_ganesh)

     

    ಚಮಕ್ ಸಿನಿಮಾದಲ್ಲಿ ಚಾರಿತ್ರ್ಯ ಕಾಣಿಸಿಕೊಂಡಿದ್ದರು. ಚಿಕ್ಕ ಪಾತ್ರವಾದರೂ ಚಾರಿತ್ರ್ಯ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. 2017ರಲ್ಲಿ ತೆರೆಕಂಡ ಚಮಕ್ ಚಿತ್ರದಲ್ಲಿ ಪಾತ್ರದಲ್ಲಿ ಗಣೇಶ್ ಹಾಗೂ ಚಾರಿತ್ರ್ಯ ಮಗಳಾಗಿಯೇ ಕಾಣಿಸಿಕೊಂಡಿದ್ದರು.

  • ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ

    ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ

    ನಿರ್ದೇಶಕ ಪ್ರೀತಂ ಗುಬ್ಬಿ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕಾಂಬಿನೇಷನ್ ನ 4ನೇ ಸಿನಿಮಾ ಇದಾಗಿದೆ. ಇದನ್ನೂ ಓದಿ : ದಿ ಕೇರಳ ಸ್ಟೋರಿ ಸಿನಿಮಾ ಶುರು: ಸ್ಫೂರ್ತಿಯಂತೆ ದಿ ಕಾಶ್ಮೀರ್ ಫೈಲ್ಸ್

    ‘ಮಳೆಯಲಿ ಜೊತೆಯಲಿ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿತ್ತು. ಆನಂತರ ‘ದಿಲ್  ರಂಗೀಲಾ’ ಆಗಿ ತೆರೆಯ ಮೇಲೆ ಕಾಣಿಸಿಕೊಂಡಿತ್ತು. ಈ ಕಾಂಬಿನೇಷನ್ ನ ಕೊನೆಯ ಸಿನಿಮಾ ‘99’. ಇದಾದ ನಂತರ ಪ್ರೀತಂ ಮತ್ತು ಗಣೇಶ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲಿ ಅಮೀರ್‌ ಮೇಲೆ ಕ್ರಷ್‌ ಆಗಿತ್ತು.. ಲವ್‌ ಲೆಟರ್‌ ಕೂಡ ಬರೆದಿದ್ದೆ: ಬಾಲಿವುಡ್‌ ನಟಿ

    ಸಾಮಾನ್ಯವಾಗಿ ಪ್ರೀತಂ ಸಿನಿಮಾಗಳೆಂದರೆ, ಅಲ್ಲೊಂದು ಲವ್ ಸ್ಟೋರಿ ಇದ್ದೇ ಇರುತ್ತದೆ. ಹಾಗಾಗಿ ಈ ಸಿನಿಮಾದಲ್ಲೂ ಅಪರೂಪದ ಪ್ರೇಮಕಥೆಯನ್ನು ಹೇಳಲಿದ್ದಾರಂತೆ ನಿರ್ದೇಶಕರು. ‘ಮುಂಗಾರು ಮಳೆ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿ ಕೆಲಸ ಮಾಡುತ್ತಿದ್ದರೂ, ಮುಂಗಾರು ಮಳೆಗೆ ಪ್ರೀತಂ ಕೇವಲ ಕಥೆಗಾರ ಆಗಿದ್ದರು. ಇದನ್ನೂ ಓದಿ: ಮಾಧುರಿ ದೀಕ್ಷಿತ್ ಇರೋದು ಮನೇಲಿ ಅಲ್ಲ, ಅರಮನೆಯಲ್ಲಿ: ಹೊಸ ಮನೆಗೆ ದೇವದಾಸ್ ಬೆಡಗಿ

    ಇತ್ತ ಗಣೇಶ್ ಕೂಡ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೇ, ಟಾಕ್ ಶೋ  ಒಂದನ್ನು ನಡೆಸಿಕೊಡುತ್ತಿದ್ದಾರೆ. ಗಾಳಿಪಟ2 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದ್ದರೆ, ತ್ರಿಬಲ್ ರೈಡಿಂಗ್ ಕೂಡ ಶೂಟಿಂಗ್ ಮುಗಿಸಿಕೊಂಡಿದೆ. ಹೀಗಾಗಿ ಹೊಸ ಸಿನಿಮಾ ಅತೀ ಶೀಘ್ರದಲ್ಲೇ ಸೆಟ್ಟೇರಿದೆ ಅಚ್ಚರಿ ಪಡಬೇಕಿಲ್ಲ.

  • ಎಂಟು ವರ್ಷಗಳ ನಂತರ ಒಂದಾದ ನೀನಾಸಂ ಸತೀಶ್ ಮತ್ತು ಸಿಂಧು

    ಎಂಟು ವರ್ಷಗಳ ನಂತರ ಒಂದಾದ ನೀನಾಸಂ ಸತೀಶ್ ಮತ್ತು ಸಿಂಧು

    ಡ್ರಾಮಾ, ಲವ್ ಇನ್ ಮಂಡ್ಯ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನ ಬೆಸ್ಟ್ ಪೇರ್ ಎನಿಸಿಕೊಂಡಿದ್ದ ನೀನಾಸಂ ಸತೀಶ್ ಮತ್ತು ಸಿಂಧು ಲೋಕನಾಥ್ ಎಂಟು ವರ್ಷಗಳಿಂದ ಯಾವುದೇ ಚಿತ್ರದಲ್ಲೂ ಜತೆಯಾಗಿ ನಟಿಸಿರಲಿಲ್ಲ. ಇದೀಗ ಇಬ್ಬರನ್ನೂ ಒಟ್ಟಿಗೆ ನೋಡುವ ಅವಕಾಶ ಅಭಿಮಾನಿಗಳಿಗೆ ಒದಗಿದೆ. ಸತೀಶ್ ಮತ್ತು ಸಿಂಧು ಮತ್ತೆ ಜತೆಯಾಗಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಮನರಂಜನೆ ನೀಡಲಿದ್ದಾರೆ. ಇದನ್ನೂ ಓದಿ : ಉಪೇಂದ್ರ ಹೊಸ ಸಿನಿಮಾ ಮಾಡಲು ಸ್ಟಾರ್ ನಟಿ ನಯನತಾರಾ ಕಾರಣ : ಏನಿದು ಅಸಲಿ ಗುಟ್ಟು?

    ಡ್ರಾಮಾ ಸಿನಿಮಾದಲ್ಲಿ ಮೂಕಿಯಾಗಿ ನಟಿಸಿದ್ದ ಸಿಂಧು, ಸಿಕ್ಕಾಪಟ್ಟೆ ಮಾತನಾಡುವ ಸತೀಶ್ ಪಾತ್ರವನ್ನು ಇಷ್ಟ ಪಡುತ್ತಾರೆ. ಆನಂತರ ಇಬ್ಬರದ್ದೂ ಒಂದು ಪ್ರತ್ಯೇಕ ಲವ್ ಸ್ಟೋರಿ ಶುರುವಾಗುತ್ತದೆ. ಆ ಪ್ರೀತಿ ಪ್ರೇಕ್ಷಕನಿಗೆ ಸಖತ್ ಇಷ್ಟವಾಗಿತ್ತು. ಆ ರೀತಿಯಲ್ಲಿ ಈ ಇಬ್ಬರೂ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ್ದರು. ಇದನ್ನೂ ಓದಿ : ಸಮಂತಾ ಯಾಕಿಂಗ್ ಆದೆ? ಗರಂ ಆದ ಅಭಿಮಾನಿಗಳು

    ನಂತರ ಬಂದ ‘ಲವ್ ಇನ್ ಮಂಡ್ಯ’ ಚಿತ್ರಕ್ಕೆ ಸತೀಶ್ ನಾಯಕನಾದರೆ, ಸಿಂಧು ನಾಯಕಿ. ಹಳ್ಳಿ ಸೊಗಡಿನ ಈ ಸಿನಿಮಾದಲ್ಲಿ ಮತ್ತದೆ ತರ್ಲೆ ಪಾತ್ರ ಸತೀಶ್ ಅವರದ್ದು. ಮುಗ್ಧ ಹುಡುಗಿಯಾಗಿ ಸಿಂಧು ಕಾಣಿಸಿಕೊಂಡಿದ್ದರು. ಈ ಸಿನಿಮಾದ ‘ಒಪ್ಕೊಂಡ್ ಬಿಟ್ಳು ಕಣ್ಲಾ’ ಹಾಡಂತೂ ನಿತ್ಯಮಂತ್ರದಂತೆ ಕೇಳಿಸುತ್ತಿತ್ತು. ಅಷ್ಟರ ಮಟ್ಟಿಗೆ ಪಾಪ್ಯುಲರ್ ಆಗಿತ್ತು. ಇದೇ ಸಿನಿಮಾದ ಮತ್ತೊಂದು ಸಾಂಗ್ ‘ಕರೆಂಟು ಹೋದ ಮೇಲೆ’   ಗೀತೆಯಲ್ಲಂತೂ ಇಬ್ಬರೂ ಮೈಚಳಿ ಬಿಟ್ಟು ಹೆಜ್ಜೆ ಹಾಕಿದ್ದರು. ಇಬ್ಬರ ಕೆಮೆಸ್ಟ್ರಿ ಕಂಡು ಅಭಿಮಾನಿ ವರ್ಗವೇ ಬೆರಗಾಗಿತ್ತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ಆ ನಂತರ ಈ ಜೋಡಿಯ ಸಿನಿಮಾ ಬರಲಿಲ್ಲ. ಇದೀಗ ಕಿರುತೆರೆಯ ಜನಪ್ರಿಯ ಶೋ ‘ಗೋಲ್ಡನ್ ಗ್ಯಾಂಗ್’ ನಲ್ಲಿ ಸಿಂಧು ಮತ್ತು ಸತೀಶ್ ಕಾಣಿಸಿಕೊಂಡಿದ್ದಾರೆ. ತರ್ಲೆ, ತಮಾಷೆಯ ಜತೆ ಜತೆಗೆ ಹಾಡೊಂದಕ್ಕೆ ಹೆಜ್ಜೆಯನ್ನೂ ಹಾಕಿದ್ದರು. ಅಂದಹಾಗೆ ಈ ವಾರ ಲೂಸಿಯಾ ಟೀಮ್ ಕೂಡ ಇವರೊಂದಿಗೆ ಇರಲಿದೆ.

  • ನಟಿಗೆ ಪ್ರಪೋಸ್ ಮಾಡಿದ ಡಾಲಿ ಧನಂಜಯ್!

    ನಟಿಗೆ ಪ್ರಪೋಸ್ ಮಾಡಿದ ಡಾಲಿ ಧನಂಜಯ್!

    ಬೆಂಗಳೂರು: ಬಡವ ರಾಸ್ಕಲ್ ಗೆಲುವಿನ ಸಂಭ್ರಮದಲ್ಲಿರುವ ಡಾಲಿ ಧನಂಜಯ್ ಇದೀಗ ರೋಸ್ ಹಿಡಿದು ನಟಿಗೆ ಪ್ರಪೋಸ್ ಮಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಲವ್ ಬಗ್ಗೆ ತಲೆ ಕೆಡಸಿಕೊಳ್ಳದೇ, ಮದುವೆ ಬಗ್ಗೆ ಎಲ್ಲೂ ಬಾಯಿ ಬಿಡದ ಡಾಲಿ ಇದೀಗ ನಟಿ ಅಮೃತ ಅಯ್ಯಂಗಾರ್‌ಗೆ ಪ್ರಪೋಸ್ ಮಾಡಿದ್ದಾರೆ. ಈ ವೀಡಿಯೋ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಡಾಲಿ ಧನಂಜಯ್ ಅವರು ಅಮೃತಾ ಎದುರು ರೋಸ್ ಹಿಡಿದು ಕುಳಿತಿದ್ದಾರೆ. ಮಂಡಿಯೂರಿ ಬೇಡುವೆನು, ಹೃದಯ ಕಾಲಡಿ ಇಡುವೇನು ತೆಗೆದು ಬಚ್ಚಿಟ್ಟುಕೋ ಇಲ್ಲ ತುಳಿದು ಕಾಲ್ ತೋಳೆದುಕೋ. ಬೇಡ ಈ ಮೌನ, ನೀ ಮಾಡು ತೀರ್ಮಾನ ಎಂದು ಡಾಲಿ ಅಮೃತಾ ಎದುರು ಲವ್ ಪ್ರಪೋಸ್ ಇಟ್ಟಿದ್ದಾರೆ. ನಟಿ ಮಾತ್ರ ಮುಗುಳು ನಕ್ಕು ಸುಮ್ಮನಾಗಿದ್ದಾರೆ. ಇದನ್ನೂ ಓದಿ:  ಸೂಪರ್ ಹಾಟ್ ದೀಪಿಕಾ ಪಡುಕೋಣೆ ತೊಟ್ಟ ಡ್ರೆಸ್ ಬೆಲೆ ಎಷ್ಟು ಗೊತ್ತಾ?

    ಖಾಸಗಿ ವಾಹಿನಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿ ಕೊಡುವ ಕಾರ್ಯಕ್ರಮದಲ್ಲಿ ಈ ಜೋಡಿಗೆ ಟಾಸ್ಕ್ ನೀಡಲಾಗಿತ್ತು. ಅಮೃತಾ ಅವರಿಗೆ ಡಾಲಿ ಧನಂಜಯ್ ರೋಸ್ ಕೊಟ್ಟು ಡೈಲಾಗ್ ಹೇಳಿ ಪ್ರಪೋಸ್ ಮಾಡಬೇಕಿತ್ತು. ಜೊತೆಗೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಕೂಡಾ ಮಾಡಿದ್ದಾರೆ. ಇದನ್ನೂ ಓದಿ: ಅದ್ದೂರಿಯಾಗಿ ನಡೆಯುತ್ತಿದೆ ಮೌನಿ ರಾಯ್ ಅರಿಶಿನ ಶಾಸ್ತ್ರ

  • ಕರ್ನಾಟಕದ ಮಧ್ಯ ಭಾಗದಲ್ಲಿ ಪುನೀತ್ ಅಭಿಮಾನಿಗಳಿಗೆ ಕಾರ್ಯಕ್ರಮ

    ಕರ್ನಾಟಕದ ಮಧ್ಯ ಭಾಗದಲ್ಲಿ ಪುನೀತ್ ಅಭಿಮಾನಿಗಳಿಗೆ ಕಾರ್ಯಕ್ರಮ

    ಬೆಂಗಳೂರು: ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಬಾರಿ ಕರ್ನಾಟಕದ ಮಧ್ಯದ ಭಾಗದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ ಎಂದು ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಗಣೇಶ್ ಅವರು ತಿಳಿಸಿದ್ದಾರೆ.

    ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 19ನೇ ದಿನ. ಅಪ್ಪು ನೆನಪಿನಾರ್ಥ ಇಂದು ಫಿಲಂ ಚೇಂಬರ್ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ `ಪುನೀತ ನಮನ’ ಹೆಸರಿನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದನ್ನೂ ಓದಿ: ಪುನೀತ್ ದೇವರ ಸ್ವರೂಪದಲ್ಲಿದ್ದರು, ಆದ್ರೆ ನಮಗೆ ತಿಳಿಯಲಿಲ್ಲ: ಸೋನು ಗೌಡ

    ಈ ಕಾರ್ಯಕ್ರದಲ್ಲಿ ಸುಮಾರು 2,000 ಸಾವಿರ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಕನ್ನಡದ 150 ಕಲಾವಿದರು, ದಕ್ಷಿಣ ಭಾರತದ ನಾಲ್ಕು ರಾಜ್ಯದ ಖ್ಯಾತ ನಟರು, ಕ್ರೀಡಾ, ಸಾಹಿತ್ಯ ಕ್ಷೇತ್ರದ ಗಣ್ಯರಿಗೆ ಆಹ್ವಾನ ಕೊಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಶೂಟಿಂಗ್, ತಿಂಡಿ ಬಿಟ್ಟು ಪುನೀತ್‍ಗೆ ಪ್ರಪಂಚವೇ ಗೊತ್ತಿರಲಿಲ್ಲ – ಅಪ್ಪು ನೆನೆದು ಸಹೋದರಿ ಲಕ್ಷ್ಮೀ ಕಣ್ಣೀರು

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗಣೇಶ್ ಅವರು, ಈ ಕಾರ್ಯಕ್ರಮವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಾರಾ ಗೋವಿಂದ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 2,000 ಮಂದಿಗೆ ಆಹ್ವಾನಿಸಲಾಗಿದೆ. ಕರ್ನಾಟಕದಿಂದ 150 ಮಂದಿ ಕಲಾವಿದರು ಈ ಕಾರ್ಯಕ್ರದಲ್ಲಿ ಭಾಗವಹಿಸಬಹುದಾಗಿದೆ. ಸುಮಾರು 10-11 ಮಂದಿ ಹೊರಗಿನಿಂದ ಬರಬಹುದು ಎಂಬ ನಿರೀಕ್ಷೆ ಇದೆ. ಸೌತ್ ಇಂಡಿಯಾ ಫಿಲ್ಮ್ ಚೇಂಬರ್ ಫೇಡರೇಷನ್ ಆಫ್ ಇಂಡಿಯಾ, ಕೇರಳ ಫಿಲ್ಮ್ ಚೇಂಬರ್, ಆಂದ್ರ ಫಿಲ್ಮ್ ಚೇಂಬರ್, ತೆಲಂಗಾಣ ಫಿಲ್ಮ್ ಚೇಂಬರ್, ತಮಿಳುನಾಡು ಫಿಲ್ಮ್ ಚೇಂಬರ್ ನ ನಿರ್ಮಾಪಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇಡೀ ಚಿತ್ರರಂಗದಲ್ಲಿರುವ ಎಲ್ಲ ಅಂಗ ಸಂಸ್ಥೆಗಳು ಈ ಕಾರ್ಯಕ್ರದಲ್ಲಿ ಭಾಗವಹಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುನೀತ ನಮನ ಕಾರ್ಯಕ್ರಮ – ಯಾರೆಲ್ಲ ಗಣ್ಯರು ಬರುತ್ತಿದ್ದಾರೆ?

    ಇದೇ ವೇಳೆ ಕೋವಿಡ್-19 ಹಿನ್ನೆಲೆ ಮತ್ತು ಸಮಯ ಅಭಾವ ಇರುವುದರಿಂದ ಈ ಕಾರ್ಯಕ್ರಮಕ್ಕೆ ಕೇವಲ ಗಣ್ಯರಿಗಷ್ಟೇ ಆಹ್ವಾನ ನೀಡಲಾಗಿದೆ. ಮುಂದಿನ ಬಾರಿ ಸುಮಾರು 1 ಲಕ್ಷ ಅಭಿಮಾನಿಗಳನ್ನು ಸೇರಿಸಿ ಕರ್ನಾಟಕದ ಮದ್ಯದ ಭಾಗದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ಸಾರಾ ಗೋವಿಂದ್ ಅವರು ಮತ್ತು ಎಲ್ಲಾ ಪಾದಾಧಿಕಾರಿಗಳು ತೀರ್ಮಾನಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಂದು ಅದ್ಭುತವಾದಂತಹ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಅಭಿಮಾನಿಗಳಿಗೆ ನೇರವಾಗಿ ನೋಡಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.