Tag: ಗಣೇಶ ಮೂರ್ತಿ ವಿಸರ್ಜನೆ

  • ಗಣೇಶ ಉತ್ಸವದಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು – ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಸಂಭ್ರಮ

    ಗಣೇಶ ಉತ್ಸವದಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು – ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಸಂಭ್ರಮ

    – ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಮುಸ್ಲಿಮರಿಂದ ತಂಪು ಪಾನೀಯ ವಿತರಣೆ

    ಬೆಂಗಳೂರು: ನಗರದಲ್ಲಿ ಗಣೇಶ ಉತ್ಸವದಲ್ಲಿ ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಮುಸ್ಲಿಮರು ಭಾವೈಕ್ಯತೆ ಮೆರೆದಿದ್ದಾರೆ.

    ಕೆ.ಆರ್‌ ಪುರಂನ ದೇವಸಂದ್ರದಲ್ಲಿ ವಿನಾಯಕ ಗೆಳೆಯರ ಬಳಗದಿಂದ ಗಣಪತಿ ಉತ್ಸವದ ಮೆರವಣಿಗೆ ಇತ್ತು. ಈ ವೇಳೆ ಏರಿಯಾದ ಮುಸ್ಲಿಮರು ಗಣೇಶನ ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಸಂಭ್ರಮಿಸಿದ್ದಾರೆ. ಅಲ್ಲದೇ, ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ತಂಪು ಪಾನೀಯ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

    ಮದ್ದೂರಿನಲ್ಲಿ ಗಣೇಶ ಉತ್ಸವದ ವೇಳೆ ನಡೆದ ಘಟನೆಗೆ ಕೆಆರ್‌ ಪುರಂ ಮುಸ್ಲಿಮರು ಖಂಡನೆ ವ್ಯಕ್ತಪಡಿಸಿದ್ದಾರೆ. ಅಂತಹ ಘಟನೆಗಳು ಮರುಕಳಿಸಬಾರದು. ಹಿಂದೂ-ಮುಸ್ಲಿಮರು ಭಾವೈಕ್ಯತೆಯಿಂದ ಇರಬೇಕು ಎಂಬ ಸಂದೇಶವನ್ನು ರವಾನಿಸಿದ್ದಾರೆ.

    ಕೆಲದಿನಗಳ ಹಿಂದೆಯಷ್ಟೇ ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯನ್ನು ಖಂಡಿಸಿ ಮದ್ದೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈಗ ಮೆರವಣಿಗೆ ಸಂದರ್ಭದಲ್ಲಿ ಎಲ್ಲೆಡೆ ಪೊಲೀಸರು ಅಲರ್ಟ್‌ ಆಗಿದ್ದಾರೆ. ಇದನ್ನೂ ಓದಿ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

  • ಮಹಾರಾಷ್ಟ್ರದ ಹಲವೆಡೆ ಗಣೇಶ ವಿಸರ್ಜನೆ ವೇಳೆ ಅವಘಡ; 4 ಸಾವು, 13 ಮಂದಿ ನಾಪತ್ತೆ

    ಮಹಾರಾಷ್ಟ್ರದ ಹಲವೆಡೆ ಗಣೇಶ ವಿಸರ್ಜನೆ ವೇಳೆ ಅವಘಡ; 4 ಸಾವು, 13 ಮಂದಿ ನಾಪತ್ತೆ

    ಮುಂಬೈ: ಮಹಾರಾಷ್ಟ್ರದ (Maharashtra) ವಿವಿಧ ಜಿಲ್ಲೆಗಳಲ್ಲಿ ಗಣೇಶ ಮೂರ್ತಿ (Ganesh Idol Immersion) ವಿಸರ್ಜನೆ ವೇಳೆ ಕನಿಷ್ಠ ನಾಲ್ವರು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ.

    ಪುಣೆ ಜಿಲ್ಲೆಯ ಚಕನ್ ಪ್ರದೇಶದಲ್ಲಿ, ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಜನರು ಕೊಚ್ಚಿಹೋಗಿದ್ದಾರೆ. ವಾಕಿ ಖುರ್ದ್‌ನಲ್ಲಿ ಭಾಮಾ ನದಿಯಲ್ಲಿ ಇಬ್ಬರು ಪುರುಷರು ಮತ್ತು ಶೆಲ್ ಪಿಂಪಾಲ್‌ಗಾಂವ್‌ನಲ್ಲಿ ಮತ್ತೊಬ್ಬರು ಕೊಚ್ಚಿ ಹೋಗಿದ್ದಾರೆ. ಪುಣೆ ಗ್ರಾಮೀಣ ಪ್ರದೇಶದ ಬಿರ್ವಾಡಿಯಲ್ಲಿ ಮತ್ತೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಉಳಿದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎನ್‌ಕೌಂಟರ್ – ಮೋಸ್ಟ್ ವಾಂಟೆಡ್ ಮಾವೋವಾದಿಯ ಹತ್ಯೆಗೈದ ಭದ್ರತಾ ಪಡೆ

    ನಾಂದೇಡ್ ಜಿಲ್ಲೆಯ ಗಡೇಗಾಂವ್‌ನಲ್ಲಿ ನದಿಯಲ್ಲಿ ಮೂವರು ಕೊಚ್ಚಿ ಹೋಗಿದ್ದಾರೆ. ಅವರ ಪೈಕಿ ಒಬ್ಬನನ್ನು ರಕ್ಷಿಸಲಾಗಿದೆ. ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. ನಾಶಿಕ್, ಜಲಗಾಂವ್, ಥಾಣೆ ಮತ್ತು ಅಮರಾವತಿಯಲ್ಲೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ನಾಶಿಕ್‌ನಲ್ಲಿ, ಮುಳುಗಿಸುವ ಪ್ರಕ್ರಿಯೆಯಲ್ಲಿ ನಾಲ್ವರು ಮುಳುಗಿ ಸಾವನ್ನಪ್ಪಿದ್ದಾರೆ. ಸಿನ್ನಾರ್‌ನಲ್ಲಿ ಒಂದು ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಜಲಗಾಂವ್‌ನಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರು ಜನರು ಕೊಚ್ಚಿ ಹೋಗಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಥಾಣೆ ಜಿಲ್ಲೆಯಲ್ಲಿ ಮೂವರು ಜನರು ಕೊಚ್ಚಿ ಹೋಗಿದ್ದು, ಇದುವರೆಗೆ ಒಂದು ಮೃತದೇಹ ಪತ್ತೆಯಾಗಿದೆ. ಅಮರಾವತಿಯಲ್ಲಿ ಗಣೇಶ ಮೂರ್ತಿ ಮುಳುಗಿಸುವ ಸಮಯದಲ್ಲಿ ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಕನ ಕೊಲೆ ಆರೋಪ – ಹಿಗ್ಗಾಮುಗ್ಗಾ ಥಳಿಸಿ ದಂಪತಿಯ ಹತ್ಯೆ

    ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ನದಿಗಳು ಮತ್ತು ಜಲಮೂಲಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸ್ಫೋಟ – ಓರ್ವ ಬಾಲಕ ದುರ್ಮರಣ

    ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸ್ಫೋಟ – ಓರ್ವ ಬಾಲಕ ದುರ್ಮರಣ

    – ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್‌ ಕೈಗೆ ಗಂಭೀರ ಗಾಯ

    ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ (Firecracker Explosion) ಓರ್ವ ಬಾಲಕ ಸಾವನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ನಡೆದಿದೆ.

    ಇಂದು ಸಂಜೆ ಗಣೇಶ ವಿಸರ್ಜನೆ ವೇಳೆ ಪಟಾಕಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ 15 ವರ್ಷದ ತನುಷ್ ರಾವ್ ಮೃತಪಟ್ಟಿದ್ದಾನೆ. ಇನ್ನೂ ಘಟನೆಯಲ್ಲಿ ವಿದ್ಯಾರ್ಥಿಗಳಾದ (Students) ಗಣೇಶ್, ಯೋಗೇಶ್, ಪವರ್ ಲಿಫ್ಟರ್ ಚಾಲಕ ಮುನಿರಾಜು, ನಾಗರಾಜು, ಚೇತನ್ ಶಾವಿ ಎಂಬುವರಿಗೆ ಸುಟ್ಟ ಗಾಯಗಳಾಗಿವೆ. ಇದೇ ವೇಳೆ ಬಂದೋಬಸ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಜಾಕಿರ್ ಹುಸೇನ್ ಎಂಬುವರ ಕೈಗೆ ಪಟಾಕಿ ಸಿಡಿದು ಗಂಭೀರ ಗಾಯವಾಗಿದೆ.

    ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಂದಹಾಗೆ ಇಂದು ಸಂಜೆ 5.30ರ ವೇಳೆ ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ವಿಸರ್ಜನೆಗೆಂದು ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಬರುವ ವೇಳೆ, ಮೆರವಣಿಗೆ ಮಾಡಲು ಕರೆಸಲಾಗಿದ್ದ ಪವರ್ ಲಿಪ್ಟರ್ ವಾಹನ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಪೋಟಗೊಂಡಿವೆ.

    ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಎಎಸ್ಪಿ ನಾಗರಾಜ್, ಡಿವೈಎಸ್ಪಿ ರವಿ ಸೇರಿದಂತೆ ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಗೆ ದಾಖಲಾದವರೊಂದಿಗೆ ಮಾತುಕತೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ನಾಗಮಂಗಲ ಗಲಭೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ – ಚಿಕ್ಕಬಳ್ಳಾಪುರದಲ್ಲಿ ಗಣೇಶ ವಿಸರ್ಜನೆಗೆ 600 ಪೊಲೀಸರ ಭದ್ರತೆ

    ನಾಗಮಂಗಲ ಗಲಭೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ – ಚಿಕ್ಕಬಳ್ಳಾಪುರದಲ್ಲಿ ಗಣೇಶ ವಿಸರ್ಜನೆಗೆ 600 ಪೊಲೀಸರ ಭದ್ರತೆ

    – ಮಸೀದಿ, ಮಂದಿರ ಪ್ರಮುಖ ವೃತ್ತಗಳಲ್ಲಿ ಸಿಸಿಟಿವಿ ಆಳವಡಿಕೆ

    ಚಿಕ್ಕಬಳ್ಳಾಪುರ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗಣೇಶ‌ ಮೂರ್ತಿ ವಿಸರ್ಜನೆ ವೇಳೆ ನಡೆಯುತ್ತಿರೋ ಅಹಿತಕರ ಘಟನೆಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆ (Chikkaballapura Police) ಎಚ್ಚೆತ್ತಿಕೊಂಡಿದೆ.

    ಭಾನುವಾರವಾದ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಬೈಪಾಸ್ ಗಣೇಶ ವಿಸರ್ಜನೆ (Ganesha Idol Demolition) ಕಾರ್ಯಕ್ರಮ ನೇರವೇರಲಿದ್ದು ನಗರದಲ್ಲಿ ಬೈಪಾಸ್ ಗಣೇಶನ ಮೆರವಣಿಗೆ ವಿಜೃಂಭಣೆಯಿಂದ ಜರುಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ಇದನ್ನೂ ಓದಿ: ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಬರ್ಬರ ಹತ್ಯೆ, ಮಚ್ಚಿನೇಟಿಂದ ಪತ್ನಿ ಗಂಭೀರ

    ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕಾಗಿಯೇ 600ಕ್ಕೂ ಹೆಚ್ಚು ಮಂದಿ ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಎಸ್ಪಿ ಕುಶಾಲ್ ಚೌಕ್ಸಿ ಹಾಗೂ ಎಎಸ್ಪಿ ಖಾಸೀಂ ನೇತೃತ್ವದಲ್ಲಿ 4 ಮಂದಿ ಡಿವೈಎಸ್ಪಿ ಹಾಗೂ 12 ಮಂದಿ ಸಿಪಿಐ, 20 ಮಂದಿ ಪಿಎಸ್ಐ, 500 ಮಂದಿ ಪೊಲೀಸರು, ಸಶಸ್ತ್ರ ಪೊಲೀಸ್ ಮೀಸಲು ಪಡೆಗಳು, ಟಿಯರ್ ಗ್ಯಾಸ್ ವಜ್ರ ವಾಹನವನ್ನು ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ಜನರ ಕನಸು ಶೀಘ್ರ ನನಸು – ಮುಂದಿನ ವಾರದಲ್ಲೇ ಮನೆಗಳಿಗೆ ಬರಲಿದೆ ಕಾವೇರಿ!

    ಇನ್ನೂ ಪ್ರಮುಖ ವೃತ್ತಗಳು ಹಾಗೂ ಮಸೀದಿ, ಮಂದಿರಗಳ ಬಳಿ ಸೂಕ್ಷ ಪ್ರದೇಶಗಳಾಗಿ ಗುರ್ತಿಸಿ ಸಿಸಿಟಿವಿ ಆಳವಡಿಸಿ ನಿಗಾ ವಹಿಸಿಲಾಗುತ್ತಿದೆ. ಇತಿಹಾಸದಲ್ಲೇ ಇಂದೆಂದೂ ಮಾಡದ ಭಾರೀ ಭದ್ರತೆ ಮೂಲಕ ಗಣೇಶ ವಿಸರ್ಜನಾ ಕಾರ್ಯಕ್ರಮ ನೇರವೇರಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್‌ನಲ್ಲಿ ಬೆಂಗಳೂರಿಗರೇ ಫಸ್ಟ್ – ಸೆಪ್ಟೆಂಬರ್‌ನಲ್ಲಿ ಬಿಎಂಟಿಸಿಗೆ ಬರೋಬ್ಬರಿ 8 ಕೋಟಿ ಆದಾಯ