Tag: ಗಣೇಶ ಮೆರವಣಿಗೆ

  • ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್

    ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್

    – ಕಾಂಗ್ರೆಸ್ ಇರುವವರೆಗೂ ಭಾರತಕ್ಕೆ ಅಪಾಯ ಎಂದ ಸಂಸದ

    ನವದೆಹಲಿ: ಬ್ರಿಟಿಷರು‌ (British) ಇದ್ದಾಗಲೂ ಗಣೇಶ ಮೆರವಣಿಗೆಗೆ (Ganesha Procession) ಸ್ವಾತಂತ್ರ‍್ಯ ಇತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ ಎಂದು ಸಂಸದ ಡಾ.ಕೆ ಸುಧಾಕರ್ (K Sudhakar) ಕಿಡಿಕಾರಿದ್ದಾರೆ.

    ಮದ್ದೂರಿನಲ್ಲಿ (Maddur) ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ (Stone Pelting) ವಿಚಾರವಾಗಿ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರಿಟಿಷ್ ಕಾಲದಲ್ಲಿ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು. ಇಂದು ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ವಿರ್ಸಜನೆಗೆ ಅನುಮತಿ ಕಷ್ಟವಾಗಿದೆ. ಒಂದು ಕೋಮಿಗೆ ಮಾತ್ರ ಎಲ್ಲದಕ್ಕೂ ಪರವಾನಿಗೆ ನೀಡಿದೆ. ಬಹುಸಂಖ್ಯಾತ ಹಿಂದೂಗಳನ್ನು ಟಾರ್ಗೆಟ್ ಮಾಡಿದೆ. ಹಿಂದೂಗಳ ಹಬ್ಬ ಮಾಡಿದರೆ ನೂರು ಪ್ರಶ್ನೆ ಕೇಳುತ್ತಾರೆ, ಅನುಮತಿ ಕೊಡಲ್ಲ. ಶಾಂತಿಯುತ ಮೆರವಣಿಗೆ ಮಾಡಿದರೂ ಗಲಭೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

    ಸ್ವಾತಂತ್ರ‍್ಯ ಹೋರಾಟದಲ್ಲಿ ಹಿಂದೂಗಳ ನಡುವೆ ಸಮನ್ವಯ ಬರಲು ಗಣೇಶ ಹಬ್ಬ ಕಾರಣ. ಹಿಂದೂಗಳ ಒಗ್ಗಟ್ಟಿನ ಪ್ರತೀಕ ಈ ಹಬ್ಬವಾಗಿತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ. ಹಿಂದೂಗಳ ಧಾರ್ಮಿಕ ಭಾವನೆಗೆ ಗೌರವ ಕೊಡುತ್ತಿಲ್ಲ. ನನ್ನ ಕ್ಷೇತ್ರದಲ್ಲೂ ಒಂದು ಸ್ಪೀಕರ್ ಹಾಕಿಕೊಳ್ಳಲು ಎಸ್ಪಿ ಅನುಮತಿ ಬೇಕು. ಕಾಂಗ್ರೆಸ್‌ಗೆ ಹಿಂದೂಗಳು ಮತ ಹಾಕಿಲ್ವ? ಇಂತಹ ಪರಿಸ್ಥಿತಿ ಯಾವ ಕಾಲದಲ್ಲೂ ನೋಡಿಲ್ಲ. ವರ್ಷಕ್ಕೊಂದು ಆಗುವ ಹಬ್ಬಕ್ಕೆ ಅನುಮತಿ ಬೇಕಾ? ಸ್ಪೀಕರ್ ಹಾಕಬೇಡಿ ಎಂದು ಬಿಜೆಪಿ ನಾಯಕರು ಹೇಳಿದ್ರಾ? ಕೋಮು ಗಲಭೆ ಹುಟ್ಟುಹಾಕಿದ್ದು ಕಾಂಗ್ರೆಸ್ ಸರ್ಕಾರ. ಮುಸ್ಲಿಮರನ್ನ 100% ಓಲೈಕೆ ಮಾಡಿದ್ದೀರಿ, ಇನ್ನೇಷ್ಟು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಭದ್ರಾವತಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ಭಾರತ ಜಿಂದಾಬಾದ್ ಅಂತಾರೆ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಅಂದಿದ್ದರು. ಕಾಂಗ್ರೆಸ್ ಇರುವವರೆಗೂ ಭಾರತಕ್ಕೆ ಅಪಾಯ ಇದೆ. ಇಂತಹ ಹೇಳಿಕೆಗಳನ್ನು ದೇಶದ್ರೋಹಿಗಳು ಎಂದು ಕರೆಯಬೇಕು. ಬಹುಸಂಖ್ಯಾತ ಹಿಂದೂಗಳ ಮೇಲೆ ಗದಾಪ್ರಹಾರ ಮಾಡುತ್ತಿದ್ದಾರೆ. ಸರ್ಕಾರ ಇದಕ್ಕೆ ಪರೋಕ್ಷವಾಗಿ ಸಹಕಾರ ನೀಡುತ್ತಿದೆ. ಸರ್ಕಾರದ ಬೆಂಬಲದಿಂದ ಕಾನೂನಿನ ಭಯ ಇಲ್ಲದೇ ವರ್ತಿಸುತ್ತಿದ್ದಾರೆ. ಇಂತಹವರನ್ನು ಕಾಂಗ್ರೆಸ್ ನಾಯಕರು ಬ್ರದರ್ಸ್ ಅಂತಾರೆ. ಸಂವಿಧಾನ ಬರೀ ಬಾಯಿಮಾತಲ್ಲಿ ಇದೆ, ಕಾರ್ಯದಲ್ಲಿಲ್ಲ. ಬಹುಸಂಖ್ಯಾತ ಹಿಂದೂಗಳ ಭಾವನೆ, ಆಚಾರ ವಿಚಾರಗಳಿಗೆ ಧಕ್ಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ

    ಇನ್ನು ಉಪರಾಷ್ಟ್ರಪತಿ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ನೂರಕ್ಕೆ ನೂರು ವಿಶ್ವಾಸ ಇದೆ. ಸಿಪಿ ರಾಧಾಕೃಷ್ಣನ್ ಅವರಿಗೆ ಅಪಾರ ಅನುಭವ ಇದೆ, ಪಕ್ಷದ ಆದರ್ಶ ಮೈಗೂಡಿಸಿಕೊಂಡಿದ್ದಾರೆ. ಎಲ್ಲ ಸಂಸದರೂ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ದೊಡ್ಡ ಅಂತರದಲ್ಲಿ ಸಿಪಿ ರಾಧಾಕೃಷ್ಣನ್ ಗೆಲವು ಸಾಧಿಸಲಿದ್ದಾರೆ. ಈ ದೇಶಕ್ಕೆ ಸಜ್ಜನ ಸರಳ ವ್ಯಕ್ತಿತ್ವದ, ಅಪಾರ ಅನುಭವ ಹೊಂದಿರುವ ವ್ಯಕ್ತಿ ಉಪರಾಷ್ಟ್ರಪತಿಯಾಗಲಿದ್ದಾರೆ ಎಂದರು. ಇದನ್ನೂ ಓದಿ: ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ವಶಕ್ಕೆ

  • ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

    ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

    ಮಂಡ್ಯ: ಗಣೇಶ ಮೆರವಣಿಗೆ (Ganesha Procession) ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ (Stone Pelting) ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು (Maddur) ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್‌ಗೆ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಪಟ್ಣದಾದ್ಯಂತ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ.

    ಭಾನುವಾರ ರಾತ್ರಿ ಗಣೇಶ ಮೆರವಣಿಗೆ ಮೇಲೆ ಕಿಡಿಗೇಡಿಗಳ ಕಲ್ಲುತೂರಾಟ ಖಂಡಿಸಿ ಮದ್ದೂರು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಮುಂಜಾನೆಯಿಂದಲೇ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ಬಂದ್‌ಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸ್ವಯಂಪ್ರೇರಿತರಾಗಿ ವ್ಯಾಪಾರಸ್ಥರು ಅಂಗಡಿ ಬಾಗಿಲು ಮುಚ್ಚಿ ಬಂದ್ ಯಶಸ್ವಿಗೊಳಿಸಿದ್ದಾರೆ. ಮೆಡಿಕಲ್ ಸ್ಟೋರ್, ಹಾಲಿನ ಬೂತ್ ಹಾಗೂ ತರಕಾರಿ ಅಂಗಡಿಗಳ ಹೊರತುಪಡಿಸಿದರೆ ಉಳಿದೆಲ್ಲಾ ವ್ಯಾಪಾರ-ವಹಿವಾಟು ನಿಲ್ಲಿಸಿ ಮದ್ದೂರು ಜನತೆ ಬಂದ್‌ಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಇನ್ನೂ ಮದ್ದೂರು ಬಂದ್ ಹಿನ್ನೆಲೆ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಟೌನ್ ರೌಂಡ್ಸ್ ಮಾಡಿದ್ದಾರೆ. ಸೂಕ್ಷ್ಮ ಪ್ರದೇಶಗಳಾದ ರಾಮ್ ರಹೀಮ್ ನಗರ, ಸಿದ್ಧಾರ್ಥನಗರ, ಚನ್ನೇಗೌಡ ಬಡಾವಣೆಯಲ್ಲೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ 4 ಎಸ್ಪಿ, 4 ಅಡಿಷನಲ್ ಎಸ್ಪಿ, 15 ಡಿವೈಎಸ್‌ಪಿ, 35 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್, 10 ಡಿಆರ್, 15 ಕೆಎಸ್‌ಆರ್‌ಪಿ ತುಕಡಿ ಸೇರಿ ಒಟ್ಟು 1500 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಪ್ರತಿಭಟನೆ, ರ‍್ಯಾಲಿ ನಡೆಸದಂತೆ ಸೂಚನೆ ನೀಡಲಾಗಿದ್ದು, ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಇದನ್ನೂ ಓದಿ: ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ

    ಈ ವೇಳೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಭಾನುವಾರ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿದೆ. ನಿನ್ನೆ ಹಲವು ಸಂಘಟನೆಗಳು ಪ್ರತಿಭಟನೆ ಮಾಡಿವೆ. ಇಂದು ಮದ್ದೂರು ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಮಾಡಿದ್ದೇವೆ. ನಿಷೇಧಾಜ್ಞೆ ಸಹ ಜಾರಿ ಮಾಡಿದ್ದೇವೆ. ಬಂದ್ ಬಳಸಿಕೊಂಡು ಕಿಡಿಗೇಡಿಗಳು ಬಂಧಿತರ ಬಗ್ಗೆ ನಾವು ಇನ್ನೂ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ. 26 ಜನರನ್ನು ನಾವು ಲಿಸ್ಟ್ ಮಾಡಿದ್ದೇವೆ. ಈ ಪೈಕಿ 22 ಮಂದಿಯನ್ನು ಬಂಧನ ಮಾಡಿದ್ದೇವೆ. ಇನ್ನೂ 4 ಜನರನ್ನು ಬಂಧಿಸಬೇಕಾಗಿದೆ. ನಾಲ್ವರು ತಲೆಮರಿಸಿಕೊಂಡಿದ್ದಾರೆ, ಅವರ ಹುಡುಕಾಟ ನಡೆಯುತ್ತಿದೆ. ಇನ್ನೂ ಹಲವು ಸಿಸಿ ಕ್ಯಾಮರಾ ದೃಶ್ಯ ವೀಕ್ಷಣೆ ಮಾಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ

    ಒಟ್ಟಾರೆ ಮೊನ್ನೆ ನಡೆದ ಘಟನೆಯಿಂದಾಗಿ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದೆ. ಸರ್ಕಾರ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸದಿದ್ದರೇ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಮದ್ದೂರು ಗಲಾಟೆ | ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ: ಸಿದ್ದರಾಮಯ್ಯ

  • ಮದ್ದೂರು ಗಲಾಟೆ | ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ: ಸಿದ್ದರಾಮಯ್ಯ

    ಮದ್ದೂರು ಗಲಾಟೆ | ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ: ಸಿದ್ದರಾಮಯ್ಯ

    ಬೆಂಗಳೂರು: ಮದ್ದೂರಿನಲ್ಲಿ (Maddur) ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆ ಆಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸರು ಬೇಡ ಅಂದರೂ ಗುಂಪು ಕಟ್ಟಿಕೊಂಡು ಹೋಗಿದ್ದಾರೆ. ಇಲ್ಲಿ ತನಕ 21 ಜನರ ಬಂಧನ ಆಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಆಗಿದೆ. ಹಿಂದೂಗಳು, ಮುಸ್ಲಿಂ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಲಿದೆ. ಪೊಲೀಸರು ನನ್ನ ಪ್ರಕಾರ ತಪ್ಪು ಮಾಡಿಲ್ಲ, ಕಾನೂನು ಪ್ರಕಾರ ನಡೆದುಕೊಂಡಿದ್ದಾರೆ ಎಂದು ಲಾಠಿ ಚಾರ್ಜ್ ಸಮರ್ಥಿಸಿಕೊಂಡರು. ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ ಸ್ಥಳಕ್ಕೆ ಹೋಗುತ್ತಾರೆ, ವರದಿ ಕೊಡ್ತಾರೆ ನೋಡೋಣ ಎಂದರು. ಇದನ್ನೂ ಓದಿ: ಸರ್ಕಾರದ ಓಲೈಕೆ ರಾಜಕಾರಣವೇ ಮದ್ದೂರು ಗಲಭೆಗೆ ಕಾರಣ: ಬಸವರಾಜ ಬೊಮ್ಮಾಯಿ ಕಿಡಿ

    ಬಿಜೆಪಿ ಅವರು ಜನರ ನೆಮ್ಮದಿ ಹಾಳು ಮಾಡುತ್ತಿದ್ದಾರೆ, ಕೋಮುವಾದದಿಂದ ಪಕ್ಷ ಕಟ್ಟಬಾರದು. ಬಿಜೆಪಿ, ಜೆಡಿಎಸ್ ಪ್ರಚೋದನೆ ಮಾಡುತ್ತಿದೆ ಎಂದು ಹೇಳಿದರು. ಹೀಗೆ ಮುಂದುವರಿದ್ರೆ ಸರ್ಕಾರ ಪತನ ಆಗಲಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಟಕ್ಕರ್ ಕೊಟ್ಟ ಸಿಎಂ, ಪಾಪ ಕುಮಾರಸ್ವಾಮಿ ಪಕ್ಷ ಪತನ ಆಗ್ತಿದೆ, ಪತನ ಆಗದಂತೆ ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ

  • ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ

    ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ

    – ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಇದೆ
    – ಹೆಣ್ಣುಮಕ್ಕಳ ಮೇಲೆ ಲಾಠಿ ಬೀಸಿದ ಪೊಲೀಸರು ಸಸ್ಪೆಂಡ್ ಆಗ್ಬೇಕು

    ಮಂಡ್ಯ: ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಇದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಾರೆ. ಅದಕ್ಕಾಗಿ ಇವರು ಬಾಲ ಬಿಚ್ಚಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

    ಮದ್ದೂರಿನ (Maddur Stone Pelting) ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ತಾಲಿಬಾನ್ ಆಡಳಿತ ಮಾಡುತ್ತಿದೆ. ಮುಸಲ್ಮಾನರು ಶಾಂತಿಪ್ರಿಯರು ಅಂತಾರೆ. ಮಸೀದಿಯಲ್ಲಿ ಕಲ್ಲಿಟ್ಟುಕೊಂಡು ಹೊಡೆದಿದ್ದಾರೆ, ಇವರು ಶಾಂತಿ ಪ್ರಿಯರಾ? ನಾಗಮಂಗಲ ಆಯ್ತು, ಮದ್ದೂರಿಗೆ ಈ ಪರಿಸ್ಥಿತಿ ಬಂದಿದೆ. ಇಲ್ಲಿ ಹುಟ್ಟಿ, ಬೆಳೆದು ಗಡಿಯಾಚೆಗೆ ನಿಷ್ಠೆಯಿಟ್ಟುಕೊಂಡವರು ಕಲ್ಲು ತೂರುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತದಂತೆ ಭಾಸವಾಗುತ್ತಿದೆ – ಬಿವೈವಿ ಕಿಡಿ

    ಉತ್ತರ ಪ್ರದೇಶ ಪೊಲೀಸರು ಗಣೇಶ ಮೆರವಣಿಗೆಗೆ ಬಂದು ಡ್ಯಾನ್ಸ್ ಮಾಡುತ್ತಾರೆ. ತಾಲಿಬಾನಿ ಮನಸ್ಥಿತಿಯ ಕಾಂಗ್ರೆಸ್ ಸರ್ಕಾರದಲ್ಲಿ ಇದು ಸಾಧ್ಯವಿಲ್ಲ. ಮಸೀದಿ ಒಳಗೆ ಕಲ್ಲು ಹೇಗೆ ಹೋಯ್ತು? ಮುಲ್ಲ ಯಾವನು? ಕಲ್ಲು ಹೊಡೆದವರು ಅರೆಸ್ಟ್ ಆಗಬೇಕು. ಹೆಣ್ಣುಮಕ್ಕಳ ಮೇಲೆ ಲಾಠಿ ಬೀಸಿದ ಪೊಲೀಸರು ಸಸ್ಪೆಂಡ್ ಆಗಬೇಕು. ಆತ್ಮರಕ್ಷಣೆಗಾಗಿ ಹಿಂದೂಗಳು ತಿರುಗಿ ಬೀಳುತ್ತಾರೆ. ನೂರಾರು ವರ್ಷ ಆಕ್ರಮಣ ನಡೆದರೂ 80% ಹಿಂದೂಗಳಿದ್ದಾರೆ. ಹಿಂದೂಗಳು ಕಲ್ಲು ಬಿಸಾಡಲ್ಲ, ಕಲ್ಲು ಬಿಸಾಡಿದ್ರೆ ಬಿಡಲ್ಲ. ಕಲ್ಲು ಬೀಸಿದ ಮಸೀದಿ ಬಾಗಿಲು ಮುಚ್ಚಿಸಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ

    ಈ ಹೋರಾಟಕ್ಕೆ ನಿಖಿಲ್ ಕುಮಾರಸ್ವಾಮಿ ಸೇರಿ ಸಾಕಷ್ಟು ಬಿಜೆಪಿ-ಜೆಡಿಎಸ್ ನಾಯಕರು ಬರುತ್ತಾರೆ. ಹಿಂದೂ ಹುಲಿ ಯತ್ನಾಳ್ ಅವರನ್ನೂ ಕರೆಸೋಣ. ಹಿಂದೆ ತಾಯಿ ಚಾಮುಂಡೇಶ್ವರಿಗೆ ಅಪಮಾನ ಮಾಡಲು ಮಹಿಷಾ ದಸರಾ ಮಾಡಿದ್ದರು. ಈಗ ಅದನ್ನ ತಡೆದು ನಿಲ್ಲಿಸಿದ್ದೇವೆ. ಈಗಲೂ ಹಿಂದೂಗಳ ರಕ್ಷಣೆಗೆ ನಾವು ಬಂದಿದ್ದೇವೆ. ಬಿಜೆಪಿ-ಜೆಡಿಎಸ್‌ನ ನಾಯಕರನ್ನು ಬಿಟ್ಟು ಜೂಜಾಡುವ ವ್ಯಕ್ತಿಯನ್ನು ಇಲ್ಲಿ ಗೆಲ್ಲಿಸಿದ್ದೀರಿ. ಅವರ ಕುಮ್ಮಕ್ಕಿನಿಂದ ಇಲ್ಲಿ ಕೆಲವರು ಬಾಲಬಿಚ್ಚಿದ್ದಾರೆ. ಬೇಕಿದ್ರೆ ಯೋಗಿ ಆದಿತ್ಯನಾಥ ಅವರನ್ನೂ ಕರೆಸೋಣ. ಪೊಲೀಸ್ ಇಲಾಖೆಯವರು ನಮಗೆ ಪ್ರೊಟೆಕ್ಷನ್ ಕೊಡುತ್ತಿದ್ದಾರೆ. ಅವರನ್ನ ಬೈಯಲು ಹೋಗಬೇಡಿ. ಉತ್ತರ ಪ್ರದೇಶದಲ್ಲಿ ಪೊಲೀಸರು ಗಣೇಶ ಮೆರವಣಿಗೆಯಲ್ಲಿ ಬಂದು ಡ್ಯಾನ್ಸ್ ಮಾಡ್ತಾರೆ. ಯಾಕಂದ್ರೆ ಅವರಿಗೆ ಇರೋದು ಯೋಗಿ ಆದಿತ್ಯನಾಥ್. ಆದರೆ ಇಲ್ಲಿ ಇರೋದು ತಾಲಿಬಾನ್ ಸರ್ಕಾರದ ಗೃಹಸಚಿವರು. ಹಿಂದೆ ನಾಗಮಂಗಲ ಗಲಭೆ ಆದಾಗ ಗೃಹಸಚಿವರು ಬರಲಿಲ್ಲ. ಇದು ಸಣ್ಣ ಘಟನೆ ಅಂತ ಗೃಹಸಚಿವರು ಹೇಳಿದ್ದರು. ಪೊಲೀಸರು ಭರವಸೆ ಕೊಡಿ, ಶಾಂತಿಯುತವಾಗಿ ಪ್ರತಿಭಟನೆ ಕೈಬಿಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

    ಬೆಳಗ್ಗೆ 5 ಗಂಟೆಯಿಂದ ರಾತ್ರಿವರೆಗೂ ಆಜಾನ್ ಕೂಗುತ್ತಾರೆ. ಆ ಕೂಗು ನಾವು ಕೇಳಿಸಿಕೊಳ್ಳಲ್ವಾ? ಮಸೀದಿ ಬಳಿ ಡಿಜೆ ಹಾಕಬೇಡಿ ಅಂದ್ರೆ ಯಾವ ನ್ಯಾಯ? ಬಂಧಿತ ಹಿಂದೂ ಯುವಕರನ್ನು ಬಿಡುಗಡೆ ಮಾಡಬೇಕು. ಗಣೇಶ ಕೂರಿಸಲು ಅನುಮತಿ ನೀಡಲು ದುಡ್ಡು ಪಡೆದ ಅಧಿಕಾರಿಗಳು ವಿರುದ್ಧ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

  • 38 ಗಂಟೆಗಳ ಕಾಲ ನಡೆಯಿತು ಗಣೇಶ ವಿಸರ್ಜನೆ ಮೆರವಣಿಗೆ- ಬೆಳಗಾವಿಯಲ್ಲಿ ದಾಖಲೆ ನಿರ್ಮಾಣ

    38 ಗಂಟೆಗಳ ಕಾಲ ನಡೆಯಿತು ಗಣೇಶ ವಿಸರ್ಜನೆ ಮೆರವಣಿಗೆ- ಬೆಳಗಾವಿಯಲ್ಲಿ ದಾಖಲೆ ನಿರ್ಮಾಣ

    ಬೆಳಗಾವಿ: ಬರೋಬ್ಬರಿ 38 ಗಂಟೆಗಳ ಕಾಲ ಗಣೇಶ ವಿಸರ್ಜನೆ (Ganesh Procession) ನಡೆಯವ ಮೂಲಕ ಬೆಳಗಾವಿ (Belagavi) ಹೊಸ ದಾಖಲೆ ಬರೆದಿದೆ. ಮಹಾರಾಷ್ಟ್ರದ (Maharashtra) ಮುಂಬೈ ಮಹಾನಗರಕ್ಕೂ ಮೀರಿ ಬೆಳಗಾವಿಯಲ್ಲಿ ಈ ಬಾರಿ ಗಣೇಶ ವಿಸರ್ಜನ ಮಹೋತ್ಸವ ಜರುಗಿದ್ದು ಹೊಸ ಇತಿಹಾಸ ಸೃಷ್ಟಿಯಾಗಿದೆ.

    ಸಾರ್ವಕಾಲಿಕ ದಾಖಲೆಗೆ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೆ.6 ರ ಸಂಜೆ 4 ಗಂಟೆಗೆ ಶುರುವಾಗಿದ್ದ ಗಣೇಶ ಮರೆವಣಿಗೆಯು ಇಂದು (ಸೆ.8) ಬೆಳಗ್ಗೆ ಆರು ಗಂಟೆಯವರೆಗೂ ಶಾಂತಿಯುತವಾಗಿ ನಡೆಯಿತು. ಇದನ್ನೂ ಓದಿ:  ಈ ಸ್ಥಳವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ, ಸತ್ರೆ ತಮಟೆಯ ಶಬ್ಧ ಕೇಳಬಾರದು: ಮದ್ದೂರು ಮಹಿಳೆಯ ಆಕ್ರೋಶ

     
    ಗಣೇಶ ಮೆರವಣಿಗೆ ಶಾಂತ ರೀತಿಯಲ್ಲಿ ನಡೆಸಿಕೊಟ್ಟ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪೊಲೀಸರಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳಗಾವಿಯ ಕಪಿಲೇಶ್ವರ ಹೊಂಡದಲ್ಲಿ ವಿಸರ್ಜನೆಯಾಗಿರುವ ಗಣೇಶ ಮೂರ್ತಿಗಳ ವಿಲೇವಾರಿ ಕಾರ್ಯವೂ ಸಹ ಪ್ರಾರಂಭವಾಗಲಿದೆ.

  • ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ

    ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ

    ಮಂಡ್ಯ: ನಾಳೆ (ಮಂಗಳವಾರ) ಮದ್ದೂರು (Maddur) ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ.

    ಮದ್ದೂರಿನಲ್ಲಿ ಗಣೇಶ ವಿಸರ್ಜನೆ (Ganesha Procession) ಮೆರವಣಿಗೆ ವೇಳೆ ಕಲ್ಲು ತೂರಾಟ (Stone Pelting) ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ನಾಳೆ ಮದ್ದೂರು ಬಂದ್‌ಗೆ ಕರೆ ನೀಡಿದ್ದಾರೆ. ಅಲ್ಲದೇ ಬುಧವಾರ ಮದ್ದೂರು ತಾಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನ ಮದ್ದೂರು ಪಟ್ಟಣದಲ್ಲಿ ತಂದು ಮೆರವಣಿಗೆ ಮಾಡಿ ವಿಸರ್ಜನೆ ಮಾಡಲು ತೀರ್ಮಾನಿಸಿದ್ದಾರೆ. ಡಿಜೆ ಸಮೇತ ಸಾಮೂಹಿಕ ಗಣೇಶ ವಿಸರ್ಜನೆ ನಡೆಸಲು ಕರೆ ನೀಡಲಾಗಿದೆ. ಇದನ್ನೂ ಓದಿ: 21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

    ಕಲ್ಲು ತೂರಾಟದ ಬಳಿಕ ಮದ್ದೂರಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರೋದು ಪೂರ್ವ ನಿಯೋಜಿತ. ಮಸೀದಿ ಕಡೆಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕೂಡಲೇ ಮಸೀದಿಯ ಧರ್ಮಗುರು ಬಂಧನ ಮಾಡುವಂತೆ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಅಲ್ಲದೇ ಮಸೀದಿ ಸೀಜ್ ಮಾಡಿ ಎಂದು ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

    ಇನ್ನು ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಪೊಲೀಸರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಈಗಾಗಲೇ ಒಂದೂವರೆ ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಡ್ಯ, ಬೆಂಗಳೂರು, ಮೈಸೂರು ಹಾಸನ, ರಾಮನಗರ, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಇದನ್ನೂ ಓದಿ: ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತೆ – ಮಂಡ್ಯ ಎಸ್ಪಿಗೆ ಹೆಚ್‌ಡಿಕೆ ಖಡಕ್ ವಾರ್ನಿಂಗ್

  • 21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

    21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

    – ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಇದೆಲ್ಲ ಆಗ್ತಿದೆ
    – ಈ ಹಿಂದೆ ಮಂಗಳೂರಿನಿಂದ ಪಾಂಡವಪುರಕ್ಕೆ ಬಂದು ಏನು ನಡೆಸಿದ್ರು ಗೊತ್ತಿದೆ

    ಬೆಂಗಳೂರು: ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ವಿಚಾರಣೆ ನಡೆಸಿ ನಂತರ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (N Chaluvaraya Swamy) ಹೇಳಿದ್ದಾರೆ.

    ಮದ್ದೂರಿನಲ್ಲಿ (Maddur) ಗಣೇಶ ವಿಸರ್ಜನೆ ಮೆರವಣಿಗೆ (Ganesha Procession) ವೇಳೆ ಕಲ್ಲು ತೂರಾಟದ (Stone Pelting) ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಚೋದಿಸುತ್ತಿದ್ದಾರೆ. ಇನ್ನಷ್ಟು ಬಿಗಿಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

    ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿ ನಡೆದಿರಲಿಲ್ಲ. ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬುದನ್ನೂ ವಿಚಾರಣೆ ಮಾಡುತ್ತಿದ್ದೇವೆ. ಯಾವುದೇ ಸಮಾಜವಿದ್ದರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್‌ನವರು ರಾಜಕೀಯವಾಗಿ ನಮ್ಮನ್ನು ಎದುರಿಸಲು ಆಗದೇ ಪ್ರಚೋದನೆ ಮಾಡುತ್ತಿದ್ದಾರೆ. ನಾವು ಯಾರ ಓಲೈಕೆಯನ್ನ ಕೂಡ ಮಾಡುತ್ತಿಲ್ಲ. ಹಾಗಿದ್ರೆ ಯಾಕೆ 21 ಜನರ ಬಂಧನ ಮಾಡುತ್ತಿದ್ದೆವು? ಇದು ಪೂರ್ವನಿಯೋಜಿತ, ನಮಗೆ ಎಲ್ಲ ಗೊತ್ತಿದೆ. ಈ ಹಿಂದೆ ಮಂಗಳೂರಿನಿಂದ ಪಾಂಡವಪುರಕ್ಕೆ ಬಂದು ಏನು ನಡೆಸಿದ್ರು ಗೊತ್ತಿದೆ ನಮಗೆ. ನಾಗಮಂಗಲದಲ್ಲೂ ನಡೆಸಿದ್ರು, ಈ ಸಲ ಎಚ್ಚರಿಕೆ ವಹಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತೆ – ಮಂಡ್ಯ ಎಸ್ಪಿಗೆ ಹೆಚ್‌ಡಿಕೆ ಖಡಕ್ ವಾರ್ನಿಂಗ್

    ಇದು ಪೂರ್ವನಿಯೋಜಿತವಾಗಿ ನಡೆದಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿದ್ದಾರೆ. ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಇದೆಲ್ಲ ಆಗುತ್ತಿದೆ. ನನಗೂ ಕೆಲವು ಸಂಘಟನೆಗಳ ಮುಖಂಡರು ಕರೆ ಮಾಡಿ ಮಾತನಾಡಿದ್ದಾರೆ. ಅವರ ಹೆಸರನ್ನ ಈಗ ಹೇಳಲು ಬಯಸುವುದಿಲ್ಲ. ಬಿಜೆಪಿ ನಾಯಕರೇ ಸಂಘಟನೆಗಳ ಮುಖಂಡರಿಗೆ ಕರೆ ಮಾಡಿ ಪ್ರಚೋದನೆ ಕೊಡುತ್ತಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ವಿಧಾನಸಭೆಯಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗಿಲ್ಲ. ಹಾಗಾಗಿ ಇಂತಹ ಘಟನೆಗಳು ನಡೆದಾಗ ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ: ಪರಮೇಶ್ವರ್

    ಇನ್ನು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಚಲುವರಾಯಸ್ವಾಮಿ, ತಪ್ಪಿತಸ್ಥರ ವಿರುದ್ಧ ಕಠಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ ನಡೆದಿರುವುದು ವಿಷಾದನೀಯ. ಈ ಬಗ್ಗೆ ಸಮರ್ಪಕ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಇಂತಹ ದುರ್ವರ್ತನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲು ತಿಳಿಸಲಾಗಿದೆ. ಸಾರ್ವಜನಿಕರು ಈ ದಿಶೆಯಲ್ಲಿ ಸಹಕರಿಸಬೇಕು ಹಾಗೂ ಇಂತಹ ಯಾವುದೇ ರೀತಿಯ ಅಹಿತಕರ ಘಟನೆಗೆ ಎಡೆ ಮಾಡಿಕೊಡಬಾರದು ಎಂದು ಎಕ್ಸ್‌ನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನಿಗೆ ಕಲ್ಲು – ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌

  • ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

    ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

    – ಇದೇ ರೀತಿ ಮುಂದುವರಿದ್ರೆ ಸಿದ್ದರಾಮಯ್ಯ ಮುಂದಿನ ವರ್ಷ ಗಣಪತಿ ಹಬ್ಬವನ್ನೇ ಬ್ಯಾನ್ ಮಾಡ್ತಾರೆ
    – ಮದ್ದೂರು ಘಟನೆಗೆ ಸಿಎಂ, ಡಿಸಿಎಂ ಕ್ಷಮೆ ಕೇಳಬೇಕು

    ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ (Congress) ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಕಿಡಿಕಾರಿದ್ದಾರೆ.

    ಮದ್ದೂರಿನಲ್ಲಿ (Maddur) ಗಣೇಶ ವಿಸರ್ಜನೆ ಮೆರವಣಿಗೆ (Ganesha Procession) ವೇಳೆ ಕಲ್ಲು ತೂರಾಟ (Stone Pelting) ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ. ನಾವು ಪಾಕಿಸ್ತಾನದಲ್ಲಿವೋ ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ. ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ. ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಅಂತಾ ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ, ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತೆ – ಮಂಡ್ಯ ಎಸ್ಪಿಗೆ ಹೆಚ್‌ಡಿಕೆ ಖಡಕ್ ವಾರ್ನಿಂಗ್

    ವಿಧಾನಸೌಧದಲ್ಲೆ ಪಾಕಿಸ್ತಾನ ಪರ ಕೂಗಿದ ಮೇಲೆ ನಮ್ಮನ್ನು ಏನೂ ಮಾಡಲ್ಲ ಅಂತಾ ಟಿಪ್ಪು ಗ್ಯಾಂಗ್‌ಗೆ ಅನ್ನಿಸಲು ಶುರುವಾಯಿತು. ಈಗ ಎಲ್ಲಾ ಕಡೆ ಗಲಭೆಗಳನ್ನು ಮಾಡುತ್ತಿದ್ದಾರೆ. ಮಂಡ್ಯದಲ್ಲಿ, ಮೈಸೂರಿನಲ್ಲಿ ಇವರು ಸ್ಕೆಚ್ ಮಾಡಿಕೊಂಡುಬಿಟ್ಟಿದ್ದಾರೆ. ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ. ಜನರ ಮುಂದೆ ಸಿದ್ದರಾಮಯ್ಯ ಕ್ಷಮೆ ಕೇಳಬೇಕು. ಹಿಂದೂಗಳನ್ನೇ ಟಾರ್ಗೆಟ್, ಲಾಠಿ ಚಾರ್ಜ್ ಯಾಕೆ? ಕೇಳಿದರೆ ಹಿಂದೂಗಳು ಗಲಾಟೆ ಮಾಡುತ್ತಾರೆ ಅಂತೆ. ಹಿಂದೂಗಳು ಒಗ್ಗಟ್ಟಾಗಿಲ್ಲ ಅಂದರೆ ಇನ್ನುಮುಂದೆ ಇದೇ ಗತಿ. ವೋಟಿಗೋಸ್ಕರ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ. ಅಧಿಕಾರ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ. ಧರ್ಮಸ್ಥಳ, ಚಾಮುಂಡೇಶ್ವರಿ, ಮದ್ದೂರು ಆಯಿತು. ಇನ್ನು ನಿಮ್ಮ ಮನೆ ಬಾಗಿಲಿಗೆ ಬರುತ್ತದೆ. ನಿಮ್ಮ ಮನೆಯಲ್ಲಿ ಬಂದು ಹೊಡೆಯುತ್ತಾರೆ, ಎಚ್ಚರಿಕೆಯಿಂದಿರಿ. ಇಲ್ಲದಿದ್ದರೆ ಪಾಕಿಸ್ತಾನ, ಟಿಪ್ಪು ಏರಿಯಾಗಳನ್ನು ಉತ್ಪತ್ತಿ ಮಾಡುತ್ತಾರೆ ಎಂದು ಕೆಂಡಕಾರಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ: ಪರಮೇಶ್ವರ್

    ಕಾಂಗ್ರೆಸ್‌ನವರು ಪೂರ್ತಿ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ, ಅವರಿಗೆ ವೋಟ್ ಅಷ್ಟೇ ಮುಖ್ಯ. ಹಿಂದೂಗಳಲ್ಲಿ ಒಗ್ಗಟ್ಟು ಇಲ್ಲ. ಅದಕ್ಕೋಸ್ಕರ ಜಾತಿ, ಜಾತಿಗಳ ಮಧ್ಯೆ ಬೆಂಕಿ ಇಡುತ್ತಾರೆ. ಬೆಂಕಿ ಇಡುವುದೇ ಕಾಂಗ್ರೆಸ್ ಕೆಲಸ. ಹಿಂದೂಗಳು ಸಹಿಷ್ಣುಗಳು. ಕಾಂಗ್ರೆಸ್ ಸರ್ಕಾರ ಇರುವುದರಿಂದ ಹಿಂದೂ ಮೆರವಣಿಗೆ ವೇಳೆ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ. ಮಹಿಳಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲಾಗಿದೆ. ಮುಂದಿನ ವರ್ಷ ಸಿದ್ದರಾಮಯ್ಯ ಕಾನೂನು ತಂದು ಗಣಪತಿ ಹಬ್ಬವನ್ನೇ ನಿಷೇಧ ಮಾಡುತ್ತಾರೆ. ಅಂತಹ ಸಿದ್ದರಾಮಯ್ಯ ಇವರು, ಅವರನ್ನು ನಂಬಬೇಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನಿಗೆ ಕಲ್ಲು – ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌

  • ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ: ಪರಮೇಶ್ವರ್

    ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ: ಪರಮೇಶ್ವರ್

    ಬೆಂಗಳೂರು: ಮಂಡ್ಯದ (Mandya) ಮದ್ದೂರಿನಲ್ಲಿ (Maddur) ಗಲಾಟೆ ಮಾಡಿದವರ ಬಂಧನ ಆಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ಗಣೇಶೋತ್ಸವ ವೇಳೆ ಮದ್ದೂರು ಸೇರಿ ಕೆಲವು ಕಡೆ ಕಲ್ಲು ತೂರಾಟ (Stone Pelting) ಇತರೆ ಪ್ರಕರಣಗಳು ನಡೆದಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವು ಕಡೆ ಸಣ್ಣಪುಟ್ಟ ಘಟನೆ ಆಗಿವೆ. ಒಂದು ಕಡೆ ಚಿಕ್ಕಮಕ್ಕಳು ಮೆರವಣಿಗೆ ವೇಳೆ ಮೇಲಿಂದ ಉಗಿದಿದ್ದಾರೆ. ಎಲ್ಲವೂ ನಿಯಂತ್ರಣದಲ್ಲಿದೆ. ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನಿಗೆ ಕಲ್ಲು – ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌

    ಪದೇ ಪದೇ ಈ ಥರ ಘಟನೆಗಳಾಗುತ್ತಿವೆ ಅಂದರೆ ಜನರೂ ಸಹ ಸ್ಪಂದಿಸಬೇಕು. ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದೇವೆ. ಎಲ್ಲ ರೀತಿಯ ಕ್ರಮಗಳನ್ನೂ ಈ ಬಾರಿಯ ಗಣೇಶೋತ್ಸವಗಳ ವೇಳೆ ಕೈಗೊಂಡಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳೂ ಭೇಟಿ ಕೊಟ್ಟಿದ್ದಾರೆ. ಆದರೂ ಒಂದೆರಡು ಮೂರು ಕಡೆ ಸಣ್ಣಪುಟ್ಟ ಘಟನೆಗಳಾಗಿವೆ, ಕ್ರಮ ತಗೊಂಡಿದ್ದೇವೆ. ಬಿಜೆಪಿಯವರು ಆರೋಪ ಮಾಡುತ್ತಾರೆ, ಅವರದ್ದು ಅದೇ ಕೆಲಸ ಎಂದು ಹೇಳಿದರು. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ನಿಯಮ ಉಲ್ಲಂಘನೆ – 64 ಮಂದಿ ವಿರುದ್ಧ ಪ್ರಕರಣ ದಾಖಲು

    ತುಮಕೂರಿನಲ್ಲೂ ಅದ್ಧೂರಿ ದಸರಾ ಆಚರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ವಿಶೇಷತೆ ಏನೂ ಇಲ್ಲ. ಊರ ಹಬ್ಬ ಮಾಡುತ್ತಿದ್ದೇವೆ. ನಾವು ಮಾರ್ನಮಿ ಅಂತ ಕರೆಯುತ್ತೇವೆ. 11 ದಿನಗಳ ಕಾಲವೂ ತುಮಕೂರಿನಲ್ಲಿ ದಸರಾ ಮಾಡುತ್ತೇವೆ. ಮೈಸೂರಿನಲ್ಲಿ ಹೇಗೆ ಆಚರಣೆ ಮಾಡುತ್ತೇವೋ ಇಲ್ಲೂ ಹಾಗೇ ಮಾಡುತ್ತೇವೆ. ಇದರಲ್ಲಿ ಯಾವುದೇ ರಾಜಕೀಯ ಮಹತ್ವ ಇಲ್ಲ. ಎಲ್ಲರನ್ನೂ ಸೇರಿಸಿಕೊಂಡು ದಸರಾ ಆಚರಣೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಈ ಸ್ಥಳವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ, ಸತ್ರೆ ತಮಟೆಯ ಶಬ್ಧ ಕೇಳಬಾರದು: ಮದ್ದೂರು ಮಹಿಳೆಯ ಆಕ್ರೋಶ

    ಧರ್ಮಸ್ಥಳ ಪ್ರಕರಣದ ಕುರಿತು ಮಾತನಾಡಿ, ಎಸ್‌ಐಟಿ ತನಿಖೆ ನಡೀತಿದೆ, ಮುಗಿಯಲಿ. ಈಗ ನಾವು ಉತ್ತರ ಕೊಡಲು ಬರೋದಿಲ್ಲ. ತನಿಖೆ ಮುಗಿದ ಮೇಲೆ ನೋಡೋಣ. ಯರ‍್ಯಾರ ಪಾತ್ರ ಇದೆ ಅದೆಲ್ಲವೂ ತನಿಖೆ ಆಗುತ್ತಿದೆ. ಎಲ್ಲವೂ ತನಿಖೆಯಲ್ಲಿ ಅಂತಿಮವಾಗಿ ಹೊರಗೆ ಬರುತ್ತದೆ. ಸೋನಿಯಾ ಗಾಂಧಿ ಅವರಿಗೆ ಕೆಲವರು ಪತ್ರ ಬರೆದಿರೋದು ಗೊತ್ತಿಲ್ಲ. ಎಸ್‌ಐಟಿ ತನಿಖೆ ನಡೆಯುವಾಗ ನಾನಾಗಲಿ, ಸಿಎಂ ಆಗಲೀ ಯಾರೂ ಹಸ್ತಕ್ಷೇಪ ಮಾಡೋದಿಲ್ಲ ಎಂದು ನುಡಿದರು. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ

  • ಈ ಸ್ಥಳವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ, ಸತ್ರೆ ತಮಟೆಯ ಶಬ್ಧ ಕೇಳಬಾರದು: ಮದ್ದೂರು ಮಹಿಳೆಯ ಆಕ್ರೋಶ

    ಈ ಸ್ಥಳವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ, ಸತ್ರೆ ತಮಟೆಯ ಶಬ್ಧ ಕೇಳಬಾರದು: ಮದ್ದೂರು ಮಹಿಳೆಯ ಆಕ್ರೋಶ

    – ಪ್ರೀಪ್ಲಾನ್ ಮಾಡಿ ಮಸೀದಿಯಿಂದ ಕಲ್ಲೆಸೆದಿದ್ದಾರೆ
    – ಪೊಲೀಸರಿಗೆ ಹೆದರದವರು ನಮ್ಮನ್ನು ಬಿಡ್ತಾರಾ?

    ಮಂಡ್ಯ: ಈ ಪ್ರದೇಶವನ್ನು ಮುಸ್ಲಿಮರು ಮಿನಿ ಪಾಕಿಸ್ತಾನ (Mini Pakistan) ಮಾಡ್ಬೇಕು ಅಂದ್ಕೊಂಡಿದ್ದಾರೆ ಎಂದು ಸ್ಥಳೀಯ ಹಿಂದೂ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.

    ಮಂಡ್ಯದ (Mandya) ಮದ್ದೂರಿನಲ್ಲಿ (Maddur) ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲೆಸೆದ ಬಗ್ಗೆ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು. ಮುಸ್ಲಿಂ ಯುವಕರೇ ಕಲ್ಲೆಸೆಯಬೇಕು ಅಂತ ಫ್ರೀ ಪ್ಲಾನ್ ಮಾಡ್ಕೊಂಡಿದ್ರು. ಮಸೀದಿಗೆ ಯಾರೋ ಕಲ್ಲು ಎಸೆದಿದ್ದಾರೆ. ಅದಕ್ಕೆ ನಾವು ಕಲ್ಲೆಸೆದಿದ್ದೇವೆ ಅಂತ ಅವ್ರು ಹೇಳ್ತಾರೆ. ಆದ್ರೆ ಎಲ್ಲಾ ರೀತಿಯ ಸಾಕ್ಷಿಗಳು ಸಹ ಇದೆ ಎಲ್ಲಿಂದ ಕಲ್ಲು ಎಸೆದಿದ್ದಾರೆ ಅಂತಾ ಪೊಲೀಸರು ಹೇಳಲಿ ಎಂದಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಕಲ್ಲು – ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ

    ನಾವು ಹಿಂದೂಗಳು ಒಗ್ಗಟ್ಟಾಗಿ ಇದಿದ್ದರೆ ನಮಗೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಇಲ್ಲಿ ಮಕ್ಕಳನ್ನು ಓದ್ಸೋಕು ಆಗ್ತಿಲ್ಲ. ಎಲ್ಲ ಮಕ್ಕಳನ್ನು ಬೇರೆ ಕಡೆ ಸ್ಕೂಲ್, ಕಾಲೇಜಿಗೆ ಸೇರಿಸಿದ್ದೇವೆ. ಅಂತಹ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

    ರಾತ್ರಿ ಆಯಿತು ಅಂದ್ರೆ ಮುಸ್ಲಿಂ ಹುಡುಗರು ಲಾಂಗ್, ಮಚ್ಚು ಹಿಡ್ಕೊಂಡು ಬರ್ತಾರೆ. ಒಂದು ಹೆಣ್ಮಕ್ಕಳು ಓಡಾಡೋಕೆ ಆಗಲ್ಲ. ಚಾಕು ಹಿಡ್ಕೊಂಡು ಓಡಿ ಬರೋದು, ಬಾಟಲ್ ಎಸೆಯೋದು ಈ ರೀತಿಯಾಗಿ ವರ್ತಿಸ್ತಾರೆ. ಪೊಲೀಸರಿಗೆ ಹೆದರದೇ ಇರೋರು ಇನ್ನು ನಮ್ಮನ್ನು ಬಿಡ್ತಾರಾ ಎಂದು ಪ್ರಶ್ನಿಸಿದ್ದಾರೆ.

    ಗಂಡಸರು ಓಡಾಡಿದ್ರೇನೆ ಬಾರೋ ಹೊಡಿ ಬಾ ಅಂತಾರೆ. ಇನ್ನು ನಮ್ಮಂತ ಹೆಣ್ಮಕ್ಕಳ ಜೊತೆ ಅಸಭ್ಯವಾಗಿ ನಡೆದುಕೊಳ್ತಾರೆ. ನೀವು ಅಲ್ಲಿ ಕಿಡಿ ಹಚ್ಚಿ ಬಂದಿದ್ದೀರಾ ಅಲ್ವಾ. ಅದು ಇಲ್ಲಿ ಉರಿತಿದೆ ಅಂತಾ ನಿನ್ನೆ ಪೊಲೀಸರು ಹೇಳಿದ್ರು. ರೌಂಡ್ಸ್ ಬರೋ ಪೊಲೀಸರಿಗೇನೆ ಇವರೆಲ್ಲ ಹೆದರಲ್ಲ. ಇನ್ನು ನಾವೆಲ್ಲ ಏನು ಮಾಡ್ಬೇಕು ಎಂದಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ

    ನಾವು ಹಿಂದುಗಳಲ್ಲ, ನಾವು ಮುಸ್ಲಿಂ ಆಗಿ ಮತಾಂತರ ಆಗ್ತೀವಿ. ಇಲ್ಲಿ ಇದೊಂದೇ ಆಗೋಕೆ ಬಾಕಿ ಇರೋದು. ಈ ಏರಿಯಾದಲ್ಲಿ ಅರ್ಧಕರ್ಧ ಜನ ಮುಸ್ಲಿಮರೇ ಇರೋದು. ನಾವು ಗಣೇಶನನ್ನ ಮೆರವಣೆಗೆ ವರ್ಷಕ್ಕೆ ಒಂದೇ ಸಲ ಮಾಡೋದು. ಆದ್ರೆ ಇವರೆಲ್ಲ ಹೇಗೆ ಊರೆಲ್ಲ ಹೋಗಿ ರ‍್ಯಾಲಿ ಮಾಡಿದ್ರು. ಈ ಸ್ಥಳವನ್ನು ಮಿನಿ ಪಾಕಿಸ್ತಾನ ಮಾಡ್ಬೇಕು ಅನ್ನೋದೇ ಇವ್ರ ಅಜೆಂಡಾ ಎಂದು ವಾಗ್ದಾಳಿ ನಡೆಸಿದ್ದಾರೆ.

     ಮುಸ್ಲಿಂ ಹುಡುಗರು ರಾತ್ರಿ ಆದ್ರೆ ಬಟ್ಟೆ ಬಿಚ್ಚಿಕೊಂಡು, ಕಾಂಪೌಂಡ್ ಹಾರಿಕೊಂಡು ಬರ್ತಾರೆ. ಪೊಲೀಸರು ಬಂದು ನಮ್ಮನ್ನ ಕೇಳ್ತಾರೆ. ಆದ್ರೆ ಅವರೆಲ್ಲ ಎಲ್ಲಿ ಇರ್ತಾರೆ ಅಂತ ನಮಗೆ ಗೊತ್ತಿರಲ್ಲ ಎಂದು ಹೇಳಿದ್ದಾರೆ.

    ಪ್ರತಿಯೊಬ್ಬ ಹೆಣ್ಮಗಳು ಕೂಡ ಹೆದರಿಕೊಂಡು ಆ ಮಸೀದಿ ಇರೋ ಕಡೆ ಹೋಗಲ್ಲ ಅಂತಾರೆ. ಏರಿಯಾದಲ್ಲಿ ಯಾರಾದ್ರು ಸತ್ರೆ ಅವರ ಮೆರವಣಿಗೆಯ ತಮಟೆ ಶಬ್ದ ಕೂಡ ಮಸೀದಿ ಕೇಳ್ಬಾರ್ದು ಅಂತಾರೆ. ಇದೆಂತ ನ್ಯಾಯ. ಇಲ್ಲಿರುವ ಹಿಂದುಗಳಿಗೆ ಸರ್ಕಾರ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.