Tag: ಗಣೇಶ ಮೆರವಣಿಗೆ

  • ದಾವಣಗೆರೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

    ದಾವಣಗೆರೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

    ದಾವಣಗೆರೆ: ನಗರದ ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶ ಮೆರವಣಿಗೆ (Ganesh Procession) ನಡೆಯುವಾಗ ಕಲ್ಲು ತೂರಾಟ (Stone Pelting) ನಡೆದಿದೆ.

    ನಗರದ ಅರಳಿ ಮರ ಸರ್ಕಲ್ ನಲ್ಲಿ ಮೆರವಣಿಗೆ ಸಾಗಿದ ನಂತರ ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು (Police) ಗಾಯಗೊಂಡಿದ್ದಾರೆ.

    ಕೂಡಲೇ ಮುಸ್ಲಿಂ ಮುಖಂಡರು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದ್ದಾರೆ. ಗಣೇಶ ಮೆರವಣಿಗೆ ಸಾಗಿದ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಕೂಡಲೇ ಪೊಲೀಸರು ಇಡೀ ನಗರದಲ್ಲಿ ಸಂಚಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

    ಕಲ್ಲು ತೂರಾಟಕ್ಕೆ ಕಾರಣ ಏನು?
    ಕಳೆದ ಎರಡು ದಿನಗಳ ಹಿಂದೆ ಹಿಂದೂ ಮುಖಂಡರು ನಾಗಮಂಗಲ ಕಲ್ಲುತೂರಾಟ ಪ್ರಕರಣ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.

    ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ್ಯ ಸಂಚಾಲಕ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ‌ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಮುಸ್ಲಿಂ ಮುಖಂಡನೊಬ್ಬ ತಾಕತ್ ಇದ್ದರೆ ಬೇತೂರು ರಸ್ತೆಗೆ ಬಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ.

    ಇಂದು ಗಣೇಶ ಮೆರವಣಿಗೆಯಲ್ಲಿ ಸತೀಶ್ ಪೂಜಾರಿ ಭಾಗವಹಿಸಿದ್ದರು.  ಮೆರವಣಿಗೆ ಸಾಗುವ ಅರಳಿಮರ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಸೇರಿದ್ದರು. ಗಣೇಶನ ಮೆರವಣಿಗೆ ಹೋಗುತ್ತಿದ್ದಾಗ ಇಸ್ಲಾಂ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

    ಈ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮುಸ್ಲಿಂ ಮುಖಂಡರೇ ಜನಸಂದಣಿಯನ್ನು ನಿಯಂತ್ರಣ ಮಾಡಿದ್ದಾರೆ. ನಂತರ ಕೆ ಅರ್ ರಸ್ತೆ ಹಂಸಭಾವಿ ಸರ್ಕಲ್ ನಲ್ಲಿ ಕಲ್ಲು ತೂರಾಟ ನಡೆದಿದೆ.

  • ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ (Pakistan)ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಡ್ಯದ ನಾಗಮಂಗಲ (Nagamangala Violence) ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ (Congress) ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಸ್ಲಿಮರಿಗೆ ಫ್ರೀ ಪಾಸ್ ಕೊಟ್ಟಿದ್ದಾರೆ- ಸಿಎಂ ವಿರುದ್ಧ ಸೂಲಿಬೆಲೆ ಗರಂ

    ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನಿಸಿದ ಅವರು ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಕಲ್ಲು, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ: ಪ್ರತಾಪ್ ಸಿಂಹ

    ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?
    ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ

    ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ:
    ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಹರಿಹಾಯ್ದರು. ಇದನ್ನೂ ಓದಿ: Nagamangala Violence | ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಪರಮೇಶ್ವರ್‌ ಲಘು ಹೇಳಿಕೆ