ಬೆಳಗಾವಿ: ದೇಶದಲ್ಲಿ ಮುಂಬೈ (Mumbai) ಹೊರತುಪಡಿಸಿದರೆ ಬೆಳಗಾವಿಯಲ್ಲಿ ಆಚರಿಸುವ ಅದ್ಧೂರಿ ಗಣೇಶೋತ್ಸವ (Ganeshothsav) ವಿಸರ್ಜನಾ ಮೆರವಣಿಗೆ ಕಾರ್ಯ ಸತತವಾಗಿ 24 ಗಂಟೆಗಳ ಕಾಲ ನಡೆಯಿತು.
ಎರಡು ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯಿಂದಲೂ ಮಳೆ, ಬಿಸಿಲೆನ್ನದೇ ಲಕ್ಷಾಂತರ ಭಕ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯೆ ಕೇಸ್ – ಮೂವರು ಅರೆಸ್ಟ್
ಇದೇ ವೇಳೆಯಲ್ಲಿ ಕೆಲವು ನಗರಸೇವಕರು ಹಾಗೂ ಎಸಿಪಿ (ACP) ನಾರಾಯಣ ಭರಮನಿ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಪಾಲಿಕೆ ಅಧಿಕಾರಿಗಳಾದ ಸಂಜಯ ಡುಮ್ಮಗೋಳ, ಲಕ್ಷ್ಮೀ ನಿಪ್ಪಾಣಿಕರ್ ಡಿಜೆ ಹಾಡಿಗೆ ಸಕ್ಕತ್ ಸ್ಟೆಪ್ ಹಾಕಿ ಸಂಭ್ರಮಿಸಿದರು. ಇದನ್ನೂ ಓದಿ: ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ ನಗರದಲ್ಲಿ 382 ಹಾಗೂ ಜಿಲ್ಲೆ ಸೇರಿದ್ರೆ 450ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮಂಡಳಿಗಳಿದ್ದು (Ganesha Festival Board), ಕಳೆದ ಹನ್ನೂಂದು ದಿನಗಳಿಂದ ವಿವಿಧ ಕಾರ್ಯಕ್ರಮಗಳ ಆಯೋಜಿಸಿ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗಿದೆ. ನಿನ್ನೆ ಚತುರ್ದಶಿ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಪ್ರಾರಂಭವಾಗಿದ್ದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಸತತ 24 ಗಂಟೆಗಳ ಬಳಿಕ ಗಣೇಶ ಮೂರ್ತಿಯನ್ನು ಕಪೀಲೇಶ್ವರ ಹೊಂಡದಲ್ಲಿ ವಿಸರ್ಜನೆ ಮಾಡಲಾಯಿತು.
Live Tv
[brid partner=56869869 player=32851 video=960834 autoplay=true]
ಹಾವೇರಿ: ರಾಣೆಬೆನ್ನೂರಿನ ವಂದೇ ಮಾತರಂ ಸೇವಾ ಸಂಸ್ಥೆಯು ಈ ಬಾರಿ ಗಣೇಶ ಹಬ್ಬದ ಪ್ರಯುಕ್ತ ಇಲ್ಲಿನ ನಗರಸಭೆ ಮೈದಾನದಲ್ಲಿ ವಿಘ್ನೇಶ್ವರನ ದಶಾವತಾರ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಅದ್ಧೂರಿ ಗಣೇಶೋತ್ಸವ ಆಚರಣೆ ಮಾಡುತ್ತಿದೆ.
ಕಳೆದ 14 ವರ್ಷಗಳಿಂದ ವಂದೇ ಮಾತರಂ ಸೇವಾ ಸಂಸ್ಥೆ ಅಧ್ಯಕ್ಷ ಪ್ರಕಾಶ್ ಬುರಡಿಕಟ್ಟಿ ನೇತೃತ್ವದಲ್ಲಿ ಪ್ರತಿ ವರ್ಷವು ಒಂದಲ್ಲ ಒಂದು ವಿಶೇಷ ಸಂದೇಶದೊಂದಿಗೆ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅಂತೆಯೇ ಈ ಬಾರಿ ಇಂದಿನ ಪೀಳಿಗೆಗೆ ಹಾಗೂ ಸಮಾಜಕ್ಕೆ ಹಿಂದೂ ಧರ್ಮ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ. ಇದನ್ನೂ ಓದಿ: ಮಡಿವಾಳೇಶ್ವರ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು
ಈ ಕುರಿತು ಮಾತನಾಡಿರುವ ವಂದೇ ಮಾತರಂ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಎಸ್.ಬುರಡಿಕಟ್ಟಿ, ರಾಣಿಬೆನ್ನೂರಿನ ಇಂದ್ರಕುಮಾರ್ ಮತ್ತು ಹರ್ಷ ಅವರ ಸಂಗಡಿಗರಿಂದ ನಗರಸಭೆ ಕ್ರೀಡಾಂಗಣದಲ್ಲಿ ದಶಾವತಾರ ರೂಪದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. 29 ದಿನಗಳ ಕಾಲ ಗಣಪತಿಯ ಸಾರ್ವಜನಿಕ ದರ್ಶನಕ್ಕಾಗಿ ಅವಕಾಶ ಕಲ್ಪಿಸಿದ್ದು, ಸೆಪ್ಟಂಬರ್ 28ರಂದು ನಗರದಲ್ಲಿ ಶೋಭಾಯಾತ್ರೆಯ ಮೂಲಕ ವಿಸರ್ಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಾಗಲಕೋಟೆ: ಹಬ್ಬದ ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದ ಯುವಕನನ್ನು ಆತನ ಸ್ನೇಹಿತರೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಮಲ್ಲಮ್ಮ ನಗರದಲ್ಲಿ ನಡೆದಿದೆ.
ಮೃತ ಯುವಕನನ್ನು ಮೆಹಬೂಬ್(22) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಮೆಹಬೂಬ್ ಅನ್ನು ಆತನ ಸ್ನೇಹಿತ ಭದ್ರೇಶ್ ಹತ್ಯೆಗೈದಿದ್ದಾನೆ. ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮೆಹಬೂಬ್, ಪ್ರತಿ ಹಬ್ಬದ ದಿನಗಳಲ್ಲಿ ರಜೆ ಸಿಗುತ್ತಿದ್ದ ಹಿನ್ನೆಲೆಯಲ್ಲಿ ತನ್ನ ಊರಿಗೆ ಬರುತ್ತಿದ್ದನು. ಹೀಗೆ ಬಂದ ಮೆಹಬೂಬ್‍ನನ್ನು ಸ್ನೇಹಿತ ಭದ್ರೇಶ್ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತ ಮನೆಗೆ ಆಧಾರಸ್ತಂಭವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬ ಆಗ್ರಹಿಸಿದೆ.
ಕಳೆದ 5 ವರ್ಷದ ಹಿಂದೆ ಭದ್ರೇಶ್ ಮತ್ತು ಮೆಹಬೂಬ್ ನಡುವೆ ಸಣ್ಣ ಜಗಳವಾಗಿತ್ತು. ಇದೇ ಸೇಡು ಇಟ್ಟಕೊಂಡಿದ್ದ ಭದ್ರೇಶ್, ಮೊನ್ನೆ ರಾತ್ರಿ ಅಂಗನವಾಡಿ ಬಳಿ ಸ್ನೇಹಿತರೊಟ್ಟಿಗೆ ಕೂತಿದ್ದ ಮಹಬೂಬ್‍ಗೆ ಎದೆ, ಕುತ್ತಿಗೆ, ಹೊಟ್ಟೆ ಸೇರಿ ಹಲವೆಡೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಕಲ್ಲು ಎತ್ತಿ ಹಾಕಿದ್ದಾನೆ. ಸದ್ಯ ಭದ್ರೇಶ್‍ನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇತ್ತ ಮೆಹಬೂಬ್ ಕುಟುಂಬಸ್ಥರು ಶವವನ್ನು ಮುಧೋಳ ನಗರದ ಬಸ್ ನಿಲ್ದಾಣದ ಬಳಿ ಇರಿಸಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ಮೂಢನಂಬಿಕೆ ಇನ್ನೂ ಜೀವಂತ – ಸತ್ತ ಬಾಲಕನನ್ನು ಬದುಕಿಸಲು 8 ಗಂಟೆ ಉಪ್ಪಿನಲ್ಲಿಟ್ಟ ಗ್ರಾಮಸ್ಥರು
ಹಾವೇರಿ: ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದ್ದು, ಹಿಂದೂ-ಮುಸ್ಲಿಮರ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿದೆ.
ಗಜಾನನ ಯುವಕ ಮಂಡಳಿಯ ಸದಸ್ಯರು ಇಲ್ಲಿನ ಉಮಾಶಂಕರ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಗಣೇಶ ವಿಸರ್ಜನೆಯ ಮೆರವಣಿಗೆ ಎಂಜಿ ರಸ್ತೆಗೆ ಬಂದಾಗ ಅದೇ ಮಾರ್ಗದಲ್ಲಿ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರವನ್ನು ಕಬರಸ್ತಾನ ಕಡೆಗೆ ಹೊತ್ತೊಯ್ಯುತ್ತಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳ ಕೇಸ್ – 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ
ಕೊಪ್ಪಳ: ನಮ್ಮ ಜೀವನದಲ್ಲಿ ಯಾವುದೇ ವಿಘ್ನಗಳು ಬಾರದಿರಲಿ ಎಂದು ಜನರು ಗಣಪನನ್ನು ಪೂಜಿಸುತ್ತಾರೆ. ಆದರೆ ಕೊಪ್ಪಳದ ಊರೊಂದರಲ್ಲಿ ವಿಘ್ನೇಶನ ವಾಹನವಾಗಿರುವ ಇಲಿಗೂ ಒಂದು ದಿನ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಹೌದು, ನೇಕಾರಿಕೆಯನ್ನೇ ಜೀವಾಳವಾಗಿಸಿಕೊಂಡಿರುವ ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಇಲಿರಾಯನ ಪೂಜೆ ಬಲು ಸಂಭ್ರಮದಿಂದ ನಡೆಸಲಾಗಿದೆ. ಗಣೇಶ ಪ್ರತಿಷ್ಠಾಪನೆಯ ಮರುದಿನ ಪ್ರತಿ ವರ್ಷ ಇಲಿಗೆ ಪೂಜೆ ಸಲ್ಲಿಸಲಾಗುತ್ತದೆ. ನೇಕಾರರು ಸೇರಿದಂತೆ ಬೇರೆ, ಬೇರೆ ಸಮುದಾಯದ ಜನರ ಮನೆಗಳಲ್ಲಿ ಮಗ್ಗಗಳು ಇರುವುದರಿಂದ ಎಲ್ಲರೂ ಇಲಿಗೆ ಪೂಜೆ ಸಲ್ಲಿಸುತ್ತಾರೆ. ಗಣೇಶ ಹಬ್ಬಕ್ಕಿಂತ ಹೆಚ್ಚು ಶ್ರದ್ಧಾಭಕ್ತಿಯಿಂದ ಇಲಿರಾಯನನ್ನು ಆರಾಧಿಸುತ್ತಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಅಪಘಾತ – ಇನ್ಸ್‌ಪೆಕ್ಟರ್ ದಂಪತಿಯಿಂದ ಕಿರಿಕ್
ಚಿತ್ರಗಾರರ ಮನೆಯಲ್ಲಿ ತಯಾರಿಸಿದ ಮಣ್ಣಿನ ಇಲಿ ಮೂರ್ತಿಗಳನ್ನು ತಂದು ಪೂಜೆ ಮಾಡಲಾಗುತ್ತದೆ. ಮನೆಯಲ್ಲಿ ಓಡಾಡುವ ಇಲಿಗಳು ಮಗ್ಗಗಳ ನೂಲನ್ನು ಹಾಗೂ ಸೀರೆಗಳಿಗೆ ಹಾನಿ ಮಾಡದಿರಲಿ ಎಂಬ ಉದ್ದೇಶದೊಂದಿಗೆ ಈ ಪೂಜೆ ಮಾಡಲಾಗುತ್ತದೆ. ಅಲ್ಲದೇ ಹೀಗೆ ಪೂಜೆ ಮಾಡಿದರೆ ಇಲಿಗಳು ಕಾಟ ಕೊಡುವುದಿಲ್ಲ ಎಂಬ ನಂಬಿಕೆ ಇದೆ. ಹೀಗಾಗಿ ಕಡುಬು, ಚಕ್ಕುಲಿ, ಉಂಡೆ, ಕರ್ಜಿಕಾಯಿ, ಸಂಡಿಗೆ, ಹಪ್ಪಳ ಸೇರಿ ವಿವಿಧ ಅಡುಗೆ ಮಾಡಿ ನೈವೇದ್ಯ ಅರ್ಪಿಸಲಾಗುತ್ತದೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಸಾಕ್ಷ್ಯ ನಾಶ ಮಾಡಿದ್ರಾ ಮುರುಘಾ ಶ್ರೀ?
ಗಣೇಶ ಹಬ್ಬ ಬಂತು ಅಂದರೆ ಭಾಗ್ಯನಗರದಲ್ಲಿ ಆಚರಣೆಗಳು ಹಲವು ರೂಪಗಳಲ್ಲಿ ಕಂಡು ಬರುತ್ತವೆ. ಒಂದೊಂದು ಆಚರಣೆಯ ಹಿಂದೆಯೂ ಒಂದೊಂದು ಅರ್ಥವಿರುತ್ತದೆ ಎಂಬುದಕ್ಕೆ ಇಲಿಗೂ ಪೂಜೆ ಸಲ್ಲಿಸುವ ಪದ್ಧತಿ ಉದಾಹರಣೆಯಾಗಿದೆ.
Live Tv
[brid partner=56869869 player=32851 video=960834 autoplay=true]
ಲಕ್ನೋ: ಕೋಮು ಸಂಘರ್ಷದ ನಡುವೆ ಮುಸ್ಲಿಂ ಕುಟುಂಬವೊಂದು ಸಾಮರಸ್ಯವನ್ನು ಮೆರೆದಿದೆ. ಗಣೇಶ ಹಬ್ಬದ ಹಿನ್ನೆಲೆ ಅಲಿಘರ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು 7 ದಿನಗಳ ಕಾಲ ಮನೆಯಲ್ಲಿ ಗಣಪತಿಯನ್ನು ಕೂರಿಸಿ ಹಬ್ಬ ಆಚರಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳೆ, ನೀರಿನಲ್ಲಿ ಮುಳುಗಿಸುವ ಮುನ್ನ 7 ದಿನಗಳ ಕಾಲ ಗಣೇಶನ ಮೂರ್ತಿಯನ್ನು ಇಟ್ಟಿರುತ್ತೇವೆ. ನಾನು ಮತ್ತು ನನ್ನ ಕುಟುಂಬಸ್ಥರು ಪ್ರತಿದಿನ ಪೂಜೆ ಮಾಡಿ, ದೇವರಿಗೆ ಮೋದಕವನ್ನು ನೈವೇದ್ಯೆ ಮಾಡಿ ಇಡುತ್ತೇವೆ. ನನಗೆ ಗಣೇಶನ ಮೇಲೆ ಅಪಾರವಾದ ನಂಬಿಕೆ ಇದೆ. ಅಲ್ಲದೇ ಗಣೇಶ ಕೂರಿಸಲು ನನ್ನ ಮನೆಯವರು ವಿರೋಧ ವ್ಯಕ್ತಪಡಿಸಲಿಲ್ಲ. ನಾನು ಮತ್ತು ನನ್ನ ಕುಟುಂಬ ಎಲ್ಲಾ ಹಬ್ಬಗಳನ್ನು ಧರ್ಮದ ಭೇದವಿಲ್ಲದೆ ಆಚರಿಸುತ್ತೇವೆ. ನನ್ನ ಪತಿ ಆಸಿಫ್ ಖಾನ್ ಅವರು ಕೂಡ ನನ್ನ ನಂಬಿಕೆಯನ್ನು ಬೆಂಬಲಿಸುತ್ತಾರೆ ಮತ್ತು ಇಡೀ ಕುಟುಂಬ ಹಬ್ಬವನ್ನು ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ
ಗಣೇಶ ಚತುರ್ಥಿ ಹಿಂದೂ ಪಂಚಾಂಗದ ಪ್ರಕಾರ ತಿಂಗಳ ಭಾದ್ರಪದದ ನಾಲ್ಕನೇ ದಿನದಂದು ಪ್ರಾರಂಭವಾಗುತ್ತದೆ. ಮಹಾರಾಷ್ಟ್ರ, ಪಶ್ಚಿಮ ಮತ್ತು ದಕ್ಷಿಣ ಭಾರತದ ಹಲವೆಡೆ ಗಣೇಶನ ಆಶೀರ್ವಾದವನ್ನು ಪಡೆಯಲು ಲಕ್ಷಾಂತರ ಭಕ್ತರು ಒಟ್ಟಿಗೆ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ನೀಡದಿದ್ದರೆ, ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ಇಟ್ಟು ಧರಣಿ ಮಾಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದರು.
ತಾಲೂಕಿನ ಹಿರೇಬಾಗೆವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಮುಕ್ತವಾಗಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಹೀಗಾಗಿ ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ನೀಡಬೇಕು. ಡಿಜೆ ಹಾಕಬೇಡಿ, ಸೌಂಡ್ ಹಾಕಬೇಡಿ, ಅನುಮತಿ ಪಡೆಯಬೇಕು ಅಂತಾ ಕಿರಿಕಿರಿ ಮಾಡಬೇಡಿ ಎಂದು ಪೊಲೀಸರಿಗೆ ಮನವಿ ಮಾಡಿಕೊಂಡಿದರು. ಇದನ್ನೂ ಓದಿ: ಬ್ಲೇಡ್‍ನಿಂದ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು!
ಕೋವಿಡ್ ಕಾರಣದಿಂದಾಗಿ ಎರಡು ವರ್ಷ ಸಾರ್ವಜನಿಕ ಗಣೇಶೋತ್ಸವ ಆಗಿರಲಿಲ್ಲ. ಈ ವರ್ಷದಿಂದ ಮುಕ್ತವಾದ ಗಣೇಶೋತ್ಸವ ಕಾರ್ಯಕ್ರಮ ನಡೀತಿದೆ. ಸೌಂಡ್ ಸಿಸ್ಟಮ್, ಲೈಟಿಂಗ್‌ನವರಿಗೆ ಯಾವುದೇ ರೀತಿಯ ನಿರ್ಬಂಧ ಹಾಕಬಾರದು ಎಂದು ಹೇಳಿದರು.
ಸೌಂಡ್ ಸಿಸ್ಟಮ್, ಲೈಟಿಂಗ್‌ನವರು ಸಾಲಸೋಲ ಮಾಡಿ ಕಷ್ಟ ಅನುಭವಿಸಿದ್ದಾರೆ. ಸರ್ಕಾರ, ಪೊಲೀಸ್ ಇಲಾಖೆಗೆ ನಾನು ಹೇಳುತ್ತಿದ್ದೇನೆ. ಈ ಬಾರಿ ಗಣೇಶೋತ್ಸವದಿಂದ ಅವರ ಬದುಕಿಗೆ ಒಂದು ಆಧಾರ ಆಗುತ್ತದೆ. ಸ್ವತಂತ್ರವಾಗಿ ಆಚರಣೆಗೆ ಅವಕಾಶ ಕೊಡಿ. ಅವರ ಹೊಟ್ಟೆ ಮೇಲೆ ಕಲ್ಲು ಹಾಕಬೇಡಿ. ಡಿಜೆ ಸೀಜ್ ಮಾಡ್ತೀವಿ ಅಂತಾ ಹೆದರಿಸುವ ಪ್ರಕ್ರಿಯೆ ಮಾಡಬಾರದು. ವರ್ಷಕ್ಕೊಮ್ಮೆ ಡಿಜೆ ಹಾಕಿ ಆನಂದದಿಂದ ಹಬ್ಬದ ಆಚರಣೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಇಂದು ತನಿಖಾಧಿಕಾರಿ ಕೈಗೆ ವಿದ್ಯಾರ್ಥಿನಿಯರ ಹೇಳಿಕೆ – ಮುರುಘಾ ಶ್ರೀಗೆ ಸಿಗುತ್ತಾ ಜಾಮೀನು..?
ಸುಪ್ರೀಂ ಕೋರ್ಟ್ ಆಜ್ಞೆ ಬಗ್ಗೆ ನೀವು ಹೇಳುವುದಾದರೆ, ಪ್ರತಿ ದಿವಸ ಮಸೀದಿಗಳಲ್ಲಿ ಐದು ಬಾರಿ ನಮಾಜ್ ಮಾಡೋದು ಎಷ್ಟು ಕಿರಿಕಿರಿ ಆಗ್ತಿದೆ. ಒಂದೇ ಒಂದು ಮಸೀದಿಯ ಮೈಕ್ ಕೆಳಗಿಳಿಸಿ ಸೀಜ್ ಮಾಡಿದ್ದು ತೋರಿಸಿ. ನಿಮ್ಮ ಕಾನೂನು ಹಿಂದೂಗಳಿಗೆ ಮಾತ್ರ ಆಗುತ್ತಾ, ಮುಸ್ಲಿಮರಿಗೆ ಇಲ್ವಾ ಎಂದು ಪ್ರಶ್ನೆ ಮಾಡಿದ ಅವರು, ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಕೊಡಬೇಕು. ಇಲ್ಲದಿದ್ದರೆ ನಾನು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಹೇಳುತ್ತಿದ್ದೇನೆ. ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ. ಯಾರು ತಡೀತಾರೆ ನೋಡೋಣ. ಅಕಸ್ಮಾತ್ ತಡೆದರೆ, ಪೊಲೀಸ್ ಠಾಣೆ ಎದುರು ಗಣೇಶನ ಇಟ್ಟುಕೊಂಡು ಧರಣಿ ಮಾಡಿ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ: ವಿರೋಧಿಸಿದವರಿಗೆ ಛೀಮಾರಿ ಹಾಕಿದೆ. ನಮ್ಮ ಭಾವನೆಯನ್ನು ವಿರೋಧಿಸಿದವರಿಗೆ ಕಪಾಳಮೋಕ್ಷವಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬೆಳ್ಳಂಬೆಳಗ್ಗೆ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿದ್ದು, ಮುತಾಲಿಕ್ ತೆರಳಿ ವಿಘ್ನ ನಿವಾರಕನ ದರ್ಶನ ಪಡೆದಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ. ನಿನ್ನೆ ರಾತ್ರಿ ಆನಂದದ ಸಂಗತಿ ಸಿಕ್ಕಿತು. ನ್ಯಾಯಾಲಯ ಮೂಲಕ ಸಿಹಿ ಸಂಗತಿ ಸಿಕ್ಕಿದೆ. ಈ ಜಾಗ ಸರ್ಕಾರಕ್ಕೆ ಸೇರಿದೆ, ಇದೊಂದು ಐತಿಹಾಸಿಕ ದಿನ ಎಂದರು.
ಉತ್ಸವ ಆರಂಭಿಸಿ 129 ವರ್ಷವಾಗಿದೆ. ಬ್ರಿಟೀಷರು ವಿರೋಧ ಮಾಡಲಿಲ್ಲ. ಆದರೆ ಕಾಂಗ್ರೆಸ್ ನವರು ಕುಮ್ಮಕ್ಕು ಕೊಟ್ಟು ಮುಸ್ಲಿಮರನ್ನು ಕೋರ್ಟ್ ಗೆ ಕಳಿಸುತ್ತಿದ್ದಾರೆ. ಇವತ್ತು ಕೋರ್ಟ್ ಗೆ ಹೋಗಿ ತಡೆಯಲು ಯತ್ನಿಸುತ್ತಿದ್ದಾರೆ. ನಿಮಗೆ ಗಣೇಶನ ಶಾಪ ತಟ್ಟುತ್ತೆ ನೀವು ಸರ್ವನಾಶವಾಗುತ್ತಿರಿ. ನೀವು ಯಾವುದೇ ಕೋರ್ಟ್ ಗೆ ಹೋಗಿ ಏನು ಮಾಡೋದಕ್ಕೆ ಆಗಲ್ಲ ಎಂದು ಮುತಾಲಿಕ್ ವಾಗ್ದಾಳಿ ನಡೆಸಿದರು.
ಈಗಾಗಲೇ ಗಣಪನ ಪ್ರತಿಷ್ಠಾಪನೆ ಆಗಿದ್ದು, ಪೂಜೆಯೂ ಆಗಿದೆ. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಆಚರಣೆ ವಿರೋಧಿಸಿದ್ದಾರೆ. ನೀವು ಹಿಂದೂ ಆಗಿ ವಿರೋಧಿಸುತ್ತೀರಾ?. ನೀವು ಬೆಂಬಲ ಕೊಡಬೇಕಿತ್ತು. ಇದಕ್ಕೆ ಚುನಾವಣೆಯಲ್ಲಿ ನಿಮ್ಮನ್ನೂ ವಿಸರ್ಜನೆ ಮಾಡುತ್ತೇವೆ. ಅವರಿಗೆ ಮತ ಹಾಕದಂತೆ ಪ್ರಚಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಇದೇ ಬೇಳೆ ಮೆರವಣಿಗೆ ಮಾಡದೇ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದಕ್ಕೆ ಕಾಂಗ್ರೆಸ್ ಕಾರಣ. ಅವರೇ ಇಂಥದ್ದೊಂದು ಸಮಸ್ಯೆಗೆ ಕಾರಣವಾಗಿದೆ. ಮುಸ್ಲಿಂ ಕಿಡಿಗೇಡಿಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ. ವಕ್ಫ್ ಬೋರ್ಡ್ ಶಫಿ ಆಸಾದ್ ನನ್ನು ಸಸ್ಪೆಂಡ್ ಮಾಡಬೇಕು. ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದಿಂದ ಒದ್ದು ಕಿತ್ತೊಗೆಯಬೇಕು ಎಂದು ಆಗ್ರಹಿಸಿದದರು.
Live Tv
[brid partner=56869869 player=32851 video=960834 autoplay=true]
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ.
ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.
ಚಂದ್ರನನ್ನು ಯಾಕೆ ನೋಡಬಾರದು?:
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬಂದನು. ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖ, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ನೆತ್ತಿಗೇರುತ್ತೆ. ಇದನ್ನೂ ಓದಿ:ಗಣೇಶ ಚತುರ್ಥಿಗೆ ಸಂಬಂಧಿಸಿದ ಸುದ್ದಿ ಓದಲು ಕ್ಲಿಕ್ ಮಾಡಿ
ಅಲ್ಲದೇ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ.. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು.. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಅಂತ ಗಣಪತಿ ಚಂದ್ರನಿಗೆ ಶಾಪ ಹಾಕುತ್ತಾನೆ.
ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ. ಇದನ್ನೂ ಓದಿ:ಗಣೇಶ ಮೋದಕ ಪ್ರಿಯ ಯಾಕೆ?
ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದ್ರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.
ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.
Live Tv
[brid partner=56869869 player=32851 video=960834 autoplay=true]
ಒಂದು ಸಾರಿ ಯಮಲೋಕದಲ್ಲಿ ಉತ್ಸವ ನಡೆದಿತ್ತು. ಉತ್ಸವದಲ್ಲಿ ಅಪ್ಸರೆಯರು ಮತ್ತು ನರ್ತಕಿಯರು ನೃತ್ಯ ಮಾಡುತ್ತಿದ್ದರು. ತಿಲೋತ್ತೆಮೆ ನೃತ್ಯ ಕಂಡ ಯಮ ಮೋಹಿತನಾದನು. ಯಮ ಅನುರಕ್ತನಾದ ಪರಿಣಾಮ ತಿಲೋತ್ತಮೆಯ ಗರ್ಭದಲ್ಲಿ ಭಯಂಕರ, ಕ್ರೂರ ಮತ್ತು ವಿಕಾರವಾದ ಅನಲಾಸುರ ಎಂಬ ರಾಕ್ಷಸ ಹುಟ್ಟಿಕೊಂಡನು. ಅನಲಾಸುರ ಹೋದ ಸ್ಥಳದಲ್ಲಿ ಅಗ್ನಿ ನಿರ್ಮಾಣವಾಗಿ ಎಲ್ಲವೂ ಭಸ್ಮವಾಗುತಿತ್ತು. ಇಂತಹ ಭಯಂಕರ ರಾಕ್ಷಸ ದೇವತೆಗಳನ್ನು ಬೆನ್ನಟ್ಟಲು ಆರಂಭಿಸಿದನು.
ಅನಲಾಸುರನಿಂದ ಭಯಭೀತರಾದ ದೇವತೆಗಳು ಗಜಾನನ್ನು ಪ್ರಾರ್ಥಿಸಲು ಆರಂಭಿಸಿದರು. ಆಗ ಗಜಾನನ ಬಾಲ ರೂಪದಲ್ಲಿ ದೇವತೆಗಳ ಮುಂದೆ ಪ್ರತ್ಯಕ್ಷನಾಗಿ ಅನಲಾಸುರನನ್ನು ವಧೆ ಮಾಡಲಾಗುವುದು ಎಂದು ಭರವಸೆ ನೀಡಿದನು. ಅಷ್ಟರಲ್ಲಿ ದಶ ದಿಕ್ಕುಗಳನ್ನು ಭಸ್ಮ ಮಾಡುತ್ತ ಅನಲಾಸುರ ದೇವತೆಗಳ ಬಳಿ ಬಂದನು. ಎಲ್ಲ ದೇವತೆಗಳು ಭಯಗೊಂಡು ಅತ್ತಿತ್ತ ಓಡಾಡ ತೊಡಗಿದರು. ಇದನ್ನೂ ಓದಿ: ಗಣೇಶ ಮೋದಕ ಪ್ರಿಯ ಯಾಕೆ?
ಬಾಲಗಣೇಶ ಮಾತ್ರ ನಿಂತಲ್ಲಿಯೇ ನಿಂತಿದ್ದನು. ಗಜಾನನ ಬಳಿ ಬಂದ ಅನಲಾಸುರ ಬಾಲಗಣೇಶನನ್ನು ನುಂಗಲು ಮುಂದೆ ಬಂದನು. ಅಷ್ಟರಲ್ಲಿಯೇ ಬಾಲ ಗಣೇಶ ದೈತ್ಯ ರೂಪ ತಾಳಿ ಅನಲಾಸುರನ್ನು ನುಂಗಿ ಬಿಟ್ಟನು. ಸಾಕ್ಷಾತ್ ಅಗ್ನಿ ಸ್ವರೂಪನಾದ ಅನಲಾಸುರನನ್ನು ನುಂಗಿದ್ದರಿಂದ ಗಜಾನನ ಶರೀರದಲ್ಲಿ ದಾಹ ಉದ್ಭವಿಸಿತು. ಇದನ್ನೂ ಓದಿ: ಗೌರಿ ಹಬ್ಬ ಆಚರಣೆ ಯಾಕೆ ಬಂತು?
ಗಣೇಶನ ಬಳಿ ಬಂದ ಸರ್ವ ದೇವತೆಗಳು ಆತನ ದಾಹವನ್ನು ಉಪಶಮನಿಸಲು ವಿವಿಧ ಉಪಾಯಗಳನ್ನು ಮಾಡಿದರು. ಇಂದ್ರದೇವ ಶೀತಲ ಚಂದ್ರ ಮತ್ತು ಅಮೃತವನ್ನು ಗಜಾನನ ತಲೆಯ ಮೇಲಿಟ್ಟರೂ ದಾಹ ಕಡಿಮೆಯಾಗಲಿಲ್ಲ. ಬ್ರಹ್ಮ ಸಿದ್ಧಿ ಮತ್ತು ಬುದ್ಧಿ ಎಂಬ ಮಾನಸ ಕನ್ಯೆಗಳನ್ನು ನೀಡಿದರೆ, ವಿಷ್ಣು ತನ್ನ ಕೈಯಲ್ಲಿದ್ದ ತಂಪಾದ ಕಮಲ ನೀಡಿದ. ವರುಣ ದೇವ ತಂಪಾದ ಜಲಾಭಿಷೇಕ ಮಾಡಿದ. ಪರಮೇಶ್ವರ ತನ್ನ ಶೇಷನಾಗನನ್ನು ಗಣೇಶನ ಹೊಟ್ಟೆಯ ಮೇಲೆ ಸುತ್ತಿದ. ದೇವತೆಗಳು ಎಲ್ಲಾ ರೀತಿಯಿಂದಲೂ ಉಪಾಯ ಮಾಡಿದರೂ ಗಜಾನನ ದಾಹ ಮಾತ್ರ ಕಡಿಮೆಯಾಗಲಿಲ್ಲ. ಇದನ್ನೂ ಓದಿ:ಚೌತಿ ದಿನ ಚಂದ್ರನನ್ನು ನೋಡಿದ್ದಕ್ಕೆ ‘ಕಳ್ಳ’ನಾದ ಕೃಷ್ಣ
ಕೊನೆಗೆ 88 ಸಹಸ್ರ ಮುನಿಗಳು 21 ಹಚ್ಚ ಹಸಿರಾದ ದ್ರುವ (ಗರಿಕೆ) ಗಣೇಶನ ಮಸ್ತಕದ ಮೇಲೆ ಸುರಿದರು. ಆಗ ಗಜಾನನ ದಾಹ ಕಡಿಮೆ ಆಯ್ತು. ಇದರಿಂದ ಗಣೇಶ ಪ್ರಸನ್ನಗೊಂಡು, ಅನೇಕ ಉಪಾಯದಿಂದ ನನ್ನ ಅಂಗದ ದಾಹ ಕಡಿಮೆ ಆಗಲಿಲ್ಲ. ದ್ರುವದಿಂದ ಮಾತ್ರ ನನ್ನ ಅಂಗದ ದಾಹ ಕಡಿಮೆ ಆಯ್ತು. ಇನ್ನ್ಮುಂದೆ ನನಗೆ ದ್ರುವ ಅರ್ಪಣೆ ಮಾಡುವವರಿಗೆ ಸಾವಿರಾರು ಯಜ್ಞ, ವ್ರತ, ತೀರ್ಥಯಾತ್ರೆ ಮತ್ತು ದಾನ ಮಾಡಿದ ಪುಣ್ಯ ಲಭಿಸಲಿದೆ ಎಂದು ಹೇಳಿದ. ಹೀಗಾಗಿ ಈಗಲೂ ಗಣಪತಿಗೆ ಗರಿಕೆಯನ್ನು ಇಟ್ಟು ಪೂಜೆ ಮಾಡಲಾಗುತ್ತದೆ.
Live Tv
[brid partner=56869869 player=32851 video=960834 autoplay=true]