Tag: ಗವಿಗಂಗಾಧರೇಶ್ವರ ದೇವಾಲಯ

  • ಸೋಮವಾರ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರ ದೇಗುಲ

    ಸೋಮವಾರ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರ ದೇಗುಲ

    ಬೆಂಗಳೂರು: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ (Makar Sankranti) ಕ್ಷಣಗಣನೆ ಆರಂಭವಾಗಿದೆ. ಸಂಕ್ರಾತಿ ದಿನದಂದೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ (Gavi Gangadhareshwara Temple) ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.

    ಈ ದಿನ ಸೂರ್ಯರಶ್ಮಿ ಶಿವನನ್ನು ಸ್ಪರ್ಶಿಸುವ ವಿಶೇಷ ಕೌತುಕ ನಡೆಯಲಿದೆ. ಸೂರ್ಯ ದಕ್ಷಿಣಪಥ ದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಶಿವನ ಮೂರ್ತಿಯನ್ನು ಸ್ಪರ್ಶಿಸಲಿದ್ದಾನೆ. ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಹೊಸ ವರ್ಷದ ಭವಿಷ್ಯ ಇರಲಿದೆ ಅನ್ನೋದು ನಂಬಿಕೆ.

    ದೇವಸ್ಥಾನದಲ್ಲಿ ಬೆಳಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ಓಪನ್ ಇರಲಿದ್ದು, ನಂತ್ರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುದಿಲ್ಲ ಸಂಜೆ ಸೂರ್ಯರಶ್ಮಿ ಲಿಂಗವನ್ನ ಸ್ಮರ್ಶಿಸಿದ ನಂತ್ರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ. ಇದನ್ನೂ ಓದಿ: ಪಂಚೆ ಧರಿಸಿ ಪೊಂಗಲ್‌ ಆಚರಿಸಿದ ಪ್ರಧಾನಿ ಮೋದಿ- ವೀಡಿಯೋ ವೈರಲ್‌

    ಭಕ್ತಾಧಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಇರಲಿದೆ. ದೇವರನ್ನ ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನ ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಪ್ರವೇಶ ಇರುವುದಿಲ್ಲ ಎಂದು ದೇವಾಲಯದ ಪ್ರಧಾನ ಆರ್ಚಕ ಸೋಮಸುಂದರ್ ದೀಕ್ಷೀತ್ ಮಾಹಿತಿ ನೀಡಿದ್ದಾರೆ.

  • ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಸ್ಮಯ – ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶ

    ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಸ್ಮಯ – ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶ

    ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು (Makar Sankranti) ಬಸವನಗುಡಿಯ (Basavanagudi) ಗವಿಗಂಗಾಧರೇಶ್ವರ ದೇವಾಲಯದಲ್ಲಿ (Gavigangadhareshwara Temple) ಸೂರ್ಯ ರಶ್ಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿದ್ದು, ಈ ವಿಸ್ಮಯ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

    ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯವನ್ನು ನೋಡಲು ಭಕ್ತ ಸಾಗರವೇ ನೆರೆದಿರುತ್ತದೆ. ಸೂರ್ಯ ರಶ್ಮಿ ಸಂಜೆ 4.58ಕ್ಕೆ ಗರ್ಭಗುಡಿಯ ನಂದಿಯ ಬೆನ್ನಿನ ಭಾಗವನ್ನು ಸ್ಪರ್ಶಿಸಿದ್ದು, ಬಳಿಕ ನಂದಿಯ ಕೊಂಬುಗಳ ಮಧ್ಯೆ ಹಾದು ಲಿಂಗವನ್ನು ತಲುಪಿದೆ. ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶಿಸುತ್ತಲೇ ಗಂಗಾಧರನಿಗೆ ದೀಪಾರಾಧನೆ ಪ್ರಾರಂಭವಾಗಿದೆ.

    ಇದು 30-40 ಸೆಕೆಂಡುಗಳ ಕಾಲ ಮಾತ್ರವೇ ಕಾಣಿಸಿಕೊಳ್ಳುವ ವಿಸ್ಮಯವಾಗಿದೆ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಪಥ ಬದಲಾಯಿಸುತ್ತಿದ್ದಂತೆ ಗವಿಗಂಗಾಧರೇಶ್ವರನ ಮೇಲೆ ಸೂರ್ಯನ ಕಿರಣಗಳು ಬೀಳುತ್ತದೆ. ಇದನ್ನೂ ಓದಿ: ಯೋಗದಲ್ಲಿ ಕರ್ನಾಟಕ ಗಿನ್ನಿಸ್ ದಾಖಲೆ – ಏಕಕಾಲಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಯೋಗಾಭ್ಯಾಸ

    ಈ ವಿಸ್ಮಯ ಕಣ್ತುಂಬಿಸಿಕೊಳ್ಳಲು ದೇವಸ್ಥಾನದ ಹೊರ ಭಾಗದಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ಟೆಂಟ್, ಶಾಮಿಯಾನದ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿತ್ತು. ಇದನ್ನೂ ಓದಿ: ಈ ತಿಂಗಳಾಂತ್ಯಕ್ಕೆ ಮತ್ತೆ ಅಮಿತ್ ಶಾ ಎಂಟ್ರಿ – ಸಂಕ್ರಾಂತಿ ಬಳಿಕ ಕ್ರಾಂತಿಗೆ ವೇದಿಕೆ ಸಿದ್ಧ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k