Tag: ಗಾಂಜಾ ಮಾರಾಟ

  • ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    ಮಡಿಕೇರಿ: ಅಕ್ರಮ ಗಾಂಜಾ (Drugs) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.

    ಬೇತು ಗ್ರಾಮದ ನಿವಾಸಿ ಹಕ್ ಎಂ.ಬಿ (31) ಹಾಗೂ ಎಂ.ಬಾಡಗ ಗ್ರಾಮದ ನಿವಾಸಿ ಬಿ.ಎಂ.ರಶೀದ್ (23) ಬಂಧಿತ ಆರೋಪಿಗಳು. ಇವರಿಬ್ಬರೂ ಕೊಡಗು (Kodagu) ಜಿಲ್ಲಾ ವ್ಯಾಪ್ತಿಯ ಮಡಿಕೇರಿ ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು, ಇವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸೇತುವೆ ಮೇಲಿನಿಂದ ಹಾರಿ ವ್ಯಕ್ತಿ ಸಾವು

    ಮಡಿಕೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿತ್ತು. ಇದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗದ ಡಿಎಸ್‌ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತದ ಸಿಪಿಐ ಉಮೇಶ್ ಉಪ್ಪಳಿಕೆ, ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂ.ಶ್ರೀನಿವಾಸ ಹಾಗೂ ಸಿಬ್ಬಂದಿ ಮತ್ತು ಡಿಸಿಆರ್‌ಬಿ ಸಿಬ್ಬಂದಿ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಇದನ್ನೂ ಓದಿ: ಸೈಟ್ ವಿಚಾರಕ್ಕೆ ಗ್ರಾಮಪಂಚಾಯ್ತಿ ಸಿಬ್ಬಂದಿಯಿಂದ ಮಹಿಳೆಗೆ ಚಾಕು ಇರಿತ

    ಈ ಸಂದರ್ಭ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ರಸ್ತೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ 683 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಿವಿಧ ಬ್ರ‍್ಯಾಂಡ್‌ಗಳ ನಕಲಿ ಪಾನ್‌ಮಸಾಲಾ ತಯಾರಿಕೆ – ಘಟಕದ ಮೇಲೆ ಬೀದರ್ ಪೊಲೀಸರು ದಾಳಿ

  • ಶಿರಸಿಯಲ್ಲಿ ಗಾಂಜಾ ನಶೆ – ಬಯಲಾಯ್ತು 12 ಮಂದಿ ಗುಟ್ಟು

    ಶಿರಸಿಯಲ್ಲಿ ಗಾಂಜಾ ನಶೆ – ಬಯಲಾಯ್ತು 12 ಮಂದಿ ಗುಟ್ಟು

    ಕಾರವಾರ: ಶಿರಸಿಯಲ್ಲಿ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿ  ಪೊಲೀಸರು ಕಳೆದ ಎರಡು ದಿನದ ಹಿಂದೆ ನಗರದ ವಿವಿಧ ಭಾಗದಲ್ಲಿ ದಾಳಿ ನಡೆಸಿ 15 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿತ್ತು. 12 ಜನರು ಗಾಂಜಾ ಸೇವನೆ ಮಾಡಿರುವುದು ಇಂದು ವೈದ್ಯಕೀಯ ಪರೀಕ್ಷೆಯಿಂದ ದೃಢವಾಗಿದೆ.

    ಗಾಂಜಾ ಸೇವನೆ ಮತ್ತು ಪೆಡ್ಲರ್ ಪ್ರಕರಣ ಸಂಬಂಧ ಶಿರಸಿ ಮಾರುಕಟ್ಟೆ ಪೊಲೀಸರು ದಾಳಿ ಮಾಡಿ 15 ಜನರನ್ನು ವೈದ್ಯಕೀಯ ತಪಾಸಣೆಗೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದರು. ಇದೀಗ 12 ಜನರ ಸೇವನೆ ಬಗ್ಗೆ ದೃಢಪಟ್ಟಿರುವುದು ಶಿರಸಿಯಲ್ಲಿ ಗಾಂಜಾ ಸೇವನೆ ಪ್ರಕರಣ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮುರುಡೇಶ್ವರಕ್ಕೆ ಐಸಿಸ್ ಕಣ್ಣು- ದೇವಾಲಯಕ್ಕೆ ವಿಶೇಷ ಪೊಲೀಸ್ ಭದ್ರತೆ ವ್ಯವಸ್ಥೆ

    ಕಳೆದ ಮೂರು ತಿಂಗಳಿಂದ ಶಿರಸಿ ಶಾಲಾ, ಕಾಲೇಜುಗಳ ಕ್ರೀಡಾಂಗಣ, ಬಸ್ ನಿಲ್ದಾಣಗಳಲ್ಲಿ ಗಾಂಜಾ ಮಾರಾಟ ಮಾಡುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಲವರನ್ನು ಬಂಧಿಸಿದ್ದರು. ಶಾಲಾ ,ಕಾಲೇಜು ವಿದ್ಯಾರ್ಥಿಗಳೇ ಹೆಚ್ಚು ಗಾಂಜಾ ಮತ್ತಿನ ದಾಸರಾಗಿದ್ದರು. ಈ ಬಗ್ಗೆ ಶಿರಸಿ ಪೊಲೀಸರು ಗಂಭೀರವಾಗಿ ತೆಗೆದುಕೊಂಡು ಎರಡು ದಿನದ ಹಿಂದೆ ಬೆಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಇದರಿಂದಾಗಿ ಇದೀಗ ಶಿರಸಿ ಪಟ್ಟಣದಲ್ಲಿ ಗಾಂಜಾ ಮಾರಾಟ, ಸೇದುವ ಜನರಲ್ಲಿ ಭಯ ಮೂಡಿದೆ. ಶಿರಸಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಗೆ ಜನರು ಶ್ಲಾಘಿಸಿದ್ದಾರೆ.

  • ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ – ಓರ್ವ ಮಹಿಳೆ ಸೇರಿ ನಾಲ್ವರ ಬಂಧನ

    ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ – ಓರ್ವ ಮಹಿಳೆ ಸೇರಿ ನಾಲ್ವರ ಬಂಧನ

    ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ನಗರ ಪೊಲೀಸರು ಬಂಧಿಸಿದ್ದಾರೆ

    ಹಳೇ ಹುಬ್ಬಳ್ಳಿ ನಿವಾಸಿಗಳಾದ ಮಹಮ್ಮದ್ ರಫೀಕ್, ಗುಲ್ಜಾರ್ ಬೇಗಂ, ಕಮರಿಪೇಟೆಯ ರಾಜು ಹರಿಣಶಿಖಾರಿ ಹಾಗೂ ಲಕ್ಷ್ಮಣ ಹನುಮಸಾಗರ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಸುಮಾರು ಒಂದು ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಬಂಧಿಸಿದ್ದು ಹೇಗೆ?
    ಹುಬ್ಬಳ್ಳಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ್, ಡಿಸಿಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ ಪ್ರತಿ ತಿಂಗಳು ಒಂದು ವಾರ ‘ಗಾಂಜಾ ರೌಂಡ್ಸ್’ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಈ ವಾರ ಗಾಂಜಾ ಪೂರೈಕೆ ಮಾಡುವವರಿಗೆ ಪೊಲೀಸರು ಬಲೆ ಬೀಸಿದ್ದರು. ವಿವಿಧ ಮೂಲಗಳಿಂದ ಮಾಹಿತಿ ಪಡೆದಿದ್ದ ಪೊಲೀಸರು, ನಾಲ್ವರ ಮೇಲೆ ದಾಳಿ ಮಾಡಿ ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಹಳೇ ಹುಬ್ಬಳ್ಳಿ ಹಾಗೂ ಕಮರಿಪೇಟೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv