Tag: ಗಾಂಧಿಗಂಜ್ ಪೊಲೀಸ್ ಠಾಣೆ

  • ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

    ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

    – ತಳ್ಳಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರ ಆರೋಪ

    ಬೀದರ್: ಮನೆಗೆ ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ.

    ಮೃತ ಯುವಕನನ್ನು ಮೂಲತಃ ಬೀದರ್ (Bidar) ತಾಲೂಕಿನ ಮಂದಕನಹಳ್ಳಿ ಗ್ರಾಮದ 24 ವರ್ಷದ ಇಮಾವೇಲ್ ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಬ್ರೀಮ್ಸ್ (BRIMS) ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.ಇದನ್ನೂ ಓದಿ: ನಾನು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ: ದೂರಿನ ಬೆನ್ನಲ್ಲೇ ಸಚಿವ ಬೋಸರಾಜು ಸ್ಪಷ್ಟನೆ

    ಯುವಕ ಮೂರನೇ ಮಹಡಿಗೆ ಹೋಗುವುದಿಲ್ಲ ಎಂದು ಹೇಳಿದ್ದರೂ ಕೂಡ ಒತ್ತಾಯ ಪೂರ್ವಕವಾಗಿ ಕಳುಹಿಸಿದ್ದಾರೆ. ಬಳಿಕ ಆತ ಪೇಟಿಂಗ್ ಮಾಡುವಾಗ ಮನೆಯ ಮಾಲೀಕ, ಗುತ್ತಿಗೆದಾರ ಹಾಗೂ ಎಂಜಿನಿಯರ್ ಸೇರಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಮರಣೋತ್ತರ ಪರೀಕ್ಷೆ ವೇಳೆ ಶವವನ್ನು ನೋಡಲು ಒಳಗಡೆ ಬಿಡಿ ಎಂದು ಕುಟುಂಬಸ್ಥರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟಿದೆ. ಈ ವೇಳೆ ಶವಾಗಾರದ ಸಿಬ್ಬಂದಿಯೊಂದಿಗೆ ಕೂಡ ಗಲಾಟೆ ಮಾಡಿಕೊಂಡಿದ್ದಾರೆ. ಮನೆಯ ಮಾಲೀಕ, ಗುತ್ತಿಗೆದಾರ ಹಾಗೂ ಎಂಜಿನಿಯರ್‌ನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸದ್ಯ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ (Gandhi Gunj Police Station) ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಇನ್ನೂ 3 ದಿನಗಳ ಕಾಲಾವಕಾಶವಿದೆ, ಸ್ಪರ್ಧೆ ಬಗ್ಗೆ ಚಿಂತನೆ ಮಾಡ್ತೀನಿ: ಡಿಕೆ ಸುರೇಶ್