Tag: ಗಾಂಧಿನಗರ

  • ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಹಣ ತರಲ್ಲ – ಸಿಎಂ

    ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಹಣ ತರಲ್ಲ – ಸಿಎಂ

    ಬೆಂಗಳೂರು: ಸಂಸದರು ಕೇಂದ್ರದ ಬಳಿ ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ದಕ್ಷಿಣದಲ್ಲಿ ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ (Tejaswi Surya) ಕೂಡ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು.

    ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್‌ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಿ.ವಿ.ಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್‌ನಲ್ಲಿ ಭೂಮಿ ಪೂಜೆ ನೆರವೇರಿಸಿದರು.ಇದನ್ನೂ ಓದಿ: ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ

    ಬಳಿಕ ಮಾತನಾಡಿದ ಅವರು, ಸಂಸದರು ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರು ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ. ಮಂತ್ರಿ ಆಗಿರುವ ಕುಮಾರಸ್ವಾಮಿ ಕೂಡ ಕೇಂದ್ರದ ಬಳಿ ಹಣ ಕೇಳಿಲ್ಲ. ಅದಕ್ಕೆ ಕುಮಾರಸ್ವಾಮಿ ಸೇರಿ ಎಲ್ಲ ಎಂಪಿಗಳನ್ನು ಸೋಲಿಸಿ ಎಂದು ಕರೆ ನೀಡಿದರು.

    ಪ್ರಧಾನಿ ಮೋದಿಗೆ ಕರ್ನಾಟಕದ ಮೇಲೆ ದ್ವೇಷವಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಣ ಬರಲ್ಲ. ನಾವು ಕೊಟ್ಟ ತೆರಿಗೆ ಹಣವೂ ವಾಪಸ್ ಕೊಡಲ್ಲ. ಕೇಂದ್ರಕ್ಕೆ ತೆರಿಗೆ ರೂಪದಲ್ಲಿ ಒಂದು ರೂಪಾಯಿ ಕೊಡ್ತೇವೆ. ಆದರೆ ನಮಗೆ ಕೇಂದ್ರದಿಂದ 14-15 ಪೈಸೆ ತೆರಿಗೆ ವಾಪಾಸ್ ಬರುತ್ತದೆ ಅಷ್ಟೇ. ಇನ್ನೂ ಬಿಜೆಪಿಯವರು ಕೇಂದ್ರದ ಹಣ ಅಂತಾರೆ. ಬಿಜೆಪಿಯವರು ಜಿಎಸ್‌ಟಿ ಇಳಿಕೆಯನ್ನ ದೀಪಾವಳಿ ಗಿಫ್ಟ್ ಅಂತಾ ಬ್ಯಾನರ್ ಹಾಕಿಕೊಳ್ಳುತ್ತಾರೆ. ಎಂಟು ವರ್ಷ ತೆರಿಗೆ ವಸೂಲಿ ಮಾಡಿ ಈಗ ದೀಪಾವಳಿ ಗಿಫ್ಟ್ ಅಂತೆ. ಯಾವ ದೀಪಾವಳಿ ಗಿಫ್ಟ್ ಅಪ್ಪ ಇದು ಎಂದು ಟಾಂಗ್ ಕೊಟ್ಟರು.

    ಈ ವೇಳೆ ಗಾಂಧಿನಗರ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಯೋಜನೆ ಇಲಾಖೆ ಸಚಿವರಾದ ಡಿ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್, ಶಾಸಕರಾದ ವೆಂಕಟೇಶ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಇದನ್ನೂ ಓದಿ: ದೀಪಾವಳಿ ಹಬ್ಬ | ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್‌!

  • ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರ ಕದ್ದ ಖದೀಮರು – ಕಳ್ಳರ ಕರಾಮತ್ತಿನ ವಿಡಿಯೋ ಸೆರೆ

    ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರ ಕದ್ದ ಖದೀಮರು – ಕಳ್ಳರ ಕರಾಮತ್ತಿನ ವಿಡಿಯೋ ಸೆರೆ

    ಬೆಂಗಳೂರು: ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರವನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ಗಾಂಧಿನಗರದ ಹೋಟೆಲ್ ಮುಂಭಾಗದ ಬಳಿ ನಡೆದಿದೆ.

    ವಿಜಯಪುರ ಮೂಲದ ಗೋವಿಂದಗೌಡ ಅವರು ವೈಯಕ್ತಿಕ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದಾಗ ಶನಿವಾರ ರಾತ್ರಿ ಗಾಂಧಿನಗರ ಹೋಟೆಲ್ ಬಳಿ ಕಾರು ನಿಲ್ಲಿಸಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದಿದ್ದ ಮೂವರು, ಕಾರಿಗೆ ಜಾಕ್ ಹಾಕಿ ನಾಲ್ಕು ಚಕ್ರಗಳನ್ನ ಬಿಚ್ಚಿ, ಚಕ್ರಗಳಿಗೆ ಸಿಮೆಂಟ್ ಕಲ್ಲುಗಳನ್ನು ಇಟ್ಟು ಪರಾರಿಯಾಗಿದ್ದಾರೆ.ಇದನ್ನೂ ಓದಿ: ಜಿಯೋ ಗ್ರಾಹಕರಿಗೆ ಮಾತ್ರ ಐಪಿಎಲ್‌ ವೀಕ್ಷಣೆ ಉಚಿತ! – ಎಷ್ಟು ರಿಚಾರ್ಜ್‌ ಮಾಡಿದ್ರೆ ಫ್ರೀ?

    ಹೋಟೆಲ್‌ನಲ್ಲಿದ್ದ ಯಾತ್ರಿಕರು ಕಳ್ಳತನದ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದು, ಕಳ್ಳರ ಕಳ್ಳತನ ಮಾಡುತ್ತಿರುವ ವಿಡಿಯೋ ಸೆರೆಯಾಗಿದೆ. ಸದ್ಯ ಕಾರು ಮಾಲೀಕ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಚಕ್ರಗಳನ್ನು ಕದ್ದ ಕಳ್ಳರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಈ ಕುರಿತು ʻಪಬ್ಲಿಕ್‌ ಟಿವಿʼಗೆ ಪ್ರತಿಕ್ರಿಯಿಸಿದ ಅವರು, ನಾನು ಶನಿವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿದ್ದು, ಕೆಲಸ ಮುಗಿಸಿ ಇಲ್ಲಿಗೆ ಬರುವಾಗ ನನ್ನ ಸ್ನೇಹಿತ ಕಾರು ನಿಮ್ಮ ಬಳಿ ಇರಲಿ ಎಂದು ಬಿಟ್ಟು ಹೋಗಿದ್ದರು. ಆದರೆ ಭಾನುವಾರ ಬೆಳಿಗ್ಗೆ ನೋಡಿದಾಗ ಕಾರಿನ ನಾಲ್ಕು ಚಕ್ರ ಇರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ನಾನು ತಂಗಿದ್ದ ಹೋಟೆಲ್‌ನಲ್ಲಿಯೇ ಇದ್ದ ತಮಿಳುನಾಡು ಮೂಲದ ಓರ್ವ, ಟೈಯರ್‌ ಕದಿಯುತ್ತಿರುವ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದು, ಪೊಲೀಸರು ಬಂದಾಗ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ‘ಡೆವಿಲ್’ ಸಿನಿಮಾದಲ್ಲಿನ ಪಾತ್ರದ ಬಗ್ಗೆ ಅಪ್‌ಡೇಟ್ ಕೊಟ್ಟ ಶರ್ಮಿಳಾ ಮಾಂಡ್ರೆ

     

  • ಅಮ್ಮನ ಅಕ್ರಮ ಸಂಬಂಧದಿಂದ ರೊಚ್ಚಿಗೆದ್ದು ಪ್ರಿಯಕರನ ಕೊಂದು, ಕರುಳನ್ನು ಕೊಚ್ಚಿ ಎಸೆದ ಮಕ್ಕಳು!

    ಅಮ್ಮನ ಅಕ್ರಮ ಸಂಬಂಧದಿಂದ ರೊಚ್ಚಿಗೆದ್ದು ಪ್ರಿಯಕರನ ಕೊಂದು, ಕರುಳನ್ನು ಕೊಚ್ಚಿ ಎಸೆದ ಮಕ್ಕಳು!

    ಗಾಂಧಿನಗರ: ಗುಜರಾತ್‌ನ (Gujarat) ಗಾಂಧಿನಗರದಲ್ಲಿ (Gandhinagar) ತಮ್ಮ ತಾಯಿಯ ಪ್ರಿಯಕರನನ್ನು (Lover) ಇಬ್ಬರು ಸಹೋದರರು ಅಮಾನುಷವಾಗಿ ಹತ್ಯೆಗೈದ ಘಟನೆ ನಡೆದಿದೆ.

    ಸಂಜಯ್ ಠಾಕೂರ್ (27) ಮತ್ತು ಜಯೇಶ್ ಠಾಕೂರ್ (23) ಎಂಬವರು ತಮ್ಮ ತಾಯಿಯ ಪ್ರಿಯಕರ ರತಂಜಿ ಠಾಕೂರ್ (53) ಎಂಬಾತನನ್ನು ಜ.26ರಂದು ಹತ್ಯೆಗೈದಿದ್ದರು. ಆತ ಕೆಲಸ ಮಾಡುತ್ತಿದ್ದ ಜಾಗದಲ್ಲೇ ಆತನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ, ಚುಚ್ಚಿದ್ದರು. ಕರಳು ಹೊರ ಬಂದ ಬಳಿಕ, ಅದನ್ನು ಕತ್ತರಿಸಿ ಮೇಲೆ ಏಸೆದು ವಿಕೃತಿ ಮೆರೆದಿದ್ದರು.

    ಆರೋಪಿಗಳು, ಹತ್ಯೆಗೀಡಾದ ವ್ಯಕ್ತಿ ತಮ್ಮ ತಾಯಿಯೊಂದಿಗೆ ಸಂಬಂಧ ಹೊಂದಿರುವುದು ಅವರ ಮೃತ ತಂದೆಗೆ ಅವಮಾನ ಎಂದು ಈ ಕೃತ್ಯ ಎಸಗಿದ್ದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.

    ಈ ಸಂಬಂಧ ರತಂಜಿ ಠಾಕೂರ್ ಮಗ ಅಜಯ್ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಈ ಸಂಬಂಧ ಮಾಧ್ಯಮಗಳ ಜೊತೆ ಮಾತಾಡಿರುವ ಅಜಯ್, ಇಬ್ಬರು ಸಹೋದರರು ಈ ಹಿಂದೆ ತನ್ನ ತಂದೆಗೆ, ಅವರ ತಾಯಿಯಿಂದ ದೂರವಿರಲು ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಹಲವಾರು ಬಾರಿ ಜಗಳ ಸಹ ನಡೆದಿತ್ತು. ವಿವಾದದ ನಂತರ ಗ್ರಾಮಸ್ಥರು ಈ ವಿಷಯದ ಬಗ್ಗೆ ಪಂಚಾಯತ್ ಕೂಡ ನಡೆಸಿದ್ದರು, ಆದರೆ ಯಾವುದೇ ಪರಿಹಾರ ಸಿಕ್ಕಿರಲಿಲ್ಲ. ಕೊಲೆಯ ನಂತರ ಆರೋಪಿಗಳು ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದರು. ಪೊಲೀಸರು ಅವರ ಮೊಬೈಲ್ ಲೊಕೇಶನ್‌ ಆಧಾರದ ಮೇಲೆ ಪತ್ತೆಹಚ್ಚಿ, ಘಟನೆ ನಡೆದ ಕೆಲವೇ ಗಂಟೆಗಳ ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

  • ಬೆಳ್ಳಂಬೆಳಗ್ಗೆ ಧಾರವಾಡದಲ್ಲಿ ಲೋಕಾ ಶಾಕ್- ಕೆಐಎಡಿಬಿ AEE ಮನೆಗೆ ದಾಳಿ

    ಬೆಳ್ಳಂಬೆಳಗ್ಗೆ ಧಾರವಾಡದಲ್ಲಿ ಲೋಕಾ ಶಾಕ್- ಕೆಐಎಡಿಬಿ AEE ಮನೆಗೆ ದಾಳಿ

    ಧಾರವಾಡ: ಲೋಕಾಯುಕ್ತ ಪೊಲೀಸರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ಎಇಇ (AEE) ಗೋವಿಂದಪ್ಪ ಭಜಂತ್ರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಧಾರವಾಡದ (Dharawada) ಗಾಂಧಿನಗರದಲ್ಲಿರುವ ಗೋವಿಂದಪ್ಪ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

    ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಗೋವಿಂದಪ್ಪ ಅವರಿಗೆ ಸೇರಿದ ಧಾರವಾಡ ಗಾಂಧಿನಗರದಲ್ಲಿರುವ ಮನೆ, ತೇಜಸ್ವಿನಗರದಲ್ಲಿರುವ ಅಳಿಯನ ಮನೆ, ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್‌ಹೌಸ್, ನರಗುಂದದಲ್ಲಿರುವ ಅವರ ಸಹೋದರನ ಮನೆ ಮತ್ತು ಲಕಮನಹಳ್ಳಿಯಲ್ಲಿರುವ ಕೆಐಎಡಿಬಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವು ಕೇಸ್ – ಸಬ್ ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೇಬಲ್ ಅಮಾನತು

    ಗಾಂಧಿನಗರದಲ್ಲಿರುವ (Gandhinagara) ಗೋವಿಂದಪ್ಪ ಅವರ ನಿವಾಸದ ಮುಂದೆ ಇದ್ದ ಅವರ ಕಾರುಗಳಲ್ಲಿ ಕೂಡ ಲೋಕಾಯುಕ್ತ ಪೊಲೀಸರು ಇಂಚಿಂಚು ತಪಾಸಣೆ ನಡೆಸಿದ್ದಾರೆ. ಅಲ್ಲದೇ ಅವರ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಿದ್ದಾರೆ. ಗೋವಿಂದಪ್ಪಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ಲೋಕಾಯುಕ್ತರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ವಿಧಾನಸಭೆಗೆ ನಾಳೆ ಮೊದಲ ಹಂತದ ಚುನಾವಣೆ – 15 ಜಿಲ್ಲೆಗಳ 42 ಸ್ಥಾನಗಳಿಗೆ ಮತದಾನ

  • Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

    Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

    ಗಾಂಧಿನಗರ: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

    ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: Hassan| ಶಾಲೆಗೆಂದು ಮೀಸಲಿಟ್ಟಿದ್ದ ಜಾಗ ವಕ್ಫ್ ಹೆಸರಿಗೆ – ಹೆಚ್‌ಕೆ ಸುರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಕರೆ

    ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು (Bullet Train) ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (NHSRCL) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: Raichur | ಎಗ್ಗಿಲ್ಲದೆ ಕಲಬೆರಕೆ ಸೇಂದಿ ಮಾರಾಟ- ಅಧಿಕಾರಿಗಳ ದಾಳಿ ವೇಳೆ 500 ಗ್ರಾಂ ಸಿಎಚ್ ಪೌಡರ್ ಜಪ್ತಿ

    ಘಟನೆಯಲ್ಲಿ ನಾಲ್ವರು ಕಾರ್ಮಿಕರು ಕಾಂಕ್ರೀಟ್ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಸಾವನ್ನಪ್ಪಿದರು ಎಂದು ಆನಂದ್‌ನ ಅಗ್ನಿಶಾಮಕದ ದಳದ ಅಧಿಕಾರಿ ಧರ್ಮೇಶ್ ಗೋರ್ ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರ ನೆರವಿನಿಂದ ರಕ್ಷಣಾ ತಂಡ ಕ್ರೇನ್ ಹಾಗೂ ಬುಲ್ಡೋಜರ್‌ಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಲಾರಿ, ಕಾರು ನಡುವೆ ಅಪಘಾತ- ದಂಪತಿ ಸ್ಥಳದಲ್ಲೇ ಸಾವು

  • ನವೀಕರಿಸಬಹುದಾದ ಇಂಧನ ವಲಯದಲ್ಲಿ ಆಸಕ್ತಿ ಒಂದು ಆಯ್ಕೆಯಲ್ಲ, ಅನಿವಾರ್ಯ – ಜಗದೀಪ್ ಧನಕರ್

    ನವೀಕರಿಸಬಹುದಾದ ಇಂಧನ ವಲಯದಲ್ಲಿ ಆಸಕ್ತಿ ಒಂದು ಆಯ್ಕೆಯಲ್ಲ, ಅನಿವಾರ್ಯ – ಜಗದೀಪ್ ಧನಕರ್

    ಗಾಂಧಿನಗರ: ಹವಾಮಾನ ವೈಪರೀತ್ಯದ ಸಮಸ್ಯೆ ಭೂಮಿಯ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಹೀಗಾಗೀ ನವೀಕರಿಸಬಹುದಾದ ಇಂಧನದಲ್ಲಿ (Renewable Energy) ಆಸಕ್ತಿ ತೋರಿಸುವುದು ಒಂದು ಆಯ್ಕೆಯಲ್ಲ ಅದು ಪ್ರಪಂಚದ ಅನಿವಾರ್ಯವಾಗಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagadeep Dhankar) ಹೇಳಿದರು.

    ನಾಲ್ಕನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಭೂಮಿಯನ್ನು ಉಳಿಸಲು, ನವೀಕರಿಸಬಹುದಾದ ಇಂಧನದಲ್ಲಿ ಹೂಡಿಕೆ ಮಾಡದೆ ನಮಗೆ ಬೇರೆ ದಾರಿಯಿಲ್ಲ ಮತ್ತು ಹವಾಮಾನ ಬದಲಾವಣೆಯ ಬೆದರಿಕೆಯನ್ನು ಎದುರಿಸಲು ನಾವು ಹಗಲಿರುಳು ಶ್ರಮಿಸಬೇಕಾಗಿದೆ ಎಂದರು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ಗೆ ಡಿಸಿಎಂ ಪಟ್ಟ – ಶೀಘ್ರವೇ ಘೋಷಣೆ ಸಾಧ್ಯತೆ

    ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವಕ್ಕೆ ಮುಂಚೂಣಿಯಲ್ಲಿದೆ, ಹವಾಮಾನ ಬದಲಾವಣೆಯ ಸಮಸ್ಯೆಯನ್ನು ಎದುರಿಸಲು, ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ಭಾರತದ ಉಪಕ್ರಮದ ಮೇಲೆ ಸೌರ ಒಕ್ಕೂಟವನ್ನು ರಚಿಸಲಾಯಿತು. ಜಗತ್ತನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ಜಗತ್ತಿನ ಎಲ್ಲಾ ಏಜೆನ್ಸಿಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ನಾವು ಶಕ್ತಿಯನ್ನು ಬಳಸುವಾಗ ನಮ್ಮ ಅಗತ್ಯಕ್ಕೆ ಮಾತ್ರ ಬಳಸಬೇಕು. ಭಾರತದಲ್ಲಿ ಆಗುತ್ತಿರುವ ಅಭಿವೃದ್ಧಿಯು ಇಡೀ ಜಗತ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

    ಈ ಸಂದರ್ಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾತನಾಡಿ, ಇಂದು ಇಡೀ ವಿಶ್ವವೇ ನವೀಕರಿಸಬಹುದಾದ ಇಂಧನಕ್ಕಾಗಿ ಭಾರತದತ್ತ ನೋಡುತ್ತಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಮುಂದಿಟ್ಟಿರುವ ದೂರದೃಷ್ಟಿ. ಗುಜರಾತಿನ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಿಯಾಗಿ ಅವರು ಇದರಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ರಾಜ್ಯಗಳು 2030 ರ ವೇಳೆಗೆ 540 ಜಿಡಬ್ಲ್ಯೂ ನವೀಕರಿಸಬಹುದಾದ ಶಕ್ತಿಯ ಗುರಿಯನ್ನು ಹೊಂದಿವೆ. 2030 ರ ವೇಳೆಗೆ ಹಸಿರು ಶಕ್ತಿ ಪರಿವರ್ತನೆಗಾಗಿ ಹಣಕಾಸು ಸಂಸ್ಥೆಗಳು 386 ಶತಕೋಟಿ ಡಾಲರ್ ವಾಗ್ದಾನ ಮಾಡಿವೆ. ಇದರಿಂದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 82 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು. ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ – ಯುವಕ ಪೊಲೀಸ್ ವಶಕ್ಕೆ

  • 2030 ರ ವೇಳೆಗೆ 32.5 ಲಕ್ಷ ಕೋಟಿ ರೂ. ಮೌಲ್ಯದ ಸಾಲ ನೀಡಲು ಬ್ಯಾಂಕ್‌ಗಳ ಬದ್ಧ

    2030 ರ ವೇಳೆಗೆ 32.5 ಲಕ್ಷ ಕೋಟಿ ರೂ. ಮೌಲ್ಯದ ಸಾಲ ನೀಡಲು ಬ್ಯಾಂಕ್‌ಗಳ ಬದ್ಧ

    -ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರಿ ಹೂಡಿಕೆ ಸುಳಿವು

    ಗಾಂಧಿನಗರ: ನವೀಕರಿಸಬಹುದಾದ ಇಂಧನ (Renewable Energy) ವಲಯದಲ್ಲಿ ಭಾರೀ ಹೂಡಿಕೆ ಸುಳಿವು ಸಿಕ್ಕಿದ್ದು, 2030ರ ವೇಳೆಗೆ 32.5 ಲಕ್ಷ ಕೋಟಿ ರೂ. ಮೌಲ್ಯದ ಸಾಲಗಳನ್ನು ನೀಡಲು ಬ್ಯಾಂಕ್‌ಗಳ ಬದ್ಧವಾಗಿದೆ ಎಂದು ಸಚಿವಾಲಯ ನೀಡಿದ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. 4ನೇ ಜಾಗತಿಕ ಮಟ್ಟದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಮತ್ತು ಎಕ್ಸ್ ಪೋ ಆಯೋಜಿಸಿದ್ದು ಇಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲಾಗುತ್ತಿದೆ.

    ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ಒದಗಿಸಿದ ಡೇಟಾ ಪ್ರಕಾರ ಆರ್‌ಇ ಇನ್ವೆಸ್ಟ್ 2024 ರ ಸಮಾವೇಶದಲ್ಲಿ 6 ಟ್ರಿಲಿಯನ್ ರೂ. ಮೌಲ್ಯದ ಸಾಲ ಒದಗಿಸುವ ಪ್ರಸ್ತಾಪಗಳು ಬಂದಿದೆ. ಭಾರತೀಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ (ಈಆರ್‌ಇಡಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಲಾ 5 ಲಕ್ಷ ಕೋಟಿ ರೂ. ಮೌಲ್ಯದ ಸಾಲ ನೀಡುವ ವಾಗ್ದಾನ ಮಾಡಿದೆ. ಇದನ್ನೂ ಓದಿ: ದರ್ಶನ್‌ಗೆ ರಾಜಾತಿಥ್ಯ – ಕಲಬುರಗಿ ಜೈಲಿಗೆ ವಿಲ್ಸನ್‌ ಗಾರ್ಡನ್‌ ನಾಗ ಶಿಫ್ಟ್‌

    ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ಮತ್ತು ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್‌ಫ್ರಾಸ್ಟ್ರಕ್ಚರ್ ಮತ್ತು ಡೆವಲಪ್‌ಮೆಂಟ್ (NBFID) ಕ್ರಮವಾಗಿ 3 ಟ್ರಿಲಿಯನ್ ರೂ. ಮತ್ತು 1.86 ಟ್ರಿಲಿಯನ್ ರೂ. ಸಾಲ ನೀಡುವುದಾಗಿ ಭರವಸೆ ನೀಡಿವೆ. ಈ ಬಗ್ಗೆ ಮಾತನಾಡಿರುವ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ, ಈ ದಶಕದ ಅಂತ್ಯದ ವೇಳೆಗೆ ನವೀಕರಿಸಬಹುದಾದ ಇಂಧನ ಕಂಪನಿಗಳು ಸುಮಾರು 32.5 ಟ್ರಿಲಿಯನ್ ರೂ. ಹೂಡಿಕೆ ಮಾಡಲು ಬದ್ಧವಾಗಿವೆ. ಭಾರತವು ಐದನೇ ದೊಡ್ಡದು ಮಾತ್ರವಲ್ಲದೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಬೆಳವಣಿಗೆಯು ಶಕ್ತಿಯ ಅಭೂತಪೂರ್ವ ಬೇಡಿಕೆಯನ್ನು ಹೆಚ್ಚಿಸುತ್ತಿದೆ. ಈ ಬೇಡಿಕೆಯನ್ನು ಸುಸ್ಥಿರವಾಗಿ ಪೂರೈಸಲು ನಾವು ಬದ್ಧರಾಗಿದ್ದೇವೆ ಎಂದರು. 2030ರ ವೇಳೆಗೆ ಸುಮಾರು 570 ಜಿಡಬ್ಯೂ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೊಂದುವ ಗುರಿಯನ್ನು ಸರ್ಕಾರ ಹೊಂದಿದೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಕೇಸ್‌ – ಡಿಕೆಶಿ, ಸಿಬಿಐಗೆ ಸುಪ್ರೀಂ ನೋಟಿಸ್

    ಈ ನಡುವೆ ನವೀಕರಿಸಬಹುದಾದ ಇಂಧನ ಸಚಿವಾಲಯದ 100 ದಿನಗಳ ಸಾಧನೆ ಬಿಡುಗಡೆ ಮಾಡಿದೆ. 4.5 ಗಿಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಹೊಂದಬೇಕೆಂಬ ಜೂನ್, ಜುಲೈ ತಿಂಗಳ ಗುರಿಗೆ ಪೂರಕವಾಗಿ 6 ಗಿ.ವ್ಯಾ. ಸ್ಥಾಪಿತ ಇಂಧನ ಸಾಮರ್ಥ್ಯ ಹೊಂದಲಾಗಿದೆ. ಕಚ್ಚಾ ಅಲ್ಲದ ಇಂಧನಗಳ ಸ್ಥಾಪಿತ ಸಾಮರ್ಥ್ಯ 207.76 ಗಿ.ವ್ಯಾಟ್ ಗೆ ತಲುಪಿದೆ. ಎರಡು ಸೋಲಾರ್ ಪಾರ್ಕ್ಗಳು ಪೂರ್ಣಗೊಂಡಿವೆ. ಇದನ್ನೂ ಓದಿ: ಯುಪಿಯಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ – ಇಬ್ಬರು ಮಕ್ಕಳು ಸೇರಿ ಐವರು ಸಾವು, ಹಲವರಿಗೆ ಗಾಯ

    ಪಿಎಂ ಕುಸುಮ್ ಯೋಜನೆ ಅಡಿಯಲ್ಲಿ 1 ಲಕ್ಷ ಸೌರ ಪಂಪ್‌ಗಳನ್ನು ಸ್ಥಾಪಿಸಲಾಗಿದೆ. ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿಯಲ್ಲಿ, 3.56 ಲಕ್ಷ ರೂಫ್‌ಟಾಪ್ ಸೋಲಾರ್ ವ್ಯವಸ್ಥೆಗಳನ್ನು ಸ್ಥಾಪಿಸಲಾಗಿದೆ. ಸಂಚಿತ 13.8 ಗಿಗಾ ವ್ಯಾಟ್ ಸೋಲಾರ್ ಮಾಡ್ಯೂಲ್ ಉತ್ಪಾದನೆ ಪ್ರಾರಂಭವಾಗಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಎರಡನೇ ಹಂತದ ಎಲೆಕ್ಟ್ರೋಲೈಸರ್ ತಯಾರಿಕೆಗೆ 11 ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ.

    ಕಡಲಾಚೆಯ ಪವನಶಕ್ತಿ ಯೋಜನೆಗೆ ಜೂನ್ 19ರಂದು ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇಂಡಿಯನ್ ರಿನಿವೇಬಲ್ ಎನರ್ಜಿ ಡೆವಲಪ್ಮೆಂಟ್ ಏಜೆನ್ಸಿಯು ಐಆರ್‌ಇಡಿಎ ಗ್ಲೋಬಲ್ ಗ್ರೀನ್ ಎನರ್ಜಿ ಫೈನಾನ್ಸ್- ಐಎಫ್‌ಎಸ್‌ಸಿ ಲಿಮಿಟೆಡ್ ಎಂಬ ಅಂಗಸಂಸ್ಥೆಯನ್ನು ಆರಂಭಿಸಿದೆ ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮಾಗಡಿಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ

  • ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕಕ್ಕೆ ನಾಲ್ಕು ಪ್ರಶಸ್ತಿ

    ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕಕ್ಕೆ ನಾಲ್ಕು ಪ್ರಶಸ್ತಿ

    ಅಹ್ಮದಾಬಾದ್: ನವೀಕರಿಸಬಹುದಾದ ಇಂಧನ (Renewable Energy) ಇಲಾಖೆಯಿಂದ 4ನೇ ಜಾಗತಿಕ ಮಟ್ಟದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಮತ್ತು ಎಕ್ಸ್‌ಪೋ ಆಯೋಜಿಸಲಾಗಿದೆ. ಗುಜರಾತ್‌ನ (Gujarat) ಗಾಂಧಿನಗರದ (Gandhinagar) ಮಹಾತ್ಮ ಮಂದಿರದಲ್ಲಿ ಇಂದಿನಿಂದ (ಸೆ.16) ಮೂರು ದಿನಗಳ ಕಾಲ ಎಕ್ಸ್‌ಪೋ ನಡೆಯುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ಎಕ್ಸ್‌ಪೋದಲ್ಲಿ ಕರ್ನಾಟಕದ ಇಂಧನ ಇಲಾಖೆಯೂ (KREDL) ಭಾಗಿಯಾಗಿದ್ದು, ವಿಶೇಷವಾದ ಪೆವಿಲಿಯನ್ ಅನ್ನು ನಿರ್ಮಿಸಿದೆ. ಕರ್ನಾಟಕ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ನೇತೃತ್ವದಲ್ಲಿ ಹಾಕಲಾಗಿರುವ ಕರ್ನಾಟಕ ಪೆವಿಲಿಯನ್ ಉದ್ಯಮಿಗಳ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: Fifth And Final Call | ಮಾತುಕತೆಗಾಗಿ ಪ್ರತಿಭಟನಾನಿರತ ವೈದ್ಯರಿಗೆ ಅಂತಿಮ ಆಹ್ವಾನ ಕೊಟ್ಟ ದೀದಿ

     

    ಸೌರಶಕ್ತಿ ಸ್ಥಾಪಿತ ಸಾಮರ್ಥ್ಯ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ 2ನೇ ರಾಜ್ಯ, ಪವನಶಕ್ತಿ ಸ್ಥಾಪಿತ ಸಾಮರ್ಥ್ಯದಲ್ಲಿ 3ನೇ ರಾಜ್ಯ, ಜಲವಿದ್ಯುತ್ ಸ್ಥಾಪಿತ ಸಾಮರ್ಥ್ಯದಲ್ಲಿ 2ನೇ ರಾಜ್ಯ ಮತ್ತು ಪಾವಗಡ ಸೋಲಾರ್ ಪಾರ್ಕ್‌ಗೆ ದೇಶದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಪಾರ್ಕ್ ಎಂಬ ನಾಲ್ಕು ಪ್ರಶಸ್ತಿಗಳನ್ನು ರಾಜ್ಯ ಇಂಧನ ಇಲಾಖೆಗೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆ ನೀಡಿ ಗೌರವಿಸಿದೆ. ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬ ಗಂಭೀರ

    ಈ ಬಗ್ಗೆ ಮಾತನಾಡಿದ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆಗೆ ಅವಕಾಶಗಳಿದೆ. ಅಂತಹ ಅಂಶಗಳನ್ನಿಟ್ಟುಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲು ಪೆವಿಲಿಯನ್ ಹಾಕಿದ್ದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹೂಡಿಕೆದಾರರ ಆಕರ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ನಾಲಿಗೆಯನ್ನು ಕತ್ತರಿಸಿದವ್ರಿಗೆ 11 ಲಕ್ಷ ಬಹುಮಾನ ಘೋಷಿಸಿದ ಶಿವಸೇನಾ ಶಾಸಕ

  • ಅಣ್ಣಾವ್ರ ನಟನೆಯ ‘ಗಾಂಧಿನಗರ’ ಚಿತ್ರದ ಹೆಸರಿನಲ್ಲೇ ಮತ್ತೊಂದು ಸಿನಿಮಾ

    ಅಣ್ಣಾವ್ರ ನಟನೆಯ ‘ಗಾಂಧಿನಗರ’ ಚಿತ್ರದ ಹೆಸರಿನಲ್ಲೇ ಮತ್ತೊಂದು ಸಿನಿಮಾ

    ರಾಜಕುಮಾರ್ ಅವರು ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ಗಾಂಧಿನಗರ’. ಹಲವು ವರ್ಷಗಳ ಬಳಿಕ ಅದೇ ಹೆಸರಿನ ಚಿತ್ರ ಆರಂಭವಾಗಿದೆ. ಇತ್ತೀಚಿಗೆ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಇಬ್ಬನಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

    ಕನ್ನಡ ಚಿತ್ರರಂಗದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನ ರುವಾರಿಗಳೂ ಆಗಿರುವ ಎಸ್.ಹೆಚ್ ನಾಗೇಶ್ ರೈತ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ‌‌. ಇದೇ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯ ಕಲಿತಿರುವ ಬಾಲಾಜಿ ರಾವ್ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನ ವಿದ್ಯಾರ್ಥಿಗಳೇ ಈ ಚಿತ್ರದ ಎಲ್ಲಾ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.

    ಚಿತ್ರರಂಗದ ಕಾರ್ಯಕ್ಷೇತ್ರವಾಗಿರುವ ಗಾಂಧಿನಗರಕ್ಕೂ ನಮ್ಮ ಚಿತ್ರ ಗಾಂಧಿನಗರಕ್ಕೂ ಯಾವುದೇ ಸಂಬಂಧವಿಲ್ಲ. ಇದು ನಿರುದ್ಯೋಗ ಸಮಸ್ಯೆಯ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಚಿತ್ರ. ದೇಶಕ್ಕೆ ಸ್ವತಂತ್ರ ತಂದುಕೊಟ್ಟ ಮಹಾತ್ಮ ಗಾಂಧಿ ಅವರ ಹೆಸರಿನ ಗಾಂಧಿನಗರ ಎಂಬ ಊರಿನಲ್ಲಿ ವಾಸವಿರುವ ವಿದ್ಯಾವಂತರು ಕೆಲಸ ಸಿಗಿದೆ ನಿರುದ್ಯೋಗಿಗಳಾಗಿದ್ದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಕಥಾ ಸಾರಾಂಶ. “ಇಲ್ಲಿ ಯಾರು ಗಾಂಧಿಗಳಿಲ್ಲ” ಎಂಬ ಅಡಿಬರಹ ಈ ಚಿತ್ರಕ್ಕಿದೆ. ನಾನು ಕೆಲವು ವರ್ಷಗಳಿಂದ ಅಭಿನಯ ಸೇರಿದಂತೆ ಚಿತ್ರಕ್ಕೆ ಸಂಬಂಧಿಸಿದ ಹಲವು ವಿಭಾಗಗಳ ಬಗ್ಗೆ ತರಭೇತಿ ನೀಡುವ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ಅನ್ನು ನಡೆಸುತ್ತಿದ್ದೇ‌ನೆ. ಹಲವಾರು ವಿದ್ಯಾರ್ಥಿಗಳು ಇಲ್ಲಿ ಕಲಿತಿದ್ದಾರೆ. ಈ ಚಿತ್ರದಲ್ಲಿ ಸಂಪೂರ್ಣವಾಗಿ ನಮ್ಮ ಇನ್ಸ್ಟಿಟ್ಯೂಟ್ ನ ವಿದ್ಯಾರ್ಥಿಗಳೆ ಅಭಿನಯಿಸುತ್ತಿದ್ದಾರೆ. ಜೂನ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾಲ್ಕು ಹಾಡುಗಳು ಹಾಗೂ ಮೂರು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ ಎಂದು ನಿರ್ದೇಶಕ ಎಸ್ ಹೆಚ್ ನಾಗೇಶ್ ರೈತ ತಿಳಿಸಿದರು.

  • 1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ ಚಾಲನೆ

    1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ ಚಾಲನೆ

    ಗಾಂಧಿನಗರ: ಇದೇ ಮೊದಲ ಬಾರಿಗೆ ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರು ಹೊನಲು ಬೆಳಕಿನ ಕ್ರಿಕೆಟ್‌ ಟೂರ್ನಿಯನ್ನ ಆಯೋಜಿಸಿದ್ದು, ಅಧಿಕೃತವಾಗಿ ಚಾಲನೆಗೊಂಡಿದೆ.

    ಟೀಂ ಇಂಡಿಯಾ ಆಟಗಾರ ಹಾರ್ದಿಕ್‌ ಪಾಂಡ್ಯ, ಅಮಿತ್‌ ಶಾ ಜೊತೆಗೂಡಿ ʻಗಾಂಧಿನಗರ ಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ (Lok Sabha Premier League) ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರಭಾಯ್‌ ಪಟೇಲ್ ಸಹ ಸಾಥ್‌ ನೀಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ 3ನೇ ಟೆಸ್ಟ್‌ ಪಂದ್ಯಕ್ಕೆ ಜಡ್ಡು ಇನ್‌ – ಕೆ.ಎಲ್‌ ರಾಹುಲ್‌ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಚಾನ್ಸ್‌

    ʻಖೇಲೋ ಇಂಡಿಯಾʼ ಮಾದರಿಯಲ್ಲಿ ಕ್ರೀಡಾ ಉತ್ಸಾಹ ಬೆಳೆಸುವ ನಿಟ್ಟಿನಲ್ಲಿ ʻಖೇಲೋ ಗಾಂಧಿನಗರʼ ಘೋಷವಾಕ್ಯದ ಅಡಿಯಲ್ಲಿ ಟೂರ್ನಿ ಆಯೋಜಿಸಲಾಗಿದೆ. ಇದನ್ನೂ ಓದಿ: 8 ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧವೇ 3 ವಿಶ್ವಕಪ್‌ ಟ್ರೋಫಿ ಕಳೆದುಕೊಂಡ ಭಾರತ!

    ವೆಜಲ್‌ಪುರ, ಘಟ್ಲೋಡಿಯಾ, ನಾರಣಪುರ, ಸಬರಮತಿ, ಗಾಂಧಿನಗರ ಉತ್ತರ, ಮಾನ್ಸಾ ಮತ್ತು ಸನಂದ್ ಸೇರಿ ಏಳು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕ್ರಿಕೆಟ್‌ ಟೂರ್ನಿಯು 13 ಮೈದಾನಗಳಲ್ಲಿ 21 ದಿನಗಳ ಕಾಲ ನಡೆಯಲಿದೆ. ಒಟ್ಟು 1,078 ತಂಡಗಳ ನಡುವೆ ಲೀಗ್‌ ಪಂದ್ಯಗಳು ನಡೆಯಲಿದ್ದು, 16,100 ಆಟಗಾರರು ಪಾಲ್ಗೊಳ್ಳಲಿದ್ದಾರೆ. ಪ್ರತಿ ಪಂದ್ಯಕ್ಕೆ 10 ಓವರ್‌ ಮೀಸಲಾಗಿರುತ್ತದೆ. ಇದನ್ನೂ ಓದಿ: ಪಾಥುಮ್ ನಿಸ್ಸಾಂಕಾ ದ್ವಿಶತಕದ ಅಬ್ಬರ – 24 ವರ್ಷಗಳಿಂದ ಜಯಸೂರ್ಯ ಹೆಸರಲ್ಲಿದ್ದ ದಾಖಲೆ ನುಚ್ಚುನೂರು!