ಲಂಡನ್: ಗಾಂಧಿ ಜಯಂತಿಗೂ ಮುನ್ನವೇ ಲಂಡನ್‌ನಲ್ಲಿ (London) ಕೃತ್ಯವೊಂದು ನಡೆದಿದೆ. ಮಹಾತ್ಮ ಗಾಂಧಿ (Mahatma Gandhi) ಅವರ ಪ್ರತಿಮೆಯನ್ನು ಧ್ವಂಸಗೊಳಿಸಿ, ಅದರ ಸ್ತಂಭದ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದು ವಿಕೃತಿ ಮರೆದಿದ್ದಾರೆ.
ಸೋಮವಾರ (ಸೆ.29) ಲಂಡನ್ ವಿಶ್ವವಿದ್ಯಾಲಯದ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿ ಧ್ಯಾನಸ್ಥ ಭಂಗಿಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ವಿಕೃತಿ ಮರೆದಿದ್ದಾರೆ. ಪ್ರತಿಮೆಯ ಸ್ತಂಭದ ಮೇಲೆ ಭಾರತ ವಿರೋಧಿ ಬರಹಗಳು ಕಂಡುಬಂದಿದೆ. ಈ ಕೃತ್ಯವನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತೀವ್ರವಾಗಿ ಖಂಡಿಸಿದ್ದು, ಪ್ರತಿಮೆಯ ಮೂಲ ಘನತೆಗಾಗಿ ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ. ಈ ಕುರಿತು ಈಗಾಗಲೇ ಸ್ಥಳೀಯ ಅಧಿಕಾರಿಗಳಿಗೆ ವರದಿ ಮಾಡಲಾಗಿದೆ ಎಂದು ತಿಳಿಸಿದೆ.ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ
ಈ ಕುರಿತು ಭಾರತೀಯ ಹೈಕಮಿಷನ್ (Indian High Commission) ಹೇಳಿಕೆ ಬಿಡುಗಡೆ ಮಾಡಿದ್ದು, ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದು, ನಾಚಿಕೆಗೇಡಿನ ಸಂಗತಿ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ವಿಶ್ವಸಂಸ್ಥೆಯಿಂದ ಅಂತಾರಾಷ್ಟ್ರೀಯ ಅಹಿಂಸಾ ದಿನವೆಂದು ಗೊತ್ತುಪಡಿಸಲಾದ ಮೂರು ದಿನಗಳ ಮೊದಲು ನಡೆದ ಹಿಂಸಾತ್ಮಕ ದಾಳಿಯಿದು ಎಂದು ತಿಳಿಸಿದೆ.
ಸದ್ಯ ಈ ಕೃತ್ಯದ ವರದಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಮತ್ತು ಸ್ಥಳೀಯ ಕ್ಯಾಮ್ಡೆನ್ ಕೌನ್ಸಿಲ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ನಮ್ಮ ಎಲ್ಲಾ ನ್ಯಾಯಾಲಗಳ ಜೊತೆಗೆ ನಮ್ಮ ಮನದಲ್ಲಿ ಒಂದು ದೊಡ್ಡ ನ್ಯಾಯಾಲಯವಿದೆ. ಅದೇ ಆತ್ಮಶಕ್ತಿಯ ನ್ಯಾಯಾಲಯ ಎಂದು ಸಿಎಂ ಹೇಳಿದ್ದಾರೆ ಈ ನ್ಯಾಯಾಲಯದಂತೆ ನಾವು ನಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಹೇಳಿದ್ದಾರೆ.
ಭಾರತ್ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ (Gandhi Jayanti) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ‍್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. ಈ ಸಂದರ್ಭವನ್ನು ನಾವು ಬಳಸಿಕೊಂಡು ಗಾಂಧಿ ಅವರು ಹಾಕಿಕೊಟ್ಟ ದಾರಿ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ ಎಂದರು. ಇದನ್ನೂ ಓದಿ: ಹುಕ್ಕೇರಿ ಹಿರೇಮಠದಿಂದ ಈ ಬಾರಿ ಹೋಳಿಗೆ ದಸರಾ
ಈ ದೇಶಕ್ಕೆ ಕಾಂಗ್ರೆಸ್ (Congress) ಹಾಕಿಕೊಟ್ಟಿರುವ ಬುನಾದಿ, ಗಾಂಧಿ ಅವರ ತತ್ವ, ಆದರ್ಶವೇ ನಮ್ಮ ಆಸ್ತಿ. ಈ ಸಂದರ್ಭದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಎಐಸಿಸಿ ಅಧ್ಯಕ್ಷರಾಗಿರುವುದು ಬಹಳ ವಿಶೇಷ. ಡಿಸೆಂಬರ್ ಕೊನೆ ವಾರದಲ್ಲಿ ಬೆಳಗಾವಿಯಲ್ಲಿ ವಿಶೇಷವಾದ ಎಐಸಿಸಿ ಅಧಿವೇಶನ ಮಾಡಲಿದ್ದು, ಇದಕ್ಕೆ ಎಐಸಿಸಿ ನಾಯಕರನ್ನು ಆಹ್ವಾನಿಸುತ್ತೇನೆ. ಈ ವಿಚಾರವಾಗಿ ಪಕ್ಷದ ಹಿರಿಯ ನಾಯಕರ ಸಮಿತಿ ಮಾಡಿದ್ದೇನೆ. ಇಂದು ಗಾಂಧಿ ನಡಿಗೆ ಮೂಲಕ ಹೆಜ್ಜೆ ಇಟ್ಟಿದ್ದೇವೆ. ಹಿಂದೆ ದೇಶಪಾಂಡೆ ಅವರು ಅಧ್ಯಕ್ಷರಾಗಿದ್ದಾಗ ದಂಡಿ ಮಾರ್ಚ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆವು. ಅದರ ನೆನಪಿನ ಆಧಾರದ ಮೇಲೆ ಇಂದು ಪಕ್ಷ ಹಾಗೂ ಸರ್ಕಾರದ ವತಿಯಿಂದ ಈ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು ಎಂದು ಹೇಳಿದರು. ಇದನ್ನೂ ಓದಿ: ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ – ತಾರತಮ್ಯ ನಡೆದರೆ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ
200 ವರ್ಷದ ಹಿಂದೆ ಬ್ರಿಟೀಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ (Kittur Chennamma) ಅವರು ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಕಿತ್ತೂರಿನಲ್ಲಿ ವಿಶೇಷ ಕಾರ್ಯಕ್ರಮ ಮಾಡಲು ಆ ಜಿಲ್ಲೆಯ ನಾಯಕರು ನಿರ್ಧರಿಸಿದ್ದು, ಅದಕ್ಕೆ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಇಂದು ಚಾಲನೆ ಮಾಡಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ನಾವು ನೀವೆಲ್ಲರೂ ಗಾಂಧಿ ಕುಟುಂಬದ ಸದಸ್ಯರು. ನಮ್ಮ ಮೇಲೆ ರಾಷ್ಟ್ರಧ್ವಜವಿದೆ. ಈ ಅವಕಾಶ ಬೇರೆ ಯಾರಿಗೂ ಸಿಗುವುದಿಲ್ಲ. ನಾವಿಂದು ಮಾಡಲು ಹೊರಟಿರುವ ಕೆಲಸ ಒಬ್ಬರಿಂದ ಮಾಡಲು ಸಾಧ್ಯವಿಲ್ಲ. ನಿಮ್ಮೆಲ್ಲರ ಸಹಕಾರ ಮುಖ್ಯ. ಇಂದಿನಿಂದ ಮತ್ತೆ ನೀವೆಲ್ಲರೂ 2028ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಉತ್ಸಾಹದಿಂದ ಪ್ರತಿಜ್ಞೆ ಮಾಡಬೇಕು ಎಂದು ನುಡಿದರು. ಇದನ್ನೂ ಓದಿ: ಕಳಂಕಿತ ಸಿಎಂ ದಸರಾ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್ ವಾಗ್ದಾಳಿ
ನಾನು ಹಾಗೂ ಸಿದ್ದರಾಮಯ್ಯ (CM Siddaramaiah) ಅವರು ಬೆಳಗಾವಿಯ ಗಾಂಧಿ ಬಾವಿಯಿಂದ ನಮ್ಮ ಚುನಾವಣಾ ಪ್ರಚಾರ ಆರಂಭಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆವು. ಮುಖ್ಯಮಂತ್ರಿಗಳು ಹೇಳಿರುವ ಒಂದು ಮಾತನ್ನು ನಾನಿಂದು ಹೇಳಬಯಸುತ್ತೇನೆ. ನಮ್ಮ ಎಲ್ಲಾ ನ್ಯಾಯಾಲಗಳ ಜತೆಗೆ ನಮ್ಮ ಮನದಲ್ಲಿ ಒಂದು ದೊಡ್ಡ ನ್ಯಾಯಾಲಯವಿದೆ. ಅದೇ ಆತ್ಮಶಕ್ತಿಯ ನ್ಯಾಯಾಲಯ. ಈ ನ್ಯಾಯಾಲಯದಂತೆ ನಾವು ನಡೆಯಬೇಕು. ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ. ಜನರ ಬದುಕು ಸುಧಾರಿಸಲು ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ದುಡಿಮೆಯ ನಂಬಿ ಬದುಕು. ಅದರಲ್ಲೇ ದೇವರನ್ನೇ ಹುಡುಕು ಎಂದು ಗಾಂಧಿಜಿಯವರು ಹೇಳಿದ್ದಾರೆ. ಗಾಂಧಿ ಜಯಂತಿಯಂದು ನಾವು ಅನೇಕ ಕಾರ್ಯಕ್ರಮ ರೂಪಿಸಿದ್ದು, ಮುಂದಿನ ಒಂದು ವರ್ಷಗಳ ಈ ಕಾರ್ಯಕ್ರಮ ರೂಪಿಸಲಾಗುವುದು. ಗಾಂಧಿಜಿ ಅವರ ತತ್ವ, ಆದರ್ಶ, ಮಾರ್ಗದರ್ಶನವನ್ನು ಕಾಂಗ್ರೆಸಿಗರು ಅಳವಡಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಜರ್ಮನಿಯಲ್ಲಿ ಒನ್‌ಪ್ಲಸ್ ಫೋನ್ ಮಾರಾಟ ನಿಷೇಧ
ಒಂದು ಊರಿಗೆ ಒಂದು ಪಂಚಾಯತಿ ಇರಬೇಕು, ಒಂದು ಶಾಲೆ ಹಾಗೂ ಒಂದು ಸಹಕಾರ ಸಂಘ ಇರಬೇಕು ಎಂದು ಹೇಳಿದ್ದರು. ಅದರಂತೆ ನಮ್ಮ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮ ಪಂಚಾಯ್ತಿಗೆ ಬಂಧಿಸಿದಂತೆ ವಿವಿಯನ್ನೇ ಸ್ಥಾಪಿಸಲಾಗಿದೆ. ಸಬರಮತಿ ಆಶ್ರಮದ ಪ್ರತಿರೂಪವನ್ನೇ ಇಲ್ಲಿ ನಿರ್ಮಾಣ ಮಾಡಿದ್ದಾರೆ. ಇದೊಂದು ಪ್ರವಾಸಿ ತಾಣವಾಗಿದೆ. ಗಾಂಧಿಯವರ ಹೆಸರು ಹೇಗೆ ಶಾಶ್ವತವಾಗಿರುತ್ತದೆಯೋ, ಅದೇ ರೀತಿ ಕಾಂಗ್ರೆಸ್ ಪಕ್ಷ ಶಾಶ್ವತವಾಗಿರುತ್ತದೆ. ಕಾಂಗ್ರೆಸ್ ಪಕ್ಷವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ದಸರಾಗೆ ಇಷ್ಟೇ ದಿನ ರಜೆ ಕೊಡಿ ಅಂತ ಒತ್ತಾಯ ಮಾಡ್ಬೇಡಿ: ಕ್ಯಾಮ್ಸ್ ಆಗ್ರಹ
ಬೆಂಗಳೂರು: ಗಾಂಧಿ ಜಯಂತಿಯಂದು (Gandhi Jayanti) ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಪೌರ ಕಾರ್ಮಿಕರೊಂದಿಗೆ ಕಸ ಗುಡಿಸಿದ್ದಾರೆ.
ಇಂದು ಬೆಳಗ್ಗೆ ಕುಮಾರಸ್ವಾಮಿ ಅವರು ಬೆಂಗಳೂರಿನ ಹೆಚ್‌ಎಂಟಿ ಕ್ಯಾಂಪಸ್‌ನಲ್ಲಿರುವ (HMT Campus) ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿದರು. ಅಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಸ್ವಚ್ಛ ಭಾರತ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ಸತತ ಪ್ರಯತ್ನದಿಂದ ಮಾತ್ರ ಭಾರತವನ್ನು ಸ್ವಚ್ಛಗೊಳಿಸಲು ಸಾಧ್ಯ: ಮೋದಿ
ಹೆಚ್‌ಎಂಟಿ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಇತರೆ ಉನ್ನತ ಅಧಿಕಾರಿಗಳು ಹಾಗೂ ಎಕ್ಸಲೆನ್ಸಿ ಕೇಂದ್ರದ ಅನೇಕ ವಿಜ್ಞಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸ್ವಚ್ಚ ಭಾರತ ದಿವಸ ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಭಾಗವಹಿಸಿದ್ದ ಪೌರ ಕಾರ್ಮಿಕರ ಯೋಗ ಕ್ಷೇಮವನ್ನು ಕೇಂದ್ರ ಸಚಿವರು ವಿಚಾರಿಸಿದರು. ಅಲ್ಲದೆ, ಅವರಿಗೆ ಸ್ವಚ್ಚತಾ ದಿವಸದ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಚಿಕ್ಕಬಳ್ಳಾಪುರ: ಅ.2ರಂದು ಗಾಂಧಿ ಜಯಂತಿ ಅಂಗವಾಗಿ ಚಿಕ್ಕಬಳ್ಳಾಪುರದಲ್ಲಿ ಗಾಂಧಿ ಭವನ ತಲೆ ಎತ್ತಿದ್ದು ಬುಧವಾರ ಲೋಕಾರ್ಪಣೆಯಾಗಲಿದೆ.
ಚಿಕ್ಕಬಳ್ಳಾಪುರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಸರಿಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಭವ್ಯವಾದ ಗಾಂಧಿ ಭವನ ನಿರ್ಮಾಣ ಮಾಡಲಾಗಿದೆ. ಎರಡು ಅಂತಸ್ಥಿನ ಬೃಹತ್ ಕಟ್ಟಡ ಎಲ್ಲರ ಮನಸೊರೆಗೊಳ್ಳುತ್ತಿದ್ದು, ಕಟ್ಟಡದ ಮುಂಭಾಗ ಗಾಂಧೀಜಿಯವರ ಪ್ರತಿಮೆಗಳು ಎಲ್ಲರ ಕಣ್ಣು ಕುಕ್ಕುವಂತಿವೆ.
ನೆಲಮಹಡಿಯಲ್ಲಿ ಕಸ್ತೂರಿ ಬಾ ಸಭಾಂಗಣ, ತರಬೇತಿ ಕೇಂದ್ರ, ಹೃದಯ ಪುಂಜ ಗಾಂಧೀಜಿಯವರ ಯೋಗ ಪ್ರತಿಮೆ, ಗ್ರಂಥಾಲಯ, ಮೋಹನ್ ದಾಸ್‌ರಿಂದ ಮಹಾತ್ಮ ಗಾಂಧೀಜಿಯವರ ಜೀವನಾಧಾರಿತ ಛಾಯಾಚಿತ್ರ ಪ್ರದರ್ಶನ, ನ್ಯೂಸ್ ಕಾನ್ಫರೆನ್ಸ್ ರೂಂ, ಮ್ಯೂಸಿಯಂ ಸೇರಿದಂತೆ ಗಾಂಧೀಜಿಯವರ ಚರಕ ಪ್ರತಿಮೆ, ಮೂರು ಕೋತಿಗಳು ಪ್ರತಿಮೆಗಳು, ಗಾಂಧಿ ಹಾಗೂ ಮೊಮ್ಮಗ ನಡಿಗೆ ಪ್ರತಿಮೆ, ಗಾಂಧಿ ಮ್ಯೂರಲ್, ಹಾಗೂ ಕೆಸರಲ್ಲಿ ಬಿದ್ದ ಬಾಲಕನಿಗೆ ಸಹಾಯಹಸ್ತ ಚಾಚುತ್ತಿರುವ ಗಾಂಧಿ ಹೀಗೆ ಹತ್ತು ಹಲವು ವೈಶಿಷ್ಠತೆಯ ಪ್ರತಿಮೆಗಳ ಮೂಲಕ ಗಾಂಧಿಭವನ ಕಳೆಗಟ್ಟಿದೆ.
ಬುಧವಾರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರ ಸಮ್ಮುಖದಲ್ಲಿ ಗಾಂಧಿ ಭವನ ಲೋಕಾರ್ಪಣೆಯಾಗಲಿದೆ.
ಬೆಂಗಳೂರು: ಅ.2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ’ ಹಾಗೂ `ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು (Mahatma Gandhi) ಬೆಳಗಾವಿಯಲ್ಲಿ (Belagavi) ಸ್ವಾತಂತ್ರ‍್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಮೊದಲ ಭಾಗವಾಗಿ ಅ.2 ಗಾಂಧಿ ಜಯಂತಿಯಂದು 1 ಕಿ.ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗುವುದು. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಅವ್ರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಪ್ರದೀಪ್ ಈಶ್ವರ್
ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದಿದ್ದಾರೆ.
500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾವಿಧಿ:
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ ಎಂದರು.
ಶ್ವೇತ ವಸ್ತ್ರ ಧರಿಸಿ ನಡಿಗೆ:
ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು. ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದು, ಇಡೀ ವರ್ಷ ಗಾಂಧೀಜಿ ಅವರ ಆಚಾರ ವಿಚಾರವನ್ನು ಯುವ ಪೀಳಿಗೆಗೆ ತಿಳಿಸಲು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಪ್ರತಿಜ್ಞಾ ವಿಧಿಗಾಗಿ ಆಪ್ ಮೂಲಕ ನೋಂದಣಿ:
ರಾಜ್ಯದಲ್ಲಿ ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆಪ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್‌ಲೈನ್‌ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಬೆಂಗಳೂರು: ಈ ಬಾರಿ ಪಿತೃಪಕ್ಷ (Pitrupaksha) ಮಾಡಿ ಎಡೆ ಇಡುವವರಿಗೆ ಧರ್ಮ ಸಂಕಟ ಎದುರಾಗಿದೆ. ಗಾಂಧಿ ಜಯಂತಿ (Gandhi Jayanthi) ಮತ್ತು ಮಹಾಲಯ ಅಮಾವಾಸ್ಯೆ (Mahalaya Amavasya) ಒಂದೇ ದಿನ ಬಂದಿದೆ. ಗಾಂಧಿಜಯಂತಿ ದಿನ ಮಾಂಸ ಮಾರಾಟ (Meat Sale) ನಿಷೇಧ ಇರಲಿದೆ. ಹೀಗಾಗಿ ಮಹಾಲಯ ಅಮಾವಾಸ್ಯೆ ಇರುವುದರಿಂದ ಪಿತೃಪಕ್ಷ ಮಾಡೋರಿಗೆ ಮಾಂಸದ ಕೊರತೆ ಎದುರಾಗಲಿದೆ.
ಮಾಂಸ ಮಾರಾಟ ನಿಷೇಧ ಮಾಡಿದರೆ ಮಾಂಸ ಸಿಗಲ್ಲ. ಅದಕ್ಕಾಗಿ ಗಾಂಧಿ ಜಯಂತಿ ದಿನ ಮಾಂಸ ಮಾರಾಟಕ್ಕೆ ಅವಕಾಶ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಘಟನೆಗಳು, ಸಮಿತಿಗಳು ಮನವಿ ಮಾಡಿಕೊಂಡಿದೆ. ಈ ಸಂಬಂಧ ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ವಿ.ವಿ ಸತ್ಯನಾರಾಯಣ ಹಾಗೂ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕಯ ಅಧ್ಯಕ್ಷ ಬಿ.ಎಂ ಶಿವಕುಮಾರ್ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ಕಾಕತಾಳಿಯವಾಗಿ ಒಂದೇ ದಿನ ಎರಡು ಆಚರಣೆ ಬಂದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಪಿತೃಪಕ್ಷ ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಪತ್ರ ಸಲ್ಲಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪಟಾಕಿ ಬ್ಯಾನ್ ಯಾಕೆ?
ಹಳ್ಳಿಗಳ ಕಡೆ ಏನಾಗಲಿದೆಯೋ ಗೊತ್ತಿಲ್ಲ. ಹಲವು ಮಂದಿ ಮಾಂಸಾಹಾರವನ್ನು ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಇಟ್ಟು ಪೂಜೆ ಸಲ್ಲಿಸುತ್ತಾರೆ. ಈ ಹಿನ್ನೆಲೆ ಬೆಂಗಳೂರಿನಂತಹ ಸಿಟಿಗಳಲ್ಲಿ ಮಾಂಸ ಮಾರಾಟ ನಿಷೇಧ ಆದರೆ ಸಮಸ್ಯೆ ಆಗುತ್ತೆ. ತಲಾತಲಾಂತರದಿಂದ ಪಿತೃಪಕ್ಷದ ದಿನ ಎಡೆ ಇಟ್ಟುಕೊಂಡು ಬರುತ್ತಿದ್ದೇವೆ. ಈ ಬಾರಿಯು ಸಂಪ್ರದಾಯ ಪಾಲಿಸಬೇಕು. ಮಾಂಸ ಮಾರಾಟಕ್ಕೆ ಅವಕಾಶ ಕೊಡಿ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಕ್ರಮ ಮದ್ಯ ನಾಶದ ವೇಳೆ ಬಾಟಲಿ ದೋಚಿ ಓಡಿದ್ರು!
ಬೆಂಗಳೂರು: ಸೆಪ್ಟೆಂಬರ್ 15ರ ವರೆಗೆ ಬೆಂಗಳೂರು ನಗರದ ರಸ್ತೆಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ (BBMP) ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ವಾರ್ನಿಂಗ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 15ರ ವರೆಗೆ ಗಡುವು ಕೊಟ್ಟಿದ್ದೇನೆ. ನಂತರ ನಾನೇ ಸಿಟಿ ರೌಂಡ್ ಹಾಕುತ್ತೇನೆ. ಬೇಗ ಗುಂಡಿ ಮುಚ್ಚಬೇಕು. ಏನಾದರೂ ಸಮಸ್ಯೆಯಾದರೆ ಎಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: ರಷ್ಯಾ-ಉಕ್ರೇನ್ ನಡುವೆ ಶಾಂತಿ ಮಾತುಕತೆಗೆ ಮೋದಿ ಪ್ರಯತ್ನ; ಮಾಸ್ಕೋಗೆ ಅಜಿತ್ ದೋವಲ್
ಡಿಸಿಎಂ ಅಮೆರಿಕ (America) ಪ್ರವಾಸಕ್ಕೆ ತೆರಳುವ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಲ್ಲೇಶ್ವರಂ (Malleshwaram) ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಗುಂಡಿ ಮುಚ್ಚಲು ಗಡುವು ನೀಡಿದ ಹಿನ್ನೆಲೆಯಲ್ಲಿ, ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಹೆಚ್ಚಾಗಿರುವ ರಸ್ತೆ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಗಾಂಧಿ ಜಯಂತಿ (Gandhi Jayanti) ಮುಂಚಿನ ದಿನವಾದ ಇಂದು (ಅ.1) ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಪಾಲ್ಗೊಂಡಿದ್ದ ಫಿಟ್‍ನೆಸ್ ಪರಿಣಿತ ಅಂಕಿತ್ ಬೈಯನ್‍ಪುರಿಯಾ (Ankit Baiyanpuria) ಕೂಡ ಪಾಲ್ಗೊಂಡಿದ್ದರು. ಈ ವೀಡಿಯೋವನ್ನು ಪ್ರಧಾನಿಗಳು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಈ ಅಂಕಿತ್ ಬೈಯನ್‍ಪುರಿಯಾ ಯಾರು?
ಅಂಕಿತ್ ಬೈಯಾನ್‍ಪುರಿಯ ಅಲಿಯಾಸ್ ಅಂಕಿತ್ ಸಿಂಗ್ ಅವರು ಹರಿಯಾಣ ಮೂಲದ ಫಿಟ್‍ನೆಸ್ ಪರಿಣತರಾಗಿದ್ದಾರೆ. ಅವರು ದೇಸಿಯ ಶೈಲಿಯ ಕಸರತ್ತಿಗೆ ಹೆಸರುವಾಸಿಯಾಗಿದ್ದಾರೆ. ಇತ್ತೀಚೆಗೆ ಅವರು ಮಾನಸಿಕ ಆರೋಗ್ಯಕ್ಕಾಗಿ 75 ದಿನಗಳ ಚಾಲೆಂಜ್ ಎಂಬ ವಿಷಯದಿಂದ ಉತ್ತಮ ಹೆಸರು ಗಳಿಸಿದ್ದಾರೆ. ಅಲ್ಲದೇ ಅವರು ದೇಸಿ ಶೈಲಿಯ ಮಾಜಿ ಕುಸ್ತಿಪಟು ಆಗಿದ್ದಾರೆ. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ಸ್ವಚ್ಛಾಂಜಲಿ ಅರ್ಪಿಸಿದ ಮೋದಿ
ಅವರ ಫಿಟ್‍ನೆಸ್ ಚಾಲೆಂಜ್ ವಿಚಾರ ಅಮೆರಿಕನ್ ವಾಣಿಜ್ಯೋದ್ಯಮಿ ಆಂಡಿ ಫ್ರಿಸೆಲ್ಲಾ ಅವರಿಂದ ಸ್ಫೂರ್ತಿ ಪಡೆದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಫಿಟ್‍ನೆಸ್ ಕುರಿತು ನನ್ನ ವೈಯಕ್ತಿಕ ಸಂಶೋಧನೆಯ ಸಮಯದಲ್ಲಿ ಆಂಡಿ ಫ್ರಿಸೆಲ್ಲಾ ಅವರ 75 ದಿನಗಳ ಹಾರ್ಡ್ ಚಾಲೆಂಜ್‍ನ ವೀಡಿಯೊವನ್ನು ನೋಡಿದ್ದೆ. ನನ್ನ ವ್ಯಾಯಾಮದಲ್ಲಿ ಇದೇ ರೀತಿಯ ತಂತ್ರಗಳನ್ನು ಅಳವಡಿಸಲು ಮತ್ತು ಪರಿಚಯಿಸಲು ನಾನು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಅಂಕಿತ್ ಅವರು ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್‍ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ಸ್ಟಾಗ್ರಾಮ್‍ನಲ್ಲಿ 28 ದಿನಗಳಲ್ಲಿ ಹತ್ತು ಲಕ್ಷದಿಂದ 30.7 ಲಕ್ಷ ಫಾಲೋವರ್ಸ್‍ಗಳನ್ನು ಪಡೆದಿದ್ದಾರೆ.
ಅವರು ಸಂದರ್ಶನವೊಂದರಲ್ಲಿ ತಮ್ಮ ಅನುಯಾಯಿಗಳಿಗೆ “ದೈಹಿಕ ಶಕ್ತಿಯನ್ನು ಮಾತ್ರ ನೋಡಬಾರದು, ಮಾನಸಿಕ ಶಕ್ತಿಗೂ ಆಧ್ಯತೆ ಕೊಡಬೇಕು. ಅದು ಅಧ್ಯಾತ್ಮದ ಮೂಲಕ ಮಾತ್ರ ಬರುತ್ತದೆ. ಅದಕ್ಕಾಗಿ ಭಗವದ್ಗೀತೆ ಓದಬೇಕು ಮತ್ತು ಧ್ಯಾನ ಮಾಡಬೇಕು ಎಂದು ಹೇಳಿದ್ದರು. ಅಂಕಿತ್ ಅವರ ತಂದೆ ಕೃಷಿಕರಾಗಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಚೀನಾ, ಪಾಕ್ ತಂಟೆಗೆ ಬ್ರೇಕ್ ಹಾಕಲು ಸೇನೆಗೆ `ಪ್ರಚಂಡ’ ಬಲ
ಬೆಂಗಳೂರು: ಗಾಂಧೀಜಯಂತಿ (Gandhi Jayanti) ಅಂಗವಾಗಿ ಇಲ್ಲಿನ ಖಾದಿ ಎಂಪೋರಿಯಂಗೆ (Khadhi Emporium) ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಲೇಡಿಸ್ ಡ್ರೆಸ್ ಕೋಲ್ ಟಾಪ್ (LadiesCowltop), ರೆಡಿಮೇಡ್ ಫುಲ್ ಶರ್ಟ್ ಸೇರಿದಂತೆ ಒಟ್ಟು 3,329 ರೂ. ಬೆಲೆಯ ಖಾದಿ ಬಟ್ಟೆ ಖರೀದಿಸಿದ್ದಾರೆ.
ಸತ್ಯಾಗ್ರಹ ಮತ್ತು ಅಹಿಂಸೆ ಎಂಬ ಅಸ್ತ್ರಗಳಿಂದ ಭಾರತ ದೇಶವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಸಮಸ್ತ ಭಾರತೀಯರನ್ನು ಒಗ್ಗೂಡಿಸಿ ಜಾಗತಿಕ ಮನ್ನಣೆಗಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. pic.twitter.com/heTpZCsCPS
ಸಂಕಷ್ಟದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಸಂಘ-ಸಂಸ್ಥೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಟಿಯಿಂದ ಸಿಎಂ ಭೇಟಿ ನೀಡಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಖಾದಿ ಬಟ್ಟೆಗಳನ್ನು (Khadi Dress) ಖರೀದಿಸಿದ್ದಾರೆ.
ಇದೇ ವೇಳೆ ಸಿಎಂಗೆ ಶಾಲು ಹೊದಿಸಿ, ಸನ್ಮಾನಿಸಿದ ಸಿಬ್ಬಂದಿ, ಹುಬ್ಬಳ್ಳಿಯ ಖಾದಿ ಎಂಪೋರಿಯಂಗೆ ಭೇಟಿ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ಬಾರಿ ಆಶ್ವಾಸನೆ ನೀಡಿದ್ದೀರಿ ಇನ್ನೂ ಬಂದಿಲ್ಲ. ಒಂದು ಬಾರಿಯಾದರೂ ಭೇಟಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ. ಸಿಎಂ ಸಹ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದನ್ನೂ ಓದಿ: ಮಹಿಳಾ ತಹಶೀಲ್ದಾರ್‌ಗೆ ಎಷ್ಟು ಮದುವೆ ಆಗಿದೆ?- RTI ಮಾಹಿತಿ ಕೇಳಿದ ಕಾರ್ಯಕರ್ತ ಅರೆಸ್ಟ್
ಸಿಎಂ ಏನೇನು ಖರೀದಿಸಿದ್ರು?
ಖಾದಿ ಎಂಪೋರಿಯಂನಲ್ಲಿ ಸಿಎಂ ಬೊಮ್ಮಾಯಿ 1 ಲೇಡಿಸ್ ಡ್ರೆಸ್ ಕೋಲ್ ಟಾಪ್, 1 ರೆಡಿಮೇಡ್ ಫುಲ್ ಶರ್ಟ್, 1 ರೆಡಿಮೇಡ್ ಟೀ ಶರ್ಟ್, 3 ಜುಬ್ಬಾ, ಸೇರಿದಂತೆ 8 ವಿವಿಧ ಬಟ್ಟೆಗಳನ್ನ ಖರೀದಿಸಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿದಂತೆ ಅನೇಕ ಗಣ್ಯರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವವನ್ನು ಸಲ್ಲಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾನು ಎಲ್ಲಾ ನಾಗರಿಕರ ಪರವಾಗಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸುತ್ತೇನೆ. ಶಾಂತಿ, ಸಮಾನತೆ, ಕೋಮು ಸೌಹಾರ್ದತೆಯ ಮೌಲ್ಯ ಹಾಗೂ ಅವರ ಜೀವನದ ಎಲ್ಲಾ ಸ್ಫೂರ್ತಿದಾಯಕ ಕ್ಷಣಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಗಾಂಧಿ ಜಯಂತಿಗೆ ಶುಭ ಕೋರಿದರು.
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದ್ದರು. ನಂತರ ಮಾತನಾಡಿದ ಅವರು, ಈ ಗಾಂಧಿ ಜಯಂತಿಯು ಇನ್ನೂ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಭಾರತವು ಆಜಾದಿ ಕಾ ಅಮೃತ ಮಹೋತ್ಸವದ ವರ್ಷವಾಗಿದೆ. ಬಾಪು ಆದರ್ಶಗಳನ್ನು ಅನುಸರಿಸುವ ಮೂಲಕ ಖಾದಿ ಮತ್ತು ಕರಕುಶಲ ವಸ್ತುಗಳನ್ನು ಖರೀದಿಸಲು ಮನವಿ ಮಾಡಿದ್ದರು. ಇದನ್ನೂ ಓದಿ: ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋದ ಪ್ರಕರಣ – ಇಬ್ಬರ ಮೃತದೇಹ ಪತ್ತೆ
Live Tv
[brid partner=56869869 player=32851 video=960834 autoplay=true]