Tag: ಗಾದಿ ಕಾರ್ಖಾನೆ

  • ಗಾದಿ ಕಾರ್ಖಾನೆ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ಗಾದಿಗಳು ಸುಟ್ಟು ಭಸ್ಮ

    ಗಾದಿ ಕಾರ್ಖಾನೆ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ಗಾದಿಗಳು ಸುಟ್ಟು ಭಸ್ಮ

    ಬೆಳಗಾವಿ: ಗಾದಿ ತಯಾರಿಕಾ ಅಂಗಡಿಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘದ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟು ಕರಕಲಾಗಿರುವ ಘಟನೆ ಆಜಾದ್ ನಗರದಲ್ಲಿ ನಡೆದಿದೆ.

    ಲೇಕ್ ವಿವ್ ಆಸ್ಪತ್ರೆಯ ಸಮೀಪದ ಮಾಡರ್ನ್ ಗಾದಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೊದಲಿಗೆ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಏಕಾ ಏಕಿಯಾಗಿ ಅಗ್ನಿ ತನ್ನ ಕೆನ್ನಾಲಿಗೆಯನ್ನು ಚಾಚಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.  ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    ಅಂಗಡಿ ಮಾಲೀಕರು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.