Tag: ಗಾಯನ

  • ತಮ್ಮ ಚಿತ್ರದ ಟೈಟಲ್ ಸಾಂಗ್ ಹಾಡಿದ ನಟ ಅನಿರುದ್ಧ

    ತಮ್ಮ ಚಿತ್ರದ ಟೈಟಲ್ ಸಾಂಗ್ ಹಾಡಿದ ನಟ ಅನಿರುದ್ಧ

    ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ  “chef ಚಿದಂಬರ” ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಆರಂಭದ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಈ ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಬಿಡುಗಡೆಯಾಗಿದೆ. ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆಯೂ ಹೌದು. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ ಅನಿರುದ್ಧ್ ಅವರೆ ಹಾಡಿದ್ದಾರೆ. ಅನಿರುದ್ದ್ ಅವರ ಗಾಯನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.  ಈ ಹಾಡಿನ ಕೆಲವು ಭಾಗ  RAP   ಶೈಲಿಯಲ್ಲಿದ್ದು ಅದನ್ನು ರೋಹಿತ್ ಅವರು ಹಾಡಿದ್ದಾರೆ. ಮೊದಲ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿದೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಪುನೀತ ಪರ್ವ ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗೆ ಕೇಸರಿ ಬಾತ್, ಉಪ್ಪಿಟ್ಟು

    ಪುನೀತ ಪರ್ವ ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗೆ ಕೇಸರಿ ಬಾತ್, ಉಪ್ಪಿಟ್ಟು

    ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ ಪರ್ವ (Puneeth Parva) ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗಾಗಿ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, ದೂರದ ಊರಿನಿಂದ ಅಭಿಮಾನಿಗಳು ಬೆಳಗ್ಗೆಯೇ ಬಂದಿರುವುದರಿಂದ ಅವರಿಗಾಗಿ ಕೇಸರಿ ಬಾತ್ ಮತ್ತು ಉಪ್ಪಿಟ್ಟು ತಯಾರಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮತ್ತು ಕಾರ್ಯಕ್ರಮದ ಸಿಬ್ಬಂದಿಗೆ ಮೊಸರನ್ನ, ಬಿಸಿಬೇಳೆ ಬಾತ್ ಮತ್ತು ಬೊಂಡಾ ನೀಡಲಾಗುತ್ತಿದೆ.

    ತಮ್ಮ ನೆಚ್ಚಿನ ನಟನ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ರಾಜ್ಯಾದ ನಾನಾ ಜಿಲ್ಲೆಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದು, ತಡರಾತ್ರಿವರೆಗೂ ಕಾರ್ಯಕ್ರಮವನ್ನು ವೀಕ್ಷಿಸಲಿದ್ದಾರೆ. ಹಾಗಾಗಿಯೇ ಅವರಿಗೆ ನೀರು, ತಿಂಡಿ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಮಾಡಿದೆ ದೊಡ್ಮನೆ. ವಾರದಿಂದಲೇ ಈ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಮಾಡಲಾಗಿದ್ದು, ಗಣ್ಯರಿಗೆ ಮತ್ತು ಅಭಿಮಾನಿಗಳಿಗೆ ಕೂರಲು ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. ಇದನ್ನೂ ಓದಿ:BREAKING:`ಕಾಂತಾರ’ ಪಾರ್ಟ್ 2 ಬಗ್ಗೆ ಬಿಗ್ ಅಪ್‌ಡೇಟ್ ಕೊಟ್ರು ನಟ ಪ್ರಮೋದ್ ಶೆಟ್ಟಿ

    ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಸೇರಿದಂತೆ ಅನೇಕ ತಾರೆಯರು ನೃತ್ಯ ಮಾಡಲಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಸಿನಿಮಾಗಳ ಗೀತೆಗಳಿಗೆ ತಾರೆಯರು ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಅರಮನೆ ಮೈದಾನ ಸಿದ್ಧಗೊಂಡಿದ್ದು, ಕನ್ನಡ ಸಿನಿಮಾ ರಂಗದ ಬಹುತೇಕ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.

    ಖ್ಯಾತಗಾಯಕರಾದ ವಿಜಯ್ ಪ್ರಕಾಶ್, ಗುರುಕಿರಣ್ ಸೇರಿದಂತೆ ಅನೇಕ ಗಾಯಕರು ಈ ಕಾರ್ಯಕ್ರಮದಲ್ಲಿ ಪುನೀತ್ ನಟನೆಯ ಹಾಡುಗಳನ್ನು ಹೇಳಲಿದ್ದಾರೆ. ಐದುನೂರಕ್ಕೂ ಹೆಚ್ಚು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಬಹೃತ್ ಸಮಾರಂಭ ಇದಾಗಿದೆ.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

    ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

    ಬೆಂಗಳೂರು: ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ(83) ಕಳೆದ ರಾತ್ರಿ ಹೃದಯಸ್ತಂಬನದಿಂದ ವಿಧಿವಶರಾಗಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

    ಶಿವಮೊಗ್ಗ ಸುಬ್ಬಣ್ಣನವರ ಮಗ ಶ್ರೀರಂಗ ಮಾತಾಡಿ, ನಿನ್ನೆ ಸಂಜೆ ಸಂಜೆ ಐದರ ಸುಮಾರಿಗೆ ಹುಷಾರಿರಲಿಲ್ಲ. ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆವು. ಅಲ್ಲಿಂದ ಜಯದೇವಕ್ಕೆ ಶಿಫ್ಟ್ ಮಾಡುವಷ್ಟರಲ್ಲಿ ಹೃದಯಘಾತವಾಯ್ತು. ಬೆಂಗಳೂರಿನಲ್ಲೇ ಇವತ್ತು ಅಂತ್ಯಕ್ರಿಯೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    ಕಾಡು ಕುದುರೆ ಸಿನಿಮಾದ `ಕಾಡು ಕುದುರೆ ಓಡಿಬಂದಿತ್ತಾ’ ಹಾಡಿಗೆ 1979ರಲ್ಲಿ ಸುಬ್ಬಣ್ಣ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇದು ಹಿನ್ನೆಲೆ ಗಾಯನದಲ್ಲಿ ಕನ್ನಡಕ್ಕೆ ಒಲಿದ ಮೊದಲ ರಾಷ್ಟ್ರಪ್ರಶಸ್ತಿಯಾಗಿದೆ.

    ರಜತ ಕಮಲ, ಶಿಶುನಾಳ ಷರಿಫ್ ಪ್ರಶಸ್ತಿ, ರಾಜ್ಯ ಪ್ರಶಸ್ತಿ, ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸುಬ್ಬಣ್ಣ ಅವರಿಗೆ ಲಭಿಸಿದೆ. ನೋಟರಿ ಪಬ್ಲಿಕ್ ಅಲ್ಲೂ ಅಪಾರ ಸೇವೆ ಸಲ್ಲಿಸಿದ್ದ ಶಿವಮೊಗ್ಗ ಸುಬ್ಬಣ್ಣ ಗಾಯಕರಾಗಿ ಜೊತೆಗೆ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.

    ಗಾಯನ ಲೋಕದ ದಿಗ್ಗಜರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಆನಂದಮಯ ಈ ಜಗ ಹೃದಯ ಏತಕೆ ಭಯಮಾನೋ, ಮೊದಲು ಮಾನವನಾಗು ಸೇರಿದಂತೆ ಹಲವಾರು ಜನಪ್ರಿಯ ಹಾಡುಗಳಿಗೆ ಸುಬ್ಬಣ್ಣ ದನಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲಹರಿ ವೇಲು ಅವರ ಹುಟ್ಟುಹಬ್ಬಕ್ಕೆ, ಅವರೇ ಬರೆದು ಹಾಡಿದ ಸಾಂಗ್ ರಿಲೀಸ್

    ಲಹರಿ ವೇಲು ಅವರ ಹುಟ್ಟುಹಬ್ಬಕ್ಕೆ, ಅವರೇ ಬರೆದು ಹಾಡಿದ ಸಾಂಗ್ ರಿಲೀಸ್

    ಭಾರತೀಯ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಲಹರಿ ಸಂಸ್ಥೆಯ ಲಹರಿ ವೇಲು ಈಗಾಗಲೇ ಗಾಯಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಗಾಯನದ ಜೊತೆಗೆ ಗೀತರಚನೆ ಕೂಡ ಮಾಡಿದ್ದಾರೆ. ಇವರದ್ದೇ ಗೀತರಚನೆ ಮತ್ತು ಗಾಯನದಲ್ಲಿ ಮೂಡಿ ಬಂದಿರುವ ‘ಹುಟ್ಗುಣ ಸುಟ್ರು ಹೋಗಲ್ಲ’ ಗೀತೆಯು ಜೂನ್ 11 ರಂದು ಲಹರಿ ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಆಗಲಿದೆ. ಅಂದು ಅವರ ಹುಟ್ಟುಹಬ್ಬವೂ ಆಗಿರುವುದರಿಂದ ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ಅವರು ವೇಲು ಅವರ ಹುಟ್ಟುಹಬ್ಬಕ್ಕೆ ಇದನ್ನು ಗಿಫ್ಟ್ ಆಗಿ ನೀಡಿದ್ದಾರೆ.

    ಇದು ಲಹರಿ ವೇಲು ಅವರು ಹಾಡಿರುವ ಎರಡನೇ ಗೀತೆಯಾಗಿದ್ದು, ಇವರು ಗಾಯಕರಾಗಿದ್ದು ವಿಶೇಷ ಸಂದರ್ಭದಲ್ಲಂತೆ. ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಲಹರಿ ಸಂಸ್ಥೆಯು ಅನೇಕರಿಗೆ ಸಹಕಾರ ನೀಡಿದೆ. ಆ ವೇಳೆಯಲ್ಲಿ ಸುಮ್ಮನೆ ತಮ್ಮ ಪಾಡಿಗೆ ತಾವು ವೇಲು ಹಾಡೊಂದನ್ನು ಗುನುಗುತ್ತಿದ್ದರಂತೆ. ಅದನ್ನು ಕೇಳಿಸಿಕೊಂಡ ಅಭಿಮಾನ್ ರಾಯ್ ನೀವ್ಯಾಕೆ ಹಾಡೋಕೆ ಟ್ರೈ ಮಾಡಬಾರದು ಅಂದರಂತೆ. ಮುಜುಗರದಿಂದಲೇ ವೇಲು ಒಪ್ಪಿಕೊಂಡು ಆನಂತರ ‘ಇರುವುದೊಂದೆ ಜನ್ಮ ನೀ ಸಹಾಯ ಮಾಡು ತಮ್ಮ’ ಗೀತೆಯನ್ನು ಹಾಡಿದ್ದಾರೆ. ಆ ಗೀತೆ ಒಂದು ಮಿಲಿಯನ್ ವೀಕ್ಷಣೆ ಪಡೆದಿದೆ. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?

    ಹೀಗೆ ಶುರುವಾದ ಗಾಯನ ಪಯಣ ಮುಂದುವರಿದದ್ದು ಮತ್ತದೆ ಅಭಿಮಾನ್ ರಾಯ್ ಸಂಗೀತ ಸಂಯೋಜನೆಯ ಮೂಲಕ. ಅದ್ಭುತ ಮಾತುಗಾರ ಆಗಿರುವ ಲಹರಿ ವೇಲು ಅವರು, ಅಷ್ಟೇ ಚೆನ್ನಾಗಿ ಜನರಿಗೆ ಮಾರ್ಗದರ್ಶನ ಮಾಡಬಲ್ಲರು. ಒಳ್ಳೊಳ್ಳೆ ಉದಾಹರಣಗಳನ್ನು ಕೊಟ್ಟು ತಿದ್ದಬಲ್ಲರು. ಈ ಗುಣವೇ ಅವರನ್ನು ಸಾಹಿತಿಯನ್ನಾಗಿ ಮಾಡಿದೆ. ಒಂದಷ್ಟು ಸಾಲುಗಳನ್ನು ಬರೆದು, ಅಭಿಮಾನ್ ರಾಯ್‌ಗೆ ಕಳುಹಿಸಿದ್ದಾರೆ. ಆ ಸಾಲುಗಳು ಹಾಡಾಗಿ ಜೂ.11 ರಂದು ಕೇಳುಗರ ಕಿವಿಗೂ ತಲುಪಲಿವೆ.

    ಈ ಕುರಿತು ʻಪಬ್ಲಿಕ್ ಟಿವಿʼ ಡಿಜಿಟಲ್ ಜೊತೆ ಮಾತನಾಡಿದ ಲಹರಿ ವೇಲು ಅವರು, “ಈಗಾಗಲೇ ಅಭಿಮಾನ್ ರಾಯ್ ಅವರ ಸಂಗೀತ ಸಂಯೋಜನೆಯಲ್ಲಿ ಒಂದು ಗೀತೆಯನ್ನು ಹಾಡಿರುವೆ. ಇದು ಎರಡನೇ ಗೀತೆ. ಸ್ಫೂರ್ತಿ ತುಂಬಬಲ್ಲಂತಹ ಸಾಲುಗಳನ್ನು ಬರೆದು ರಾಯ್ ಅವರಿಗೆ ತೋರಿಸಿದೆ. ಸಾಲುಗಳು ಚೆನ್ನಾಗಿವೆ ಅವುಗಳನ್ನು ಹಾಡಾಗಿಸಿ ಅಂದರು. ಹೀಗೆ ಈ ಹಾಡು ಶುರುವಾಗಿ, ಇದೀಗ ರೆಕಾರ್ಡಿಂಗ್ ಕೂಡ ಆಗಿದೆ. ನಾನು ಕಂಡುಂಡ ಅನುಭವಗಳನ್ನೇ ಹಾಡಾಗಿಸಿದ್ದೇನೆ’ ಎನ್ನುತ್ತಾರೆ ವೇಲು ಅವರು.

  • ನಿರೂಪಕನಾಗಿ ಸಂಗೀತ ಪ್ರತಿಭೆಗಳನ್ನು ಬೆಳಕಿಗೆ ತಂದ ಎಸ್‍ಪಿಬಿ

    ನಿರೂಪಕನಾಗಿ ಸಂಗೀತ ಪ್ರತಿಭೆಗಳನ್ನು ಬೆಳಕಿಗೆ ತಂದ ಎಸ್‍ಪಿಬಿ

    ಬೆಂಗಳೂರು: ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾಯಕ ಮಾತ್ರವಲ್ಲದೆ ನಟ, ಡಬ್ಬಿಂಗ್ ಆರ್ಟಿಸ್ಟ್ ಹೀಗೆ ಬೆಳ್ಳಿ ತೆರೆಯಲ್ಲಿ ಮಿಂಚಿ ನಂತರ ಕಿರುತೆರೆಗೂ ಕಾಲಿಟ್ಟು ಪ್ರಸಿದ್ಧಿ ಪಡೆದಿದ್ದರು. ಎದೆ ತುಂಬಿ ಹಾಡಿದೆನು ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು.

    90ರ ದಶಕದಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕಿರುತೆರೆಗೂ ಎಂಟ್ರಿ ಕೊಟ್ಟರು. ತೆಲುಗಿನ ಪಾಡುತಾ ತಿಯಗಾ ಕಾರ್ಯಕ್ರಮದಲ್ಲಿ ನಿರೂಪಕನಾಗಿ ಮನೆಮಾತಾದರು. ಕನ್ನಡದಲ್ಲಿ ಸಹ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಆಗಿ ನಿರೂಪಕನಾಗಿ ಗಮನ ಸೆಳೆದರು. ಈ ಕಾರ್ಯಕ್ರಮಗಳಿಂದ ಅದೆಷ್ಟೋ ಸಂಗೀತ ಪ್ರತಿಭೆಗಳು ಬೆಳಕಿಗೆ ಬಂದವು. ಅಲ್ಲದೆ ಈ ಕಾರ್ಯಕ್ರಮದಿಂದ ಎಸ್‍ಪಿಬಿ ಕನ್ನಡಿಗರ ಮನೆ ಮಾತಾದರು.

    ಬಾಲು ಗಾನಕ್ಕೆ ಪ್ರಶಸ್ತಿಗಳ ಸುರಿಮಳೆ
    ಎಸ್‍ಪಿಬಿ ಗಾನಕ್ಕೆ ಮಂತ್ರಮುಗ್ಧರಾಗದೆ ಇರುವವರೇ ಇಲ್ಲ ಎನ್ನಬಹುದು. ಬಾಲು ಗಾಯನಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಆಗಿದೆ. ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದರು. ಶಂಕರಾಭರಣಂ ಸಿನಿಮಾಗೆ ಮೊದಲ ಬಾರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿತು.್ತ ಹಿಂದಿಯ ಏಕ್ ದುಜೆ ಕೇಲಿಯೇ ಸಿನಿಮಾ, ಕನ್ನಡದ ಪಂಚಾಕ್ಷರಿ ಗವಾಯಿ, ತೆಲುಗಿನ ರುದ್ರವೀಣ, ತಮಿಳಿನ ಮಿನ್ನರ ಕನ್ನವು ಸಿನಿಮಾಗಳಿಗೂ ರಾಷ್ಟ್ರೀಯ ಪ್ರಶಸ್ತಿ ಅರಸಿ ಬಂದಿತ್ತು. ಮೈನೇ ಪ್ಯಾರ್ ಕಿಯಾ ಚಿತ್ರಕ್ಕೆ ಮೊದಲ ಬಾರಿಗೆ ಫಿಲ್ಮ್ ಫೇರ್ ಪ್ರಶಸ್ತಿ ಸಿಕ್ಕಿತ್ತು. ಎನ್‍ಟಿಆರ್ ಪ್ರಶಸ್ತಿ, 8 ನಂದಿ ಪ್ರಶಸ್ತಿಗಳು ದಕ್ಕಿದ್ದವು. ಆದರೆ ಕರ್ನಾಟಕ ರಾಜ್ಯ ಸರ್ಕಾರ ಮಾತ್ರ ಅದೇಕೋ ಬಾಲು ಹೆಸರನ್ನು ಪ್ರಶಸ್ತಿಗಳಿಗೆ ಪರಿಗಣಿಸಲೇ ಇಲ್ಲ ಎನ್ನುವುದು ಬೇಸರದ ಸಂಗತಿ.

  • ಹಾಡುಗಾರಿಕೆಯ ನೈಪುಣ್ಯತೆ ಪ್ರದರ್ಶಿಸಿದ ಜಿ.ಟಿ ದೇವೇಗೌಡ

    ಹಾಡುಗಾರಿಕೆಯ ನೈಪುಣ್ಯತೆ ಪ್ರದರ್ಶಿಸಿದ ಜಿ.ಟಿ ದೇವೇಗೌಡ

    ಮೈಸೂರು: ಮೈಸೂರು ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡರು ತಾವು ಕೇವಲ ರಾಜಕಾರಣಿ ಮಾತ್ರವಲ್ಲ ಒಳ್ಳೆಯ ಗಾಯಕರು ಕೂಡ ಹೌದು ಎಂದು ತಮ್ಮಲ್ಲಿ ಅಡಗಿದ್ದ ಹಾಡುಗಾರಿಕೆಯ ನೈಪುಣ್ಯತೆಯನ್ನು ಪ್ರದರ್ಶಿಸಿದ್ದಾರೆ.

    ಶನಿವಾರ ಮೈಸೂರಿನ ಕಲಾಮಂದಿರದಲ್ಲಿ `ಧರೆಗೆ ದೊಡ್ಡವರು’ ಮಾದೇಶ್ವರ ಹಾಗೂ ಮಂಟೇಸ್ವಾಮಿ ಕಾವ್ಯಗಳ ಅಹೋರಾತ್ರಿ ಕಥಾ ಗಾಯನ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ತಾವೇ ಖುದ್ದಾಗಿ ಹಾಡು ಹೇಳುವ ಮೂಲಕ ಜಿ.ಟಿ ದೇವೇಗೌಡರು ಉದ್ಘಾಟಿಸಿದ್ದಾರೆ. `ಗುರುಮೂರ್ತಿ ಗುರುವಾಗಿ ಅರವಿನೋಳ್ ಅರಿವಾಗಿ’ ಎಂಬ ಜಾನಪದ ಶೈಲಿಯ ಗೀತೆಯನ್ನು ಹಾಡುವ ಮೂಲಕ ತಾವೂ ಸಹ ಒಳ್ಳೆಯ ಗಾಯಕನೆಂದು ನಿರೂಪಿಸಿದ್ದಾರೆ.

    ಕಳೆದ ದಸರಾ ವೇಳೆ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ತಾವೊಬ್ಬ ಕ್ರೀಡಾಪಟು ಎಂದು ನಿರೂಪಿಸಿದ್ದರು. ಈಗ ಹಾಡು ಹೇಳುವ ಮೂಲಕ ತಮ್ಮಲ್ಲೂ ಕಲಾವಿದನಿದ್ದಾನೆ, ತಾವು ಕೇವಲ ರಾಜಕೀಯ ಪಟುಗಳನ್ನು ಕರಗತ ಮಾಡಿಕೊಂಡು ಎದುರಾಳಿಗಳಿಗೆ ಮಣ್ಣುಮುಕ್ಕಿಸುವ ಕಲೆ ರೂಢಿಸಿಕೊಂಡಿರುವ ರಾಜಕಾರಣಿ ಮಾತ್ರವಲ್ಲ ಒಳ್ಳೆಯ ಗಾಯಕ ಹಾಗೂ ಕ್ರೀಡಾಪಟು ಎಂಬುದನ್ನು ಸಾಬೀತು ಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews