Tag: ಗಿಫ್ಟ್ ಪೊಲಿಟಿಕ್ಸ್

  • ಶಾಸಕ ಶಾಮನೂರು ಕೊಟ್ಟ ಗಿಫ್ಟನ್ನು ರಸ್ತೆಗೆ ಎಸೆದು ಮಹಿಳೆಯರ ಆಕ್ರೋಶ

    ಶಾಸಕ ಶಾಮನೂರು ಕೊಟ್ಟ ಗಿಫ್ಟನ್ನು ರಸ್ತೆಗೆ ಎಸೆದು ಮಹಿಳೆಯರ ಆಕ್ರೋಶ

    ದಾವಣಗೆರೆ: ಚುನಾವಣೆ (Election) ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಸಾಕಷ್ಟು ಕಸರತ್ತು ಮಾಡುತ್ತವೆ. ಅಲ್ಲದೆ ಇಷ್ಟು ದಿನ ಇವರ ಕಷ್ಟಕ್ಕೆ ಸ್ಪಂದಿಸದ ನಾಯಕರು ಚುನಾವಣಾ ಸಂದರ್ಭದಲ್ಲಿ ಹಬ್ಬ ಹರಿದಿನಗಳ ಶುಭಾಶಯ ಕೋರಿ ಸೀರೆ, ಕುಕ್ಕರ್, ಸೇರಿದಂತೆ ಹಲವಾರು ಉಡುಗೊರೆಗಳನ್ನು (Gift) ಮತದಾರರಿಗೆ ನೀಡಿ ಮತ ಸೆಳೆಯುವ ತಂತ್ರವನ್ನು ಮಾಡುತ್ತಾರೆ. ಇದೀಗ ನಮಗೆ ಸೀರೆ ಬೇಡ, ಮೂಲಭೂತ ಸೌಕರ್ಯ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ಸೀರೆಗಳನ್ನು (Saree) ಬೀದಿಗೆ ಎಸೆದಿರುವ ಪ್ರಸಂಗ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆಯ (Davanagere) ದಕ್ಷಿಣ ಕ್ಷೇತ್ರದ ಶಾಸಕ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಕಳೆದ 4 ಚುನಾವಣೆಯಿಂದ ಗೆದ್ದು ಆಡಳಿತ ನಡೆಸುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಕಳೆದ 1 ತಿಂಗಳಿನಿಂದ ದಾವಣಗೆರೆಯ ಉತ್ತರ ಹಾಗೂ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್‌ಎಸ್ ಮಲ್ಲಿಕಾರ್ಜುನ್ ಭಾವಚಿತ್ರವಿರುವ ಬ್ಯಾಗ್‌ಗಳಲ್ಲಿ ಸೀರೆ, ಕುಕ್ಕರ್, ಸೇರಿದಂತೆ ಗೃಹ ಬಳಕೆ ವಸ್ತುಗಳನ್ನು ಮತದಾರರಿಗೆ ನೀಡುತ್ತಿದ್ದಾರೆ. ಅದರಲ್ಲಿ ಯುಗಾದಿ ಹಬ್ಬದ ಶುಭಾಶಯಗಳು ಎಂದು ಶುಭಾಶಯ ತಿಳಿಸುತ್ತಾ ಉಡುಗೊರೆಗಳನ್ನು ಹಂಚಿಕೆ ಮಾಡುತ್ತಿದ್ದಾರೆ.

    ಭಾಷಾ ನಗರದಲ್ಲಿ ಗಿಫ್ಟ್ ಹಂಚಿಕೆ ಮಾಡಿದ್ದು ಅಲ್ಲಿನ ಸ್ಥಳೀಯ ಮಹಿಳೆಯರು ಶಾಮನೂರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಸರಿಯಾದ ಚರಂಡಿ ಇಲ್ಲ, ರಸ್ತೆ ಇಲ್ಲ. ಪ್ರಾಣಿಗಳು ವಾಸ ಮಾಡುವ ರೀತಿ ನಾವು ವಾಸ ಮಾಡುತ್ತಾ ಇದ್ದೇವೆ. ಮೂಲಭೂತ ಸೌಕರ್ಯಗಳನ್ನು ಒದಗಿಸಿ ಎಂದರೆ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಆದರೆ ಈಗ ಸೀರೆಗಳನ್ನು ಕೊಟ್ಟು ಹೋಗುತ್ತಿದ್ದಾರೆ. ಈ ಸೀರೆಗಳು ಬೇಡ ಎಂದು ಸ್ಥಳೀಯ ಮಹಿಳೆಯರು ಕೊಟ್ಟ ಸೀರೆಗಳನ್ನು ರಸ್ತೆಯಲ್ಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿ ಅತ್ತೆ-ಸೊಸೆ ಮಧ್ಯೆ ಜಗಳ ತಂದಿಡುತ್ತಿದೆ- ಸಿ.ಎಂ ಇಬ್ರಾಹಿಂ

    ಸ್ಥಳೀಯರು ಹಲವು ವರ್ಷಗಳಿಂದ ಕಾಂಗ್ರೆಸ್ ಬೆಂಬಲಿಸಿಕೊಂಡು ಬಂದಿದ್ದರು. ನಮಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಶಾಸಕರಿಗೆ ಎಷ್ಟು ಬಾರಿ ಮನವಿ ಮಾಡಿದರೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಭಾಷಾ ನಗರ 17ನೇ ಕ್ರಾಸ್ ಎಲ್ಲಿದೆ ಎಂದು ಶಾಸಕರು ಕೇಳುತ್ತಾರೆ. ಅಷ್ಟರ ಮಟ್ಟಿಗೆ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಇಲ್ಲಿನ ಸ್ಥಳೀಯ ಪ್ರತಿನಿಧಿಗಳು ಕೂಡಾ ಅವರ ಗಮನಕ್ಕೆ ತರುತ್ತಿಲ್ಲ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ನಿಂತು ಮಕ್ಕಳಿಗೆ ಕಾಯಿಲೆಗಳು ಬರುತ್ತಿವೆ. ಈಗ ಬಂದ ಹಬ್ಬದ ಶುಭಾಶಯ ತಿಳಿಸಿ ಗಿಫ್ಟ್ ಕೊಡ್ತಾರೆ. ನಮಗೆ ಗಿಫ್ಟ್ ಬೇಡ. ಮೂಲಭೂತ ಸೌಕರ್ಯ ಬೇಕು. ಇಲ್ಲವಾದರೆ ಚುನಾವಣೆಯಲ್ಲಿ ನಾವು ನಿರ್ಧಾರ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದಾವಣಗೆರೆ ದಕ್ಷಿಣ ಕ್ಷೇತ್ರದ ಜನರು ಸರಿಯಾದ ಮೂಲಭೂತ ಸೌಕರ್ಯ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದು, ಚುನಾವಣೆ ಬಂದಿದೆ ಎಂದು ಗಿಫ್ಟ್‌ಗಳನ್ನು ನೀಡಿ ಮನವೊಲಿಸುವ ಕೆಲಸ ರಾಜಕೀಯ ಪಕ್ಷಗಳು ಮಾಡುತ್ತಿವೆ. ಇದಕ್ಕೆ ಭಾಷಾ ನಗರದ ನಿವಾಸಿಗಳು ತಕ್ಕ ಶಾಸ್ತಿ ನೀಡಿದ್ದಾರೆ. ಇದನ್ನೂ ಓದಿ: ಶಕ್ತಿದೇವತೆ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಟಿಕೆಟ್ ಫೈಟ್ ಜೋರು

  • ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಮನ್ನೋಳ್ಕರ್‌ಗೆ ಮತ್ತೊಂದು ಶಾಕ್

    ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಮನ್ನೋಳ್ಕರ್‌ಗೆ ಮತ್ತೊಂದು ಶಾಕ್

    – ಮತದಾರರಿಗೆ ಹಂಚಲು ತಂದಿದ್ದ ನೂರಾರು ಟಿಫಿನ್ ಬಾಕ್ಸ್ ಜಪ್ತಿ

    ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಆಪ್ತ ನಾಗೇಶ್ ಮನ್ನೋಳ್ಕರ್‌ಗೆ (Nagesh Manolkar) ಚುನಾವಣೆ ಅಧಿಕಾರಿಗಳು ಮತ್ತೊಂದು ಶಾಕ್ ನೀಡಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮತಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದ ನೂರಾರು ಟಿಫಿನ್ ಬಾಕ್ಸ್‌ಗಳನ್ನು (Tiffin Box) ಜಪ್ತಿ ಮಾಡಿಕೊಂಡಿದ್ದಾರೆ.

    ತಾಲೂಕಿನ ಕುದ್ರೆಮನಿ ಗ್ರಾಮದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಟಿಫಿನ್ ಬಾಕ್ಸ್‌ಗಳನ್ನು ಬೆಳಗಾವಿ ಡಿಸಿ, ಚುನಾವಣಾಧಿಕಾರಿ ನಿತೇಶ್ ಪಾಟೀಲ್ ಮಾರ್ಗದರ್ಶನದಲ್ಲಿ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಳಗಾವಿ (Belagavi) ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರೆಮನಿ ಗ್ರಾಮದಲ್ಲಿ ಮತದಾರರಿಗೆ ಗಿಫ್ಟ್ ಕೊಡಲು ಟಿಫಿನ್ ಬಾಕ್ಸ್ ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

    ದಾಳಿ ವೇಳೆ ರಮೇಶ್ ಜಾರಕಿಹೊಳಿ ಆಪ್ತ, ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳ್ಕರ್ ಭಾವಚಿತ್ರ ಇರುವ ಟಿಫಿನ್ ಬಾಕ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ. 400 ಕ್ಕೂ ಅಧಿಕ ಟಿಫಿನ್ ಬಾಕ್ಸ್ ಜಪ್ತಿ ಮಾಡಿಕೊಂಡ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಅಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

    ಇತ್ತೀಚೆಗೆ ಬಾಡೂಟ ಆಯೋಜನೆ ಹಿನ್ನೆಲೆ ನಾಗೇಶ್ ಮನ್ನೋಳ್ಕರ್ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿತ್ತು.

  • ನೂರಾರು ಮತದಾರರಿಗೆ ಬಿಜೆಪಿಯಿಂದ ಬಾಡೂಟ, ಗಿಫ್ಟ್ – ಕಂಠಪೂರ್ತಿ ಕುಡಿದು ಎಲ್ಲೆಂದರಲ್ಲಿ ಮಲಗಿದ ಜನ

    ನೂರಾರು ಮತದಾರರಿಗೆ ಬಿಜೆಪಿಯಿಂದ ಬಾಡೂಟ, ಗಿಫ್ಟ್ – ಕಂಠಪೂರ್ತಿ ಕುಡಿದು ಎಲ್ಲೆಂದರಲ್ಲಿ ಮಲಗಿದ ಜನ

    ಹಾಸನ: ಜಿಲ್ಲೆಯಲ್ಲಿ ಚುನಾವಣೆ ಕಾವು ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸೆಳೆಯಲು ಹಲವು ರೀತಿಯ ಆಮಿಷ ಒಡ್ಡುತ್ತಿದ್ದಾರೆ.

    ಬಿಜೆಪಿ (BJP) ಜಿಲ್ಲಾಧ್ಯಕ್ಷ ಹಾಗೂ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಹೆಚ್‌ಕೆ ಸುರೇಶ್ (HK Suresh) ಮತದಾರರಿಗೆ ಭರ್ಜರಿ ಬಾಡೂಟ ಆಯೋಜಿಸಿದ್ದು ಇದರ ಜೊತೆಗೆ ಗಿಫ್ಟ್ (Gift) ನೀಡಿದ್ದಾರೆ. ಬೇಲೂರು ತಾಲೂಕಿನ, ಅಗಸರಹಳ್ಳಿ ಬಾರೆಯಲ್ಲಿ ನೂರಾರು ಜನರಿಗೆ ಗುಂಡು ತುಂಡು ಪಾರ್ಟಿ ಆಯೋಜನೆ ಮಾಡಿದ್ದು, ಕಂಠಪೂರ್ತಿ ಕುಡಿದು, ಬಾಡೂಟ ಮಾಡಿದ ಮತದಾರರು ಎಲ್ಲೆಂದರಲ್ಲಿ ಮಲಗಿದ್ದರು. ಇದನ್ನೂ ಓದಿ: ರಾಯಚೂರು ಜಿಲ್ಲಾ ಚುನಾವಣಾ ಐಕಾನ್ ಆಗಿ ಬಾಹುಬಲಿ ನಿರ್ದೇಶಕ ರಾಜಮೌಳಿ ನೇಮಕ

    ಪ್ರತಿದಿನ ಒಂದೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್‌ಕೆ ಸುರೇಶ್ ಬಾಡೂಟ ಆಯೋಜನೆ ಮಾಡುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಬಾಡೂಟ, ಮದ್ಯ ಜೊತೆಗೆ ಗಿಫ್ಟ್ ಮೂಲಕ ಮತದಾರರಿನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಗುರುವಾರ ಬೇಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ ನಡೆಯುತ್ತಿದೆ. ಇದನ್ನೂ ಓದಿ: ಬಿಎಸ್‍ವೈ ಹೇಳಿಕೆ ಬೆನ್ನಲ್ಲೇ ಆ್ಯಕ್ಟೀವ್ ಆದ ವಿ.ಸೋಮಣ್ಣ ಬೆಂಬಲಿಗರು