Tag: ಗಿರಿಧರ್

  • ಅಮ್ಮನ ಮತ್ತೊಂದು  ಹಾಡಿಗೆ ದನಿಯಾದ ಜೋಗಿ ಪ್ರೇಮ್

    ಅಮ್ಮನ ಮತ್ತೊಂದು ಹಾಡಿಗೆ ದನಿಯಾದ ಜೋಗಿ ಪ್ರೇಮ್

    ಪ್ರಪಂಚದಲ್ಲಿ ಅಮ್ಮನ ಪ್ರೀತಿಗಿಂತ ಮಿಗಿಲಾದ ಪ್ರೀತಿ ಮತ್ತೊಂದಿಲ್ಲ. ಅಂತಹ ಅಮ್ಮ ಜೊತೆಗಿದ್ದರೆ ಧೈರ್ಯವೂ ಕೂಡ.  ಅದ್ಭುತ ವ್ಯಕ್ತಿತ್ವದ ಅಮ್ಮನ ಬಗ್ಗೆ “ಅಮ್ಮ ಎಂಬ ಹೆಸರೆ ಆತ್ಮ ಬಲ” ಎಂಬ  ಹಾಡನ್ನು ಪ್ರೇಮಕವಿ ಕೆ.ಕಲ್ಯಾಣ್ ಬರೆದಿದ್ದಾರೆ “ಪರಿಮಳ ಡಿಸೋಜಾ” (Parima D’Souza) ಚಿತ್ರಕ್ಕಾಗಿ. ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ (Jogi Prem) ಈ ಗೀತೆಯನ್ನು ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಕೆ.ಕಲ್ಯಾಣ್, ನಟಿ ಭವ್ಯ, ಜಂಕಾರ್ ಮ್ಯೂಸಿಕ್ ಭರತ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ನಮ್ಮ ಚಿತ್ರಕ್ಕಾಗಿ ಕೆ.ಕಲ್ಯಾಣ್ ಅಮ್ಮನ ಬಗ್ಗೆ ಒಳ್ಳೆಯ ಹಾಡು ಬರೆದಿದ್ದಾರೆ. ಅಷ್ಟೇ ಅದ್ಭುತವಾಗಿ ಜೋಗಿ ಪ್ರೇಮ್ ಹಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಮರ್ಡರ್ ಮಿಸ್ಟರಿ ಜೊತೆಗೆ ಆಕ್ಷನ್, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ “ಪರಿಮಳ ಡಿಸೋಜಾ” ತೆರೆಗೆ ಬರಲು ಸಿದ್ದವಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಗಿರಿಧರ್ (Giridhar) ಹೆಚ್ ಟಿ. ಇದನ್ನೂ ಓದಿ: ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ತಾಯಿ ಬಗ್ಗೆ ಹಾಡು ಬರೆಯಬೇಕೆಂದರೆ ಏನೋ ಒಂಥರ ಖುಷಿ. ಈ ಹಾಡನ್ನು ಶೀಘ್ರವಾಗಿ ಬರೆಯಬೇಕಿತ್ತು. ಆಗ ನಿರ್ಮಾಪಕರು ನನ್ನ ಅತ್ತಿಗೆಯ ಮೂಲಕ ಬೇಗ ಬರೆದುಕೊಡಲು ಹೇಳಿಸಿದರು. ಆಗ ನನಗೆ ತಿಳಿಯಿತು ನಿರ್ಮಾಪಕರು ನಮಗೆ ಬಳಗ ಎಂದು. ಅಮ್ಮನ ಹಾಡನ್ನು ಪ್ರೇಮ್ ಅವರು ಅಷ್ಟೇ ಅದ್ಭುತವಾಗಿ ಹಾಡಿದ್ದಾರೆ ಎಂದು ಪ್ರೇಮಕವಿ ಕಲ್ಯಾಣ್ ತಿಳಿಸಿದರು.  ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಹಾಡು ತುಂಬಾ ಚೆನ್ನಾಗಿದೆ. ಒಳ್ಳೆಯದಾಗಲಿ ಎಂದರು ಹಿರಿಯ ನಟಿ ಭವ್ಯ.  “ಪರಿಮಳ ಡಿಸೋಜಾ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇಂದು ಅಮ್ಮನ ಹಾಡು ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಹಾಡು‌ ಬರೆದ ಕಲ್ಯಾಣ್ ಅವರಿಗೆ, ಸುಮಧುರವಾಗಿ ಹಾಡಿದ್ದ ಪ್ರೇಮ್ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ ನಿರ್ಮಾಪಕ ವಿನೋದ್ ಶೇಷಾದ್ರಿ, ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ಹೇಳಿದರು.

    ಸಂಗೀತ ನಿರ್ದೇಶಕ ಕ್ರಿಸ್ಟೋಫರ್ ಜೋಸನ್, ಛಾಯಾಗ್ರಾಹಕ ರಾಮು ಹಾಗೂ ಚಿತ್ರದಲ್ಲಿ ನಟಿಸಿರುವ ಕೋಮಲ ಬನವಾಸಿ ಸೇರಿದಂತೆ ಅನೇಕ ಕಲಾವಿದರು “ಪರಿಮಳ ಡಿಸೋಜಾ” ಚಿತ್ರದ ಬಗ್ಗೆ ಮಾತನಾಡಿದರು. ತಾಯಿಯ ಬಗ್ಗೆಗಿನ ಹಾಡು ಬಿಡುಗಡೆ ಸಮಾರಂಭ ಆಗಿರುವುದರಿಂದ ವಿಶೇಷವಾಗಿ ಮೂರು ಜನ ತಾಯಂದಿರನ್ನು ಸನ್ಮಾನಿಸಲಾಯಿತು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪರಿಮಳ ಡಿಸೋಜಾ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಮೂವರು ಮಾಜಿ ಸಿಎಂಗಳು

    ‘ಪರಿಮಳ ಡಿಸೋಜಾ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಮೂವರು ಮಾಜಿ ಸಿಎಂಗಳು

    ಡಾ. ಗಿರಿಧರ್ ಹೆಚ್ ಟಿ (Giridhar)ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” (Parimala D’Souza) ಚಲನಚಿತ್ರದ ಪೋಸ್ಟರ್ (Poster)  ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ (Yeddyurappa), ಹೆಚ್ ಡಿ ಕುಮಾರಸ್ವಾಮಿ (Kumaraswamy) ಹಾಗೂ ಸಿದ್ದರಾಮಯ್ಯ (Siddaramaiah) ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

    ಬೆಂಗಳೂರು, ಬಿಡದಿ, ನೆಲಮಂಗಲ, ಕನಕಪುರ, ಹಾಸನ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಹಲವಾರು ಸ್ಥಳಗಳಲ್ಲಿ 72 ದಿನಗಳಿಗೂ ಅಧಿಕ ಕಾಲ ಚಿತ್ರೀಕರಣ ಮಾಡಿರುವ ಸಸ್ಪೆನ್ಸ್-ಥ್ರಿಲ್ಲರ್-ಆಕ್ಷನ್ ಜೊತೆಗೆ ಮನರಂಜನಾತ್ಮಕ ಕಥೆಯನ್ನು ಹೊಂದಿರುವ ಈ ಚಲನಚಿತ್ರಕ್ಕೆ ಜೋಗಿ ಪ್ರೇಮ್ ಅವರು ಒಂದು ಅತ್ಯುತ್ತಮ ಹಾಡನ್ನು ಹಾಡುವ ಮೂಲಕ ಶುಭ ಹಾರೈಸಿದ್ದಾರೆ. ಇವರ ಜೊತೆಗೆ ಖ್ಯಾತ ಚಲನಚಿತ್ರ ಸಾಹಿತಿಗಳಾದ ಡಾ. ವಿ ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ ಮತ್ತು ಕೆ ಕಲ್ಯಾಣ್ ಅವರು ಸಾಹಿತ್ಯವನ್ನು ರಚಿಸಿದ್ದಾರೆ. ಇವರುಗಳ ಸಾಹಿತ್ಯಕ್ಕೆ ಖ್ಯಾತ ಹಿನ್ನಲೆ ಗಾಯಕರಾದ ರಾಜೇಶ್ ಕೃಷ್ಣನ್, ಶ್ರುತಿ ವಿ ಎಸ್, ಸುಪ್ರಿಯಾ ರಾಮ್, ನಕುಲ್ ಅಭ್ಯಂಕರ್ ಮತ್ತು ಅನುರಾಧ ಭಟ್ ಅವರುಗಳು ಹಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಈ ಚಲನಚಿತ್ರಕ್ಕೆ ಕ್ರಿಸ್ಟೋಫರ್ ಜೇಸನ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕೆ ರಾಮ್ ಅವರು ಛಾಯಾಗ್ರಹಣ, ಚಲನಚಿತ್ರದ ಸಂಕಲನವನ್ನು ಸಂಜೀವ್ ರೆಡ್ಡಿ ಮತ್ತು ಎಸ್.ಎಫ್.ಎಕ್ಸ್ ಹಾಗೂ 5.1 ಮಿಕ್ಸಿಂಗ್ ಅನ್ನು ಶಂಕರ್, ನೃತ್ಯ ನಿರ್ದೇಶನವನ್ನು ವಿಜಯನಗರ ಮಂಜು, ಅತ್ಯುತ್ತಮ ಆಕ್ಷನ್ ಸನ್ನಿವೇಶಗಳಿಗೆ ಬಂಡೆ ಚಂದ್ರು ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು ಅತಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]