Tag: ಗಿರಿನಗರ ಪೊಲೀಸ್‌

  • ಸಿಟಿಯಲ್ಲಿ ಕಳ್ಳತನ, ಕಾಡಿನಲ್ಲಿ ವಾಸಸ್ಥಾನ – ಬೆಂಗಳೂರಲ್ಲಿ ಐನಾತಿ ಕಳ್ಳ ಅರೆಸ್ಟ್

    ಸಿಟಿಯಲ್ಲಿ ಕಳ್ಳತನ, ಕಾಡಿನಲ್ಲಿ ವಾಸಸ್ಥಾನ – ಬೆಂಗಳೂರಲ್ಲಿ ಐನಾತಿ ಕಳ್ಳ ಅರೆಸ್ಟ್

    – ಪೊಲೀಸರಿಗೆ ಚಾಲೆಂಜ್ ಹಾಕಿದ್ದ ಖದೀಮ

    ಬೆಂಗಳೂರು: ಸಿಟಿಯಲ್ಲಿ ಕಳ್ಳತನಮಾಡಿ ಕಾಡನ್ನೇ ವಾಸಸ್ಥಾನ ಮಾಡಿಕೊಂಡು ಪೊಲೀಸರಿಗೆ ಸುಳಿವು ಸಿಗದಂತೆ ಕಣ್ಮರೆಯಾಗುತ್ತಿದ್ದ ಕಳ್ಳನನ್ನು ಬೆಂಗಳೂರಿನಲ್ಲಿ (Bengaluru) ಬಂಧಿಸಲಾಗಿದೆ.

    ನರಸಿಂಹ ರೆಡ್ಡಿ ಬಂಧಿತ ಆರೋಪಿ. ಈತ ಒಂಟಿ ಮನೆಗಳು, ಬೀಗ ಹಾಕಿದ ಮನೆಗಳಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡುತ್ತಿದ್ದ. ಇತ್ತೀಚಿಗೆ ಗಿರಿನಗರ ವ್ಯಾಪ್ತಿಯಲ್ಲಿ ಬರುವ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ. ಕದ್ದ ಆಭರಣ ಸಮೇತ ಕಾಡಿಗೆ ಎಸ್ಕೇಪ್ ಆಗಿದ್ದ. ಆರೋಪಿ ಎರಡು ಕಾಡುಗಳನ್ನು ತನ್ನ ಆವಾಸಸ್ಥಾನ ಮಾಡಿಕೊಂಡಿದ್ದ. ಈತ ನೆಲಮಂಗಲ (Nelamangala) ಬಳಿಯ ಗುಡೇಮಾರನಹಳ್ಳಿ ಹಾಗೂ ಕೃಷ್ಣಗಿರಿಯ ಫಾರೆಸ್ಟ್ನಲ್ಲಿ ವಾಸ ಮಾಡುತ್ತಿದ್ದ. ಕಾಡಿನ ಬಂಡೆಗಳ ಮೇಲೆ ಮಲಗುತ್ತಿದ್ದ.

    ಆರೋಪಿಯನ್ನು ಬೆನ್ನತ್ತಿದರೆ, ‘ಪೊಲೀಸರು ನನ್ನ ಹಿಂದೆ ಬರಬೇಕು, ಬೆನ್ನತ್ತಬೇಕು’ ಎಂದು ಚಾಲೆಂಜ್ ಹಾಕಿ ಪೊಲೀಸರ ಜೊತೆ ಕಣ್ಣಾಮುಚ್ಚಾಲೆ ಆಡಿ ತಪ್ಪಿಸಿಕೊಳ್ಳುತ್ತಿದ್ದ. ಹೀಗೆ ಗುಡೇಮಾರನಹಳ್ಳಿ ಕಾಡಿನಲ್ಲಿದ್ದ ವೇಳೆ ಆರೋಪಿ ನರಸಿಂಹ ರೆಡ್ಡಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

    ಮಾಗಡಿಯ ಸೋಲೂರು ಮೂಲದ ಬಂಧಿತ ಆರೋಪಿ ನರಸಿಂಹ ರೆಡ್ಡಿ ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನಿಂದ 70 ಲಕ್ಷ ರೂ. ಮೌಲ್ಯದ ಒಂದು ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

  • ಇಬ್ಬರು ಅಂತರರಾಜ್ಯ ಸರಗಳ್ಳರು ಅರೆಸ್ಟ್ – ಸಿನಿಮೀಯ ರೀತಿಯಲ್ಲಿ ಹೆಡೆಮುರಿ ಕಟ್ಟಿದ ಖಾಕಿ ಟೀಂ

    ಇಬ್ಬರು ಅಂತರರಾಜ್ಯ ಸರಗಳ್ಳರು ಅರೆಸ್ಟ್ – ಸಿನಿಮೀಯ ರೀತಿಯಲ್ಲಿ ಹೆಡೆಮುರಿ ಕಟ್ಟಿದ ಖಾಕಿ ಟೀಂ

    ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಹುದಿನಗಳಿಂದ ಸರಗಳ್ಳತನ (Chain Snatching) ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಸರಗಳ್ಳರನ್ನ ಬೆಂಗಳೂರಿನ (Bengaluru) ಗಿರಿನಗರದ ಪೊಲೀಸರು (Girinagar Police) ಬಂಧಿಸಿದ್ದಾರೆ.

    ಸೈಯದ್ ಬಾಷ (34), ಶೇಕ್ ಅಯೂಬ್ (32) ಬಂಧಿತ ಆರೋಪಿಗಳಾಗಿದ್ದು, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆ – ಇಂದು ಪ್ರಧಾನಿ ಮೋದಿ ಚಾಲನೆ

    ಪೊಲೀಸರ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
    ಆಂಧ್ರಪ್ರದೇಶ (Andhra Pradesh) ಮೂಲದ ಕಳ್ಳರು ಬಸ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ನಂತರ ಇಲ್ಲಿ ಬೈಕ್ ಕಳ್ಳತನ ಮಾಡಿ, ಕದ್ದ ಬೈಕ್‌ನಲ್ಲೇ ಸರಗಳ್ಳತನ ಮಾಡುತ್ತಿದ್ದರು. ಆಮೇಲೆ ಬೈಕ್ ಬಿಟ್ಟು ಆಟೋ ಮೂಲಕ ಕೆ.ಆರ್ ಪುರಂಗೆ ತಲುಪಿ ಅಲ್ಲಿಂದ ಬಸ್ ಮೂಲಕ ಮತ್ತೆ ಆಂಧ್ರಕ್ಕೆ ತಲುಪುತ್ತಿದ್ದರು. ಅಷ್ಟೇ ಅಲ್ಲ ಸರಗಳ್ಳತನ ಮಾಡಿ ಕೂಡಲೇ ಬಟ್ಟೆ ಬದಲಿಸುತ್ತಿದ್ದ ಖದೀಮರು, ಸಿಸಿಟಿಯಲ್ಲಿ ಚಹರೆ ಗೊತ್ತೇ ಆಗದಂತೆ ಎಸ್ಕೇಪ್ ಆಗುತ್ತಿದ್ದರು. ಇದನ್ನೂ ಓದಿ: ಹೃದಯ-ಶ್ವಾಸಕೋಶ ವೈಫಲ್ಯವೇ ಚೀತಾ ಸಾವಿಗೆ ಕಾರಣ: ವೈದ್ಯರ ಸ್ಪಷ್ಟನೆ

    ನಂತರ ಆರೋಪಿಗಳನ್ನ ಸೆರೆಹಿಡಿಯಲು ಪಕ್ಕಾ ಸ್ಕೆಚ್ ಹಾಕಿದ ಖಾಕಿ ಪಡೆ ಸಿನಿಮೀಯ ರೀತಿಯಲ್ಲಿ ಆರೋಪಿಗಳಿಗೆ ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದೆ. ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಗಿರಿನಗರ ಪೊಲೀಸರಿಗೆ, ಸಿಸಿಟಿವಿ ಪರಿಶೀಲಿಸಿದಾಗ ಕದ್ದ ಬೈಕ್ ಪತ್ತೆಯಾಗಿತ್ತು. ಇದರಿಂದ ಕದ್ದ ಬೈಕ್‌ಗೆ ಜಿಪಿಎಸ್ ಅಳವಡಿಸಿ, ಪ್ರತಿದಿನ ಜಿಪಿಎಸ್ ಮೇಲೆ ನಿಗಾ ವಹಿಸಿದ್ದರು. 20 ದಿನಗಳ ಬಳಿಕ ಮತ್ತೆ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಕದ್ದ ಬೈಕ್‌ನಲ್ಲೇ ಫೀಲ್ಡಿಗಿಳಿದಿದ್ದರು. ಕೂಡಲೇ ಜಿಪಿಎಸ್ ಟ್ರ್ಯಾಕ್‌ ಮಾಡಿ, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.