Tag: ಗುಂಡಿನ ದಾಳಿ

  • ನಟ ಸಲ್ಮಾನ್ ಮನೆಮುಂದೆ ಗುಂಡು: ಮತ್ತೋರ್ವನ ಬಂಧನ

    ನಟ ಸಲ್ಮಾನ್ ಮನೆಮುಂದೆ ಗುಂಡು: ಮತ್ತೋರ್ವನ ಬಂಧನ

    ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ರಫೀಕ್ ಚೌಧರಿ (Mohammed Rafique Chaudhary) ಎಂದು ಗುರುತಿಸಲಾಗಿದ್ದು, ರಾಜಸ್ಥಾನದ ನಾಗೌರ್ ನಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ಈತ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯನೆಂದು ಹೇಳಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತನಾದ ಐದನೇ ವ್ಯಕ್ತಿ ಇವನಾಗಿದ್ದಾರೆ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ. ಈ ನಾಲ್ವರಲ್ಲಿ ಒಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಸಲ್ಮಾನ್ ಖಾನ್  (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ (Anuj Thapas) ಎಂಬ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್ (Court)  ಮೆಟ್ಟಿಲು ಏರಿದ್ದರು. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

     

    ತಮ್ಮ ಮಗನು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಅವರು ಮಗನನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಣೆಯಲ್ಲಿನ ಸಿಸಿಟಿವಿ ವಿಡಿಯೋವನ್ನು ಒಪ್ಪಿಸುವಂತೆ ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ಮಾಡಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಥಾಪನ್ ಠಾಣೆಯ ಪೊಲೀಸರ ಹಿಂಸೆಯಿಂದಾಗಿ ತಾವು ಮಗನನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ ಪೋಷಕರು.

  • ನಟ ಸಲ್ಮಾನ್ ಖಾನ್ ಪ್ರಕರಣ: ಜೈಲಿನಲ್ಲಿನ ಆತ್ಮಹತ್ಯೆ ಕೇಸ್ ಅನ್ನು ಸಿಬಿಐ ತನಿಗೆ ಮನವಿ

    ನಟ ಸಲ್ಮಾನ್ ಖಾನ್ ಪ್ರಕರಣ: ಜೈಲಿನಲ್ಲಿನ ಆತ್ಮಹತ್ಯೆ ಕೇಸ್ ಅನ್ನು ಸಿಬಿಐ ತನಿಗೆ ಮನವಿ

    ಬಾಲಿವುಡ್ ನಟ ಸಲ್ಮಾನ್ ಖಾನ್  (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ (Anuj Thapas) ಎಂಬ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್ (Court)  ಮೆಟ್ಟಿಲು ಏರಿದ್ದರು. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

    ತಮ್ಮ ಮಗನು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಅವರು ಮಗನನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಣೆಯಲ್ಲಿನ ಸಿಸಿಟಿವಿ ವಿಡಿಯೋವನ್ನು ಒಪ್ಪಿಸುವಂತೆ ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ಮಾಡಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಥಾಪನ್ ಠಾಣೆಯ ಪೊಲೀಸರ ಹಿಂಸೆಯಿಂದಾಗಿ ತಾವು ಮಗನನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ ಪೋಷಕರು.

    ಏನಿದು ಪ್ರಕರಣ

    ಸಲ್ಮಾನ್  ಮನೆ ಮುಂದಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿತ್ತು. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಆಮೇಲೆ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದರು.

    ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದು ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂದು ಗೊತ್ತಾಗಿತ್ತು. ಈ ಇಬ್ಬರನ್ನೂ ಪಂಜಾಬ್ (Punjab) ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದರು. ಈ ಇಬ್ಬರು ವ್ಯಕ್ತಿಗಳಲ್ಲಿ ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದ.

     

    ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.  ಆರೋಪಿ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

  • ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

    ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

    ಬಾಲಿವುಡ್ ನಟ ಸಲ್ಮಾನ್ ಖಾನ್  (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ (Anuj Thapas) ಎಂಬ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ. ಕೂಡಲೇ ಅವನನ್ನು ಆಸ್ಪತ್ರೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿತ್ತು. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಆಮೇಲೆ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದರು.

    ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದು ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂದು ಗೊತ್ತಾಗಿತ್ತು. ಈ ಇಬ್ಬರನ್ನೂ ಪಂಜಾಬ್ (Punjab) ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದರು. ಈ ಇಬ್ಬರು ವ್ಯಕ್ತಿಗಳಲ್ಲಿ ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

     

    ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.  ಆರೋಪಿ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

  • ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಅಪಾರ್ಟ್ಮೆಂಟ್ ಖಾಲಿ ಮಾಡಲು ನಿರ್ಧಾರ

    ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಅಪಾರ್ಟ್ಮೆಂಟ್ ಖಾಲಿ ಮಾಡಲು ನಿರ್ಧಾರ

    ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ನಡೆದ ಗುಂಡಿನ ದಾಳಿಯ ನಂತರ ಅವರ ಕುಟುಂಬ ಸಾಕಷ್ಟು ಆತಂಕ್ಕೆ ಒಳಗಾಗಿದೆ. ಸಲ್ಮಾನ್ ಹತ್ಯೆ ಮಾಡಲು ನಾನಾ ರೀತಿಯ ಕಸರತ್ತುಗಳನ್ನು ದುರುಳರು ಮಾಡುತ್ತಿದ್ದಾರೆ. ಹಾಗಾಗಿ ತಾವಿರುವ ಅಪಾರ್ಟ್ಮೆಂಟ್ ಅನ್ನು ಖಾಲಿ ಮಾಡಲು ಸಲ್ಮಾನ್ ನಿರ್ಧರಿಸಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಕುರಿತು ಸಲ್ಮಾನ್ ಸಹೋದರ ಅರ್ಬಾಜ್ ಮಾಹಿತಿ ನೀಡಿದ್ದು, ಅಂತಹ ಯೋಚನೆ ಸದ್ಯಕ್ಕಿಲ್ಲ ಅಂದಿದ್ದಾರೆ.

    ಗುಂಡಿನ ದಾಳಿಯನ್ನು ಮುಂಬೈ ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈಗಾಗಲೇ ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿದೆ. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದೀಗ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದಾರೆ.

    ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದು ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂದು ಗೊತ್ತಾಗಿದ್ದು, ಈ ಇಬ್ಬರನ್ನೂ ಪಂಜಾಬ್ (Punjab) ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.  ಆರೋಪಿ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

     

    ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ಅವರ ಮನೆಯಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಬಂದು ಬುಕ್ಕಿಂಗ್ ಬಗ್ಗೆ ಅಲ್ಲಿನ ವಾಚ್‌ಮನ್‌ ಬಳಿ ಕೇಳಿದ್ದಾರೆ. ಮೊದಲು ದಿಗ್ಭ್ರಮೆಗೊಂಡ ವಾಚ್‌ಮನ್, ತಕ್ಷಣ ಬುಕಿಂಗ್ ಬಗ್ಗೆ ಹತ್ತಿರದ ಬಾಂದ್ರಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಮುಂಬೈನ ಬಾಂದ್ರಾ ಪೊಲೀಸರು, ಕ್ಯಾಬ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು. ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ ವ್ಯಕ್ತಿಯ ಮಾಹಿತಿಯನ್ನು ಟ್ರ್ಯಾಕ್ ಮಾಡಿದ್ದಾರೆ. ಕ್ಯಾಬ್ ಬುಕ್ ಮಾಡಿದ ವ್ಯಕ್ತಿ ಘಾಜಿಯಾಬಾದ್‌ನ 20 ವರ್ಷದ ವಿದ್ಯಾರ್ಥಿಯಾಗಿದ್ದು, ರೋಹಿತ್ ತ್ಯಾಗಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿರುವುದು ಚೇಷ್ಟೆಗಾಗಿ ಎಂದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಂಧಿಸಿದರು. ನಂತರ ಅವರನ್ನು ಮುಂಬೈಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

  • ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಗನ್ ಕೊಟ್ಟವರ ಬಂಧನ

    ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಗನ್ ಕೊಟ್ಟವರ ಬಂಧನ

    ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ನಡೆದ ಗುಂಡಿನ ದಾಳಿಯನ್ನು ಮುಂಬೈ ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈಗಾಗಲೇ ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿದೆ. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದೀಗ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದಾರೆ.

    ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದು ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂದು ಗೊತ್ತಾಗಿದ್ದು, ಈ ಇಬ್ಬರನ್ನೂ ಪಂಜಾಬ್ (Punjab) ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.  ಆರೋಪಿ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ಅವರ ಮನೆಯಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಬಂದು ಬುಕ್ಕಿಂಗ್ ಬಗ್ಗೆ ಅಲ್ಲಿನ ವಾಚ್‌ಮನ್‌ ಬಳಿ ಕೇಳಿದ್ದಾರೆ. ಮೊದಲು ದಿಗ್ಭ್ರಮೆಗೊಂಡ ವಾಚ್‌ಮನ್, ತಕ್ಷಣ ಬುಕಿಂಗ್ ಬಗ್ಗೆ ಹತ್ತಿರದ ಬಾಂದ್ರಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

     

    ಅದರಂತೆ ಮುಂಬೈನ ಬಾಂದ್ರಾ ಪೊಲೀಸರು, ಕ್ಯಾಬ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು. ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ ವ್ಯಕ್ತಿಯ ಮಾಹಿತಿಯನ್ನು ಟ್ರ್ಯಾಕ್ ಮಾಡಿದ್ದಾರೆ. ಕ್ಯಾಬ್ ಬುಕ್ ಮಾಡಿದ ವ್ಯಕ್ತಿ ಘಾಜಿಯಾಬಾದ್‌ನ 20 ವರ್ಷದ ವಿದ್ಯಾರ್ಥಿಯಾಗಿದ್ದು, ರೋಹಿತ್ ತ್ಯಾಗಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿರುವುದು ಚೇಷ್ಟೆಗಾಗಿ ಎಂದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಂಧಿಸಿದರು. ನಂತರ ಅವರನ್ನು ಮುಂಬೈಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

  • ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಅಟ್ಟಹಾಸ – ಗುಂಡಿನ ದಾಳಿಗೆ ಓರ್ವ ಬಲಿ

    ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಅಟ್ಟಹಾಸ – ಗುಂಡಿನ ದಾಳಿಗೆ ಓರ್ವ ಬಲಿ

    ಶ್ರೀನಗರ: ಸೋಮವಾರ ಜಮ್ಮು ಮತ್ತು ಕಾಶ್ಮೀರದ (Jammu Kashmir) ರಜೌರಿ (Rajouri) ಜಿಲ್ಲೆಯಲ್ಲಿ ಉಗ್ರರು (Terrorist) ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದು, ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಬ್ದುಲ್ ರಜಾಕ್ ಉಗ್ರರ ಗುಂಡಿಗೆ ಬಲಿಯಾದ ವ್ಯಕ್ತಿ. ಥಾನಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾ ಟಾಪ್ ಎಂಬ ಹಳ್ಳಿಯ ಮಸೀದಿಯಲ್ಲಿ ಸಂಜೆಯ ನಮಾಜ್ ಮುಗಿಸಿ ಹೊರಗೆ ಬಂದಾಗ ಅಬ್ದುಲ್ ರಜಾಕ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ರಜಾಕ್ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಮೃತ ರಜಾಕ್‌ನ ಸಹೋದರ ಟೆರಿಟೋರಿಯಲ್ ಆರ್ಮಿಯಲ್ಲಿ ಸೈನಿಕರಾಗಿದ್ದಾರೆ ಎಂದು ತಿಳಿದುಬಂದಿದೆ. ಭಯೋತ್ಪಾದಕರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ತೈವಾನ್​ನಲ್ಲಿ 24 ಗಂಟೆಯೊಳಗೆ 80ಕ್ಕೂ ಹೆಚ್ಚು ಬಾರಿ ಕಂಪಿಸಿದ ಭೂಮಿ!

  • ಮನೆ ಮುಂದೆ ಗುಂಡಿನ ದಾಳಿ ನಂತರ ದುಬೈಗೆ ಹಾರಿದ ನಟ ಸಲ್ಮಾನ್ ಖಾನ್

    ಮನೆ ಮುಂದೆ ಗುಂಡಿನ ದಾಳಿ ನಂತರ ದುಬೈಗೆ ಹಾರಿದ ನಟ ಸಲ್ಮಾನ್ ಖಾನ್

    ವಾರದ ಹಿಂದೆಯಷ್ಟೇ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ (Shooting) ನಡೆದು, ಆತಂಕ ಸೃಷ್ಟಿಯಾಗಿತ್ತು. ಆನಂತರ ಗುಂಡಿನ ದಾಳಿ ಮಾಡಿದವರನ್ನು ಹೆಡೆಮೂರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ ಮುಂಬೈ ಪೊಲೀಸರು. ಗುಂಡಿನ ದಾಳಿಯ ನಂತರ ಸಲ್ಮಾನ್ ಆಚೆ ಬಂದಿರಲೇ ಇಲ್ಲ. ಇದೀಗ ಸಲ್ಮಾನ್ ದುಬೈಗೆ (Dubai)ಹಾರಿದ್ದಾರೆ. ವೈ ಪ್ಲಸ್ ಭದ್ರತೆಯೊಂದಿಗೆ ಆಗಮಿಸಿದ್ದ ಅವರು, ಬಿಗಿ ಭದ್ರತೆ ನಡುವೆಯೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

    ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.

    ಆರೋಪಿ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ಅವರ ಮನೆಯಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಬಂದು ಬುಕ್ಕಿಂಗ್ ಬಗ್ಗೆ ಅಲ್ಲಿನ ವಾಚ್‌ಮನ್‌ ಬಳಿ ಕೇಳಿದ್ದಾರೆ. ಮೊದಲು ದಿಗ್ಭ್ರಮೆಗೊಂಡ ವಾಚ್‌ಮನ್, ತಕ್ಷಣ ಬುಕಿಂಗ್ ಬಗ್ಗೆ ಹತ್ತಿರದ ಬಾಂದ್ರಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

    ಅದರಂತೆ ಮುಂಬೈನ ಬಾಂದ್ರಾ ಪೊಲೀಸರು, ಕ್ಯಾಬ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು. ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ ವ್ಯಕ್ತಿಯ ಮಾಹಿತಿಯನ್ನು ಟ್ರ್ಯಾಕ್ ಮಾಡಿದ್ದಾರೆ. ಕ್ಯಾಬ್ ಬುಕ್ ಮಾಡಿದ ವ್ಯಕ್ತಿ ಘಾಜಿಯಾಬಾದ್‌ನ 20 ವರ್ಷದ ವಿದ್ಯಾರ್ಥಿಯಾಗಿದ್ದು, ರೋಹಿತ್ ತ್ಯಾಗಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

     

    ಆರೋಪಿಗಳು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿರುವುದು ಚೇಷ್ಟೆಗಾಗಿ ಎಂದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಂಧಿಸಿದರು. ನಂತರ ಅವರನ್ನು ಮುಂಬೈಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಎರಡು ದಿನಗಳ ಕಾಲ ಬಾಂದ್ರಾ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ.

  • ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಸ್ಪೋಟಕ ವಿಚಾರ ಬಾಯ್ಬಿಟ್ಟ ಆರೋಪಿ

    ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಸ್ಪೋಟಕ ವಿಚಾರ ಬಾಯ್ಬಿಟ್ಟ ಆರೋಪಿ

    ಲ್ಮಾನ್ ಖಾನ್ ಮನೆಯ ಮುಂದೆ ಇದೇ ಭಾನುವಾರ ಗುಂಡಿನ ದಾಳಿ (Shooting) ನಡೆದಿತ್ತು. ಮುಂಬೈಯನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ ಇದಾಗಿತ್ತು. ಗುಂಡಿನ ದಾಳಿ ಮಾಡಿದ್ದ ದುರುಳರನ್ನು ಹೆಡೆಮೂರಿಕಟ್ಟಿ ಬಂಧಿಸಿದ್ದಾರೆ ಪೊಲೀಸರು. ಅವರ ವಿಚಾರಣೆ ಮಾಡುತ್ತಿದ್ದು, ಈ ವೇಳೆ ಸ್ಪೋಟಕ ಮಾಹಿತಿ ನೀಡಿದ್ದಾರಂತೆ. ಗುಂಡಿನ ದಾಳಿ ಮಾಡಿ ಬೆದರಿಸೋದಕ್ಕೆ ನಾಲ್ಕು ಲಕ್ಷ ರೂಪಾಯಿ ಸುಪಾರಿ ಪಡೆದಿದ್ದರಂತೆ.

    ಈ ಘಟನೆ ನಡೆಯುತ್ತಿದ್ದಂತೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸಲ್ಮಾನ್ ಖಾನ್ (Salman Khan) ಅವರನ್ನು ಭೇಟಿಯಾಗಿದ್ದರು. ಸಿಎಂ ಆಗಮಿಸುತ್ತಿದ್ದಂತೆ ನಟನ ಮನೆಯ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ನಟನ ಮನೆಗೆ ಭೇಟಿ ನೀಡಿದ ಸಿಎಂ, ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಅನ್ನು ಮುಗಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ಸರ್ಕಾರ ನಿಮ್ಮೊಂದಿಗಿದೆ ಎಂದು ನಾನು ಸಲ್ಮಾನ್ ಖಾನ್‌ಗೆ ಹೇಳಿದ್ದೇನೆ. ಗುಂಡಿನ ದಾಳಿ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಮೂಲವನ್ನು ಹುಡುಕುತ್ತಿದ್ದು, ಯಾರನ್ನೂ ಬಿಡಲ್ಲ. ಯಾರೂ ಈ ರೀತಿ ಟಾರ್ಗೆಟ್ ಮಾಡಬಾರದು ಎಂದು ಹೇಳಿದ್ದರು.

     

    ಯಾವುದೇ ಗ್ಯಾಂಗ್ ಅಥವಾ ಗ್ಯಾಂಗ್ ವಾರ್‌ಗೆ ಅವಕಾಶ ನೀಡುವುದಿಲ್ಲ. ಇನ್ಮುಂದೆ ಈ ರೀತಿಯ ಘಟನೆಗಳು ಸಂಭವಿಸಲು ನಾವು ಬಿಡುವುದಿಲ್ಲ. (ಲಾರೆನ್ಸ್) ಬಿಷ್ಣೋಯ್ (Lawrence Bishnoi) ಗ್ಯಾಂಗ್‌ ನನ್ನು ಮುಗಿಸುತ್ತೇವೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಘಟನೆ ನಡೆದ ದಿನವೇ ನಟನೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ಮುಂಬೈ ಪೊಲೀಸ್ ಕಮಿಷನರ್ ಜೊತೆಯೂ ಮಾತನಾಡಿದ್ದು, ನಟನ ಭದ್ರತೆ ಹೆಚ್ಚಿಸುವಂತೆ ಸೂಚಿಸಿದ್ದರು.

  • ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಪ್ರಚಾರದ ಗಿಮಿಕ್ ಎಂದ ಸಲ್ಮಾನ್ ತಂದೆ

    ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಪ್ರಚಾರದ ಗಿಮಿಕ್ ಎಂದ ಸಲ್ಮಾನ್ ತಂದೆ

    ಜೀವ ಬೆದರಿಕೆಯೊಂದಿಗೆ ಬದುಕುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಕುಟುಂಬಕ್ಕೆ ನಿನ್ನೆ ಮತ್ತೊಂದು ಆಘಾತ ಕಾದಿತ್ತು. ಮನೆಯ ಮುಂದೆ ಏಕಾಏಕಿ ಗುಂಡಿನ ದಾಳಿ (Shooting) ನಡೆದಿದೆ. ಈ ಕುರಿತಂತೆ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ (Salim Khan) ಮಾತನಾಡಿದ್ದು, ಅದೊಂದು ಪ್ರಚಾರದ ಗಿಮಿಕ್. ನಮಗೆ ಯಾವ ತೊಂದರೆಯೂ ಆಗಲ್ಲ. ಪ್ರಚಾರಕ್ಕಾಗಿ ಅವರೆಲ್ಲ ಹಾಗೆ ಮಾಡುತ್ತಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ.

    ನಿನ್ನೆ ಸಲ್ಮಾನ್ ಖಾನ್ (Salman Khan) ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿ ಬಂದಿತ್ತು. ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ (Anmol Bishnoi) ಹೇಳಿಕೊಂಡಿದ್ದಾರೆ. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

    ಅನ್ಮೋಲ್‌ನ ಫೇಸ್‌ಬುಕ್ ಪೇಜ್‌ನಲ್ಲಿ, ಈ ಘಟನೆ ಟ್ರೈಲರ್ ಮಾತ್ರ. ಇದಕ್ಕಿಂತಲೂ ಭೀಕರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಸಲ್ಮಾನ್ ಖಾನ್‌ಗೆ ಎಚ್ಚರಿಕೆ ನೀಡಲಾಗಿದೆ. ಸಲ್ಮಾನ್ ಖಾನ್ ಇದು ನಾವು ನಿಮಗೆ ತೋರಿಸಿದ್ದು, ಟ್ರೈಲರ್ ಮಾತ್ರ. ನಮ್ಮ ಸಾಮರ್ಥ್ಯ, ಶಕ್ತಿ ಏನು ಎಂಬುದರ ಪರಿಚಯ ಮಾಡಲು ಈ ಕ್ರಮ ಕೈಗೊಂಡಿದ್ದೇವೆ. ಇದು ನಾವು ನೀಡುವ ಮೊದಲ ಮತ್ತು ಕೊನೆಯ ವಾರ್ನಿಂಗ್ ಎಂದು ಫೇಸ್‌ಬುಕ್‌ನಲ್ಲಿ ಬರೆಯಲಾಗಿದೆ.

    ನಿನ್ನೆ (ಏ.14) ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾನೆ. ನಂತರ ಸ್ಥಳದಲ್ಲಿ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿ ಪತ್ತೆಗೆ ಬಲೆ ಬೀಸಿದ್ದಾರೆ. ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಹೇಳಿದ್ದ. ತಾನು ಟಾರ್ಗೆಟ್ ಮಾಡಿರುವ 10 ಮಂದಿ ಹೆಸರಿನ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಮೊದಲಿಗರಾಗಿದ್ದಾರೆ ಎಂದಿದ್ದ. 1998ರ ಕೃಷ್ಣಮೃಗ ಬೇಟೆ ಆರೋಪ ಹೊತ್ತಿರುವ ಬಾಲಿವುಡ್ ನಟನ ಮೇಲೆ ಬಿಷ್ಣೋಯ್ ಹಗೆ ಸಾಧಿಸುತ್ತಿದ್ದಾನೆ.

     

    ಬಿಷ್ಣೋಯ್ ತನ್ನ ಸಹಾಯಕ ಸಂಪತ್ ನೆಹ್ರಾ ಬಳಸಿಕೊಂಡು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಕಣ್ಣಿಟ್ಟಿದ್ದ. ವಿಚಾರ ತಿಳಿಯುತ್ತಿದ್ದಂತೆ ನೆಹ್ರಾನನ್ನು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ವಶಪಡಿಸಿಕೊಂಡಿದೆ. ಕಳೆದ ವರ್ಷ ಏಪ್ರಿಲ್ 11 ರಂದು ಬಂದ ಮತ್ತೊಂದು ಬೆದರಿಕೆ ಕರೆಯನ್ನು ಅನುಸರಿಸಿ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರ ಭದ್ರತೆಯನ್ನು Y + ಗೆ ಹೆಚ್ಚಿಸಿದ್ದರು. ಖಾನ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ಯುನೈಟೆಡ್ ಕಿಂಗ್‌ಡಂನಲ್ಲಿರುವ ಭಾರತೀಯ ವಿದ್ಯಾರ್ಥಿಯ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ.

  • ಖ್ಯಾತ ಗಾಯಕ ಬಂಟಿ ಮೇಲೆ ಗುಂಡಿನ ದಾಳಿ

    ಖ್ಯಾತ ಗಾಯಕ ಬಂಟಿ ಮೇಲೆ ಗುಂಡಿನ ದಾಳಿ

    ಹೆಸರಾಂತ ಸಂಗೀತ ಸಂಯೋಜಕ, ಗಾಯಕ ಪಂಜಾಬಿನ (Punjab) ಬಂಟಿ ಬೈನ್ಸ್ (Bunty Bains) ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನಿನ್ನೆಯಷ್ಟೇ ಈ ಘಟನೆ ನಡೆದಿದ್ದು, ಮೊಹಾಲಿ ರೆಸ್ಟೋರೆಂಟ್ ನಲ್ಲಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

    ಅದೃಷ್ಟವಶಾತ್‍ ಬಂಟಿಗೆ ಯಾವುದೇ ಅಪಾಯವಾಗಿಲ್ಲ. ಅವರಿಗೆ ಯಾವುದೇ ಗುಂಡು ತಗುಲಿಲ್ಲ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳು ವರದಿ ಮಾಡಿದಂತೆ ವ್ಯಕ್ತಿಯೊಬ್ಬ ಒಂದು ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದನಂತೆ. ಬಂಟಿ ದುಡ್ಡನ್ನು ಕೊಡದೇ ಇರುವ ಕಾರಣಕ್ಕಾಗಿ ಈ ಶೂಟೌಟ್ ನಡೆದಿದೆ ಎಂದು ಹೇಳಲಾಗುತ್ತಿದೆ.

     

    ಗ್ಯಾಂಗ್ ಸ್ಟರ್ ಲಕ್ಕಿ ಪಾಟಿಯಲ್ ಹೆಸರಿನಲ್ಲಿ ಈ ಕೊಲೆ ಬೆದರಿಕೆ ಬಂದಿದ್ದು, ಕೆನಡಾದಿಂದ ಅವನು ಕಾರ್ಯನಿರ್ವಹಿಸುತ್ತಿದ್ದಾನೆಂದು ವರದಿ ಆಗಿದೆ. ಜೊತೆಗೆ ಕುಖ್ಯಾತಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆಗೆ ಈತನ ಸಂಪರ್ಕವಿದೆ ಅಂತೆ.