Tag: ಗುಂಡಿ ಬಿದ್ದ ರಸ್ತೆಗಳು

  • ಸರ್ವಿಸ್ ರಸ್ತೆಯಲ್ಲಿ ಗುಂಡಿ ಗಂಡಾಂತರ: ಹೆದ್ದಾರಿಯಲ್ಲಿ ಕುಸಿದ ಬೃಹತ್ ಸ್ಲಾಬ್‌ಗಳು

    ಸರ್ವಿಸ್ ರಸ್ತೆಯಲ್ಲಿ ಗುಂಡಿ ಗಂಡಾಂತರ: ಹೆದ್ದಾರಿಯಲ್ಲಿ ಕುಸಿದ ಬೃಹತ್ ಸ್ಲಾಬ್‌ಗಳು

    ನೆಲಮಂಗಲ: ಸಿಲಿಕಾನ್ ಸಿಟಿಯಲ್ಲಿ ವಾಹನ ಚಾಲಕರಿಗೆ ಯಾವಾಗಲೂ ಟ್ರಾಫಿಕ್ ಸಮಸ್ಯೆ, ಮಳೆಯ ಸಂದರ್ಭದಲ್ಲಿ ಗುಂಡಿಯ ಸಮಸ್ಯೆ. ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇರುತ್ತದೆ.

    ಕೆಲ ವರ್ಷಗಳ ಹಿಂದೆ ದಾಸರಹಳ್ಳಿಯ (Dasarahalli) ಎಂಟನೇ ಮೈಲಿ ಬಳಿ ಫ್ಲೈಓವರ್‌ ರಸ್ತೆಯ ಪಿಲ್ಲರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಾಹನಗಳಿಗೆ ನಿಷೇಧ ಹೇರಲಾಯಿತು. ಇದರಿಂದಾಗಿ ಸಾಕಷ್ಟು ಸಮಸ್ಯೆಯಾಗಿ ಪ್ರತಿನಿತ್ಯ ಟ್ರಾಫಿಕ್ ಜಾಮ್‌ನಿಂದಾಗಿ ಸವಾರರು ಪರಿತಪ್ಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿ ಸುದ್ದಿಗೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ನೆಲಮಂಗಲ (Nelamangala) ಹಾಗೂ ಗೊರಗುಂಟೆಪಾಳ್ಯ (Gorguntepalya) ನಡುವಿನ ರಾಷ್ಟ್ರೀಯ ಹೆದ್ದಾರಿಯು ಈ ಟ್ರಾಫಿಕ್ ಸಮಸ್ಯೆಗಳಿನ್ನು ತೆರವುಗೊಳಿಸಿ, ವಾಹನಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.ಇದನ್ನೂ ಓದಿ: ಪಶ್ಚಿಮ ಬಂಗಾಳದ ʼಅಪರಾಜಿತ ಬಿಲ್‌ʼ ಪೋಕ್ಸೊಗಿಂತ ಭಿನ್ನ ಹೇಗೆ?

    ಇಗೀಗ ಟೋಲ್ ಕಂಪನಿಯ ನಿರ್ಲಕ್ಷ್ಯದಿಂದ ಮತ್ತೊಂದು ಭಾರೀ ಅನಾಹುತಕ್ಕೆ ಕಾರಣವಾಗಿದೆ. ನೆಲಮಂಗಲದ ಕುಣಿಗಲ್ ಬೈಪಾಸ್, ಮಾಕಳಿ, ಮಾದನಾಯಕನಹಳ್ಳಿ, ಮಾದಾವಾರ ರಸ್ತೆಯ ಬಳಿ ಬೃಹತ್ ಗುಂಡಿಗಳಿಂದ ಸವಾರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ರಸ್ತೆಯ ಪಕ್ಕದ ಬೃಹತ್ ಸ್ಲಾಬ್‌ಗಳು ಕುಸಿದು ವಾಹನ ಸವಾರರ ಜೀವಕ್ಕೆ ಮೃತ್ಯು ಕೂಪವಾಗಿ ಪರಿಣಮಿಸಿವೆ.

    ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ರಾಜ್ಯದ ಸುಮಾರು 17 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೃಹತ್ ಗುಂಡಿಗಳ ಗಂಡಾಂತರದಿಂದ ಪರಿಸ್ಥಿತಿ ಹದಗೆಟ್ಟಿದೆ. ದ್ವಿಚಕ್ರ ವಾಹನ ಸವಾರರು ಸ್ವಲ್ಪ ಯಾಮಾರಿದರೂ ಜೀವಕ್ಕೆ ಸಂಚಕಾರ ತರಲಿದೆ.ಇದನ್ನೂ ಓದಿ: Breaking | ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್‌ & ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಟೋಲ್ ಹಣ ಸಂಗ್ರಹಿಸುವ ಟೋಲ್ ಕಂಪನಿ ನಿರ್ವಹಣೆ ಮಾಡಬೇಕಿದ್ದು, ಸವಾರರ ಜೀವದ ಜೊತೆಗೆ ಚಲ್ಲಾಟವಾಡುತ್ತಿದ್ದಾರೆ ಎಂದು ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸಮಸ್ಯೆಗಳ ಆಗರವಾಗಿರುವ ನೆಲಮಂಗಲ ಗೊರಗುಂಟೆಪಾಳ್ಯ ನಡುವಿನ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಒಂದಲ್ಲ ಒಂದು ಸಮಸ್ಯೆ ಸವಾರರ ಜೀವಕ್ಕೆ ಯಮಸ್ವರೂಪಿಯಾಗಿದೆ.

  • ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆಗೆ ಟಾಸ್ಕ್‌ ಫೋರ್ಸ್‌ ರಚನೆ

    ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆಗೆ ಟಾಸ್ಕ್‌ ಫೋರ್ಸ್‌ ರಚನೆ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆಗಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ (Tushar Giri Nath) ಅವರು ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ ಆದೇಶಿಸಿದ್ದಾರೆ.

    ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12,878 ಕಿಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 1,344.84 ಕಿಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದೆ. ಈ ರಸ್ತೆಗಳನ್ನು, ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿಕೆ 11,533.16 ಕಿಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್

    ಗುಂಡಿ ಬಿದ್ದಿರುವ ರಸ್ತೆಗಳನ್ನು (Pothole Roads) ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಿ, ಸದರಿ ಟಾಸ್ಕ್ ಫೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರು ಅವರ ನೇತೃತ್ವದಲ್ಲಿ ರಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: T20 World Cup: ಚುಟುಕು ಕ್ರಿಕೆಟ್ ಯುಗದ ಆರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!

    ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ?
    1. ವಲಯ ಆಯುಕ್ತರು – ಅಧ್ಯಕ್ಷರು.
    2. ವಲಯ ಜಂಟಿ ಆಯುಕ್ತರು – ಸದಸ್ಯರು.
    3. ವಲಯ ಮುಖ್ಯ ಅಭಿಯಂತರರು – ಸದಸ್ಯರು.
    4. ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು – ಸದಸ್ಯರು.
    5. ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
    6. ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
    7. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು (ಹಣಕಾಸು) – ಸದಸ್ಯರ ಕಾರ್ಯದರ್ಶಿ.