Tag: ಗುಂಡ್ಲುಪೇಟೆ

  • ಹುಲಿ ಹಿಡಿಯಲು ವಿಫಲ – ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಜನ

    ಹುಲಿ ಹಿಡಿಯಲು ವಿಫಲ – ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಜನ

    ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಅರಣ್ಯ ಪ್ರದೇಶ ಹೆಚ್ಚಿದೆ. ಅರಣ್ಯದ ಅಂಚಿನ ಗ್ರಾಮಗಳಿಗೆ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿದ ಘಟನೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.

    ಹುಲಿ, ಚಿರತೆ ದಾಳಿಗೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಹುಲಿ ಹಿಡಿಯಲು ಎಂದು ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಾಣ ಭಯದಲ್ಲಿ ಜೀವ ನಡೆಸುತ್ತಿರುವ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಜಮೀನಿನಲ್ಲಿ ಇದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ 2 ತಿಂಗಳಿನಿಂದ ಗ್ರಾಮದ ಹೊರವಲಯದಲ್ಲಿ ಹುಲಿ ಹಾಗೂ ಚಿರತೆ ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ, ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಬೋನು ಇಡಲಾಗಿದೆ. ಮಂಗಳವಾರ ಹುಲಿ ಮತ್ತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಜನರು ಅರಣ್ಯ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.

    ಜಾನುವಾರುಗಳ ಮೇಲೆ ದಾಳಿ:
    ತಿಂಗಳಿನಿಂದ ಗ್ರಾಮದ ಸುತ್ತಲೂ ಓಡಾಡುತ್ತಿರುವ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ರೈತರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ನಂತರ ಅರಣ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಇತ್ತ ಸುಳಿಯದೇ ಇರುವುದು ರೈತರು ಪಿತ್ತ ನೆತ್ತಿಗೇರಿಸಿತ್ತು.

    ಅರಣ್ಯ ಇಲಾಖೆ ಸಿಬ್ಬಂದಿಯನ್ನ ಬೋನ್​​ನಲ್ಲಿ ಇರಿಸಿದ ಬಗ್ಗೆ ಮಾಹಿತಿ ಪಡೆದ ಗುಂಡ್ಲುಪೇಟೆ ವಲಯದ ಎಸಿಎಫ್ ಸುರೇಶ್ ಹಾಗೂ ಬಂಡೀಪುರ ವಲಯದ ಎಸಿಎಫ್ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ. ಈ ವೇಳೆ, ರೈತರು ಹಾಗೂ ಅರಣ್ಯಾಧಿಕಾರಿಗಳ ನಡುವೆ ಮಾತಿನ‌ ಚಕಮಕಿ ನಡೆಯಿತು. ಕಾಡುಪ್ರಾಣಿಗಳ ಭೀತಿಯಲ್ಲಿ ನಾವು ಜೀವನ ನಡೆಸುತ್ತಿದ್ದೇವೆ. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಸಿಬ್ಬಂದಿಯನ್ನ ಬೋನಿನಿಂದ ಹೊರ ಬಿಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವೊಲಿಸಿದರು.

  • ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತ – 4ನೇ ತರಗತಿ ವಿದ್ಯಾರ್ಥಿ ಸಾವು

    ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತ – 4ನೇ ತರಗತಿ ವಿದ್ಯಾರ್ಥಿ ಸಾವು

    ಚಾಮರಾಜನಗರ: ಶಾಲೆಯಲ್ಲಿ ಪಾಠ ಕೇಳುವಾಗಲೇ ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಇದನ್ನೂ ಓದಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

    ದೊಡ್ಡಹುಂಡಿ ಗ್ರಾಮದ ಲೇ.ನಾಗರಾಜು-ನಾಗರತ್ನ ಪುತ್ರ ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ.

    ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದಿದ್ದು, ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಕಳೆದ ಎರಡು ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ. ಹೀಗಾಗಿ ಮೈಸೂರಿನ (Mysuru) ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಮಾಹಿತಿ ಕೊಟ್ಟಿದ್ದಾರೆ.ಇದನ್ನೂ ಓದಿ: ಮನೆಯಲ್ಲಿ ಪ್ರೀತಿಗೆ ನಿರಾಕರಣೆ; ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ – ಅಪ್ರಾಪ್ತೆ ಸಾವು

  • ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

    ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

    ಚಾಮರಾಜನಗರ: ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೊನಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಇದು ಎರಡನೇ ಸಾವಾಗಿದೆ.

    ದೇಶಿಪುರ ಕಾಲೊನಿಯ ಪುಟ್ಟಮ್ಮ ಎಂಬಾಕೆ ಹುಲಿಗೆ ಬಲಿಯಾದವರು. ಕಾಲೊನಿ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಏಕಾಏಕಿ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದಿದೆ. ನಂತರ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು. ಗ್ರಾಮಸ್ಥರು ಹುಡುಕಾಡಿದಾಗ ಪುಟ್ಟಮ್ಮನ ಶವ ದೊರೆತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಹುಲಿ ದಾಳಿ ನಡೆದಿದೆ.

    ಬಂಡೀಪುರ ಸಿಎಫ್ಒ ಪ್ರಭಾಕರನ್ ಮಾತನಾಡಿ, ಮಹಿಳೆ ಹುಲಿ ದಾಳಿಗೆ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದರು.

    ಕಳೆದ 10 ರಂದು ಚಾಮರಾಜನಗರ ತಾಲೂಕಿನ ಬೇಡಗುಳಿಯಲ್ಲಿ ಬಹಿರ್ದೆಸೆಗೆಂದು ತೆರಳಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿ ದೇಹದ ಅಲ್ಪಸ್ವಲ್ಪ ತಿಂದಿತ್ತು. ಬಳಿಕ, ಬಿಆರ್‌ಟಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಲವೇ ತಾಸುಗಳಲ್ಲಿ ಹುಲಿ ಸೆರೆ ಹಿಡಿದಿದ್ದರು.

  • ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಹೆಚ್ಚಿದ ಆಗ್ರಹ – ರಸ್ತೆ ತಡೆ, ಟೈರ್ ಸುಟ್ಟು ಪ್ರತಿಭಟನೆ

    ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಹೆಚ್ಚಿದ ಆಗ್ರಹ – ರಸ್ತೆ ತಡೆ, ಟೈರ್ ಸುಟ್ಟು ಪ್ರತಿಭಟನೆ

    ಚಾಮರಾಜನಗರ: ಬಂಡೀಪುರದಲ್ಲಿ(Bandipura) ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಂಡೀಪುರ ಉಳಿಸಿ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ನಡೆದ ನಮ್ಮ ನಡಿಗೆ ಬಂಡೀಪುರದ ಕಡೆಗೆ ಪಾದಯಾತ್ರೆ ಸಾಕ್ಷಿಯಾಯಿತು.

    ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು(TamilNadu, ಕೇರಳ(Kerala) ರಾಜ್ಯಗಳಿಗೆ 2 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಇಲ್ಲಿ ವಾಹನಗಳಿಗೆ ಸಿಲುಕಿ ವನ್ಯಜೀವಿಗಳು ಸಾವನ್ನಪ್ಪುತ್ತಿದ್ದ ಹಿನ್ನೆಲೆಯಲ್ಲಿ 2009ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಲವು ಮಾಫಿಯಾಗಳಿಗೆ ಇದರಿಂದ ಭಾರೀ ಹೊಡೆತ ಬಿದ್ದಿದೆ. ಕೇರಳ ಸರ್ಕಾರವಂತೂ ಇಲ್ಲಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಲೇ ಬಂದಿದೆ. ಇದನ್ನೂ ಓದಿ: ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

    ಇದೀಗ ವಯನಾಡು ಸಂಸದೆ ಪ್ರಿಯಾಂಕಾ ವಾದ್ರಾ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಇದರ ಜೊತೆಗೆ ವಯನಾಡ್‌ನಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಸಹ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಭರವಸೆ ನೀಡಿದ್ದರು.

    ಇತ್ತೀಚಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಡನೆ ಸಭೆಯನ್ನು ನಡೆಸಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ರಾಜಕೀಯ ಹಿತಾಸಕ್ತಿಗೋಸ್ಕರ ನಿಷೇಧ ತೆರವುಗೊಳಿಸುವ ಆತಂಕ ಎದುರಾಗಿರುವುದರಿಂದ ಬೀದಿಗಿಳಿದು ಬಂಡೀಪುರ ಉಳಿಸಿ ಅಭಿಯಾನ ನಡೆಸುತ್ತಿದ್ದಾರೆ. ಇದನ್ನೂ ಓದಿ: Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ

    ಇಂದು ನಮ್ಮ ನಡಿಗೆ ಬಂಡೀಪುರದ ಕಡೆಗೆ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಯಿತು. ಗುಂಡ್ಲುಪೇಟೆ ತಾಲೂಕು ಕಗ್ಗಳದ ಹುಂಡಿಯಿಂದ ಮದ್ದೂರು ಚೆಕ್‌ಪೋಸ್ಟ್‌ವರೆಗೆ ನಡೆದ ಪಾದಯಾತ್ರೆಯಲ್ಲಿ ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು, ರೈತರು, ಐಟಿ-ಬಿಟಿ ನೌಕರರು, ನಿವೃತ್ತ ಅರಣ್ಯಾಧಿಕಾರಿಗಳು ಹೀಗೆ ಎಲ್ಲಾ ವರ್ಗದ ನೂರಾರು ಮಂದಿ ಭಾಗವಹಿಸಿದ್ದರು. ಕೇರಳದ ಪರಿಸರವಾದಿಗಳು ಸಹ ಈ ಅಭಿಯಾನದಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಇದನ್ನೂ ಓದಿ: ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

    ಪಾದಯಾತ್ರೆ ಬಳಿಕ ಮದ್ದೂರು ಚೆಕ್‌ಪೋಸ್ಟ್ ಬಳಿ ನಡೆದ ಸಮಾವೇಶದ ಸ್ಥಳಕ್ಕೆ ಗುಂಡ್ಲುಪೇಟೆ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಭೇಟಿ ನೀಡಿದ್ದರು. ರಾತ್ರಿ ವಾಹನ ಸಂಚಾರ ನಿಷೇಧ ತೆರವು ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಯಾರು ಸಹ ಆತಂಕಪಡುವ ಅಗತ್ಯ ಇಲ್ಲ ಎಂಬ ಭರವಸೆಯ ಮಾತುಗಳನ್ನಾಡಿದರು.

    ಕೇರಳದವರು ರಾತ್ರಿ ವೇಳೆ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ಅವಕಾಶ ಕೇಳಿದ್ದಾರೆ ಅಷ್ಟೇ. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರಿಂದ ಯಾವುದೇ ಒತ್ತಡ ಇಲ್ಲ. ಅವರು ಯಾವುದೇ ಪತ್ರವನ್ನು ಬರೆದಿಲ್ಲ. ಯಥಾಸ್ಥಿತಿ ಮುಂದುವರಿಯಲಿ ಎಂಬುದೇ ನನ್ನ ಅಭಿಪ್ರಾಯ ಎನ್ನುವ ಮೂಲಕ ರಾತ್ರಿ ವಾಹನ ಸಂಚಾರ ನಿಷೇಧ ಮುಂದುವರಿಕೆಗೆ ಸಹಮತ ವ್ಯಕ್ತಪಡಿಸಿದರು. ಇದನ್ನೂ ಓದಿ: ಭ್ರಷ್ಟ ಕುಟುಂಬದ ಮಾತು ಕೇಳಿ ನನ್ನನ್ನ ಉಚ್ಚಾಟನೆ ಮಾಡಲಾಗಿದೆ: ಯತ್ನಾಳ್ ನಿಗಿನಿಗಿ ಕೆಂಡ

    ಪರಿಸರವಾದಿಗಳ ಹೋರಾಟ ತೀವ್ರ
    ಸ್ವಯಂಪ್ರೇರಿತರಾಗಿ ನೂರಾರು ಜನರು ಪಾಲ್ಗೊಳ್ಳುವ ಮೂಲಕ ಬಂಡೀಪುರ ಉಳಿಸಿ ಅಭಿಯಾನ ಸಾರ್ವಜನಿಕ ಚಳವಳಿಯಾಗಿ ರೂಪುಗೊಂಡಿದೆ. ರಾತ್ರಿ ವಾಹನ ಸಂಚಾರ ನಿಷೇಧದ ತೆರವೊಗೊಳಿಸುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡುವವರೆಗೂ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲು ಪರಿಸರವಾದಿಗಳು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಅಯ್ಯೋ ವಿಧಿಯೇ… ಕಾಲೇಜಿನಲ್ಲಿ ವಿದಾಯ ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

    ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕೂಡ ರಾತ್ರಿ ಸಂಚಾರಕ್ಕೆ ಅವಕಾಶ ಕೊಡದಂತೆ ಮನವಿ ಮಾಡಿದರು. ರಸ್ತೆ ತಡೆದು, ಟೈರ್ ಸುಟ್ಟು ಹಾಕಿ ಪ್ರತಿಭಟನೆ ಮಾಡಿದರು. ಕೇರಳ ಸರ್ಕಾರ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಒಂದು ವೇಳೆ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿದರು.

  • ರಾಜ್ಯಕ್ಕೆ ಎಂಟ್ರಿಯಾಗ್ತಿದೆ ಕೇರಳ ತ್ಯಾಜ್ಯ – ವಾಹನಗಳನ್ನು ಹಿಡಿದ ಗಡಿಜಿಲ್ಲೆಯ ಜನರು

    ರಾಜ್ಯಕ್ಕೆ ಎಂಟ್ರಿಯಾಗ್ತಿದೆ ಕೇರಳ ತ್ಯಾಜ್ಯ – ವಾಹನಗಳನ್ನು ಹಿಡಿದ ಗಡಿಜಿಲ್ಲೆಯ ಜನರು

    -ತ್ಯಾಜ್ಯ ಹೊತ್ತು ತಂದ ಐದು ಲಾರಿ ಸೀಜ್, ಐವರ ವಿರುದ್ಧ ಎಫ್‌ಐಆರ್

    ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರಕ್ಕೆ (Chamarajangar) ಮತ್ತೇ ಮತ್ತೇ ಕೇರಳದಿಂದ ಕಸ ಬರುತ್ತಿದೆ. ಜಿಲ್ಲೆಯ ಗುಂಡ್ಲುಪೇಟೆ ಕೇರಳದ ತ್ಯಾಜ್ಯ ಸುರಿಯುವ ಕಸದ ತೊಟ್ಟಿಯಾಗಿದೆ.

    ಕೇರಳಿಗರು ತಮ್ಮ ರಾಜ್ಯದಿಂದ ನಾನಾ ರೀತೀಯ ತ್ಯಾಜ್ಯವನ್ನು ಗುಂಡ್ಲುಪೇಟೆ ತಾಲೂಕಿನ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುತ್ತಿದ್ದು, ಜಿಲ್ಲಾಡಳಿತ ಮೌನವಹಿಸಿದೆ. ಹೀಗೆ ನಿತ್ಯ ಇಲ್ಲಿಗೆ ಬಂದು ತ್ಯಾಜ್ಯ ಸುರಿದು ಹೋಗುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ರೋಗರುಜಿನಗಳು ಹರಡುವ ಆತಂಕ ಎದುರಾಗಿದೆ.ಇದನ್ನೂ ಓದಿ: ಎಡನೀರು ಮಠದ ಶ್ರೀಗಳ ಕಾರಿನ ಮೇಲೆ ಅನ್ಯ ಕೋಮಿನ ಯುವಕರಿಂದ ದಾಳಿ

    ರಾಷ್ಟ್ರೀಯ ಹೆದ್ದಾರಿ 766ರ ಮೂಲಕ ಕೇರಳದಿಂದ ಮೆಡಿಕಲ್ ವೇಸ್ಟ್, ಚಪ್ಪಲಿ, ಮಾಂಸ, ಕೊಳೆತ ತರಕಾರಿ, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ತಂದು ಗಡಿಭಾಗದ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುವುದು ಅಥವಾ ಗುಂಡ್ಲುಪೇಟೆ ಮೂಲಕ ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡುವುದು ನಿರಂತರವಾಗಿ ನಡೆಯುತ್ತಲೇ ಇದೆ. ಇಷ್ಟೆಲ್ಲಾ ಆಗುತ್ತಿದ್ದರೂ ಕರ್ನಾಟಕ ಗಡಿಭಾಗದ ಚೆಕ್‌ಪೋಸ್ಟ್ನಲ್ಲಿ ಯಾವುದೇ ತಪಾಸಣೆ ನಡೆಯದೆ ಕೇವಲ ಗ್ರೀನ್ ಟ್ಯಾಕ್ಸ್ ವಸೂಲಿಗಷ್ಟೇ ಸೀಮಿತವಾಗಿದೆ.

    ನೆರೆಯ ಕೇರಳಿಗರು ಎಗ್ಗಿಲ್ಲದೇ ಚೆಕ್‌ಪೋಸ್ಟ್ ದಾಟಿ ಲಾರಿ ಮತ್ತು ಟೆಂಪೋಗಳಲ್ಲಿ ಕರ್ನಾಟಕಕ್ಕೆ ಕಸ ಸಾಗಣೆ ಮಾಡುತ್ತಿದ್ದಾರೆ. ಚೆಕ್‌ಪೋಸ್ಟ್ನಲ್ಲಿರುವ ಪೊಲೀಸ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಗಂಭೀರ ಆರೋಪವು ಇದೆ.

    ಇನ್ನೂ ಕೇರಳದಿಂದ ಕರ್ನಾಟಕಕ್ಕೆ ಕಸ ನಿರಂತರವಾಗಿ ಸಾಗಣೆಯಾಗುತ್ತಿದ್ದರೂ ಕೂಡ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಇದರಿಂದ ಬೇಸತ್ತ ಕನ್ನಡಪರ ಸಂಘಟನೆಗಳು ಕೇರಳದಿಂದ ತ್ಯಾಜ್ಯ ತುಂಬಿಕೊಂಡು ಬಂದ 5 ಲಾರಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೇರಳದ ಐವರು ಲಾರಿ ಚಾಲಕರ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

    ಚೆಕ್‌ಪೋಸ್ಟ್ನಲ್ಲಿ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಕೆಲಸಕ್ಕೆ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಮುಂದಾಗಬೇಕಿದೆ. ಇದರ ಜೊತೆಗೆ ಕೇರಳ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿ ತ್ಯಾಜ್ಯ ಸಾಗಾಣಿಕೆಗೆ ಕಡಿವಾಣ ಹಾಕಬೇಕಿದೆ.ಇದನ್ನೂ ಓದಿ: ಅಥಣಿ | ಅಂತರರಾಜ್ಯ ಕಳ್ಳರ ಸೆರೆ : 40 ಲಕ್ಷ ರೂ. ಚಿನ್ನಾಭರಣ ವಶಕ್ಕೆ

  • ಚಾಮರಾಜನಗರ| ಕಾಡಾನೆ ದಾಳಿಗೆ ಟೊಮೆಟೊ, ಬೀನ್ಸ್‌, ಬಾಳೆ ಬೆಳೆ ನಾಶ

    ಚಾಮರಾಜನಗರ| ಕಾಡಾನೆ ದಾಳಿಗೆ ಟೊಮೆಟೊ, ಬೀನ್ಸ್‌, ಬಾಳೆ ಬೆಳೆ ನಾಶ

    ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೆನ್ನವಡೆಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ 10 ಎಕರೆಗೂ ಹೆಚ್ಚು ಫಸಲು ನಾಶವಾಗಿರುವ ಘಟನೆ ನಡೆದಿದೆ.

    ಕುಮಾರ ಎಂಬವರಿಗೆ ಸೇರಿದ 2 ಎಕರೆ ಟೊಮೆಟೊ ಹಾಗೂ ಬೀನ್ಸ್, ಶಿವಪ್ಪ ಎಂಬವರಿಗೆ ಸೇರಿದ 2 ಎಕರೆ ಬಾಳೆ ಬೆಳೆ ಮತ್ತು ಸುತ್ತಮುತ್ತಲಿನ 10 ಎಕರೆ ಪ್ರದೇಶದ ಬೆಳೆಯನ್ನು ಆನೆಗಳು ತಿಂದು ತುಳಿದು ನಾಶಪಡಿಸಿವೆ.

    ಇಷ್ಟಾದರೂ ಬಂಡೀಪುರದ ಓಂಕಾರ ವಲಯದ ವಲಯಾರಣ್ಯಾಧಿಕಾರಿ ಇತ್ತ ತಲೆ ಹಾಕಿಲ್ಲ ಎಂದು ರೈತರು ಆರೋಪಿಸಿದ್ದಾರೆ.

  • ಗುಂಡ್ಲುಪೇಟೆಯಲ್ಲಿ ದಿನ ಬಿಟ್ಟು ದಿನ ಮನೆಗಳಿಗೆ ಕನ್ನ – ಜನರು ಕಂಗಾಲು

    ಗುಂಡ್ಲುಪೇಟೆಯಲ್ಲಿ ದಿನ ಬಿಟ್ಟು ದಿನ ಮನೆಗಳಿಗೆ ಕನ್ನ – ಜನರು ಕಂಗಾಲು

    ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದೆ. ಕಳೆದೆರೆಡು ದಿನಗಳ ಹಿಂದೆ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಳ್ಳತನ ತಡರಾತ್ರಿ ನಡೆದಿದ್ದು, ‌ಜನತೆ ಬೆಚ್ಚಿ ಬಿದ್ದಿದ್ದಾರೆ.

    ಪಟ್ಟಣದ 12ನೇ ವಾರ್ಡಿನ ನಿವಾಸಿ ವರದರಾಜು ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಮನೆಯ ಬೀಗ ಹೊಡೆದು ಬೀರುವಿನಲ್ಲಿದ್ದ 97 ಸಾವಿರ ನಗದು ಹಾಗೂ 10 ಗ್ರಾಂ ಚಿನ್ನದ ಎರಡು ಓಲೆಗಳನ್ನು ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: ದೇವರ ಭಜನೆಯಲ್ಲಿ ಮಗ್ನರಾಗಿದ್ದಾಗ ಕಿಟಿಕಿಯಿಂದ ಮಹಿಳೆಯ ಸರ ಕದ್ದು ಪರಾರಿ – FIR ದಾಖಲು

    ಮಾಲೀಕರು ‌ದಸರಾ ಹಬ್ಬದ ಹಿನ್ನೆಲೆ ‌ಮನೆಯ ಬಾಗಿಲು ‌ಹಾಕಿ‌ ಕೆ.ಆರ್. ನಗರಕ್ಕೆ ‌ತೆರಳಿದ್ದರು. ಮನೆಯಲ್ಲಿ ‌ಯಾರೂ ಇಲ್ಲದ ಮಾಹಿತಿ ಅರಿತ ಕಳ್ಳರು ಮನೆಯ ಒಳಗೆ ನುಗ್ಗಿ ಚಿನ್ನಾಭರಣ ಹಾಗೂ ‌ನಗದನ್ನು ದೋಚಿದ್ದಾರೆ.

    ಸೋಮವಾರ ‌ಮಧ್ಯಾಹ್ನ ಮಾಲೀಕರು ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಎರಡು ದಿನದ ಹಿಂದೆ ಕೂಡ ಆಟೋ ಚಾಲಕನ ಮನೆ ಬಾಗಿಲು ಮೀಟಿ ನಗದು, ಚಿನ್ನ ಕದ್ದೊಯ್ದಿದ್ದರು. ಪದೇ ಪದೆ ಕಳವಿಗೆ ಜನರು ಕಂಗಲಾಗಿದ್ದಾರೆ. ಇದನ್ನೂ ಓದಿ: ರಾಯಚೂರು| ಕಾರು, ಲಾರಿ ಮಧ್ಯೆ ಭೀಕರ ಅಪಘಾತ – ಮೂವರ ದುರ್ಮರಣ

  • ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ

    ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamarajanagar) ಬಿಜೆಪಿಗೆ (BJP) ಕಾಂಗ್ರೆಸ್ (Congress) ಬಿಗ್ ಶಾಕ್ ನೀಡಿದೆ. ಗುಂಡ್ಲುಪೇಟೆ (Gundlupet) ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲದಿದ್ದರೂ ಆಪರೇಷನ್ ಹಸ್ತದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಜಿಲ್ಲಾ ಬಿಜೆಪಿ ಅಧ್ಯಕ್ಷ ನಿರಂಜನ್ ಕುಮಾರ್‌ಗೆ ಸ್ವಕ್ಷೇತ್ರದಲ್ಲೇ ಭಾರಿ ಮುಖಭಂಗ ಉಂಟು ಮಾಡಿದೆ.

    ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೊದಲಿನಿಂದಲೂ ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ. ಇಲ್ಲಿನ ಪುರಸಭೆಯಲ್ಲಿ 23 ಸದಸ್ಯರಿದ್ದು, 13 ಸ್ಥಾನ ಹೊಂದಿರುವ ಮೂಲಕ ಸ್ಪಷ್ಟ ಬಹುಮತ ಹೊಂದಿತ್ತು. ಉಳಿದಂತೆ ಕಾಂಗ್ರೆಸ್ 8, ಎಸ್‌ಡಿಪಿಐ ಹಾಗೂ ಪಕ್ಷೇತರ ತಲಾ ಒಬ್ಬ ಸದಸ್ಯರಿದ್ದು, ಕಾಂಗ್ರೆಸ್‌ಗೆ ಅಧಿಕಾರ ಗದ್ದುಗೆ ಕನಸಿನ ಮಾತಾಗಿತ್ತು. ಆದರೆ ಚಾಣಾಕ್ಷ ನಡೆ ಅನುಸರಿಸಿ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ (H M Ganesh Prassad) ಬಿಜೆಪಿಯ ಆರು ಮಂದಿ ಸದಸ್ಯರನ್ನು ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

    ವಿಶೇಷ ಎಂದರೆ ಕಾಂಗ್ರೆಸ್‌ಗೆ ಬಂದ ಇಬ್ಬರು ಸದಸ್ಯರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದ ಕಿರಣ್ ಗೌಡ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರೆ, ಹೀನಾ ಕೌಸರ್ ಅವರು ತಮ್ಮ ಮೂಲ ಪಕ್ಷದ ಅಭ್ಯರ್ಥಿ ಕುಮಾರ್ ಅವರನ್ನು ಐದು ಮತಗಳ ಅಂತರದಿಂದ ಸೋಲಿಸಿ ಉಪಾಧ್ಯಕ್ಷರಾಗಿ ಚುನಾಯಿತರಾದರು. ಇದನ್ನೂ ಓದಿ: ಬಿಹಾರದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿದ್ದ ವೇಳೆ ಕುಸಿದ ಟಿನ್ ಶೆಡ್ – ನೂರಾರು ಜನರಿಗೆ ಗಾಯ, 10 ಮಂದಿ ಗಂಭೀರ

    ಶಾಸಕ ಗಣೇಶ್ ಪ್ರಸಾದ್ ಹಾಗೂ ಸಂಸದ ಸುನೀಲ್ ಬೋಸ್ ಅವರು ಬಿಜೆಪಿಯಿಂದ ಬಂದು ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದ ಕಿರಣ್ ಗೌಡ ಹಾಗೂ ಹೀನಾ ಕೌಸರ್ ಅವರಿಗೆ ಮತ ಚಲಾಯಿಸುವ ಮೂಲಕ ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವಂತೆ ನೋಡಿಕೊಂಡರು. ಇದನ್ನೂ ಓದಿ: ಡಿಲೀಟ್‌ ಮಾಡಿದ್ರೂ ಸಿಕ್ತು ವಿಡಿಯೋ – ಸ್ಫೋಟಕ FSL ವರದಿಯಲ್ಲಿ ಏನಿದೆ?

    ಈ ವೇಳೆ ಮಾತನಾಡಿದ ಶಾಸಕ ಗಣೇಶ್ ಪ್ರಸಾದ್, ಎಲ್ಲಿದಿಯಪ್ಪ ಗಣೇಶ್ ಅಂತ ಕೇಳಿದವರಿಗೆ ತಕ್ಕ ಉತ್ತರ ನೀಡಿದ್ದೇನೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರಿಗೆ ಟಾಂಗ್ ನೀಡಿದರು. ಇದನ್ನೂ ಓದಿ: ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    ಆಪರೇಷನ್ ಹಸ್ತದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್, ಕಾಂಗ್ರೆಸ್ ಪಕ್ಷ ನಮ್ಮ ಸದಸ್ಯರಿಗೆ ಆಮಿಷ ಒಡ್ಡಿ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ. ನಮ್ಮ ಪಕ್ಷದ ಸದಸ್ಯರಿಗೆ ವಿಪ್ ನೀಡಲಾಗಿತ್ತು. ವಿಪ್ ಉಲ್ಲಂಘಿಸಿರುವ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲು ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದರು. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

  • ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಚಾಮರಾಜನಗರ: ಶವಸಂಸ್ಕಾರಕ್ಕೆ (Funeral) ತೆರಳಿದ್ದ ವೇಳೆ ಹೆಜ್ಜೇನು ದಾಳಿ (Bee Attack) ನಡೆಸಿ ಹಲವರು ಗಾಯಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

    ಹೆಜ್ಜೇನು ದಾಳಿಯಲ್ಲಿ 42 ಮಂದಿ ಗಾಯಗೊಂಡಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಮಹಾದೇವಯ್ಯ ಎಂಬವರ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಅಂತ್ಯಸಂಸ್ಕಾರದಲ್ಲಿ ಬೆಂಕಿ ಹಾಕಿದ್ದ ಹೊತ್ತಲ್ಲಿ ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ

    ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಹೆಚ್‌ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ

  • ಗುಂಡ್ಲುಪೇಟೆಯ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ

    ಗುಂಡ್ಲುಪೇಟೆಯ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ

    ಚಾಮರಾಜನಗರ: ದೇಶಾದ್ಯಂತ ದೀಪ ಬೆಳಗಿಸಿ ಸಡಗರ ಸಂಭ್ರಮದಿಂದ ದೀಪಾವಳಿ ಹಬ್ಬವನ್ನ ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರದ (Chamarajanagara) ಈ ಏಳು ಗ್ರಾಮಗಳಲ್ಲಿ ದೀಪಾವಳಿಯ (Deepavali) ಸಡಗರ-ಸಂಭ್ರಮ ಯಾವುದೂ ಕಾಣುತ್ತಿಲ್ಲ. ಇದಕ್ಕೆ ಕಾರಣ ಮಂಗಳವಾರ ಹಬ್ಬ ಬಂದಿರುವುದು. ಹಾಗಾದರೆ ಈ ಗ್ರಾಮಗಳಲ್ಲಿ ದೀಪಾವಳಿ ಹಬ್ಬ ಯಾವಾಗ ಆಚರಿಸುತ್ತಾರೆ? ಯಾಕೆ ಬುಧವಾರದ ದಿನ ಹೊರತು ಪಡಿಸಿ ಉಳಿದ ದಿನಗಳಲ್ಲಿ ಹಬ್ಬ ಆಚರಿಸಲ್ಲ ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

    ಹೌದು, ದೀಪದಿಂದ ದೀಪವನ್ನು ಹಚ್ಚುತ್ತಾ ಮನೆ, ಮನಗಳಲ್ಲಿ ಸಂಭ್ರಮದ ವಾತಾವರಣ ಸೃಷ್ಟಿ ಮಾಡುವುದೇ ದೀಪಾವಳಿ ಹಬ್ಬ. ದೇಶಾದ್ಯಂತ ಸಂಭ್ರಮ, ಸಡಗರದಿಂದ ದೀಪಾವಳಿಯನ್ನ ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬೆಂಡಗಳ್ಳಿ, ವೀರನಪುರ, ಬನ್ನಿತಾಳಪುರ, ಮಾಡ್ರಹಳ್ಳಿ, ನಲ್ಲೂರು, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ಇಂದು (ಭಾನುವಾರ) ದೀಪಾವಳಿ ಹಬ್ಬವನ್ನ ಆಚರಿಸುತ್ತಿಲ್ಲ. ಇದಕ್ಕೆ ಕಾರಣ ದೀಪಾವಳಿಯ ಬಲಿಪಾಡ್ಯಮಿ ಮಂಗಳವಾರ ಬಂದಿರುವುದು. ಇದನ್ನೂ ಓದಿ: ದೀಪಾವಳಿ: ವ್ಯಾಪಾರ ವೃದ್ಧಿಗೆ ಮಾಡಿ ಧನಲಕ್ಷ್ಮಿ ಪೂಜೆ

    ಈ ಮೇಲಿನ 7 ಗ್ರಾಮಗಳಲ್ಲಿ ಹಿಂದಿನ ಕಾಲದಿಂದಲೂ ದೀಪಾವಳಿಯ ಬಲಿಪಾಡ್ಯಮಿ ಬುಧವಾರ ಬಿಟ್ಟು ವಾರದ ಬೇರೆ ಯಾವುದೇ ದಿನಗಳಲ್ಲಿ ಬಂದರೂ ಆಚರಿಸುವುದಿಲ್ಲ. ಬದಲಾಗಿ ಹಬ್ಬವನ್ನ ಮುಂದಿನ ಬುಧವಾರ ಆಚರಿಸುತ್ತಾರೆ. ಬುಧವಾರದಂದು ಹೊಸ ಬಟ್ಟೆ ತೊಟ್ಟು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ರಾಸುಗಳಿಗೆ ಎಣ್ಣೆ ಸ್ನಾನ ಮಾಡಿಸಿ ಮನೆಯಲ್ಲಿ ಸಿಹಿ ಊಟ ಮಾಡುತ್ತಾರೆ. ಕಳೆದ ಮೂರು ತಲೆಮಾರುಗಳಿಂದ ಈ ಏಳು ಗ್ರಾಮದವರು ಬುಧವಾರವೇ ಹಬ್ಬ ಆಚರಿಸುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದಾರೆ. ಅಷ್ಟಕ್ಕೂ ಬುಧವಾರವೇ ಏಕೆ ಹಬ್ಬ ಆಚರಿಸಬೇಕು ಎಂಬ ಪ್ರಶ್ನೆಗೆ ಗ್ರಾಮದವರ ಉತ್ತರ ಹೀಗಿದೆ.

    ಬುಧವಾರ ಹೊರತುಪಡಿಸಿ ಬೇರೆ ಯಾವ ದಿನದಲ್ಲಿ ಹಬ್ಬ ಆಚರಿಸಿದರೆ ಊರಿಗೆ ಕೆಡಕಾಗುತ್ತದೆ. ರಾಸುಗಳು ಜಾನುವಾರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತವೆ ಎಂಬ ನಂಬಿಕೆ ಇದೆ. ಹಾಗಾಗಿ ನೂರಾರು ವರ್ಷಗಳಿಂದ ದೀಪಾವಳಿ ಹಬ್ಬವನ್ನ ಬುಧವಾರವನ್ನ ಹೊರತು ಪಡಿಸಿ ಇನ್ಯಾವುದೇ ದಿನದಲ್ಲಿ ಬಂದರೂ ಸುತ್ತಮುತ್ತ 7 ಗ್ರಾಮದ ಜನರು ಆಚರಿಸುವುದಿಲ್ಲ. ಬುಧವಾರದಂದು ದೇವಸ್ಥಾನದಿಂದ ತೀರ್ಥ ತಂದು ಹಸುಗಳಿಗೆ ಪೂಜೆ ಮಾಡಿ ಬಳಿಕ ಹಸುಗಳನ್ನ ಊರಿನ ಸುತ್ತ ಒಂದು ಸುತ್ತು ಹಾಕಿಸಲಾಗುವುದು. ಇದನ್ನೂ ಓದಿ: ಅಯೋಧ್ಯೆಯಲ್ಲಿ ದೀಪದಿಂದ ಎಣ್ಣೆ ಕದ್ದ ಮಕ್ಕಳು; ವೀಡಿಯೋ ಹಂಚಿಕೊಂಡ ಅಖಿಲೇಶ್‌ ಯಾದವ್‌