Tag: ಗುಂಬಜ್

  • ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್‌ ಸಿಂಹ

    ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್‌ ಸಿಂಹ

    ಮೈಸೂರು: ಪ್ರಧಾನಿ ಮೋದಿ (Narendra Modi) ಅವರಿಂದಲೇ ಬೆನ್ನಿಗೆ ಗುದ್ದು ಕೊಡಿಸಿಕೊಂಡ ರಾಮದಾಸ್‌ (S.A.Ramdas) ಅವರಿಗೆ ಕಿರುಕುಳ ಕೊಡುವ ಶಕ್ತಿ ನನಗೆ ಎಲ್ಲಿದೆ ಹೇಳಿ ಎಂದು ಶಾಸಕ ಎಸ್‌.ಎ.ರಾಮದಾಸ್‌ ಆರೋಪಕ್ಕೆ ಸಂಸದ ಪ್ರತಾಪ್‌ ಸಿಂಹ (Pratap Simha) ತಿರುಗೇಟು ನೀಡಿದ್ದಾರೆ.

    ಗುಂಬಜ್‌ (Gumbaz) ಮಾದರಿಯಲ್ಲಿ ಮೈಸೂರು ಬಸ್‌ ನಿಲ್ದಾಣ (Mysuru Bus Stand) ನಿರ್ಮಾಣ ವಿವಾದದ ವಿಚಾರ ಮುಂದಿಟ್ಟುಕೊಂಡು ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ರಾಮದಾಸ್‌ ಆರೋಪಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ- ರಾಮ್‍ದಾಸ್ ಪರೋಕ್ಷ ಆರೋಪ

    ರಾಮದಾಸ್ ನಮ್ಮ ಹಿರಿಯ ನೇತಾರರು. ಗುಂಬಜ್ ಹೊಡೆದರೆ ಟಿಪ್ಲು ಅನುಯಾಯಿಗಳಿಗೆ ಕಿರುಕುಳ ಆಗುತ್ತದೆ. ಶಿವಾಜಿ ಅನುಯಾಯಿಗಳಿಗೆ ಕಿರುಕುಳ ಅನಿಸುವುದಿಲ್ಲ. ರಾಮದಾಸ್ ಅವರು ಯಾವ ಅರ್ಥದಲ್ಲಿ ತಮಗೆ ಕಿರುಕುಳ ಆಗಿದೆ ಎಂದು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

    ಮೈಸೂರಿನ ರಾಜಕಾರಣಿಗಳ ಬಳಿ ನನ್ನನ್ನೆ ಸುಟ್ಟು ಹಾಕುವಷ್ಟು ಹಣವಿದೆ. ಅವರಿಗೆ ಕಿರುಕುಳ ಕೊಡುವಷ್ಟು ಶಕ್ತಿವಂಥ ನಾನಲ್ಲ. ನಾನು ರಿಯಲ್ ಎಸ್ಟೇಟ್ ಮಾಡಲು ರಾಜಕಾರಣಕ್ಕೆ ಬಂದಿಲ್ಲ. ಮೈಸೂರಿನ ರಾಜಕಾರಣಿಗಳ ಜೊತೆ ಸೇರಿಕೊಂಡು ವ್ಯವಹಾರ ಮಾಡುವ ಅವಶ್ಯಕತೆ ಇಲ್ಲ. ನಾನು ಅಭಿವೃದ್ಧಿಗಾಗಿ ರಾಜಕಾರಣ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿವಾದಿತ ಗುಂಬಜ್ ತೆರವಿಗೆ ಪ್ರತಾಪ್ ಸಿಂಹ ಕೊಟ್ಟಿದ್ದ ಡೆಡ್‍ಲೈನ್ ಅಂತ್ಯ- ಇಂದು ತೆರವಿಗೆ ಮುಂದಾಗ್ತರಾ ಸಂಸದರು?

    ರಾತ್ರಿ ಕೆಲಸ ಮಾಡುವುದು ಕಳ್ಳರು. ರಾತ್ರಿ ಯಾಕೆ ಬಸ್ ನಿಲ್ದಾಣದ ಕೆಲಸ ಮಾಡಬೇಕು? ಬಸ್ ನಿಲ್ದಾಣಕ್ಕೆ ಹೆಸರಿಡಲು ಕಾನೂನಿದೆ. ರಾತ್ರೋರಾತ್ರಿ ಹೇಗೆ ಹೆಸರಿಟ್ಟರು. ಈ ವಿಚಾರದಲ್ಲಿ ಎಲ್ಲಾ ಕಾನೂನು ಉಲ್ಲಂಘನೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಧ್ಯ ಪ್ರವೇಶಿಸಿದೆ. ಅವರೇ ಅನಧಿಕೃತ ಕಟ್ಟಡ ಎಂದು ಹೇಳಿದ್ದಾರೆ. ಅವರು ತೆರವು ಮಾಡಬಹುದು. ಮೂಲ ವಿನ್ಯಾಸದಲ್ಲಿ ಗುಂಬಜ್ ಇಲ್ಲ. ಹೊಸ ವಿನ್ಯಾಸದಲ್ಲಿ ಗುಂಬಜ್ ಇದೆ. ಆ ನಕ್ಷೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಹಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೊಟ್ಟ ಗಡುವು ಮುಗಿದ ಮೇಲೆ ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.

    ನಾನು ಅಂದುಕೊಂಡಿದ್ದನ್ನು ಸಾಧಿಸಿ ತೋರಿಸಿದ್ದೇನೆ. ಟಿಪ್ಪು ಏಕ್ಸ್‌ಪ್ರೆಸ್‌ ಬದಲಾಯಿಸುತ್ತೇನೆ ಎಂದು ಹೇಳಿದ್ದೆ, ಬದಲಾಯಿಸಿದ್ದೇನೆ. ಮಹಿಷಾ ದಸರಾ ನಿಲ್ಲಿಸಿದ್ದೇನೆ. ಗುಂಬಜ್ ವಿಚಾರದಲ್ಲೂ ನನ್ನ ಮಾತಿಗೆ ಬದ್ಧ. ಬಸ್ ನಿಲ್ದಾಣದ ಮೇಲಿನ ಅನಧಿಕೃತ ಗುಂಬಜ್ ತೆರವು ಮಾಡಲೇಬೇಕು. ಮೈಸೂರಿನ ಅಭಿವೃದ್ಧಿ ಕಾರ್ಯಗಳು ಮಹಾರಾಜರ ಹೆಸರು ಹೇಳಬೇಕೆ ವಿನಃ ಅವರ ಶತೃಗಳ ಹೆಸರಲ್ಲ. ಗುಂಬಜ್ ಬಗ್ಗೆ ಪರಿಶೀಲನೆಗೆ ಹೊಸ ತಜ್ಞರ ಸಮಿತಿ ಅವಶ್ಯಕತೆ ಇಲ್ಲ. ಕೆಆರ್‌ಐಡಿಎಲ್‌ನ ತಜ್ಞರೇ ಮೂಲ ನಕ್ಷೆಗೆ ಅನುಮತಿ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI

    Live Tv
    [brid partner=56869869 player=32851 video=960834 autoplay=true]

  • ಪ್ರತಾಪ್ ಸಿಂಹ ಸಂಸದನಾಗಿರಲು ನಾಲಾಯಕ್: ಸಲೀಂ ಅಹ್ಮದ್

    ಪ್ರತಾಪ್ ಸಿಂಹ ಸಂಸದನಾಗಿರಲು ನಾಲಾಯಕ್: ಸಲೀಂ ಅಹ್ಮದ್

    ಗದಗ: ಪ್ರತಾಪ್ ಸಿಂಹ (Pratap Simha) ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ. ಅವರು ಎಂಪಿ ಆಗುವುದಕ್ಕೆ ನಾಲಾಯಕ್ ಎಂದು ವಿಧಾನ ಪರಿಷತ್ (Vidhana Parishad) ಸದಸ್ಯ ಸಲೀಂ ಅಹ್ಮದ್ (Salim Ahmed) ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಬಸ್ ಶೆಲ್ಟರ್ ಮೇಲಿನ ಗುಂಬಜ್ (Gumbaz) ತೆರವು ವಿಚಾರವಾಗಿ ಕಿಡಿಕಾರಿದ್ದಾರೆ. ಇಂತಹ ಹೇಳಿಕೆಗಳ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಿದ್ದಾರೆ? ನೀವು ಎಂಪಿ ಆಗಿ ಏನು ಅಭಿವೃದ್ಧಿ ಕಾರ್ಯ ಮಾಡಿದ್ದೀರಾ? ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. 40% ಕಮಿಷನ್ ಸರ್ಕಾರ ಅಂತ ಜಗಜ್ಜಾಹಿರವಾಗಿದೆ. ಭ್ರಷ್ಟಾಚಾರದಲ್ಲಿ ಉದಯವಾಗಿ, ಅದರಲ್ಲಿ ಮುಳುಗಿದೆ. ಅದನ್ನು ಸರಿಪಡಿಸಿಕೊಳ್ಳಲು ಹೇಳುವ ಹಾಗೂ ಆ ಬಗ್ಗೆ ಧ್ವನಿ ಎತ್ತುವ ಧೈರ್ಯ ಈ ಸಂಸದರಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

    ಗುಂಬಜ್ ಇರುವುದನ್ನು ತೆರವು ಮಾಡುವುದಾದರೆ, ಮೈಸೂರು, ಬೆಂಗಳೂರಿನಲ್ಲಿ, ದೆಹಲಿಯಲ್ಲಿ ಗುಂಬಜ್ ರೀತಿಯಲ್ಲಿ ಸರ್ಕಾರಿ ಕಟ್ಟಡಗಳಿವೆ. ಅವುಗಳನ್ನು ಎಲ್ಲಾ ಒಡೆಯುತ್ತಿರಾ? ಆ ಧೈರ್ಯ ನಿಮಗಿದೆಯಾ? ಒಬ್ಬ ಸಂಸದನಾಗಿ ಇಂತಹ ಅವಹೇಳನಕಾರಿ ಕೆಲಸ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ಪೆಟ್ರೋಲ್ ಜೊತೆಗೆ ನೀರು ಬೆರಕೆ – ಪಂಪ್ ವಿರುದ್ಧ ವ್ಯಕ್ತಿಯಿಂದ ದೂರು

    ವಿವೇಕ ಶಾಲೆಗಳಿಗೆ ಕೇಸರಿ ಬಣ್ಣದ ಕೆಸರೆರಚಾಟ ಕುರಿತು ಮಾತನಾಡಿದ ಅವರು, ಬಣ್ಣ ಬಿಡಿ, ಸರ್ಕಾರಿ ಶಾಲೆಗಳಲ್ಲಿ ಟೀಚರ್ ಗಳಿಲ್ಲ, ಕೊಠಡಿಗಳಿಲ್ಲ, ಸಮವಸ್ತ್ರ, ಶೂಗಳಿಲ್ಲ, ಮಕ್ಕಳಿಗೆ ಸೈಕಲ್‍ಗಳಿಲ್ಲ, ಮಧ್ಯಾಹ್ನ ಬಿಸಿಯೂಟ ಸರಿಯಾಗಿ ಸಿಗುತ್ತಿಲ್ಲ. ಅದರ ಕಡೆ ಗಮನ ಕೊಡಿ. ಇದೆಲ್ಲಾ ಬಿಟ್ಟು ಬಿಜೆಪಿ ಸರ್ಕಾರ ಬಣ್ಣದ ಹಿಂದೆ ಬಿದ್ದಿದೆ. ಎಲ್ಲವನ್ನೂ ಕೇಸರಿಕರಣ ಮಾಡುವುದಕ್ಕೆ ಹೊರಟಿದ್ದಾರೆ. ಮಕ್ಕಳಿಗೆ ಈ ರೀತಿ ಬಣ್ಣ ಬಿಂಬಿಸುವ ಬದಲು ಒಳ್ಳೆ ಶಿಕ್ಷಣ ನೀಡಿ ಎಂದು ಹರಿಹಾಯ್ದಿದ್ದಾರೆ.

    ಈ ವೇಳೆ ಕಾಂಗ್ರೆಸ್ ಮುಖಂಡ ಶಿವಕುಮಾರಗೌಡ ಪಾಟೀಲ್, ಮಾಜಿ ಶಾಸಕ ಜಿ.ಎಸ್. ಪಾಟೀಲ್, ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್

    Live Tv
    [brid partner=56869869 player=32851 video=960834 autoplay=true]

  • ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ

    ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ

    ಮೈಸೂರು: ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ (Bus stand) ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೊದು ಗ್ಯಾರೆಂಟಿ ಎಂದು ಸಂಸದ ಪ್ರತಾಪ ಸಿಂಹ (Pratap Simha) ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮೈಸೂರಿನ (Mysuru) ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್‍ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್‍ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್‌ಗಳಿಗೆ ಹೇಳಿದ್ದೇನೆ. ಮೂರು, ನಾಲ್ಕು ದಿನ ಟೈಮ್ ಕೊಟ್ಟಿದ್ದೇನೆ. ಇಲ್ಲವಾದ್ರೆ ಜೆಸಿಬಿ (JCB) ತಂದು ನಾನೇ ಒಡೆದು ಹಾಕುತ್ತೇನೆ ಎಂದು ತಿಳಿಸಿದರು.

    ಇದೀಗ ಪ್ರತಾಪ್ ಸಿಂಹ ನೀಡಿರುವ ವಾರ್ನಿಂಗ್ ಬೆನ್ನಲ್ಲೇ ಅಧಿಕಾರಿಗಳು ತಕ್ಷಣ ಈ ಗುಂಬಜ್‍ಗಳ ಮೇಲೆ ಕಳಸದ ಮಾದರಿಯನ್ನು ಕೂರಿಸಿದ್ದಾರೆ. ಇದನ್ನೂ ಓದಿ: ಮುಂದಿನ ವಾರದಿಂದ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ: ಹೆಚ್‌.ಡಿ ದೇವೇಗೌಡ

    ಇನ್ನೂ ಟಿಪ್ಪು ನಿಜ ಕನಸು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಜಲಿಂಗಪ್ಪನವರ ಕಾರ್ ಡ್ರೈವರ್ ಆಗಿದ್ದ ಜಾಫರ್ ಶರೀಫ್ ಎಂಬ ವ್ಯಕ್ತಿ ರೈಲಿಗೆ ಟಿಪ್ಪು ಎಕ್ಸ್‍ಪ್ರೆಸ್ ಎಂದು ನಾಮಕರಣ ಮಾಡಿದರು. ಕಳ್ಳ ಕಿವಿ ಇಟ್ಟುಕೊಂಡು ಇಂದಿರಾಗಾಂಧಿ ಬಳಿ ಹೋಗಿ ಮಾಹಿತಿ ಕೊಟ್ಟು ಲೋಕಸಭಾ ಚುನಾವಣೆಗೆ ಟಿಕೆಟ್ ಗಿಟಿಸಿಕೊಂಡು ಗೆದ್ದು ರೈಲ್ವೆ ಸಚಿವರಾದರು. 1980ರಲ್ಲಿ ಟಿಪ್ಪು ಎಕ್ಸ್‍ಪ್ರೆಸ್ ಪ್ರಾರಂಭ ಮಾಡುತ್ತಾರೆ ಎಂದ ಅವರು, ರೈಲ್ವೆ ಸ್ಟೇಷನ್‍ಗೆ ಚಾಮರಾಜ ಒಡೆಯರ್ ಹೆಸರು ಇಡುತ್ತೇವೆ ಹೊರತು ಟಿಪ್ಪುವಿನ ಯಾವ ಗುರುತುಗಳು ಸಿಗದ ಹಾಗೇ ಮಾಡುತ್ತೇವೆ ಎಂದರು. ಇದನ್ನೂ ಓದಿ: ನಾಪತ್ತೆಯಾಗಿದ್ದ ದೇಗುಲ ಮಠದ ಮೂವರು ವಿದ್ಯಾರ್ಥಿಗಳು ವಾಪಸ್

    Live Tv
    [brid partner=56869869 player=32851 video=960834 autoplay=true]

  • ಡಿಪೋದಲ್ಲಿನ ವಸ್ತುಗಳಿಂದ ಗುಂಬಜ್ ನಿರ್ಮಿಸಿ ಕನ್ನಡಾಭಿಮಾನ ಮೆರೆದ KSRTC ಸಿಬ್ಬಂದಿ

    ಡಿಪೋದಲ್ಲಿನ ವಸ್ತುಗಳಿಂದ ಗುಂಬಜ್ ನಿರ್ಮಿಸಿ ಕನ್ನಡಾಭಿಮಾನ ಮೆರೆದ KSRTC ಸಿಬ್ಬಂದಿ

    ಬೀದರ್: ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳು ಗುಂಬಜ್ ನಿರ್ಮಿಸಿ ಕನ್ನಡಾಭಿಮಾನ ಮೆರೆದಿದ್ದಾರೆ. ಗಡಿ ಜಿಲ್ಲೆಯ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಅಷ್ಟೂರು ಗುಂಬಜ್ ನಿರ್ಮಾಣ ಮಾಡಿ ಕನ್ನಡದ ಹಬ್ಬಕ್ಕೆ ಸಮರ್ಪಣೆ ಮಾಡಿದ್ದಾರೆ. ಡಿಪೋದಲ್ಲಿನ ವಸ್ತುಗಳಿಂದ 20ಕ್ಕೂ ಹೆಚ್ಚು ಸಿಬ್ಬಂದಿಗಳು ಕಲಾವಿದರಾಗಿ ನಿರ್ಮಾಣ ಮಾಡಿದ ಅಪರೂಪದ ಕನ್ನಡದ ಗುಂಬಜ್ ಇದು.

    ಬೀದರ್‍ನ ನೌಬಾದ್‍ನಲ್ಲಿರುವ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಕೆಲಸದ ನಡುವೆ ಬಿಡುವಿನ ವೇಳೆಯಲ್ಲಿ ಡಿಪೋದಲ್ಲಿನ ಕಬ್ಬಿಣದ ವಸ್ತುಗಳಿಂದ ಅಪರೂಪದ ಕನ್ನಡದ ಗುಂಬಜ್ ಮಾಡಿ ಕನ್ನಡ ಪ್ರೇಮಕ್ಕೆ ಸಾಕ್ಷಿಯಾಗಿದ್ದಾರೆ. 20ಕ್ಕೂ ಹೆಚ್ಚು ಕೆಎಸ್‍ಆರ್‍ಟಿಸಿ ಡೀಪೋ ಸಿಬ್ಬಂದಿಗಳು ಹಿಂದೂ, ಮುಸ್ಲಿಂ ಧರ್ಮದ ಐಕ್ಯತೆ ಸಾರುವ ಅಷ್ಟೂರು ದರ್ಗಾದ ಗುಂಬಜ್ ನಿರ್ಮಾಣ ಮಾಡಿ ಕನ್ನಡ ಕಹಳೆ ಮೊಳಗಿಸಿದ್ದಾರೆ.

    ಸತತ 12 ದಿನಗಳ ಪರಿಶ್ರಮದಿಂದ ಈ ಐತಿಹಾಸಿಕ ಅಷ್ಟೂರು ಗುಂಬಜ್ ನಿರ್ಮಾಣ ಮಾಡಿದ್ದು, ಗಡಿ ಭಾಗದಲ್ಲಿ ಅನ್ಯಭಾಷೆಗಳ ಪ್ರಭಾವಕ್ಕೆ ಒಳಗಾಗುತ್ತಿರುವ ಕನ್ನಡಕ್ಕೆ ಮತ್ತೆ ಜೀವ ತುಂಬಿದ್ದಾರೆ.

    ಒಂದು ಕಡೆ ತೆಲುಗು ಮೊತ್ತೊಂದು ಕಡೆ ಮರಾಠಿ, ಮೊಗದೊಂದು ಕಡೆ ಉರ್ದು, ಹಿಂದಿ ಭಾಷೆಗಳ ಪ್ರಭಾವಕ್ಕೆ ನಲುಗಿ ಹೋಗಿರುವ ಗಡಿ ಜಿಲ್ಲೆ ಬೀದರ್‍ನಲ್ಲಿ ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳು ಮತ್ತೆ ಕನ್ನಡದ ಕಂಪನ್ನು ಸೂಸಿದ್ದಾರೆ. ಈ ಕನ್ನಡದ ಗುಂಬಜ್ ಇಂದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣೆಗೆ ಮಾಡಿ ನಂತರ ನೆಹರು ಸ್ಟೇಡಿಯಂನಲ್ಲಿ ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜೋತ್ಸವ ಕಾರ್ಯಕ್ರಮದ ಭಾಗವಾಗಲಿದೆ.