Tag: ಗುಜರಾತ್ ಫಲಿತಾಂಶ

  • ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ ಬುಲಾವ್

    ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ ಬುಲಾವ್

    ಬೆಂಗಳೂರು: ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ನಿಂದ ಬುಲಾವ್ ಬಂದಿದೆ.

    ಈ ಹಿನ್ನೆಲೆಯಲ್ಲಿ ಬುಧವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಡೆಸಲಿರೋ ಬಿಎಸ್‍ವೈ, ರಾಜ್ಯದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚರ್ಚೆ ನಡೆಸೋ ಸಾಧ್ಯತೆಯಿದೆ.

    ಇದರ ಜೊತೆಗೆ ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರ, ಮಹದಾಯಿ ವಿಚಾರಗಳ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳೋ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಬಿಎಸ್‍ವೈ ದೆಹಲಿ ಪ್ರವಾಸ ಹಿನ್ನೆಲೆಯಲ್ಲಿ ನಾಳೆಯ ನವಲಗುಂದ, ನರಗುಂದ, ಗದಗ ಯಾತ್ರೆ ಮುಂದೂಡಿಕೆಯಾಗಿದೆ.

    ಇದನ್ನೂ ಓದಿ: ಗುಜರಾತ್ ಚುನಾವಣೆ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಅಪರೇಷನ್

    ಗುಜರಾತ್ ಫಲಿತಾಂಶದ ಬೆನ್ನಲ್ಲೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಕ್ರಾಂತಿ ವೇಳೆಗೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಾದರಹಳ್ಳಿ ಸಮೀಪ ಏರ್ ಪೋರ್ಟ್ ರಸ್ತೆಯಲ್ಲಿರುವ ಬಹು ದೊಡ್ಡ ವಿಲ್ಲಾವೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಬಿಜೆಪಿ ಕಚೇರಿ ಹಾಗೂ ವಿಮಾನ ನಿಲ್ದಾಣಕ್ಕೆ ಹತ್ತಿರವಾಗಲೆಂದು ಸಾದರಹಳ್ಳಿಯಲ್ಲಿ ವಿಲ್ಲಾ ಬಾಡಿಗೆಗೆ ಪಡೆದಿದ್ದಾರೆ. ಈ ವಿಲ್ಲಾದಲ್ಲೇ ಎಲೆಕ್ಷನ್ ಕಾರ್ಯತಂತ್ರ ನಡೆಯುತ್ತದೆ. ವಾರ್ ರೂಂ, ಅಮಿತ್ ಶಾ ಅವರ ಸ್ಟ್ರ್ಯಾಟಜಿ ರೂಂ ಕೂಡ ವಿಲ್ಲಾದಲ್ಲೇ ಇದ್ದು, ವಾರ್ ರೂಂನ 10 ತಂಡವೂ ಬೆಂಗಳೂರಿಗೆ ಶಿಫ್ಟ್ ಆಗಲಿದೆ.

    ಅಮಿತ್ ಶಾ ಅವರು ವಾರದಲ್ಲಿ ಎರಡು ಬಾರಿ ಬೆಂಗಳೂರಿಗೆ ಭೇಟಿ ಕೊಡಲಿದ್ದಾರೆ. ಈ ವೇಳೆ ಮಂಗಳೂರು, ಮೈಸೂರು, ಹುಬ್ಬಳಿ, ಬೆಳಗಾವಿಗೂ ಕೂಡ ಅವರು ಹೋಗಲಿದ್ದಾರೆ. ಒಟ್ಟಿನಲ್ಲಿ ಹೊಸ ವರ್ಷದಿಂದ ಕರ್ನಾಟಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವರ ಅಸಲಿ ಆಟ ಶುರುವಾಗಲಿದೆ ಎಂದು ಹೇಳಲಾಗ್ತಿದೆ.

    ಇದನ್ನೂ ಓದಿ: ಮತಎಣಿಕೆಗೆ 1 ಗಂಟೆ ಮುನ್ನವೇ ಸಿದ್ದರಾಮಯ್ಯ ಹೇಳಿದ್ರು ಗುಜರಾತ್ ಫಲಿತಾಂಶದ `ಲೆಕ್ಕಾಚಾರ’

  • ಗುಜರಾತ್ ಫಲಿತಾಂಶ ರಾಜ್ಯದ ಚುನಾವಣೆಗೆ ಸಂಬಂಧವಿಲ್ಲ – ಪರಮೇಶ್ವರ್

    ಗುಜರಾತ್ ಫಲಿತಾಂಶ ರಾಜ್ಯದ ಚುನಾವಣೆಗೆ ಸಂಬಂಧವಿಲ್ಲ – ಪರಮೇಶ್ವರ್

    ಬೆಂಗಳೂರು: ಗುಜರಾತ್ ಫಲಿತಾಂಶ ರಾಜ್ಯದ ಚುನಾವಣೆಗೆ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗುಜರಾತಿನಲ್ಲಿ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್ ದಾಪುಗಾಲಿಟ್ಟಿದೆ. ಅಲ್ಲಿನ ಫಲಿತಾಂಶ ರಾಜ್ಯದ ಚುನಾವಣೆಗೆ ಸಂಬಂಧವಿಲ್ಲ. ಸ್ವಲ್ಪ ಮಟ್ಟಿನ ಪರಿಣಾಮವಾಗಬಹುದು. ಆದ್ರೆ ಸ್ಥಳೀಯ ಬೆಳವಣಿಗೆಗಳ ಮೇಲೆ ಚುನಾವಣೆ ಫಲಿತಾಂಶ ನಿಂತಿರುತ್ತೆ ಅಂತ ಹೇಳಿದ್ರು.

    ರಾಹುಲ್ ಗಾಂಧಿ ಬಗ್ಗೆ ಆರೋಪ ಮಾಡಿದವರಿಗೆ ಗುಜರಾತ್ ಫಲಿತಾಂಶದಿಂದ ಉತ್ತರ ಸಿಗಲಿದೆ. ರಾಷ್ಟ್ರರಾಜಕಾರಣದಲ್ಲಿ ಗುಜರಾತ್ ಫಲಿತಾಂಶ ಪರಿಣಾಮ ಬೀರಲಿದೆ ಅಂತ ಹೇಳಿದ್ದಾರೆ.

    ಭಾರೀ ಕುತೂಹಲ ಮೂಡಿಸುತ್ತಿರುವ ಗುಜರಾತ್ ಚುನಾವಣೆಯ ಫಲಿತಾಂಶಗಳು ನಿಮಿಷ ನಿಮಿಷಗಳಲ್ಲಿ ಬದಲಾಗುತ್ತಿದೆ. ಆರಂಭದ ಮತ ಎಣಿಕೆಯ ವೇಳೆ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದರೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ. ಇನ್ನು ಕೆಲವೇ ನಿಮಿಷಗಳಲ್ಲಿ ಸ್ಪಷ್ಟ ಫಲಿತಾಂಶ ತಿಳಿದುಬರಲಿದೆ.

  • ಡಿ.9, 14ಕ್ಕೆ ಗುಜರಾತ್ ಚುನಾವಣೆ, 18ಕ್ಕೆ ಫಲಿತಾಂಶ

    ಡಿ.9, 14ಕ್ಕೆ ಗುಜರಾತ್ ಚುನಾವಣೆ, 18ಕ್ಕೆ ಫಲಿತಾಂಶ

    ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 2 ಹಂತದಲ್ಲಿ ಚುನಾವಣೆ ನಡೆಯಲಿದೆ.

    ದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ, ಮೊದಲ ಹಂತದ ಮತದಾನ ಡಿಸೆಂಬರ್ 9ರಂದು ನಡೆದರೆ, 2ನೇ ಹಂತದ ಚುನಾವಣೆ ಡಿಸೆಂಬರ್ 14ರಂದು ನಡೆಯಲಿದೆ ಎಂದು ತಿಳಿಸಿದರು.

    ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ. ಒಟ್ಟು 50128 ಮತದಾನ ಕೇಂದ್ರಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಮತ ದೃಢೀಕರಿಸುವ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು ಎಂದರು.

    ಗುಜರಾತ್ ನ ಒಟ್ಟು 182 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಪ್ರತಿ ಅಭ್ಯರ್ಥಿಗೆ ವೆಚ್ಚದ ಮಿತಿಯನ್ನು 28 ಲಕ್ಷ ರೂ. ಎಂದು ನಿಗದಿಗೊಳಿಸಲಾಗಿದೆ ಎಂದರು.