Tag: ಗುಡುಗು ಸಿಡಿಲು

  • ಬೆಂಗಳೂರು ಸೇರಿದಂತೆ ಹಲವೆಡೆ ಮುಂಗಾರು ಅಬ್ಬರ – ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು ಬಲಿ

    ಬೆಂಗಳೂರು ಸೇರಿದಂತೆ ಹಲವೆಡೆ ಮುಂಗಾರು ಅಬ್ಬರ – ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು ಬಲಿ

    ಬೆಂಗಳೂರು: ತಡರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರ್ಭಟಿಸುತ್ತಿದೆ. ಭಾರೀ ಗಾಳಿ, ಗುಡುಗು-ಸಿಡಿಲಿನ ಸಮೇತ ಮಳೆ ಸುರಿದಿದೆ. ಮಳೆಯಿಂದಾಗಿ ನಗರದ ಏರ್‍ಪೋರ್ಟ್‍ನಲ್ಲಿ ಪ್ಲಾಸ್ಟಿಕ್ ತಡೆಗೋಡೆಗಳು ಚೆಲ್ಲಾಪಿಲ್ಲಿ ಆಗಿವೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಸದಾಶಿವನಗರ, ಹೆಬ್ಬಾಳ, ಯಲಹಂಕ, ಯಶವಂತಪುರ, ಶೇಷಾದ್ರಿಪುರಂ, ಕೆ.ಆರ್. ಮಾರ್ಕೆಟ್ ಬಳಿ ಭಾರೀ ಮಳೆ ಆಗಿದೆ. ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ನೆಲಮಂಗಲದಲ್ಲಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ಇದನ್ನೂ ಓದಿ: ಮುಂಗಾರು ಮಳೆಯ ಆರ್ಭಟ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

    ಕೊಪ್ಪಳ ಜಿಲ್ಲಾದ್ಯಂತ ಗುಡುಗು – ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ಯಲಬುರ್ಗಾ ತಾಲೂಕು ಚಿಕ್ಕಮ್ಯಾಗೇರಿ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದೇವಮ್ಮ ಮುದೇನೂರು (55), ರೇಷ್ಮಾ ಚಲವಾದಿ (27) ಸಿಡಿಲಿಗೆ ಬಲಿಯಾಗಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಯಲಬುರ್ಗಾ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

    ಮತ್ತೊಂದೆಡೆ ಬೆಳಗಾವಿಯ ಹುಕ್ಕೇರಿ ತಾಲೂಕಿನ ಮದಹಳ್ಳಿಯಲ್ಲಿ ಬಿರುಗಾಳಿ ಮಳೆಗೆ ಮನೆ, ಕೊಟ್ಟಿಗೆಯ ಮೇಲ್ಛಾವಣಿಗಳು ಹಾರಿ ಹೋಗಿವೆ. ಗದಗದ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ಮಳೆ ಬಂದ ಹಿನ್ನೆಲೆ ಜಮೀನಿನಲ್ಲಿ ಮರದ ಕೆಳಗೆ ನಿಂತಿದ್ದ ಮೂವರು ಯುವಕರಿಗೆ ಸಿಡಿಲು ಬಡಿದು ಗಾಯಗಳಾಗಿದೆ. ಇದೀಗ ಗಾಯಗೊಂಡ 22 ವರ್ಷದ ಸಂಗಪ್ಪ ಇಟಗಿ, 24 ವರ್ಷದ ಜಗದೀಶ್ ಹೊಸಳ್ಳಿ, 25 ವರ್ಷದ ಪ್ರಶಾಂತ್ ಮಲ್ಲಾಪುರ ಅವರನ್ನು ರೋಣಾ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಚಿತ್ರದುರ್ಗದ ಚಳ್ಳಕೆರೆ ಪಟ್ಟಣದ ನೆಹರು ವೃತ್ತದ ಜಲಾವೃತವಾಗಿತ್ತು. ತಗಡಿನ ಶೀಟ್‍ಗಳು ಉರುಳಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್‍ಗಳು, ಆಟೋಗಳು ಜಖಂ ಆಗಿದೆ. ಕೋಲಾರ ಜಿಲ್ಲೆಯ ಮುಳಬಾಗಲು, ಶ್ರೀನಿವಾಸಪುರ, ಕೆಜಿಎಫ್, ಕೋಲಾರ ತಾಲೂಕಿನ ಹಲವೆಡೆ ಮಳೆ ಆಗಿದೆ.

  • ಸಿಡಿಲು ಬಡಿತದಿಂದ ವ್ಯಕ್ತಿ ಜಸ್ಟ್ ಮಿಸ್ – ಬೆಚ್ಚಿ ಬೀಳಿಸುವ ವೀಡಿಯೋ ವೈರಲ್

    ಸಿಡಿಲು ಬಡಿತದಿಂದ ವ್ಯಕ್ತಿ ಜಸ್ಟ್ ಮಿಸ್ – ಬೆಚ್ಚಿ ಬೀಳಿಸುವ ವೀಡಿಯೋ ವೈರಲ್

    ಜಕಾರ್ತ: ಇಂಡೋನೇಷ್ಯಾದಲ್ಲಿ ವ್ಯಕ್ತಿಯೊಬ್ಬ ಸಿಡಿಲು ಬಡಿತದಿಂದ ಜಸ್ಟ್ ಮಿಸ್ ಆಗಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ನೋಡುಗರನ್ನು ಬೆಚ್ಚಿ ಬೀಳಿಸುವ ವೀಡಿಯೋ ವೈರಲ್ ಆಗಿದೆ.

    ಉತ್ತರ ಜಕಾರ್ತಾದ ಕರಾವಳಿ ಪಟ್ಟಣ ಸಿಲಿನ್ಸಿಂಗ್‍ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಅಬ್ದುಲ್ ರೋಸಿದ್ (35) ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿ. ಇದನ್ನೂ ಓದಿ:  ಹಗಲು ಹೊತ್ತಿನಲ್ಲೇ ಬ್ಯಾಂಕ್ ದರೋಡೆ – ಸಿಬ್ಬಂದಿ ಹತ್ಯೆ

    ಸೆಕ್ಯುರಿಟಿ ಗಾರ್ಡ್ ಆಗಿರುವ ಅಬ್ದುಲ್, ಸಿಲಿನ್ಸಿಂಗ್‍ನಲ್ಲಿರುವ ಅಂಗಳದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ರೋಸಿದ್‍ಗೆ ಸಿಡಿಲು ಬಡೆಯುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೀಡಿಯೋವನ್ನು ಯೂಟ್ಯೂಬ್ ಚಾನೆಲ್ ಮೀಡಿಯಾ ಸ್ಟಾರ್ಟ್‍ನಲ್ಲಿ ಹಂಚಿಕೊಳ್ಳಲಾಗಿದೆ.

    ಅಬ್ದುಲ್, ಕಾರ್ಖಾನೆಯ ಪಾಕಿರ್ಂಗ್ ಸ್ಥಳದಲ್ಲಿ ಛತ್ರಿ ಹಿಡಿದು ಮಳೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಸಿಡಿಲು ಬಡಿದಿದೆ. ಆಗ ವ್ಯಕ್ತಿ ನೆಲದ ಮೇಲೆ ಕುಸಿದು ಬೀಳುತ್ತಾನೆ. ಈ ವೇಳೆ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿ ಅಬ್ದುಲ್‍ನನ್ನು ತಕ್ಷಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುತ್ತಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ಅಬ್ದುಲ್ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಮಹಿಳಾ ವಿಮಾ ಏಜೆಂಟ್ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಸ್ನೇಹಿತನಿಂದ ಹೊರಬಂತು ಸತ್ಯ

  • ಗುಡುಗು-ಸಿಡಿಲು, ಬಿರುಗಾಳಿಯೊಂದಿಗೆ ಮಳೆ – ಮುಂಗಾರು ಪೂರ್ವ ವರ್ಷಧಾರೆಗೆ ಐವರು ಬಲಿ

    ಗುಡುಗು-ಸಿಡಿಲು, ಬಿರುಗಾಳಿಯೊಂದಿಗೆ ಮಳೆ – ಮುಂಗಾರು ಪೂರ್ವ ವರ್ಷಧಾರೆಗೆ ಐವರು ಬಲಿ

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದೆ. ಗುಡುಗು-ಬಿರುಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಕೆಲವು ಕಡೆ ಪ್ರಾಣ ಹಾನಿ, ಆಸ್ತಿ-ಪಾಸ್ತಿ ನಷ್ಟ ಉಂಟು ಮಾಡಿದೆ.

    ಯಾದಗಿರಿ ತಾಲೂಕಿನ ಮುದ್ನಾಳ ದೊಡ್ಡ ತಾಂಡಾದದಲ್ಲಿ ಮನೆ ಕುಸಿದು 8 ವರ್ಷದ ಬಾಲಕ ಅಭಿ ರಾಥೋಡ್ ಮೃತಪಟ್ಟಿದ್ದಾನೆ. ಯಾದಗಿರಿ, ಸುರಪುರ, ಶಹಾಪುರ, ಗುರುಮಠಕಲ್‍ನಲ್ಲಿ ಧಾರಾಕಾರ ಮಳೆಯಾಗಿದೆ. ಕೊಪ್ಪಳದಲ್ಲಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಕುಷ್ಟಗಿ ತಾಲೂಕಿನ ನೆರೇಬಂಚಿ ಗ್ರಾಮದ 28 ವರ್ಷದ ಲಕ್ಷ್ಮಣ ಬಿಜಕಲ್, ಬಾದಿನಾಳ ಗ್ರಾಮದ 26 ವರ್ಷದ ರೇಣುಕಾ ಪರಸಾಪೂರ ಮೃತಪಟ್ಟಿದ್ದಾರೆ. ಬಾದಿಮನಾಳ ಗ್ರಾಮದ ಶಾಂತವ್ವ ಎಂಬವರ ಸ್ಥಿತಿ ಚಿಂತಾಜನಕವಾಗಿದೆ.

    ಕೊಪ್ಪಳ, ಗಂಗಾವತಿ, ಯಲಬುರ್ಗಾದಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಬೆಳಗಾವಿಯ ಬಡಾಲ ಅಂಕಲಗಿಯಲ್ಲಿ ಸಿಡಿಲು ಬಡಿದು ರುದ್ರವ್ವ ಕುಡೆನಹಟ್ಟಿ ಎಂಬವರು ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ತೆಂಕಲಹುಂಡಿಯಲ್ಲಿ 13 ವರ್ಷದ ಬಾಲಕ ಮನು ಮೃತಪಟ್ಟಿದ್ದಾನೆ.

    ಕೋಲಾರ ಹೊರವಲಯದಲ್ಲಿ ಮದುವೆಗಾಗಿ ಶಾಂತಿ ಕಲ್ಯಾಣ ಮಂಟಪಕ್ಕೆ ಮಾಡಲಾಗಿದ್ದ ಅಲಂಕಾರ ಹಾಳಾಗಿದೆ. ಮೈಸೂರು, ರಾಮನಗರ, ಚಿಕ್ಕಬಳ್ಳಾಪುರದಲ್ಲಿ ಕೂಡ ಧಾರಾಕಾರ ಮಳೆಯಾಗಿದೆ.