Tag: ಗುರಮಠಕಲ್

  • ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

    ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

    -ನಕಲಿ ಬ್ರ್ಯಾಂಡ್‌ ಹೆಸರಿನಲ್ಲಿ ವಿದೇಶಕ್ಕೂ ರಫ್ತು ಮಾಡಿರುವ ಶಂಕೆ

    ಯಾದಗಿರಿ: ಜಿಲ್ಲೆಯ ಎರಡು ರೈಸ್ ಮಿಲ್‌ಗಳ (Rice Mill) ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಒಟ್ಟು 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ.

    ಆಹಾರ ಇಲಾಖೆ ಉಪನಿರ್ದೇಶಕ ಅನೀಲಕುಮಾರ್ ಅವರು ಗುರಮಠಕಲ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್‌ ಮಾಡಿಸಿ, ವಿವಿಧ ಬ್ರ್ಯಾಂಡ್‌ ಹೆಸರಿನಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ನೀಡಿದ್ದ ದೂರಿನ ಆಧಾರದ ಪೊಲೀಸರು ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು.

    ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಹಾಯ ಇಲಾಖೆಯ ಖಚಿತ ಮಾಹಿತಿ ಮೇರೆಗೆ ಯಾದಗಿರಿ ಜಿಲ್ಲೆಯ ಗುರಮಠಕಲ್ ಪಟ್ಟಣದ ಹೊರವಲಯದ ಉದ್ಯಮಿ ನರೇಂದ್ರ ರಾಠೋಡ ಹಾಗೂ ಅವರ ಪುತ್ರ ಅಯ್ಯಪ್ಪ ರಾಠೋಡಗೆ ಸೇರಿದ ಲಕ್ಷ್ಮೀ ವೆಂಕಟೇಶ್ವರ ಹಾಗೂ ಲಕ್ಷ್ಮೀ ಬಾಲಾಜಿ ರೈಸ್ ಮಿಲ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಗೋದಾಮಿನಲ್ಲಿ ಸಾವಿರಾರು ಅಕ್ಕಿ ಚೀಲಗಳ ಸಂಗ್ರಹ ಪತ್ತೆಯಾಗಿದೆ. ಸತತ ಮೂರು ದಿನಗಳ ಬಳಿಕ ಲೆಕ್ಕ ಕಾರ್ಯ ಮುಕ್ತಾಯವಾಗಿದ್ದು, ಸುಮಾರು 1.17 ಕೋಟಿ ರೂ.ಗೂ ಅಧಿಕ ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:ಈದ್‌ಮಿಲಾದ್ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್  ದಾಖಲು

    ಸದ್ಯ ರೈಸ್ ಮಿಲ್‌ಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ನಕಲಿ ಬ್ರ್ಯಾಂಡ್‌ನಡಿ ರೈಸ್ ಪಾಲಿಶ್‌ ಮಾಡಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಡೈನೆಸ್ಟಿ, ದಾರಾ ಡಬಲ್, ವೋಲ್ಗಾ ಸೇರಿದಂತೆ ವಿವಿಧ ಬ್ರ್ಯಾಂಡ್‌ ಚೀಲದಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಕಡಿಮೆ ದರಕ್ಕೆ ಅಕ್ಕಿ ಖರೀದಿ ಮಾಡಿ, ದುಬಾರಿ ಬೆಲೆಗೆ ಅಕ್ಕಿ ಮಾರಾಟ ಮಾಡಿ ಅಕ್ರಮ ದಂಧೆ ನಡೆಸಿರುವುದಲ್ಲದೇ ಸಿಂಗಾಪುರ, ದುಬೈ ಸೇರಿದಂತೆ ವಿವಿಧ ದೇಶದ ಬ್ರ್ಯಾಂಡ್‌ನಲ್ಲಿ ರಫ್ತು ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಪಂಜಾಬ್, ಹರಿಯಾಣ, ತೆಲಂಗಾಣ ಸರ್ಕಾರದ ಹೆಸರಿನಲ್ಲಿಯೂ ಪಡಿತರ ಅಕ್ಕಿ ಚೀಲಗಳು ಪತ್ತೆಯಾಗಿದೆ.

    ಈ ಬಗ್ಗೆ ತನಿಖೆಯಾದರೆ ಮತ್ತಷ್ಟು ಅಕ್ಕಿ ಮಾರಾಟ ಜಾಲ ಪತ್ತೆಯಾಗುವ ಸಾಧ್ಯತೆಯಿದೆ. ಸದ್ಯ ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ಅರೆಸ್ಟ್‌ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

  • ಬುದ್ದಿ ಮಾತು ಹೇಳಿದ ತಮ್ಮನನ್ನೆ ಕೊಂದ ಅಣ್ಣ

    ಬುದ್ದಿ ಮಾತು ಹೇಳಿದ ತಮ್ಮನನ್ನೆ ಕೊಂದ ಅಣ್ಣ

    ಯಾದಗಿರಿ: ಬುದ್ದಿ ಮಾತು ಹೇಳಿದ ಎಂದು ಕೋಪಗೊಂಡ ಅಣ್ಣ, ತಮ್ಮನನ್ನು ಕೊಂದಿರುವ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ತಮ್ಮ ದೇವಿಂದ್ರ ಚವ್ಹಾಣ್(28)ನನ್ನು ಅಣ್ಣ ಜಯರಾಮ್ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ರೈಲಲ್ಲಿ ಊರಿಗೆ ಹೊರಟ್ಟಿದ್ದ ಪಬ್‌ಜಿ ಪಾರ್ಟ್ನರ್‌ಗಾಗಿ ಹುಸಿ ಬಾಂಬ್‌ ಕರೆ ಮಾಡಿದ ಬಾಲಕ

    ನಡೆದಿದ್ದೇನು?
    ಜಯರಾಮ್ ಹಾಗೂ ದೇವಿಂದ್ರ ಸಹೋದರರು ಯುಗಾದಿ ಹಿನ್ನೆಲೆ ಊರಿಗೆ ಬಂದಿದ್ದರು. ಈ ವೇಳೆ ಭಾನುವಾರ ರಾತ್ರಿ ದೇವಿಂದ್ರ ಹಾಗೂ ಜಯರಾಮ ನಡುವೆ ಜಗಳ ಪ್ರಾರಂಭವಾಗಿದೆ. ಈ ವೇಳೆ ದೇವಿಂದ್ರ ಜಮ್ಲಾನಾಯಕ ಮಕ್ಕಳ ಸಹವಾಸ ಮಾಡಬೇಡ ಎಂದು ಜಯರಾಮ್‍ಗೆ ಬುದ್ದಿ ಹೇಳಿದ್ದಾನೆ.

    ಬುದ್ದಿ ಮಾತು ಹೇಳಿದ್ದಕ್ಕೆ ಕೋಪಗೊಂಡ ಜಯರಾಮ್ ಕುಟುಂಬಸ್ಥರ ಮುಂದೆಯೇ ದೇವಿಂದ್ರನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೆಪ್ ಆಗಿದ್ದಾನೆ. ಪ್ರಸ್ತುತ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಲೆಕೂದಲು ಬೋಳಿಸಿಕೊಂಡ ಫೋಟೋ ಶೇರ್ ಮಾಡಿದ ಗರ್ಭಿಣಿ ಸಂಜನಾ

    ಗುರಮಠಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.