Tag: ಗುರುಗ್ರಾಮ್

  • ಕ್ಯಾಬ್‌ ಬುಕ್‌ ಮಾಡಿದ್ರು; ಪಿಕಪ್‌ ಮಾಡಲು ಬಂದ ಚಾಲಕನನ್ನೇ ಎಳೆದು ಹಾಕಿ ಕ್ಯಾಬ್‌ ಕದ್ದೊಯ್ದರು!

    ಕ್ಯಾಬ್‌ ಬುಕ್‌ ಮಾಡಿದ್ರು; ಪಿಕಪ್‌ ಮಾಡಲು ಬಂದ ಚಾಲಕನನ್ನೇ ಎಳೆದು ಹಾಕಿ ಕ್ಯಾಬ್‌ ಕದ್ದೊಯ್ದರು!

    ಉತ್ತರ ಪ್ರದೇಶ: ಅಗ್ರಿಗೇಟರ್ ಆ್ಯಪ್ ಮೂಲಕ ಕ್ಯಾಬ್ (Cab) ಬುಕ್ ಮಾಡಿದ್ದ ನಾಲ್ವರು, ತಮ್ಮನ್ನು ಕರೆದೊಯ್ಯಲು ಬಂದ ಟ್ಯಾಕ್ಸಿ ಚಾಲಕನನ್ನೇ ಎಳೆದು ಹಾಕಿ ವಾಹನ ಕದ್ದು ಎಸ್ಕೇಪ್‌ ಆಗಿರುವ ಘಟನೆ , ಗುರುಗ್ರಾಮ್‌ನಲ್ಲಿ (Gurugram) ನಡೆದಿದೆ.

    ಕ್ಯಾಬ್ ಚಾಲಕ ಹರೀಶ್ ಕುಮಾರ್ ರಾತ್ರಿ 11 ಗಂಟೆ ಸುಮಾರಿಗೆ ಕ್ಯಾಬ್ ಅಗ್ರಿಗೇಟರ್ ಆ್ಯಪ್‌ನಲ್ಲಿ ಬುಕಿಂಗ್ ಸ್ವೀಕರಿಸಿ ಪಿಕಪ್ ಪಾಯಿಂಟ್ ತಲುಪಿದ್ದರು. ಬುಕ್‌ ಮಾಡಿದ್ದ ನಾಲ್ವರು ಕ್ಯಾಬ್‌ಗಾಗಿ ಕಾದಿದ್ದರು. ಕ್ಯಾಬ್‌ ಹತ್ತಿರ ಬಂದು ಚಾಲಕ ಬುಕಿಂಗ್‌ ಖಚಿತಪಡಿಸಿಕೊಳ್ಳಲು ಮುಂದಾಗಿದ್ದ. ಈ ವೇಳೆ ಚಾಲಕನನ್ನು ಎಳೆದು ಹಾಕಿ ನಾಲ್ವರು ಕಿಡಿಗೇಡಿಗಳು ಕ್ಯಾಬ್‌ ಕದ್ದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 12 ಸಾವಿರ ಕೋಟಿ ಮೌಲ್ಯದ 2.5 ಟನ್ ಡ್ರಗ್ಸ್ ಜಪ್ತಿ – ಪಾಕ್ ಆರೋಪಿಯ ಬಂಧನ

    ಚಾಲಕನ ಮೊಬೈಲ್ ಫೋನ್ ಕೂಡ ಕ್ಯಾಬ್ ಒಳಗೆ ಇತ್ತು. ಘಟನೆಗೆ ಸಂಬಂಧಿಸಿದಂತೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗುರುಗ್ರಾಮ್‌ನಲ್ಲಿ ವಾಹನ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಪ್ರತಿದಿನ ಸುಮಾರು 9 ವಾಹನ ಕಳ್ಳತನ ಪ್ರಕರಣ ವರದಿಯಾಗುತ್ತಿವೆ. 2022 ರಲ್ಲಿ ಅಕ್ಟೋಬರ್ ವರೆಗೆ 2,893 ವಾಹನಗಳು ಕಳ್ಳತನವಾಗಿವೆ. 2021 ರಲ್ಲಿ 3,014 ವಾಹನಗಳನ್ನು ಕಳವು ಮಾಡಲಾಗಿದೆ. ಇದನ್ನೂ ಓದಿ: CBI ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಹೆಸರು

  • ಕೋವಿಡ್‌ಗೆ ಹೆದರಿ ಮಗನೊಂದಿಗೆ ಬರೋಬ್ಬರಿ 3 ವರ್ಷ ಮನೆಯಲ್ಲೇ ಲಾಕ್‌ ಆಗಿದ್ದ ತಾಯಿ!

    ಕೋವಿಡ್‌ಗೆ ಹೆದರಿ ಮಗನೊಂದಿಗೆ ಬರೋಬ್ಬರಿ 3 ವರ್ಷ ಮನೆಯಲ್ಲೇ ಲಾಕ್‌ ಆಗಿದ್ದ ತಾಯಿ!

    ನವದೆಹಲಿ: ಕೋವಿಡ್-19 (Covid 19) ಸೋಂಕಿನ ಭೀತಿಯಿಂದಾಗಿ ಮಹಿಳೆಯೊಬ್ಬರು ಬರೋಬ್ಬರಿ 3 ವರ್ಷಗಳ ಕಾಲ ಮಗನೊಂದಿಗೆ ಮನೆಯಲ್ಲೇ ಬಂಧಿಯಾಗಿದ್ದ ಅಚ್ಚರಿದಾಯಕ ಘಟನೆ ಗುರುಗ್ರಾಮ್‌ನ (Gurugram) ಚಕ್ಕರ್‌ಪುರದಲ್ಲಿ ನಡೆದಿದೆ.

    ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದ ಮುನ್‌ಮುನ್ ಮಜ್ಹಿ ಹೆಸರಿನ ಮಹಿಳೆಯ ಪತಿ ಸುಜನ್ ಮಾಝಿ, ಚಕ್ಕರ್‌ಪುರ ಪೊಲೀಸ್ ಪೋಸ್ಟ್‌ನಲ್ಲಿ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಿಸೆಪ್ಷನ್‍ಗೂ ಮುನ್ನ ನವದಂಪತಿ ಶವವಾಗಿ ಪತ್ತೆ

    ಮಹಿಳೆಯ ಪತಿ ಕೋರಿಕೆ ಮೇರೆಗೆ ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ ಬಾಗಿಲು ಒಡೆದು ಮತ್ತು ಮಹಿಳೆ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಪೊಲೀಸರು ಮತ್ತು ಆರೋಗ್ಯಾಧಿಕಾರಿಗಳು ಮನೆಯ ಒಳಗೆ ಹೋದಾಗ ಕೊಳಕು ಬಟ್ಟೆ, ತಲೆಗೂದಲು ರಾಶಿ, ಕಸ ಮತ್ತು ರಾಶಿ ಇಟ್ಟಿದ್ದ ದಿನಸಿ ದೃಶ್ಯಗಳು ಕಂಡುಬಂದಿದೆ. ರಕ್ಷಣೆ ಬೆನ್ನಲ್ಲೇ ತಾಯಿ-ಮಗ ಇಬ್ಬರನ್ನೂ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು.

    ಮಹಿಳೆ ತನ್ನ ಮಗನ ತಲೆಗೂದಲನ್ನೂ ತಾನೇ ಕಟ್‌ ಮಾಡುತ್ತಿದ್ದರಂತೆ. ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗುತ್ತಿತ್ತು. 3 ವರ್ಷಗಳಿಂದ ಮನೆಯ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ. ಈ ಅವಧಿಯಲ್ಲಿ ಯಾರೂ ಕೂಡ ಮನೆಗೆ ಭೇಟಿ ನೀಡಿರಲಿಲ್ಲ. ಬಾಲಕ ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿದ್ದ. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿ ಪಾಲಿಕೆ ಚುಕ್ಕಾಣಿ ಹಿಡಿದ ಆಮ್ ಆದ್ಮಿ – ಶೆಲ್ಲಿ ಒಬೆರಾಯ್ ಮೇಯರ್ ಆಗಿ ಆಯ್ಕೆ

    ಇಷ್ಟೆಲ್ಲಾ ಆದರೂ ಇಬ್ಬರೂ ಮನೆಗೆ ಬೀಗ ಹಾಕಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವೇ ಸಿಕ್ಕಿರಲಿಲ್ಲ. ಕೋವಿಡ್-19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು. ಮನೆಯಿಂದ ಹೊರಗಡೆ ಹೋದರೆ ಮಗ ಮತ್ತು ತಾನು ಸಾಯಬಹುದು ಎಂಬ ಭೀತಿಯಿಂದ ಸತತ 3 ವರ್ಷ ಮನೆಯಲ್ಲೇ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಅವಧಿಯಲ್ಲಿ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಂಡಿರಲಿಲ್ಲ. 2020ರಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಆಕೆ ಪತಿ ಕಚೇರಿ ಕೆಲಸಕ್ಕಾಗಿ ಮನೆಯಿಂದ ಹೊರಬಂದಿದ್ದರು. ಅದಾದ ಬಳಿಕ ಆತನನ್ನೂ ಮಹಿಳೆ ಮನೆಗೆ ಬಿಟ್ಟುಕೊಂಡಿರಲಿಲ್ಲ. ಮಾಝಿ ತನ್ನ ಪತ್ನಿಯೊಂದಿಗೆ ವೀಡಿಯೋ ಕರೆಗಳ ಮೂಲಕ ಸಂಪರ್ಕದಲ್ಲಿದ್ದ. ಮನೆಯ ತಿಂಗಳ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಬಾಗಿಲಿನ ಹೊರಗಿಟ್ಟು ಹೋಗಬೇಕಾಗಿತ್ತು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೈಟ್ ಕ್ಲಬ್​ನಲ್ಲಿ ಯುವತಿಗೆಯೊಂದಿಗೆ ಅಸಭ್ಯ ವರ್ತನೆ – ಪ್ರಶ್ನಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಬೌನ್ಸರ್ಸ್!

    ನೈಟ್ ಕ್ಲಬ್​ನಲ್ಲಿ ಯುವತಿಗೆಯೊಂದಿಗೆ ಅಸಭ್ಯ ವರ್ತನೆ – ಪ್ರಶ್ನಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಬೌನ್ಸರ್ಸ್!

    ಚಂಡೀಗಢ: ಗುರುಗ್ರಾಮ್‍ನ ನೈಟ್‍ಕ್ಲಬ್ ಹೊರಗೆ ತಡರಾತ್ರಿ ಗ್ರಾಹಕ ಮತ್ತು ಯುವತಿಗೆ ಥಳಿಸಿದ ಆರೋಪದಡಿ ಆರು ಮಂದಿ ಬೌನ್ಸರ್ಸ್‌ಗಳು ಮತ್ತು ಕ್ಲಬ್‍ನ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

    ಬೌನ್ಸರ್ಸ್‌ಗಳಲ್ಲಿ ಓರ್ವ ತಮ್ಮ ಗ್ಯಾಂಗ್‍ನಲ್ಲಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಇದೀಗ ವ್ಯಕ್ತಿ ಮತ್ತು ಯುವತಿ ಮೇಲೆ ಬೌನ್ಸರ್ಸ್‌ಗಳು ಹಲ್ಲೆ ನಡೆಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಪೊಲೀಸ್ ಮೆಸ್ ಊಟ ಚೆನ್ನಾಗಿಲ್ಲ- ರಸ್ತೆಯಲ್ಲಿ ಊಟದ ತಟ್ಟೆ ಹಿಡಿದು ಅತ್ತ ಕಾನ್‍ಸ್ಟೇಬಲ್‍

    ವೀಡಿಯೋದಲ್ಲಿ ಬೌನ್ಸರ್ಸ್‌ಗಳು ವ್ಯಕ್ತಿಯನ್ನು ಎಳೆದಾಡಿಕೊಂಡು ಹೊಡೆಯುತ್ತಿರುತ್ತಾರೆ. ಈ ವೇಳೆ ವ್ಯಕ್ತಿಯನ್ನು ರಕ್ಷಿಸಲು ಬಂದ ಯುವತಿಯನ್ನು ತಳ್ಳಿದ್ದಾರೆ. ಈ ವೀಡಿಯೋವನ್ನು ಸೆರೆಹಿಡಿಯುತ್ತಿದ್ದ ಮತ್ತೋರ್ವ ಯುವತಿ ಆತನಿಗೆ ರಕ್ತ ಬರುತ್ತಿದೆ, ದಯವಿಟ್ಟು ಹೊಡೆಯುವುದನ್ನು ನಿಲ್ಲಿಸಿ ಎಂದು ಅಳುತ್ತಾ ಕೇಳಿಕೊಳ್ಳುತ್ತಿರುತ್ತಾಳೆ. ಆದರೂ ಬೌನ್ಸರ್ಸ್‌ಗಳು ನಿಲ್ಲಿಸದೇ ವ್ಯಕ್ತಿಗೆ ಕಪಾಳ ಮೋಕ್ಷ ಮಾಡುತ್ತಾ, ಗುದ್ದಿರುವುದನ್ನು ಕಾಣಬಹುದಾಗಿದೆ.

    ಮತ್ತೊಂದು ವೀಡಿಯೋದಲ್ಲಿ ಬೌನ್ಸರ್ಸ್‌ಗಳಲ್ಲಿ ಒಬ್ಬ ಕೋಲಿನಿಂದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇತರೆ ವ್ಯಕ್ತಿಗಳು ಮತ್ತು ಯುವತಿರು ತಡೆಯಲು ಪ್ರಯತ್ನಿಸುತ್ತಾರೆ. ಆದರೆ ಬೌನ್ಸರ್ಸ್‌ಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಿದ್ದರಿಂದ ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ

    ನಗರದ ಉದ್ಯೋಗ್ ವಿಹಾರ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬೌನ್ಸರ್ಸ್‌ಗಳು ಸೇರಿದಂತೆ ಕ್ಲಬ್ ಸಿಬ್ಬಂದಿ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಎಫ್‍ಐಆರ್‌ನಲ್ಲಿ ಹಲ್ಲೆಗೊಳಗಾದ ವ್ಯಕ್ತಿಗಳಲ್ಲಿ ಒಬ್ಬರು ಐಟಿ ಕಂಪನಿ ಉದ್ಯೋಗಿ ಎಂದು ತಿಳಿದುಬಂದಿದೆ. ವ್ಯಕ್ತಿ ಕ್ಲಬ್‍ಗೆ ಪ್ರವೇಶಿಸುವಾಗ ಬೌನ್ಸರ್ ಓರ್ವ ತಮ್ಮ ಗುಂಪಿನಲ್ಲಿದ್ದ ಯುವತಿಯರಲ್ಲಿ ಒಬ್ಬರನ್ನು ಅನುಚಿತವಾಗಿ ಸ್ಪರ್ಶಿಸಿದನು ಎಂದು ಆರೋಪಿಸಿದ್ದಾರೆ. ನಂತರ ಹೊರಬಂದ ಮ್ಯಾನೇಜರ್ ಅವರನ್ನು ಹೊಡೆದು ಹೊರಗೆ ಹಾಕಿ ಅಂತ ಬೌನ್ಸರ್ಸ್‌ಗಗಳಿಗೆ ಹೇಳಿದ್ದಾನೆ ಎಂದು ಕಿಡಿಕಾರಿದ್ದಾರೆ.

    ಘಟನೆ ನಂತರ ಹಲ್ಲೆಗೊಳಗಾದ ವ್ಯಕ್ತಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆ ವೇಳೆ ಬೌನ್ಸರ್ಸ್‌ಗಳು ಒಬ್ಬರಿಂದ ವಾಚ್ ಮತ್ತು ಸುಮಾರು 10,000 ರೂಪಾಯಿ ಕಿತ್ತುಕೊಂಡಿದ್ದಾರೆ ಎಂದು ಹೇಳಾಗುತ್ತಿದೆ. ಈ ಹಿಂಸಾಚಾರವನ್ನು ಕ್ಲಬ್ ಖಂಡಿಸಿದ್ದು, ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ. ಆದರೆ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ

    ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ

    ಚಂಡೀಗಢ: ಫರೂಖ್‍ನಗರ ಸಮೀಪದ ಮುಬರಿಕ್‍ಪುರದಲ್ಲಿ ನಡೆದ ಜಾತ್ರೆಯಲ್ಲಿ ದೇವಸ್ಥಾನವೊಂದರ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ 8ರಿಂದ 10 ಮಕ್ಕಳು ಸೇರಿದಂತೆ 28 ಮಂದಿ ಅಸ್ವಸ್ಥರಾಗಿದ್ದಾರೆ. ನಂತರ ಅವರನ್ನು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು- ಇಂದು ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

    ಇದೀಗ ಅಸ್ವಸ್ಥಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಸಂಬಂಧ ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು

  • ಜಾನುವಾರು ಕಳ್ಳರನ್ನು 22 ಕೀ.ಮೀ.ವರೆಗೂ ಬೆನ್ನಟ್ಟಿ ಹಿಡಿದ ಖಾಕಿಪಡೆ

    ಜಾನುವಾರು ಕಳ್ಳರನ್ನು 22 ಕೀ.ಮೀ.ವರೆಗೂ ಬೆನ್ನಟ್ಟಿ ಹಿಡಿದ ಖಾಕಿಪಡೆ

    ನವದೆಹಲಿ: ಸಿನಿಮಾ ದೃಶ್ಯವನ್ನೂ ಮೀರಿಸುವಂತೆ ಜಾನುವಾರು ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು 22 ಕಿ.ಮೀ. ಬೆನ್ನಟ್ಟಿದ ಖಾಕಿಪಡೆ ಕೊನೆಗೂ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

    ದೆಹಲಿ ಬಳಿಯ ಗುರುಗ್ರಾಮ್ ನಲ್ಲಿ ಜಾನುವಾರು ಕಳ್ಳರನ್ನು ಬಂಧಿಸಲಾಗಿದೆ. ಸೈಬರ್ ಸಿಟಿ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ ಕೆಲವು ದೇಶೀಯ ಬಂದೂಕುಗಳು ಹಾಗೂ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದಲ್ಲಿ 12ರ ಹುಡುಗಿ ಮೇಲೆ ಅತ್ಯಾಚಾರ

    crime

    ಖಾಕಿ ಪಡೆ ದೆಹಲಿ ಗಡಿಯಿಂದ ಆರೋಪಿಗಳನ್ನು ಬೆನ್ನಟ್ಟಿದಾಗ ಗುರುಗ್ರಾಮಕ್ಕೆ ಪ್ರವೇಶಿಸುವ ವೇಳೆ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿತು. ಇದನ್ನು ಲೆಕ್ಕಿಸದೇ ವಾಹನವನ್ನು ವೇಗವಾಗಿ ಚಲಾಯಿಸಿದರು. ಅಲ್ಲಿಂದ ನಮ್ಮ ಚೇಸಿಂಗ್ ಪ್ರಾರಂಭವಾಯಿತು. ಅವರ ವಾಹನದ ಒಂದು ಟಯರ್ ಪಂಕ್ಚರ್ ಮಾಡಿದರೂ ಆರೋಪಿಗಳು ಅತಿ ವೇಗವಾಗಿಯೇ ಚಲಾಯಿಸುತ್ತಿದ್ದರು. ಇದರಿಂದ ಟಯರ್ ಜಾಗದಲ್ಲಿ ಬೆಂಕಿ ಕಿಡಿಗಳು ಕಾಣಿಸಿಕೊಳ್ಳುತ್ತಿದ್ದವು. ಈ ವೇಳೆ ಅವರು ಪೊಲೀಸರ ಗಮನವನ್ನು ಬೇರೆಡೆ ಸೆಳೆಯಲು ಕಳ್ಳಸಾಗಣೆ ಮಾಡಿದ ಹಸುಗಳನ್ನು ಚಲಿಸುವ ವಾಹನದಿಂದಲೇ ಹೊರಕ್ಕೆ ತಳ್ಳಿದ್ದರು. ಆದರೂ ಬಿಡದೇ ಕಳ್ಳರನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಹುಡುಗಿ ಮೇಲೆ ನಿರಂತರ ಅತ್ಯಾಚಾರ- 7 ಮಂದಿ ಕಾಮುಕರ ಬಂಧನ

    cow

    ಗುರುಗ್ರಾಮ್‌ನಲ್ಲಿ ಜಾನುವಾರುಗಳ ಕಳ್ಳಸಾಗಣೆ ಇದೇ ಮೊದಲಲ್ಲ. ಅದಕ್ಕಾಗಿಯೇ ಹರಿಯಾಣ ಸರ್ಕಾರ ಗೋವು ಕಳ್ಳಸಾಗಣೆ ವಿರುದ್ಧ ಕಠಿಣ ಕಾನೂನುಗಳನ್ನು ಕೈಗೊಂಡಿದೆ. ಅವುಗಳ ರಕ್ಷಣೆಗಾಗಿ ಆಯೋಗವನ್ನೂ ರಚಿಸಿದೆ. ಆದರೆ ಈ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಜಾನುವಾರು ಕಳ್ಳಸಾಗಣೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

  • ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ 88ರ ವೃದ್ಧ ಆತ್ಮಹತ್ಯೆ..!

    ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ 88ರ ವೃದ್ಧ ಆತ್ಮಹತ್ಯೆ..!

    ಚಂಡೀಗಢ: ವೃದ್ಧನೊಬ್ಬ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಗ್ರಾಮದ ಹಳ್ಳಿಯೊಂದರಲ್ಲಿ ನಡೆದಿದೆ.

    ಲಾಲ್ ಸಿಂಗ್ (88) ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಿಂದ ವೃದ್ಧನು ಎಲ್ಲಿ ನಾನು ಸಿಕ್ಕಿ ಬೀಳುತ್ತೇನೆ ಎಂಬ ಭಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಾಲಕಿಯ ತಾಯಿಯು ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ತನ್ನ ವಿರುದ್ಧ ದೂರು ನೀಡಲು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದ ನಂತರ ವೃದ್ಧನು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಪ್ರತಾಪ್ ಸಿಂಹ

    ಪೊಲೀಸರ ಪ್ರಕಾರ, ಮೃತ ವೃದ್ಧ ಲಾಲ್ ಸಿಂಗ್ ವಿರುದ್ಧ ಬುಧವಾರ ಫೋಕ್ಸೊ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿತ್ತು. ತಾನು ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತದೆ ಎಂಬ ಭೀತಿಯಲ್ಲಿ ಲಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ವೃದ್ಧನ ಶವವು ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವೃದ್ಧನ ಶವದ ಹತ್ತಿರ ಯಾವುದೇ ಡೇತ್ ನೋಟ್ ಕಂಡುಬಂದಿಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯ

    ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ನೀಡಿದ ದೂರಿನನ್ವಯ, ಆ ವೃದ್ಧ ಬಾಲಕಿಗೆ ಸಿಹಿತಿಂಡಿ ಕೊಡಿಸುವುದಾಗಿ ನಂಬಿಸಿದ್ದಾನೆ. ನಂತರ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಕಳೆದ ಹಲವು ದಿನಗಳಿಂದ ಆ ವೃದ್ಧ ತನಗೆ ಕಿರುಕುಳ ನೀಡುತ್ತಿದ್ದ ಎಂದು ನನ್ನ ಮಗಳು ಹೇಳಿದಾಗ ನನಗೆ ಆಘಾತವಾಯಿತು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಆತ ಅತ್ಯಾಚಾರ ನಡೆಸಿರುವ ಬಗ್ಗೆ ನನ್ನ ಮಗಳು ಹೇಳಿದಾಗ ನಾನು ಪೊಲೀಸರ ಬಳಿ ಹೋಗಿ ದೂರು ನೀಡಿದೆ ಎಂದು ಬಾಲಕಿಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

    ಬಿಲಾಸ್‍ಪುರ ಪೊಲೀಸ್ ಠಾಣೆಯ ಹೆಚ್ಚುವರಿ ಠಾಣಾಧಿಕಾರಿ ಕುಂದನ್ ಸಿಂಗ್, ವೃದ್ಧನ ಸಾವಿನ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅದೇ ಸಮಯದಲ್ಲಿ ಅತ್ಯಾಚಾರ ಪ್ರಕರಣದ ತನಿಖೆಯೂ ನಡೆಯುತ್ತಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

  • ಕ್ಯಾಬ್ ಚಾಲಕನಿಗೆ ಚಾಕುವಿನಿಂದ ಇರಿದ ವಿದೇಶಿ ಮಹಿಳೆ

    ಕ್ಯಾಬ್ ಚಾಲಕನಿಗೆ ಚಾಕುವಿನಿಂದ ಇರಿದ ವಿದೇಶಿ ಮಹಿಳೆ

    ಚಂಡೀಗಢ: ಕ್ಯಾಬ್ ಚಾಲಕನಿಗೆ ಮಹಿಳೆಯೊಬ್ಬಳು ಚಾಕುವಿನಿಂದ ಇರಿದ ಘಟನೆ ಗುರುಗ್ರಾಮದಲ್ಲಿ ನಡೆದಿದ್ದು, ಇದೀಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

    ಮಹಿಳೆ ಬುರ್ಕಾ ಧರಿಸಿ ಬೆಳಗ್ಗೆ 11 ಗಂಟೆ ಸುಮಾರಿಗೆ ಗುರುಗ್ರಾಮದ ಸೈಬರ್ ಸಿಟಿ ಪ್ರದೇಶದಿಂದ ಕ್ಯಾಬ್ ಹತ್ತಿದ್ದಾಳೆ. ನಂತರ ಚಾಲಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾಳೆ. ಆದರೆ ಮಹಿಳೆಯನ್ನು ಪಿಸಿಆರ್ ಪೊಲೀಸರು ಹಿಂಬಾಲಿಸಿ ಬಂಧಿಸಿದ್ದಾರೆ. ಇದನ್ನೂ ಓದಿ: ಹಿಜಬ್‍ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರ ಮನವೊಲಿಸಿದ ಅಧಿಕಾರಿಗಳು

    ನಂತರ ಆಕೆಯನ್ನು ವಿಚಾರಣೆ ನಡೆಸಿದ ವೇಳೆ ಮಹಿಳೆಗೆ 30 ವರ್ಷದವಳಾಗಿದ್ದು, ಈಜಿಪ್ಟ್ ಮೂಲದವಳಾಗಿದ್ದಾಳೆ ಎಂಬ ಸತ್ಯ ಬಹಿರಂಗಗೊಂಡಿದೆ ಮತ್ತು ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಅನುವಾದಕರನ್ನು ಕರೆಸಲಾಗಿತ್ತು. ಮಹಿಳೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಘಟನೆಯ ಹಿಂದಿನ ಕಾರಣ ತಿಳಿದುಬಂದಿದೆ. ಸದ್ಯ ಕ್ಯಾಬ್ ಚಾಲಕನನ್ನು ಸ್ಥಳೀಯ ಗುರುಗ್ರಾಮ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿಗೆ ಡಿಕ್ಕಿ – ನಾಲ್ವರ ಸಾವು

  • ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿಗೆ ಡಿಕ್ಕಿ – ನಾಲ್ವರ ಸಾವು

    ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿಗೆ ಡಿಕ್ಕಿ – ನಾಲ್ವರ ಸಾವು

    ನವದೆಹಲಿ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳವಾರ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್‍ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ.

    ಮೃತರನ್ನು ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹಿರಿಯ ಗಾಯಕ ಬಪ್ಪಿ ಲಹರಿ ಇನ್ನಿಲ್ಲ

    ಅವರಲ್ಲಿ ಒಬ್ಬ 9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೊಬ್ಬ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಪುಕೋಟೆ ಮೇಲೆ ಸಿಖ್‌ ಬಾವುಟ ಹಾರಿಸಿದ್ದ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

    ಸರ್ಕಾರಿ ರೈಲ್ವೆ ಪೊಲೀಸ್ ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ಅಜ್ಮೀರ್‍ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೇಸ್ ಗುರುಗಾಮ್ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

    18 ರಿಂದ 21 ವರ್ಷ ವಯಸ್ಸಿನ ನಾಲ್ವರು ಯುವಕರು ರೈಲು ಸಮೀಪಿಸುತ್ತಿದ್ದಾಗ ಹಳಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ನಿಂತಿದ್ದರು. ರೈಲು ಸಾಕಷ್ಟು ಸಮೀಪ ಬಂದರು ಸಹ ಯುವಕರು ಫೋಟೋದಲ್ಲಿ ರೈಲು ಬೇಕು ಎಂದು ಕದಲದೆ ಅಲ್ಲಿಯೇ ನಿಂತಿದ್ದರು.

    ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೈಲು ಚಾಲಕನಿಂದ ಮಾಹಿತಿ ಪಡೆದ ತಕ್ಷಣ, ಜಿಆರ್‍ಪಿ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತನೊಬ್ಬನ ತಂದೆ ತರಕಾರಿ ಮಾರಾಟಗಾರರಾಗಿದ್ದಾರೆ.

  • ಏನೂ ಬೇಕಾದ್ರೂ ಮಾಡಬಲ್ಲೆ ಅನ್ನೋದನ್ನು ಜಗತ್ತಿಗೆ ತೋರಿಸಲು ಕೊಲೆ- ವ್ಯಕ್ತಿ ಅರೆಸ್ಟ್

    ಏನೂ ಬೇಕಾದ್ರೂ ಮಾಡಬಲ್ಲೆ ಅನ್ನೋದನ್ನು ಜಗತ್ತಿಗೆ ತೋರಿಸಲು ಕೊಲೆ- ವ್ಯಕ್ತಿ ಅರೆಸ್ಟ್

    – ಮೂರು ದಿನಗಳಲ್ಲಿ ಮೂರು ಹತ್ಯೆ

    ನವದೆಹಲಿ: ಒಂದೇ ವಾರದಲ್ಲಿ ಸತತವಾಗಿ ಮೂರು ಜನರನ್ನು ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

    ಆರೋಪಿಯನ್ನು ಮೊಹಮ್ಮದ್ ರಾಜಿ(22) ಎಂದು ಗುರುತಿಸಲಾಗಿದೆ. ಈತ ಮೂಲತಃ ಬಿಹಾರ ನಿವಾಸಿಯಾಗಿದ್ದಾನೆ. ಗುರುಗ್ರಾಮದ ಐಎಫ್‍ಸಿ ಏಫ್ ಸಿಒ ಚೌಕ್ ಸಮೀಪ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಸರಣಿ ಹಂತಕ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾಗ ಸರಿಸುಮಾರು 3,000 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿದ್ದಾರೆ. ಅಗ ಆರೋಪಿಯ ಕುರಿತಾದ ಸುಳಿವು ಸಿಕ್ಕಿ ಮೊಹಮ್ಮದ್ ರಾಜಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    ಕೊಲೆಗಾರ ಹೇಳಿದ್ದೇನು?
    ನವೆಂಬರ್ 23, 24 ಮತ್ತು 25 ರಂದು ಮೂರು ಜನರನ್ನು ಕೊಂದಿದ್ದೇನೆ. ಮೂವರನ್ನು ಕೊಂದು ಆನಂದಿಸುತ್ತಿದ್ದೆನು. ಅಪರಿಚಿತರನ್ನು ಕೊಂದಿದ್ದೇನೆ. ನಾನು ಚಿಕ್ಕವನಿದ್ದಾಗ ನನಗೆ ಏನು ತೀಳಿಯುವುದಿಲ್ಲವಾಗಿತ್ತು. ಆಗ ನನಗೆ ಜನರು ನೀನು ತುಂಬಾ ದುರ್ಬಲ, ನಿನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿ ನನ್ನನ್ನು ಹಂಗಿಸುತ್ತಿದ್ದರು. ಹೀಗಾಗಿ ನಾನು ಏನು ಬೇಕಾದರೂ ಮಾಡಬಲ್ಲೆ ಎಂಬುದನ್ನು ಜಗತ್ತಿಗೆ ತಿಳಿಸಲು ಈ ಕೃತ್ಯ ಎಸಗಿದ್ದೇನೆ ಎಂಬುದನ್ನು ಆರೋಪಿ ಮೊಹಮ್ಮದ್ ತನಿಖೆಯಲ್ಲಿ ಪೊಲೀಸರ ಬಳಿ ಹೇಳಿದ್ದಾನೆ.

    3 ಕೊಲೆಗಳು ಯಾವವು?
    ನವೆಂಬರ್ 23 ರಂದು ಗುರುಗ್ರಾಮದ ಲೀಜರ್ ವ್ಯಾಲಿ ಪಾರ್ಕ್‍ನಲ್ಲಿ ವ್ಯಕ್ತಿಯೊಬ್ಬನನ್ನು ಇರಿದು ಕೊಂದಿದ್ದಾನೆ. 24 ರಂದು ಗುರುಗ್ರಾಮ್‍ನ ಸೆಕ್ಟರ್ 40ರಲ್ಲಿ ಸೆಕ್ಯುರಿಟಿ ಗಾರ್ಡ್ ನನ್ನು ಕೊಲೆ ಮಾಡಿದ್ದಾನೆ. ಹಾಗೆಯೇ ಮಾರನೇ ದಿನ 25 ರಂದು ವ್ಯಕ್ತಿಯೊಬ್ಬನ ತಲೆ ಕಡಿದು ಹತ್ಯೆಗೈದಿದ್ದಾನೆ. ಹತ್ಯೆಯಾದ ಮೂರನೇ ವ್ಯಕ್ತಿಯ ಶವ ಚರಂಡಿಯಲ್ಲಿ ಪತ್ತೆಯಾಗಿತ್ತು.

    ಮೊಹಮ್ಮದ್ ಈ ಮೂರು ಕೊಲೆ ಮಾತ್ರವಲ್ಲದೇ ದೆಹಲಿ, ಗುರುಗ್ರಾಮ್, ಬಿಹಾರ್‍ಗಳಲ್ಲಿ ಕನಿಷ್ಟ 10 ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

  • ಎಸ್‍ಎಸ್‍ಎಲ್‍ಸಿಯಲ್ಲಿ 97.8% ,12ನೇ ತರಗತಿಯಲ್ಲಿ 95.2% – ಅಂಗವೈಫಲ್ಯವನ್ನು ಮೆಟ್ಟಿನಿಂತ ಅನುಷ್ಕಾ ಪಂಡಾ

    ಎಸ್‍ಎಸ್‍ಎಲ್‍ಸಿಯಲ್ಲಿ 97.8% ,12ನೇ ತರಗತಿಯಲ್ಲಿ 95.2% – ಅಂಗವೈಫಲ್ಯವನ್ನು ಮೆಟ್ಟಿನಿಂತ ಅನುಷ್ಕಾ ಪಂಡಾ

    – ಗೂಗಲ್‍ನಲ್ಲಿ ಎಂಜಿನಿಯರ್ ಆಗಬೇಕೆಂಬ ಬಯಕೆ

    ಗುರುಗ್ರಾಮ್: ಎಸ್‍ಎಸ್‍ಎಲ್‍ಸಿಯಲ್ಲಿ 97.8%, 12ನೇ ತರಗತಿಯಲ್ಲಿ 95.2% ಅಂಕ ಗಳಿಸುವ ಮೂಲಕ ಗುರುಗ್ರಾಮ್‍ನ ದಿವ್ಯಾಂಗಿ ಬಾಲಕಿ ಅನುಷ್ಕಾ ಪಂಡಾ ತನ್ನ ಅಂಗವೈಫಲ್ಯವನ್ನು ಮೆಟ್ಟಿನಿಂತಿದ್ದಾಳೆ.

    ಅನುಷ್ಕಾಗೆ ಬೆನ್ನುಮೂಳೆ ಸ್ನಾಯುವಿನ ಸಮಸ್ಯೆಯಿದ್ದು, ಆಕೆ ವೀಲ್‍ಚೇರ್ ಇಲ್ಲದೇ ನಿಲ್ಲಲು ಮತ್ತು ಕೂರಲು ಆಗುವುದಿಲ್ಲ. ಆದರೆ ಇದನ್ನು ಲೆಕ್ಕಿಸದ ಅನುಷ್ಕಾ ವೀಲ್‍ಚೇರ್ ಮೇಲೆ ಕುಳಿತೇ ದಿನಕ್ಕೆ ಎರಡು ಗಂಟೆ ಓದಿ ಸಿಬಿಎಸ್‍ಇ 12 ನೇ ತರಗತಿ ಪರೀಕ್ಷೆಯಲ್ಲಿ 95.2% ಅಂಕ ಪಡೆದಿದ್ದಾಳೆ. ಅಂಗವೈಫಲ್ಯ ಇರುವ ಮಕ್ಕಳ ಪೈಕಿ ಆಕೆಯ ಅತೀ ಹೆಚ್ಚು ಅಂಕ ಪಡೆದಿದ್ದಾಳೆ. ಅಲ್ಲದೇ ಭೌತಶಾಸ್ತ್ರ ಪಠ್ಯದಲ್ಲಿ 100ಕ್ಕೆ 99 ಅಂಕ ಗಳಿಸಿದ್ದಾಳೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಅನುಷ್ಕಾ ಪಂಡಾ, ನಾನು ದಿನದಲ್ಲಿ ಎರಡು ಗಂಟೆಗಳ ಕಾಲ ಓದುತ್ತಿದ್ದೆ. ಈಗ ನನ್ನ ಅಂಕ ನೋಡಿ ನನಗೆ ಬಹಳ ಖುಷಿಯಾಗಿದೆ. ನನ್ನ ಶಾಲೆಯಲ್ಲಿ ನನಗೆ ಬಹಳ ಬೆಂಬಲ ನೀಡಿದ್ದಾರೆ. ನಾನು ಅಂಗವಿಕಲೆ ಆಗಿದ್ದ ಕಾರಣ ನನ್ನ ಶಾಲೆಯವರು ಪರೀಕ್ಷೆ ಬರೆಯಲು ವಿಶೇಷ ಆಸನವನ್ನು ಸಿದ್ಧ ಮಾಡಿಸಿ ಕೊಟ್ಟಿದ್ದರು ಎಂದು ಹೇಳಿದ್ದಾರೆ. ಜೊತೆಗೆ ಅನುಷ್ಕಾ ಚೆಸ್ ಆಟಗಾರ್ತಿಯಾಗಿದ್ದಾರೆ. ಜೊತೆಗೆ ಕಳೆದ ಹತ್ತು ವರ್ಷದಿಂದ ಶಾಸ್ತ್ರೀಯ ಸಂಗಿತ ಅಭ್ಯಾಸ ಮಾಡುತ್ತಿದ್ದಾರೆ. ಇವುಗಳ ಜೊತೆಗೆ ಚಿತ್ರವನ್ನು ಬಿಡಿಸುತ್ತಾರೆ.

    ನನಗೂ ನನ್ನ ಅಂಗವೈಫಲ್ಯದ ವಿಚಾರವಾಗಿ ಬಹಳ ಕಿರುಕುಳಗಳನ್ನು ಅನುಭವಿಸಿದ್ದೇನೆ. ಆದರೆ ನಾನು ಅದ್ಯಾವೂದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಜೀವನದಲ್ಲಿ ತೊಂದರೆಗಳು ಇರುತ್ತವೆ ಎಂದು ಹೇಳಿದ್ದಾರೆ. ಆಕೆಗೆ ಬೆನ್ನುಮೂಳೆಯ ಸಮಸ್ಯೆಯಿದ್ದು, ಒಂದು ಗಂಟೆಗೂ ಅಧಿಕ ಕಾಲ ಕೂತು ಓದಲು ಆಗುವುದಿಲ್ಲ. ಜೊತೆಗೆ ಆಕೆ ಕತ್ತಿನ ಪಟ್ಟಿಯನ್ನು ಧರಿಸುವ ಕಾರಣ ಹೆಚ್ಚುಕಾಲ ಕುಳಿತುಕೊಳ್ಳಲು ಆಗುವುದಿಲ್ಲ. ಆದರೆ ಇದನ್ನೆಲ್ಲ ಲೆಕ್ಕಿಸದ ಪಂಡಾ ದೃಢನಿಶ್ಚಯ ಮಾಡಿ ದಿನಕ್ಕೆ ಎರಡು ಗಂಟೆ ಓದುತ್ತಾಳೆ ಎಂದು ಆಕೆಯ ತಂದೆ ಅನುಪ್ ಪಂಡಾ ತಿಳಿಸಿದ್ದಾರೆ.

    2018ರಲ್ಲಿ ನಡೆದ ಎಲ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 97.8% ಅಂಕಗಳನ್ನು ಪಡೆದಿದ್ದ ಪಂಡಾ, ಅಂದು ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಎಂಜಿನಿಯರ್ ಆಗಬೇಕು ಎಂದಿದ್ದರು. ಜೊತೆಗೆ ನಾನು ಗೂಗಲ್ ಕಂಪನಿಯಲ್ಲಿ ಕೆಲಸ ಮಾಡಬೇಕು ಎಂಬ ಬಯಕೆಯನ್ನು ವ್ಯಕ್ತಪಡಿಸಿದ್ದಳು. ಅನುಷ್ಕಾ ಬೆನ್ನುಹುರಿಯಲ್ಲಿ ಜೀವಕೋಶಗಳು ನಾಶವಾಗಿದ್ದು, ಆಕೆಗೆ ಉಸಿರಾಟದ ತೊಂದರೆಯಿದೆ. ಜೊತೆಗೆ ಅವಳು ಹೆಚ್ಚು ಕಾಲ ಕುಳಿತುಕೊಳ್ಳಲು ಆಗುವುದಿಲ್ಲ. ಆದರೂ ಆಕೆ ಪರೀಕ್ಷೆ ಬರೆದಿರುವ ಸವಾಲಿನ ವಿಚಾರ ಎಂದು ಅನುಷ್ಕಾಗೆ ಚಿಕಿತ್ಸೆ ನೀಡುವ ವೈದ್ಯರು ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಅನುಷ್ಕಾ ಓದುತ್ತಿರುವ ಕಾಲೇಜಿನ ಪ್ರಾಂಶುಪಾಲರಾದ ರೂಪ ಚಕ್ರವರ್ತಿಯವರು, ಅನುಷ್ಕಾ ನಮ್ಮೆಲ್ಲರಿಗೂ ಸ್ಫೂರ್ತಿ. ಅವಳಿಗೆ ಇರುವ ಓದಿನ ಮೇಲಿನ ಆಸಕ್ತಿಯನ್ನು ಬೇರೆ ಮಕ್ಕಳಲ್ಲಿ ಹುಡುಕುವುದು ಬಹಳ ಕಷ್ಟ. ಅವಳು ಸಾಧಿಸಿರುವುದನ್ನು ದೈಹಿಕವಾಗಿ ಸದೃಢವಾಗಿರುವ ಮಕ್ಕಳು ಸಾಧಿಸುವುದು ಕಷ್ಟ ಎಂದು ತಿಳಿಸಿದ್ದಾರೆ.