Tag: ಗುರು ರಾಘವೇಂದ್ರ ಸ್ವಾಮಿ ಮಠ

  • ರಾಯರ 354ನೇ ಆರಾಧನಾ ಮಹೋತ್ಸವ ಆಗಸ್ಟ್ 8ರಿಂದ ಆರಂಭ: ಮಂತ್ರಾಲಯ ಶ್ರೀ

    ರಾಯರ 354ನೇ ಆರಾಧನಾ ಮಹೋತ್ಸವ ಆಗಸ್ಟ್ 8ರಿಂದ ಆರಂಭ: ಮಂತ್ರಾಲಯ ಶ್ರೀ

    ರಾಯಚೂರು: ಮಂತ್ರಾಲಯದಲ್ಲಿ (Mantralaya) ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ (Aradhan Mahotsav) ಆಗಸ್ಟ್ 8ರಿಂದ 14ರವರೆಗೆ 7 ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು, 8ರಂದು ಧ್ವಜಾರೋಹಣ ಕಾರ್ಯಕ್ರಮ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಆಗಸ್ಟ್ 10ಕ್ಕೆ ಪೂರ್ವಾರಾಧನೆ, 11ಕ್ಕೆ ಮಧ್ಯಾರಾಧನೆ, 12ಕ್ಕೆ ಉತ್ತರಾಧನೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: KRS ಡ್ಯಾಂ ಮೈಸೂರು ರಾಜಮನೆತನದ ತ್ಯಾಗದಿಂದ ನಿರ್ಮಾಣವಾಗಿದೆ – ಮಂತ್ರಾಲಯ ಶ್ರೀ

    ಆಗಸ್ಟ್ 8ರಂದು ಪ್ರತಿವರ್ಷದಂತೆ ತಿರುಮಲ ತಿರುಪತಿ ದೇವಸ್ಥಾನದಿಂದ ಬರುವ ಶ್ರೀನಿವಾಸ ದೇವರ ಶೇಷವಸ್ತ್ರವನ್ನ ರಾಯರ ಮೂಲ ಬೃಂದಾವನಕ್ಕೆ ಸಮರ್ಪಿಸಲಾಗುವುದು. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಆಗಸ್ಟ್ 10ರಂದು ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್‌ ಸೂಚನೆ

    ಆಗಸ್ಟ್ 12ರಂದು ಬೆಳಿಗ್ಗೆ 10 ಗಂಟೆಗೆ ಶ್ರೀಮಠದ ಮುಂದಿನ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಯಲಿದೆ. ಇದೇ ವೇಳೆ ರಾಯರ ಮೂಲ ಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ ಮಾಡಲಾಗುವುದು. ಮಹಾ ರಥೋತ್ಸವ ವೇಳೆ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪ ವೃಷ್ಠಿ ನಡೆಸಲಾಗುವುದು. ವಿವಿಧ ಕ್ಷೇತ್ರದ ಗಣ್ಯವ್ಯಕ್ತಿಗಳು, ವಿದ್ವಾಂಸರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

  • ವೈಕುಂಠ ಏಕಾದಶಿ – ಮಂತ್ರಾಲಯ ಶ್ರೀಗಳಿಂದ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ

    ವೈಕುಂಠ ಏಕಾದಶಿ – ಮಂತ್ರಾಲಯ ಶ್ರೀಗಳಿಂದ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ

    ರಾಯಚೂರು: ವೈಕುಂಠ ಏಕಾದಶಿ ಹಿನ್ನೆಲೆ ಮಂತ್ರಾಲಯದ (Mantralaya) ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗಳಿಗೆ ಬಾಂಬ್ ಬೆದರಿಕೆ – ವಿದ್ಯಾರ್ಥಿ ಅರೆಸ್ಟ್

    ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿರುವ ದೇಗುಲದಲ್ಲಿ ತುಳಸಿ ಅರ್ಚನೆ ಮತ್ತು ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಶ್ರೀಗಳು ಮಂಗಳಾರತಿ ಮಾಡಿದರು. ಬಳಿಕ ವೈಕುಂಠ ದ್ವಾರವನ್ನು ಉದ್ಘಾಟಿಸಿ, ಭಕ್ತರಿಗೆ ಅನುಗ್ರಹ ಸಂದೇಶ ನೀಡಿ ಆಶೀರ್ವದಿಸಿದರು. ಅಪಾರ ಸಂಖ್ಯೆಯ ಭಕ್ತರು ತಮ್ಮ ಪ್ರಾರ್ಥನೆ ಸಲ್ಲಿಸಿ ವೈಕುಂಠ ದ್ವಾರದ ಮೂಲಕ ಪ್ರವೇಶಿಸಿ ಆಶೀರ್ವಾದ ಪಡೆದರು.

    ಇನ್ನೂ ವೈಕುಂಠ ಏಕಾದಶಿ ಹಿನ್ನೆಲೆ ರಾಯಚೂರಿನ (Raichuru) ವೆಂಕಟೇಶ್ವರ ದೇವಾಲಯಗಳಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದೆ. ಮಂತ್ರಾಲಯ ರಸ್ತೆಯ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಅಲಂಕಾರಗಳಿಂದ ಇಡೀ ದೇವಾಲಯವನ್ನು ಸಿಂಗಾರ ಮಾಡಲಾಗಿದೆ. ಕಲ್ಯಾಣ ಶ್ರೀನಿವಾಸನಿಗೆ ವಿಶೇಷ ಪೂಜೆ ನೆರವೇರಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲಾಗಿದೆ. ಬೆಳಿಗ್ಗೆ 5 ಗಂಟೆಯಿಂದ ಪೂಜೆ ಆರಂಭವಾಗಿದ್ದು, ರಾತ್ರಿ 11 ಗಂಟೆವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪಾರಾಯಣ ನಡೆಯಲಿದೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡಿ – ಪವಿತ್ರಾ ಗೌಡ ಅರ್ಜಿ

  • ಮಂತ್ರಾಲಯ ಭಕ್ತರ ದೇಣಿಗೆ – ಗುರು ರಾಘವೇಂದ್ರ ಸ್ವಾಮಿ ಮಠದ ಶಿಲಾಮಂಟಪಕ್ಕೆ ಸುವರ್ಣ ಕವಚ

    ಮಂತ್ರಾಲಯ ಭಕ್ತರ ದೇಣಿಗೆ – ಗುರು ರಾಘವೇಂದ್ರ ಸ್ವಾಮಿ ಮಠದ ಶಿಲಾಮಂಟಪಕ್ಕೆ ಸುವರ್ಣ ಕವಚ

    ರಾಯಚೂರು: ಮಂತ್ರಾಲಯ (Mantralaya) ಭಕ್ತರು, ಗುರು ರಾಘವೇಂದ್ರ ಸ್ವಾಮಿ ಮಠದ (Guru Raghavendra Swamy Mutt) ಶಿಲಾಮಂಟಪಕ್ಕೆ ಸುವರ್ಣ ಕವಚ ಕೊಡುಗೆ ನೀಡಿದ್ದಾರೆ.

    ಬಹುಕೋಟಿ ಮೌಲ್ಯದ ಸುವರ್ಣ ಶಿಲಾಮಂಟಪ ಮೆಗಾ ಪ್ರಾಜೆಕ್ಟ್‌ಗೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಚಾಲನೆ ನೀಡಿದರು. ರಾಯರ ವೃಂದಾವನ ಹೊರಭಾಗದಲ್ಲಿ ಇರುವ ಶಿಲಾಮಂಟಪಕ್ಕೆ ಸುವರ್ಣ ಕವಚ ಸಿದ್ಧಪಡಿಸಲಾಗುತ್ತಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 88 ಕೋಟಿ ಅಕ್ರಮ – ಎಂಡಿ, ಲೆಕ್ಕಾಧಿಕಾರಿ ಅಮಾನತು

    ಸುವರ್ಣ ಲೇಪಿತ ಗೋಪುರ ಬಳಿಕ‌ ಈಗ ಸುವರ್ಣ ಶಿಲಾಮಂಟಪ ಕೊಡುಗೆ ನೀಡಲಾಗಿದೆ. ಭಾಗಶಃ ಪೂರ್ಣಗೊಂಡ ಸುವರ್ಣ ಕವಚಗಳಿಗೆ ಶ್ರೀಗಳು ವಿಶೇಷ ಪೂಜೆ ನೆರವೇರಿಸಿದರು. ರಾಯರ ವೃಂದಾವನದ ಮುಂದೆಯಿಟ್ಟು ಕವಚಗಳಿಗೆ ಪೂಜೆ ಮಾಡಿದರು.

    ಸುವರ್ಣ ಕವಚ ಕಾರ್ಯದ ಮುಂದುವರಿಕೆಗೆ ಶುಭಾರಂಭವನ್ನು ಶ್ರೀಗಳು ಸೂಚಿಸಿದರು. ಭಕ್ತರ ದೇಣಿಗೆಯಿಂದ ಮಠದ ಪ್ರಾಂಗಣದ ಶಿಲಾಮಂಟಪಕ್ಕೆ ಸುವರ್ಣ ಕವಚವಾಗುತ್ತಿದೆ. ಭಕ್ತರು ನೇರವಾಗಿ ಸೇವೆಯಲ್ಲಿ ಭಾಗವಹಿಸುವಂತೆ ಶ್ರೀಗಳು ಕರೆ ನೀಡಿದರು. ಇದನ್ನೂ ಓದಿ: ಪುರಿ ಜಗನ್ನಾಥ ಚಂದನ್ ಜಾತ್ರಾ ಉತ್ಸವದಲ್ಲಿ ಪಟಾಕಿ ಅವಘಡ – 15 ಮಂದಿಗೆ ಗಾಯ

  • ಚಂದ್ರಗ್ರಹಣ ಹಿನ್ನೆಲೆ – ರಾಯರ ವೃಂದಾವನಕ್ಕೆ ನಿರಂತರ ಜಲಾಭಿಷೇಕ

    ಚಂದ್ರಗ್ರಹಣ ಹಿನ್ನೆಲೆ – ರಾಯರ ವೃಂದಾವನಕ್ಕೆ ನಿರಂತರ ಜಲಾಭಿಷೇಕ

    – ರಾಯರ ದರ್ಶನಕ್ಕೆ ರಾತ್ರಿ 8:30ರ ವರೆಗೂ ಅವಕಾಶ

    ರಾಯಚೂರು: ರಾಹುಗ್ರಸ್ತ ಚಂದ್ರಗ್ರಹಣ (Lunar Eclipse) ಹಿನ್ನೆಲೆ ಮಂತ್ರಾಲಯದ (Mantralayam) ರಾಯರ (Guru Raghavendra Swamy) ವೃಂದಾವನಕ್ಕೆ ಗ್ರಹಣದ ಆರಂಭದಿಂದ ಮುಕ್ತಾಯದವರೆಗೂ ನಿರಂತರ ಜಲಾಭಿಷೇಕ ನಡೆಯಲಿದೆ. ಅಲ್ಲದೇ ಶಾಂತಿ ಹೋಮ ಕೂಡ ನಡೆಯಲಿದೆ.

    ಗ್ರಹಣ ಇರುವುದರಿಂದ ಭಕ್ತರ ಸೇವೆಗೆ ಒಂದಷ್ಟು ಸಣ್ಣ ಬದಲಾವಣೆಗಳನ್ನು ಮಾಡಲಾಗಿದೆ. ಎಂದಿನಂತೆ ರಾಯರ ವೃಂದಾವನ ದರ್ಶನಕ್ಕೆ ರಾತ್ರಿವರೆಗೂ ಅವಕಾಶ ಇರಲಿದೆ. ಸಂಜೆ 4 ಗಂಟೆಯ ಬಳಿಕ ಪೂಜೆ ಹಾಗೂ ಸೇವೆಗಳನ್ನ ಬಂದ್ ಮಾಡಲಾಗುತ್ತಿದೆ. ಇದನ್ನೂ ಓದಿ: ಚಂದ್ರಗ್ರಹಣ ಎಫೆಕ್ಟ್ – ಮಂಗಳೂರಿನ ಕದ್ರಿ ದೇಗುಲದಲ್ಲಿ ಭಕ್ತಸಾಗರ

    ರಾತ್ರಿ ವೇಳೆ ನಡೆಯುತ್ತಿದ್ದ ಉತ್ಸವಗಳು, ಹರಕೆ ಸೇವೆಗಳನ್ನು ಮಧ್ಯಾಹ್ನವೇ ನೆರವೇರಿಸಲಾಗುತ್ತಿದೆ. ಚಿನ್ನದ ರಥ, ಬೆಳ್ಳಿ ರಥ, ಗಜ ವಾಹನೊತ್ಸವಗಳನ್ನು ಮಧ್ಯಾಹ್ನದ ವೇಳೆಗೆ ಮುಕ್ತಾಯಗೊಳಿಸಲಾಗುತ್ತಿದೆ. ಉಳಿದಂತೆ ಭಕ್ತರಿಗೆ ರಾತ್ರಿ 8:30ರ ವರೆಗೂ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ 4 ಗಂಟೆ ಬಳಿಕ ತೀರ್ಥ ಪ್ರಸಾದ ಸೇವೆ ಇರುವುದಿಲ್ಲ. ಇನ್ನೂ ಗ್ರಹಣ ಕಾಲದಲ್ಲಿ ಶಾಂತಿ ಹೋಮ ಹಮ್ಮಿಕೊಳ್ಳಲಾಗಿದೆ. ಶಾಂತಿ ಹೋಮದಲ್ಲಿ ಭಕ್ತರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಉತ್ತರಾರಾಧನೆ

    ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಉತ್ತರಾರಾಧನೆ

    ರಾಯಚೂರು: ಮಂತ್ರಾಲಯ ಶ್ರೀಗುರು ರಾಘವೇಂದ್ರ ಸ್ವಾಮಿ 350 ನೇ ಆರಾಧನಾ ಮಹೋತ್ಸವದ ಭಾಗವಾಗಿ ಶ್ರೀ ಮಠದಲ್ಲಿಂದು ರಾಯರ ಉತ್ತರರಾಧನೆ ಸಂಭ್ರಮದಿಂದ ನಡೆಯುತ್ತಿದೆ.

    ರಾಯರು ವೃಂದಾವನಸ್ಥರಾದ ಮರುದಿನವನ್ನ ಉತ್ತರರಾಧಾನೆಯಾಗಿ ಆಚರಿಸಲಾಗುತ್ತದೆ. ಇಂದು ರಾಯರು ಬಹಿರ್ಮುಖರಾಗಿ ರಾಜಬೀದಿಗಳಲ್ಲಿ ಬರ್ತಾರೆ ಅನ್ನೋ ನಂಬಿಕೆಯಿದೆ. ಮಠದ ಶ್ರೀಗಳಿಂದ ರಾಯರಿಗೆ ಬಣ್ಣಗಳ ಸಮರ್ಪಣೆ ನಡೆಯುತ್ತದೆ. ವಿವಿಧ ಬಣ್ಣಗಳನ್ನ ಗುರಾಜರಿಗೆ ಸಮರ್ಪಿಸಿ ಶ್ರೀಗಳು ಹಾಗೂ ಮಠದ ಸಿಬ್ಬಂದಿ ವಸಂತೋತ್ಸವ ಆಚರಿಸುತ್ತಾರೆ.

    ಉತ್ತರಾರಾಧನೆ ಹಿನ್ನೆಲೆ ಮಹಾರಥೋತ್ಸವ ನಡೆಯಲಿದ್ದು, ಇದಕ್ಕೂ ಮುನ್ನ ಪಲ್ಲಕ್ಕಿಯಲ್ಲಿ ಸಂಸ್ಕೃತ ವಿದ್ಯಾಪೀಠ ಶಾಲೆಗೆ ಉತ್ಸವ ಮೂರ್ತಿ ಪ್ರಹ್ಲಾದರಾಜರ ಮೆರವಣಿಗೆ ನಡೆಯುತ್ತದೆ. ಬಳಿಕ ಮಠದ ರಾಜಬೀದಿಯಲ್ಲಿ ಇಂದು ಮಹಾ ರಥೋತ್ಸವ ನಡೆಯಲಿದೆ. ಸಪ್ತರಾತ್ರೋತ್ಸವದ ಮುಖ್ಯ ಮೂರು ದಿನಗಳ ಸಂಭ್ರಮಕ್ಕೆ ಇಂದು ತೆರೆಬೀಳಲಿದೆ. ಆಗಸ್ಟ್ 27ರ ವರೆಗೆ ಸಪ್ತರಾತ್ರೋತ್ಸವ ನಡೆಯಲಿದ್ದು ಮಠದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದನ್ನೂ ಓದಿ: ರಾಯರ ಆರಾಧನೆ- ಪಾದಯಾತ್ರೆ ಮೂಲಕ ಹರಿದು ಬಂತು ಭಕ್ತರ ದಂಡು

    ಆರಾಧನಾ ಮಹೋತ್ಸವ ಹಿನ್ನೆಲೆ ಬೆಳಗ್ಗೆಯಿಂದ ಮಠದಲ್ಲಿ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ಮೂಲರಾಮದೇವರಿಗೆ ಸೇರಿದಂತೆ ನಾನಾ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಇದನ್ನೂ ಓದಿ: ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಳೆಕಟ್ಟಿದ ರಾಯರ ಆರಾಧನೆ