Tag: ಗುರ್ಪತ್‌ವಂತ್ ಸಿಂಗ್ ಪನ್ನುನ್

  • ಉಗ್ರನ ಬಿಡುಗಡೆಗೆ ಕೇಜ್ರಿವಾಲ್‌ಗೆ 133 ಕೋಟಿ ರೂ. ಪಾವತಿಸಿದ್ದೇವೆ: ಖಲಿಸ್ತಾನಿ ಉಗ್ರ ಪನ್ನು

    ಉಗ್ರನ ಬಿಡುಗಡೆಗೆ ಕೇಜ್ರಿವಾಲ್‌ಗೆ 133 ಕೋಟಿ ರೂ. ಪಾವತಿಸಿದ್ದೇವೆ: ಖಲಿಸ್ತಾನಿ ಉಗ್ರ ಪನ್ನು

    ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ (Delhi Liquor Scam) ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಖಲಿಸ್ತಾನಿ (Khalistani) ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರೂ.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ.

    ಭಾರತಕ್ಕೆ ಬೇಕಾಗಿರುವ ಖಾಲಿಸ್ತಾನಿ ಉಗ್ರ ಗುರ್ಪತ್‌ವಂತ್ ಸಿಂಗ್ ಪನ್ನುನ್ (Gurpatwant Pannun) ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ವಿಡಿಯೋದಲ್ಲಿ ಆತ ಆಪ್‌ ಪಕ್ಷಕ್ಕೆ 2014 ಮತ್ತು 2022 ರ ನಡುವೆ ಹಣ ಸಂದಾಯವಾಗಿದೆ ಎಂದು ಹೇಳಿದ್ದಾನೆ.

    1993ರ ದೆಹಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಖಲಿಸ್ತಾನಿ ಉಗ್ರ ದೇವೇಂದರ್ ಪಾಲ್ ಸಿಂಗ್ ಭುಲ್ಲಾರ್‌ನನ್ನು ಬಿಡುಗಡೆ ಮಾಡಿಸುತ್ತೇನೆ ಎಂದು ನಂಬಿಸಿ ನಮ್ಮಿಂದ ಕೇಜ್ರಿವಾಲ್‌ ಹಣ ಪಡೆದಿದ್ದಾರೆ ಎಂದು ಪನ್ನು ಆರೋಪಿಸಿದ್ಧಾನೆ. 1993ರ ದೆಹಲಿ ಬಾಂಬ್ ಸ್ಫೋಟದಲ್ಲಿ 9 ಮಂದಿ ಮೃತಪಟ್ಟು 31 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ ಫೋನ್‌ ಕದ್ದಾಲಿಕೆ ಕೇಸ್‌ – ಇಂಟಲಿಜೆನ್ಸ್‌ ಬ್ಯೂರೋ ಮಾಜಿ ಮುಖ್ಯಸ್ಥ ಆರೋಪಿ ನಂ.1

    2014ರಲ್ಲಿ ನ್ಯೂಯಾರ್ಕ್‌ನಲ್ಲಿರುವ ಗುರುದ್ವಾರದಲ್ಲಿ ಕೇಜ್ರಿವಾಲ್‌ ಅವರನ್ನು ನಾನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಈ ವೇಳೆ ದೇವೇಂದರ್ ಪಾಲ್ ಸಿಂಗ್ ಭುಲ್ಲಾರ್‌ ಬಿಡುಗಡೆಗೊಳಿಸಿವ ವಾಗ್ದಾನ ನೀಡಿದ್ದರು ಎಂದು ಆರೋಪಿಸಿದ್ದಾನೆ.

     

    ಆಪ್‌ ಖಲಿಸ್ತಾನಿ ಗುಂಪುಗಳಿಂದ ಹಣವನ್ನು ಪಡೆಯುತ್ತಿದೆ ಎಂದು ಪನ್ನುನ್ ಆರೋಪಿಸಿದ್ದು ಇದೇ ಮೊದಲಲ್ಲ. ಜನವರಿಯಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಅಮೆರಿಕ ಮತ್ತು ಕೆನಡಾದಲ್ಲಿನ ಖಲಿಸ್ತಾನ್ ಬೆಂಬಲಿಗರಿಂದ 6 ಮಿಲಿಯನ್ ಡಾಲರ್‌ ಪಡೆದಿದ್ದಾರೆ ಎಂದು ಹೇಳಿದ್ದ. ಇದನ್ನೂ ಓದಿ: ಯುವಕರು ಏನಾದ್ರೂ ಮೋದಿ ಮೋದಿ ಅಂದ್ರೆ ಕಪಾಳಕ್ಕೆ ಹೊಡಿಯಬೇಕು: ಶಿವರಾಜ್‌ ತಂಗಡಗಿ

    ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್‌ನ (ಎಸ್‌ಎಫ್‌ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ.

     

  • ಡಿ.13ಕ್ಕೂ ಮುನ್ನ ಸಂಸತ್ತಿನ ಮೇಲೆ ದಾಳಿ- ಮತ್ತೆ ಬೆದರಿಕೆ ವೀಡಿಯೋ ಹರಿಬಿಟ್ಟ ಪನ್ನುನ್

    ಡಿ.13ಕ್ಕೂ ಮುನ್ನ ಸಂಸತ್ತಿನ ಮೇಲೆ ದಾಳಿ- ಮತ್ತೆ ಬೆದರಿಕೆ ವೀಡಿಯೋ ಹರಿಬಿಟ್ಟ ಪನ್ನುನ್

    ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ (Khalistan Terrorists) ಗುರ್ಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ (Parliament) ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿರುವ ವೀಡಿಯೋವನ್ನು ಬಿಡುಗಡೆ ಮಾಡಿದ್ದಾನೆ.

    ಪನ್ನುನ್ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ 2001ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಕಂಡುಬಂದಿದೆ. ಅದರಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ (ದೆಹಲಿ ಖಲಿಸ್ತಾನ್ ಆಗಿ ಬದಲಾಗುತ್ತದೆ) ಎಂಬ ಶೀರ್ಷಿಯನ್ನೂ ನೀಡಲಾಗಿದೆ. ವೀಡಿಯೋದಲ್ಲಿ ಪನ್ನುನ್, ಭಾರತ ತನ್ನನ್ನು ಕೊಲ್ಲಲು ನಡೆಸಿದ ಸಂಚು ವಿಫಲವಾಗಿದೆ. ಅಲ್ಲದೇ ಭಯೋತ್ಪಾದಕರು ಸಂಸತ್ತಿನ ಮೇಲೆ ದಾಳಿ ನಡೆಸಿ ಡಿಸೆಂಬರ್ 13ಕ್ಕೆ 22 ವರ್ಷಗಳಾಗುತ್ತದೆ. ಇದೇ ದಿನ ಸಂಸತ್ತಿನ ಮೇಲೆ ದಾಳಿ ನಡೆಸಲಾಗುವುದು. ಇಲ್ಲವೇ ಅದಕ್ಕೂ ಮೊದಲೇ ದಾಳಿ ನಡೆಸುವುದಾಗಿ ಹೇಳಿಕೆ ನೀಡಿದ್ದಾನೆ.

    ಪ್ರಸ್ತುತ ಸೋಮವಾರದಿಂದ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಪನ್ನುನ್ ಬೆದರಿಕೆ ಕರೆ (Threat Call) ಬಂದಿದ್ದು, ಈ ಹಿನ್ನೆಲೆ ಸಂಸತ್ ಭವನದ ಸುತ್ತ ಭದ್ರತಾ ಏಜೆನ್ಸಿಗಳು ಅಲರ್ಟ್ ಆಗಿವೆ. ಇದನ್ನೂ ಓದಿ: ರಜಪೂತ್‌ ಕರ್ಣಿ ಸೇನಾ ಮುಖ್ಯಸ್ಥನ ಹಣೆಗೆ ಗುಂಡಿಟ್ಟು ಹತ್ಯೆ – ರೊಚ್ಚಿಗೆದ್ದ ಬೆಂಬಲಿಗರಿಂದ ರಾಜಸ್ಥಾನ ಬಂದ್‌ಗೆ ಕರೆ

    ಮೂಲಗಳ ಪ್ರಕಾರ, ಭದ್ರತಾ ಏಜೆನ್ಸಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ನ ಕೆ-2 (ಕಾಶ್ಮೀರ-ಖಾಲಿಸ್ತಾನ್) ಭಾರತ ವಿರೋಧಿ ನಿರೂಪಣೆಯನ್ನು ಪ್ರಚಾರ ಮಾಡುವ ತಮ್ಮ ಕಾರ್ಯಸೂಚಿಯನ್ನು ಮುಂದುವರಿಸಲು ಪನ್ನುನ್‌ಗೆ ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದೆ.

    ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್‌ನ (ಎಸ್‌ಎಫ್‌ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ. ಇದನ್ನೂ ಓದಿ: ಮಹಾಪರಿನಿರ್ವಾಣ ದಿನ ಆಚರಣೆ – ಅಂಬೇಡ್ಕರ್ ಭಾವ ಚಿತ್ರಕ್ಕೆ ತಲೆಬಾಗಿ ನಮಸ್ಕರಿಸಿದ ಪ್ರಧಾನಿ ಮೋದಿ