Tag: ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌

  • ಮಾಜಿ ಮ್ಯಾನೇಜರ್ ಹತ್ಯೆ ಪ್ರಕರಣ – ಸ್ವಯಂ ಘೋಷಿತ ದೇವಮಾನವ ರಾಮ್ ರಹೀಮ್ ಸಿಂಗ್‌ಗೆ ರಿಲೀಫ್

    ಮಾಜಿ ಮ್ಯಾನೇಜರ್ ಹತ್ಯೆ ಪ್ರಕರಣ – ಸ್ವಯಂ ಘೋಷಿತ ದೇವಮಾನವ ರಾಮ್ ರಹೀಮ್ ಸಿಂಗ್‌ಗೆ ರಿಲೀಫ್

    ಚಂಢೀಗಢ್: ಮಾಜಿ ಮ್ಯಾನೇಜರ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮಿತ್‌ ರಾಮ್ ರಹೀಮ್ ಸಿಂಗ್ (Gurmeet Ram Rahim Singh) ಮತ್ತು ಇತರ ನಾಲ್ವರು ಆರೋಪಿಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ (Haryan High Court) ಪ್ರಕರಣದಿಂದ ಖುಲಾಸೆಗೊಳಿಸಿದೆ.

    2019 ರಲ್ಲಿ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಮತ್ತು ಮಾಜಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರ ಹತ್ಯೆಗೆ ಸಂಬಂಧಿಸಿದ ಎರಡು ಕೊಲೆ ಪ್ರಕರಣಗಳಲ್ಲಿ ಸ್ವಯಂ-ಘೋಷಿತ ದೇವಮಾನವನನ್ನು ಪಂಚಕುಲದ ಸಿಬಿಐ ನ್ಯಾಯಾಲಯವು ದೋಷಿ ಎಂದು ಘೋಷಿಸಿತು. 2021 ರ ಅಕ್ಟೋಬರ್ 18 ರಂದು ನ್ಯಾಯಾಲಯವು ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ, ಜೊತೆಗೆ ದಂಡ ವಿಧಿಸಿತ್ತು. ಇದನ್ನೂ ಓದಿ: ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

    ಸಿಬಿಐ ನ್ಯಾಯಲಯದ ಆದೇಶದ ವಿರುದ್ಧ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ಕೋರ್ಟ್ ಗುರ್ಮೀತ್ ರಾಮ್ ರಹೀಮ್ ಸಿಂಗ್ ಸೇರಿ ನಾಲ್ವರು ಆರೋಪಿಗಳಾದ ಅವತಾರ್ ಸಿಂಗ್, ಕ್ರಿಶನ್ ಲಾಲ್, ಜಸ್ಬೀರ್ ಸಿಂಗ್ ಮತ್ತು ಸಬ್ದಿಲ್ ಸಿಂಗ್ ಖುಲಾಸೆಗೊಳಿಸಿದೆ.

    ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಎಲ್ಲಾ ಅಪರಾಧಗಳನ್ನು ಪ್ರಶ್ನಿಸಿದ್ದರು. ಆದರೆ ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಅವರ ಮೇಲ್ಮನವಿ ಬಾಕಿ ಇದೆ. ರಾಮ್ ರಹೀಮ್ ಸದ್ಯ ರೋಹ್ಟಕ್‌ನ ಸುನಾರಿಯಾ ಜೈಲಿನಲ್ಲಿದ್ದಾರೆ. ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಅವರು ಪ್ರಸ್ತುತ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಅರೆಸ್ಟ್

    ಡೇರಾ ಸಚ್ಚಾ ಸೌಧದ ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಅವರನ್ನು 2002 ರಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಸಿಬಿಐ ಚಾರ್ಜ್‌ಶೀಟ್ ಪ್ರಕಾರ, ಡೇರಾ ಮುಖ್ಯಸ್ಥರ ಲೈಂಗಿಕ ಕಿರುಕುಳದ ಪ್ರಕರಣಗಳನ್ನು ಎತ್ತಿ ತೋರಿಸುವ ಪತ್ರದ ಹಂಚಿಕೆಯ ಹಿಂದೆ ರಂಜಿತ್ ಸಿಂಗ್ ಪಾತ್ರವಿದೆ ಎಂದು ರಾಮ್ ರಹೀಮ್ ಶಂಕಿಸಿದ್ದರು. ಈ ಹಿನ್ನೆಲೆ ಹತ್ಯೆ ಮಾಡಿದ್ದರು ಎನ್ನಲಾಗಿದೆ.

  • ಅನುಯಾಯಿ ಅತ್ಯಾಚಾರ, ಕೊಲೆ ಕೇಸ್‌ – ಪೆರೋಲ್‌ ಮೇಲೆ ಹೊರಬಂದು ಕೇಕ್‌ ಕಟ್‌ ಮಾಡಿದ ಗುರ್ಮಿತ್‌ ಸಿಂಗ್‌

    ಅನುಯಾಯಿ ಅತ್ಯಾಚಾರ, ಕೊಲೆ ಕೇಸ್‌ – ಪೆರೋಲ್‌ ಮೇಲೆ ಹೊರಬಂದು ಕೇಕ್‌ ಕಟ್‌ ಮಾಡಿದ ಗುರ್ಮಿತ್‌ ಸಿಂಗ್‌

    ನವದೆಹಲಿ: ಡೇರಾ ಸಚ್ಛಾಸೌಧದ (Dera Sacha Sauda) ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌ಗೆ (Gurmeet Ram Rahim) 40 ದಿನಗಳ ಪೆರೋಲ್‌ ಮಂಜೂರಾಗಿದ್ದು, ಜೈಲಿನಿಂದ ಹೊರಬಂದು ಕೇಕ್‌ ಕತ್ತರಿಸಿ ಸಂಭ್ರಮಿಸಿದ್ದಾರೆ.

    ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮಿತ್‌ ಸಿಂಗ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಿಂಗ್‌ಗೆ ಮೂರು ದಿನಗಳ ಹಿಂದೆ ಪೆರೋಲ್‌ ಮಂಜೂರು ಮಾಡಲಾಗಿತ್ತು. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ

    ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್, ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅವಕಾಶಕ್ಕೆ ಕೋರಿದ್ದರು.

    ಸಿಂಗ್‌ ಕೇಕ್‌ ಕತ್ತರಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. “ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ. ಹಾಗಾಗಿ ಕನಿಷ್ಠ ಐದು ಕೇಕ್‌ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್” ಎಂದು ವೀಡಿಯೋ ಸಿಂಗ್‌ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ಪೈಸ್‌ ಜೆಟ್ ಗಗನ ಸಖಿಯೊಂದಿಗೆ ಅಸಭ್ಯ ವರ್ತನೆ – ಪ್ರಯಾಣಿಕ ಅರೆಸ್ಟ್

    ಸಿಂಗ್‌ ಕತ್ತಿಯಿಂದ ಕೇಕ್‌ ಕತ್ತರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಶಸ್ತ್ರಾಸ್ತ್ರಗಳ ಕಾಯಿದೆಯ ಅಡಿಯಲ್ಲಿ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನ (ಕತ್ತಿಯಿಂದ ಕೇಕ್ ಕತ್ತರಿಸುವುದು) ನಿಷೇಧಿಸಲಾಗಿದೆ.

    ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್‌ಗೆ ಪೆರೋಲ್ ನೀಡಲಾಗಿದೆ. ಇದಕ್ಕೂ ಮೊದಲು, ಹರಿಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅವರನ್ನು ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಒಂದೇ ವಾರದಲ್ಲಿ ಕರ್ನಾಟಕದ ಟ್ಯಾಬ್ಲೋ ರೆಡಿ

    ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 2017ರ ಆಗಸ್ಟ್‌ನಲ್ಲಿ ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯ ಆತನಿಗೆ ಶಿಕ್ಷೆ ವಿಧಿಸಿತ್ತು. 2003 ರಲ್ಲಿ ಪಂಜಾಬ್ ಮತ್ತು ಹರಿಯಾಣದ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಈ ಹಿಂದೆ ಕುರುಕ್ಷೇತ್ರದ ಪೊಲೀಸ್ ಠಾಣೆ ಸದರ್‌ನಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k