Tag: ಗುಲಾಬ್ ರಾವ್ ಪಾಟೀಲ್

  • ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಮಾತನಾಡುವುದು ಸರಿಯಲ್ಲ: ಹೇಮಾಮಾಲಿನಿ

    ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಮಾತನಾಡುವುದು ಸರಿಯಲ್ಲ: ಹೇಮಾಮಾಲಿನಿ

    ಮುಂಬೈ: ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಬಾಲಿವುಡ್ ಹಿರಿಯ ನಟಿ ಮತ್ತು ಸಂಸದೆ ಹೇಮಾಮಾಲಿನಿ ಹೇಳಿದ್ದಾರೆ.

    ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಾಲಿನಿ ಕೆನ್ನೆಗೆ ಹೋಲಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಚಿವ ಗುಲಾಬ್ ರಾವ್ ಪಾಟೀಲ್ ಹೇಳಿಕೆಗೆ ಇದೀಗ ಹೇಮಾಮಾಲಿನಿ ಅವರು ಪ್ರತಿಕ್ರಿಯಿಸಿದ್ದಾರೆ.  ಇದನ್ನೂ ಓದಿ: ತಮ್ಮ ಕ್ಷೇತ್ರದ ರಸ್ತೆಯನ್ನು ಹೇಮಾಮಾಲಿನಿ ಕೆನ್ನೆಗೆ ಹೋಲಿಕೆ – ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಸಚಿವ

    ಇದೀಗ ನಟಿ ಹೇಮಾಮಾಲಿನಿ ಅವರು ಸಂದರ್ಶನವೊಂದರಲ್ಲಿ, ನಾನು ನನ್ನ ಕೆನ್ನೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಉತ್ತಮ. ಈ ಮಾತನ್ನು ಜನಸಾಮಾನ್ಯರು ಹೇಳಿದ್ದರೆ ನಿರ್ಲಕ್ಷಿಸಬಹುದಿತ್ತು. ಆದರೆ ಈ ಹೇಳಿಕೆ ನೀಡಿರುವುದು ಓರ್ವ ಸಚಿವರು. ಅವರು ಓರ್ವ ವಿಧಾನಸಭೆಯ ಅಥವಾ ಯಾವುದೋ ಕ್ಷೇತ್ರದ ಸದಸ್ಯರಾಗಿರುವುದರಿಂದ ಈ ಮಾತು ಅವರಿಗೆ ಕ್ಷೋಭೆ ತರುವುದಿಲ್ಲ. ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: YouTube ನೋಡ್ಕೊಂಡು ಪತ್ನಿಗೆ ಡೆಲಿವರಿ ಮಾಡಿಸಿದ- ಮುಂದೆ ಆಗಿದ್ದೇನು ಗೊತ್ತಾ?

    ಇತ್ತೀಚೆಗಷ್ಟೇ ಮಹಾರಾಷ್ಟ್ರದ ಸಚಿವ ಮತ್ತು ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್ ಭಾಷಣದ ವೇಳೆ 30 ವರ್ಷಗಳಿಂದ ಶಾಸಕನಾಗಿರುವ ನನ್ನ ಕ್ಷೇತ್ರಕ್ಕೆ ಬಂದು ಒಮ್ಮೆ ರಸ್ತೆ ನೋಡಿ. ಅದು ಹೇಮಾಮಾಲಿನಿ ಅವರ ಕೆನ್ನೆಯಂತೆ ಇಲ್ಲದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತಂತೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಎಚ್ಚರಿಕೆ ನೀಡಿದ್ದರು. ಹೀಗಾಗಿ ಗುಲಾಬ್ ರಾವ್ ಪಾಟೀಲ್ ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಕ್ಷಮೆಯಾಚಿಸಿದ್ದರು.

  • ತಮ್ಮ ಕ್ಷೇತ್ರದ ರಸ್ತೆಯನ್ನು ಹೇಮಾಮಾಲಿನಿ ಕೆನ್ನೆಗೆ ಹೋಲಿಕೆ – ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಸಚಿವ

    ತಮ್ಮ ಕ್ಷೇತ್ರದ ರಸ್ತೆಯನ್ನು ಹೇಮಾಮಾಲಿನಿ ಕೆನ್ನೆಗೆ ಹೋಲಿಕೆ – ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಸಚಿವ

    ಮುಂಬೈ: ಬಾಲಿವುಡ್ ನಟಿ ಹೇಮಾಮಾಲಿನಿ ಅವರ ಕೆನ್ನೆಯನ್ನು ಜಲಗಾಂವ್ ಜಿಲ್ಲೆಯ ತಮ್ಮ ಕ್ಷೇತ್ರದ ರಸ್ತೆಗಳಿಗೆ ಹೋಲಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಸಚಿವ ಮತ್ತು ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್ ಇದೀಗ ಕ್ಷಮೆಯಾಚಿಸಿದ್ದಾರೆ.

    ಉತ್ತರ ಮಹಾರಾಷ್ಟ್ರದ ತಮ್ಮ ಜಿಲ್ಲೆಯ ಬೋದ್ವಾಡ್ ನಗರ ಪಂಚಾಯತ್ ಚುನಾವಣೆಯ ಸಭೆಯನ್ನುದ್ದೇಶಿಸಿ ಗುಲಾಬ್ ರಾವ್ ಪಾಟೀಲ್ ಅವರು ಶನಿವಾರ ಭಾಷಣ ಮಾಡಿದ್ದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಭಾಷಣದ ವೇಳೆ ಗುಲಾಬ್ ರಾವ್ ಪಾಟೀಲ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ಗುಣಮಟ್ಟ ಎಷ್ಟಿದೆ ಎಂಬುವುದನ್ನು ತಮ್ಮ ವಿರೋಧಿಗಳಿಗೆ ಒಮ್ಮೆ ಭೇಟಿ ನೀಡಿ ನೋಡುವಂತೆ ತಿಳಿಸಿದ್ದರು.  ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

     

    30 ವರ್ಷಗಳಿಂದ ಶಾಸಕನಾಗಿರುವ ನನ್ನ ಕ್ಷೇತ್ರಕ್ಕೆ ಬಂದು ಒಮ್ಮೆ ರಸ್ತೆ ನೋಡಿ. ಅದು ಹೇಮಾಮಾಲಿನಿ ಅವರ ಕೆನ್ನೆಯಂತೆ ಇಲ್ಲದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ ಮತ್ತು ನೀರು ಸರಬರಾಜು ಮತ್ತು ನೈರ್ಮಲ್ಯ ಬಗ್ಗೆ ಕೂಡ ಮಾತನಾಡಿದ್ದರು. ಇನ್ನೂ ಈ ಮಾತನ್ನು ಹಲವಾರು ವರ್ಷಗಳಿಂದ ಜಲಗಾಂವ್‍ನಿಂದ ಶಾಸಕರಾಗಿದ್ದ ಮಾಜಿ ಬಿಜೆಪಿ ನಾಯಕ ಏಕನಾಥ್ ಖಾಡ್ಸೆ ಅವರನ್ನು ಗುರಿಯಾಗಿಸಿಕೊಂಡು ಹೇಳಿದ್ದರು.

    ಈ ಹೇಳಿಕೆ ಕುರಿತಂತೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಮತ್ತು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.  ಇದನ್ನೂ ಓದಿ: ಶಿವಾಜಿ ಪ್ರತಿಮೆಗೆ ಮಸಿ – ರಣಧೀರ ಪಡೆಯ 7 ಜನರ ಬಂಧನ

    rupali chakankar

    ಇದಾದ ಕೆಲವೇ ಗಂಟೆಗಳಲ್ಲಿ ಗುಲಾಬ್ ರಾವ್ ಪಾಟೀಲ್ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಈ ಕುರಿತಂತೆ ಧುಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ. ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜರನ್ನು ಆರಾಧಿಸುವ ಶಿವಸೇನೆಗೆ ಸೇರಿದವನು. ಮಹಿಳೆಯರನ್ನು ಗೌರವಿಸುವುದನ್ನು ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ನಮಗೆ ಕಲಿಸಿದ್ದಾರೆ ಎಂದು ತಿಳಿಸಿದರು.