Tag: ಗೂಡ್ಸ್‌ರೈಲು

  • ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ಬೆಳಗಾವಿ: ವಾಸ್ಕೋದಿಂದ ಬಳ್ಳಾರಿಗೆ (Ballary) ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲಿನ (Goods Train) ವ್ಯಾಗನ್ ಗುರುವಾರ ಮಧ್ಯಾಹ್ನ ದೂದ್ ಸಾಗರ್ (Dudhsagar) ಬಳಿ ಹಳಿತಪ್ಪಿದ್ದು, ಕೆಲವು ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲವೊಂದನ್ನು ಸ್ಥಗಿತಗೊಳಿಸಲಾಗಿದೆ.

    ಹುಬ್ಬಳ್ಳಿ ವಿಭಾಗದ ಸೋನಾಲಿಯಂ ಮತ್ತು ದೂದ್ ಸಾಗರ ನಿಲ್ದಾಣಗಳ ನಡುವೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೂಡ್ಸ್ ರೈಲಿನ ವ್ಯಾಗನ್ ಹಳಿತಪ್ಪಿದೆ.ಇದನ್ನೂ ಓದಿ: ಪತಿಯಿಂದಲೇ ಮಿಸ್ ಸ್ವಿಜರ್ಲೆಂಡ್ ಹತ್ಯೆ: ಕೊಲೆ ಬಳಿಕ ಬ್ಲೆಂಡರ್ ಬಳಸಿ ಮೃತದೇಹ ಪೀಸ್ ಪೀಸ್

    ಈ ಘಟನೆಯಿಂದಾಗಿ ಮಧ್ಯಾಹ್ನ ಗೋವಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ಪ್ರೆಸ್ (Amaravati Express) ರೈಲು ಕರಂಜೋಳ್‌ವರೆಗೆ ತೆರಳಿ ಪುನಃ ಲೋಂಡಾವರೆಗೆ ವಾಪಸ್ ತಂದು ಪ್ರಯಾಣಿಕರನ್ನು ಅಲ್ಲಿಯೇ ಬಿಟ್ಟು ಬಸ್ ಮೂಲಕ ತೆರಳಲು ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

    ಇನ್ನು ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣವನ್ನು ಮಡಗಾಂವ್, ರೋಹಾ, ಪನ್ವೆಲ್, ಪುಣೆ, ದೌಂಡ್ ಕಾರ್ಡ್ ಲೈನ್ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ.

    18048 ವಾಸ್ಕೋ ಡ ಗಾಮಾ (Vasco da Gama)- ಶಾಲಿಮಾರ್ ಎಕ್ಸ್ಪ್ರೆಸ್ ಪ್ರಯಾಣವು ವಾಸ್ಕೋ ಡ ಗಾಮಾ ಬದಲಿಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡಲಿದ್ದು, ವಾಸ್ಕೋ ಡ ಗಾಮಾ – ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.ಇದನ್ನೂ ಓದಿ: Nagamangala Violence | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

    ಪ್ರಯಾಣಿಕರ ಸೌಕರ್ಯವನ್ನು ಖಚಿತಪಡಿಸಿಕೊಳ್ಳಲು, ಲೋಂಡಾ ನಿಲ್ದಾಣದಲ್ಲಿ ರೈಲು ಸಂಖ್ಯೆ 18047ರ ಅಂದಾಜು 1,100 ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಲೋಂಡಾದಲ್ಲಿಯೇ ಸಿಲುಕಿರುವ ಪ್ರಯಾಣಿಕರನ್ನು ಕರೆದೊಯ್ಯಲು 25 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣ ಪುನಃಸ್ಥಾಪನೆ ತ್ವರಿತಗೊಳಿಸಲು ಅಪಘಾತ ಪರಿಹಾರ ರೈಲನ್ನು ವಾಸ್ಕೋ ಡ ಗಾಮಾದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಚಂಡೀಗಢ: ಗೂಡ್ಸ್‌ರೈಲು (Goods Train) ಹಳಿತಪ್ಪಿದ ಪರಿಣಾಮ 8 ಕಂಟೈನರ್‌ಗಳು (Container) ಹಳಿಗೆ ಬಿದ್ದು, ರೈಲು ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಹರಿಯಾಣದ (Haryana)  ಕರ್ನಾಲ್ (Karnal) ಜಿಲ್ಲೆಯಲ್ಲಿ ನಡೆದಿದೆ.

    ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿತ್ತು ಎಂದು ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದ ಎಂಟು ಕಂಟೈನರ್‌ಗಳು ಹಳಿಗೆ ಬಿದ್ದಿವೆ. ಘಟನೆಗೆ ಕಾರಣಗಳನ್ನು ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿದ್ದಾಗ ಕರ್ನಾಲ್‌ನ ತಾರೋರಿ ಬಳಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    ಕಂಟೈನರ್ ಹಳಿಗೆ ಬಿದ್ದ ಪರಿಣಾಮ ಅಂಬಾಲಾ-ದೆಹಲಿ ರೈಲ್ವೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಘಟನೆಯಿಂದ ಈ ಮಾರ್ಗವಾಗಿ ಚಲಿಸುವ ರೈಲುಗಳನ್ನು ನಿಲ್ಲಿಸಲಾಗಿದೆ. ಮುಂಜಾನೆ 4:40ರ ವೇಳೆಗೆ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್