Tag: ಗೂಡ್ಸ್ ಕ್ಯಾಂಟರ್

  • ಬೈಕ್‍ಗೆ ಗೂಡ್ಸ್ ಕ್ಯಾಂಟರ್ ಡಿಕ್ಕಿ- ಅಂತ್ಯಕ್ರಿಯೆಗೆ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವು

    ಬೈಕ್‍ಗೆ ಗೂಡ್ಸ್ ಕ್ಯಾಂಟರ್ ಡಿಕ್ಕಿ- ಅಂತ್ಯಕ್ರಿಯೆಗೆ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವು

    ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಐಚರ್ ಗೂಡ್ಸ್ ಕ್ಯಾಂಟರ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ನಡೆದಿದ್ದು, ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಬಸವರಾಜ್(45), ಆತನ ಮಗ ನರೇಶ್(8) ಹಾಗೂ ಸಂಬಂಧಿ ಭೀಮವ್ವ(40) ಮೃತ ದುರ್ದೈವಿಗಳು. ಮೃತರೆಲ್ಲರೂ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾಗಿದ್ದರು. ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದ ಮೂವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:  ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    ರಾಯಚೂರು ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಅತಿ ವೇಗದಲ್ಲಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕ್ಯಾಂಟರ್ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ. ಅಪಘಾತದಿಂದ ಮೂವರ ಮೃತದೇಹಗಳು ಜಮೀನಿನಲ್ಲಿ ಬಿದ್ದಿವೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ಅಕ್ಕ, ತಂಗಿಯರು ಮಂಚ ಹತ್ತಿಯೆ ನೌಕರಿಗೆ ಹೋಗಿದ್ದಾರಾ: ಪಾಟೀಲ್ ಗರಂ

    Live Tv
    [brid partner=56869869 player=32851 video=960834 autoplay=true]

  • ಗ್ರಾಮದೇವತೆ ಹಬ್ಬ ಮುಗಿಸಿ ವಾಪಸ್ಸಾಗುವಾಗ ಅಪಘಾತ- ಬೈಕ್ ಸವಾರರಿಬ್ಬರ ದುರ್ಮರಣ

    ಗ್ರಾಮದೇವತೆ ಹಬ್ಬ ಮುಗಿಸಿ ವಾಪಸ್ಸಾಗುವಾಗ ಅಪಘಾತ- ಬೈಕ್ ಸವಾರರಿಬ್ಬರ ದುರ್ಮರಣ

    ಮೈಸೂರು: ಬೈಕ್ ಮತ್ತು ಗೂಡ್ಸ್ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

    ಈ ಘಟನೆ ಶನಿವಾರ ಸಂಜೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ನಾಗನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು ಮಹದೇವ್ (68) ಮಂಜು (30) ಎಂದು ಗುರುತಿಸಲಾಗಿದೆ.

    ಮೃತರು ಚನ್ನಂಗೆರೆ ಗ್ರಾಮದವರು ಎನ್ನಲಾಗಿದ್ದು, ಇವರು ದೊಡ್ಡನೇರಳೆ ಗ್ರಾಮದಲ್ಲಿ ಗ್ರಾಮದೇವತೆ ಹಬ್ಬ ಮುಗಿಸಿ ವಾಪಸ್ಸು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

    ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.