Tag: ಗೂಢಚರ್ಯೆ

  • ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

    ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

    – ಮೋದಿಯ ರಾಜತಾಂತ್ರಿಕ ವಿಜಯವೆಂದ ಬಿಜೆಪಿ

    ದೋಹಾ: ಗೂಢಚರ್ಯೆ ಪ್ರಕರಣದಲ್ಲಿ ಮರಣದಂಡನೆಯ (Death Sentence) ಭೀತಿ ಎದುರಿಸುತ್ತಿದ್ದ ಭಾರತೀಯ ನೌಕಾಪಡೆಯ ಎಂಟು ಮಂದಿ ನಿವೃತ್ತ ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಂಟು ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ರದ್ದು ಮಾಡಿ ಕತಾರ್ ಕೋರ್ಟ್ (Qatar Court) ತೀರ್ಪು ನೀಡಿದೆ. ಈ ಮೂಲಕ ಕಾನೂನು ಸಮರದಲ್ಲಿ ಭಾರತ ಸರ್ಕಾರಕ್ಕೆ (Indian Government) ಮೊದಲ ಗೆಲುವು ಸಿಕ್ಕಿದೆ.

    ಮರಣದಂಡನೆಯನ್ನು ಜೈಲು ಶಿಕ್ಷೆಯಾಗಿ ಮಾರ್ಪಾಡು ಮಾಡಿ ತೀರ್ಪು ನೀಡಿದೆ. ಆದರೆ ಎಷ್ಟು ವರ್ಷ ಶಿಕ್ಷೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಬಗ್ಗೆ ಕತಾರ್ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಈ ಪ್ರಕರಣದಲ್ಲಿ ಮುಂದಿನ ಹೆಜ್ಜೆ ಇಡುವ ಬಗ್ಗೆ ಕಾನೂನು ಪರಿಣಿತರನ್ನು ಸಂಪರ್ಕಿಸಿದೆ.

    ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್ ಮತ್ತು ಇತರ ಅಧಿಕಾರಿಗಳು ಬಂಧಿತ ವ್ಯಕ್ತಿಗಳ ಕುಟುಂಬ ಸದಸ್ಯರೊಂದಿಗೆ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

    ತೀರ್ಪಿನ ಸಂಪೂರ್ಣ ವಿವರಕ್ಕೆ ನಾವು ಕಾಯುತ್ತಿದ್ದೇವೆ. ಈ ವಿಚಾರದಲ್ಲಿ ಆರಂಭದಿಂದಲೂ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ ಮತ್ತು ನಾವು ಎಲ್ಲಾ ಕಾನ್ಸುಲರ್ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸುತ್ತೇವೆ. ಈ ಪ್ರಕರಣದ ವಿಚಾರಣೆಯು ಗೌಪ್ಯ ಮತ್ತು ಸೂಕ್ಷ್ಮ ಸ್ವರೂಪವಾಗಿರುವ ಕಾರಣ, ಈ ಹಂತದಲ್ಲಿ ಯಾವುದೇ ಹೆಚ್ಚಿನ ಪ್ರತಿಕ್ರಿಯೆಯನ್ನು ನೀಡುವುದು ಸೂಕ್ತವಲ್ಲಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ: ಪುಟಿನ್ ಆಹ್ವಾನ

    ಕತಾರ್ ಸೇನಾ ಪಡೆಗಳಿಗೆ ತರಬೇತಿ ನೀಡುವ ಓಮನ್ ಮೂಲದ ಸಂಸ್ಥೆಯಲ್ಲಿ ಭಾರತೀಯ ನೌಕಾಪಡೆಯ 8 ನಿವೃತ್ತ ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ಆದರೆ ಗೂಢಚರ್ಯೆ ಆರೋಪದ ಮೇರೆಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಇವರ ಬಂಧನವಾಗಿತ್ತು. ವಿಚಾರಣೆ ಬಳಿಕ ಈ ಅಕ್ಟೋಬರ್‌ನಲ್ಲಿ 8 ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು.

    ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಯಿಂದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಗೆ ರಿಲೀಫ್‌ ಸಿಕ್ಕಿದೆ. ಇದು ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿದೇಶಾಂಗ ನೀತಿಯ ರಾಜತಾಂತ್ರಿಕ ಪ್ರಯತ್ನಕ್ಕೆ ಸಿಕ್ಕಿದ ವಿಜಯವಾಗಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ.

     

  • ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ

    ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ

    ನವದೆಹಲಿ: ಪೆಗಾಸಸ್ ಮೂಲಕ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನ್ಯಾ.ರವೀಂದ್ರನ್ ನೇತೃತ್ವದ ಸಮಿತಿಗೆ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಹೆಚ್ಚುವರಿ ಕಾಲಾವಕಾಶ ನೀಡಿದೆ. ಇಂದು ಪ್ರಕರಣ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಜೂನ್ 28 ವರೆಗೂ ಸಮಯ ವಿಸ್ತರಿಸಿದೆ.

    ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದು ಸಮಿತಿ ತನ್ನ ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಕೆ ಮಾಡಿತು. ಸಮಿತಿಯು 29 ಮೂಬೈಲ್ ಸಾಧನಗಳನ್ನು ತನಿಖೆಗೆ ಒಳಪಡಿಸಿದೆ. ಈ ಪ್ರಕ್ರಿಯೆ ಮುಗಿಸಲು ಹೆಚ್ಚುವರಿ ಸಮಯದ ಅವಶ್ಯಕತೆ ಇದೆ. ಹೀಗಾಗಿ ಸಮಯ ವಿಸ್ತರಿಸಬೇಕು ಎಂದು ಸಮಿತಿ ಪರ ವಕೀಲರು ಮನವಿ ಮಾಡಿದರು. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ತಾಂತ್ರಿಕ ವರದಿ ಪಡೆದ ಬಳಿಕ ನ್ಯಾಯಾಧೀಶರು ತಮ್ಮ ಅಭಿಪ್ರಾಯವನ್ನು ಕೂಡಾ ತಿಳಿಸಬೇಕು, ಅದಕ್ಕೆ ಸಮಯ ಬೇಕಾಗಬಹುದು. ಹೀಗಾಗಿ ಸಮಯ ವಿಸ್ತರಿಸಲಾಗುತ್ತಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ ನಾಲ್ಕು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳು ಅಂತ್ಯವಾಗಬೇಕು. ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದ ಕೋರ್ಟ್ ವಿಚಾರಣೆ ಮುಂದೂಡಿತು.

    ಹಗರಣದ ತನಿಖೆಗಾಗಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸಿತ್ತು. ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಮತ್ತು ಅಲೋಕ್ ಜೋಶಿ(ಮಾಜಿ IPS ಅಧಿಕಾರಿ) ಮತ್ತು ಡಾ.ಸಂದೀಪ್ ಒಬೆರಾಯ್, ಉಪ ಸಮಿತಿಯ ಅಧ್ಯಕ್ಷರು (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಕಮಿಟಿ) ರನ್ನು ಸಮಿತಿ ಒಳಗೊಂಡಿದೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು 

    ಏನಿದು ಪ್ರಕರಣ?
    2017ರಲ್ಲಿ 2 ಶತಕೋಟಿ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಖರೀದಿ ಸಂಬಂಧ ಭಾರತ ಮತ್ತು ಇಸ್ರೇಲ್‌ ಮಧ್ಯೆ ಒಪ್ಪಂದ ನಡೆದಿತ್ತು. ಈ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್‌ ತಂತ್ರಾಂಶವನ್ನೂ ಭಾರತ ಖರೀದಿಸಿದೆ ಎಂಬ ಆರೋಪ ಬಂದಿದೆ.

    ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್‌ ಸಾಫ್ಟ್‌ವೇರ್‌ ಅನ್ನು ಬಳಸುತ್ತಿವೆ. ಪೆಗಾಸಸ್‌ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂದು ಪತ್ರಕರ್ತರು, ರಾಜಕೀಯ ನಾಯಕರು ದೂರಿದ್ದರು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಸರ್ಕಾರ ಆರೋಪಗಳನ್ನು ತಳ್ಳಿ ಹಾಕಿತ್ತು.

  • ಭಾರತಕ್ಕೆ ಗೆಲುವು: ಪಾಕ್‍ನಲ್ಲಿರೋ ಜಾಧವ್ ಭೇಟಿಗೆ ಪತ್ನಿಗೆ ಅವಕಾಶ

    ಭಾರತಕ್ಕೆ ಗೆಲುವು: ಪಾಕ್‍ನಲ್ಲಿರೋ ಜಾಧವ್ ಭೇಟಿಗೆ ಪತ್ನಿಗೆ ಅವಕಾಶ

    ಇಸ್ಲಾಮಾಬಾದ್: ಮರಣದಂಡನೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರನ್ನು ಮಾನವೀಯ ನೆಲೆಯಲ್ಲಿ ಭೇಟಿ ಮಾಡಲು ಅವರ ಪತ್ನಿಗೆ ಪಾಕಿಸ್ತಾನ ಅನುಮತಿ ನೀಡಲು ಮುಂದಾಗಿದೆ.

    ಮಾನವೀಯ ನೆಲೆಯಲ್ಲಿ ಕುಲಭೂಷಣ್ ಜಾಧವ್ ಮತ್ತು ಅವರ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಲು ಪಾಕ್ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಸ್ಲಾಮಾಬಾದ್‍ನಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆಯಲಾಗಿದೆ ಪಾಕ್ ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.

    ಪಾಕಿಸ್ತಾನ ದಿಢೀರ್ ತನ್ನ ನಿಲುವು ಬದಲಾಯಿಸಿ ಜಾಧವ್ ಪತ್ನಿಯ ಭೇಟಿಗೆ ಅವಕಾಶ ನೀಡುವ ನಿರ್ಧಾರಕ್ಕೆ ಬರಲು ಕಾರಣ ಏನು ಎಂಬುದು ಬಹಿರಂಗವಾಗಿಲ್ಲ ಎಂದು ದಿ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

    ಭಾರತ ಸರ್ಕಾರ ಈ ಹಿಂದೆ ಕುಲಭೂಷಣ್ ಜಾಧವ್ ಭೇಟಿಗೆ ಅವಕಾಶ ನೀಡಬೇಕೆಂದು ಪಾಕ್ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಪಾಕಿಸ್ತಾನ ಭಾರತದ ಮನವಿಯನ್ನು ತಿರಸ್ಕರಿಸಿತ್ತು. ಮನವಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಭಾರತ ನೆದರ್ ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದೂರು ನೀಡಿತ್ತು. ಭಾರತದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿತ್ತು.

    ಏನಿದು ಪ್ರಕರಣ?
    ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ್ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

    ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು.  ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.

    ಇದನ್ನೂ ಓದಿ: ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಪರ ವಾದಿಸಲು ವಕೀಲ ಹರೀಶ್ ಸಾಳ್ವೆ ಸಂಭಾವನೆ ಕೇಳಿದ್ರೆ ನಿಜಕ್ಕೂ ಆಶ್ಚರ್ಯಪಡ್ತೀರಿ

     

  • ಭಾರತದ ನಿವೃತ್ತ ನೌಕಾ ಸೇನೆಯ ಅಧಿಕಾರಿಗೆ ಪಾಕ್‍ನಲ್ಲಿ ಗಲ್ಲು ಶಿಕ್ಷೆ

    ಭಾರತದ ನಿವೃತ್ತ ನೌಕಾ ಸೇನೆಯ ಅಧಿಕಾರಿಗೆ ಪಾಕ್‍ನಲ್ಲಿ ಗಲ್ಲು ಶಿಕ್ಷೆ

    ನವದೆಹಲಿ: ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.

    ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿದೆ.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

    ಇದನ್ನೂ ಓದಿ: 13 ವರ್ಷದ ಹಿಂದೆ ಸೆಹ್ವಾಗ್ ಮುಲ್ತಾನ್ ಸುಲ್ತಾನ್ ಆದ ಕಥೆ ಓದಿ