Tag: ಗೃಹಜ್ಯೋತಿ ಯೋಜನೆ

  • ಉಪಯೋಗಕ್ಕೆ ಬಾರದ ಗೃಹಜ್ಯೋತಿ ಯೋಜನೆ – ವಿದ್ಯುತ್ ಇಲ್ಲದೇ ನಿತ್ಯ ಕತ್ತಲಲ್ಲೇ ಕಾಲ ಕಳೆಯುತ್ತಿದೆ ಈ ಗ್ರಾಮ

    ಉಪಯೋಗಕ್ಕೆ ಬಾರದ ಗೃಹಜ್ಯೋತಿ ಯೋಜನೆ – ವಿದ್ಯುತ್ ಇಲ್ಲದೇ ನಿತ್ಯ ಕತ್ತಲಲ್ಲೇ ಕಾಲ ಕಳೆಯುತ್ತಿದೆ ಈ ಗ್ರಾಮ

    ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಜಾರಿಗೆ ಬಂದ ಮೇಲೆ ಗೃಹಜ್ಯೋತಿ ಯೋಜನೆ (Gruhajyoti Scheme) ಮೂಲಕ ಪ್ರತಿ ಮನೆಗೂ ಉಚಿತ ವಿದ್ಯುತ್ತನ್ನು ಕೊಡುತ್ತಿದೆ. ಆದರೆ ಜಿಲ್ಲೆಯ ಜನ್ನಘಟ್ಟ ಮಜರಾ ಓಬೇನಹಳ್ಳಿ ಗ್ರಾಮ ಮಾತ್ರ ಈ ಯೋಜನೆಯಿಂದ ಹೊರಗುಳಿದಿದೆ.

    ರಾಜ್ಯ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ರಾಜ್ಯದ ಜನರಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಮನೆ ಬೆಳಗುವ ಉದ್ದೇಶವನ್ನು ಸರ್ಕಾರ ಹೊಂದಿತ್ತು. ಆದರೆ ಜಿಲ್ಲೆಯ ಈ ಗ್ರಾಮ ಗ್ಯಾರಂಟಿ ಯೋಜನೆಯಿಂದ ಹೊರಗುಳಿದಿದೆ.ಇದನ್ನೂ ಓದಿ: Paris Paralympics 2024 | ಭಾರತ ಸಾರ್ವಕಾಲಿಕ ಶ್ರೇಷ್ಠ ಪ್ರದರ್ಶನ – ದಾಖಲೆಯ 20 ಪದಕ

    ಈ ಗ್ರಾಮದಲ್ಲಿ ಶಾಲಾ ಮಕ್ಕಳು ಕ್ಯಾಂಡಲ್ ದೀಪವಿಟ್ಟುಕೊಂಡು ಓದುತ್ತಾರೆ. ಸೀಮೆ ಎಣ್ಣೆ ದೀಪವಿಟ್ಟುಕೊಂಡು ಮಹಿಳೆಯರು ಅಡುಗೆ ಕೆಲಸ ಮಾಡುತ್ತಾರೆ. ಗೃಹಜ್ಯೋತಿ ಯೋಜನೆ ಜಾರಿಗೆ ಮೊದಲು 12 ಗಂಟೆ ಸಿಂಗಲ್ ಫೇಸ್ ವಿದ್ಯುತ್ ಕೊಡುತ್ತಿದ್ದರು. ಬಳಿಕ 8 ಗಂಟೆ ಮೂರು ಫೇಸ್ ವಿದ್ಯುತ್ ನೀಡಲಾಗುತ್ತಿತ್ತು. ಆದರೆ ಗೃಹಜ್ಯೋತಿ ಯೋಜನೆ ಜಾರಿಗೆ ತಂದ ಮೇಲೆ ಓಬೇನಹಳ್ಳಿ ಗ್ರಾಮಕ್ಕೆ ಕೇವಲ ಮೂರು ಫೇಸ್ ವಿದ್ಯುತ್ ನೀಡಲಾಗುತ್ತಿದೆ. ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ಗ್ರಾಮದ ಜನರು ಮನೆಯಲ್ಲಿ ಲೈಟಿಂಗ್ಸ್ ಹಾಗೂ ಗೃಹಪಯೋಗಕ್ಕೆ ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ಎದುರಾಗಿದೆ. ಗ್ರಾಮದ ಹೊರಗೆ ತೋಟಗಳಲ್ಲಿ ಮನೆ ನಿರ್ಮಾಣ ಮಾಡಿಕೊಂಡಿದ್ದು, ಸಂಜೆಯಾದರೆ ಜೀವಭಯದಲ್ಲಿ ಜೀವನ ಸಾಗಿಸುವ ಸ್ಥಿತಿ ಎದುರಾಗಿದೆ.

    ಕಳೆದ 30-40 ವರ್ಷಗಳಿಂದ ಜನ್ನಘಟ್ಟ ಗ್ರಾಮಸ್ಥರು ಊರ ಹೊರಗೆ ತಮ್ಮ ತಮ್ಮ ಹೊಲಗಳಲ್ಲಿ ಬಂದು ಮನೆಗಳನ್ನು ನಿರ್ಮಾಣ ಮಾಡಿಕೊಂಡು ಜನ್ನಘಟ್ಟ ಮಜರಾ ಓಬೇನಹಳ್ಳಿ ಗ್ರಾಮ ಮಾಡಿಕೊಂಡಿದ್ದಾರೆ. ಇಲ್ಲಿ ಸುಮಾರು 20 ಮನೆಗಳಿವೆ. ಈ ಮೊದಲು ಇಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಮೋಟಾರ್ ಪಂಪ್‌ಸೆಟ್‌ಗಳಿಗೆ ಪ್ರತ್ಯೇಕ ವಿದ್ಯುತ್ ಸರಬರಾಜಾಗುತ್ತಿತ್ತು. ಮನೆಯ ಗೃಹಪಯೋಗಕ್ಕೆ ಪ್ರತ್ಯೇಕ 24 ಗಂಟೆ ವಿದ್ಯುತ್ ಅಡಿಯಲ್ಲಿ ಸರಬರಾಜಾಗುತ್ತಿತ್ತು. ಆದರೆ ಗೃಹಜ್ಯೋತಿ ಯೋಜನೆ ಜಾರಿಗೆ ಬಂದ ನಂತರ ಸಿಂಗಲ್ ಫೇಸ್ ವಿದ್ಯುತ್ ಕಡಿತ ಮಾಡಿದ ಪರಿಣಾಮ ಈ ಗ್ರಾಮದ ಮನೆಗಳಿಗೆ ವಿದ್ಯುತ್ ಇಲ್ಲದೇ ಪರದಾಡುವಂತಾಗಿದೆ. ಇನ್ನು ಗೃಹೋಪಯೋಗಿ ವಿದ್ಯುತ್‌ಗೆ ಪ್ರತ್ಯೇಕ ಲೈನ್ ಹಾಕಿಕೊಡಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾವೇ ಭರಿಸುತ್ತೇವೆ ಎಂದರೂ ಅಧಿಕಾರಿಗಳು ಮಾಡಿಕೊಡಲು ಸಿದ್ಧರಿಲ್ಲ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.ಇದನ್ನೂ ಓದಿ: ಮಕ್ಕಳ ಅಶ್ಲೀಲ ಚಿತ್ರ ಸರ್ಚಿಂಗ್‌ – ಕೇರಳದ 455 ಕಡೆ ದಾಳಿ, 6 ಬಂಧನ

    ಗೃಹಜ್ಯೋತಿ ಯೋಜನೆಯಿಂದ ಉಚಿತವಾಗಿ ನಮಗೆ ವಿದ್ಯುತ್ ಸಿಗುತ್ತದೆ. ಗ್ರಾಮಸ್ಥರು ದಿನದ 24 ಗಂಟೆಯೂ ವಿದ್ಯುತ್ ನಳನಳಿಸುತ್ತದೆ ಎಂದು ಕನಸು ಕಂಡಿದ್ದರು. ಸದ್ಯ ಹಣ ಕೊಡುತ್ತೇವೆ ಎಂದರೂ ಇಲ್ಲಿ ವಿದ್ಯುತ್ ಸಿಗದೆ ಕತ್ತಲೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇನ್ನಾದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಿ ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.

  • ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    – ಗೃಹಜ್ಯೋತಿ ಯೋಜನೆಯಿಂದ ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಆರ್ಥಿಕ ಸಂಕಷ್ಟ: ಶರವಣ
    – ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಗುಂಡೂರಾವ್‌ ವಾರ್ನಿಂಗ್‌

    ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನದ (Karnataka Assembly Session) ಮೊದಲ ದಿನವೇ ಅಕ್ರಮಗಳ ಸದ್ದು – ಗದ್ದಲ ಜೋರಾಗಿ ನಡೆದಿದೆ. ವಾಲ್ಮೀಕಿ ನಿಗಮದ ಹಗರಣ ಮುಡಾ ಹಗರಣಗಳ ಪ್ರಸ್ತಾಪದ ನಡುವೆ ಕೋವಿಡ್ ನಿರ್ವಹಣೆಯಲ್ಲಿ ಆಗಿರುವ ಹಗರಣಗಳ (Covid Scam) ಬಗ್ಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್ ದನಿ ಎತ್ತಿದ್ದಾರೆ.

    ಶೂನ್ಯ ವೇಳೆಯಲ್ಲಿ ಮಾತನಾಡಿದ ಯು.ಬಿ ವೆಂಕಟೇಶ್ (UB Venkatesh), ಬೆಂಗಳೂರಿನಲ್ಲಿ 2021-22ರಲ್ಲಿ ಬಿಜೆಪಿ ಸರ್ಕಾರದ ಇದ್ದಾಗ ಕೋವಿಡ್ ನಿರ್ವಹಣೆಯಲ್ಲಿ ದೊಡ್ಡ ಅಕ್ರಮವಾಗಿದೆ. ಔಷಧಿ ಸೇರಿ ಇನ್ನಿತರ ಖರೀದಿಯಲ್ಲಿ ಅಕ್ರಮವಾಗಿದೆ. ಲೆಕ್ಕ ಪರಿಶೋಧನೆ ವರದಿಯಲ್ಲಿ ಅಕ್ರಮದ ಬಗ್ಗೆ ಪ್ರಸ್ತಾಪ ಇದೆ. ಸುಮಾರು 30 ಕೋಟಿ ರೂ. ಅಕ್ರಮದ ಆಗಿದೆ. ಈ ಬಗ್ಗೆ ತನಿಖೆ ಮಾಡಿ ತಪ್ಪು ಮಾಡಿರೋರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಆಗ್ರಹಿಸಿದರು.

    ʻಗೃಹಜ್ಯೋತಿʼ ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್:
    ಇದಕ್ಕೂ ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಶರವಣ ಮಾತನಾಡಿದರು. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಯೋಜನೆಯಿಂದ (Gruha Jyothi Scheme) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಬಹಳಷ್ಟು ನಷ್ಟದಲ್ಲಿವೆ. ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್ ಇದು. ಇದರಿಂದ ವಿದ್ಯುತ್ ಸರಬರಾಜು ಕಂಪನಿಗಳು ಆರ್ಥಿಕ ಸಂಕಷ್ಟದಲ್ಲಿವೆ. ವಿದ್ಯುತ್ ಉತ್ಪಾದನಾ ಕಂಪನಿಗಳಿಗೂ ಹಣ ಪಾವತಿಯಾಗುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಕೆ.ಜೆ ಜಾರ್ಜ್, ಯಾವುದೇ ವಿದ್ಯುತ್ ಕಂಪನಿಗಳ ಬಾಕಿ ಹಣ ಉಳಿಸಿಕೊಂಡಿಲ್ಲ. ಗೃಹ ಜ್ಯೋತಿ ಅಡಿ ಉಪಯೋಗ ಮಾಡಿದ್ದ ಎಲ್ಲ ವಿದ್ಯುತ್‌ಗೂ ಹಣ ಕಂಪನಿಗಳಿಗೆ ಈಗಾಗಲೇ ಸಂದಾಯವಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಡೆಂಗ್ಯೂ ವಿಚಾರದಲ್ಲಿ 2 ತಿಂಗಳು ಎಚ್ಚರವಾಗಿರಿ:
    ಇನ್ನೆರಡು ತಿಂಗಳು ಡೆಂಗ್ಯೂ ವಿಚಾರದಲ್ಲಿ ಜನರು ಎಚ್ಚರವಾಗಿ ಇರಬೇಕು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಕರೆ ನೀಡಿದರು. ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯ ವೇಳೆ ಬಿಜೆಪಿಯ ಧನಂಜಯ ಸರ್ಜಿ ಅವರ ಬದಲಾಗಿ, ಅರುಣ್ ಡೆಂಗ್ಯೂ ಬಗ್ಗೆ ಪ್ರಶ್ನೆ ಕೇಳಿದ್ರು.

    ಇದಕ್ಕೆ ಉತ್ತರ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಅಂತ ತಿಳಿಸಿದರು.ಈ ವರ್ಷ ನಮ್ಮ ರಾಜ್ಯದಲ್ಲಿ ಡೆಂಗ್ಯೂ ಕೇಸ್ ಜಾಸ್ತಿ ಆಗಿದೆ.ಕಳೆದ ವರ್ಷ ಈ ಅವಧಿಗೆ 25 ಸಾವಿರ ಕೇಸ್ ಇತ್ತು. ಈ ವರ್ಷ ಇಲ್ಲಿವರೆಗೆ 68 ಸಾವಿರ ಕೇಸ್ ಈ ವರೆಗೆ ದಾಖಲಾಗಿದೆ. ಡೆಂಗ್ಯೂವನ್ನ ನಾವು ಗಂಭೀರವಾಗಿ ಪರಿಗಣಿಸಲಾಗಿದೆ. ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಡೆಂಗ್ಯೂವನ್ನ ನೋಟಿಫೈ ಕಾಯಿಲೆ ಅಂತ ಘೋಷಣೆ ಮಾಡಲಾಗಿದೆ. ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಮಾಹಿತಿ ಸರ್ಕಾರಕ್ಕೆ ಕೊಡುವ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು.

    ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ:
    ವಿಶೇಷವಾಗಿ ಟಾಸ್ಕ್ ಫೋರ್ಸ್ ನೇಮಕ ಮಾಡಲಾಗಿದೆ ಎಂದರು. ಚಿಕಿತ್ಸೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಡೆಂಗ್ಯೂ ಕಾಯಿಲೆಯನ್ನು ಕೋವಿಡ್ ಮಾದರಿಯಲ್ಲಿ ಮಾನಿಟರ್ ಮಾಡ್ತಿದ್ದೇವೆ. ಒಂದೇ ಏರಿಯಾದಲ್ಲಿ 2-3 ಕೇಸ್ ಬಂದರೆ ಅದನ್ನ ಹಾಟ್ ಸ್ಪಾಟ್ ಅಂತ ಅಂತ ಘೋಷಣೆ ಮಾಡಿ ಇಡೀ ಏರಿಯಾದಲ್ಲಿ ಫೀವರ್ ಕ್ಲಿನಿಕ್ ಓಪನ್ ಮಾಡಿ ತಪಾಸಣೆ ಮಾಡ್ತಿದ್ದೇವೆ. ಇನ್ನು ಎರಡು ತಿಂಗಳು ನಾವು ಎಚ್ಚರಿಕೆಯಿಂದ ಇರಬೇಕು. ಸೆಪ್ಟೆಂಬರ್ ವರೆಗೂ ನಾವು ಎಚ್ಚರಿಕೆಯಿಂದ ಇರಬೇಕು ಅಂತ ಕರೆ ಕೊಟ್ರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ಉಚಿತ ಪ್ಲೇಟ್ ಲೈಟ್ಸ್ ಕೂಡಾ ಸರ್ಕಾರಿ ಆಸ್ಪತ್ರೆಯಲ್ಲಿ ಕೊಡಲಾಗ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂ ಟೆಸ್ಟ್ ಗೆ ದರ ನಿಗದಿ ಮಾಡಲಾಗಿದೆ. ಹೆಚ್ಚು ಹಣ ಪಡೆದ್ರೆ ಕ್ರಮ ತೆಗೆದುಕೊಳ್ತಿದ್ದೇವೆ ಅಂತ ತಿಳಿಸಿದರು.

  • ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – BBMP ಮೇಲೆ ಬೆಸ್ಕಾಂ ಅಧಿಕಾರಿಗಳು ಗರಂ

    ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – BBMP ಮೇಲೆ ಬೆಸ್ಕಾಂ ಅಧಿಕಾರಿಗಳು ಗರಂ

    ಬೆಂಗಳೂರು: ಬೆಸ್ಕಾಂ (BESCOM) ಪಾಡು ಹೇಳತೀರದ್ದಾಗಿದೆ. ಅತ್ತ ಗೃಹಜ್ಯೋತಿ ಯೋಜನೆ (GruhaJyoti Scheme) ಜಾರಿಯಾದ ಮೇಲೆ ಜನರು ಕರೆಂಟ್ ಬಿಲ್ ಕಟ್ತಿಲ್ಲ. ಇತ್ತ BBMP ಸೇರಿದಂತೆ ಅನೇಕ ಸರ್ಕಾರಿ ಸಂಸ್ಥೆಗಳೂ ಸಾವಿರಾರು ಕೋಟಿ ರೂಪಾಯಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿವೆ. ಜನರಿಗೆಲ್ಲಾ ಬುದ್ಧಿ ಹೇಳೋ ಬಿಬಿಎಂಪಿಯೇ 800 ಕೋಟಿಗೂ ರೂ.ಗಿಂತ ಅಧಿಕ ಬಿಲ್ ಬಾಕಿ ಉಳಿಸಿಕೊಂಡಿದೆ.

    ಗೃಹಜ್ಯೋತಿ ಜಾರಿಯಾದ ಮೇಲೆ ಮತ್ತಷ್ಟು ಸಮಸ್ಯೆಗಳ ಸುಳಿಗೆ ಬೆಸ್ಕಾಂ ಸಿಲುಕಿಕೊಂಡಂತಿದೆ. ಒಂದುಕಡೆ ಜನರು ಕರೆಂಟ್ ಬಿಲ್ ಕಟ್ಟೋಕೆ ಮೀನಮೀಷ ಎಣಿಸಿದ್ರೆ, ಇತ್ತ ಸರ್ಕಾರಿ ಸಂಸ್ಥೆಗಳೂ ಕರೆಂಟ್ ಬಿಲ್ ಕಟ್ಟದೇ ಕಳ್ಳಾಟ ಆಡ್ತಿದೆ. ಅದರಲ್ಲೂ ತೆರಿಗೆ, ದಂಡ, ಶುಲ್ಕ ಅಂತ ಜನರ ಪ್ರಾಣ ತೆಗೆಯೋ ಬಿಬಿಎಂಪಿಯೇ ನೂರಾರು ಕೋಟಿ ರೂಪಾಯಿ ಬೆಸ್ಕಾಂಗೆ ಕರೆಂಟ್ (Electricity Bill) ಬಾಕಿ ಉಳಿಸಿಕೊಂಡಿದೆ ಎಂದರೆ ನೀವು ನಂಬಲೇ ಬೇಕು.

    ಹೌದು, ಬಿಬಿಎಂಪಿ ಸೇರಿದಂತೆ ರಾಜ್ಯದ ಹಲವು ಸರ್ಕಾರಿ ಸಂಸ್ಥೆಗಳು ಕೆಲವು ತಿಂಗಳಿನಿಂದ ಕರೆಂಟ್ ಬಿಲ್ ಕಟ್ಟಿಲ್ಲ. ಇದರಿಂದ ಬೆಸ್ಕಾಂಗೆ 6,374 ಕೋಟಿ ರೂಪಾಯಿ ಬಿಲ್ ಬರುವುದು ಬಾಕಿ ಇದೆ. ಇದನ್ನೂ ಓದಿ: ಇಂದಿನಿಂದ ಬೆಳಗಾವಿ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ BJP-JDS ಸಜ್ಜು

    ಬೆಸ್ಕಾಂಗೆ ಸರ್ಕಾರಿ ಸಂಸ್ಥೆಗಳೇ ಹೊರೆ: ಬೆಸ್ಕಾಂಗೆ ಸರ್ಕಾರಿ ಸಂಸ್ಥೆಗಳೇ ಹೆಚ್ಚಿನ ಹೊರೆಯಾಗಿದೆ. ಪ್ರತಿಷ್ಠಿತ ಸಂಸ್ಥೆಗಳೇ ಸಾವಿರಾರು ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಬಿಬಿಎಂಪಿ, ಜಲಮಂಡಳಿ, ನಗರಾಭಿವೃದ್ಧಿ ಇಲಾಖೆ, ಸಣ್ಣ ಮತ್ತು ದೊಡ್ಡ ನೀರಾವರಿ ಇಲಾಖೆ, ಇತರೆ ಸರ್ಕಾರಿ ಸಂಸ್ಥೆಗಳಿಂದ ಒಟ್ಟು 6,000 ಕೋಟಿ ರೂ. ಗಿಂತ ಅಧಿಕ ಬಿಲ್ ಬಾಕಿ ಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಯಾವ ಸಂಸ್ಥೆ – ಎಷ್ಟು ಬಾಕಿ?
    ಬಿಬಿಎಂಪಿ : 820 ಕೋಟಿ ರೂ.
    ಜಲಮಂಡಳಿ : 495 ಕೋಟಿ ರೂ.
    ನಗರಾಭಿವೃದ್ಧಿ ಇಲಾಖೆ : 113 ಕೋಟಿ ರೂ.
    ಸಣ್ಣ & ದೊಡ್ಡ ನೀರಾವರಿ ಇಲಾಖೆ : 51 ಕೋಟಿ ರೂ.
    ಇತರೆ ಸರ್ಕಾರಿ ಸಂಸ್ಥೆಗಳು : 4,885 ಕೋಟಿ ರೂ.
    ಒಟ್ಟು : 6,374 ಕೋಟಿ

    ಬೆಸ್ಕಾಂಗೆ ಬಿಬಿಎಂಪಿ 820 ಕೋಟಿ ರೂಪಾಯಿ ಕರೆಂಟ್ ಬಿಲ್ ಬಾಕಿ ಇಟ್ಟಿದೆ. ಬಿಬಿಎಂಪಿಗೆ ಹಲವು ಬಾರಿ ನೋಟೀಸ್ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಮೇಲಿನ ಹೊರೆ ತಪ್ಪಿಸಲು ನಾವು ಅನಿವಾರ್ಯವಾಗಿ ವಸೂಲಿ ಮಾಡಲೇಬೇಕಾದ ಸ್ಥಿತಿಗೆ ಬಂದಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 3 ರಾಜ್ಯಗಳಲ್ಲಿ ಮೋದಿ ಪಡೆಗೆ ಭರ್ಜರಿ ಗೆಲುವು – ಗ್ಯಾರಂಟಿಯಿಂದಲೇ ತೆಲಂಗಾಣದಲ್ಲಿ ಗೆದ್ದ ಕಾಂಗ್ರೆಸ್

  • ಕುಮಾರಸ್ವಾಮಿ ಬಹಳ ಅನುಭವಸ್ಥರು: ಲಕ್ಷ್ಮಿ ಹೆಬ್ಬಾಳ್ಕರ್‌

    ಕುಮಾರಸ್ವಾಮಿ ಬಹಳ ಅನುಭವಸ್ಥರು: ಲಕ್ಷ್ಮಿ ಹೆಬ್ಬಾಳ್ಕರ್‌

    ಉಡುಪಿ: ಕುಮಾರಸ್ವಾಮಿ (HD Kumaraswamy) ಬಹಳ ಅನುಭವಸ್ಥರು, ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebalkar) ಗುಡುಗಿದ್ದಾರೆ.

    ಉಡುಪಿಯಲ್ಲಿ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಸಾಂಕೇತಿಕವಾಗಿ ಚಾಲನೆ ನೀಡಿದ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಗಳಿಗೆ ತಿರುಗೇಟು ನೀಡಿದರು. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ (Congress Government) ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ. ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವವಿದೆ. ಅವರು ಸಿಎಂ ಆಗಿದ್ದಾಗ ನಾನೂ ಶಾಸಕಿಯಾಗಿ ಕೆಲಸ ಮಾಡಿದ್ದೇನೆ. ಹೆಚ್‌ಡಿಕೆ ಹಿಟ್ ಅಂಡ್ ರನ್ ಕೇಸ್ ಮಾಡೋದಕ್ಕೆ ಹೋಗ್ಬಾರದು. ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಜನರಿಗೆ ಇದ್ರಿಂದ ಲಾಭ ಇಲ್ಲ, ಮುಚ್ಚಿಬಿಡಿ ಎಂದು ಮುಂದೆ ಬಂದು ಹೇಳಲಿ ಎಂದು ಸವಾಲ್ ಹಾಕಿದ್ದಾರೆ.

    ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡುತ್ತಾ, 1.28 ಕೋಟಿ ಕುಟುಂಬಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ 1 ಕೋಟಿ ಕುಟುಂಬಗಳು ನೋಂದಣಿಯಾಗಿದೆ. ಆಗಸ್ಟ್ 18 ಅಥವಾ ಆಗಸ್ಟ್ 20ರಂದು ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. ಡಿಬಿಟಿ ಮೂಲಕ ಮನೆ ಯಜಮಾನಿ ಖಾತೆಗೆ ಹಣ ಹಾಕುವ ಮೂಲಕ ಯೋಜನೆಗೆ ಚಾಲನೆ ನಿಡಲಾಗುತ್ತದೆ ಎಂದರು. ಇದನ್ನೂ ಓದಿ: ಹರಿಯಾಣದಲ್ಲಿಯೂ ಘರ್ಜಿಸಿದ ಬುಲ್ಡೋಜರ್- ಅಕ್ರಮವಾಗಿ ನಿರ್ಮಿಸಿದ್ದ ಎರಡು ಡಜನ್‌ ಕಟ್ಟಡಗಳ ತೆರವು

    ಉಡುಪಿ ವೀಡಿಯೋ ಚಿತ್ರೀಕರಣ ಕೇಸ್ ಕುರಿತು ಮಾತನಾಡಿ, ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಆಗುವಂತೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ನೋಡಿಕೊಳ್ಳುತ್ತೇನೆ. ಒಬ್ಬ ಮಹಿಳೆಯಾಗಿ ಯಾವುದೇ ಹೆಣ್ಣು ಮಕ್ಕಳ ಮೇಲೆ ಅನ್ಯಾಯವಾದರೂ ಸಹಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಭವಿಷ್ಯದ ಪ್ರಶ್ನೆ ಇದೆ. ಆದ್ದರಿಂದ ತನಿಖೆ ಆಗುವವರೆಗೂ ಕಾಯ್ದಿರಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಬಂದ ಭಯೋತ್ಪಾದಕರು ನಮ್ಮ ದೇಶದ ಸೈನಿಕರನ್ನು ಹತ್ಯೆ ಮಾಡಿದ್ದಾರೆ: ಓವೈಸಿ ಕಿಡಿ

    ಇನ್ನೂ ಪ್ರತಿಭಟನಾಕಾರರ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಭಟನೆ ವೇಲೆ ತಪ್ಪಾಗಿ ಮಾತನಾಡಿದ್ದಕ್ಕಾಗಿ ಕೇಸ್ ಆಗಿದೆ. ಪ್ರತಿಭಟನೆ ಮಾಡುವುದು ತಪ್ಪಲ್ಲ, ಆದ್ರೆ ಪ್ರಚೋದನಕಾರಿಯಾಗಿ ಮಾತನಾಡುವುದು ತಪ್ಪು. ಈ ಬಗ್ಗೆ ಎಸ್ಪಿ ಜೊತೆಗೂ ಮಾತನಾಡಿದ್ದೇನೆ. ಎಲ್ಲಾ ಜಾತಿ ಧರ್ಮದವರು ಒಟ್ಟಿಗೆ ಇರೋಣ. ಬಿಜೆಪಿಯವರು ರಾಮ ರಾಜ್ಯದ ಪರಿಕಲ್ಪನೆ ಹೇಳುತ್ತಾರೆ. ರಾಮ ರಾಜ್ಯದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಇರಬೇಕು ಅನ್ನುವುದು ಕಾಂಗ್ರೆಸ್ ಸಿದ್ಧಾಂತ ಎಂದು ತಿರುಗೇಟು ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]