Tag: ಗೃಹಸಚಿವ

  • ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

    ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

    ಮೈಸೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದ ಬಗ್ಗೆ ಧ್ವನಿ ಎತ್ತಿರುವ ಶಾಸಕ ಪ್ರಿಯಾಂಕ್ ಖರ್ಗೆ ಈಗ ಅಕ್ರಮದ ಹಿಂದೆ ಗೃಹ ಸಚಿವರೇ ಇದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

    araga jnanendra

    ಮೈಸೂರಿನಲ್ಲಿಂದು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಖರ್ಗೆ, ಈ ಪ್ರಕರಣದಲ್ಲಿ ಈಗ ಬಂಧನವಾಗಿರುವವರು ಕಿಂಗ್‌ಪಿನ್‌ಗಳಲ್ಲ ಕೇವಲ ಮಧ್ಯವರ್ತಿಗಳು. ಇವರಿಗೆ ಕೆಲಸ ವಹಿಸಿದ್ದು ಯಾರು? ದುಡ್ಡು ಯಾರಿಗೆ ಸಂದಾಯವಾಗಿದೆ? ಅನ್ನೋದು ಮುಖ್ಯ ನನಗೆ ಗೃಹ ಸಚಿವರ ಮೇಲೆಯೆ ಅನುಮಾನವಿದೆ. ಅಕ್ರಮ ನಡೆಯುತ್ತಿದೆ ಎಂದು ಗೊತ್ತಿದ್ದರೂ ಸುಮ್ಮನೆ ಕೂತಿದ್ದರು, ಅದರ ಅರ್ಥವೇನು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

    ಪ್ರಕರಣ ಸರಿಯಾಗಿ ತನಿಖೆಯಾದರೆ ಅದು ಸರ್ಕಾರಕ್ಕೆ ಸುತ್ತಿಕೊಳ್ಳುತ್ತದೆ. ಅಕ್ರಮದ ಬಗ್ಗೆ ಮಾತಾಡಿದ್ದಕ್ಕೆ ನನಗೆ ನೋಟಿಸ್ ಕೊಟ್ಟಿದ್ದಾರೆ. ನಾನು ಅದಕ್ಕೆ ತಕ್ಕ ಉತ್ತರ ಕೊಟ್ಟಿದ್ದೇನೆ. ಹಾಗಾಗಿ ಖುದ್ದಾಗಿ ವಿಚಾರಣೆಗೆ ಹೋಗುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

    Priyankkharge

    ಪ್ರಿಯಾಂಕ್ ಖರ್ಗೆ ಹಿಟ್ ಅಂಡ್ ರನ್ ವ್ಯಕ್ತಿ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಖರ್ಗೆ, ನಾನು ಹಿಟ್ ಅಂಡ್ ರನ್ ಆಗಿದ್ದರೆ ನಾನು ಧ್ವನಿ ಎತ್ತಿದ ಕೇಸ್‌ಗಳನ್ನೇಲ್ಲ ಏಕೆ ತನಿಖೆ ಮಾಡಿಸುತ್ತಿದ್ದೀರಿ? ನಾನು ಮುಖ್ಯ ಅಲ್ಲ ಅನ್ನೋದಾದರೆ ನನ್ನ ಮಾತಿಗೆ ಏಕೆ ಪ್ರಾಮುಖ್ಯತೆ ಕೊಡುತ್ತೀರಿ? ಬಿಟ್ಟುಬಿಡಿ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ

    ಸರ್ಕಾರ ತನಿಖೆ ನಡೆಸದೇ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಈವರೆಗೆ ಒಂದೇ ಒಂದು ಪರೀಕ್ಷಾ ಕೇಂದ್ರದ ಬಗ್ಗೆ ಮಾತ್ರ ಎಫ್‌ಐಆರ್ ದಾಖಲಿಸಿದೆ. ಪರೀಕ್ಷಾರ್ಥಿಗಳು ಹಲವು ಕೇಂದ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಅವುಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

    ಮರು ಪರೀಕ್ಷೆ ಮಾಡಬೇಕೆಂದ ಸರ್ಕಾರ ಮತ್ತೆ 545 ಮಂದಿಯ ಒಎಂಆರ್ ಶೀಟ್ ತರಿಸಿಕೊಂಡಿದ್ದಾದರೂ ಏಕೆ..? ಇಲ್ಲಿ ಸರ್ಕಾರದ ದಡ್ಡತನವೆ ಎದ್ದು ಕಾಣುತ್ತಿದೆ. 300 ಜನರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಅವರೇ ಹೇಳಿ, ಈವರೆಗೆ ಎಷ್ಟು ಜನರನ್ನು ಅರೆಸ್ಟ್ ಮಾಡಿದ್ದಾರೆ? ಒಂದೆರಡು ಕಿಂಗ್ ಪಿನ್ ಸಿಕ್ಕರೆ ಅದರಲ್ಲೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್

    ರಾಜ್ಯಕ್ಕೆ 3ನೇ ಸಿಎಂ ಸಿಗಲಿದ್ದಾರೆ: ಬಿಟ್‌ಕಾಯಿನ್ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗಲಿದ್ದಾರೆ ಎಂದು ಪ್ರಿಯಾಂಕ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಯಾವುದೇ ರೀತಿಯ ತನಿಖೆ ನಡೆಯುತ್ತಿಲ್ಲ. ಇಂದಿಗೂ ನಾನು ಅದನ್ನೇ ಹೇಳುತ್ತೇನೆ ಬಿಟ್ ಕಾಯಿನ್ ಪಾರದರ್ಶಕ ತನಿಖೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3 ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ಕುಟುಕಿದರು.

  • ಗೃಹಸಚಿವರು ಚತ್ರಿ ಆಗಬೇಕು – ಯತ್ನಾಳ್ ಕುಟುಕಿದ್ದೇಕೆ?

    ಗೃಹಸಚಿವರು ಚತ್ರಿ ಆಗಬೇಕು – ಯತ್ನಾಳ್ ಕುಟುಕಿದ್ದೇಕೆ?

    ಬಳ್ಳಾರಿ: ರಾಜ್ಯದ ಗೃಹ ಸಚಿವರು ಶಾಂತಿ ಸಮಾಧಾನದಿಂದ ಇದ್ದರೆ ಆಗುವುದಿಲ್ಲ. ಇಂತಹ ಘಟನೆಗಳನ್ನು ಹತ್ತಿಕ್ಕಬೇಕಾದರೆ, ಅವರೂ ಚತ್ರಿ ಆಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.

    ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಧಿಕಾರದಲ್ಲಿ ಇದ್ದಿದ್ದರೆ ರಾಜ್ಯದಲ್ಲೂ ಪಾಕಿಸ್ತಾನ ಇರುತ್ತಿತ್ತು. ಇಂದು ಮತಾಂಧರಿಗೆ ಭಯ ಹುಟ್ಟಿಸುವ ಕೆಲಸವನ್ನು ಸರ್ಕಾರ ಹಾಗೂ ಗೃಹ ಸಚಿವರು ಮಾಡಬೇಕು. ಅದು ಬಿಟ್ಟು ಸಮಾಧಾನ ಹೇಳುವುದರಲ್ಲಿ ಪ್ರಯೋಜನವಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧವೇ ಕಿಡಿಕಾರಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯನ್ನು ಕೆಜಿ ಹಳ್ಳಿ, ಡಿಜೆಹಳ್ಳಿ ಘಟನೆಗೆ ಹೋಲಿಸಿದ ಗೃಹಸಚಿವ

    HBL_ POLICE

    ಕೆಲ ಮುಸ್ಲಿಮರಿಗೆ ಹಿಜಬ್, ದೇಶ ವಿರೋಧಿ ಚಟುವಟಿಕೆಗಳು ಬೇಕಾಗಿದೆಯೇ ಹೊರತು ಸಾಮರಸ್ಯ ಬೇಕಿಲ್ಲ. ಇವರನ್ನು ಹೀಗೆ ಬಿಟ್ಟರೇ ದೇಶಕ್ಕೆ ಮಾರಕವಾಗುತ್ತಾರೆ. ಕೆಜಿ ಹಳ್ಳಿ, ಡಿಜೆಹಳ್ಳಿ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದರೆ ಮತ್ತೆ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ ಎಂದರು.

    ಉತ್ತರ ಪ್ರದೇಶದಲ್ಲಿ ರಾಮನವಮಿ ರ‍್ಯಾಲಿ ವೇಳೆ ಒಂದು ಗಲಭೆಯೂ ನಡೆದಿಲ್ಲ. ಇಲ್ಲಿನ ಘಟನೆ ನೋಡಿದರೆ, ಇದು ಬಿಜೆಪಿ ಹೆಸರು ಕೆಡಿಸಲು ಮಾಡಿರುವ ದೊಡ್ಡ ಷಡ್ಯಂತ್ರವೆಂಬುದು ಅರ್ಥವಾಗುತ್ತದೆ. ಇದಕ್ಕಾಗಿ ಸಂಬಂಧಪಟ್ಟವರಿಗೆ ವಿದೇಶಗಳಿಂದ ಹಣ ಹರಿದು ಬರುತ್ತಿದೆ. ಆದರೂ ನಮ್ಮಲ್ಲಿರುವ ಡೋಂಗಿ ಜಾತ್ಯಾತೀತರಿಗೆ ದೇಶದ ಬದಲಾಗಿ ಮುಸ್ಲಿಮರ ವೋಟು ಬೇಕಾಗಿದೆ ಎಂದು ಕುಟುಕಿದರು. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    HBL_ POLICE 5

    ಶಾಂತಿಮಂತ್ರದಿಂದ ಪ್ರಯೋಜನವಿಲ್ಲ: ರಾಜ್ಯದಲ್ಲಿ ಪದೇ ಪದೇ ಇಂಥ ಘಟನೆ ಆಗ್ತಿದೆ. ಇಂತಹ ಹೊತ್ತಿನಲ್ಲಿ ಸರ್ಕಾರ ಶಾಂತಿ ಮಂತ್ರ ಹೇಳ್ತಾ ಕೂತ್ರೆ ಆಗಲ್ಲ. ಕ್ರಮ ತಗೋತೀವಿ – ತಗೋತಿವಿ, ತೀವ್ರವಾಗಿ ಖಂಡಿಸ್ತೀವಿ ಅಂದ್ರೆ ಏನೂ ಆಗಲ್ಲ. ಸರ್ಕಾರದಿಂದ ಇಂತಹವರ ಮೇಲೆ ಕಠಿಣ ಕ್ರಮ ಆಗುತ್ತಿಲ್ಲ. ಏಕೆಂದರೆ ನಮ್ಮ ಸರ್ಕಾರ ಪೊಲೀಸರಿಗೂ ಫ್ರೀ ಹ್ಯಾಂಡ್ ಕೊಡ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    POLICE

    ನಕಲಿ ಖಾತೆಗಳ ಹಾವಳಿ ನಿಲ್ಲಲಿ: ವಿವಾದಿತ ಪೋಸ್ಟ್ ಹಾಕಿದವನ ವಿರುದ್ಧ ಕ್ರಮ ಆಗಬೇಕು. ಎಷ್ಟೋ ಜನ ನಕಲೀ ಖಾತೆ ಮೂಲಕ ಶ್ರೀರಾಮನ ಬಗ್ಗೆ, ಪ್ರಧಾನಿ ಬಗ್ಗೆ ಹಗುರವಾದ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಾರೆ. ಹಾಗೆಯೇ ಹಿಂದೂಗಳ ಹೆಸರಿನಲ್ಲೂ ಖಾತೆ ತೆರೆದು ಪೋಸ್ಟ್ ಹಾಕುತ್ತಿದ್ದಾರೆ. ಅಲ್ಲಿ ಪ್ರಸಾದ್ ಅನ್ನೋ ಹೆಸರಿನಲ್ಲಿ ಖಾತೆ ಇದ್ದರೆ, ಪೋಸ್ಟ್ ಹಾಕೋನು ಮೆಹಬೂಬ್ ಆಗಿರ್ತಾನೆ. ಈ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

  • ಗೃಹ ಸಚಿವರು ವಿಲನ್ ರೋಲ್ ಮಾಡ್ತಿದ್ದಾರೋ, ಕಾಮಿಡಿ ರೋಲ್ ಮಾಡ್ತಿದ್ದಾರೋ ಗೊತ್ತಿಲ್ಲ: ಹೆಚ್‌ಡಿಕೆ

    ಗೃಹ ಸಚಿವರು ವಿಲನ್ ರೋಲ್ ಮಾಡ್ತಿದ್ದಾರೋ, ಕಾಮಿಡಿ ರೋಲ್ ಮಾಡ್ತಿದ್ದಾರೋ ಗೊತ್ತಿಲ್ಲ: ಹೆಚ್‌ಡಿಕೆ

    ಮೈಸೂರು: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮಿಷಕ್ಕೊಂದು ಹೇಳಿಕೆ ನೀಡುತ್ತಿರುವ ಅರಗ ಜ್ಞಾನೇಂದ್ರ ಅವರು ಕಾಮಿಡಿ ರೋಲ್ ಮಾಡಲು ಗೃಹ ಸಚಿವರಾಗಿದ್ದಾರಾ? ಅಥವಾ ವಿಲನ್ ರೋಲ್ ಮಾಡುತ್ತೀದ್ದಿರಾ? ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

    KUMARASWAMY

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾದ ಚಂದ್ರು ದಲಿತ ಸಮಾಜದ ಯುವಕ ಅಂತಾ ಗೃಹ ಸಚಿವರು ಹೇಳಿದ್ದಾರೆ. ಆದರೆ, ಇಂದು ನೀಡುತ್ತಿರುವ ಹೇಳಿಕೆಗಳು ಅವರ ಸಣ್ಣತನವನ್ನು ತೋರಿಸುತ್ತದೆ. ಸಮಾಜದ ಶಾಂತಿ ಕದಡುವ ವೇಳೆ, ಗೃಹ ಸಚಿವರಿಗೆ ತಮ್ಮ ಸ್ಥಾನದ ಜವಾಬ್ದಾರಿ ಅರಿವಿಲ್ಲದಂತಾಗಿದೆ. ಇದರಲ್ಲಿ ಯಾವುದು ಸತ್ಯ ಎಂಬುದು ತಿಳಿಯದೇ ಮಂತ್ರಿಯೇ ತನಿಖೆಗೆ ಮುನ್ನ ತೀರ್ಪು ಕೊಟ್ಟಿದ್ದಾರೆ. ಹಿಂದೂ ಮುಸ್ಲಿಂ ಮಧ್ಯೆ ಕಂದಕ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ದೂರಿದ್ದಾರೆ. ಇದನ್ನೂಓದಿ: ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ

    ಮೌನ ಮುರಿಯಲಿ ಸಿಎಂ: ಮುಖ್ಯಮಂತ್ರಿಗಳ ಮೌನ ರಾಜ್ಯದಲ್ಲಿ ಅನಾಹುತ ಮಾಡುತ್ತದೆ. ಇಂತಹ ಘಟನೆಗಳನ್ನು ಸರ್ಕಾರ ಪ್ರಾರಂಭಿಕ ಹಂತದಿಂದಲೇ ಸರಿಪಡಿಸಬೇಕು. ಗೃಹಸಚಿವರ ಹೇಳಿಕೆಯಿಂದ ಹಿಂದೂ ಮುಸ್ಲಿಮರ ನಡುವೆ ಸಾಮರಸ್ಯ ಹಾಳಾಗುತ್ತಿದೆ. ಇದರಲ್ಲಿ ನಾನು ಯಾವುದೇ ಸಮಾಜದ ಓಲೈಕೆ ಮಾಡುತ್ತಿಲ್ಲ. ರಾಜ್ಯದ ಎಲ್ಲ ಜನರೂ ನನಗೆ ಮುಖ್ಯ. ಆದ್ದರಿಂದ ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ 

    HDK

    ಸಿನಿಮಾಗಳೇ ಕೃತ್ಯಗಳಿಗೆ ಪ್ರೇರಣೆ: ಇತ್ತೀಚಿನ ದಿನಗಳಲ್ಲಿ ಸಿನಿಮಾಗಳೇ ಹುಡುಗರಿಗೆ ಈ ರೀತಿಯ ಕೃತ್ಯ ಎಸಗಲು ಪ್ರೇರಣೆ ನೀಡುತ್ತಿವೆ. ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇಂತಹ ಸಿನಿಮಾಗಳನ್ನು ಮಾಡಂದತೆ ನಿರ್ದೇಶಕರಿಗೂ ಎಚ್ಚರ ವಹಿಸಬೇಕು. ಈ ಪ್ರಕರಣದಲ್ಲಿ ಮುಸ್ಲಿಂ ಯುವಕರು ಎಂದು ಕನಿಕರ ತೋರದೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಬೇರೆ ಬೇರೆ ವಿಚಾರಕ್ಕೆ ಕೊಲೆಯಾದವು, ಆದರೆ, ಕೊಲೆ ವಿಚಾರದಲ್ಲಿ ಬಿಜೆಪಿ ಸೆಲೆಕ್ಟಿವ್ ಆಗಿ ಕಾರ್ಯ ಪ್ರವೃತವಾಗುತ್ತದೆ ಇದು ಸರಿಯಲ್ಲ ಎಂದು ಕುಟುಕಿದರು.

    ಇದೇ ವೇಳೆ ಸಮಾಜ ಹಾಳು ಮಾಡಿ, ಕುಟುಂಬಗಳ ಬೀದಿಗೆ ತಂದು ಮತ್ತೆ ಸಿಎಂ ಆಗುವ ಆಸೆ ನನಗೆ ಇಲ್ಲ. ನಾನು ಎರಡು ರಾಜಕೀಯ ಪಕ್ಷಗಳನ್ನು ಈ ರಾಜ್ಯದಿಂದ ಕಿತ್ತಾಕುವ ಸುಪಾರಿಯನ್ನು ಜನರಿಂದ ಪಡೆದಿದ್ದೇನೆ. ನಾನು ಯಾವ ಸಮಾಜದ ಓಲೈಕೆಗೂ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಕರಾವಳಿಯಲ್ಲಿ 2 ಭಯೋತ್ಪಾದಕ ಫ್ಯಾಕ್ಟರಿ ಇವೆ, ಸ್ವಲ್ಪ ಸಮಯ ಸಿಕ್ಕಿದ್ರೂ ಮಟ್ಟ ಹಾಕ್ತಿದ್ದೆ- ರಾಮಲಿಂಗಾರೆಡ್ಡಿ

    ಕರಾವಳಿಯಲ್ಲಿ 2 ಭಯೋತ್ಪಾದಕ ಫ್ಯಾಕ್ಟರಿ ಇವೆ, ಸ್ವಲ್ಪ ಸಮಯ ಸಿಕ್ಕಿದ್ರೂ ಮಟ್ಟ ಹಾಕ್ತಿದ್ದೆ- ರಾಮಲಿಂಗಾರೆಡ್ಡಿ

    ಕಲಬುರಗಿ: ಕರಾವಳಿಯಲ್ಲಿ ಎರಡು ಭಯೋತ್ಪಾದಕ ಫ್ಯಾಕ್ಟರಿಗಳಿವೆ. ಸಮಯ ಸಿಕ್ಕಿದ್ರೆ ಅವುಗಳನ್ನು ಮಟ್ಟ ಹಾಕುತ್ತಿದ್ದೆ ಅಂತ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

    ಕಲಬುರಗಿಯಲ್ಲಿ ಮಾತಾಡಿದ ಅವರು, ಸತ್ತ ಮೇಲೆ ಸತ್ತವರ ಮನೆಗೆ ಹೋಗಿ ಮರಣೋತ್ತರ ಸದಸ್ಯತ್ವ ಕೊಡೋದೇ ಬಿಜೆಪಿಯ ಕೆಲಸ. ರಾಜ್ಯದಲ್ಲಿ 23 ಹಿಂದೂಗಳ ಕೊಲೆ ಆಗಿದೆ ಅಂತ ಬಿಜೆಪಿ ಹೇಳ್ತಿದೆ. ಆದ್ರೆ 9 ಮಂದಿ ಹಿಂದೂಗಳು ಮಾತ್ರ ಕೋಮು ಜಗಳದಲ್ಲಿ ಕೊಲೆ ಆಗಿದ್ದಾರೆ. ಬಿಜೆಪಿವರು ಯಾರಾದ್ರೂ ಸಾಯೋದನ್ನೇ ಕಾಯ್ತಾ ಇರ್ತಾರೆ. ಸತ್ತರೆ ಅವರ ಮನೆಗೆ ಹೋಗಿ ಮರಣೋತ್ತರ ಸದಸ್ಯತ್ವ ನೋಂದಣಿ ಮಾಡಿಕೊಳ್ತಾರೆ ಅಂತ ಲೇವಡಿ ಮಾಡಿದ್ರು.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಭಯೋತ್ಪಾದಕರ ಫ್ಯಾಕ್ಟರಿಗಳಿದ್ದು, ಇನ್ನು ಸ್ವಲ್ಪ ಸಮಯ ಸಿಕ್ಕಿದ್ರೆ ಅವರ ಮೇಲೆ ಸಂಪೂರ್ಣ ಕ್ರಮ ಕೈಗೊಳ್ಳುತ್ತಿದೆ ಅಂತಾ ಹೇಳಿದ್ರು.

  • ಮೋದಿ ದೇಶದ ಪ್ರಧಾನಿ, ಬಂದ್ ನಡೆಸಲು ಅವಕಾಶ ನೀಡಲ್ಲ: ರಾಮಲಿಂಗಾ ರೆಡ್ಡಿ

    ಮೋದಿ ದೇಶದ ಪ್ರಧಾನಿ, ಬಂದ್ ನಡೆಸಲು ಅವಕಾಶ ನೀಡಲ್ಲ: ರಾಮಲಿಂಗಾ ರೆಡ್ಡಿ

    ಬೆಂಗಳೂರು: ಭಾನುವಾರ ನಗರದಲ್ಲಿ ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ. ಬಂದ್ ಮಾಡುವವರು ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಪ್ರತಿಭಟನೆ ಮಾಡಲಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಪ್ರಧಾನಿ ಅಲ್ಲ. ಅವರು ದೇಶದ ಪ್ರಧಾನಿ. ಪ್ರಧಾನಿಗಳು ಬಂದಾಗ ಗೌರವ ಕೊಡುವುದು ರಾಜ್ಯ ಸರ್ಕಾರದ ಕರ್ತವ್ಯ. ಹೀಗಾಗಿ ಪ್ರತಿಭಟನೆ ಮಾಡುವವರಿಗೆ ಫ್ರೀಡಂ ಪಾರ್ಕ್ ಪ್ರತಿಭಟಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

    ಭಾನುವಾರ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

    ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆ ಹರಿಸಿಕೊಡಬೇಕು. ಮಹದಾಯಿ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಬಗೆ ಹರಿಸುವ ಭರವಸೆಯನ್ನು ನೀಡದೇ ಇದ್ದರೆ ಫೆ.4 ರಂದು ಬೆಂಗಳೂರು ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದ್ದರು.

    ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಫೆ. 4ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಹೀಗಾಗಿ 3ನೇ ತಾರೀಖಿನ ಒಳಗಡೆ ಮಹದಾಯಿ ನೀರಿನ ಸಮಸ್ಯೆಯನ್ನು ನಾನು ಬಗೆಹರಿಸುತ್ತೇನೆ ಎಂದು ಪ್ರಧಾನಿಯಿಂದ ಭರವಸೆ ಕೊಡಿಸಿ. ಇಲ್ಲದೇ ಇದ್ದರೆ 4ರಂದು ಬೆಂಗಳೂರು ಬಂದ್ ಮಾಡಬೇಕಾಗುತ್ತದೆ. ನಮಗೆ ಸ್ಪಷ್ಟವಾದ ಭರವಸೆ ಕೊಡಿಸಬೇಕು. ಶನಿವಾರ ಮಧ್ಯಾಹ್ನದ ತನಕ ಕಾಯುತ್ತೇವೆ. ಮಧ್ಯಾಹ್ನದ ಒಳಗಡೆ ಭರವಸೆ ಸಿಗದೇ ಹೋದರೆ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ವಾಟಾಳ್ ನಾಗರಾಜ್ ಬಿಜೆಪಿಗೆ ಡೆಡ್‍ಲೈನ್ ನೀಡಿದ್ದರು.

     

  • ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ, ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ರವಿಬೆಳಗೆರೆ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಪತ್ರಕರ್ತ ರವಿಬೆಳೆಗೆರೆ ಬಂಧನ ಹಿನ್ನೆಲೆ ವಿಕಾಸಸೌಧದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವ ವೇಳೆ ತಾಹೀರ್ ನನ್ನು ಪೊಲೀಸರು ಬಂಧಿಸಿದಾಗ ಸುಪಾರಿ ಕಿಲ್ಲರ್ ಶಶಿಧರ್ ಮುಂಡೇವಾಡಗೆ ಗನ್ ಮಾರಾಟ ಮಾಡಿದ್ದ ಎಂಬ ಮಾಹಿತಿ ಸಿಕ್ಕಿದೆ. ತಾಹೀರ್ ವೆಪನ್ ಸೆಲ್ಲರ್ ಮಾತ್ರ. ಆದರೆ ಬೆಳಗೆರೆ ಬಂಧನಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದರು.

    ಬೆಳಗೆರೆ ಅವರ ಬಂಧನ ವಿಚಾರ ಎಲ್ಲವೂ ಪೊಲೀಸ್ ಪ್ರಕ್ರಿಯೆ, ಮಾಹಿತಿ ಇದ್ದ ಕಾರಣದಿಂದಲೇ ಈ ಪ್ರಕ್ರಿಯೆ ನಡೆದಿದೆ. ಮಾಹಿತಿ ಇಲ್ಲದೇ ಏನೂ ಮಾಡಲು ಆಗುವುದಿಲ್ಲ. ಅಲ್ಲದೇ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಲ್ಯಾಬ್ ರಿಪೋರ್ಟ್ ಬರುವವರೆಗೆ ಕಾಯಬೇಕು. ಕಳೆದ ಭಾನುವಾರ ತಾಹೀರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು, ಯಾರು ಯಾರಿಗೆ ಗನ್ ಮಾರಾಟ ಮಾಡಲಾಗಿದೆ ಎಂಬುವುದರ ಬಗ್ಗೆ ಪೊಲೀಸರು ತನಿಖೆ ಮಾಡಿದಾಗ ಶಶಿಧರ್ ಮುಂಡೆವಾಡಿಗೆ ಗನ್ ಮಾರಾಟ ಮಾಡಿರುವ ಮಾಹಿತಿ ಸಿಕ್ಕಿದೆ. ಈ ಮಾಹಿತಿ ಆಧಾರಿಸಿ ಶಶಿಧರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸಿಸಿಬಿಗೆ ಕೆಲವು ಮಾಹಿತಿ ಸಿಕ್ಕಿದೆ. ಅದರಂತೆ ಇಂದಿನ ಬಂಧನ ಪ್ರಕ್ರಿಯೆ ನಡೆದಿದೆ ಎಂದು ವಿವರಿಸಿದರು.  ( ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ )

    ಅಲ್ಲದೇ ಶಶಿಧರ್ ಮುಂಡೇವಾಡಿ ಬಳಸಿದ್ದ ಗನ್ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ಬಳಿಕ ಆ ಗನ್ ಎಲ್ಲೆಲ್ಲಿ ಬಳಕೆಯಾಗಿದೆ ಎನ್ನುವ ಮಾಹಿತಿ ಲಭಿಸಲಿದೆ. ಬೆಳಗೆರೆ ಬಂಧನದ ಹಾಗೂ ತನಿಖೆ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರು ಅಥವಾ ಸಿಸಿಬಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡುತ್ತಾರೆ ಎಂದು ಹೇಳಿದರು.

    ( ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ? )

    ( ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ )

  • ಗೃಹಸಚಿವ ಸ್ಥಾನದಿಂದ ಪರಮೇಶ್ವರ್ ಔಟ್- ರಾಜೀನಾಮೆ ಅಂಗೀಕಾರಕ್ಕೆ ರಾಜ್ಯಪಾಲರಿಗೆ ಸಿಎಂ ಶಿಫಾರಸು

    ಗೃಹಸಚಿವ ಸ್ಥಾನದಿಂದ ಪರಮೇಶ್ವರ್ ಔಟ್- ರಾಜೀನಾಮೆ ಅಂಗೀಕಾರಕ್ಕೆ ರಾಜ್ಯಪಾಲರಿಗೆ ಸಿಎಂ ಶಿಫಾರಸು

    ಬೆಂಗಳೂರು: ಗೃಹ ಸಚಿವ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ.

    ಪರಮೇಶ್ವರ್ ನೀಡಿರುವ ರಾಜೀನಾಮೆ ಅಂಗೀಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ವಜೂಭಾಯ್ ವಾಲಾರಿಗೆ ಶಿಫಾರಸು ಮಾಡಿದ್ದಾರೆ. ಇದಕ್ಕೆ ಕೂಡ್ಲೇ ಸ್ಪಂದಿಸಿದ ರಾಜ್ಯಪಾಲರು, ಶುಕ್ರವಾರ ಸಂಜೆಯೇ ಪರಮೇಶ್ವರ್ ರಾಜೀನಾಮೆ ಅಂಗೀಕರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಸಚಿವ ಸ್ಥಾನ ತೊರೆಯುವಂತೆ ಸೂಚಿಸಿತ್ತು.

    ಹೀಗಾಗಿ ಇದೇ ತಿಂಗಳ 1 ರಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದ ಪರಮೇಶ್ವರ್, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಆದ್ರೆ, ವಿಧಾನಮಂಡಲ ಅಧಿವೇಶನ ಮುಗಿಯುವವರೆಗೆ ಗೃಹಮಂತ್ರಿ ಸ್ಥಾನದಲ್ಲಿ ಮಂದುವರಿಯುವಂತೆ ಸಿಎಂ ಸೂಚಿಸಿದ್ದರು. ಇದೀಗ ಪರಮೇಶ್ವರ್ ರಿಂದ ತೆರವಾಗುವ ಸ್ಥಾನಕ್ಕಾಗಿ ಕಾಂಗ್ರೆಸ್‍ನಲ್ಲಿ ಭಾರೀ ಪೈಪೋಟಿ ಏರ್ಪಟ್ಟಿದೆ.