Tag: ಗೃಹ ಸಚಿವರು

  • ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಬೆಂಗಳೂರು: ನಾನು ಎಲ್ಲಾ ಪೊಲೀಸರ ವಿರುದ್ಧ ಮಾತನಾಡಿಲ್ಲ. ಗೋ ಕಳ್ಳರಿಗೆ ಬೆಂಬಲ ನೀಡುವ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಬಗ್ಗೆ ನನಗೆ ಗೌರವ ಇದೆ. ಮೊನ್ನೆ ಗೋ ಕಳ್ಳರನ್ನು ಹಿಡಿಯಲು ಹೋದವರ ಮೇಲೆಯೇ ಕಾರು ಹತ್ತಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬದುಕುಳಿದಿರುವುದು ಪವಾಡ. ಈ ಘಟನೆಯಿಂದ ನನಗೆ ಬೇಸರವಾಗಿದೆ. ಪೊಲೀಸರ ಮೇಲೆ ನನಗೆ ಗೌರವ ಇದೆ. ಎಲ್ಲಾ ಪೊಲೀಸರು ಒಂದೇ ರೀತಿ ಇರುವುದಿಲ್ಲ. ಕರ್ನಾಟಕದಲ್ಲಿ ದಕ್ಷ ಪೊಲೀಸರೂ ಇದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಸಿಕ್ತು ಐಸ್‍ಕ್ರೀಂ ಕಪ್, ಸ್ಪೂನ್ ಸೇರಿ 77 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ!

    ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಗೆ ಸುಪಾರಿ ಪ್ರಕರಣ ಕುರಿತು ಮಾತನಾಡಿ, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯಾವ ಶಾಸಕರಿಗೂ ಹಾಗೆ ಆಗಬಾರದು. ಮುಖವಾಡ ಕಳಚುವಂತೆ ಮಾಡುತ್ತೇವೆ. ಪೊಲೀಸ್‌ ಕಾಯಿದೆ ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಶಾಸಕ ವಿಶ್ವನಾಥ್ ಅವರಿಗೆ ಎಲ್ಲಾ ಭದ್ರತೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಸೇನೆ ಕೆಲಸಕ್ಕಾಗಿ ನಕಲಿ ದಾಖಲೆ- 9 ಜನರ ಬಂಧನ

    araga jnanendra

    ಓಮಿಕ್ರಾನ್‌ ಕುರಿತು ಮಾತನಾಡಿದ ಅವರು, ಹೊಸ ವೈರಸ್ ಬಗ್ಗೆ ಆಗುವುದು ಬೇಡ ಎಚ್ಚರಿಕೆ ಬೇಕು. ಗೈಡ್‌ಲೈನ್ ಏನ್ ಬರುತ್ತೋ, ಅದಕ್ಕೆ ನಮ್ಮ ಇಲಾಖೆ ಸಹಕಾರ ನೀಡುತ್ತದೆ. ಇದು ಸಾವು, ಬದುಕಿನ ಪ್ರಶ್ನೆ. ಪೊಲೀಸರು ಏನೆಲ್ಲಾ ಮಾಡಬೇಕು ಎಂದು ನಾವು ಸೂಚಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

     

  • ಡ್ರಗ್ಸ್ ಪ್ರಕರಣ ಸಂಬಂಧ ಯಾರ ಒತ್ತಡಕ್ಕೂ ಪೊಲೀಸರು ಹಿಂಜರಿಯುವುದಿಲ್ಲ: ಅರಗ ಜ್ಞಾನೇಂದ್ರ

    ಡ್ರಗ್ಸ್ ಪ್ರಕರಣ ಸಂಬಂಧ ಯಾರ ಒತ್ತಡಕ್ಕೂ ಪೊಲೀಸರು ಹಿಂಜರಿಯುವುದಿಲ್ಲ: ಅರಗ ಜ್ಞಾನೇಂದ್ರ

    ಬೆಳಗಾವಿ: ಸ್ಯಾಂಡಲ್‍ವುಡ್ ಡ್ರಗ್ಸ್ ಕೇಸ್‍ನಲ್ಲಿ ಯಾವುದೇ ರೀತಿಯ ಒತ್ತಡಗಳು ಕೇವಲ ಊಹಾಪೋಹ. ಯಾರ ಒತ್ತಡಕ್ಕೂ ನಮ್ಮ ಪೊಲೀಸರು ಹಿಂಜರಿಯುವುದಿಲ್ಲ. ಯಾರು ಡ್ರಗ್ಸ್ ಕೇಸ್‍ನಲ್ಲಿ ಭಾಗವಹಿಸಿದ್ದರೋ ಅವರು ಶಿಕ್ಷೆ ಅನುಭವಿಸುತ್ತಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

    ನಟಿ, ನಿರೂಪಕಿ ಅನುಶ್ರೀ ಅವರ ಮೇಲೆ ರಾಜಕೀಯ ಬೆಂಬಲ ಇರುವ ಹಿನ್ನೆಲೆ ಡ್ರಗ್ಸ್ ಕೇಸ್‍ನಲ್ಲಿ ಸಾಫ್ಟ್ ಕಾರ್ನರ್ ತೋರಲಾಗುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂತಹದರಲ್ಲಿ ಯಾರು ಕೂಡ ಒತ್ತಡ ಮಾಡುವುದಿಲ್ಲ. ಡ್ರಗ್ಸ್ ಕೇಸ್‍ನಲ್ಲಿ ಬಹಳ ಕಠಿಣವಾದ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಮುಂದೆಯು ತೆಗೆದುಕೊಳ್ಳುತ್ತದೆ ಎಂದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣದ ಬಗ್ಗೆ ಅಂದು ಕಣ್ಣೀರಿಟ್ಟು ಅನುಶ್ರೀ ಹೇಳಿದ್ದೇನು?

    ಯಾವುದೇ ಕಾರಣಕ್ಕೂ ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ. ನಿಜವಾದ ಅಪರಾಧಿಗಳಾದರೆ ಅವರು ಶಿಕ್ಷೆಗೆ ಒಳಗಾಗುತ್ತಾರೆ. ಎಷ್ಟೇ ಪ್ರಭಾವಿಗಳಾದರೂ ಖಂಡಿತವಾಗಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಹೆಸರು ಕೇಳಿಬಂದಿರುವ ವಿಚಾರಕ್ಕೆ ಬಿಡುವ ಪ್ರಶ್ನೆಯೇ ಇಲ್ಲ, ಮಾಹಿತಿ ತೆಗೆದುಕೊಂಡು ಮುಂದಿನ ಕ್ರಮದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

  • ರೇಪ್ ಬಿಟ್ಟು ಕಿರುಕುಳ  ಕೇಸ್ ದಾಖಲಿಸಿದ್ದಾರೆ: ವಿ.ಎಸ್.ಉಗ್ರಪ್ಪ

    ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ: ವಿ.ಎಸ್.ಉಗ್ರಪ್ಪ

    ಮೈಸೂರು: ಅತ್ಯಾಚಾರ ನಡೆದ್ರೂ ಐಪಿಸಿ ಸೆಕ್ಷನ್ 376ರ ಅಡಿ ಯಾಕೆ ಕೇಸ್ ಯಾಕೆ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ. ರಾಜ್ಯದ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ವಿ.ಎಸ್ ಉಗ್ರಪ್ಪ, ತಿಂಗಳಲ್ಲಿ ಮೈಸೂರಿನಲ್ಲಿ ಒಂದು ಶೂಟೌಟ್ ಆಗಿದೆ. ಮೂರು ಮರ್ಡರ್ ಗಳಾಗಿವೆ, ಮೂರು ದರೋಡೆ, 16 ಕಳ್ಳತನಗಳಾಗಿವೆ. ಸರಸ್ವತಿಪುರಂನಲ್ಲಿ ಇವತ್ತು ಬಾಲಕಿ ಅತ್ಯಾಚಾರ ಕೇಸ್ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅತ್ಯಾಚಾರ ನಡೆದ್ರೂ 376ರ ಅಡಿ ಕೇಸ್ ಯಾಕೆ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ? ಹಿಂದೆ ವಿಬ್ ಗಯಾರ್ ಶಾಲೆಯಲ್ಲಿ ಪ್ರಕರಣ ಆಗಿತ್ತು ಆಗ ನೀವು ಏನಂತ ಬಾಯಿ ಬಡಿದುಕೊಳ್ತಿದ್ರಿ. ಈಗ ಮೈಸೂರಿನ ಹೊಣೆ ಯಾರು ಹೊರಬೇಕು ಎಂದು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಮೈಸೂರಿನಲ್ಲಿ ಮಂಗಳವಾರ ನಡೆದಿರುವ ಕೃತ್ಯ ಅಮಾನವೀಯವಾದುದು. ದೆಹಲಿಯ ನಿರ್ಭಯಾ ಕೇಸ್ ರೀತಿಯಲ್ಲಿ, ತೆಲಂಗಾಣದ ರೆಡ್ಡಿ ಕೇಸ್ ರೀತಿಯಲ್ಲಿ ಹೀನ ಕೃತ್ಯವಿದು. ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ರಿಂಗ್ ರಸ್ತೆಯಲ್ಲಿ ಲಲಿತಾದ್ರಿ ಪಾರ್ಕ್ ಇದೆ. ಆ ಪಾರ್ಕ್‍ನಲ್ಲಿ ಯುವತಿ ಮತ್ತು ಅಕೆಯ ಸ್ನೇಹಿತ ಮಾತನಾಡುತ್ತಿರುತ್ತಾರೆ. ಅಲ್ಲಿಂದ ಯುವತಿ ಎಳೆದೋಯ್ದು ಕೃತ್ಯವೆಸಗಿದ್ದಾರೆ. ಸಂಜೆ 7:30 ರಿಂದ 10:30 ರವರೆಗೆ ನಡೆದಿದೆ. ನಂತರ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಣ್ಣುಮಗಳ ದೇಹದ ಮೇಲೆ ಗಂಭೀರ ಗುರುತುಗಳಿವೆ, ಗಾಯಗಳಾಗಿವೆ. ಪೈಶಾಚಿಕವಾಗಿ ಕೃತ್ಯವೆಸಗಿದ್ದಾರೆ. ಘಟನೆ ನಡೆದು 24 ಗಂಟೆಯಾದರೂ ಕೇಸ್ ದಾಖಲಾಗಿರಲಿಲ್ಲ ನಂತರ ಹಾಲನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗುತ್ತದೆ. ಮೋದಿ ನಿರ್ಭಯ ಕೇಸ್ ವೇಳೆ ಏನು ಮಾಡಿದ್ರಿ? ನಂದಿತಾ ಸಾವು ಗೃಹ ಸಚಿವರ ಕ್ಷೇತ್ರದಲ್ಲಿ ನಡೆದಿತ್ತು ಆಗ ನೀವು ಏನು ಮಾಡಿದ್ದಿರಿ ಇದರ ಬಗ್ಗೆ ನೀವು ಉತ್ತರಿಸಿ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಮೈಸೂರು ಪ್ರಕರಣ: ಕಾಂಗ್ರೆಸ್

  • ಆಡಳಿತ ಪಕ್ಷದ ಶಾಸಕನಿಗೆ ಮಾಸ್ಕ್ ದಂಡ – ಗರಂ ಆಗಿ ಬೊಮ್ಮಾಯಿಗೆ ಪತ್ರ

    ಆಡಳಿತ ಪಕ್ಷದ ಶಾಸಕನಿಗೆ ಮಾಸ್ಕ್ ದಂಡ – ಗರಂ ಆಗಿ ಬೊಮ್ಮಾಯಿಗೆ ಪತ್ರ

    ಬೆಂಗಳೂರು: ಮೂಡಿಗೆರೆಯ ಶಾಸಕ ಎಂಪಿ ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಪೊಲೀಸರು ಮಾಸ್ಕ್ ದಂಡ ವಿಧಿಸಿದ್ದಾರೆ.

    ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಅವರಿಗೆ ಮಾಸ್ಕ್ ದಂಡವನ್ನು ಶೇಷಾದ್ರಿಪುರಂ ಸಂಚಾರಿ ಪೊಲೀಸರು ಹಾಕಿದ್ದರು. ಇದರಿಂದ ಕೆರಳಿದ ಶಾಸಕರು ಗೃಹ ಸಚಿವರಿಗೆ ದೂರು ನೀಡಿದ್ದಾರೆ.

    ಪೊಲೀಸರು ವಿನಾಕಾರಣ ಮಾಸ್ಕ್ ಧರಿಸಿ ಕಾರಿನಲ್ಲಿದ್ದಾಗ ಕಾರಿನ ಟಿಂಟ್ ಗ್ಲಾಸ್ ಇಳಿಸುವಂತೆ ಒತ್ತಡ ಹಾಕಿ 250 ರೂ ದಂಡ ಕಟ್ಟಿಸಿಕೊಂಡಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?
    ನಾನು ಬಾಡಿಗೆ ಕಾರಿನಲ್ಲಿ ಶೇಷಾದ್ರಿಪುರಂ ಕಡೆಯಿಂದ ಶಾಸಕರ ಭವನಕ್ಕೆ ತೆರಳುತ್ತಿದ್ದಾಗ ವಿನಾ ಕಾರಣ ಕಾರು ನಿಲ್ಲಿಸಿ ಕಾರಿನ ಟಿಂಟ್ ಗ್ಲಾಸ್ ಇಳಿಸಿ ಮಾಸ್ಕ್ ಹಾಕಿದ್ದರೂ 250 ರೂ ದಂಡ ವಿಧಿಸಿದ್ದಾರೆ. ಆ ಸಂದರ್ಭ ನಾನು ಜವಾಬ್ದಾರಿಯುತ ವ್ಯಕ್ತಿಯಾಗಿ ಮರು ಮಾತನಾಡದೆ ದಂಡ ಕಟ್ಟಿರುತ್ತೇನೆ. ಆದರೆ ವಿನಾ ಕಾರಣ ಕಟ್ಟಿಸಿಕೊಂಡಿರುವುದು ಆಕ್ಷೇಪಾರ್ಹ. ಹೀಗಾಗಿ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಲ್ಲಿ ಪತ್ರದ ಮುಖಾಂತರ ದೂರು ನೀಡಿದ್ದಾರೆ.