Tag: ಗೃಹ ಸಚಿವ ಪರಮೇಶ್ವರ್

  • ABVP ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿ ರಾಜಕೀಯಗೊಳಿಸಬೇಡಿ – ಎಬಿವಿಪಿ ಸ್ಪಷ್ಟನೆ

    ABVP ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿ ರಾಜಕೀಯಗೊಳಿಸಬೇಡಿ – ಎಬಿವಿಪಿ ಸ್ಪಷ್ಟನೆ

    ಬೆಂಗಳೂರು: ಎಬಿವಿಪಿ (ABVP) ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್ (Parameshwar) ಭಾಗಿಯಾಗಿದ್ದನ್ನು ರಾಜಕೀಯಗೊಳಿಸಬೇಡಿ ಎಂದು ಎಬಿವಿಪಿ ಸಂಘಟನೆ ಮನವಿ ಮಾಡಿಕೊಂಡಿದೆ.

    ಈ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ: ಪರಮೇಶ್ವರ್‌

    ಎಬಿವಿಪಿ ಸ್ಪಷ್ಟನೆ ಏನು?
    ಕರ್ನಾಟಕದ ಕಡಲ ತೀರದ ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಪ್ರಯುಕ್ತ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ರಥಯಾತ್ರೆಯನ್ನು ಹಮ್ಮಿಕೊಂಡಿದೆ. ಪೋರ್ಚುಗೀಸರ ವಿರುದ್ಧ ಹೋರಾಡಿದ ಈ ನೆಲದ ಸ್ವಾಭಿಮಾನ ಮತ್ತು ಸಾರ್ವಭೌಮತ್ವವನ್ನು ರಕ್ಷಿಸಿದ ಕೀರ್ತಿ ರಾಣಿ ಅಬ್ಬಕ್ಕಗೆ ಸಲ್ಲುತ್ತದೆ.

    ವಸಾಹತುಶಾಹಿಗಳ ವಿರುದ್ಧದ ಹೋರಾಟಕ್ಕೆ ಮುನ್ನುಡಿ ಬರೆದ ರಾಣಿ ಅಬ್ಬಕ್ಕನನ್ನು ಸ್ಮರಿಸಿ, ಅವಳ ಹೋರಾಟದ ಐತಿಹಾಸಿಕ ಮಹತ್ವವನ್ನು ಸಾರುವುದು ಈ ರಥಯಾತ್ರೆಯ ಉದ್ದೇಶ. ಈ ರಥಯಾತ್ರೆಯೂ ದಿನಾಂಕ 2025ರ ಸೆ.9ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಸಾಗುವಾಗ, ಅದೇ ಮಾರ್ಗದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ ಗೃಹ ಮಂತ್ರಿಗಳು ಪುಷ್ಪಾರ್ಚನೆ ಮಾಡಿ ರಥಯಾತ್ರೆಗೆ ಶುಭ ಹಾರೈಸಿ, ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಬೆನ್ನು ತಟ್ಟಿದ್ದಾರೆ.

    ರಾಜ್ಯದ ಸಾಂವಿಧಾನಿಕ ಹುದ್ದೆಯಲ್ಲಿರುವ ಗೃಹ ಸಚಿವರ ಸದ್ಭಾವನೆಯನ್ನು ರಾಜಕೀಯಗೊಳಿಸುವ ಯಾವುದೇ ರೀತಿಯ ಪ್ರಯತ್ನಕ್ಕೆ ವಿದ್ಯಾರ್ಥಿ ಪರಿಷತ್ ವಿರೋಧ ವ್ಯಕ್ತಪಡಿಸುತ್ತದೆ. ವಿದ್ಯಾರ್ಥಿ ಪರಿಷತ್‌ನ ಈ ಕಾರ್ಯಕ್ರಮವು ಯಾವುದೇ ರಾಜಕೀಯ ಪಕ್ಷಕ್ಕೆ, ಜಾತಿ ಮತ, ಪಂಥಗಳಿಗೆ ಸೀಮಿತವಾದುದಲ್ಲ. ಈ ರಥಯಾತ್ರೆಯು ಭಾರತದ ವೀರ ಪರಂಪರೆಯ ಸ್ಮರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವುದಾಗಿರುತ್ತದೆ ಎಂಬುದನ್ನು ವಿದ್ಯಾರ್ಥಿ ಪರಿಷತ್ ಸ್ಪಷ್ಟಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸಿ.ಟಿ ರವಿ ಸಂಸ್ಕೃತಿ ಬಗ್ಗೆ ಜನರಿಗೆ ಗೊತ್ತಿದೆ – ಡಿಕೆಶಿ

  • ಧರ್ಮಸ್ಥಳ ಕೇಸ್‌ಲ್ಲಿ SIT ತನಿಖೆಗೆ ಸಮಯ ನಿಗದಿ ಮಾಡಿಲ್ಲ: ಪರಮೇಶ್ವರ್

    ಧರ್ಮಸ್ಥಳ ಕೇಸ್‌ಲ್ಲಿ SIT ತನಿಖೆಗೆ ಸಮಯ ನಿಗದಿ ಮಾಡಿಲ್ಲ: ಪರಮೇಶ್ವರ್

    ಬೆಂಗಳೂರು: ಧರ್ಮಸ್ಥಳ ಕೇಸ್‌ಲ್ಲಿ ಎಸ್‌ಐಟಿ (SIT) ತನಿಖೆ ಪೂರ್ಣ ಮಾಡಲು ಸಮಯ ನಿಗದಿ ಮಾಡಿಲ್ಲ. ಎಸ್‌ಐಟಿ ತನಿಖೆ ನಡೆಸುವಾಗಲೇ ಎನ್‌ಐಎ (NIA) ತನಿಖೆಯೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ತನಿಖೆ ತ್ವರಿತವಾಗಿ ಆಗಬೇಕು ಎಂದು ಹೇಳಿದ್ರೆ ಎಸ್‌ಐಟಿ ಅವರಿಗೆ ಅವರದ್ದೇ ಆದ ತೀರ್ಮಾನ ಇರುತ್ತದೆ. ಎಸ್‌ಐಟಿ ಅವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯೋವರೆಗೂ ಅವರು ಯಾವ ವಿಚಾರಗಳನ್ನು ಹೇಳುವ ಹಾಗೇ ಇಲ್ಲ. ನಾವು ಹೇಳೋ ಹಾಗೇ ಇಲ್ಲ. ತನಿಖೆ ತ್ವರಿತವಾಗಿ ಆಗಲಿ ಅಂತ ಹೇಳಬಹುದು. ಎಸ್‌ಐಟಿಗೆ ಟರ್ಮ್ಸ್ ಆಫ್ ರೆಫರೆನ್ಸ್ ಕೊಟ್ಟಿದ್ದೇವೆ ಅದನ್ನ ಮಾಡ್ತಾರೆ. ಅದರಲ್ಲಿ ಅವರಿಗೆ ಬೇರೆ ಬೇರೆ ಮಾಹಿತಿ ಸಿಗುವ ಹಾಗಿದ್ದರೆ ಅವರೇ ತನಿಖೆ ಮಾಡಿಕೊಳ್ತಾರೆ. ಅದಕ್ಕೆ ನಾವು ಯಾವುದೇ ಡೈರೆಕ್ಷನ್ಸ್ ಕೊಡೋದಿಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ದುರ್ಮರಣ

    ಸೌಜನ್ಯ ತಾಯಿ ಕೊಟ್ಟಿರುವ ದೂರು ತನಿಖೆ ಆಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದನ್ನ ಎಸ್‌ಐಟಿ ಅವರು ಡಿಸೈಡ್ ಮಾಡ್ತಾರೆ. ಇದಕ್ಕೂ ಅದಕ್ಕೂ ಲಿಂಕ್ ಇದೆಯಾ? ಇಲ್ಲವಾ? ಹಾಗೂ ತನಿಖೆ ಮಾಡಬೇಕಾ? ಬೇಡವಾ? ಅಂತ ಎಸ್‌ಐಟಿ ನಿರ್ಧರಿಸಿ ತನಿಖೆ ಮಾಡುತ್ತದೆ. ನಾವು ಅದನ್ನ ಹೇಳೋಕೆ ಸಾಧ್ಯವಿಲ್ಲ. ಧರ್ಮಸ್ಥಳ ಕೇಸ್ (Dharmasthala Case) ತನಿಖೆ ಇಷ್ಟೇ ದಿನದಲ್ಲಿ ಮಾಡಿ ಅಂತ ಹೇಳಿಲ್ಲ. ಆದಷ್ಟೂ ಬೇಗ ತನಿಖೆ ಮಾಡಿ ಅಂತ ಹೇಳಿದ್ದೇವೆ. ಸಮಯ ನಿಗದಿ ಮಾಡೋಕೆ ಆಗೋದೇ ಇಲ್ಲ. ತನಿಖೆ ಹೇಗೆ ಹೋಗುತ್ತದೆ ಅಂತ ಯಾರಿಗೂ ಗೊತ್ತಿಲ್ಲ. ಬೇಗ ಮುಗಿದರೆ ಬೇಗ ವರದಿ ಕೊಡ್ತಾರೆ. ತನಿಖೆ ಪೂರ್ತಿ ಮುಗಿಯುವವರೆಗೂ ಅವರು ತನಿಖೆ ಮಾಡುತ್ತಲೇ ಇರುತ್ತಾರೆ ಎಂದು ಹೇಳಿದ್ದಾರೆ.

    ಬಿಜೆಪಿ-ಜೆಡಿಎಸ್‌ನಿಂದ ಧರ್ಮಸ್ಥಳ ಯಾತ್ರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತನಿಖೆ ಹೀಗೆ ಆಗುತ್ತೆ, ಆಗಬೇಕು, ನಾಳೆ ತನಿಖೆ ಮುಗಿಸಿ ಕೊಡಿ ಎಂದು ಹೇಳೋಕೆ ಆಗಲ್ಲ. ಯಾವುದೇ ತನಿಖೆಯಾದರೂ ಕೂಡ ನಾವು ಸಮಯ ನಿಗದಿ ಮಾಡಲು ಸಾಧ್ಯವಿಲ್ಲ. ರಾಜಕೀಯಕ್ಕೆ ತಿರುಗಿದರೂ ಕೂಡ ನಾವು ಎಸ್‌ಐಟಿ ಅವರಿಗೆ ಮುಂದಿನ ವಾರ ಮುಗಿಸಿ, ವರದಿ ಕೊಡಿ ಎಂದು ಹೇಳೋಕಾಗಲ್ಲ ಎಂದಿದ್ದಾರೆ.

    ಎನ್‌ಐಎ ತನಿಖೆಗೆ ಕೊಡಿ ಎಂಬ ವಿಪಕ್ಷಗಳ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ತನಿಖೆಗೆ ಕೊಡಬೇಕಾದರೂ ಈಗ ಇಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ನಡೆಯೋ ಬಗ್ಗೆ ಯಾರದ್ದು ತಕರಾರಿಲ್ಲ. ಎಸ್‌ಐಟಿ ತನಿಖೆ ಎಲ್ಲರೂ ಸ್ವಾಗತ ಮಾಡಿದ್ದಾರೆ. ಧರ್ಮಸ್ಥಳದ ಹೆಗ್ಗಡೆ ಅವರು ತನಿಖೆ ಸ್ವಾಗತ ಮಾಡಿದ್ದಾರೆ. ತನಿಖೆ ನಡೆಯುತ್ತಿದೆ ಈ ಸಮಯದಲ್ಲಿ ಬೇರೆ ಏಜೆನ್ಸಿಯಿಂದ ತನಿಖೆ ಆಗತ್ಯವಿಲ್ಲ. ಹೀಗಾಗಿ ಸದ್ಯಕ್ಕೆ ಎನ್‌ಐಎ ತನಿಖೆಗೆ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

    ಈವರೆಗೂ ಪ್ರಕರಣದಲ್ಲಿ ಯಾರನ್ನು ಬಂಧಿಸದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತನಿಖೆಗಳು ನಾನು, ನೀವು, ಬೇರೆಯವರು ಹೇಳಿದ ಹಾಗೆ ನಡೆಯುವುದಿಲ್ಲ. ಎಸ್‌ಐಟಿ ಅವರಿಗೆ ಅವರದ್ದೇ ಆದ ತನಿಖೆಯ ಕ್ರಮಗಳಿವೆ. ಅದನ್ನ ಅವರು ಮಾಡಿಕೊಳ್ತಾರೆ. ಸ್ಯಾಂಪಲ್ ತಂದು ಎಫ್‌ಎಸ್‌ಎಲ್‌ಗೆ ಕೊಟ್ಟಿದ್ದಾರೆ. ಅದರ ಮಾಹಿತಿ ಪಡೆಯಬೇಕು. ಅದರ ರಿಪೋರ್ಟ್ ಬರಬೇಕು. ಅದರ ಮೇಲೆ ಏನೇನು ಇರುತ್ತದೆ ಗೊತ್ತಿಲ್ಲ ಎಂದರು. ಇನ್ನೂ ದ್ವಾರಕನಾಥ್ ಎನ್‌ಐಎ, ಸಿಬಿಐಗೆ ಕೊಟ್ಟರೆ ಕೇಸ್ ಮುಚ್ಚಿ ಹೋಗುತ್ತದೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ಎಲ್ಲರ ಹೇಳಿಕೆಗೆ ನಾನು ಪ್ರತಿಕ್ರಿಯೆ ಮಾಡುವುದಿಲ್ಲ ಎಂದಿದ್ದಾರೆ.ಇದನ್ನೂ ಓದಿ: ದೆಹಲಿಯ ಕಲ್ಕಾಜಿ ದೇಗುಲದಲ್ಲಿ ಪ್ರಸಾದ ವಿಚಾರಕ್ಕೆ ಗಲಾಟೆ – 15 ವರ್ಷಗಳಿಂದ ಸೇವಕನಾಗಿದ್ದ ವ್ಯಕ್ತಿಯ ಹತ್ಯೆ

  • ಪರಮೇಶ್ವರ್‌ಗೆ ಮುಜುಗರ: ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ಗರಂ

    ಪರಮೇಶ್ವರ್‌ಗೆ ಮುಜುಗರ: ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ಗರಂ

    ಬೆಂಗಳೂರು: ದರ್ಶನ್ ವಿಚಾರದಲ್ಲಿ ಗೃಹ ಇಲಾಖೆಗೆ ಮತ್ತೆ ಮತ್ತೆ ಮುಖಭಂಗ ಆಗುತ್ತಿರುವ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ (Home Minister Parameshwar) ಮುಜುಗರಕ್ಕೆ ಒಳಗಾಗಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ದರ್ಶನ್ (Actor Darshan) ಐಷಾರಾಮಿ ರಾಜಾತಿಥ್ಯ ಪ್ರಕರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ (CM) ಸೂಚನೆ ನೀಡಿರುವ ವಿಚಾರವಾಗಿ ಪ್ರಶ್ನೆ ಕೇಳಿದ್ದಕ್ಕೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು. ಈ ರೀತಿ ಬಂದು ಪ್ರಶ್ನೆ ಕೇಳಿದರೆ ನಾನು ಮಾತಾಡಲ್ಲ ಎಂದು ಗರಂ ಆಗಿ ಉತ್ತರಿಸಿದ್ದಾರೆ.ಇದನ್ನೂ ಓದಿ: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ: ರಾಮಲಿಂಗಾರೆಡ್ಡಿ

    ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (ADGP Alok Mohan), ಗೃಹ ಇಲಾಖೆ ಕಾರ್ಯದರ್ಶಿ ಉಮಾಶಂಕರ್ ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಸಭೆ ನಡೆಸಿದ್ದಾರೆ. ಜೈಲಿನಲ್ಲಿರುವ ಲೋಪದೋಷಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಚರ್ಚೆ ನಡೆಸಿದ್ದಾರೆ.

    ಚುಟುಕು ಸಭೆ ನಡೆಸಿದ ಬಳಿಕ ವಿಧಾನಸೌಧದಿಂದ ಹೊರಟ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ನೇರವಾಗಿ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದರು.ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು : ದರ್ಶನ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

  • ಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ

    ಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ

    ಚಿಕ್ಕಮಗಳೂರು: ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ ಹಿನ್ನೆಲೆಯಲ್ಲಿ ಸಿಎಂ ಎಸ್‍ಪಿ ಸುಧೀರ್‍ಕುಮಾರ್ ರೆಡ್ಡಿ ಅವರಿಗೆ ಜೋರು ಮಾಡಿದ್ದು ಸರಿ ಇದೆ ಅಂತಾ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಕಪ್ಪು ಬಾವುಟ ತೋರಿಸುವ ಬದಲು ಕಲ್ಲು ಎಸೆದಿದ್ದರೆ ಏನಾಗ್ತಿತ್ತು? ಹೀಗಾಗಿ ಸಿಎಂ ಎಸ್‍ಪಿಗೆ ಜೋರು ಮಾಡಿದ್ದು ಸರಿ. ಈ ವಿಚಾರದ ಬಗ್ಗೆ ಈಗಾಗಲೇ ಮಂಡ್ಯ ಎಸ್‍ಪಿ ಬಳಿ ಮಾತನಾಡಿದ್ದೇನೆ. ಅಲ್ಲದೇ ಘಟನೆ ನಡೆದ ಸಂದರ್ಭ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ರು.

    ಇದನ್ನೂ ಓದಿ: ನಿನಗ್ಯಾರು ಐಪಿಎಸ್ ಕೊಟ್ಟಿದ್ದು?- ಮಂಡ್ಯ ಎಸ್‍ಪಿಗೆ ಸಿಎಂ ಸಾರ್ವಜನಿಕ ಬೈಗುಳ

    ಶೆಟ್ಟರ್ ಹೇಳಿಕೆಗೆ ತಿರುಗೇಟು: ಉಪಚುನಾವಣೆಯಲ್ಲಿ ಗೆದ್ದು ಐಸಿಯುನಲ್ಲಿದ್ದ ಕಾಂಗ್ರೆಸ್ ಸರ್ಕಾರ ಚೇತರಿಸಿಕೊಂಡಿದೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ ಪರಂ, ಜಗದೀಶ್ ಶೆಟ್ಟರ್ ಬಾಯಿಗೆ ಬಂದಂತೆ ಮಾತನಾಡಬಾರದು. 2013ರಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿತ್ತು. 20 ಉಪಚುನಾವಣೆಗಳು ನಡೆದವು. ಅವರು ಸಹ ಹಣ ಹಾಗೂ ಹೆಂಡದ ಹೊಳೆ ಹರಿಸಿದ್ದಾರೆ ಅಂತ ನಾವು ಹೇಳಬೇಕಾಗುತ್ತದೆ. ಇದು ಮತದಾರರು ನೀಡಿರುವ ತೀರ್ಪು. ಸರ್ಕಾರ ಹಾಗೂ ಸಿಎಂ ಅಭಿವೃದ್ಧಿ ಕಾರ್ಯಗಳೇ ನಮ್ಮ ಗೆಲುವಿಗೆ ಕಾರಣ ಅಂದ್ರು.

    ಉಪಚುನಾವಣೆ ಫಲಿತಾಂಶ 2018ರ ಸೆಮಿಫೈನಲ್ ಎಂದು ಯಡಿಯೂರಪ್ಪ ಹೇಳಿದ್ರು. ಆದರೇ ಅವರು ಸೆಮಿಫೈನಲ್‍ನಲ್ಲಿ ಸೋತಿದಾರೆ. ಸೆಮಿಫೈನಲ್‍ನಲ್ಲಿ ಸೋತವರು ಎಲ್ಲಿಗೆ ಹೋಗುತ್ತಾರೆ? ಆದರೂ 150 ಸೀಟ್ ಗೆಲ್ಲುತ್ತಾರೆ ಅಂತ ಹೇಳ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಅಂತಾ ಪರಂ ವಿಶ್ವಾಸ ವ್ಯಕ್ತಪಡಿಸಿದ್ರು.

    https://www.youtube.com/watch?v=EPh2F90UOc8