Tag: ಗೆಹ್ರೈಯಾನ್

  • ‘ಗೆಹ್ರೈಯಾನ್’ ಸಕ್ಸಸ್ ಸೆಲೆಬ್ರೇಟ್ ಮಾಡಲು ಬೆಂಗಳೂರಿಗೆ ಬರ್ತಿದ್ದಾರೆ ದೀಪಿಕಾ!

    ‘ಗೆಹ್ರೈಯಾನ್’ ಸಕ್ಸಸ್ ಸೆಲೆಬ್ರೇಟ್ ಮಾಡಲು ಬೆಂಗಳೂರಿಗೆ ಬರ್ತಿದ್ದಾರೆ ದೀಪಿಕಾ!

    ಮುಂಬೈ: ಕನ್ನಡದ ಬೆಡಗಿ, ಬಾಲಿವುಡ್ ಸೂಪರ್ ಸ್ಟಾರ್ ದೀಪಿಕಾ ಪಡುಕೋಣೆ ತಮ್ಮ ‘ಗೆಹ್ರೈಯಾನ್’ ಸಿನಿಮಾ ಸಕ್ಸಸ್‍ನನ್ನು ಕುಟುಂಬದ ಜೊತೆ ಆಚರಿಸಲು ಬೆಂಗಳೂರಿಗೆ ಬರುತ್ತಿದ್ದಾರೆ.

    ‘ಗೆಹ್ರೈಯಾನ್’ ಸಿನಿಮಾವನ್ನು ‘ಶಕುನ್ ಬಾತ್ರಾ’ ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಸಿದ್ಧಾಂತ್ ಚತುರ್ವೇದಿ, ಅನನ್ಯ ಪಾಂಡೆ ಮತ್ತು ಧೈರ್ಯ ಕರ್ವಾ ನಟಿಸಿದ್ದರು. ಅಲ್ಲೆದೆ ಈ ಸಿನಿಮಾದಲ್ಲಿ ದೀಪಿಕಾ ಭಿನ್ನ ಪಾತ್ರವನ್ನು ನಿರ್ವಹಿಸಿದ್ದು, ಪ್ರೇಕ್ಷಕರು ಯಾವ ರೀತಿ ತನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ಕುತೂಹಲ ಅವರಲ್ಲಿಯೂ ಇತ್ತು. ಇದೇ ತಿಂಗಳು ‘ಗೆಹ್ರೈಯಾನ್’ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಸಹ ಆಗಿತ್ತು. ಇದನ್ನೂ ಓದಿ: ಮತ್ತೆ ಕಂಗನಾಗೆ ಬಂತು ಕಂಟಕ – ‘ಲಾಕ್‍ಆಪ್’ ವಿರುದ್ಧ ಕಾಪಿರೈಟ್

     

    View this post on Instagram

     

    A post shared by Deepika Padukone (@deepikapadukone)

    ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾ ತಾರೆಯರು ಮತ್ತು ವಿಮರ್ಶಕರಿಂದ ದೀಪಿಕಾ ಅಭಿನಯಕ್ಕೆ ಮತ್ತು ಸಿನಿಮಾ ಬಗ್ಗೆ ಒಳ್ಳೆಯ ಅಭಿಪ್ರಾಯ ಬಂತು. ವಿಮರ್ಶಕರು, ದೀಪಿಕಾ ಅಭಿನಯಿಸಿದ ರೀತಿಯಲ್ಲಿ ಯಾರೂ ಆ ಪಾತ್ರವನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂದು ಪ್ರಸಂಸಿದ್ದಾರೆ. ಅದಕ್ಕೆ ದೀಪಿಕಾ ಈ ಖುಷಿಯನ್ನು ಕುಟುಂಬದ ಜೊತೆ ಸಂಭ್ರಮಿಸಲು ನಿರ್ಧರಿಸಿದ್ದಾರೆ.

    ವೀಕೆಂಡ್ ನಲ್ಲಿ ತಮ್ಮ ಕುಟುಂಬದ ಜೊತೆಗೆ ಸಿನಿಮಾ ಸಕ್ಸಸ್ ಸೆಲೆಬ್ರೇಟ್ ಮಾಡಿ, ನಂತರ ಮತ್ತೆ ಅವರು ತಮ್ಮ ಕೆಲಸಕ್ಕೆ ಹಿಂದುರುಗಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜ್ಯೂ.ಎನ್‍ಟಿಆರ್ ಜೊತೆ ನಟಿಸಲು ಇಷ್ಟ ಎಂದ ಪದ್ಮಾವತಿ

    ‘ಗೆಹ್ರೈಯಾನ್’ ಸಿನಿಮಾದಲ್ಲಿ ದೀಪಿಕಾ ಬೋಲ್ಡ್ ಮತ್ತು ಮೆಚ್ಯುರಿಟಿ ಅಭಿನಯದಿಂದ ಸಿನಿಪ್ರಿಯರಿಗೆ ಮತ್ತಷ್ಟು ಹತ್ತಿರವಾಗಿದ್ದು, ಮತ್ತೆ ಯಾವ ರೀತಿ ಪಾತ್ರ ಮಾಡುತ್ತಾರೆ ಎಂದು ಪ್ರೇಕ್ಷಕರಲ್ಲಿಯೂ ಕುತೂಹಲವಿದೆ.

  • ಜ್ಯೂ.ಎನ್‍ಟಿಆರ್ ಜೊತೆ ನಟಿಸಲು ಇಷ್ಟ ಎಂದ ಪದ್ಮಾವತಿ

    ಜ್ಯೂ.ಎನ್‍ಟಿಆರ್ ಜೊತೆ ನಟಿಸಲು ಇಷ್ಟ ಎಂದ ಪದ್ಮಾವತಿ

    ಮುಂಬೈ: ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ದಕ್ಷಿಣ ಭಾರತದ ಸೂಪರ್ ಸ್ಟಾರ್ ಜ್ಯೂನಿಯರ್ ಎನ್‍ಟಿಆರ್ ಜೊತೆ ನಟಿಸಲು ಆಸೆಯನ್ನು ವ್ಯಕ್ತಪಡಿಸಿದರು.

    ದೀಪಿಕಾ ಪಡುಕೋಣೆ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಕೆಲಸ ಮಾಡಲು ಬಯಸುವ ನಟರು ಮತ್ತು ನಿರ್ದೇಶಕರ ಪಟ್ಟಿಯನ್ನು ಬಹಿರಂಗಪಡಿಸಿದ್ದಾರೆ. ತಾನು ಜ್ಯೂನಿಯರ್ ಎನ್‌ಟಿಆರ್‌ನೊಂದಿಗೆ ನಟಿಸಲು ಇಷ್ಟ ಪಡುತ್ತೇನೆ. ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಜೊತೆಯೂ ನಟಿಸಲು ಇಷ್ಟ ಎಂದು ತಿಳಿಸಿದರು. ಇದನ್ನೂ ಓದಿ: ಕೊನೆಗೂ ನಮ್ಮ ಕನಸು ನನಸಾಗಿದೆ: ಆಲಿಯಾ ಹೀಗೆಂದಿದ್ದೇಕೆ?

    ನಾನು ಎಲ್ಲರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಅದರಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಆದರೆ ನಾನು ಜೂನಿಯರ್ ಎನ್‍ಟಿಆರ್ ಮತ್ತು ಅಲ್ಲು ಅರ್ಜುನ್ ಅವರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಅದರಲ್ಲಿಯೂ ನಾನು ಜೂನಿಯರ್ ಎನ್‍ಟಿಆರ್ ಅವರೊಂದಿಗೆ ನಟಿಸಲು ಇಷ್ಟಪಡುತ್ತೇನೆ. ಆದ ವ್ಯಕ್ತಿತ್ವ ನನಗೆ ಇಷ್ಟವಾಯ್ತು ಎಂದು ಹೊಗಳಿದರು.

    ನಿರ್ದೇಶಕರ ಬಗ್ಗೆ ಮಾತನಾಡಿದ ಅವರು, ‘ಯೇ ಜವಾನಿ ಹೈ ದೀವಾನಿ’ ಸಿನಿಮಾದ ನಿರ್ದೇಶಕ ‘ಅಯಾನ್ ಮುಖರ್ಜಿ’ ಅವರೊಂದಿಗೆ ಮತ್ತೆ ಕೆಲಸ ಮಾಡಲು ಬಯಸುತ್ತೇನೆ. ಅದೇ ರೀತಿ ನಾನು ರಾಜಮೌಳಿ ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ ಎಂದು ತಿಳಿಸಿದರು.

    ಶೂಟಿಂಗ್ ಬಗ್ಗೆ ವಿವರಿಸಿದ ಅವರು, ನಾನು ಕಲಿಯುವ ಮನಸ್ಸಿನಿಂದ ಸೆಟ್‍ಗೆ ಹೋಗುತ್ತೇನೆ. ಪ್ರತಿಯೊಂದು ಅನುಭವಗಳನ್ನು ಎಂಜಾಯ್ ಮಾಡಲು ಬಯಸುತ್ತೇನೆ. ಎಲ್ಲರಿಗಿಂತ ನನಗೆ ಚೆನ್ನಾಗಿ ಗೊತ್ತು ಎಂದು ನಾನು ಆಲೋಚನೆ ಮಾಡುವುದಿಲ್ಲ. ಆ ರೀತಿ ನಾನು ಸೆಟ್‍ಗೆ ಹೋಗುವುದಿಲ್ಲ. ನಾನು ಹೆಚ್ಚು ಹೊಸ ರೀತಿ ಪ್ರಯೋಗ ಮಾಡುವ ಗುಂಪಿನಿಂದ ಕಲಿಯಲು ಬಯಸುತ್ತೇನೆ. ‘ಗೆಹ್ರೈಯಾನ್’ ಸಿನಿಮಾ ಪೂರ್ತಿ ಹೊಸ ತಂಡ. ಈ ತಂಡದ ಜೊತೆ ಕೆಲಸ ಮಾಡಲು ಖುಷಿಯಾಗುತ್ತೆ ಎಂದು ಅನುಭವವನ್ನು ಹಂಚಿಕೊಂಡರು. ಇದನ್ನೂ ಓದಿ: ಅಪ್ಪು ಜೊತೆಗೆ ಕೊನೆ ಕ್ಷಣದ ವೀಡಿಯೋ ಹಂಚಿಕೊಂಡ ನವರಸ ನಾಯಕ!

    ಪ್ರಸ್ತುತ, ದೀಪಿಕಾ ತಮ್ಮ ಮುಂಬರುವ ‘ಗೆಹ್ರೈಯಾನ್’ ಸಿನಿಮಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾವನ್ನು ‘ಶಕುನ್ ಬಾತ್ರಾ’ ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಸಿದ್ಧಾಂತ್ ಚತುರ್ವೇದಿ, ಅನನ್ಯ ಪಾಂಡೆ ಮತ್ತು ಧೈರ್ಯ ಕರ್ವಾ ಸಹ ನಟಿಸಿದ್ದಾರೆ. ಈ ಸಿನಿಮಾ ಇಂದು ಓಟಿಟಿಯಲ್ಲಿ ರಿಲೀಸ್ ಆಗುತ್ತಿದೆ.

  • ಇಂಟಿಮೇಟ್ ಸೀನ್ ಮಾಡಲು ರಣವೀರ್ ಅನುಮತಿ ಇತ್ತಾ? – ಖಡಕ್ ಉತ್ತರ ಕೊಟ್ಟ ದೀಪಿಕಾ

    ಇಂಟಿಮೇಟ್ ಸೀನ್ ಮಾಡಲು ರಣವೀರ್ ಅನುಮತಿ ಇತ್ತಾ? – ಖಡಕ್ ಉತ್ತರ ಕೊಟ್ಟ ದೀಪಿಕಾ

    ಮುಂಬೈ: ‘ಗೆಹ್ರೈಯಾನ್’ ಸಿನಿಮಾದಲ್ಲಿ ಇಂಟಿಮೇಟ್ ಸೀನ್ ಮಾಡಲು ರಣವೀರ್ ಸಿಂಗ್ ಅನುಮತಿ ನೀಡಿದ್ರಾ ಎಂಬ ಪ್ರಶ್ನೆಗೆ ಬಾಲಿವುಡ್ ಪದ್ಮವತಿ ದೀಪಿಕಾ ಪಡುಕೋಣೆ ಖಡಕ್ ಉತ್ತರ ಕೊಟ್ಟಿದ್ದಾರೆ.

    ‘ಗೆಹ್ರೈಯಾನ್’ ಸಿನಿಮಾದಲ್ಲಿ ದೀಪಿಕಾ ಅವರು ತನ್ನ ಸಹನಟನ ಜೊತೆ ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸೀನ್ ನೋಡಿದ ಪ್ರೇಕ್ಷಕರು ರಣವೀರ್ ಇದಕ್ಕೆ ಒಪ್ಪಿಕೊಂಡ್ರಾ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ದೀಪಿಕಾ ‘ಅಯ್ಯೋ! ಇದು ತುಂಬಾ ಮೂರ್ಖತನದ ಪ್ರಶ್ನೆಯಾಗಿದೆ’ ಎಂದು ಉತ್ತರಿಸಿದ್ದು, ಈ ಸಿನಿಮಾ ಸಂಬಂಧಗಳ ಸಂಕೀರ್ಣತೆಯ ಕುರಿತು ಚಿತ್ರೀಕರಿಸಲಾಗಿದೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ‘ಅಮ್ಮನ ಮಡಿಲು ಸ್ವರ್ಗ’ – ಅಮ್ಮನ ಜೊತೆ ಫೋಟೋ ಶೇರ್ ಮಾಡಿದ ಸಲ್ಲು

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಕಮೆಂಟ್ ಗಳನ್ನು ಓದುವುದಿಲ್ಲ. ನಾವು ಅದಕ್ಕೆ ಪ್ರತಿಕ್ರಿಯಿಸುತ್ತಿರುವುದು ಮೂರ್ಖತನ. ನಾನು ಈ ಸಿನಿಮಾ ಮಾಡಿದಕ್ಕೆ ಅವರು ಎಂದೂ ವಿರೋಧ ವ್ಯಕ್ತಪಡಿಸಿಲ್ಲ. ನಾನು ಕಮೆಂಟ್‍ಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

    ರಣವೀರ್ ಸಿಂಗ್ ಪ್ರತಿಕ್ರಿಯೆಯ ಬಗ್ಗೆ ಹೇಳಿದ ಅವರು, ರಣವೀರ್ ಸಿನಿಮಾ ಬಗ್ಗೆ ಅತ್ಯಂತ ಹೆಮ್ಮೆಪಡುತ್ತಾರೆ. ನನ್ನ ಅಭಿನಯದ ಬಗ್ಗೆ ತುಂಬಾ ಹೆಮ್ಮೆಪಡುತ್ತಾರೆ ಎಂದು ಉತ್ತರಿಸಿದ್ದಾರೆ.

    ‘ಗೆಹ್ರೈಯಾನ್’ ಚಿತ್ರದ ಟ್ರೇಲರ್ ಬಿಡುಗಡೆಯಾದಾಗ, ರಣವೀರ್ ಸಿಂಗ್ ಸಿನಿಮಾ ಪೋಸ್ಟ್ ಹಂಚಿಕೊಂಡಿದ್ದರು. ಈ ವೇಳೆ ದೀಪಿಕಾ ಅವರನ್ನು ರಣವೀರ್ ಹೊಗಳಿದ್ದರು. ಇನ್‍ಸ್ಟಾದಲ್ಲಿ ಫೋಟೋ ಶೇರ್ ಮಾಡಿದ ರಣವೀರ್ ‘ಮೂಡಿ, ಸೆಕ್ಸಿ ಮತ್ತು ಇಂಟೆನ್ಸ್!’ ಎಂದು ಬರೆದು ಪೋಸ್ಟ್ ಮಾಡಿಸದ್ದರು.

     

    View this post on Instagram

     

    A post shared by Ranveer Singh (@ranveersingh)

    ‘ಗೆಹ್ರೈಯಾನ್’ ಸಿನಿಮಾವನ್ನು ‘ಧರ್ಮಾ ಪ್ರೊಡಕ್ಷನ್ಸ್ ಮತ್ತು ವಯಾಕಾಮ್ 18 ಸ್ಟುಡಿಯೋಸ್ ಜಂಟಿಯಾಗಿ ನಿರ್ಮಾಣ ಮಾಡಿತ್ತು. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಜೊತೆಗೆ ಸಿದ್ಧಾಂತ್ ಚತುರ್ವೇದಿ, ಅನನ್ಯ ಪಾಂಡೆ ಮತ್ತು ಧೈರ್ಯ ಕರ್ವಾ ಕೂಡ ನಟಿಸಿದ್ದಾರೆ. ಫೆಬ್ರವರಿ 11 ರಂದು ಈ ಸಿನಿಮಾ ಓಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: ತಲೈವಾನ 169ನೇ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್

    ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರು 2018ರಲ್ಲಿ ಮದುವೆಯಾಗಿದ್ದು, ಆರು ವರ್ಷಗಳಿಗೂ ಹೆಚ್ಚು ಕಾಲ ಡೇಟಿಂಗ್ ಮಾಡಿದ್ದಾರೆ. ಇವರಿಬ್ಬರನ್ನು ಬಾಲಿವುಡ್ ನಲ್ಲಿ ಪವರ್ ಕಪಲ್ ಎಂದೇ ಕರೆಯುತ್ತಾರೆ. ಇವರು ಹಲವು ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.

    ಇತ್ತೀಚೆಗೆ ಬಿಡುಗಡೆಯಾದ ಕಬೀರ್ ಖಾನ್ ನಿರ್ದೇಶನದ ’83’ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಭಾರತದ ಮಾಜಿ ನಾಯಕ ಕಪಿಲ್ ದೇವ್ ಮತ್ತು ದೀಪಿಕಾ ಪಡುಕೋಣೆ ರೋಮಿ ಭಾಟಿಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.