Tag: ಗೇಟ್ ಪರೀಕ್ಷೆ

  • ಜುಲೈ 13,14ಕ್ಕೆ ಪಿಜಿಸಿಇಟಿ ಪರೀಕ್ಷೆ: ಕೆಇಎ

    ಜುಲೈ 13,14ಕ್ಕೆ ಪಿಜಿಸಿಇಟಿ ಪರೀಕ್ಷೆ: ಕೆಇಎ

    ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ (ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಇ, ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET-24) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತೀರ್ಮಾನಿಸಿದೆ.

    ಎಂ.ಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ ಪ್ರಕರಣ – ಚಾಲಕನೇ ಮಾಸ್ಟರ್ ಮೈಂಡ್

    ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

    ಗೇಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿಸಿಇಟಿ-24ಕ್ಕೆ ಹಾಜರಾಗುವ ಅಗತ್ಯ ಇಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಸಂಕಷ್ಟ ನಿವಾರಣೆಗಾಗಿ ಗಾಣಗಾಪುರದ ದತ್ತನ ಮೊರೆ ಹೋದ ರೇವಣ್ಣ

  • GATE 2022: ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

    GATE 2022: ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

    ನವದೆಹಲಿ: ಕೊರೊನಾದಿಂದಾಗಿ 2022ರ ಇಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ (GATE) ಮುಂದೂಡಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪರೀಕ್ಷೆಯನ್ನು ನಿಗದಿಯಂತೆ ನಡೆಸಲು ಆದೇಶಿಸಿದೆ.

    ಫೆಬ್ರವರಿ 5 ರಂದು GATE ಪರೀಕ್ಷೆ ನಿಗದಿಯಾಗಿತ್ತು. ಈ ಪರೀಕ್ಷೆಯನ್ನು ಕೊರೊನಾ ಕಾರಣದಿಂದ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ ರಮಣ, ಎ.ಎಸ್ ಬೋಪಣ್ಣ ಮತ್ತು ಹೀಮಾ ಕೊಹ್ಲಿ ನೇತೃತ್ವದ ಪೀಠವು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಯನ್ನು ಮೂಂದೂಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ನಿರಾಕರಿಸಿ ನಿಗದಿಯಂತೆ ಪರೀಕ್ಷೆ ನಡೆಸಲು ತಿಳಿಸಿದೆ. ಇದನ್ನೂ ಓದಿ: ನಿಲ್ದಾಣವಿದ್ದರೂ ಸ್ಟಾಪ್ ಕೊಡಲ್ಲ: ಕೆಎಸ್‌ಆರ್‌ಟಿಸಿ ವಿರುದ್ಧ ಕಾಲೇಜು ವಿದ್ಯಾರ್ಥಿಗಳ ಆಕ್ರೋಶ

    ಈಗಾಗಲೇ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ಸೆಂಟರ್‌ಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ. ಇದೀಗ ಕೊನೆ ಕ್ಷಣದಲ್ಲಿ ಪರೀಕ್ಷೆಯನ್ನು ಮುಂದೂಡಿದರೆ, ಅದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದು ಸರಿಯಲ್ಲ. ಇದೀಗ ನಿಗದಿಯಾಗಿರುವ ದಿನದಂತೆ ಕೊರೊನಾ ನಿಯಮಗಳನ್ನು ಪಾಲನೆ ಮಾಡಿ ಪರೀಕ್ಷೆ ನಡೆಯಲಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ದನ್ನೂ ಓದಿ: ಹಿಜಬ್ ವಿವಾದ- ಹೈಕೋರ್ಟ್ ತೀರ್ಪಿನ ನಂತರ ಕ್ರಮ: ಬಿಸಿ ನಾಗೇಶ್

    GATE ಪರೀಕ್ಷೆ ಇಂಜಿನಿಯರಿಂಗ್ ಪದವಿಯ ಸಬ್ಜೆಕ್ಟ್, ವಿಜ್ಞಾನ ವಿಷಯದ ಬಗೆಗಿನ ಸ್ನಾತಕೋತ್ತರ ಅಧ್ಯನದ ಪ್ರವೇಶಕ್ಕಾಗಿ GATE ಪರೀಕ್ಷೆಯನ್ನು ನಡೆಸಲಾಗುತ್ತದೆ. ಈಗಾಗಲೇ ಕಾನ್‍ಪುರದ Indian Institute of Technology (IIT) ಫೆ.4 ರಿಂದ 13ರ ವರೆಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಸಿದ್ಧಪಡಿಸಿದೆ.