Tag: ಗೊಂದಲ

  • ರಾಮ್ ಚರಣ್ ಮೊದಲ ಮಗು ಜನನ: ಊಹಾಪೋಹಗಳಿಗೆ ತೆರೆ

    ರಾಮ್ ಚರಣ್ ಮೊದಲ ಮಗು ಜನನ: ಊಹಾಪೋಹಗಳಿಗೆ ತೆರೆ

    ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಹಲವು ದಿನಗಳಿಂದ ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದಾರೆ.

    ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ

    ಹಾಲಿವುಡ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ರಾಮ್ ಚರಣ್ ಅಮೆರಿಕಾಗೆ ಹೋಗಿದ್ದರು. ಅಲ್ಲಿ ವಾಹಿನಿಯೊಂದರ ಸಂದರ್ಶನದಲ್ಲಿ ಮೊದಲ ಮಗುವಿನ ಜನನದ ಕುರಿತು ಮಾತನಾಡಿದ್ದಾರೆ. ಪತ್ನಿಯ ಹೆರಿಗೆಗಾಗಿ ಸಿದ್ಧರಾಗಿ ಎಂದು ವೈದ್ಯರೊಬ್ಬರಿಗೆ ಹೇಳಿದ್ದರು. ಈ ಕಾರಣದಿಂದಾಗಿಯೇ ಗೊಂದಲ ಮೂಡಿತ್ತು. ಅಮೆರಿಕಾದಲ್ಲೇ ಉಪಾಸನ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು.

    ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ.

  • ಸ್ಥಳೀಯ ಶಾಸಕರು ಅನರ್ಹ, ಸಚಿವರಿಲ್ಲ – ದಸರಾ ಗಜಪಯಣ ಚಾಲನೆಗೆ ಶುರುವಾಯ್ತು ಗೊಂದಲ

    ಸ್ಥಳೀಯ ಶಾಸಕರು ಅನರ್ಹ, ಸಚಿವರಿಲ್ಲ – ದಸರಾ ಗಜಪಯಣ ಚಾಲನೆಗೆ ಶುರುವಾಯ್ತು ಗೊಂದಲ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ದಸರಾ ಗಜಪಯಣಕ್ಕೆ ನಾಳೆಯಿಂದ ಚಾಲನೆ ನೀಡಬೇಕಿದೆ. ಆದರೆ ಒಂದೆಡೆ ಜಿಲ್ಲೆಯ ಸ್ಥಳೀಯ ಶಾಸಕರು ಅನರ್ಹಗೊಂಡಿದ್ದಾರೆ, ಇನ್ನೊಂದು ಕಡೆ ಈ ಭಾಗದಲ್ಲಿ ಯಾವ ಸಚಿವರು ಇಲ್ಲ. ಹೀಗಾಗಿ ದಸರಾ ಗಜಪಯಣಕ್ಕೆ ಸ್ವಾಗತ, ಚಾಲನೆ ನೀಡುವವರು ಯಾರು ಎಂಬ ಪ್ರಶ್ನೆ ಹುಟ್ಟುಕೊಂಡಿದೆ.

    ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿದೆ. ಪ್ರತಿ ವರ್ಷದಂತೆ ಈ ವರ್ಷ ದಸರಾ ನಡೆಸಲು ಸಾಧ್ಯವಾಗುವುದಿಲ್ಲ ಎಂಬ ಅನುಮಾನ ಹುಟ್ಟುಕೊಂಡಿದೆ. ಯಾಕೆಂದರೆ ಪ್ರತಿ ಬಾರಿ ದಸರಾ ಗಜಪಯಣಕ್ಕೆ ಉಸ್ತವಾರಿ ಸಚಿವರು ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಎದುರಾಗಿದೆ.

    ಪದ್ಧತಿ ಪ್ರಕಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿ ಗೇಟ್ ಬಳಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ಶಾಸಕರು, ಸಚಿವರು ಇಲ್ಲದ ಕಾರಣಕ್ಕೆ ಈ ಬಾರಿ ಹೇಗೆ ಗಜಪಯಣಕ್ಕೆ ಚಾಲನೆ ನೀಡಬೇಕು? ಸರ್ಕಾರ ಇದ್ದರೂ ಅಧಿಕಾರಿಗಳೇ ಚಾಲನೆ ಕೊಡಬೇಕೇ? ಅಥವಾ ಬೇರೆ ಯಾವ ವ್ಯವಸ್ಥೆ ಮಾಡಬೇಕು ಎಂಬ ಚರ್ಚೆ ಆರಂಭವಾಗಿದೆ.