Tag: ಗೊ.ರು ಚನ್ನಬಸಪ್ಪ

  • ಗೊ.ರು.ಚನ್ನಬಸಪ್ಪಗೆ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿ

    ಗೊ.ರು.ಚನ್ನಬಸಪ್ಪಗೆ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿ

    ತುಮಕೂರು: ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡಮಾಡುವ 2024ನೇ ಸಾಲಿನ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ (Siddagangashree Award) ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ (Go Ru Channabasappa) ಆಯ್ಕೆ ಆಗಿದ್ದಾರೆ.

    ಪ್ರಶಸ್ತಿಯು 1 ಲಕ್ಷ ರೂ. ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಸಿದ್ಧಗಂಗಾ ಮಠದಲ್ಲಿ ಜನವರಿ 21ರಂದು ನಡೆಯುವ ಶಿವಕುಮಾರ ಸ್ವಾಮೀಜಿ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇದನ್ನೂ ಓದಿ: 8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದ ಗೊ.ರು.ಚ ಅವರು ಜಾನಪದ ಹಾಗೂ ಶರಣ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಹೆಚ್.ಶಿವರುದ್ರಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಗಣರಾಜ್ಯೋತ್ಸವಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯ ಆಯ್ಕೆ – ವಿಶೇಷತೆ ಏನು?

  • ಆಂಗ್ಲ ಮಾಧ್ಯಮ ಶಾಲೆಗಳು ತೆರೆಯುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು: ಗೊ.ರು.ಚನ್ನಬಸಪ್ಪ ಹಕ್ಕೊತ್ತಾಯ

    ಆಂಗ್ಲ ಮಾಧ್ಯಮ ಶಾಲೆಗಳು ತೆರೆಯುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು: ಗೊ.ರು.ಚನ್ನಬಸಪ್ಪ ಹಕ್ಕೊತ್ತಾಯ

    – ಒಬ್ಬ ವಿದ್ಯಾರ್ಥಿ ಇದ್ದರೂ ಶಾಲೆ ಮುಚ್ಚದಂತೆ ಕ್ರಮವಹಿಸಿ ಎಂದು ಸರ್ಕಾರಕ್ಕೆ ಸಲಹೆ

    ಮಂಡ್ಯ: ಖಾಸಗಿ ಶಾಲೆಗಳು, ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಅನುಮತಿ ನೀಡುವುದನ್ನು ಸರ್ಕಾರ ನಿಲ್ಲಿಸಬೇಕು. ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು ಎಂದು ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು ಚನ್ನಬಸಪ್ಪ ಹಕ್ಕೊತ್ತಾಯ ಮಂಡಿಸಿದರು.ಇದನ್ನೂ ಓದಿ: ಮಂದಿರ-ಮಸೀದಿ ವಿವಾದ ಹೆಚ್ಚಳಕ್ಕೆ RSS ಕಳವಳ; ಇದು ಒಪ್ಪಲಾಗದು ಎಂದ ಮೋಹನ್ ಭಾಗವತ್

    ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ ಶತಮಾನ ಪೂರೈಸಿದೆ. 87ನೇ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸಂತಸವಾಗಿದೆ. ಮಂಡ್ಯ ಜಿಲ್ಲೆ ರಾಜಕೀಯವಾಗಿ ಜಾಗೃತವಾಗಿರುವ ಹಾಗೂ ಸೌಹಾರ್ದತೆ ಉಳಿಸಿಕೊಂಡಿರುವ ಜಿಲ್ಲೆಯಾಗಿದೆ. ಆರ್ಥಿಕವಾಗಿ ಸಮೃದ್ದವಾಗಿದ್ದು, ಸಾಂಸ್ಕೃತಿಕವಾಗಿ ಶ್ರೀಮಂತವಾಗಿ, ಸಾಹಿತ್ಯಕವಾಗಿ ಹೆಸರು ಮಾಡಿರುವ ಜಿಲ್ಲೆಯಾಗಿದೆ. ರಾಜಕೀಯ, ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದೆ. ಮಂಡ್ಯದಲ್ಲಿ ಅನ್ಯ ಭಾಷಿಗರ ಪ್ರಮಾಣ, ಪ್ರಭಾವ ಬಹಳ ಕಡಿಮೆಯಿದೆ. ಸಮ್ಮೇಳನ ಅಧ್ಯಕ್ಷತೆಗೆ ನಾನು ಅರ್ಹನೋ ಎಂಬುವುದು ಗೊತ್ತಿಲ್ಲ. ಅನಿರೀಕ್ಷವಾಗಿ ಬಂದ ಅವಕಾಶವನ್ನು ಹಿಂಜರಿಕೆಯಿಲ್ಲದೆ ನಿರ್ವಹಿಸಿದ್ದೇನೆ. ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದೀರಿ ಎಂದಾಗ ನಾನೇ ಬೆರಗಾಗಿ ಹೋಗಿದ್ದೆ. ಇಷ್ಟು ವಯಸ್ಸಾದವರನ್ನು ಎಂದೂ ಸಮ್ಮೇಳನಾಧ್ಯಕ್ಷರಾಗಿ ಮಾಡಿಲ್ಲ. ಗಡುವು ತೀರಿದ ನನ್ನನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿದ್ದಾರೆ. ಅವಕಾಶ ಕೊಟ್ಟ ಸರ್ಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.

    ಇದೇ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಮುಂದೆ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನಿಟ್ಟು ಮಾತನಾಡಿದ ಅವರು, ಕನ್ನಡ ಭಾಷೆ ಸಮೃದ್ಧ, ಶ್ರೀಮಂತವಾಗಿ ಬೆಳೆಯುತ್ತಿದೆ. ಕನ್ನಡ ವಿಸ್ತಾರವಾಗುತ್ತಿದೆ, ಆದರೆ ಬಳಕೆ ಆಗುತ್ತಿಲ್ಲ. ಬಳಸಿದಷ್ಟು ನಮ್ಮ ಕನ್ನಡ ಭಾಷೆ ಬೆಳೆಯುತ್ತದೆ. ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಇರಬೇಕು. ನಾಡಿನ ಪ್ರತಿ ಮಕ್ಕಳಿಗೆ ಶಿಕ್ಷಣ ದೊರಕಿಸಲು ಕ್ರಮವಹಿಸಬೇಕು. ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಖಾಸಗಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ತೆರೆಯಲು ಅನುಮತಿಗೆ ಸರ್ಕಾರ ತಡೆ ನೀಡಬೇಕು. ಗ್ರಾಮೀಣ ಭಾಗದ ಶಾಲೆಗಳಿಗೆ ಸೂರುಗಳು ಇಲ್ಲವಾಗಿದೆ. ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ಕನ್ನಡ ಸರ್ಕಾರಿ ಶಾಲೆ ಮುಚ್ಚಲಾಗುತ್ತಿದೆ. ಒಬ್ಬ ವಿದ್ಯಾರ್ಥಿ ಇದ್ದರೂ ಶಾಲೆ ಮುಚ್ಚದಂತೆ ಸರ್ಕಾರ ಕ್ರಮವಹಿಸಬೇಕು. ಭಾರತಕ್ಕೆ ಮಾದರಿಯಾಗುವ ಶಿಕ್ಷಣ ಕ್ರಮವನ್ನು ಜಾರಿ ಮಾಡಬೇಕು. ಆಗ ಸಮಾನ ಶಿಕ್ಷಣ ದೊರೆಯುತ್ತದೆ ಎಂದು ಸಲಹೆ ನೀಡಿದರು.ಇದನ್ನೂ ಓದಿ: ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

  • 87ನೇ ಕನ್ನಡ ಸಾಹಿತ್ಯ ಸಮ್ಮೇಳನ – ಮಂಡ್ಯಕ್ಕೆ ಸಮ್ಮೇಳನಾಧ್ಯಕ್ಷರ ಆಗಮನ, ಗಣ್ಯರಿಂದ ಸ್ವಾಗತ

    87ನೇ ಕನ್ನಡ ಸಾಹಿತ್ಯ ಸಮ್ಮೇಳನ – ಮಂಡ್ಯಕ್ಕೆ ಸಮ್ಮೇಳನಾಧ್ಯಕ್ಷರ ಆಗಮನ, ಗಣ್ಯರಿಂದ ಸ್ವಾಗತ

    – ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆ ಪ್ರಭಾವಕ್ಕೆ ಒಳಗಾಗಿಲ್ಲ: ಗೊ.ರು.ಚನ್ನಬಸಪ್ಪ

    ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (87th Kannada Sahitya Sammelana) ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ ಹಿನ್ನೆಲೆ ಇಂದು (ಗುರುವಾರ) ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ (Go. Ru. Channabasappa) ಅವರು ಮಂಡ್ಯಕ್ಕೆ ಆಗಮಿಸಿದ್ದಾರೆ.

    ಮಂಡ್ಯಕ್ಕೆ ಆಗಮಿಸುತ್ತಿದ್ದಂತೆ ಸಚಿವ ಎನ್. ಚಲುವರಾಯಸ್ವಾಮಿ (Chaluvaraya Swamy), ಶಾಸಕರಾದ ಗಣಿಗ ಪಿ.ರವಿಕುಮಾರ್, ರಮೇಶ್ ಬಂಡಿಸಿದ್ದೇಗೌಡ, ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಡಿಸಿ ಡಾ. ಕುಮಾರ್‌ ಅವರು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದರು. ಇದೇ ವೇಳೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಬಳಿಕ ಚನ್ನಬಸಪ್ಪನವರು ಡಿಸಿ ಡಾ.ಕುಮಾರ್ ನಿವಾಸಕ್ಕೆ ತೆರಳಿದರು.

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಮ್ಮೇಳನಾಧ್ಯಕ್ಷ ಗೊ.ರು ಚನ್ನಬಸಪ್ಪ, ಕನ್ನಡ ತವರು ನೆಲದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಖುಷಿ ತಂದಿದೆ. ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿಲ್ಲ. ಆದ್ರೆ ಕನ್ನಡ ಹಲವು ಸಮಸ್ಯೆಗಳನ್ನ ಎದುರಿಸುತ್ತಿದೆ. ಇದರ ಬಗ್ಗೆ ಚಿಂತನೆ ಆಗಬೇಕು. ಆಧುನಿಕತೆಯ ಪ್ರಭಾವ ಕನ್ನಡದ ಮೇಲಿನ ಅಭಿಮಾನ ಕಡಿಮೆಯಾಗಲು ಕಾರಣ ಎಂದರು.

    ಮಂಡ್ಯ ಜನರ ಪ್ರೀತಿ ವಿಶ್ವಾಸ ಕಂಡು ಕಣ್ತುಂಬಿಕೊಂಡಿದ್ದೇನೆ. ಎಲ್ಲ ಕಾರ್ಯಕಲಾಪದಲ್ಲಿ ಕನ್ನಡ ಬಂಧುಗಳು ಭಾಗವಹಿಸಬೇಕು. ನನ್ನನ್ನ ಪ್ರೀತಿಯಿಂದ ಆಯ್ಕೆ ಮಾಡಿದ್ದಾರೆ. ಇಂತಹ ಉತ್ಸವದಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸುವುದು ಹೆಮ್ಮೆಯ ವಿಚಾರ, ನಿಜಕ್ಕೂ ತುಂಬಾ ಸಂತೋಷವಾಗಿದೆ. ಈ ಬಾರಿ ಸಮಕಾಲಿನ ಸಮಸ್ಯೆ ಬಗ್ಗೆ ಗೋಷ್ಠಿಗಳು ನಡೆಯಲಿವೆ. ನಾನು ಅಧ್ಯಕ್ಷನಾಗಿ ಮಾಡುವುದು ಏನು ಇಲ್ಲ. ಕಸಾಪ ಅಧ್ಯಕ್ಷರು ಕೇಳಿದರೆ ಸಲಹೆ ಕೊಡಬಹುದು ಎಂದು ನುಡಿದರು.

    ಶುಕ್ರವಾರದಿಂದ ಮಂಡ್ಯದಲ್ಲಿ 87ನೇ ನುಡಿ ಜಾತ್ರೆ:
    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜಾಗಿದೆ. ಮೂರು ದಶಕಗಳ ಬಳಿಕ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ ಸಕಲ ಸಿದ್ಧತೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ತೊಡಗಿದೆ.

    ಮಂಡ್ಯದ ಹೊರ ವಲಯದಲ್ಲಿರುವ ಸ್ಯೋಂಜೋ ಆಸ್ಪತ್ರೆಯ ಹಿಂಭಾದ 130 ಎಕರೆ ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಲೇ 80 ಎಕರೆ ಪ್ರದೇಶದಲ್ಲಿ 3 ವಿವಿಧ ವೇದಿಕೆಗಳ ನಿರ್ಮಾಣ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂ ಮಾದರಿಯಲ್ಲಿ ಪ್ರಧಾನ ವೇದಿಕೆಯ ಮುಖ್ಯ ದ್ವಾರ ಸಿದ್ಧಪಡಿಸಿದ್ದು ನೋಡುಗರ ಗಮನ ಸೆಳೆಯುತ್ತಿದೆ. ಪ್ರಧಾನ ವೇದಿಕೆಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಲಾಗಿದೆ. ಇಲ್ಲಿ 50,000ಕ್ಕೂ ಅಧಿಕ ಮಂದಿ ಕೂರಲು ಆಸಗಳ ವ್ಯವಸ್ಥೆ ಮಾಡಲಾಗಿದೆ. ಮಳೆ ಹಾಗೂ ಬಿಸಿಲಿನಿಂದ ರಕ್ಷಣೆಗಾಗಿ ಜರ್ಮನ್ ಟೆಂಟ್ ಹಾಕಲಾಗಿದೆ. ವೇದಿಕೆ ಸೇರಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.

    ಇನ್ನೂ ಸಾಹಿತ್ಯಾಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ನಿರ್ಮಾಣವಾಗಿದ್ದು, 350ಕ್ಕೂ ಹೆಚ್ಚು ವಾಣಿಜ್ಯ ಸ್ಟಾಲ್‌ಗಳು ರೆಡಿಯಾಗಿವೆ. ಸಾಹಿತ್ಯ ಸಮ್ಮೇಳನಕ್ಕೆ ರಂಗು ತರಲು ಮಂಡ್ಯ ನಗರದಲ್ಲಿ ದಸರಾ ಮಾದರಿಯ ದೀಪಾಲಂಕಾರವನ್ನು ಸಹ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಮ್ಮೇಳನದ ಅಧ್ಯಕ್ಷ ಗೋ.ರು.ಚನ್ನಬಸಪ್ಪ ಅವರನ್ನು ಸುಮಾರು 6 ಕಿಮೀ ಜಾನಪದ ಕಲಾತಂಡಗಳ ಮೆರವಣಿಗೆ ಮೂಲಕ ಸಮ್ಮೇಳದ ವೇದಿಕೆಗೆ ಕರೆಯಲಾಗುತ್ತದೆ. ನಂತರ ಸಿಎಂ ಸಿದ್ದರಾಮಯ್ಯ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

    4,000 ಪೊಲೀಸ್ ಭದ್ರತೆ
    ಮೂರು ದಿನಗಳ ಕನ್ನಡ ನುಡಿ ಜಾತ್ರೆ ಉತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದಕ್ಷಿಣ ವಲಯ ಡಿಐಜಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 14 ಜಿಲ್ಲೆಗಳಿಂದ ಸುಮಾರು 4,000 ಅಧಿಕಾರಿಗಳು ಹಾಗೂ ಸಿಬ್ಬಂದಿ ಭದ್ರತೆಗೆ ನೇಮಕ ಮಾಡಲಾಗಿದೆ. ಎಸ್ಪಿ 4, ಎಎಸ್ಪಿ 6, ಡಿವೈಎಸ್‌ಪಿ 21, ಪಿಐ 63, ಪಿಎಸ್‌ಐ 190, ಎಎಸ್‌ಐ 215, ಪಿಸಿ 1700, ಮಹಿಳಾ ಪೇದೆ 165, ಗೃಹರಕ್ಷಕ ದಳ 1,000, ಕೆಎಸ್ಆರ್‌ಪಿ 12, ಡಿಎಆರ್ 13 ನಿಯೋಜಿಸಲಾಗಿದೆ.

  • 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆ

    87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆ

    ಬೆಂಗಳೂರು: ಮಂಡ್ಯದಲ್ಲಿ (Mandya) ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada Sahithya Sammelana) ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು ಚನ್ನಬಸಪ್ಪ (ಗೊ.ರು.ಚ) (Go.Ru Channabasappa) ಅವರು ಆಯ್ಕೆಯಾಗಿದ್ದಾರೆ.

    ಜಾನಪದ ವಿದ್ವಾಂಸರಾದ ಇವರು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಮೊದಲಾದ ಕೃತಿಗಳನ್ನು ಅವರು ರಚಿಸಿದ್ದಾರೆ. ಗೊ.ರು ಚನ್ನಬಸಪ್ಪ ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (1993), ಮಂಡ್ಯ (1994) ಮತ್ತು ಮುಧೋಳದಲ್ಲಿ (1995)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

    ಸಂಘಟಕರಾಗಿದ್ದ ಗೊ.ರು ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ ಮೇ 18 1930 ರಂದು ಜನಿಸಿದರು. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದ ಇವರು 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಸರ್ಕಾರಿ ಸೇವೆಯ ಜೊತೆಗೆ ವಿವಿಧ ಸಂಘ ಸಂಸ್ಥೆಗಳಿಗಾಗಿ ದುಡಿದಿದ್ದಾರೆ.

    ಗಾಂಧೀ ಗ್ರಾಮದಲ್ಲಿ ಸಮಾಜ ಶಿಕ್ಷಣವನ್ನು ಪಡೆದ ಅವರು ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲಿ ಕೆಲಸ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗಳಿಗೆ ಹೆಡ್‍ಕ್ವಾಟರ್ಸ್‌ ಕಮಿಷನರ್ ಆಗಿ ಕೆಲಸಮಾಡಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.