Tag: ಗೋಕರ್ಣ ಮಹಾಬಲೇಶ್ವರ

  • ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅರೆಬರೆ ವಸ್ತ್ರ ಧರಿಸಿದವರ ಸಂಚಾರಕ್ಕೆ ನಿಷೇಧ!

    ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅರೆಬರೆ ವಸ್ತ್ರ ಧರಿಸಿದವರ ಸಂಚಾರಕ್ಕೆ ನಿಷೇಧ!

    ಕಾರವಾರ: (Karwar) ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna) ರಥ ಬೀದಿಯಲ್ಲಿ ಸಂಚರಿಸಬೇಕು ಎಂದರೆ ಇನ್ಮುಂದೆ ರಸ್ತೆಯಲ್ಲಿ ಅರೆಬರೆ ಬಟ್ಟೆ ಧರಿಸುವಂತಿಲ್ಲ.

    ಹೌದು, ಹೀಗೆಂದು ದೇವಸ್ಥಾನದ ಪಕ್ಕದಲ್ಲಿ ಇರುವ ರಥ ಬೀದಿಯಿಂದ ಪಶ್ಚಿಮ ದ್ವಾರದವರೆಗೆ ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸಲು ನಿಷೇಧ ವಿಧಿಸಿ ಮಹಾಬಲೇಶ್ವರ ದೇವಸ್ಥಾನದ (Mahabaleshwara Temple) ಆಡಳಿತ ಕಮಿಟಿ ಸೂಚನಾ ಫಲಕ ಅಳವಡಿಸಿದೆ. ಕಮಿಟಿಯಿಂದ ಸೂಚನಾ ಫಲಕದ ಬ್ಯಾನರ್ ಅಳವಡಿಕೆಗೆ ಜನರಿಂದ ವಿರೋಧ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಶಿಕ್ಷಕನಿಗೆ ಬಿತ್ತು ಧರ್ಮದೇಟು

    ರಥ ಬೀದಿಯಿಂದ ಕಡಲ ತೀರ ಹಾಗೂ ಇತರೆ ಸ್ಥಳಗಳಿಗೆ ಸಾರ್ವಜನಿಕರು ತೆರಳುವ ಪ್ರದೇಶ ಇದಾಗಿದ್ದು, ಗೋಕರ್ಣ ಕೇವಲ ಧಾರ್ಮಿಕ ಕ್ಷೇತ್ರ ಮಾತ್ರ ಆಗಿರದೇ ಪ್ರವಾಸಿ ಸ್ಥಳವೂ ಸಹ ಆಗಿದೆ. ಹೀಗಿರುವಾಗ ದೇವಸ್ಥಾನದ ಒಳಗೆ ಮಾತ್ರ ಸೀಮಿತವಾಗಿದ್ದ ವಸ್ತ್ರ ಸಂಹಿತೆ (Dress Code) ಇದೀಗ ಸಾರ್ವಜನಿಕ ಪ್ರದೇಶಕ್ಕೂ ಅಳವಡಿಸಿರುವುದು ವಿವಾದ ಹುಟ್ಟುಹಾಕಿದೆ.

    ಉಸ್ತುವಾರಿ ಸಮಿತಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ನೇತೃತ್ವದ ಎಂಟು ಜನರಿರುವ ಸಮಿತಿ ಇದಾಗಿದ್ದು, ಕುಮಟಾ ಎಸಿ, ಎಸ್‌ಪಿ ,ಡಿಸಿಗಳು ಸಹ ಕಮಿಟಿಯಲ್ಲಿದ್ದಾರೆ. ಆದರೆ ಜಿಲ್ಲಾಧಿಕಾರಿಗಳಿಗೆ ಖುದ್ದು ಕರೆಮಾಡಿ ಕೇಳಿದಾಗ ಅವರಿಗೂ ಸಹ ಮಾಹಿತಿ ಇರಲಿಲ್ಲ. ಇದಲ್ಲದೆ ಯಾವುದೇ ಆದೇಶ ಹೊರಡಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶ ಕಾಯುವ ಯೋಧರಿಂದ್ಲೇ ನಾವು ಸುರಕ್ಷಿತ- ಮೃತ ಸೈನಿಕರ ಕುಟುಂಬಗಳಿಗೆ ಜೊಲ್ಲೆ ಸಾಂತ್ವನ

    ಈ ಹಿಂದೆ ದೇವಸ್ಥಾನದಲ್ಲಿ ಮಾತ್ರ ವಸ್ತ್ರ ಸಂಹಿತೆ ಜಾರಿ ಮಾಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದೀಗ ದೇವಸ್ಥಾನದ ಒಳಭಾಗದ ಜೊತೆ ಸಾರ್ವಜನಿಕ ಪ್ರದೇಶಕ್ಕೂ ಈ ರೀತಿ ಆದೇಶದ ಸೂಚನಾ ಫಲಕ ಅಳವಡಿಸಿದ್ದು, ಜನರ ತೀವ್ರ ವಿವಾದಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗೋಕರ್ಣದ ಮಹಾಬಲೇಶ್ವರ ದರ್ಶನಕ್ಕೆ ನಿರ್ಬಂಧ ಮುಂದುವರಿಕೆ – ಸದ್ಯಕ್ಕಿಲ್ಲ ಆತ್ಮಲಿಂಗ ದರ್ಶನ

    ಗೋಕರ್ಣದ ಮಹಾಬಲೇಶ್ವರ ದರ್ಶನಕ್ಕೆ ನಿರ್ಬಂಧ ಮುಂದುವರಿಕೆ – ಸದ್ಯಕ್ಕಿಲ್ಲ ಆತ್ಮಲಿಂಗ ದರ್ಶನ

    ಕಾರವಾರ: ರಾಜ್ಯ ಸರ್ಕಾರ ಮತ್ತಷ್ಟು ಲಾಕ್‍ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ದೇವಸ್ಥಾನಗಳಿಗೆ ಭಕ್ತರಿಗೆ ಪ್ರವೇಶಕ್ಕೆ ಅನುಮತಿ ನೀಡಿದೆ. ಆದರೆ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ನಾಳೆ ಭಕ್ತರಿಗೆ ಯಾವುದೇ ದರ್ಶನಕ್ಕೆ ಅವಕಾಶವಿಲ್ಲ ಎಂದು ಎಸಿ ಅಜಿತ್ ಎಂ. ಪಬ್ಲಿಕ್ ಟಿ.ವಿಗೆ ಸ್ಪಷ್ಟಪಡಿಸಿದ್ದಾರೆ.

    ಹಿಂದಿನ ನಿಯಮದಂತೆ ದೇವಸ್ಥಾನದಲ್ಲಿ ನಿತ್ಯದ ಪೂಜೆ ಸಲ್ಲಿಸಲು ಇಬ್ಬರು ಅರ್ಚಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದ್ದು ಆತ್ಮಲಿಂಗ ದರ್ಶನಕ್ಕೆ ಅವಕಾಶ ವನ್ನು ನಿರ್ಬಂಧಿಸಲಾಗಿದೆ.

    ಜುಲೈ 5 ರ ವರೆಗೂ ಭಕ್ತರಿಗೆ ಆತ್ಮಲಿಂಗ ದರ್ಶನ ನಿರ್ಬಂಧವಿದ್ದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರತಿ ತಲುಪಿದ ನಂತರ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಉಳಿದಂತೆ ದೇವಸ್ಥಾನದ ಹೊರಭಾಗದಿಂದ ದೇವರ ದರ್ಶನ ಹಾಗೂ ಶ್ರಾದ್ಧ ಕಾರ್ಯಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಶಾಸಕರು ಸೂಚಿಸುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು: ಜೆ.ಸಿ ಮಾಧುಸ್ವಾಮಿ

    ಇಂದು ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲಾಕ್ ಡೌನ್ ಮತ್ತಷ್ಟು ಸಡಿಲಗೊಳಿಸಿ ಘೋಷಣೆ ಮಾಡಿದರು. ಸರ್ಕಾರಿ, ಖಾಸಗಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳು, ಮಾಲ್ ಗಳಿಗೆ ಅನುಮತಿ, ಮೇಟ್ರೋ, ಕಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡಲಾಗಿದೆ ಎಂದರು.

    ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

  • ಗೋಕರ್ಣ ಭಕ್ತರಿಂದ ದಕ್ಷಿಣೆ ಸ್ವೀಕಾರ ವಿವಾದ- ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು

    ಗೋಕರ್ಣ ಭಕ್ತರಿಂದ ದಕ್ಷಿಣೆ ಸ್ವೀಕಾರ ವಿವಾದ- ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು

    ಕಾರವಾರ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24 ಮಂದಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರಾಜ್ಯ ಹೈಕೋರ್ಟಿನ ಧಾರವಾಡ ಪೀಠ ವಜಾ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಮಚಂದ್ರಾಪುರ ಮಠ ಮತ್ತು ಕುಮಟಾ ತಾಲೂಕಿನ ಗೋಕರ್ಣದ ಶ್ರೀಕ್ಷೇತ್ರ ಗೋಕರ್ಣದ ಉಪಾದಿವಂತ ಮಂಡಳಿಪರ ತೀರ್ಪು ನೀಡಲಾಗಿದೆ.

    ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪಾರಂಪರಿಕ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಆಡಳಿತ ಮಂಡಳಿ ಅಡ್ಡಿಪಡಿಸದಂತೆ ಶಾಶ್ವತ ನಿರ್ಬಂಧಕಾಜ್ಞೆ ನೀಡಬೇಕು ಎಂದು ಕೋರಿ ಅರ್ಜಿದಾರರು ಕುಮಟಾ ಸೀನಿಯರ್ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಜೊತೆಗೆ ತಾತ್ಕಾಲಿಕವಾಗಿ ಪೂಜೆ ಹಾಗೂ ದಕ್ಷಿಣೆ ಸ್ವೀಕಾರಕ್ಕೆ ಅವಕಾಶ ಕೋರಿದ್ದರು. ಇದಕ್ಕೆ ದೇವಾಲಯ ಆಡಳಿತ ಮಂಡಳಿ ಆಕ್ಷೇಪಣೆ ಸಲ್ಲಿಸಿತ್ತು. ಹೈಕೋರ್ಟ್ ಆದೇಶದ ಅನ್ವಯ ಈ ದಾವೆ ವಿಚಾರಣೆಯನ್ನು ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.

    ಕಾರವಾರ ನ್ಯಾಯಾಲಯ ಉಭಯ ಪಕ್ಷಗಳ ವಾದವನ್ನು ಆಲಿಸಿ ಅರ್ಜಿದಾರರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಆದೇಶ ಮಾಡಿತ್ತು. ಈ ಆದೇಶದ ವಿರುದ್ಧ ದೇವಾಲಯ ಆಡಳಿತವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣ ಉಪಾದಿವಂತ ಮಂಡಳಿ ವತಿಯಿಂದ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿ, ಶ್ರೀಮಠ ಹಾಗೂ ಉಪಾದಿವಂತ ಮಂಡಳಿ ಸಲ್ಲಿಸಿದ ಮೇಲ್ಮನವಿಯನ್ನು ಪುರಸ್ಕತಿಸಿ, ಜಿಲ್ಲಾ ನ್ಯಾಯಾಲಯದ ಆದೇಶವನ್ನು ವಜಾ ಮಾಡಿದೆ. ಜತೆಗೆ ವಾದಿಗಳು ಸಲ್ಲಿಸಿದ್ದ ತಾತ್ಕಾಲಿಕ ಅರ್ಜಿಯನ್ನು ಕೂಡ ತಿರಸ್ಕರಿಸಿದೆ.