ಬೆಳಗಾವಿ: ಮಳೆ ಇಲ್ಲದೆ ಘಟಪ್ರಭಾ ನದಿ (Ghataprabha River) ಬತ್ತುತ್ತಿದ್ದು, ಲಕ್ಷಾಂತರ ಮೀನುಗಳು (Fish) ಸಾವಿಗೀಡಾದ ಘಟನೆ ಗೋಕಾಕ್‍ನ (Gokak) ನಲ್ಲಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಜೂನ್ ಅಂತ್ಯಕ್ಕೆ ಬಂದರೂ ರಾಜ್ಯದಲ್ಲಿ ಮುಂಗಾರು ಆರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ನದಿಗಳು ಬತ್ತುತ್ತಿವೆ. ಅದೇ ರೀತಿ ಘಟಪ್ರಭಾ ನದಿ ಸಹ ಬತ್ತಿ ಹೋಗಿದ್ದು, ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಲಕ್ಷಾಂತರ ಸಂಖ್ಯೆಯಲ್ಲಿ ಮೀನುಗಳು ಸಾವಿಗೀಡಾಗುತ್ತಿವೆ. ಇದನ್ನೂ ಓದಿ: ವ್ಹೀಲಿಂಗ್ ಮಾಡಿ ಶಾಲಾ – ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಮೂವರ ಬಂಧನ
ಅಲ್ಲದೇ ಬಳೋಬಾಳ, ಬೀರನಗಟ್ಟಿ ಗ್ರಾಮಗಳ ಬಳಿ ಕೂಡ ಮೀನುಗಳು ಸಾಯುತ್ತಿವೆ. ಇದರಿಂದ ನದಿಯಲ್ಲಿ ದುರ್ವಾಸನೆ ಬರುತ್ತಿದ್ದು, ಗ್ರಾಮಗಳಲ್ಲಿ ರೋಗ ಹರಡುವ ಭೀತಿ ಶುರುವಾಗಿದೆ. ಇನ್ನೂ ಮಳೆ ಆರಂಭಗೊಳ್ಳುವುದು ವಿಳಂಬವಾದರೆ ಮೀನುಗಳ ಸಾವಿನ ಸಂಖ್ಯೆಯಲ್ಲಿ ಹಚ್ಚಳವಾಗಲಿದೆ. ಕುಡಿಯಲು ಹಾಗೂ ಕೃಷಿಗೆ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದ ರಾಷ್ಟ್ರಗೀತೆ ಹಾಡಿ ಮೋದಿ ಆಶೀರ್ವಾದ ಪಡೆದ ಅಮೆರಿಕ ಗಾಯಕಿ
ಬೆಳಗಾವಿ: 8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ (Soldier) ರೈಲಿನಿಂದ (Train) ಕಾಲು ಜಾರಿ ಬಿದ್ದು ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.
ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ಕನಸಗೇರಿ (Kanasageri) ಗ್ರಾಮದ ವೀರ ಯೋಧರಾಗಿದ್ದು, ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದರು. ಮದುವೆಗೆಂದು (Marriage) ಪಂಜಾಬ್‌ನಿಂದ (Punjab) ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು
ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆ (Assembly Election) ಹೊಸ್ತಿಲಲ್ಲಿ ಎಲ್ಲಾ ಪಕ್ಷಗಳು ಪ್ರಣಾಳಿಕೆ (Manifesto) ಬಿಡುಗಡೆ ಮಾಡುತ್ತಿವೆ. ಈ ನಡುವೆ ಬೆಳಗಾವಿಯ (Belagavi) ಪಕ್ಷೇತರ ಅಭ್ಯರ್ಥಿಗಳಿಬ್ಬರು ವಿನೂತನ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರೂ ಹುಬ್ಬೇರಿಸಿ ನೋಡುವಂತೆ ಮಾಡಿದ್ದಾರೆ.
ಅರಭಾವಿ (Arabhavi) ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ್ (Gokak) ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಿಶೇಷವಾಗಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮೋದಿಗೆ ಚುನಾವಣೆ ಅಂದ್ರೆ ಭಯನಾ?: ವಿಶ್ವನಾಥ್
ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರಾಗಿದ್ದು ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ್‌ನಿಂದ ಸ್ಪರ್ಧೆಗೆ ಇಳಿದಿದ್ದಾರೆ. ಎರಡೂ ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ರಾಮತೀರ್ಥ ಹೆಲಿಪ್ಯಾಡ್‌ನಲ್ಲಿ ಬೆಂಕಿ
ಬೆಳಗಾವಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ ಎಂದು ಪರಿಗಣಿಸಿ ಚುನಾವಣೆಯನ್ನು (Election) ಎದುರಿಸುತ್ತೇನೆ. ಜನರ ಆಶೀರ್ವಾದದಿಂದ 7ನೇ ಬಾರಿಗೆ ಶಾಸಕನಾಗುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ.
ಗೋಕಾಕ್ (Gokak) ಬಿಜೆಪಿ (BJP) ಅಭ್ಯರ್ಥಿಯಾಗಿ ನಾಮಪತ್ರ (Nomination Papers) ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತು ನಾಮಪತ್ರ ಸಲ್ಲಿಸಲು ಯುವಕರ ದಂಡೇ ಹರಿದು ಬಂದಿದೆ. ನಾನು ಯಾವತ್ತೂ ನನ್ನ ಎದುರಾಳಿಯನ್ನು ಪ್ರಬಲ ಅಭ್ಯರ್ಥಿ ಎಂದು ಪರಿಗಣಿಸುತ್ತೇನೆ. ಜನ ಹೆಚ್ಚಿದ್ದಾರೆ ಎಂದು ಹಿಗ್ಗುವುದಿಲ್ಲ. ಹಾಗೆಯೇ ಕಡಿಮೆ ಜನ ಸೇರಿದ್ದಾರೆ ಎಂದು ಕುಗ್ಗುವುದಿಲ್ಲ. ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ ಎಂದು ತಿಳಿದು ಚುನಾವಣೆ ಎದುರಿಸುತ್ತೇನೆ. ಜನರ ಆಶೀರ್ವಾದದಿಂದ 7ನೇ ಬಾರಿಗೆ ಶಾಸಕನಾಗುತ್ತೇನೆ ಎಂದರು. ಇದನ್ನೂ ಓದಿ: ಸೋಮಣ್ಣನನ್ನು ಬಲವಂತವಾಗಿ ವರುಣಾದಲ್ಲಿ ನಿಲ್ಲಿಸಿದ್ದಾರೆ: ಸಿದ್ದರಾಮಯ್ಯ
ಅಮರನಾಥ ಜಾರಕಿಹೊಳಿ (Amaranath Jarkiholi) ನಾಮಪತ್ರ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ನನ್ನ ಪುತ್ರ ಮಂಗಳವಾರ ಡಮ್ಮಿ ನಾಮಪತ್ರ ಸಲ್ಲಿಸಿದ್ದಾರೆ. ಅದನ್ನು ವಾಪಸ್ ತೆಗೆದುಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯ ಫೀಲ್ಡ್‌ಗೆ ಎಂಟ್ರಿ
ತನಗೆ ಹೈಕಮಾಂಡ್ (High Command) ಜವಾಬ್ದಾರಿ ನೀಡಿದ ವಿಚಾರದ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ನಾನು ಮೇ 10ರ ವರೆಗೆ ಯಾವುದೇ ಪತ್ರಿಕಾಗೋಷ್ಠಿ ನಡೆಸಲು, ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ವಿಚಿತ್ರವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಚುನಾವಣಾ ಫಲಿತಾಂಶ ಬರುವವರೆಗೆ ನಾನು ಮಾತನಾಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿ ರೋಡ್ ಶೋ ಮುಖಾಮುಖಿ – ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು
ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್‍ನಲ್ಲಿ (Gokak) ಉದ್ಯಮಿ (Businessman) ಹತ್ಯೆ ಪ್ರಕರಣ ಸಂಬಂಧ ಶಹರ ಠಾಣೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೊಯಿನ್ ಪಟೇಲ್ (24), ಅಬುತಾಲ್ ಮುಲ್ಲ (21) ಬಂಧಿತ ಆರೋಪಿಗಳು. ಈ ಆರೋಪಿಗಳಿಬ್ಬರೂ ಎ2 ಆರೋಪಿ ಶಫತ್ ತ್ರಾಸಗಾರ್‍ನ ಸ್ನೇಹಿತರು. ಉದ್ಯಮಿ ರಾಜು ಝಂವರ್ ಕೊಲೆಯಾಗುವ ನಾಲ್ಕು ದಿನಗಳ ಮಧ್ಯೆ ಎ2 ಆರೋಪಿ ಶಫತ್ ತ್ರಾಸಗಾರ್ ಎ1 ಆರೋಪಿ ಡಾ.ಸಚಿನ್ ಶಿರಗಾವಿ ಬಳಿ 50 ಸಾವಿರ ರೂ. ಸುಪಾರಿ ಪಡೆದಿದ್ದರು. ಈ ಸುಪಾರಿ ಹಣವನ್ನು ಆರೋಪಿಗಳಾದ ಮೊಯಿನ್ ಪಟೇಲ್, ಅಬುತಾಲ್ ಮುಲ್ಲ ಹಾಗೂ ಶಫತ್ ತ್ರಾಸಗಾರ್ ಸಮವಾಗಿ ಹಂಚಿಕೊಂಡಿದ್ದರು.
ಉದ್ಯಮಿ ರಾಜು ಝಂವರ್ ಫೆಬ್ರವರಿ 1ರಂದು ಗೋಕಾಕ್ ನಿಂದ ನಾಪತ್ತೆಯಾಗಿದ್ದು, ನಗರದ ಸಿಟಿ ಆಸ್ಪತ್ರೆ ಬಳಿ ಇವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು, ಉದ್ಯಮಿ ರಾಜು ಝಂವರ್‍ಗೆ ಕೊನೇ ಬಾರಿ ಕರೆ ಮಾಡಿದ್ದವರನ್ನು ಕರೆಸಿ ವಿಚಾರಣೆ ನಡೆಸಿದ್ದರು. ರಾಜು ಝಂವರ್ ನಾಪತ್ತೆಗೂ ಮುನ್ನ ವೈದ್ಯ ಡಾ.ಸಚಿನ್ ಶಿರಗಾವಿಯಿಂದ ದೂರವಾಣಿ ಕರೆ ಹೋಗಿತ್ತು.
ಮಾಹಿತಿ ತಿಳಿದ ಪೊಲೀಸರು ಡಾ.ಸಚಿನ್ ಶಿರಗಾವಿ ಅವರನ್ನು ವಶಕ್ಕೆ ಪಡೆದು ಪೊಲೀಸ್ ಭಾಷೆಯಲ್ಲಿ ವಿಚಾರಣೆ ನಡೆಸಿದಾಗ ನಿಜಾಂಶ ಹೊರಬಿದ್ದಿದೆ. ಉದ್ಯಮಿ ರಾಜು ಝಂವರ್ ಎ-1 ಆರೋಪಿ ಡಾ.ಸಚಿನ್ ಅವರಿಗೆ ಸಾಲ ನೀಡಿದ್ದರು. ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕಾಗಿ ವೈದ್ಯ ಡಾ.ಸಚಿನ್ ಶಿರಗಾವಿ ಅವರು ಉದ್ಯಮಿ ರಾಜು ಅವರನ್ನು ಹತ್ಯೆ ಮಾಡುವಂತೆ ಎ-2 ಆರೋಪಿ ಶಫತ್ ಸೇರಿದಂತೆ ಮೂವರಿಗೆ ಸುಪಾರಿ ನೀಡಿದ್ದರು.
ಫೆಬ್ರವರಿ 10ರಂದು ಯೋಗಿಕೊಳ್ಳ ಮಾರ್ಗದ ಬಳಿ ಉದ್ಯಮಿ ರಾಜು ಝಂವರ್ ಅವರನ್ನು ಕೊಲೆಗೈದು ಬಳಿಕ ಕೊಳವಿ ಗ್ರಾಮದ ಬಳಿ ಘಟಪ್ರಭಾ ಬಲದಂಡೆ ಕಾಲುವೆಗೆ ಶವ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಘಟನೆ ನಡೆದು ಆರು ದಿನಗಳ ಬಳಿಕ ಉದ್ಯಮಿ ರಾಜು ಝಂವರ್ ಶವ ಪತ್ತೆಯಾಗಿತ್ತು. ಇದನ್ನೂ ಓದಿ: ಶಿವಸೇನೆ ಹೆಸರು ಚಿಹ್ನೆಗಾಗಿ ಫೈಟ್ – ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ
ಬೆಳಗಾವಿ: ಜಿಲ್ಲೆಯ ಗೋಕಾಕ್‌ನಲ್ಲಿ (Gokak) ಕೊಲೆಯಾದ (Murder) ಉದ್ಯಮಿ (Businessman) ರಾಜು ಝಂವರ ಅವರ ಮೃತದೇಹ 6 ದಿನಗಳ ಬಳಿಕ ಪತ್ತೆಯಾಗಿದೆ.
ಗೋಕಾಕ್ ನಗರದ ರಾಜು ಝಂವರ ಮೃತದೇಹಕ್ಕಾಗಿ ಮೆಗಾ ಸರ್ಚ್ ಆಪರೇಷನ್ ಕೈಗೊಳ್ಳಲಾಗಿತ್ತು. 2 ಜಿಲ್ಲೆಗಳ 350 ಪೊಲೀಸರಿಂದ ಶವ ಪತ್ತೆ ಕಾರ್ಯ ನಡೆದಿತ್ತು. ಗುರುವಾರ ಸಂಜೆ 8:30ರ ಸುಮಾರಿಗೆ ಪಂಚನಾಯಕನಟ್ಟಿ ಬಳಿ ಘಟಪ್ರಭಾ ಬಲದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು ಬೆಳಗಾವಿ, ಬಾಗಲಕೋಟೆ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.
ಪ್ರಕರಣ ಹಿನ್ನೆಲೆ:
ಫೆಬ್ರವರಿ 10ರ ರಾತ್ರಿ ಗೋಕಾಕ್ ನಗರದಿಂದ ಉದ್ಯಮಿ ರಾಜು ಝಂವರ ನಾಪತ್ತೆ ಆಗಿದ್ದರು. ಈ ವೇಳೆ ಗೋಕಾಕ್ ಸಿಟಿ ಆಸ್ಪತ್ರೆ ಬಳಿ ರಾಜು ಝಂವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಆಗ ಆಸ್ಪತ್ರೆ ವೈದ್ಯ ಡಾ. ಸಚಿನ್ ಶಿರಗಾವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾಗಿ ಡಾ. ಸಚಿನ್ ಶಿರಗಾವಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಗೆಳೆಯನ ಶವವನ್ನು ರಸ್ತೆ ಬದಿಯಲ್ಲೇ ಬಿಟ್ಟು ಹೋದ ವ್ಯಾಪಾರಿಗಳು
ಗೋಕಾಕ್‌ನ ಯೋಗಿಕೊಳ್ಳ ಮಾರ್ಗದಲ್ಲಿ ಮಾರ್ಕಂಡೇಯ ನದಿ ದಡದಲ್ಲಿ ಹರಿತವಾದ ಆಯುಧದಿಂದ ಹಲ್ಲೆಗೈದು ರಾಜು ಅವರನ್ನು ಕೊಲೆ ಮಾಡಲಾಗಿತ್ತು. ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಮೃತದೇಹ ತಂದು ಕೊಳವಿ ಬಳಿ ಕಾಲುವೆಗೆ ಎಸೆದು ಪರಾರಿಯಾಗಿದ್ದರು. ಘಟಪ್ರಭಾ ಬಲದಂಡೆ ಕಾಲುವೆಗೆ ಮೃತದೇಹವನ್ನು ಎಸೆಯಲಾಗಿದ್ದು, ನದಿ ದಡದಲ್ಲಿ ರಕ್ತದ ಕಲೆ, ಮುರಿದ ಕನ್ನಡಕ, ಪೆನ್ ಪತ್ತೆಯಾಗಿತ್ತು. ಆರೋಪಿ ವೈದ್ಯನ ಮಾಹಿತಿ ಮೇರೆಗೆ ಕೊಳವಿ ಗ್ರಾಮದಿಂದ 37 ಕಿಮೀ ದೂರದ ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.
ಬೆಳಗಾವಿ ಜಿಲ್ಲೆಯ 3 ಡಿವೈಎಸ್‌ಪಿ, 8 ಇನ್ಸ್ಪೆಕ್ಟರ್, ಬಾಗಲಕೋಟೆ ಎಎಸ್‌ಪಿ ಸೇರಿ 350ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಐವರು ಆರೋಪಿಗಳ ಪೈಕಿ ಮೂವರ ಬಂಧನವಾಗಿದ್ದು ಇನ್ನೂ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ಮಡಿದ ಮಗನ ಹೆಸರಲ್ಲಿ ಮನೆ ನಿರ್ಮಿಸಿದ ತಂದೆ-ತಾಯಿ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಜಿಲ್ಲೆಯ ಬೆಟಗೇರಿ ಗ್ರಾಮದಲ್ಲಿ ಗೋಕಾಕ್ (Gokak) ತಾಲೂಕು 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ರಮೇಶ್ ಜಾರಕಿಹೊಳಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ವಿವಿಧ ಕಲಾ ತಂಡಗಳಿಂದ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಹಿಂದೂ’ ವರ್ಡ್ ವಾರ್
ಸಮ್ಮೇಳನದ ಮೆರವಣಿಗೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷೆ ಭಾರತಿ ಮದಬಾಂವಿ ಅವರು ರಮೇಶ್ ಜಾರಕಿಹೊಳಿಗೆ ಧ್ವಜ ನೀಡಿ ಸ್ವಾಗತಿಸಿದರು. ವಿವಿಧ ಕಲಾ ತಂಡಗಳಿಂದ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರೆತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಕವಿಗೋಷ್ಠಿ, ಚಿಂತನೆ ಸೇರಿದಂತೆ ಹಲವು ಕನ್ನಡ ಪರ ಕಾರ್ಯಕ್ರಮಗಳಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ನಾಡು, ನುಡಿಗಾಗಿ ರಾಜಕಾರಣಿಗಳು ಏನೂ ಮಾಡಿಲ್ಲ.. ಕನ್ನಡ ಕಾರ್ಯಕ್ರಮಗಳಿಗೆ ಅವರನ್ನ ಕರೆಯಲ್ಲ – ಕರವೇ ಅಧ್ಯಕ್ಷ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೀಗ ಮುರಿದು, ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಎಗರಿಸಿ ಪರಾರಿಯಾಗಿರುವ ಘಟನೆ ಬೆಳಗಾವಿ (belagavi) ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗೋಕಾಕ್ ತಹಶೀಲ್ದಾರ್ (Gokak Tehsildar) ಪ್ರಕಾಶ್ ಅವರ ಮನೆಯಲ್ಲಿಯೇ ಲಕ್ಷಾಂತರ ರೂ. ಮೌಲ್ಯದ ಕಳ್ಳತನವಾಗಿದೆ (Theft) . ಗೋಕಾಕ್ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಬೀಗ ಮುರಿದು ಒಳಗೆ ಹೊಕ್ಕ ಖದೀಮರು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಎಗರಿಸಿ ಪರಾರಿಯಾಗಿದ್ದಾರೆ.
ಬೆಳಗಾವಿ: ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್(KPTCL) ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಮತ್ತೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಗರನಾಳ ಗ್ರಾಮದ ಈರಣ್ಣ ಬಂಕಾಪೂರ(26), ಶಿವಾನಂದ ಕುಮೋಜಿ(22) ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಆದಿಲ್ ಶಾ ತಾಸೇವಾಲೆ(23), ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಮಹಾಂತೇಶ ಹೊಸಾಪೂರ(22), ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಮಹಾಲಿಂಗ ಕುರಿ(30) ಹಾಗೂ ಸವದತ್ತಿ ತಾಲೂಕಿನ ಸುಂದರ ಬಾಳಿಕಾಯಿ(23)ಬಂಧಿತರು. ಇದನ್ನೂ ಓದಿ: ದುಬೈನಲ್ಲಿ ಮತ್ತೊಂದು ದುಬಾರಿ ವಿಲ್ಲಾ ಖರೀದಿಸಿದ ಅಂಬಾನಿ
ಬಂಧಿತ ಎಲ್ಲ ಆರೋಪಿಗಳು ಆಗಸ್ಟ್ 7 ರಂದು ಗೋಕಾಕ್ ನಗರದಲ್ಲಿ ನಡೆದಿದ್ದ ಜ್ಯೂನಿಯರ್ ಕೆಪಿಟಿಸಿಎಲ್ ಅಸಿಸ್ಟಂಟ್ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಮೈಕ್ರೋಚಿಪ್ ಡಿವೈಸ್ ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ್ದರು. ಇವರೆಲ್ಲರಿಂದ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು , ಮೈಕ್ರೋಚಿಪ್‌ಗಳನ್ನು ಮತ್ತು ಮೊಬೈಲ್‌ಗಳು ಸೇರಿದಂತೆ ಇತರ ದಾಖಲೆ ಮತ್ತು ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಅ. 20ರಂದೇ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ.
ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ(35) ಬಂಧಿತ ಆರೋಪಿ. ಪ್ರಕರಣ ಹಿನ್ನೆಲೆ ನೋಡುವುದಾದರೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು. ಈ ಬೋರ್ಡ್‍ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ವಿಕೃತಿ ಮೆರೆದಿದ್ದರು. ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?