Tag: ಗೋತಬಯ ರಾಜಪಕ್ಸೆ

  • ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೊಟಬಯ ರಾಜಪಕ್ಸೆ

    ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೊಟಬಯ ರಾಜಪಕ್ಸೆ

    ಕೊಲಂಬೊ: ಪ್ರತಿಭಟನಾಕಾರರು ಹೆಚ್ಚುತ್ತಿರುವ ಒತ್ತಡದ ನಡುವೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದರು.

    ಈ ಹಿಂದೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಅವರು ಜುಲೈ 13 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಶನಿವಾರದಂದು ಅಧ್ಯಕ್ಷರ ಭವನಕ್ಕೆ ಸಾವಿರಾರು ಜನರು ನುಗ್ಗಿ ದಾಂಧಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದೇ ರಾಜೀನಾಮೆ ನೀಡಿದ್ದಾರೆ.

    ಈ ಹಿಂದೆ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದಿರುವ ಶ್ರೀಲಂಕಾ ಜನ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರಪತಿ ಹಾಗೂ ಪ್ರಧಾನಿ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಅವರ ನಿವಾಸಗಳನ್ನು ಒತ್ತುವರಿ ಮಾಡಿಕೊಂಡಿಕೊಳ್ಳುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

    ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ಟೆಂಪಲ್ ಟ್ರೀ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿ, ಅವರ ಮನೆಯ ಆವರಣದಲ್ಲಿಯೇ ಅಡುಗೆ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರನೋರ್ವ, ನಾವು ಪ್ರಧಾನಿ ಮನೆಯೊಳಗಿದ್ದೇವೆ. ಪ್ರತಿಭಟನಾಕಾರರಾದ ನಾವೆಲ್ಲರೂ ಒಟ್ಟಿಗೆ ಸೇರಿ ಅಡುಗೆ ಮಾಡುತ್ತಿದ್ದೇವೆ. ನಾವು ಪಿಎಂ ವಿಕ್ರಮಸಿಂಘೆ ಮತ್ತು ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗಾಗಿ ಹೋರಾಟ ನಡೆಸುತ್ತಿದ್ದೇವೆ. ಅವರು ರಾಜೀನಾಮೆ ನೀಡಿದಾಗ ನಂತರ ಈ ಮನೆಯನ್ನು ತೊರೆಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು

    ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಟೆಂಪಲ್ ಟ್ರೀ ನಿವಾಸದಲ್ಲಿ ಪ್ರತಿಭಟನಾಕಾರರು ಕೇರಂ ಆಟ ಆಡುವುದು, ಆರಾಮವಾಗಿ ಮಲಗಿರುವುದು ಮತ್ತು ಡುವುದು, ಅಡುಗೆ ಮಾಡುವುದು ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಮ್ಮಿಂದ ತಪ್ಪಾಗಿದೆ: ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ

    ನಮ್ಮಿಂದ ತಪ್ಪಾಗಿದೆ: ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ

    ಕೊಲಂಬೋ: ಅತ್ಯಂತ ತೀವ್ರ ಮಟ್ಟದ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾದ ತಪ್ಪಿಗೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಕ್ಷಮೆ ಕೇಳಿದ್ದಾರೆ. ಈ ತಪ್ಪನ್ನು ಸರಿ ಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

    ಭೀಕರ ಆರ್ಥಿಕ ಸ್ಥಿತಿಯಿಂದ ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಇದರ ಮಧ್ಯೆಯೇ ಸೋಮವಾರ ಹೊಸ 17 ಸದಸ್ಯರ ಕ್ಯಾಬಿನೆಟ್ ಅನ್ನು ನೇಮಿಸಿದ್ದರು. ಈ ಹೊಸ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸುವಾಗ ರಾಜಪಕ್ಸೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ವಿರೊಧಿ ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್

    ಕಳೆದ ಎರಡೂವರೆ ವರ್ಷಗಳಲ್ಲಿ ಅತೀ ದೊಡ್ಡ ಸವಾಲುಗಳನ್ನು ಎದುರಿಸಿದ್ದೇವೆ. ಕೋವಿಡ್-19 ನೊಂದಿಗೆ ಸಾಲದ ಹೊರೆ ನಮ್ಮನ್ನು ಆರ್ಥಿಕ ಬಿಕ್ಕಟ್ಟಿಗೆ ದೂಡಲು ಕಾರಣವಾಯಿತು. ನಮ್ಮ ಕಡೆಯಿಂದ ಕೆಲವು ತಪ್ಪುಗಳಾಗಿವೆ. ಅವುಗಳನ್ನು ಸರಿಪಡಿಸಬೇಕಾಗಿದೆ. ಅವುಗಳನ್ನು ಸರಿಪಡಿಸಿ, ಮುನ್ನಡೆದು, ಜನರ ವಿಶ್ವಾಸವನ್ನು ಮರಳಿ ಪಡೆಯಬೇಕು ಎಂದು ರಾಜಪಕ್ಸೆ ತಿಳಿಸಿದರು. ಇದನ್ನೂ ಓದಿ: ಸಣ್ಣ ರಸ್ತೆ ಅಪಘಾತದಿಂದ ಕೋಮು ಗಲಭೆ – ದೇವಾಲಯ ಧ್ವಂಸ, 22 ಮಂದಿ ಅರೆಸ್ಟ್

    ಶ್ರೀಲಂಕಾ ವಿದೇಶಿ ವಿನಿಮಯಕ್ಕೆ ಹಣದ ಕೊರತೆಯನ್ನು ಎದುರಿಸುತ್ತಿದ್ದು, ಸುಮಾರು 25 ಶತಕೋಟಿ ಡಾಲರ್(1.90 ಲಕ್ಷ ಕೋಟಿ ರೂ.)ಗಳಷ್ಟು ಮರುಪಾವತಿಯೂ ಬಾಕಿ ಇದೆ. ಜನರು ತಿಂಗಳುಗಳಿಂದ ಆಹಾರ, ಅಡುಗೆ ಅನಿಲ, ಇಂಧನ, ಔಷಧಿಗಳಂತಹ ಅಗತ್ಯ ವಸ್ತುಗಳ ಕೊರತೆ ಅನುಭವಿಸುತ್ತಿದ್ದಾರೆ.

  • ಸರ್ಕಾರಿ ವಿರೊಧಿ ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್

    ಸರ್ಕಾರಿ ವಿರೊಧಿ ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್

    ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೂರಿದ ಬಳಿಕ ದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳ ಮಧ್ಯೆಯೂ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಹೊಸ ಸಂಪುಟವನ್ನು ನೇಮಿಸಿದ್ದಾರೆ.

    17 ಸಚಿವರ ಹೊಸ ಸಂಪುಟದಲ್ಲಿ ಕೆಲವು ಹೊಸ ಹಾಗೂ ಯುವ ವ್ಯಕ್ತಿಗಳಿದ್ದು, ಇವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶಾಂತಿಯುತ ಸಹಕಾರ ಸಂಬಂಧಗಳನ್ನು ಬೆಳೆಸೋಣ: ಮೋದಿಗೆ ಷರೀಫ್ ಪತ್ರ

    ಶ್ರೀಲಂಕಾದಲ್ಲಿ ಇತ್ತೀಚೆಗೆ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಅಲ್ಲಿನ ಜನರು ಕಷ್ಟದ ದಿನಗಳನ್ನು ದೂಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಜನರು ತಿರುಗಿ ಬಿದ್ದಿದ್ದು, ಬೃಹತ್ ಪ್ರತಿಭಟನೆಯಿಂದಾಗಿ ಶ್ರೀಲಂಕಾದ ಎಲ್ಲಾ ಕ್ಯಾಬಿನೆಟ್ ಸದಸ್ಯರು ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ಭೀಕರ ಪ್ರವಾಹಕ್ಕೆ ದಕ್ಷಿಣ ಆಫ್ರಿಕಾ ತತ್ತರ – 443ಕ್ಕೆ ಏರಿದ ಸಾವಿನ ಸಂಖ್ಯೆ

    ಪ್ರವಾಸೋದ್ಯಮವೇ ಉಸಿರಾಗಿರುವ ಶ್ರೀಲಂಕಾದಲ್ಲಿ ಕೋವಿಡ್ ಕಾರಣದಿಂದಾಗಿ ಭಾರೀ ಮಟ್ಟದ ಹೊಡೆತ ಉಂಟಾಯಿತು. ವಿಶ್ವದಾದ್ಯಂತ ಕೋವಿಡ್ ಹರಡಿದಂತೆ ಪ್ರವಾಸೋದ್ಯಮದ ಬೇಡಿಕೆ ಕಡಿಮೆಯಾಗಿ ಆರ್ಥಿಕವಾಗಿ ಶ್ರೀಲಂಕಾ ಕುಗ್ಗಿ ಹೋಯಿತು.

  • ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ

    ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ

    ಕೊಲೊಂಬೋ: ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನೆರವು ನೀಡಿದ ಭಾರತಕ್ಕೆ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ.

    ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಅಧ್ಯಕ್ಷ, ಆಹಾರ ಮತ್ತು ಔಷಧಿ ಸೇರಿದಂತೆ ಅಗತ್ಯ ಸರಕುಗಳ ಆಮದುಗಾಗಿ ಯುಡಿಎಸ್ 1 ಬಿಲಿಯನ್ ಕ್ರೆಡಿಟ್ ಲೈನ್ ಅನ್ನು ಒದಗಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

    ಈ ವರ್ಷ ಶ್ರೀಲಂಕಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಗುರುತಿಸಲು ನಾಣ್ಯಗಳು ಮತ್ತು ಅಂಚೆಚೀಟಿ ಬಿಡುಗಡೆ ಸೇರಿದಂತೆ ಹಲವಾರು ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಲು ಸಂತೋಷವಾಗಿದೆ. ನಮ್ಮ ನೆರೆಹೊರೆಯ ಸಂಬಂಧದ ವಿವಿಧ ಆಯಾಮಗಳನ್ನು ಪರಿಶೀಲಿಸಲಾಗಿದೆ. ಭಾರತದ ನಿರಂತರವಾಗಿ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಆರ್ಥಿಕ ಅವನತಿಯತ್ತ ಶ್ರೀಲಂಕಾ – ಸಕ್ಕರೆ, ಬೇಳೆಗೆ ಚಿನ್ನದ ಬೆಲೆ, 1 ಟೀಗೆ 100 ರೂ.

    ಮೂರು ದಿನಗಳ ಕಾಲ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶ್ರೀಲಂಕಾ ಪ್ರವಾಸದಲ್ಲಿದ್ದು, ಇಂದಿನಿಂದ ಕೊಲಂಬೊದಲ್ಲಿ ಪ್ರಾರಂಭವಾಗುವ 5ನೇ ಬಿಮ್‍ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಸ್ಥಿತಿ ಗಂಭೀರ – ದಿನ ಬಳಕೆ ವಸ್ತುಗಳ ಬೆಲೆ ಎಷ್ಟು?