Tag: ಗೋಪೂಜೆ

  • ದೀಪಾವಳಿ| ಕರಾವಳಿಯಲ್ಲಿ ಗೋಪೂಜೆ ಮಹತ್ವ ಏನು?

    ದೀಪಾವಳಿ| ಕರಾವಳಿಯಲ್ಲಿ ಗೋಪೂಜೆ ಮಹತ್ವ ಏನು?

    ಗೋವನ್ನು ಮಾತೆಯೆಂದು ನಾವೆಲ್ಲರೂ ಪೂಜಿಸುತ್ತೇವೆ. ಬಲಿಪಾಡ್ಯಮಿಯಂದು ಗೋಪೂಜೆಯನ್ನು ಮಾಡಲಾಗುತ್ತದೆ. ಹಿಂದೆ ಹಳ್ಳಿಗಳಲ್ಲಿ ದುಡಿಮೆಯ ಅವಿಭಾಜ್ಯ ಅಂಗವಾಗಿರುವ ಕೃಷಿಗೆ ಜಾನುವಾರುಗಳೇ ಆಧಾರವಾಗಿದ್ದವು. ಎತ್ತು, ಕೋಣಗಳನ್ನು ಗದ್ದೆ ಉಳುಮೆ ಮಾಡಲು ಬಳಸುತ್ತಿದ್ದರು. ಈಗಲೂ ಹಳ್ಳಿಗಳಲ್ಲಿ ಹೆಚ್ಚಿನ ಕಡೆ ಗದ್ದೆಯನ್ನು ಕೋಣಗಳನ್ನು ಬಳಸಿ ಉಳುಮೆ ಮಾಡುತ್ತಾರೆ.

    ದೀಪಾವಳಿ (Diwali) ಸಮಯದಲ್ಲಿ ಮೂರು ದಿನ ಕೃಷಿ ಕೆಲಸಕ್ಕೆ ವಿರಾಮ ಎಂಬುದು ತುಳುನಾಡಿನ ಜನರ ನಿಯಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಪೂಜೆ ಮತ್ತು ಗದ್ದೆಗಳಿಗೆ ದೀಪ ಇಡುವ ಕ್ರಮ ಬಲಿಪಾಡ್ಯಯಂದೇ ನಡೆಯುತ್ತದೆ. ಬೆಳಗ್ಗೆ ಗೋಪೂಜೆ ಮಾಡಿ ಸಂಜೆ ಗದ್ದೆಗಳಿಗೆ ದೀಪ ಇಟ್ಟು, ರಾತ್ರಿ ಜಾನುವಾರುಗಳಿಗೆ ‘ತುಡಾರ್’, (ದೀಪ) ತೋರಿಸುವ ಕ್ರಮ ಹಿಂದಿನಿಂದಲೂ ನಡೆದು ಬಂದಿದೆ.

    ಗೋಪೂಜೆ ದಿನ ಬೆಳಗ್ಗೆ ಗೋವುಗಳನ್ನು ಚೆನ್ನಾಗಿ ಸ್ನಾನ ಮಾಡಿಸಿ ಸ್ವಚ್ಛಗೊಳಿಸುತ್ತಾರೆ. ಕೋಣಗಳಿಗಾದರೆ ಅವುಗಳ ಮೈ ಪೂರ್ತಿ ತೆಂಗಿನ ಎಣ್ಣೆ ಹಚ್ಚಿ ಸ್ವಲ್ಪ ಹೊತ್ತು ಬಿಟ್ಟು ಸ್ನಾನ ಮಾಡಿಸುತ್ತಾರೆ. ಬಳಿಕ ಶೃಂಗಾರ ಮಾಡಲಾಗುತ್ತದೆ. ಸಂಜೆಯ ವೇಳೆ ಗದ್ದೆಗಳಿಗೆ ದೀಪ ಇರಿಸಿದ ಬಳಿಕ ತುಡಾರ್ ತೋರಿಸಿ ತಲೆಗೆ ತೆಂಗಿನ ಎಣ್ಣೆ ಹಾಕಿ ಕುಂಕುಮ ಹಚ್ಚಿ ಪ್ರಾರ್ಥಿಸಲಾಗುತ್ತದೆ. ರಾತ್ರಿ ಜಾನುವಾರುಗಳಿಗೆ ಕೊರಳಿಗೆ ಹೂವಿನ ಹಾರ ಹಾಕಿ, ಸಣ್ಣ ಕರುಗಳಿಗೆ ನಾಮಕರಣವನ್ನು ಈ ದಿನ ಮಾಡುತ್ತಾರೆ. ಇದಾದ ಬಳಿಕ ರಾತ್ರಿ ಮನೆಮಂದಿಯೆಲ್ಲ ಸೇರಿ ಅಕ್ಕಿಯಿಂದ ತಯಾರಿಸಿದ ಉದ್ದಿನ ದೋಸೆಯನ್ನು ಜಾನುವಾರುಗಳಿಗೆ ನೀಡಲಾಗುತ್ತದೆ. ಮರುದಿನ ಬೆಳಗ್ಗೆ ಕೂಡ ಸಿಹಿ ನೀಡಿ ವಿಶೇಷವಾದ ಅಕ್ಕಿ ಗಂಜಿಯನ್ನು ಎಲ್ಲ ಜಾನು ವಾರುಗಳಿಗೆ ನೀಡಲಾಗುತ್ತದೆ. ಈ ಮೂಲಕ ಕರಾವಳಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆಯು ವಿಶೇಷವಾಗಿ ಆಚರಿಸಲಾಗುತ್ತದೆ. ಪ್ರದೇಶದಿಂದ ಪ್ರದೇಶಕ್ಕೆ ಆಚರಣೆಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳು ಆಗುತ್ತವೆ.

    ದೀಪಾವಳಿಯಂದು ಕೃಷ್ಣನು ನರಕಾಸುರನ ವಧೆ ಮಾಡಿದ ಮತ್ತು ಬಲಿಯನ್ನು ಉದ್ಧರಿಸಿದ ಕಾರಣ ವಿಷ್ಣು ಪೂಜೆ, ಬಲೀಂದ್ರ ಪೂಜೆ, ಧನದ ದೇವನಾದ ಕುಬೇರನ ಪೂಜೆ, ಯಮನ ಪೂಜೆ, ಗೋಪೂಜೆ, ಮಹಾಲಕ್ಷ್ಮೀ ಪೂಜೆ, ಮಹಾದೇವನ ಪೂಜೆ ಮಾಡಲಾಗುತ್ತದೆ. ಯಾಕೆಂದರೆ ಬಲಿಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಅದಕ್ಕೆ ಪೂಜೆಗಳನ್ನು, ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವುಗಳಿಗೆ ಪೂಜೆ ಮಾಡಲಾಗುತ್ತದೆ.

  • ದೀಪಾವಳಿಯಲ್ಲಿ ಗೋಪೂಜೆಯ ಮಹತ್ವವೇನು?

    ದೀಪಾವಳಿಯಲ್ಲಿ ಗೋಪೂಜೆಯ ಮಹತ್ವವೇನು?

    ದೀಪಾವಳಿ (Deepavali) ಎಂದರೆ ದೀಪಗಳ ಹಬ್ಬ ಎಂದು ಎಲ್ಲರಿಗೂ ಗೊತ್ತೇ ಇದೆ. ಈ ದೀಪಾವಳಿಯ ಬಲಿಪಾಡ್ಯಮಿಯಂದು ಗೋವುಗಳಿಗೆ ಪೂಜೆಯನ್ನೂ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಶಾಸ್ತ್ರೋಕ್ತ ಪೂಜೆ ಮಾಡಿ, ತಿಂಡಿ- ತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ಇದೆ. ನಾವು ಆಚರಿಸುವ ಪ್ರತಿಯೊಂದು ಸಂಪ್ರದಾಯಕ್ಕೂ ಒಂದೊಂದು ಹಿನ್ನೆಲೆ ಇರುವಂತೆ ದೀಪಾವಳಿಯ ಸಮಯದಲ್ಲಿನ ಗೋ ಆರಾಧನೆಗೂ ಒಂದು ಪೌರಾಣಿಕ ಹಿನ್ನೆಲೆ ಇದೆ.

    ದೀಪಾವಳಿಯ ವೇಳೆ ಒಂದು ದಿನವನ್ನು ಬಲಿಪಾಡ್ಯಮಿ ಎಂದು ಬಲಿ ಚಕ್ರವರ್ತಿಯ ನೆನಪಿಗಾಗಿ ಆಚರಿಸಲಾಗುತ್ತದೆ. ಈ ದಿನ ಲಕ್ಷ್ಮೀ ಪೂಜೆ, ಗೋ ಪೂಜೆ (Go Pooja) ಇವುಗಳನ್ನು ಮಾಡಲಾಗುವುದು. ಯಾಕೆಂದರೆ ಬಲಿಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಅದಕ್ಕೆ ಪೂಜೆಗಳನ್ನು, ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.

    ಕೃಷ್ಣ ನಂದಗೋಕುಲದಲ್ಲಿದ್ದಾಗ ಅಲ್ಲಿದ್ದ ಗೋಪ, ಗೋಪಿಯರು ಪ್ರತಿವರ್ಷ ಮಳೆ ಬರಲಿ ಎಂದು ಎಲ್ಲರು ಇಂದ್ರದೇವನ ಪೂಜೆಯನ್ನು ಮಾಡುತ್ತಿದ್ದರು. ಇದರಿಂದಾಗಿ ಇಂದ್ರನಿಗೆ ನಾನು ಮಳೆ ಬರಿಸುವುದರಿಂದಲೇ ಪ್ರಪಂಚದಲ್ಲಿ ಎಲ್ಲವೂ ನಡೆಯುತ್ತಿದೆ ಎಂದು ಗರ್ವದಿಂದ ಬೀಗಿದ. ಇಂದ್ರ ತಾನು, ತನ್ನಿಂದ ಎಂದು ಗರ್ವದಲ್ಲಿ ಬೀಗುತ್ತಿರುವ ವಿಚಾರ ಕೃಷ್ಣನಿಗೆ ತಿಳಿಯುತ್ತದೆ. ಈ ಕಾರಣಕ್ಕೆ ಈತನ ಗರ್ವ ಇಳಿಸಲು ಇಂದ್ರನಿಗೆ ಪೂಜೆ ಮಾಡದೇ ಗೋವರ್ಧನ ಪರ್ವತಕ್ಕೆ ಪೂಜೆ ಮಾಡಬೇಕೆಂದು ಗೋಪಾಲಕರಿಗೆ ಸೂಚಿಸಿದ. ನಮಗೆ ಮಳೆ ಗೋವರ್ಧನ ಪರ್ವತದಿಂದ ಬರುತ್ತಿದೆ, ಅದಕ್ಕಾಗಿ ನಾವು ಇನ್ನು ಮುಂದೆ ಗೋವರ್ಧನ ಪರ್ವತವನ್ನು ಪೂಜೆ ಮಾಡಬೇಕೇ ವಿನಾಃ ಇಂದ್ರದೇವನ ಪೂಜೆ ಮಾಡುವುದು ಬೇಡ ಎಂದು ಸೂಚಿಸಿದ. ಇದನ್ನೂ ಓದಿ: ನರಕ ಚತುರ್ದಶಿ ಏಕೆ ಆಚರಿಸ್ತಾರೆ?

    ಕೃಷ್ಣನ ಸೂಚನೆಯ ಹಿನ್ನೆಲೆಯಲ್ಲಿ ಗೋವರ್ಧನ ಪರ್ವತದ ಪೂಜೆ ಮಾಡಲು ಶುರು ಮಾಡಿದರು. ನನಗೆ ಪೂಜೆ ಮಾಡುವುದನ್ನು ಬಿಟ್ಟು ಗೋವರ್ಧನ ಪರ್ವತಕ್ಕೆ ಪೂಜೆ ಮಾಡುವುದನ್ನು ನೋಡಿ ಇಂದ್ರನಿಗೆ ಕೋಪ ಬಂತು. ಗೋಪಾಲರಿಗೆ ಪಾಠ ಕಲಿಸಲು ಇಂದ್ರನು ತುಂಬಾ ರಭಸವಾಗಿ ಮಳೆಯನ್ನು ಸುರಿಸಲು ಪ್ರಾರಂಭಿಸಿದನು. ಇದರಿಂದಾಗಿ ನದಿಯು ತುಂಬಿ ಹರಿಯಲಾರಂಭಿಸಿತು. ಎಲ್ಲ ಜನರು ಗಾಬರಿಯಿಂದ ಶ್ರೀಕೃಷ್ಣನ ಬಳಿಗೆ ಸಹಾಯ ಕೇಳಲು ಓಡಿದರು.

    ಆಗ ಶ್ರೀಕೃಷ್ಣನು, ನೀವು ಯಾರು ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಒಟ್ಟು ಸೇರೋಣ. ನಾವು ಪೂಜಿಸಿದ ಗೋವರ್ಧನ ಪರ್ವತವೇ ನಮ್ಮನ್ನು ರಕ್ಷಿಸುತ್ತದೆ ಎಂದು ಅಭಯವನ್ನು ಇತ್ತ. ಎಲ್ಲ ಜನ ಸೇರಿದ ನಂತರ ಕೃಷ್ಣ ತನ್ನ ಕಿರು ಬೆರಳಿನಿಂದ ಗೋವರ್ಧನ ಪರ್ವತವನ್ನು ಎತ್ತಿ ಹಿಡಿದು ಗ್ರಾಮಸ್ಥರನ್ನು ರಕ್ಷಿಸಿದ. ಬಲಿ ಪಾಡ್ಯಮಿಯಂದು ಕೃಷ್ಣ ಗೋವರ್ಧನ ಪರ್ವತವನ್ನು ಎತ್ತಿದ ಹಿನ್ನೆಲೆಯಲ್ಲಿ ಈ ದಿನ ಈಗಲೂ ಗೋವುಗಳಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.

    ಹೆಚ್ಚಿನ ಕಡೆಗಳಲ್ಲಿ ಆ ದಿನದಂದು ಹಸುವಿನ ಹಾಲನ್ನೂ ಕರೆಯಬಾರದೆಂಬ ಪ್ರತೀತಿ ಇದೆ. ಕರುಗಳು ಬೇಕಾದಷ್ಟು ಹಾಲು ಕುಡಿದು ಸಂತೋಷವಾಗಿರಬೇಕೆಂಬುದು ಇದರ ಉದ್ದೇಶ. ಸರ್ವಸಮೃದ್ಧಿಯುಂಟಾಗಿ, ಧನಕನಕಗಳು ವೃದ್ಧಿಯಾಗುವಂತೆ ಇದೇ ದಿನ ಧನಲಕ್ಷ್ಮಿ ಪೂಜೆಯ ಮೂಲಕ ಲಕ್ಷ್ಮಿಯನ್ನು ಒಲಿಸಿಕೊಳ್ಳಲಾಗುತ್ತದೆ. ಈ ರೀತಿ ಮಾಡುವುದರಿಂದ ಬಲಿ ಚಕ್ರವರ್ತಿಯ ರಾಜ್ಯದಲ್ಲಿದ್ದಂತೆ ಎಲ್ಲಾ ಸುಖೋಪಭೋಗಗಳು ದೊರೆಯುವುದು ಎಂಬ ನಂಬಿಕೆ ಜನರಲ್ಲಿದೆ. ಒಟ್ಟಾರೆ ಮೂರು ದಿನಗಳ ಕಾಲ ನಡೆಯುವ ದೀಪಾವಳಿ ಸಂಭ್ರಮದಲ್ಲಿ ಗೋ ಪೂಜೆ ಕೂಡ ಪ್ರಾಮುಖ್ಯತೆ ಪಡೆದುಕೊಂಡಿದ್ದು, ಇದು ಭೂಲೋಕದ ಕಾಮಧೇನುವಿಗೆ ನೀಡಿದ ಮಹತ್ವವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

  • ದೀಪಾವಳಿಯಂದು ದೇವಸ್ಥಾನಗಳಲ್ಲಿ ಗೋಪೂಜೆ: ಶಶಿಕಲಾ ಜೊಲ್ಲೆ

    ದೀಪಾವಳಿಯಂದು ದೇವಸ್ಥಾನಗಳಲ್ಲಿ ಗೋಪೂಜೆ: ಶಶಿಕಲಾ ಜೊಲ್ಲೆ

    ಬೆಂಗಳೂರು: ದೀಪಾವಳಿಯ (Diwali) ಬಲಿ ಪಾಡ್ಯಮಿ ಹಬ್ಬದ ದಿನದಂದು ದೇವಸ್ಥಾನಗಳಲ್ಲಿ (Temple) ಹೊಸ ಸಂಪ್ರದಾಯಕ್ಕೆ ಸರ್ಕಾರ ಮುಂದಾಗಿದೆ. ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

    ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಹಿಂದಿನ ಕಾಲದಿಂದಲೂ ಹಿಂದೂ ಧರ್ಮದವರು ಗೋಮಾತೆಯನ್ನು ಕಾಲಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ. ದೀಪಾವಳಿಯ ಬಲಿಪಾಡ್ಯಮಿಯಂದು ಗೋವುಗಳಿಗೆ ವಿಶೇಷ ಅಲಂಕಾರದ ಮೂಲಕ ಅಕ್ಕಿ, ಬೆಲ್ಲ, ಸಿಹಿ ತಿನಿಸುಗಳನ್ನು ನೀಡಿ ಪೂಜಿಸಲಾಗುತ್ತದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಪೂಜೆಯನ್ನು ಬಲಿಪಾಡ್ಯಮಿಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

    ಇತ್ತೀಚಿನ ದಿನಗಳಲ್ಲಿ ಪಟ್ಟಣ ಮತ್ತು ಮಹಾನಗರಗಳಲ್ಲಿ ಈ ಪದ್ಧತಿ ಮರೆತು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆ ಎಂದು ತಿಳಿದು ಪೂಜಿಸುವ ಸಂಪ್ರದಾಯವನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಕಳೆದ ವರ್ಷದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು. ಇದರಿಂದಾಗಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಗೋಪೂಜೆಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

    ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ, ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ಕಳೆದ ವರ್ಷ ಆಚರಿಸಿರುವಂತೆ, ಪ್ರಸಕ್ತ ಸಾಲಿನಲ್ಲಿಯೂ 2022ನೇ ಅ. 26ರಂದು ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಸೂಚನೆ ನೀಡಲಾಗಿದೆ. ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಲಾಗುತ್ತದೆ. ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆಯನ್ನು ಮಾಡುವ ಮೂಲಕ ಅಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮವನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನವರು ಸತ್ಯ ಹರಿಶ್ಚಂದ್ರನ ತುಂಡುಗಳಲ್ಲ: ಬಿ.ಸಿ. ಪಾಟೀಲ್

    ದೇಸೀಯ ಗೋವು ತಳಿಗಳನ್ನು ಸಂರಕ್ಷಣೆ ಮಾಡುವ ದೃಷ್ಟಿಯಿಂದ ಹಾಗೂ ಹಿಂದೂ ಪರಂಪರೆಯ ಸಂಪ್ರದಾಯವನ್ನು ಮುಂದಿನ ಪೀಳಿಗೆಗೂ ಪರಿಚಯ ಮಾಡಿಸುವ ಉದ್ದೇಶದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿಯಂದು ರಾಜ್ಯಾದ್ಯಂತ ವಿಶೇಷವಾಗಿ ಗೋಪೂಜೆಯನ್ನು ನಡೆಸಲಾಗುವುದು. ಈ ನಿಟ್ಟಿನಲ್ಲಿ ಪಶು ಸಂಗೋಪನಾ ಇಲಾಖೆಯ ಸಹಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಇದನ್ನೂ ಓದಿ: ನಿರ್ಭಯಾ ನೆನಪಿಸಿದ ಇನ್ನೊಂದು ಆಘಾತಕಾರಿ ರೇಪ್ ಕೇಸ್ – ಖಾಸಗಿ ಭಾಗಕ್ಕೆ ರಾಡ್ ತುರುಕಿ ಗ್ಯಾಂಗ್‌ರೇಪ್

    Live Tv
    [brid partner=56869869 player=32851 video=960834 autoplay=true]

  • ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

    ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

    ನಂಜನಗೂಡು: ಬಲಿಪಾಡ್ಯಮಿ ದಿನವಾದ ಶುಕ್ರವಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಜುಂಡೇಶ್ವರ ದೇವಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

    ದೀಪಾವಳಿ ಹಬ್ಬದ ಪ್ರಯುಕ್ತ ನಂಜನಗೂಡಿಗೆ ಆಗಮಿಸಿದ ಸಚಿವರು ನಂಜುಂಡೇಶ್ವರನ ಸನ್ನಿಧಾನದಲ್ಲಿ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ನಂತರ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಸ್ವರ್ಗದಲ್ಲಿ ಅಪ್ಪ, ಅಮ್ಮನೊಂದಿಗೆ ಪುನೀತ್ – ಫೋಟೋ ವೈರಲ್

    ಬಳಿಕ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ನವೀಕೃತ ಪ್ರತಿಮೆ ಉದ್ಘಾಟನೆ ಮಾಡಿದ ನೇರ ಪ್ರಸಾರದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುದನ್ನು ತಿಳಿದು ಸಚಿವರು ಸಂತಸ ವ್ಯಕ್ತಪಡಿಸಿದರು. 12 ಅಡಿ ಎತ್ತರ, 35 ಟನ್ ತೂಕದ ಕುಳಿತ ಭಂಗಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಹೆಗ್ಗಡದೇವನಕೋಟೆಯಿಂದ 120 ಟನ್ ಕೃಷ್ಣ ಶಿಲೆ ಬಳಸಿದ ವಿಚಾರ ತಿಳಿದು ಖುಷಿಪಟ್ಟರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ

    14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ
    ದೇವಸ್ಥಾನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ. 30 ಲಕ್ಷ ರೈತರಿಗೆ 20810 ಕೋಟಿ ರೂ. ಸಾಲ ವಿತರಣೆ ಗುರಿ ನೀಡಲಾಗಿದ್ದು, ಇದರಲ್ಲಿ 14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು.

    ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತವಾಗಿರುವ ಬಗ್ಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಸಕ ಹರ್ಷವರ್ಧನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕಾಫಿ ಬೋರ್ಡ್ ಅಧ್ಯಕ್ಷ ಕೃಷ್ಣಪ್ಪಗೌಡ, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಬಲಿಪಾಡ್ಯಮಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ

    ಬಲಿಪಾಡ್ಯಮಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ

    ಹೊಸಕೋಟೆ: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಬಲಿಪಾಡ್ಯಮಿ ದಿನದಂದು ರಾಜ್ಯದ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ದಾರೆ.

    GOVU POOJA

    ಗೋವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಲಾಗುವುದು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಿ ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆ ಮಾಡಲಾಗುವುದು. ಅಂದು ಸಂಜೆ 5:30 ರಿಂದ 6:30 ರವರೆಗೆ ಗೋಧೋಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಮಾಡಿ ಸ್ಪೆಷಲ್ ಬರ್ಫಿ

    FIRECRACKERS

    ಗೋಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಕ್ರಮವಹಿಸುವುದರ ಜೊತೆಯಲ್ಲಿ ಗೋವುಗಳನ್ನು ದೇವಸ್ಥಾನಕ್ಕೆ ಕರೆತರುವುದು ಹಾಗೂ ಕಳುಹಿಸುವ ಪೂಜೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾವುದು. ಇದನ್ನೂ ಓದಿ: ಶೇರ್‌ ಮಾಡೋದನ್ನು ನಿಲ್ಲಿಸಿ – ವೈರಲ್ ಆಗಿರುವ ಅಪ್ಪು ಫೋಟೋ ಸೀಕ್ರೆಟ್ ರಿವಿಲ್

    ಗೋವುಗಳು ಅಲಭ್ಯವಾದಲ್ಲಿ ಸ್ಥಳೀಯ ಗೋಶಾಲೆ ಮಠದಲ್ಲಿರುವ ಇಲಾಖೆಯ ಗೋವುಗಳು ಅಥವಾ ಹತ್ತಿರದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಸಂಪರ್ಕಿಸುವುದು. ಪೂಜಾ ಸಂದರ್ಭದಲ್ಲಿ ಅಧಿಕಾರಿ/ ಸಿಬ್ಬಂದಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ

    ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ

    ಮೈಸೂರು: ಬಿಜೆಪಿಯವರಿಗೆ ನಿಜವಾಗಿಯೂ ಹಸುಗಳ ಬಗ್ಗೆ ಪ್ರೀತಿ ಇದ್ದರೆ ಮೊದಲು ಇವರು ಮಾಡುತ್ತಿರುವ ಗೋಮಾಂಸ ರಫ್ತನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸವಾಲು ಹಾಕಿದ್ದಾರೆ.

    GOVU POOJA

    ಬಲಿಪಾಡ್ಯಮಿ ದಿನದಂದು ಕಡ್ಡಾಯವಾಗಿ ಗೋಪೂಜೆ ಮಾಡಬೇಕೆಂಬ ರಾಜ್ಯ ಸರ್ಕಾರದ ಆದೇಶ ನಾಟಕೀಯವಾದದ್ದು ಎಂದು ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ ಮಾಡಬೇಕೆಂದು ಆದೇಶ ಹೊರಡಿಸಿರುವ ರಾಜ್ಯ ಬಿಜೆಪಿ ಸರ್ಕಾರವು ದೀಪಾವಳಿಯ ಪೂಜೆ ವೇಳೆ ಸಹಜವಾಗಿ ನಡೆಯುವ ಗೋಪೂಜೆ ಆಚರಣೆಗಳಿಗೂ ತನ್ನ ರಾಜಕೀಯ ಬಣ್ಣ ಬಳಿದಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಗ್ರಾಮೀಣ ಭಾರತದಲ್ಲಿ ಕೃಷಿಯ ಮೂಲಕ ಬದುಕು ಕಂಡುಕೊಂಡಿರುವ ಎಲ್ಲಾ ರೈತರೂ ದೀಪಾವಳಿ ಮತ್ತು ಸಂಕ್ರಾಂತಿ ಹಬ್ಬದ ವೇಳೆ ಹಸುಗಳ ಮೈತೊಳೆದು, ಅಲಂಕಾರ ಮಾಡಿ ನಂತರ ಕಿಚ್ಚು ಹಾಕಿಸುವಂತಹ ಆಚರಣೆಯು ಅನಾದಿ ಕಾಲದಿಂದಲೂ ಇದೆ. ಈ ಆಚರಣೆಯನ್ನು ನಮ್ಮ ರೈತರು ಬಿಜೆಪಿಗರಿಂದ ಕಲಿಯಬೇಕೇನು ಎಂದು ಪ್ರಶ್ನಿಸಿದ್ದಾರೆ.

    ಬೆಲೆ ಏರಿಕೆಯ ನಡುವೆ ದೀಪಾವಳಿಯೂ ಬೇಡ ಎಂಬ ಪರಿಸ್ಥಿತಿಗೆ ಜನಸಮಾನ್ಯರನ್ನು ನೂಕಿರುವ ಬಿಜೆಪಿಗರು ಗೋವಿನ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಹಾಸ್ಯಸ್ಪದ ಬೆಳವಣಿಗೆ ಎಂದು ಲೇವಡಿ ಮಾಡಿದ್ದಾರೆ.

    BEEF

    ಹೈನುಗಾರಿಕೆಯನ್ನೇ ಉಪ ಕಸುಬಾಗಿಸಿಕೊಂಡಿರುವ ನಮ್ಮೆಲ್ಲಾ ರೈತರ ಕುಟುಂಬಗಳಿಗೆ ತಲಾ 2 ಹಸುಗಳನ್ನು ನೀಡುವ ಮೂಲಕ ಹಸುವಿನ ಮತ್ತು ರೈತರ ಬದುಕಿಗೆ ನೆರವಾಗಲಿ. ಗಗನಕ್ಕೆ ಏರಿರುವ ರಸಗೊಬ್ಬರದ ಬೆಲೆ ಇಳಿಸಲಿ. ಕೃಷಿ ಉಪಕರಣಗಳ ಬೆಲೆಯನ್ನು ತಗ್ಗಿಸಿ ಕೃಷಿ ಉತ್ಪಾದನೆಯನ್ನು ಉತ್ತೇಜಿಸಲಿ. ಸುಮ್ಮನೇ ಗೋವಿನ ಹೆಸರಲ್ಲಿ ನಾಟಕವೇಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಸುವರ್ಣಸೌಧ ಮುಂದೆ ಮಾತಾಡ್ ಮಾತಾಡ್ ‘ಕನ್ನಡ’ ಗೀತೆಗಳ ಕಲರವ

    ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಜನಸಮಾನ್ಯರಿಗೆ ಬೆಲೆ ಏರಿಕೆಯ ಕೊಡುಗೆಯನ್ನು ನೀಡಿದ್ದು ದೇಶಪ್ರೇಮದ ಹೆಸರನ್ನು ಹೇಳಿಕೊಂಡು ದೇಶ ನಿವಾಸಿಗಳಿಗೆ ಮೋಸ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಜನಸಾಮಾನ್ಯರು ದಂಗೆ ಏಳುವುದು ಅನಿವಾರ್ಯವಾಗಿ ಕಾಣುತ್ತಿದೆ. ಜನಸಾಮಾನ್ಯರ ನೇರ ಆಕ್ರೋಶವೇ ಇದಕ್ಕೆ ಅಂತಿಮ ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

  • ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ ಎಂದು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

    GOVU

    ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೆನಡಾ ರಕ್ಷಣಾ ಸಚಿವರಾಗಿ ಭಾರತ ಮೂಲದ ಅನಿತಾ ಆನಂದ್ ಆಯ್ಕೆ

    ಆ ದಿನ ಗೋವುಗಳನ್ನು ದೇವಾಲಯಕ್ಕೆ ಕರೆತಂದು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಬೇಕು. ನಂತರ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಬೇಕು ಎಂದು ತಿಳಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.

    GOVU POOJA

    ಅನಾದಿಕಾಲದಿಂದಲೂ ನಮ್ಮ ಪೂರ್ವಿಕರು ಗೋವಿನ ಪೂಜೆ ಮಾಡುತ್ತಿದ್ದರು. ಇದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಕರ್ನಾಟಕದಲ್ಲೂ ಹಿಂದಿನಿಂದಲೂ ಗೋಪೂಜೆ ಮಾಡುವ ಪದ್ಧತಿ ಇತ್ತು. ಆದರೆ ಆಧುನಿಕ ಕಾಲದಲ್ಲಿ ನಮ್ಮ ಜನತೆ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಅಧಿಕೃತ ಅರ್ಜಿ ಸಲ್ಲಿಕೆ

    ಬಲಿಪಾಡ್ಯಮಿ ದಿನ ಗೋಪೂಜೆ ಮಾಡುವುದು ಶ್ರೇಷ್ಠ. ಈ ಪದ್ಧತಿಯನ್ನು ನಾಡಿನ ಜನತೆ ಮರೆಯಬಾರದು ಎಂದು ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

  • ಅಧಿವೇಶನದ ನಂತರ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿಯೇ ಸಮಸ್ಯೆ ಪರಿಹಾರ: ಶಶಿಕಲಾ ಜೊಲ್ಲೆ

    ಅಧಿವೇಶನದ ನಂತರ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿಯೇ ಸಮಸ್ಯೆ ಪರಿಹಾರ: ಶಶಿಕಲಾ ಜೊಲ್ಲೆ

    -ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

    ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

    ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು ಸೋಮವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಧಾರ್ಮಿಕ ಪರಿಷತ್ತಿನ ಸಭೆ ನಡೆಸಿದರು. ಈ ಸಭೆಯಲ್ಲಿ ಮುಜರಾಯಿ ಇಲಾಖೆಯಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುವ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಇರುವ ಪ್ರಮುಖ ದೇವಸ್ಥಾನಗಳ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಇಲಾಖೆಯಲ್ಲಿ ನಾವು ಮಾಡಬೇಕಾದಂತಹ ಕೆಲಸ ಬಹಳ ಇದೆ. ಇಡೀ ಜಗತ್ತಿನಲ್ಲಿಯೇ ನಮ್ಮ ಸಂಸ್ಕೃತಿ, ಆದ್ಯಾತ್ಮಿಕತೆಗೆ ಹೆಸರುವಾಸಿಯಾಗಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸ ನಮ್ಮದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸಾಹಿತ್ಯ ಲೋಕದಲ್ಲಿ ಕ್ರಾಂತಿ – ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಲಿದ್ದಾರೆ ಸುನಿಲ್ ಕುಮಾರ್

    ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆಯ ಕಾರ್ಯದರ್ಶಿಯ ಜೊತೆಗೆ ಚರ್ಚೆ ನಡೆಸಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಭರ್ತಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೆ ಕಡೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರೆ, ಅಥವಾ ಇಲಾಖಾ ಹಂತದಲ್ಲಿ ಅವ್ಯವಹಾರ ನಡೆಯುತ್ತಿದ್ದರೆ, ಹಿರಿಯ ಅಧಿಕಾರಿಗಳು ಅದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಬನಶಂಕರಿ ದೇವಸ್ಥಾನದ ಅವ್ಯವಹಾರದ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮುಜರಾಯಿ ಇಲಾಖೆಯ ಆಯುಕ್ತರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

    ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಮಿಟಿಗಳು ಇಲಾಖೆಯ ಮಾಹಿತಿಯನ್ನು ಧಾರ್ಮಿಕ ಪರಿಷತ್ ಸದಸ್ಯರಿಗೆ ನೀಡುವುದಿಲ್ಲ ಎಂಬ ಆರೋಪ ಇದೆ. ಆಯುಕ್ತರು ಸಂಬಂಧ ಪಟ್ಟವರನ್ನು ಸಂಪರ್ಕಿಸಿ ಸದಸ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಬೇಕು. ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹದ ಯೋಜನೆ ಜಾರಿಯಲ್ಲಿದ್ದು, ಅದನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ: ಆರಗ ಜ್ಞಾನೇಂದ್ರ

    ಗೋಪೂಜೆಗೆ ಆದ್ಯತೆ:
    ಗೋವು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಾಯಿ ಸ್ಥಾನದಲ್ಲಿ ನೋಡುತ್ತೇವೆ. ಹೀಗಾಗಿ ಕೇವಲ ಪಶು ಸಂಗೋಪನೆ ಇಲಾಖೆ ಮಾತ್ರವಲ್ಲ. ಮುಜರಾಯಿ ಇಲಾಖೆಯ ಮೂಲಕವೂ ಗೋವಿನಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಅಲ್ಲದೇ ದೀಪಾವಳಿ ಸಂದರ್ಭದಲ್ಲಿ ಗೋ ಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅರ್ಚಕರಿಗೆ ಜೀವ ವಿಮೆ ಮಾಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ಅರ್ಚಕರಿಗೆ ವೇತನ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಮ್ಮ ರಾಜ್ಯದ ಜನರು ಬೇರೆ ರಾಜ್ಯದ ದೇವಸ್ಥಾನಗಳಿಗೆ ಪ್ರವಾಸ ಕೈಗೊಳ್ಳುವ, ಮಹಾರಾಷ್ಟ್ರದ ತುಳಜಾಭವಾನಿ, ಫಂಡರಾಪುರ, ಗುಡ್ಡಾಪುರ ದಾನಮ್ಮ, ಆಂಧ್ರಪ್ರದೇಶದ ತಿರುಪತಿ, ಶ್ರೀಶೈಲದಲ್ಲಿ ರಾಜ್ಯ ಸರ್ಕಾರದ ಜಾಗ ಇರುವ ಬಗ್ಗೆ ಪರಿಶೀಲಿಸಿ ಅಲ್ಲಿ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಶೀಘ್ರವೇ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದರು.

     

  • ಗೋಹತ್ಯೆ ನಿಷೇಧ ಕಾಯಿದೆ ಅಂಗೀಕಾರ- ಗೋವಿಗೆ ಪೂಜೆ ಮಾಡಿ ಸಿಎಂ ಸಂಭ್ರಮ

    ಗೋಹತ್ಯೆ ನಿಷೇಧ ಕಾಯಿದೆ ಅಂಗೀಕಾರ- ಗೋವಿಗೆ ಪೂಜೆ ಮಾಡಿ ಸಿಎಂ ಸಂಭ್ರಮ

    – ಸಾರಿಗೆ ನೌಕರರ ಬೇಡಿಕೆ ಈಡೇರಿಸೋದು ಕಷ್ಟ
    – ಸಚಿವ ಸ್ಥಾನಕ್ಕೆ ಆರ್. ಶಂಕರ್ ಲಾಬಿ

    ಬೆಂಗಳೂರು: ಗೋಹತ್ಯೆ ನಿಷೇಧ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಭ್ರಮ ವ್ಯಕ್ತಪಡಿಸಿದ್ದು, ಇಂದು ಗೋ ಪೂಜೆ ಮಾಡಿದ್ದಾರೆ.

    ಕಾವೇರಿ ನಿವಾಸದಲ್ಲಿ ಸಿಎಂ ಅವರು ಗೋವಿಗೆ ಪೂಜೆ ನೆರವೇರಿಸಿದ್ದು, ಪೂಜೆಯಲ್ಲಿ ಪುತ್ರ, ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಮತ್ತಿರರು ಭಾಗಿಯಾಗಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೇಲ್ಮನೆಯಲ್ಲಿ ಗೋಹತ್ಯೆ ವಿಧೇಯಕ ಮಂಡನೆಯಾಗದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಗ್ರೀವಾಜ್ಞೆ ಮೂಲಕ ಕಾಯಿದೆ ಜಾರಿ ಮಾಡುತ್ತೇವೆ. ಮಂಗಳವಾರ ಒಂದು ದಿನದ ಅಧಿವೇಶನ ಕರೆಯಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ರಾಜ್ಯಪಾಲರ ಜೊತೆಯೂ ಚರ್ಚೆ ಮಾಡಿದ್ದೇವೆ ಎಂದು ಹೇಳುತ್ತಾ ನಿನ್ನೆ ಅಧಿವೇಶನ ಬೇಗ ಮುಕ್ತಾಯಗೊಳಿಸಿದ್ದಕ್ಕೆ ಬಿಎಸ್‍ವೈ ಅಸಮಾಧಾನ ವ್ಯಕ್ತಪಡಿಸಿದರು.

    BSY 1

    ಮಂಗಳವಾರ ಮತ್ತೊಮ್ಮೆ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಪತ್ರ ಕಳುಹಿಸಲಾಗಿದೆ. ಯಾವುದೇ ಕಾರಣಕ್ಕೂ ಅಧಿವೇಶನ ಮುಂದೂಡುವ ಅಧಿಕಾರ ಸಭಾಪತಿಗಿಲ್ಲ. ಹಿಂದೆ ಬಿಎಸಿ ಸಭೆಯಲ್ಲಿ ಮಂಗಳವಾರದವರೆಗೂ ಸದನ ನಡೆಸಬೇಕು ಎಂದು ತೀರ್ಮಾನ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಸಭಾಪತಿ ಗಳೇ ಇದ್ದರು. ಆದರು ಕೂಡ ದಿಢೀರನೆ ಮುಂದೆ ಹಾಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಮಾತನಾಡಿದ ಅವರು, ಸಾರಿಗೆ ನೌಕರರು ಪ್ರತಿಭಟನೆ ಕೈ ಬಿಡುವಂತೆ ಸಿಎಂ ಮನವಿ ಮಾಡಿದರು. ಆದರೆ ಕೋವಿಡ್ ಹಾಗೂ ಆರ್ಥಿಕ ಸಂಕಷ್ಟ ಪರಿಸ್ಥಿತಿಯಲ್ಲಿ ಅವರ ಬೇಡಿಕೆ ಸದ್ಯ ಈಡೇರಿಸೋದು ಕಷ್ಟ ಎಂದರು. ಇದೇ ವೇಳೆ ಅವರನ್ನು ಕರೆದು ಮಾತಾಡ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈಗಾಗಲೇ ಸಂಬಂಧಿಸಿದ ಸಚಿವರು ಅವರ ಜೊತೆ ಚರ್ಚೆ ಮಾಡಿದ್ದಾರೆ ಎಂದರು.

    ಇನ್ನು ಚಳಿಗಾಲದ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಶುರುವಾದ ಮಂತ್ರಿ ಸ್ಥಾನಕ್ಕೆ ಲಾಬಿ ಜೋರಾಗಿದೆ. ಕಾವೇರಿ ನಿವಾಸದಲ್ಲಿ ಸಿಎಂ ಭೇಟಿ ಮಾಡಿದ ಆರ್ ಶಂಕರ್, ಸಂಪುಟ ವಿಸ್ತರಣೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಇಷ್ಟು ದಿನ ಸದನ ಅಂತ ಸುಮ್ಮನೆ ಇದ್ದ ಅರ್ ಶಂಕರ್, ಇದೀಗ ಸದನ ಮುಕ್ತಾಯವಾಗ್ತಿದ್ದಂತೆ ಮತ್ತೆ ಮಂತ್ರಿ ಸ್ಥಾನಕ್ಕಾಗಿ ಒತ್ತಡ ಶುರುವಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ಮೈಸೂರಿನಲ್ಲಿ ಗೋಪೂಜೆ ಮಾಡಿ ಸಂಕ್ರಾಂತಿ ಆಚರಿಸಿದ ವಿದೇಶಿಗರು

    ಮೈಸೂರಿನಲ್ಲಿ ಗೋಪೂಜೆ ಮಾಡಿ ಸಂಕ್ರಾಂತಿ ಆಚರಿಸಿದ ವಿದೇಶಿಗರು

    ಮೈಸೂರು: ಇಂದು ರಾಜ್ಯದೆಲ್ಲೆಡೆ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರಲ್ಲೂ ಸಾಂಸ್ಕೃತಿಕ ನಗರಿಯಲ್ಲಿ ನಡೆದ ಮಕರ ಸಂಕ್ರಾಂತಿ ಸಂಭ್ರಮದಲ್ಲಿ ವಿದೇಶಿಗರು ಭಾಗಿಯಾಗಿದ್ದು ವಿಶೇಷವಾಗಿತ್ತು.

    ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಗೋಪೂಜೆ ಮಾಡುವ ಮೂಲಕ ಸಂಕ್ರಾಂತಿ ಆಚರಿಸಲಾಯಿತು. ವಿದೇಶಿಗರು ಭಾರತೀಯ ಸಂಪ್ರದಾಯದಂತೆ ಗೋಪೂಜೆ ಮಾಡಿ ಗೋಮಾತೆ ನಮಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ಗೋವುಗಳಿಗೆ ಪೂಜೆ ಮಾಡಿ ಫಲತಾಂಬುಲ ಕೂಡ ನೀಡಿದರು. ಜೊತೆಗೆ ಭತ್ತದ ರಾಶಿ, ನೇಗಿಲು, ಎತ್ತಿನ ಗಾಡಿ ಪರಿಕರಗಳಿಗೂ ಪೂಜೆ ಸಲ್ಲಿಸಿದರು.

    ಭಾರತೀಯ ಗೋಪರಿವಾರ ಸಂಘ ಹಾಗೂ ಹನುಮ ಜಯಂತೋತ್ಸವ ಸಮಿತಿಯಿಂದ ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದೇಶಿಗರು ಸಂತಸ ವ್ಯಕ್ತಪಡಿಸಿದರು.