Tag: ಗೋರೆಗಾಂವ್

  • ಮುಂಬೈನಲ್ಲಿ ಭಾರೀ ಅಗ್ನಿ ಅವಘಡ – 6 ಮಂದಿ ಸಾವು, 40 ಮಂದಿಗೆ ಗಾಯ

    ಮುಂಬೈನಲ್ಲಿ ಭಾರೀ ಅಗ್ನಿ ಅವಘಡ – 6 ಮಂದಿ ಸಾವು, 40 ಮಂದಿಗೆ ಗಾಯ

    ಮುಂಬೈ: ಇಲ್ಲಿನ ಗೋರೆಗಾಂವ್‍ನ (Goregaon) ಬಹುಮಹಡಿ ಕಟ್ಟಡ ಒಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ (Massive Fire) ಅವಘಡದಲ್ಲಿ ಆರು ಜನ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ.

    ಬೆಂಕಿಗೆ ಆಹುತಿಯಾದ ಆರು ಜನರಲ್ಲಿ ಓರ್ವ ಪುರುಷ, ಐವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡ 40 ಜನರಲ್ಲಿ 12 ಪುರುಷರು ಮತ್ತು 28 ಮಹಿಳೆಯರು, ಓರ್ವ ಅಪ್ರಾಪ್ತ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮುಂಬೈನ ಎಚ್‍ಬಿಟಿ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ – ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ

    ಗೋರೆಗಾಂವ್‍ನ ಪಶ್ಚಿಮ ಆಜಾದ್ ನಗರದ ಪ್ರದೇಶದ ಜೈ ಭವಾನಿ ಕಟ್ಟಡದಲ್ಲಿ ಮುಂಜಾನೆ 3ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರು ಘಟನೆಗೆ ತೀವ್ರ ವಿಷಾಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಪಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ – ಎಫ್‌ಐಆರ್‌ ದಾಖಲಿಸಿದ ಸಿಬಿಐ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉರ್ಫಿ ಜಾವೇದ್ ಗೆ ಅತ್ಯಾಚಾರ, ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

    ಉರ್ಫಿ ಜಾವೇದ್ ಗೆ ಅತ್ಯಾಚಾರ, ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

    ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಉರ್ಫಿ ಜಾವೇದ್ (Urfi Javed) ಅವರಿಗೆ ಅತ್ಯಾಚಾರ ಮತ್ತು ಕೊಲೆ (Murder) ಬೆದರಿಕೆ ಹಾಕಿದ್ದ ಆರೋಪಿಯನ್ನು ಗೋರೆಗಾಂವ್ (Goregaon) ಪೊಲೀಸರು ಇಂದು ಬಂಧಿಸಿದ್ದಾರೆ. ವಾಟ್ಸ್ ಆಪ್ ಮೂಲಕ ಈ ನವೀನ್ ಗಿರಿ (Naveen Giri) ಎನ್ನುವ ವ್ಯಕ್ತಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ ಎಂದು ಹೇಳಲಾಗುತ್ತಿದೆ. ಈತನನ್ನು ಸೆಕ್ಷನ್ 354, 509, 506 ಹಾಗೂ 354 (ಡಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

    ಮೊನ್ನೆಯಷ್ಟೇ ಉರ್ಫಿ ಜಾವೇದ್ ಅವರನ್ನು ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಸಾರ್ವಜನಿಕವಾಗಿ ಅಶ್ಲೀಲ ಉಡುಪಿನಲ್ಲಿ ದುಬೈನಲ್ಲಿ ಅವರು ಚಿತ್ರೀಕರಣ ಮಾಡುತ್ತಿದ್ದಾಗ ಯುಎಇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವುದು ದೃಢವಾಗಿದೆ. ಪ್ರವಾಸಕ್ಕೆಂದು ತೆರಳಿದ್ದ ಉರ್ಫಿಯು ಸಾರ್ವಜನಿಕವಾಗಿ ಅರೆಬರೆ ಬಟ್ಟೆಯನ್ನು ಹಾಕಿಕೊಂಡಿದ್ದರು ಎಂದಿದ್ದಾರೆ ದುಬೈ ಪೊಲೀಸರು. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    ಈ ವಿಚಾರವಾಗಿ ಮಾಧ್ಯಮಗಳು ಉರ್ಫಿಯನ್ನು ಸಂಪರ್ಕಿಸಿದರೂ, ಈ ಕುರಿತು ಅವರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ದುಬೈನಲ್ಲಿ ಈ ರೀತಿಯ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಚಿತ್ರೀಕರಣ ಮಾಡಲು ಅವಕಾಶವಿಲ್ಲದ ಕಾರಣ ಈ ರೀತಿಯಲ್ಲಿ ಅವರು ಸಂಕಷ್ಟ ಎದುರಿಸಬೇಕಾಗಿದೆ. ಸದ್ಯ ಉರ್ಫಿ ಪೊಲೀಸರ ವಶದಲ್ಲಿ ಇದ್ದು, ಅಲ್ಲಿನ ಕಾನೂನಿಗೆ ತಲೆಬಾಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

    ನಿನ್ನೆಯಷ್ಟೇ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು. ಆಸ್ಪತ್ರೆಯ ಬೆಡ್ ಮೇಲಿಂದಲೇ ತೆಗೆದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ತಮಗಿರುವ ಸಮಸ್ಯೆ ಬಗ್ಗೆಯೂ ಅವರು ಹೇಳಿಕೊಂಡಿದ್ದರು ಅದರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರು. ದುಬೈನಲ್ಲೇ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ.

    ಇತ್ತೀಚಿನ ದಿನಗಳಲ್ಲಿ ಉರ್ಫಿ ಜಾವೇದ್ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಚಿತ್ರ ವಿಚಿತ್ರ ಬಟ್ಟೆ ಹಾಕುವ ಕಾರಣದಿಂದಾಗಿಯೇ ಅವರ ಮೇಲೆ ದೂರನ್ನು ನೀಡಿದ್ದಾರೆ. ಕೆಲ ಪ್ರಕರಣಗಳು ಅವರನ್ನು ಬೆನ್ನತ್ತಿ ಕಾಡುತ್ತಿವೆ. ಇವುಗಳಿಂದ ತಪ್ಪಿಸಿಕೊಳ್ಳಲು ಅವರು ಆಸ್ಪತ್ರೆಯ ನಾಟಕ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಸ್ವತಃ ಉರ್ಫಿ ಅವರೇ ಹೇಳಿರುವಂತೆ ಅವರಿಗೆ ‘ಲಾರಿಂಜೈಟಿಸ್’ ತೊಂದರೆ ಆಗಿದೆಯಂತೆ.

     

    ಮನುಷ್ಯನ ಧ್ವನಿ ಪೆಟ್ಟಿಗೆಗೆ ತಗಲುವ ಸೋಂಕಿಗೆ ಲಾರಿಂಜೈಟಿಸ್ ಎಂದು ಕರೆಯುತ್ತಾರೆ. ಉರ್ಫಿಯ ಗಂಟಲಿಗೆ ಈ ಸೋಂಕು ತಗುಲಿದಿಯಂತೆ. ಅಷ್ಟಕ್ಕೆ ಭಯ ಪಟ್ಟುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಿಕಿತ್ಸೆಯನ್ನೂ ಅವರು ಪಡೆದಿದ್ದಾರೆ. ಆಸ್ಪತ್ರೆಯಲ್ಲಿ ಇರುವಾಗಲೇ ವಿಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಕ್ಕಾಗಿ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]