Tag: ಗೋಲ್ಡ್ ಕೋಸ್ಟ್

  • ಕಾಮನ್ ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಭಾರತದ ಪರ ದಾಖಲೆ ಬರೆದ 15 ವರ್ಷದ ಅನೀಶ್

    ಕಾಮನ್ ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಭಾರತದ ಪರ ದಾಖಲೆ ಬರೆದ 15 ವರ್ಷದ ಅನೀಶ್

    ಗೋಲ್ಡ್ ಕೋಸ್ಟ್ : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 15 ವರ್ಷದ ಶೂಟರ್ ಅನೀಶ್ ಬನ್ವಾಲಾ ಚಿನ್ನ ಗೆಲ್ಲುವ ಮೂಲಕ ಭಾರತ ಪರ ಚಿನ್ನ ಪದಕ ಗೆದ್ದ ಕಿರಿಯ ಎಂಬ ದಾಖಲೆ ನಿರ್ಮಿಸಿದ್ದಾರೆ.

    25 ಎಮ್ ರ‍್ಯಾಪಿಡ್  ಫೈರ್ ಪಿಸ್ತೂಲ್ ನಲ್ಲಿ ಅನೀಶ್ ಚಿನ್ನವನ್ನು ಗೆದ್ದುಕೊಂಡಿದ್ದು, ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು 16 ನೇ ಚಿನ್ನದ ಪದಕವಾಗಿದೆ. ತಮ್ಮ ಮೊದಲ ಕಾಮನ್ ವೆಲ್ತ್ ಗೇಮ್ಸ್ ಪ್ರಯತ್ನದಲೇ ಚಿನ್ನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದರೊಂದಿಗೆ ಶೂಟಿಂಗ್‍ನ ಮಹಿಳೆಯರ 50 ಮೀಟರ್ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಭಾರತದ ತೇಜಸ್ವಿನಿ ಬೆಳ್ಳಿ ಪದಕ ಪಡೆದಿದ್ದಾರೆ.

    ಪದಕ ಪಟ್ಟಿಯಲ್ಲಿ ಭಾರತ ಒಟ್ಟು 16 ಚಿನ್ನ, 8 ಬೆಳ್ಳಿ, 10 ಕಂಚಿನ ಪದಕಗಳೊಂದಿಗೆ 3ನೇ ಸ್ಥಾನದಲ್ಲಿ ಮುಂದುವರಿದಿದೆ. ಭಾರತ ಈ ಹಿಂದೆ ಕಾ 2002 ಮ್ಯಾಂಚೆಸ್ಟರ್, 2006 ಮೆಲ್ಬರ್ನ್ ಹಾಗೂ 2010ರ ದೆಹಲಿ ಗೇಮ್ಸ್ ನಲ್ಲಿ ಕ್ರಮವಾಗಿ 30, 22, 38 ಚಿನ್ನದ ಪದಕಗಳನ್ನು ಜಯಿಸಿತ್ತು.

  • ಕಾಮನ್‍ವೆಲ್ತ್ ಗೇಮ್ಸ್ : ಜನರ ಮುಂದೆ ಬಾಸ್ಕೆಟ್ ಬಾಲ್ ಆಟಗಾರನಿಂದ ಗೆಳತಿಗೆ ಪ್ರಪೋಸ್- ವಿಡಿಯೋ

    ಕಾಮನ್‍ವೆಲ್ತ್ ಗೇಮ್ಸ್ : ಜನರ ಮುಂದೆ ಬಾಸ್ಕೆಟ್ ಬಾಲ್ ಆಟಗಾರನಿಂದ ಗೆಳತಿಗೆ ಪ್ರಪೋಸ್- ವಿಡಿಯೋ

    ಗೋಲ್ಡ್ ಕೋಸ್ಟ್: ಇಂಗ್ಲೆಂಡ್ ಬಾಸ್ಕೆಟ್ ಬಾಲ್ ಆಟಗಾರ ಜಾಮೆಲ್ ಆಂಡರ್ಸನ್ ಭಾನುವಾರ ನಡೆದ ಕಾಮನ್‍ವೆಲ್ತ್ ಗೇಮ್ಸ್ ವೇಳೆ ಬಾಸ್ಕೆಟ್ ಬಾಲ್ ಕೋರ್ಟ್‍ನಲ್ಲೇ ತನ್ನ ಗೆಳತಿಗೆ ಪ್ರಪೋಸ್ ಮಾಡಿದ್ದಾರೆ.

    ಭಾನುವಾರ ನಡೆದ ಪಂದ್ಯದಲ್ಲಿ ಕ್ಯಾಮೇರೋನ್ ವಿರುದ್ಧ ಇಂಗ್ಲೇಡ್ 81-54 ಅಂತರದಲ್ಲಿ ಜಯಗಳಿಸಿತ್ತು. ತಮ್ಮ ಜಯವನ್ನು ಸಂಭ್ರಮಿಸುತ್ತಿರುವಾಗಲೇ ಆಂಡರ್ಸನ್ ತನ್ನ ಟೀಂ ಜೊತೆ ಸೇರಿಕೊಂಡು ತನ್ನ ಪ್ರೇಯಸಿ ಜಾರ್ಜಿಯಾ ಜೋನ್ಸ್ ಗೆ ಸರ್ಪ್ರೈಸ್ ನೀಡಿ ಪ್ರಪೋಸ್ ಮಾಡಿದ್ದಾರೆ.

    ಆಂಡರ್ಸನ್ ಸ್ಪೇನ್‍ನ ಪಾಲಿಡೆಪೋರ್ಟಿವೊ ಲಾ ರೊಡಾಗಾಗಿ ಬಾಸ್ಕೆಟ್ ಬಾಲ್ ಆಡುತ್ತಿದ್ದು, ಜೋನ್ಸ್ ಬ್ರಿಟಿಷ್‍ನ ಮ್ಯಾಂಚೆಸ್ಟರ್ ಮಿಸ್ಟಿಕ್ಸ್ ಮಹಿಳಾ ಬಾಸ್ಕೆಟ್ ಬಾಲ್ ಲೀಗ್ ಗಾಗಿ ಆಟವಾಡುತ್ತಾರೆ.

    ಆಂಡರ್ಸನ್ ಜಾರ್ಜಿಯಾ ಅವರನ್ನು ಪ್ರಪೋಸ್ ಮಾಡುವ ವಿಡಿಯೋವನ್ನು ಇಂಗ್ಲೆಂಡ್ ತಂಡ ಬಿಡುಗಡೆ ಮಾಡಿದೆ. ಆ ವಿಡಿಯೋದಲ್ಲಿ ಇಂಗ್ಲೆಂಡ್ ತಂಡ ವೃತ್ತಾಕಾರದಲ್ಲಿ ನಿಂತುಕೊಂಡು ತಮ್ಮ ಜಯವನ್ನು ಸಂಭ್ರಮಿಸುತ್ತಿದ್ದರು. ತಕ್ಷಣ ಅವರೆಲ್ಲ ಹಿಂದೆ ಬಂದು ನಿಂತುಕೊಂಡಾಗ ಆಂಡರ್ಸನ್ ಮೊಣಕಾಲೂರಿ ಜಾರ್ಜಿಯಾರಿಗೆ ಪ್ರಮೋಸ್ ಮಾಡಿದ್ದಾರೆ.

    ನನ್ನ ತಂಡದ ಸದಸ್ಯರು ಇದರಲ್ಲಿ ಭಾಗಿಯಾಗಿ ಇಷ್ಟು ಅದ್ಭುತ ರೀತಿಯಲ್ಲಿ ಪ್ಲಾನ್ ಮಾಡಿದ್ದರು. ಹಾಗಾಗಿ ಎಲ್ಲವೂ ಸರಿಯಾಗಿ ನೆರವೇರಿತ್ತು. ಈ ವಿಚಾರ ನನ್ನ ಮನಸ್ಸಿನಲ್ಲಿತ್ತು ಹಾಗಾಗಿ ನನಗೆ ಬಾಸ್ಕೆಟ್ ಬಾಲ್ ಆಡಲು ಸುಲಭವಾಯಿತು ಎಂದು ಆಂಡರ್ಸನ್ ತಿಳಿಸಿದ್ದಾರೆ.

    ನನಗೆ ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ನನ್ನ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ನನ್ನನ್ನು ಅಲ್ಲಿ ನಿಲ್ಲಿಸಿದ್ದರು. ನಂತರ ಅಲ್ಲಿ ನಡೆದಿದ್ದನು ನೋಡಿ ನನಗೇ ಶಾಕ್ ಆಗಿದೆ ಎಂದು ಜಾರ್ಜಿಯಾ ಹೇಳಿದ್ದಾರೆ. ಈ ಒಂದು ಅವಕಾಶಕ್ಕಾಗಿ ನಾವು ತುಂಬ ಪರಿಶ್ರಮಪಟ್ಟಿದ್ದೇವೆ. ಬಾಸ್ಕೆಟ್ ಬಾಲ್ ನಮ್ಮ ಸಂಬಂಧದ ಒಂದು ಭಾಗವಾಗಿದೆ. ಹಾಗಾಗಿ ನಾನು ಈ ರೀತಿ ಮಾಡಿದೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

    ಕೋರ್ಟ್ ನಲ್ಲಿ ಜಾರ್ಜಿಯಾರನ್ನು ಪ್ರಪೋಸ್ ಮಾಡುವ ಮೊದಲು ಆಂಡರ್ಸನ್, ಜಾರ್ಜಿಯಾ ಅವರ ತಂದೆ ಜೇಫ್ ಹತ್ತಿರ ಆರ್ಶೀವಾದ ಪಡೆದಿದ್ದಾರೆ. ಜೇಫ್ ಇಂಗ್ಲೆಂಡ್ ಅಂತರಾಷ್ಟ್ರೀಯಾ ಹಾಗೂ ಮ್ಯಾಂಚೆಸ್ಟರ್ ಮಿಸ್ಟಿಕ್ಸ್ ನ ಮಾಜಿ ಕೋಚ್ ಆಗಿದ್ದಾರೆ.

    https://www.youtube.com/watch?v=odhDkFN-hZg

  • ಕಾಮನ್‍ವೆಲ್ತ್ ಗೇಮ್ಸ್ 2018- ನಾಲ್ಕನೇ ದಿನ ಚಿನ್ನಕ್ಕೆ ಮುತ್ತಿಟ್ಟ 22 ವರ್ಷದ ಪೂನಮ್ ಯಾದವ್

    ಕಾಮನ್‍ವೆಲ್ತ್ ಗೇಮ್ಸ್ 2018- ನಾಲ್ಕನೇ ದಿನ ಚಿನ್ನಕ್ಕೆ ಮುತ್ತಿಟ್ಟ 22 ವರ್ಷದ ಪೂನಮ್ ಯಾದವ್

    ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಕಾಮನ್ ವೆಲ್ತ್ ಗೇಮ್ಸ್ ನಡೆಯುತ್ತಿದ್ದು, ನಾಲ್ಕನೇಯ ದಿನವೂ ಭಾರತಕ್ಕೆ ಚಿನ್ನದ ಪದಕ ಲಭಿಸಿದೆ.

    ವೇಟ್ ಲಿಫ್ಟಿಂಗ್ ಮಹಿಳೆಯರ 69 ಕೆಜಿ ವಿಭಾಗದಲ್ಲಿ ಭಾರತದ ಪೂನಮ್ ಯಾದವ್(22) ಅವರು ಒಟ್ಟು 222 ಕೆ.ಜಿ ಭಾರ ಎತ್ತುವ ಮೂಲಕ ಭಾರತಕ್ಕೆ ನಾಲ್ಕನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್: ಭಾರತಕ್ಕೆ ನಾಲ್ಕನೇ ಚಿನ್ನ ತಂದ ರಾಗಲ ವೆಂಕಟ್ ರಾಹುಲ್

    ಇದರಂತೆಯೇ ಶೂಟಿಂಗ್ ವಿಭಾಗದಲ್ಲಿ ಮನು ಭಾಕೇರ್(ಚಿನ್ನ), ಹೀನ ಸಿಧು(ಬೆಳ್ಳಿ) ಪದಕಕ್ಕೆ ಭಾಜನರಾಗಿದ್ದಾರೆ. ಒಟ್ಟಿನಲ್ಲಿ ಈವರೆಗೆ 6 ಚಿನ್ನ, 2 ಬೆಳ್ಳಿ ಹಾಗೂ ಇಂದು ಕಂಚಿನ ಪದಕ ಭಾರತಕ್ಕೆ ಒಲಿದಿದೆ. ಇದನ್ನೂ ಓದಿ:  ಕಾಮನ್‍ವೆಲ್ತ್ ನಲ್ಲಿ ಮುಂದುವರಿದ ಚಿನ್ನದ ಬೇಟೆ- ವೇಟ್ ಲಿಫ್ಟಿಂಗ್‍ನಲ್ಲಿ ಭಾರತದ ಸತೀಶ್ ಕುಮಾರ್ ಗೆ ಗೋಲ್ಡ್

  • ಕಾಮನ್‍ವೆಲ್ತ್ ನಲ್ಲಿ ಮುಂದುವರಿದ ಚಿನ್ನದ ಬೇಟೆ- ವೇಟ್ ಲಿಫ್ಟಿಂಗ್‍ನಲ್ಲಿ ಭಾರತದ ಸತೀಶ್ ಕುಮಾರ್ ಗೆ ಗೋಲ್ಡ್

    ಕಾಮನ್‍ವೆಲ್ತ್ ನಲ್ಲಿ ಮುಂದುವರಿದ ಚಿನ್ನದ ಬೇಟೆ- ವೇಟ್ ಲಿಫ್ಟಿಂಗ್‍ನಲ್ಲಿ ಭಾರತದ ಸತೀಶ್ ಕುಮಾರ್ ಗೆ ಗೋಲ್ಡ್

    ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೂರನೇ ಚಿನ್ನ ಲಭಿಸಿದೆ.

    ಶನಿವಾರ ನಡೆದ ಪುರುಷರ 77ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಂ ಅವರು ಚಿನ್ನದ ಪದಕಕ್ಕೆ ಮತ್ತಿಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ 5 ಪದಕಗಳು ಬಂದಿವೆ. ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ- ವೇಟ್ ಲಿಫ್ಟಿಂಗ್‍ನಲ್ಲಿ ಸಂಜಿತಾ ಚಾನುಗೆ ಗೋಲ್ಡ್

    ಸತೀಶ್ ಕುಮಾರ್ ಅವರು ಒಟ್ಟು 317 ಕೆಜಿ ತೂಕ ಎತ್ತುವ ಮೂಲಕ ಅಗ್ರ ಸ್ಥಾನ ಗಳಿಸಿದ್ದಾರೆ. ಇವರಿಗೆ ಇಂಗ್ಲೆಂಡ್ ನ ಜಾಕ್ ಒಲಿವರ್ ತೀವ್ರ ಪೈಪೋಟಿ ನೀಡಿದ್ದಾರೆ. ಆದ್ರೆ ಜಾಕ್ ಎರಡನೇ ಸ್ಥಾನ ಗಳಿಸುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಆಸ್ಟ್ರೇಲಿಯಾದ ಫ್ರಾಂಕೋಯಿಸ್ ಇಟೌಂಡಿ ಒಟ್ಟು 305 ಕೆ.ಜಿ ಎತ್ತುವ ಮೂಲಕ ಮೂರನೇ ಸ್ಥಾನಗಳಿಸಿ ಕಂಚಿನ ಪದಕ ತನ್ನದಾಗಿಸಿಕೊಂಡ್ರು. ಇದನ್ನೂ ಓದಿ: ವೇಟ್‍ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಚಿನ್ನ ಗೆದ್ದುಕೊಟ್ಟ ಮೀರಾಬಾಯಿ

    ಶುಕ್ರವಾರ ಆರಂಭವಾದ ಕ್ರೀಡಾಕೂಟದಲ್ಲಿ ಸಂಜಿತಾ ಚಾನು(ಚಿನ್ನ), ದೀಪಕ್ ಲತೇರ್(ಕಂಚು), ಮೀರಾಬಾಯಿ ಚಾನು ಹಾಗೂ ಗುರುರಾಜ್ ಪೂಜಾರಿ ಅವರು ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

  • ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ- ವೇಟ್ ಲಿಫ್ಟಿಂಗ್‍ನಲ್ಲಿ ಸಂಜಿತಾ ಚಾನುಗೆ ಗೋಲ್ಡ್

    ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ- ವೇಟ್ ಲಿಫ್ಟಿಂಗ್‍ನಲ್ಲಿ ಸಂಜಿತಾ ಚಾನುಗೆ ಗೋಲ್ಡ್

    ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ ವೇಲ್ತ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರಿದಿದೆ. ಭಾರತದ ಸಂಜಿತಾ ಚಾನು ವೇಟ್‍ಲಿಫ್ಟಿಂಗ್‍ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

    53 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಸಂಜಿತಾ ಚಾನು ಮೊದಲ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮೂರನೇ ಪದಕ ಒಲಿದು ಬಂದಾಂತಾಗಿದೆ. ಇದನ್ನೂ ಓದಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ್‍ಗೆ ಸರ್ಕಾರಿ ಕೆಲಸ, 25 ಲಕ್ಷ ನಗದು ಬಹುಮಾನ- ಪ್ರಮೋದ್ ಮಧ್ವರಾಜ್

    ಸಂಜಿತಾ ಚಾನು ಒಟ್ಟು 192 ಕೆಜಿ ತೂಕ ಎತ್ತುವ ಮೂಲಕ ಅಗ್ರ ಸ್ಥಾನ ಗಳಿಸಿದ್ದಾರೆ. 182 ಕೆಜಿ ತೂಕ ಎತ್ತಿದ ಪಪುವಾ ನ್ಯೂಗಿನಿಯಾದ ಲೋಡಿಕಾ ಅವರು ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ತನ್ನದಾಗಿಸಿಕೊಂಡರೆ, ನ್ಯೂಜಿಲೆಂಡ್ ನ ರಾಚೆಲ್ ಲೆಬ್ಲಾಂಕ್ ಬಾಝಿನೆಟ್ ಅವರು ಒಟ್ಟು 181 ಕೆಜಿ ತೂಕ ಎತ್ತುವ ಮೂಲಕ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ. ಇದನ್ನೂ ಓದಿ: ವೇಟ್‍ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಚಿನ್ನ ಗೆದ್ದುಕೊಟ್ಟ ಮೀರಾಬಾಯಿ

    ಇದೀಗ ಚಿನ್ನದ ಪದಕ ಗಳಿಸಿರುವ ಸಂಜಿತಾ ಚಾನು ಅವರು 2014ರಲ್ಲಿ ನಡೆದ ಗ್ಲಾಸ್ಗೋ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲೂ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಭಾಜನರಾಗಿದ್ದರು.

    ಗುರುವಾರ 21ನೇ ಕಾಮನ್ ವೆಲ್ತ್ ಕ್ರೀಡಾಕೂಟದ ಶುಭಾರಂಭದಲ್ಲೇ ಕನ್ನಡಿಗ ಪಿ. ಗುರುರಾಜ್ ಅವರು 56 ಕೆ.ಜಿ. ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದರು. ಬಳಿಕ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮಣಿಪುರದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ದಾಖಲೆಯ 196 ಕೆಜಿ ಎತ್ತಿ ಚಿನ್ನಕ್ಕೆ ಮುತ್ತಿಟ್ಟಿದ್ದರು. ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

  • ವೇಟ್‍ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಚಿನ್ನ ಗೆದ್ದುಕೊಟ್ಟ ಮೀರಾಬಾಯಿ

    ವೇಟ್‍ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಚಿನ್ನ ಗೆದ್ದುಕೊಟ್ಟ ಮೀರಾಬಾಯಿ

    ಗೋಲ್ಡ್ ಕೋಸ್ಟ್: ಕಾಮನ್‍ವೆಲ್ತ್ ಗೇಮ್ಸ್ ಭಾರತ ಮೊದಲ ಚಿನ್ನದ ಪದಕವನ್ನು ಗೆದ್ದಿದೆ. ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮಣಿಪುರದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ದಾಖಲೆಯ 196 ಕೆಜಿ ಎತ್ತಿ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

    ಸ್ನ್ಯಾಚ್ ನಲ್ಲಿ 86 ಕೆಜಿ, ಕ್ಲೀನ್ ಮತ್ತು ಜರ್ಕ್ ನಲ್ಲಿ 110 ಕೆಜಿ ಎತ್ತುವ ಮೂಲಕ ಚಿನ್ನವನ್ನು ಗೆದ್ದರು. ಈ ವಿಭಾಗದಲ್ಲಿ ಶ್ರೀಲಂಕಾ ದಿನುಶಾ 155 ಕೆಜಿ ಎತ್ತುವ ಮೂಲಕ ಕಂಚು ಗೆದ್ದರೆ, ಮಾರಿಷಸ್ ನ ಮಾರಿ ಹನಿಟ್ರಾ 170 ಕೆಜಿ ಎತ್ತುವ ಮೂಲಕ ಬೆಳ್ಳಿ ಗೆದ್ದರು.

    ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಆರಂಭವಾದ 21 ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕನ್ನಡಿಗ ಪಿ. ಗುರುರಾಜ್ ಅವರು 56 ಕೆ.ಜಿ. ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

  • ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

    ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

    ಗೋಲ್ಡ್ ಕೋಸ್ಟ್ : ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಆರಂಭವಾದ 21 ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಕನ್ನಡಿಗ ಪಿ. ಗುರುರಾಜ್ ಅವರು 56 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ.

    ಪುರುಷರ 56 ಕೆಜಿ ವಿಭಾಗದಲ್ಲಿ ಒಟ್ಟು 249 ಕೆಜಿ ಭಾರ ಎತ್ತಿದ ಅವರು, ಸ್ಕ್ಯಾಚ್ ವಿಭಾಗದಲ್ಲಿ 111 ಕೆಜಿ, ಕ್ಲೀನ್ ಎಂಡ್ ಜರ್ಕ್ ವಿಭಾಗದಲ್ಲಿ 138 ಕೆಜಿ ಎತ್ತುವುದರ ಮೂಲಕ ಪದಕ ಗೆದ್ದಿದ್ದಾರೆ. ಗುರುರಾಜ್ ಮೊದಲ ಪದಕವನ್ನು ಜಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಭಾರತೀಯ ವಾಯುಪಡೆ ಉದ್ಯೋಗಿಯಾಗಿರುವ ಗುರುರಾಜ್, ಟ್ರಕ್ ಚಾಲಕರ ಪುತ್ರರಾಗಿದ್ದಾರೆ. ಇದೀಗ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಚಂಢೀಗಡ್ ಭಾರತೀಯ ವಾಯುಸೇನೆಗೆ ಆಯ್ಕೆಯಾಗಿ ತರಬೇತಿ ಪಡೆಯುತ್ತಿರುವ ಗುರುರಾಜ್ ಪ್ರತಿದಿನ 4 ಘಂಟೆ ಅಭ್ಯಾಸಕ್ಕೆ ತೆರಳುತ್ತಿದ್ದರು. ಚಿನ್ನ ಗೆದ್ದ ಖುಷಿಯಲ್ಲಿರುವ ಗುರುರಾಜ್ ತನ್ನ ಸಾಧನೆಗೆ ತಂದೆ-ತಾಯಿ, ಕ್ರೀಡೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಶಿಕ್ಷಕರು ಹಾಗೂ ಕೋಚ್ ರಾಜೇಂದ್ರ ಪ್ರಸಾದ್ ಅವರ ಮಾರ್ಗದರ್ಶನವೇ ಕಾರಣ ಎಂದು ಹೇಳುತ್ತಿದ್ದಾರೆ.

    ಈ ಹಿಂದೆ 2017ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಚಾಂಪಿಯನ್ ಶಿಪ್‍ನಲ್ಲಿ ಕಂಚು ಪದಕ ಹಾಗೂ 2016 ರಲ್ಲಿ ದಕ್ಷಿಣ ಏಷ್ಯಾ ಗೇಮ್ಸ್ ನಲ್ಲಿ ಗುರುರಾಜ್ ಚಿನ್ನದ ಪದಕ ಗೆದ್ದಿದ್ದರು. 2016ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು ಉಡುಪಿಯಲ್ಲಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಘೋಷಣೆ ಮಾಡಿದ್ದರು.

    ಪಿವಿ ಸಿಂಧು ಚಾಲನೆ: ಬುಧವಾರ ಭಾರತದ ಪರ ಪಿವಿ ಸಿಂಧು ತ್ರಿವರ್ಣ ಧ್ವಜ ಹಿಡಿದು ಮುನ್ನಡೆಸುವ ಮೂಲಕ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ 21ನೇ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ್ದರು. ಈ ಬಾರಿ ಕ್ರೀಡಾಕೂಟದಲ್ಲಿ 71 ರಾಷ್ಟ್ರಗಳ 4,500 ಅಥ್ಲೀಟ್ಸ್ ಭಾಗಿಯಾಗುತ್ತಿದ್ದು, 275 ಗೋಲ್ಡ್ ಮೆಡೆಲ್ ಪಡೆಯಲು ಸ್ಪರ್ಧೆ ನಡೆಸಿದ್ದಾರೆ. ಭಾರತದಿಂದ ಒಟ್ಟು 221 ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಇದು 12 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ.

    ಈ ಹಿಂದೆ ಗ್ಲಾಸ್ಗೊದಲ್ಲಿ ನಡೆದಿದ್ದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ 15 ಚಿನ್ನ, 30 ಬೆಳ್ಳಿ ಹಾಗೂ 19 ಕಂಚಿನ ಪದಕದೊಂದಿಗೆ ಒಟ್ಟು 64 ಪದಕಗಳನ್ನು ಭಾರತ ತಂಡ ಗೆದ್ದುಕೊಂಡಿತ್ತು. ಈ ಬಾರಿ ಪದಕಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಭರವಸೆಯಲ್ಲಿದೆ.