Tag: ಗೋವಾ ಚುನಾವಣೆ

  • ಬಿಜೆಪಿ ತೊರೆದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಗೋವಾ ಮಾಜಿ ಸಿಎಂ ಪುತ್ರ ಸೋಲು

    ಬಿಜೆಪಿ ತೊರೆದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಗೋವಾ ಮಾಜಿ ಸಿಎಂ ಪುತ್ರ ಸೋಲು

    ಪಣಜಿ: ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಪಣಜಿ ಕ್ಷೇತ್ರದಲ್ಲಿ ಪಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್‌ ಪರಿಕ್ಕರ್‌ ಪುತ್ರ ಉತ್ಪಲ್‌ ಪರಿಕ್ಕರ್‌, ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ.

    ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮಾನ್ಸೆರೇಟ್‌ ಅವರು ಗೆಲುವಿನ ನಗೆ ಬೀರಿದ್ದಾರೆ. ಆದರೆ ಗೆಲುವಿನ ಅಂತರದ ಬಗ್ಗೆ ಅವರು ಬೇಸರಗೊಂಡಿದ್ದಾರೆ. ಬಿಜೆಪಿ ಬೆಂಬಲಿತರೇ ತಮಗೆ ಮತ ಹಾಕಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳಲ್ಲಿ ಸೋಲು: ಇವಿಎಂ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ

    ಬಿಜೆಪಿ ಬೆಂಬಲಿತರೇ ನನಗೆ ಮತ ಹಾಕಿಲ್ಲ. ಇದನ್ನು ಬಿಜೆಪಿ ನಾಯಕರಿಗೆ ಹೇಳಿದ್ದೇನೆ. ಭವಿಷ್ಯದಲ್ಲಿ ಅವರು ಈ ಬಗ್ಗೆ ಗಮನಹರಿಸಬೇಕು. ರಾಜ್ಯ ಬಿಜೆಪಿ ಘಟಕ ಜನರಿಗೆ ಸರಿಯಾದ ಸಂದೇಶ ನೀಡಿಲ್ಲ. ನಾನು ಎಲ್ಲಾ ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಬಿಜೆಪಿಯೊಂದಿಗಿದ್ದೇನೆ ಎಂದು ತಿಳಿಸಿದ್ದಾರೆ.

    ಪಣಜಿ ಕ್ಷೇತ್ರದಲ್ಲಿ ತನಗೆ ಟಿಕೆಟ್‌ ನೀಡದೇ ಮಾನ್ಸೆರೇಟ್‌ ಅವರನ್ನು ಕಣಕ್ಕಿಳಿಸಿದ್ದಕ್ಕೆ ಅಸಮಾಧಾನಗೊಂಡಿದ್ದ ಉತ್ಪಲ್‌ ಪರಿಕ್ಕರ್‌ ಅವರು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದನ್ನೂ ಓದಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ಗೆ ಸೋಲು

    ಮೂರು ಬಾರಿ ಗೋವಾದ ಸಿಎಂ ಆಗಿದ್ದ ಮನೋಹರ್‌ ಪರಿಕ್ಕರ್‌ ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019ರಲ್ಲಿ ಅವರ ಮರಣ ನಂತರ ನಡೆದ ಉಪಚುನಾವಣೆಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ ಪ್ರತಿಸ್ಪರ್ಧಿ ಮಾನ್ಸೆರೇಟ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ ಅವರು ಬಿಜೆಪಿ ಸೇರಿದ್ದರು.

  • ಕರ್ನಾಟಕಕ್ಕೆ ಮಹದಾಯಿ ನೀರು ಬಿಡಲ್ಲ ಎಂದ ಗೋವಾ ಕಾಂಗ್ರೆಸ್ – ಕೈ ನಾಯಕರ ಮನೆಗೆ ಮುತ್ತಿಗೆ

    ಕರ್ನಾಟಕಕ್ಕೆ ಮಹದಾಯಿ ನೀರು ಬಿಡಲ್ಲ ಎಂದ ಗೋವಾ ಕಾಂಗ್ರೆಸ್ – ಕೈ ನಾಯಕರ ಮನೆಗೆ ಮುತ್ತಿಗೆ

    ಬೆಂಗಳೂರು: ಮಹದಾಯಿ ನೀರನ್ನು ಗೋವಾಗೆ ಹರಿಸುವ ಭರವಸೆಯನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳು ಕಾಂಗ್ರೆಸ್ ನಾಯಕರ ಮನೆಗಳಿಗೆ ಮುತ್ತಿಗೆ ಹಾಕಿವೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಮನೆಗೆ ಮುತ್ತಿಗೆ ಹಾಕಿರುವ ಕನ್ನಡ ಪರ ಸಂಘಟನೆಗಳು ಕಾಂಗ್ರೆಸ್ ಇಬ್ಬಗೆ ನೀತಿ ಅನುಸರಿಸುತ್ತಿದೆ. ಇಲ್ಲಿ ಕಾಂಗ್ರೆಸ್ ಕಾವೇರಿಗಾಗಿ ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡುತ್ತದೆ. ಗೋವಾದಲ್ಲಿ ಮಹದಾಯಿಯನ್ನು ಅವರಿಗೆ ನೀಡುವ ಭರವಸೆ ನೀಡಿದೆ ಎಂದು ಕಿಡಿಕಾರಿದೆ.

    ಸಿದ್ದರಾಮಯ್ಯ ಮನೆ ಮುಂದೆ ಹೈಡ್ರಾಮಾ: ಸಿದ್ದರಾಮಯ್ಯನ ಮನೆ ಮುಂದೆ ಮುತ್ತಿಗೆ ಹಾಕಿದ ಪ್ರತಿಭಟನಾ ಮುಖಂಡರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಈ ವೇಳೆ ಹೊಯ್ಸಳ ವಾಹನಕ್ಕೆ ಪ್ರತಿಭಟನಾಕಾರರು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಹಿಳಾ ಕಾರ್ಯಕರ್ತರು ಹೊಯ್ಸಳ ಕಾರಿಗೆ ಅಡ್ಡ ನಿಂತಿರು.

    ಈ ಬಗ್ಗೆ ಕನ್ನಡಪರ ಸಂಘಟನೆಯ ರವಿಶೆಟ್ಟಿ ಮಾತನಾಡಿ, ಇವತ್ತು ಕಾಂಗ್ರೆಸ್ ಇಬ್ಬಗೆ ನೀತಿ ಪಾಲಿಸುತ್ತಿದೆ. ಗೋವಾ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಲ್ಲ ಎಂದು ಉಲ್ಲೇಖಿಸಿದೆ. ಇಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀರಿಗಾಗಿ ಹೈಟೆಕ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಕರ್ನಾಟಕ ವೋಟು ಬ್ಯಾಂಕ್ ನಿಮಗೆ ಆಗಿದೆ. ಗೋವಾ, ಕರ್ನಾಟಕದಲ್ಲಿ ಬೇರೆ ಬೇರೆ ಕಾಂಗ್ರೆಸ್ ಇದ್ಯಾ ಎಂದು ಪ್ರಶ್ನಿಸಿದ ಅವರು, ವೋಟಿಗಾಗಿ ಬೇರೆ ಬೇರೆ ನೀತಿ ಅನುಸರಿಸುತ್ತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ:  ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ

    ಕಾಂಗ್ರೆಸ್‍ನವರು ಮೇಕೆದಾಟು, ಮಹಾದಾಯಿ ವಿಚಾರ ಬಾಯಿ ಬಿಡುವ ನೈತಿಕತೆ ಕಳೆದುಕೊಂಡಿದ್ದೀರಿ. ನೀವು ಯಾವ ಕಾರ್ಯಕ್ರಮಕ್ಕೆ ಹೋದರೂ ಕಪ್ಪು ಬಟ್ಟೆ ಧರಿಸಿ ಧರಣಿ ಮುಂದುವರಿಸುತ್ತೇವೆ. ಕಾಂಗ್ರೆಸ್ ಪಾದಯಾತ್ರೆ ಇನ್ನು ಮುಂದೆ ಮಾಡಿದರೆ ನಾವು ತಡೆಯುವ ಪಾದಯಾತ್ರೆ ಹೋರಾಟ ಇನ್ನು ಮುಂದೆ ಮಾಡುತ್ತೇವೆ ಎಂದು ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅಗತ್ಯ ಬಿದ್ದರೆ ಬೊಗಳುತ್ತೇನೆ, ಇಲ್ಲವೇ ಕಚ್ಚುತ್ತೇನೆ: ಹರೀಶ್ ರಾವತ್

    ಬೇರೆ ಬೇರೆ ಕಾಂಗ್ರೆಸ್ ನಾಯಕರ ಮನೆ ಮುಂದೆ ಧರಣಿ ತಡೆಯಲು ಪೊಲೀಸರು ಮುಂದಾಗಿದ್ದು, ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಸ್ತುತ ಬಿಜೆಪಿ ಸರ್ಕಾರವು ಮಹದಾಯಿ ನದಿಯನ್ನು ಕರ್ನಾಟಕಕ್ಕೆ ಕೊಡುಗೆಯಾಗಿ ನೀಡಿದೆ. ನದಿ ನೀರನ್ನು ಮರಳಿ ಪಡೆಯುತ್ತೇವೆ. ಕರ್ನಾಟಕಕ್ಕೆ ನೀರನ್ನು ಹರಿಸಲು ಬಿಡುವುದಿಲ್ಲ. ಮಹಾದಾಯಿ ಹೋರಾಟಕ್ಕಾಗಿ ಖ್ಯಾತ ವಕೀಲರ ದಂಡೇ ತೊಡಗಿಕೊಳ್ಳಲಿದೆ ಎಂದು ಶುಕ್ರವಾರ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿದೆ.

  • ಪ್ರಧಾನಿ ಮೋದಿಯಿಂದ ಇತಿಹಾಸ ತಿರುಚಲು ಪ್ರಯತ್ನ: ಚಿದಂಬರಂ ಆರೋಪ

    ಪ್ರಧಾನಿ ಮೋದಿಯಿಂದ ಇತಿಹಾಸ ತಿರುಚಲು ಪ್ರಯತ್ನ: ಚಿದಂಬರಂ ಆರೋಪ

    ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಕಿಡಿಕಾರಿದರು.

    ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಗೋವಾವನ್ನು ವಿಮೋಚನೆ ಮಾಡಲು ನೆಹರೂ ಅವರು ಸರಿಯಾದ ಸಮಯದಲ್ಲಿ ಮಧ್ಯ ಪ್ರವೇಶಿಸಿದ್ದರು. ಈ ಬಗ್ಗೆ ನೆಹರೂ ಅವರು ಗೋವಾ ಜನರ ಅಭಿಪ್ರಾಯ ಸಂಗ್ರಹಿಸಿದ್ದರು. ಆದರೆ ಪ್ರಧಾನಿ ಮೋದಿ ಅವರು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕಾರಣದಿಂದಾಗಿ ಗೋವಾ ವಿಮೋಚನೆ ವಿಳಂಬವಾಗಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

    ಮೋದಿ ಹಾಗೂ ಶಾಗೆ ಎರಡನೇ ಮಹಾಯುದ್ಧದ ನಂತರದ ಪ್ರಪಂಚದ ಇತಿಹಾಸ ತಿಳಿದಿಲ್ಲ. ಅವರಿಗೆ ಸ್ವಾತಂತ್ರ್ಯ ನಂತರದ ಭಾರತದ ಇತಿಹಾಸವೂ ತಿಳಿದಿಲ್ಲ. ಗೋವಾವನ್ನು ಮುಕ್ತಗೊಳಿಸಲು ನೆಹರೂ ಸರಿಯಾದ ಸಮಯದಲ್ಲಿ ಮಧ್ಯಪ್ರವೇಶಿಸಿದರು. ಇದರಿಂದಾಗಿಯೇ ಮಿಲಿಟರಿ ಕ್ರಮದ ವಿರುದ್ಧ ಯಾರೂ ಒಂದೇ ಒಂದು ಧ್ವನಿ ಎತ್ತಲಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜರ ವಂಶವನ್ನು ನಾಶ ಮಾಡಲು ಹೋದ ಟಿಪ್ಪು ಸುಲ್ತಾನ್ ಹೆಸರು ರೈಲಿಗೆ ಯಾಕೆ?: ಪ್ರತಾಪ್ ಸಿಂಹ

    ಈ ಬಾರಿ ನಡೆಯುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಪಕ್ಷಾಂತರ ಮಾಡಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಪಕ್ಷಕ್ಕೆ ಈಗ ಉತ್ತಮ ಕಾವಲು ಇದೆ. ಕಳ್ಳರು ಹೊರಹೋಗಿದ್ದಾರೆ. ಅವರಿಗೆಲ್ಲಾ ಜನರು ತಕ್ಕ ಬುದ್ಧಿ ಕಲಿಸುತ್ತಾರೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: 30 ಗುಂಟೆ ಜಮೀನು ಮಾರಾಟ – 2 ಗುಂಪುಗಳ ನಡುವೆ ಮಾರಾಮಾರಿ

  • ಬಡವರಿಗೆ ಸಹಾಯ ಮಾಡಬಾರದೇ?- ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

    ಬಡವರಿಗೆ ಸಹಾಯ ಮಾಡಬಾರದೇ?- ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

    ಪಣಜಿ: ಕೊರೊನಾ ಮೊದಲನೆ ಅಲೆಯಲ್ಲಿ ವಲಸೆ ಹೋಗುತ್ತಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು. ಇದರಿಂದ ಕಾಂಗ್ರೆಸ್‌ನಿಂದ ಸಹಾಯ ಮಾಡಿದೆವು. ಆದರೆ ಮೋದಿ ಅವರು ಇದರಿಂದಲೇ ಕೋವಿಡ್ ಹೆಚ್ಚುತ್ತಿದೆ ಎನ್ನುತ್ತಿದ್ದಾರೆ. ಅವರು ಏನು ಬಯಸಿದ್ದರು, ಅವರಿಗೆ ಯಾರು ಸಹಾಯ ಮಾಡಬಾರದು ಎಂದು ಬಯಸಿದ್ದರೇ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದರು.

    ನಿನ್ನೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತನಾಡಿ, ಕಾಂಗ್ರೆಸ್ ಹಾಗೂ ದೆಹಲಿ ಸರ್ಕಾರವು ವಲಸೆ ಕಾರ್ಮಿಕರಿಗೆ ಹೊರಹೊಗಲು ಉಚಿತ ಟಿಕೆಟ್ ನೀಡಿತ್ತು. ಇದರಿಂದಾಗಿ ಪಂಜಾಬ್, ಉತ್ತರಪ್ರದೇಶ, ಉತ್ತರಾಖಂಡದಲ್ಲಿ ಕೋವಿಡ್ ವೇಗವಾಗಿ ಹರಡಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

    ಕೊರೊನಾ ಎರಡನೇ ಅಲೆಯ ಸಮಯದಲ್ಲಿ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಅವರು ನಡೆಸಿದ ರ‍್ಯಾಲಿಯಿಂದ ಕೊರೊನಾ ಹೆಚ್ಚಾಗಲಿಲ್ಲವೇ, ಆ ಸಮಯದಲ್ಲಿ ಭಾರದಲ್ಲಿ ಪ್ರತಿದಿನ 2 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿತ್ತು ಎಂದು ಟೀಕಿಸಿದರು.

    ಗೋವಾದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಉದ್ಯೋಗ ಸೃಷ್ಟಿಗಾಗಿ 500 ಕೋಟಿ ರೂ.ವನ್ನು ಒದಗಿಸಲಾಗುವುದು ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೆ.30ರಷ್ಟನ್ನು ಮಹಿಳೆಯರಿಗೆ ಮೀಸಲು ಇರಿಸಲಾಗುವುದು ಎಂದರು. ಇದನ್ನೂ ಓದಿ: ಧರ್ಮವನ್ನು ಮನೆಗಳಲ್ಲಿ ಆಚರಿಸಿ, ಶಿಕ್ಷಣಕ್ಕೆ ತರಬೇಡಿ: ಸುರಯ್ಯ ಅಂಜುಮ್

    ಸರ್ಕಾರಿ ಉದ್ಯೋಗದ ನೇಮಕಾತಿಯ ಹಗರಣಗಳನ್ನು ತಡೆಯಲು ಸಿಬ್ಬಂದಿ ಆಯ್ಕೆ ಆಯೋಗವನ್ನು ರಚಿಸಲಾಗುವುದು. ದುರ್ಬಲ ವರ್ಗಗಳ ಕುಟುಂಬಗಳಿಗೆ ತಿಂಗಳಿಗೆ 6,೦೦೦ ನೀಡುವ ನ್ಯಾಯ ಯೋಜನೆಯನ್ನೂ ಜಾರಿ ಮಾಡಲಾಗುವುದು. ಇದು ಕುಟುಂಬಗಳಿಗೆ ನೆರವಾಗುವುದಲ್ಲದೆ, ಅರ್ಥ ವ್ಯವಸ್ಥೆಗೆ ಹಣ ಹರಿದು ಬರುವಂತೆಯೂ ಮಾಡಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಲವಂತವಾಗಿ ಬಿಜೆಪಿಗೆ ಮತ ಹಾಕಿಸಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಅಖಿಲೇಶ್ ಆಗ್ರಹ

    ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಬಲ ಪೈಪೋಟಿಯಲ್ಲಿದೆ. ಮೊದಲ ಬಾರಿಗೆ ಗೋವಾ ಚುನಾವಣೆಯಲ್ಲಿ ಆಪ್ ಹಾಗೂ ಸಮಾಜವಾದಿ ಪಕ್ಷ ಸ್ಪರ್ಧೆ ನಡೆಸುತ್ತಿವೆ.

  • ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋವಾದಲ್ಲಿ ಗಣಿಗಾರಿಕೆ ಪುನಾರಂಭ: ಚಿದಂಬರಂ

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋವಾದಲ್ಲಿ ಗಣಿಗಾರಿಕೆ ಪುನಾರಂಭ: ಚಿದಂಬರಂ

    ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿಗಾರಿಕೆಯನ್ನು ಮುಂದಿನ ಮೂರರಿಂದ ಆರು ತಿಂಗಳೊಳಗೆ ಪ್ರಾರಂಭಿಸುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿಗಾರಿಕೆ ರಾಜ್ಯದ ಪ್ರಮುಖ ಆದಾಯದ ಮೂಲವಾಗಿತ್ತು. ಆದರೆ 2018ರಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಸ್ಥಗಿತಗೊಂಡಿತ್ತು. ಗಣಿಗಾರಿಕೆ ಉದ್ಯಮದಲ್ಲಿ ನಡೆದ ಭ್ರಷ್ಟಾಚಾರಗಳನ್ನು ತನಿಖೆ ನಡೆಸಿ ಪುನಾರಂಭಿಸಲು ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳುತ್ತೇವೆ. ಜೊತೆಗೆ ಮಾದರಿ ನಕ್ಷೆಯನ್ನು ರೂಪಿಸಲಾಗುವುದು. ಇದಕ್ಕೆ ಉನ್ನತ ಕಾನೂನು ತಜ್ಞರ ತಂಡವನ್ನು ರಚಿಸಿ ಸಮಾಲೋಚಿಸಲಾಗುವುದು ಎಂದು ಹೇಳಿದರು.

    ಸುಮಾರು ಒಂದು ಅಥವಾ ಎರಡು ತಿಂಗಳುಗಳಲ್ಲಿ ಕಾನೂನಾತ್ಮಕವಾಗಿ ಸುಸ್ಥಿರ ಗಣಿಗಾರಿಕೆಯ ಮಾದರಿಯನ್ನು ಸಿದ್ಧಪಡಿಸಲು ಕಾಲವಕಾಶ ಬೇಕಾಗುತ್ತದೆ. ಅದಾದ ಬಳಿಕ ತಕ್ಷಣವೇ ಕಾರ್ಯಗತಗೊಳಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯೋಗ ಖಚಿತ: ಅಖಿಲೇಶ್ ಯಾದವ್

    ಈ ಎಲ್ಲಾ ಪ್ರಕ್ರಿಯೆಗೆ ಸರ್ಕಾರ ರಚನೆಯಾದ ಮೂರರಿಂದ ಆರು ತಿಂಗಳೊಳಗೆ ಗಣಿಗಾರಿಕೆ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್‍ನ ಚುನಾವಣೆ ಪ್ರಣಾಳಿಕೆ ಬಿಡುಗಡೆಗೊಳಿಸಿ ತಿಳಿಸಿದರು. ಇದನ್ನೂ ಓದಿ:  ದೆಹಲಿ ನಾಯಕರು ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಂಜಿತ್ ಚನ್ನಿ

    ಇದೇ ತಿಂಗಳ ಫೆಬ್ರವರಿ 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪ್ರಬಲ ಪೈಪೋಟಿ ನೀಡುತ್ತಿವೆ. ಮೊದಲ ಬಾರಿಗೆ ಆಪ್ ಹಾಗು ಸಮಾಜವಾದಿ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ.

  • ಗೋವಾ ಚುನಾವಣೆಯಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಪೈಪೋಟಿ: ರಾಹುಲ್ ಗಾಂಧಿ

    ಗೋವಾ ಚುನಾವಣೆಯಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಪೈಪೋಟಿ: ರಾಹುಲ್ ಗಾಂಧಿ

    ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಮಾತ್ರ ಪ್ರಬಲ ಪೈಪೋಟಿಯಿದೆ. ಬೇರೆ ಯಾವುದೇ ಪಕ್ಷಗಳಿಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದರು.

    ವರ್ಚುವಲ್ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತ್ರ ಸ್ಪರ್ಧೆಯಿದೆ. ಹೀಗಾಗಿ ಉಳಿದ ಪಕ್ಷಗಳಿಗೆ ನಿಮ್ಮ ಮತಗಳನ್ನು ನೀಡಿ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಹೇಳಿದರು.

    bjp - congress

    ಕೊರೊನಾ ಸಮಯದಲ್ಲಿ ಕೋವಿಡ್ 19 ನಿರ್ವಹಣೆ, ಜೀವನೋಪಾಯ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಜೊತೆಗೆ ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ದನಿ ಎತ್ತಿದ ಸುಮಲತಾ

    ಈ ಬಾರಿ ಪಕ್ಷಾಂತರಿಗೆ ಟೆಕೆಟ್ ನೀಡಿಲ್ಲ, ಬದಲಿಗೆ ಹೊಸಬರಿಗೆ ಅವಕಾಶ ನೀಡಲಾಗಿದೆ. ಇದರಿಂದ ಬಹುಮತದೊಂದಿಗೆ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ. ಗೋವಾದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಮತದಾರರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷವು ಗೋವಾದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ, ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಿಮ್ಮ ಮಾತನ್ನು ಕೇಳುವ ಸರ್ಕಾರಕ್ಕೆ ಮತ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಆಸ್ತಿಗಾಗಿ ಬದುಕಿದ್ದ ಅಜ್ಜಿಯನ್ನು ದಾಖಲೆಗಳಲ್ಲಿ ಸಾಯಿಸಿದ ಸಂಬಂಧಿಕರು – ಡೆತ್ ಸರ್ಟಿಫಿಕೇಟ್ ಕೊಟ್ಟ ಅಧಿಕಾರಿ!

  • ಕಾಂಗ್ರೆಸ್‌ ಕೆಲಸ ಮಾಡಿದ್ದರೆ, ನಾನು ರಾಜಕೀಯಕ್ಕೆ ಬರುವ ಅಗತ್ಯವಿರುತ್ತಿರಲಿಲ್ಲ: ಕೇಜ್ರಿವಾಲ್‌

    ಕಾಂಗ್ರೆಸ್‌ ಕೆಲಸ ಮಾಡಿದ್ದರೆ, ನಾನು ರಾಜಕೀಯಕ್ಕೆ ಬರುವ ಅಗತ್ಯವಿರುತ್ತಿರಲಿಲ್ಲ: ಕೇಜ್ರಿವಾಲ್‌

    ಪಣಜಿ: ಗೋವಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ನಾಯಕರು ಪರಸ್ಪರ ಕೆಸರೆರೆಚಾಟ ನಡೆಸುತ್ತಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಅವರು ʼಚೋಟಾ ಮೋದಿʼ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಂದೀಪ್‌ ಸಿಂಗ್‌ ಸುರ್ಜೇವಾಲ ಟೀಕಿಸಿದ್ದರು. ಅವರ ಟೀಕೆಗೆ ಕೇಜ್ರಿವಾಲ್‌ ಪ್ರತಿದಾಳಿ ನಡೆಸಿದ್ದಾರೆ.

    ಕಾಂಗ್ರೆಸ್‌ ಸರಿಯಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೆ ನಾನು ರಾಜಕೀಯಕ್ಕೆ ಬರುವ ಅಗತ್ಯವಿರುತ್ತಿರಲಿಲ್ಲ ಎಂದು ಕೇಜ್ರಿವಾಲ್‌ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಚುನಾವಣಾ ಅಖಾಡಕ್ಕೆ ಯೋಗಿ – ಮೊದಲ ಬಾರಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ

    ಕನಸಿನಲ್ಲೂ ಸುರ್ಜೇವಾಲ ಅವರು ನನ್ನನ್ನು ದೆವ್ವದಂತೆ ಕಾಣುತ್ತಾರೆ. ದಿನದ 24 ಗಂಟೆಯೂ ನಾನು ಅವರ ಮನಸ್ಸಿನಲ್ಲಿದ್ದೇನೆ. ಅವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

    ರಾಹುಲ್‌ ಗಾಂಧಿ ಅವರು ನಮ್ಮ ಒಳ್ಳೆಯ ಕಾರ್ಯಗಳನ್ನು ಅನುಸರಿಸಲಿ. ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ಜಾರಿಗೊಳಿಸಲಿ. ಕಾಂಗ್ರೆಸ್‌ ಒಳ್ಳೆಯ ಕೆಲಸಗಳನ್ನು ಮಾಡಲಿ. ಆಗ ನಾನು ರಾಜಕೀಯ ಪಕ್ಷವೊಂದನ್ನು ಮುನ್ನಡೆಸುವ ಅಗತ್ಯವಿರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಾರತವನ್ನು 2 ವಿಭಾಗವಾಗಿ ವಿಂಗಡಿಸಲಾಗಿದೆ: ರಾಹುಲ್ ಗಾಂಧಿ

    ಅರವಿಂದ್‌ ಕೇಜ್ರಿವಾಲ್‌ ʼಚೋಟಾ ಮೋದಿʼ ಆಗಿದ್ದು, ಬಿಜೆಪಿ ಸಿದ್ಧಾಂತವನ್ನು ಪ್ರತಿನಿಧಿಸುತ್ತಾರೆ. ಪ್ರಧಾನಿ ಮೋದಿ ಅವರ ರಾಜಕೀಯ ತದ್ರೂಪಿ ಆಗಿರುವ ಕೇಜ್ರಿವಾಲ್‌, ಅವರದ್ದೇ ನಡವಳಿಕೆ ಹಾಗೂ ಸರ್ವಾಧಿಕಾರ ಧೋರಣೆ ಹೊಂದಿದ್ದಾರೆ ಎಂದು ಸುರ್ಜೇವಾಲ ಟೀಕಿಸಿದ್ದರು.

  • ರಾಹುಲ್‍ ಗಾಂಧಿ ಮೋದಿ ಫೋಬಿಯಾದಿಂದ ಬಳಲುತ್ತಿದ್ದಾರೆ: ಅಮಿತ್ ಶಾ

    ರಾಹುಲ್‍ ಗಾಂಧಿ ಮೋದಿ ಫೋಬಿಯಾದಿಂದ ಬಳಲುತ್ತಿದ್ದಾರೆ: ಅಮಿತ್ ಶಾ

    ಪಣಜಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೋದಿ ಫೋಬಿಯಾದಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದರು.

    ಗೋವಾದಲ್ಲಿ ಬಿಜೆಪಿ ಅಭ್ಯಥಿ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್‍ನ ಗಾಂಧಿ ಪರಿವಾರವು ಗೋವಾವನ್ನು ತಮ್ಮ ಪ್ರವಾಸದ ತಾಣವಾಗಿ ಪರಿಗಣಿಸುತ್ತದೆ. ಆದರೆ ಬಿಜೆಪಿಯ ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು ಚಿನ್ನದ ಗೋವಾ ಕನಸನ್ನು ನನಸು ಮಾಡಿದ್ದಾರೆ ಎಂದು ತಿಳಿಸಿದರು.

    ಬಿಜೆಪಿಯಿಂದ ಮಾತ್ರ ಗೋವಾದ ಅಭಿವೃದ್ಧಿ ಸಾಧ್ಯ. ನಿಮಗೆ ಬಿಜೆಪಿಯ ಚಿನ್ನದ ಗೋವಾ ಬೇಕಾ ಅಥವಾ ಕಾಂಗ್ರೆಸ್‍ನ ಗಾಂಧಿ ಪರಿವಾರದ ಗೋವಾ ಬೇಕೇ ಎಂಬುದನ್ನು ನೀವೇ ತೀರ್ಮಾನ ಮಾಡಿಕೊಳ್ಳಿ ಎಂದು ಹೇಳಿದರು. ಇದನ್ನೂ ಓದಿ: ಸೂಪರ್ ಫಾಸ್ಟ್ ಊಟ ಮಾಡಿ 5 ಸಾವಿರ ಹಣ ಗೆದ್ದ!

    ಗೋವಾ ಚುನಾವಣೆಯಲ್ಲಿ ಈ ಬಾರಿ ಟಿಎಂಸಿ, ಆಪ್, ಎನ್‍ಸಿಪಿ ಪಕ್ಷಗಳು ತಮ್ಮ ನೆಲೆಯನ್ನು ವಿಸ್ತರಿಕೊಳ್ಳಲು ಅಥವಾ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಮಾನ್ಯತೆಗಾಗಿ ಸ್ಪರ್ಧಿಸುತ್ತಿವೆ. ಈ ಪಕ್ಷಗಳಿಂದ ಗೋವಾದಲ್ಲಿ ಸರ್ಕಾರ ರಚನೆ ಅಸಾಧ್ಯ. ಬಿಜೆಪಿಯಿಂದ ಮಾತ್ರವೇ ಸರ್ಕಾರ ರಚನೆ ಮಾಡಬಹುದು. ರಾಜಕೀಯ ಸ್ಥಿರತೆ ಇರದಿದ್ದರೆ, ಅಭಿವೃದ್ಧಿ ನಿರೀಕ್ಷೆ ಸಾಧ್ಯವೇ ಇಲ್ಲ ಎಂದರು. ಇದನ್ನೂ ಓದಿ: ಶಿಲ್ಲಾಂಗ್‍ನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ

  • ರಾಜಕಾರಣದಲ್ಲಿ ಹೊಗೆ ಆಡೋದಕ್ಕೆ, ಸುದ್ದಿ ಬರೋದಕ್ಕೆ ಕಾರಣ ಇರಬೇಕು ಅಂತಿಲ್ಲ: ಸಿ.ಟಿ.ರವಿ

    ರಾಜಕಾರಣದಲ್ಲಿ ಹೊಗೆ ಆಡೋದಕ್ಕೆ, ಸುದ್ದಿ ಬರೋದಕ್ಕೆ ಕಾರಣ ಇರಬೇಕು ಅಂತಿಲ್ಲ: ಸಿ.ಟಿ.ರವಿ

    ಪಣಜಿ: ರಾಜಕಾರಣದಲ್ಲಿ ಹೊಗೆ ಆಡೋದಕ್ಕೆ, ಸುದ್ದಿ ಬರೋದಕ್ಕೆ ಕಾರಣ ಇರಬೇಕು ಅಂತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

    ಗೋವಾದ ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಆಗಾಗ ಸುದ್ದಿ ಬರುತ್ತವೆ. ಕೆಲವು ಬಾರಿ ಬೆಂಕಿ ಇಲ್ಲದೇ ಹೊಗೆ ಆಡುತ್ತದೆ. ಈ ಬಗ್ಗೆ ನನಗೇನು ಮಾಹಿತಿ ಇಲ್ಲ. ಈಗ ನಾವು ಗೋವಾದಲ್ಲಿ ಮತ್ತೆ ಸರ್ಕಾರ ಬರಬೇಕು ಎನ್ನುವ ಪ್ರಯತ್ನದಲ್ಲಿ ತೊಡಗಿದ್ದೇವೆ ಎಂದು ಹೇಳಿದರು.

    ನೀವು ಸಿಎಂ ಕೇಳಿದರೆ ಸಂಪುಟ ವಿಸ್ತರಣೆ ಬಗ್ಗೆ ಉತ್ತರ ಕೊಡಬಲ್ಲರು. ಸಂಪುಟ ವಿಸ್ತರಣೆ, ಪುನಾರಚನೆ ಅದು ಮುಖ್ಯಮಂತ್ರಿಗೆ ಸಂಬಂಧಿಸಿದ ಅಧಿಕಾರವಾಗಿದೆ. ಯಾರನ್ನು ಮಂತ್ರಿ ಮಾಡಬೇಕು, ಯಾರನ್ನು ಕೈ ಬಿಡಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ವರಿಷ್ಠರ ಜೊತೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಂಜಾಬ್‍ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್

    ನಮಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಗಮನ ಇಲ್ಲ. ನಾವು ಸದ್ಯಕ್ಕೆ ಗೋವಾ ಚುನಾವಣೆಯಲ್ಲಿ ಮಗ್ನರಾಗಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿಗೂ ಗೊತ್ತು. ನಮಗಂತೂ ಅದರ ಬಗ್ಗೆ ಮಾಹಿತಿ ಇಲ್ಲ ಎಂದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನ

  • ಪಕ್ಷಾಂತರ ತಡೆಗೆ ಕಾಂಗ್ರೆಸ್‍ನ 35 ಅಭ್ಯರ್ಥಿಗಳಿಂದ ಆಣೆ ಪ್ರಮಾಣ

    ಪಕ್ಷಾಂತರ ತಡೆಗೆ ಕಾಂಗ್ರೆಸ್‍ನ 35 ಅಭ್ಯರ್ಥಿಗಳಿಂದ ಆಣೆ ಪ್ರಮಾಣ

    ಬೆಳಗಾವಿ: ಗೋವಾ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಪಕ್ಷಾಂತರ ತಡೆಯಲು ಕಾಂಗ್ರೆಸ್ ಪಕ್ಷದ 35 ಅಭ್ಯರ್ಥಿಗಳಿಂದ ಆಣೆ ಪ್ರಮಾಣದ ಪಾಲಿಟಿಕ್ಸ್ ಶುರುವಾಗಿದೆ.

    ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಗೋವಾ ನಾಯಕ ದಿಗಂಬರ ಕಾಮತ್ ಸಮ್ಮುಖದಲ್ಲಿ 35 ಕಾಂಗ್ರೆಸ್ ಅಭ್ಯರ್ಥಿಗಳ ಸಭೆ ನಡೆಸಿದರು. ಸಭೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳು ಬಸ್‍ನಲ್ಲಿ ಮಂದಿರ, ಮಸೀದಿ, ಚರ್ಚ್‍ಗೆ ತೆರಳಿದರು.

    ಈ ವೇಳೆ ದಿಗಂಬರ ಕಾಮತ್ ಮಾತನಾಡಿ, ಪಣಜಿಯ ಮಹಾಲಕ್ಷ್ಮೀ ಮಂದಿರದಲ್ಲಿ ಪೂಜೆ ಸಲ್ಲಿಸಿ ಅಭ್ಯರ್ಥಿಗಳು ಆಣೆ ಪ್ರಮಾಣ ಮಾಡಿದ್ದಾರೆ. ಕಳೆದ ಬಾರಿ ವಿಧಾನಸಭೆಯಲ್ಲಿ ಆದ ತಪ್ಪು ಮರುಕಳಿಸದಿರಲೆಂದು ಎಚ್ಚರಿಕೆ ಹೆಜ್ಜೆ ಇಟ್ಟಿದ್ದೇವೆ ಎಂದರು. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

    2017ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ 17 ಸ್ಥಾನ ಗೆದ್ದು ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಐದು ವರ್ಷಗಳ ಅವಧಿಯಲ್ಲಿ ಗೋವಾದ 17 ಕಾಂಗ್ರೆಸ್ ಶಾಸಕರ ಪೈಕಿ 15 ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಹೀಗಾಗಿ ಮತ್ತೆ ಆ ತಪ್ಪು ಪುನರಾವರ್ತನೆ ಆಗದಿರಲಿ ಎಂದು ಅಭ್ಯರ್ಥಿಗಳಿಂದ ಆಣೆ ಪ್ರಮಾಣ ನಡೆಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ: ಬೊಮ್ಮಾಯಿ