ಬೆಳಗಾವಿ: ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಈಗಾಗಲೇ ಜಲಾಶಯಗಳಲ್ಲಿ ನೀರನ್ನು ಸಂಗ್ರಹಿಸಿ ಇಡಲಾಗಿದ್ದು ಕುಡಿಯುವ ನೀರಿನ ಸಮಸ್ಯೆ ಬಂದರೂ ಪರಿಹಾರ ಮಾಡಲು ಸೂಚನೆ ಕೊಡುತ್ತೇನೆ ಎಂದು ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರನ್ನು ಗ್ರಾಮೀಣ ಪ್ರದೇಶಕ್ಕೆ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆ ಮತ್ತು ಪಟ್ಟಣಗಳಿಗೆ ನಗರಾಭಿವೃದ್ಧಿ ಇಲಾಖೆಗೆ ಪೂರೈಸುವ ಜವಾಬ್ದಾರಿ ವಹಿಸಿಕೊಟ್ಟಿದ್ದೇವೆ. ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೇ ಇದ್ದರೂ ಪರಿಹಾರ ಮಾಡಲು ಸೂಚನೆ ಕೊಡುತ್ತೇನೆ. ನಮ್ಮ ಜಲಾಶಯದಲ್ಲಿ ಬೇಸಿಗೆ ಕಾಲಕ್ಕೆ ಬೇಕಾಗುವಷ್ಟು ನೀರನ್ನು ಹಿಡಿದಿಟ್ಟಿದ್ದೇವೆ ಎಂದರು. ಇದನ್ನೂ ಓದಿ: 90 ವರ್ಷದ ಬುದ್ಧಿಮಾಂದ್ಯ ತಾಯಿ, ಮಗನನ್ನು ಗುರುತಿಸುವ ಭಾವನಾತ್ಮಕ ವೀಡಿಯೋ ವೈರಲ್
ಹಿಡಕಲ್, ನಾರಾಯಣಪುರ, ಆಲಮಟ್ಟಿ, ಹಿಪ್ಪರಗಿ ಜಲಾಶಯದಲ್ಲಿ ನೀರಿನ್ನು ಹಿಡಿದು ಇಟ್ಟಿದ್ದೇವೆ. ಹೀಗೆ ರಾಜ್ಯದ ಬೇರೆ, ಬೇರೆ ಜಲಾಶಯದಲ್ಲಿ ನೀರನ್ನು ಸಂಗ್ರಹಿಸಲಾಗಿದೆ. ಅವಶ್ಯಕತೆ ಇದ್ದಾಗ ಕುಡಿಯಲು ನೀರು ಜಲಾಶಯದಿಂದ ಕೊಡುತ್ತೇವೆ. ಬೇಸಿಗೆ ಕಾಲದಲ್ಲಿ ಕುಡಿಯಲು ಮಾತ್ರ ಕೊಡುತ್ತೇವೆ. ಬೇಸಿಗೆ ಕಾಲದಲ್ಲಿ ಬೆಳೆಗಳಿಗೆ ಕೊಡಲು ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೂರ್ಯ-ಚಂದ್ರ ಇರುವವರೆಗೂ ಹಿಂದೂ ಧರ್ಮ, ಮಾತೃ ಭಾಷೆ ಶಾಶ್ವತವಾಗಿರುತ್ತೆ: ಕಾರಜೋಳ
ಬೆಳಗಾವಿ: ಕರ್ನಾಟಕದಲ್ಲಿ 2,500 ಸಾವಿರ ವರ್ಷಗಳಿಂದ ಕನ್ನಡ ನಾಡಿನಲ್ಲಿ, ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕ ಮಹನೀಯರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ. ನಮ್ಮನ್ನು ಪರಕೀಯರು 600 ವರ್ಷಗಳ ಕಾಲ ಆಳಿದ್ದಾರೆ. ಕನ್ನಡ ಭಾಷೆಗೆ ಯಾರ ಜಟಾಪಟಿನೂ ಅಗತ್ಯತೆ ಇಲ್ಲ. ದೇಶದಲ್ಲಿ ಆಯಾ ಪ್ರದೇಶ, ರಾಜ್ಯಗಳಲ್ಲಿ ಮಾತೃಭಾಷೆಗಳಿರುತ್ತವೆ. ಅದೇ ರೀತಿ ಕರ್ನಾಟಕದಲ್ಲೂ ಕನ್ನಡ ಮಾತೃಭಾಷೆ ಇದೆ ಎಂದರು. ಇದನ್ನೂ ಓದಿ: 90 ವರ್ಷದ ಬುದ್ಧಿಮಾಂದ್ಯ ತಾಯಿ, ಮಗನನ್ನು ಗುರುತಿಸುವ ಭಾವನಾತ್ಮಕ ವೀಡಿಯೋ ವೈರಲ್
ಕನ್ನಡ ಭಾಷೆ ನಮಗೆ ತಾಯಿ ಸಮಾನವಾಗಿದೆ. ಹೀಗಾಗಿ 2,500 ಸಾವಿರ ವರ್ಷದಿಂದ ಈ ನಾಡಿನಲ್ಲಿ ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ. ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ತಿಳಿಸಿದರು.
ಬೆಳಗಾವಿ: ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಜಿಲ್ಲೆಯ ವಿದ್ಯಾರ್ಥಿಗಳ ರಕ್ಷಣೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಮುಖ್ಯಸ್ಥ ಪ್ರವೀಣ್ ಬಾಗೇವಾಡಿ ಹಾಗೂ ಬೆಳಗಾವಿ ಎಸಿ ರವಿ ಕರಲಿಂಗಣ್ಣವರ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಇಬ್ಬರು ನೋಡಲ್ ಅಧಿಕಾರಿಗಳನ್ನು ಮುಂಬೈಗೆ ಕಳುಹಿಸಿಕೊಟ್ಟಿದ್ದು, ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಹೇಳಿದರು.
ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಬೇಕಿಲ್ಲ. ಪ್ರಧಾನಿ ಮೋದಿಯವರು ಸತತವಾಗಿ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಸುರಕ್ಷಿತವಾಗಿ ನಮ್ಮ ರಾಜ್ಯಕ್ಕೆ ಅವರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ ಎಂದರು. ಇದನ್ನೂ ಓದಿ:ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ
ಬೆಳಗಾವಿ: ಉಕ್ರೇನಿನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆಸುವ ಪ್ರಯತ್ನ ಸರ್ಕಾರ ಮಾಡ್ತಿದೆ. ಬೆಳಗಾವಿ ಇಬ್ಬರು, ವಿಜಯಪುರದ ಒಬ್ಬ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಸರ್ಕಾರ ಹೆಚ್ಚಿನ ಪ್ರಯತ್ನ ಮಾಡಿ ವಿದ್ಯಾರ್ಥಿಗಳನ್ನ ಮರಳಿ ಸುರಕ್ಷಿತವಾಗಿ ಕರೆತಲಾಗುತ್ತದೆ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಸಿಎಂ ಬೊಮ್ಮಾಯಿ ಗಮನಕ್ಕೆ ತರಲಾಗಿದೆ. ಈಗಾಗಲೇ ಎಲ್ಲ ಜಿಲ್ಲಾಧಿಕಾರಿ ಸೂಚನೆ ಕೊಡಲಾಗಿದ್ದು, ವಿದ್ಯಾರ್ಥಿಗಳ ನೆರವಿಗೆ ಧಾವಿಸುವಂತೆ ತಿಳಿಸಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳು ಪೋಷಕರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಬಾಗಲಕೋಟೆ: ಕಾಂಗ್ರೆಸ್‍ನಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರ ಎರಡೇ ಗುಂಪಲ್ಲ ಇನ್ನು ಒಂದು ಗುಂಪು ಇದೆ ಎಂದು ಸಚಿವ ಗೋವಿಂದ್ ಕಾರಜೋಳ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹಾಗೂ ಸಿದ್ದರಾಮಯ್ಯ ಎಣ್ಣೆ ನೀರು ಇದ್ದಂಗೆ. ಅವರಿಬ್ಬರು ಒಂದಾಗಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ಸ್ಥಿತಿ ಗಂಭೀರವಾಗಿದ್ದು, ಅವರವರಲ್ಲೇ ಮೂರು ಗುಂಪುಗಳಿವೆ. ಸಿದ್ದರಾಮಯ್ಯ, ಡಿಕಶಿ ಎರಡು ಗುಂಪಾದರೆ ಮೂರನೇಯ ಗುಂಪಿನಲ್ಲಿ ಖರ್ಗೆ, ಪರಮೇಶ್ವರ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಇನ್ನಿತರರಿದ್ದಾರೆ ಎಂದು ಹೇಳಿದರು.
ಬೆಳಗಾವಿ ಬಿಜೆಪಿ ನಾಯಕರ ಆಂತರಿಕ ಕಲಹ ಹಾಗೂ ಕೆಲವರು ಕಾಂಗ್ರೆಸ್ ಸೇರುತ್ತಾರೆಂಬ ವದಂತಿ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯ ಶಾಸಕರು ಕಾಂಗ್ರೆಸ್‍ಗೆ ಹೋಗಲ್ಲ, ಕಾಂಗ್ರೆಸ್ ಈಗ ಮುಳುಗುವ ಹಡಗು. ಈಗಾಗಲೇ ಕಾಂಗ್ರೆಸ್ ದೇಶದ 27 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಅಂತಹ ಪಕ್ಷಕ್ಕೆ ಯಾರೂ ಹೋಗಲು ಸಾಧ್ಯವಿಲ್ಲ. ಬಿಜೆಪಿ ಅವರು ಕಾಂಗ್ರೆಸ್‍ಗೆ ಬರುತ್ತಾರೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ನಾವೆಲ್ಲಾ ಒಂದೇ ಎಂದಿದ್ದ ಕಾಂಗ್ರೆಸ್‍ನ ಬೀದಿ ಜಗಳ ಬಯಲಿಗೆ ಬಂದಿದೆ: ಆರ್. ಅಶೋಕ್
ಬಿಜೆಪಿಗೆ ವಲಸೆ ಬಂದ ಶಾಸಕ, ಸಚಿವರ ವಿಚಾರವಾಗಿ ಮಾತನಾಡಿದ ಅವರು, ವಲಸೆ ಬಂದವರೆಂಬುದರಲ್ಲಿ ಅರ್ಥವೇ ಇಲ್ಲ. ಅವರೆಲ್ಲ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿ ಪ್ರಥಮಿಕ ಸದಸ್ಯರಾಗಿ, ಬಿಜೆಪಿಯಿಂದ ಗೆದ್ದು ಬಂದಿದ್ದಾರೆ. ಈಗ ಅವರೆಲ್ಲರೂ ಬಿಜೆಪಿಯವರೇ. ನಮ್ಮ ಜೀವ ಇರುವರೆಗೂ ಬಿಜೆಪಿಯಲ್ಲೇ ಇರುತ್ತೇವೆ ಎಂದು ಅವರೇ ಹೇಳಿದ್ದಾರೆ. ಬಿಜೆಪಿಯ ಸದಸ್ಯರಾಗಿರುವ ಎಲ್ಲರೂ ಬಿಜೆಪಿಯವರೇ, ವಲಸಿಗ ಎನ್ನುವ ವಿಷಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮತ್ತೆ ಸಚಿವರ ವಿರುದ್ಧ ತಿರುಗಿ ಬಿದ್ದ ರೇಣುಕಾಚಾರ್ಯ – ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು
ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂಪಾ ಎಂದೇ ಖ್ಯಾತಿ ಪಡೆದಿರುವ ಚಂದ್ರಶೇಖರ್ ಪಾಟೀಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರಿಗೆ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ನಿಧನ
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ, ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ್‌ಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್ ಜೋಶಿ
ಖ್ಯಾತ ಕವಿ, ಚಂಪಾ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ್‌ರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಸಂಘಟನಕಾರರಾಗಿ, ಹೋರಾಟಗಾರರಾಗಿ, ನಾಡಿನ ಸಾಮಾಜಿಕ, ಸಾಂಸ್ಕೃತಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದ ಚಂಪಾ ಅವರ ನಿಧನದಿಂದ ನಮ್ಮ ನಾಡು ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ಚಂಪಾ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ: ಸಿಎಂ ಸಂತಾಪ
ಖ್ಯಾತ ಕವಿ, ‘ಚಂಪಾ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ.
ಸಂಘಟನಕಾರರಾಗಿ, ಹೋರಾಟಗಾರರಾಗಿ, ನಾಡಿನ ಸಾಮಾಜಿಕ, ಸಾಂಸ್ಕೃತಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದ ಚಂಪಾ ಅವರ ನಿಧನದಿಂದ ನಮ್ಮ ನಾಡು ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ.
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು. ಗೋಕಾಕ್ ಚಳುವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು, ಎಂದು ಸಚಿವರು, ಸ್ಮರಿಸಿದ್ದಾರೆ. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.
ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ಮಾತನಾಡಿ, ಚಂಪಾ ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕರ್ತನ ತಲೆಗೆ ಹೊಡೆದ ವೀಡಿಯೋ ವೈರಲ್ ಆದ ಬೆನ್ನಲ್ಲೇ ತೀವ್ರ ಚರ್ಚೆ ನಡೆಯುತ್ತಿದೆ. ಈ ವೀಡಿಯೋವನ್ನು ಬಿಜೆಪಿ ಸಹ ಟ್ವೀಟ್ ಮಾಡಿದೆ. ಹೀಗಾಗಿ ಬಿಜೆಪಿಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರ ಪುತ್ರನ ಹಳೆ ವೀಡಿಯೋವನ್ನು ಅಪ್ಲೋಡ್ ಮಾಡಿ ತಿರುಗೇಟು ನೀಡಿದೆ.
ಬಿಜೆಪಿ ನಾಯಕರು ಪಕ್ಷದಲ್ಲಿ ತಾವು ಕಲಿತ ಗೂಂಡಾಗಿರಿಯ ಪಾಠಗಳನ್ನು ಮನೆಯಲ್ಲಿ ತಮ್ಮ ಮಕ್ಕಳಿಗೂ ಕಲಿಸುತ್ತಾರೆ ಎನಿಸುತ್ತದೆ!
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರು ಪಕ್ಷದಲ್ಲಿ ತಾವು ಕಲಿತ ಗೂಂಡಾಗಿರಿಯ ಪಾಠಗಳನ್ನು ಮನೆಯಲ್ಲಿ ತಮ್ಮ ಮಕ್ಕಳಿಗೂ ಕಲಿಸುತ್ತಾರೆ ಎನ್ನಿಸುತ್ತದೆ. ನಿಂಗೆ ಬೂಟಿನಲ್ಲಿ ಒದೆಯುತ್ತೇನೆ, ಬೂಟನ್ನು ಬಾಯಿಗೆ ಇಡುತ್ತೇನೆ ಎಂದು ಹೇಳಿ ಪೊಲೀಸರ ಮೇಲೆ ದೌರ್ಜನ್ಯ ಎಸಗಿದ್ದ ಗೋವಿಂದ ಕಾರಜೋಳರ ಪುತ್ರನ ಉದಾಹರಣೆ ಇದು. ಮೊದಲು ಬಿಜೆಪಿ ಸಂಸ್ಕಾರ ಕಲಿಯಲಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಇದನ್ನೂ ಓದಿ: ಕಾಮನ್ ಸೆನ್ಸ್ ಇಲ್ಲವಾ? – ಬೆಂಬಲಿಗನ ತಲೆಗೆ ಡಿಕೆಶಿ ಏಟು
2 ವರ್ಷದ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಸುದ್ದಿಯ ಹಳೇಯ ವೀಡಿಯೋವಾಗಿದ್ದು, ಕಾಂಗ್ರೆಸ್ ಇದೀಗ ಟ್ವೀಟ್ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ. ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿಗೆ ಕಾಂಗ್ರೆಸ್ ಈ ವಿಡಿಯೋ ಬಿಡುಗಡೆ ಮಾಡಿ ತಿರುಗೇಟು ನೀಡಿದೆ.
ಧಾರವಾಡ: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀಳುತ್ತದೆ ಎಂಬುದನ್ನು ನಿರ್ದಿಷ್ಟಕಾರಣಗಳಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಕುರಿತಾಗಿ ತಜ್ಞರ ವರದಿ ನೋಡಿಕೊಂಡು ಏನು ತಯಾರಿ ಮಾಡಬೇಕು ಅದನ್ನ ಸರ್ಕಾರ ಮಾಡಲಿದೆ. ಇಂದು ತಜ್ಞರು ಮಾಹಿತಿಯನ್ನು ಕೊಟ್ಟಿರಬಹುದು. ಮಕ್ಕಳ ಮೇಲೆ ಮೂರನೇ ಅಲೇ ಪರಿಣಾಮ ಬಿರುತ್ತೆ ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಮಕ್ಕಳಿಗೆ ನಾವು ವ್ಯಾಕ್ಸಿನ್ ಹಾಕಿಲ್ಲ, ಹೀಗಾಗಿ ಮಕ್ಕಳ ಮೇಲೆ ಸೋಂಕು ಪರಿಣಾಮ ಬೀರುತ್ತದೆ ಎಂಬ ಅಂದಾಜು ಇರಬಹುದು ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಈಗಲೇ ಕುಸ್ತಿ ಶುರುವಾಗಿದೆ: ಕಾರಜೋಳ
18 ವರ್ಷದ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಆರಂಭ ಮಾಡಿದ್ದೇವೆ, ಉಳಿದವರಿಗೆ ಕೂಡಾ ವ್ಯಾಕ್ಸಿನ್ ನೀಡಲಾಗುತ್ತಿದೆ. ಮಕ್ಕಳಿಗೆ ವ್ಯಾಕ್ಸಿನ್ ಹಾಕಿಲ್ಲ, ಹೀಗಾಗಿ ಮಕ್ಕಳಿಗೆ ಕೊರೊನಾ ಬರಬಹುದು ಎಂದು ಊಹೆ ಇರಬಹುದು, ಮಕ್ಕಳಿಗೆನೇ ಮೂರನೇ ಅಲೆಯಲ್ಲಿ ಕೊರೊನಾ ಬರಲಿದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಕಾರಣ ಇಲ್ಲಾ ಎಂದು ಈ ವೇಳೆ ಕಾರಜೋಳ ಹೇಳಿದರು.
ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಕೊರೊನಾ ಸಂಕಷ್ಟಕ್ಕೆ ತುತ್ತಾಗಿರೋದರಿಂದ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಲು ಆಗುತ್ತಿಲ್ಲ ಎಂದು ಹೇಳಿ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು. ಇದೀಗ ಮಾಧ್ಯಮ ಪ್ರಕಟನೆ ಮೂಲಕ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕಾರ್ಯಕರ್ತರೊಂದಿಗೆ ಹಂಚಿಕೊಂಡಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿರುವ ಪುತ್ರನಿಗೆ 23 ದಿನಗಳಿಂದ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿರುವ ವಿಷಯ ತಿಳಿಸಿದ್ದಾರೆ.
ಮಾಧ್ಯಮ ಪ್ರಕಟನೆ:
ಸಂತಸಗಳು ಕೆಲವೊಮ್ಮೆ ಹೊರಗೆ ಬರುತ್ತವೆ. ಆದರೆ ಸಂಕಷ್ಟಗಳು ಯಾವತ್ತಿಗೂ ಅನಾಥ. ಅದನ್ನು ಅನುಭವಿಸಿದರಿಗಷ್ಟೇ ಅದರ ಪ್ರಖರತೆ ಗೊತ್ತು. ಇದ ಪರಿಣಾಮವಾಗಿ ಸಾರ್ವಜನಿಕ ಬದುಕಿನಲ್ಲಿರುವವರ ಹಾಜರಿ ಅಥವಾ ಗೈರುಹಾಜರಿಗಳನ್ನು ಕನ್ನಡಕ ಹಾಕಿ ನೋಡುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಲಾರದು. ನನ್ನ ಪುತ್ರ ಡಾ. ಗೋಪಾಲ್ ಕಾರಜೋಳ ಕಳೆದ 23 ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನನ್ನ ಧರ್ಮಪತ್ನಿ ಕೂಡಾ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಆಸ್ಪತ್ರೆಯಿಂದ ಹಿಂದಿರುಗಿದ್ದಾರೆ. ನಾನೂ ಕೂಡಾ ಕೋವಿಡ್ 19ಕ್ಕೆ ಒಳಗಾಗಿ ಗುಣಮುಖನಾಗಿ ಹಿಂದಿರುಗಿದ್ದೇನೆ. ನಮ್ಮ ಕುಟುಂಬದಲ್ಲಿ ಒಟ್ಟಾರೆ 8 ಮಂದಿ ಕೊರೊನಾ ಸೋಂಕಿನಿಂದ ಒಳಗಾಗಿದ್ದೇವೆ. ಇದು ವಸ್ತುಸ್ಥಿತಿ.
ಇಂತಹ ಗತ್ಯಂತರ ಸಂದರ್ಭದಲ್ಲಿ ನಾನು ಎಲ್ಲೂ ಹೊರಗಡೆ ಹೋಗುವುದು ಸೂಕ್ತವಲ್ಲ. ಅನಿವಾರ್ಯವಿದ್ದ ಪ್ರಸಂಗದಲ್ಲಿ ಮಾತ್ರ ಮುನ್ನೆಚ್ಚರಿಕೆಯಿಂದ ಆಯಾಸವಾಗದಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ವೈದ್ಯರ ಸಲಹೆ ಇದೆ. ದೂರದ ಪ್ರಯಾಣ ನಿಷಿದ್ಧ ಎಂಬುದು ವೈದ್ಯರು ಕೊಟ್ಟಿರುವ ಎಚ್ಚರಿಕೆ. ಈ ಎಲ್ಲಾ ಅಂಶಗಳು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರ ಗಮನದಲ್ಲಿದೆ. ಅವರೂ ಕೂಡಾ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಸೂಚಿಸಿದ್ದಾರೆ.
ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ ಪ್ರವಾಹ ಪೀಡಿತ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಂತ್ರಸ್ತರ ಪರಿಹಾರಕ್ಕೆ ಕೈಗೊಳ್ಳಬೇಕಾದ ಮಾರ್ಗೋಪಾಯಗಳನ್ನು ಜಿಲ್ಲಾಡಳಿತಕ್ಕೆ ಖಚಿತವಾಗಿ ನಿರ್ದೇಶಿಸಿದ್ದೇನೆ. ಅದರ ಸತತ ಉಸ್ತುವಾರಿಯಲ್ಲಿ ಇದ್ದೇನೆ. ಪರಿಸ್ಥಿತಿಯ ಅನಿವಾರ್ಯತೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿಲ್ಲದಿರಬಹುದು. ಆದರೆ ಜವಾಬ್ದಾರಿಯಿಂದ ಉಪಮುಖ್ಯಮಂತ್ರಿಯಾಗಿ, ಜಿಲ್ಲಾಉಸ್ತುವಾರಿ ಸಚಿವರಾಗಿ ನೊಂದವರ ಪರಿಹಾರಕ್ಕೆ ಶ್ರಮಿಸುತ್ತಿದ್ದೇನೆ.
ಮಾತುಗಳಿಂದ ಇಲ್ಲವೇ ಘೋಷಣೆಗಳಿಂದ ಅಥವಾ ಟೀಕೆ ಟಿಪ್ಪಣಿಗಳಿಂದ ಸಂತ್ರಸ್ತರ ಪರಿಹಾರ ಕಾರ್ಯ ಆಗಲಾರದು. ಅದಕ್ಕೆ ಬೇಕಾದುದು ಸರ್ಕಾರದ ದೃಢ ಸಂಕಲ್ಪ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಟೀಕೆ ಟಿಪ್ಪಣಿಗಳಿಗೆ ಮಾರುಹೋಗದೇ ಸರ್ಕಾರದ ವಿಶ್ವಾಸಾರ್ಹ ಕ್ರಮಗಳನ್ನು ಗಮನಿಸಬೇಕೆಂದು ಎಂದು ಗೋವಿಂದ್ ಕಾರಜೋಳ ಮನವಿ ಮಾಡಿಕೊಂಡಿದ್ದಾರೆ.
ಯುಗಾದಿಯಿಂದ ಆರಂಭವಾದ ಈ ಕೊರೊನಾ ವೈರಾಣು ನಿವಾರಣೆ ಹಾಗೂ ನೊಂದವರ ಕಲ್ಯಾಣಕ್ಕೆ ನಾನು ಕೈಗೊಂಡಿರುವ ಕಾರ್ಯ, ಪರಿಹಾರಕ್ರಮಗಳು ಎಲ್ಲರಿಗೂ ಗೊತ್ತಿರುವ ಸಂಗತಿ. ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ್ದನ್ನು ಸ್ಮರಿಸಬೇಕು. 2009ರ ಅತಿವೃಷ್ಟಿ ಸಂದರ್ಭದ ಪರಿಸ್ಥಿತಿಯಲ್ಲಿ ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣಾ ಕಾರ್ಯ, ಪರಿಹಾರಕಾರ್ಯಗಳನ್ನು ಕೈಗೊಂಡಿರುವ ಕ್ರಮದ ಬಗ್ಗೆ ತಮ್ಮಲ್ಲರಿಗೂ ತಿಳಿದ ಸಂಗತಿಯಾಗಿದೆ.
ವರ್ತಮಾನದ ಒಂದು ಘಟನೆಯಿಂದಷ್ಟೇ ವ್ಯಕ್ತಿಯನ್ನು ಅಳೆಯಲು ಹೋಗಬಾರದು. ಹಿಂದಿನ ವಿದ್ಯಾಮಾನಗಳು ಈಗಿನ ಸ್ಥಿತಿಯನ್ನು ಗುರುತಿಸಲು ಯಾವತ್ತಿಗೂ ನಿರ್ಣಾಯಕ ಎಂಬುದು ನನ್ನ ತಿಳುವಳಿಕೆ. ಈ ಸಂದರ್ಭದಲ್ಲಿ ಪರಂಪರೆಯ ಬೆಳಕಿನಲ್ಲಿ ವರ್ತಮಾನದ ಕತ್ತಲನ್ನು ಓಡಿಸಿ ಭವಿಷ್ಯಕ್ಕೆ ಬೆಳಕನ್ನು ತರುವ ಕಡೆ ಸರ್ಕಾರದ ಆಡಳಿತ ಯಂತ್ರವನ್ನು ಬಳಸಿಕೊಂಡು ಮುನ್ನಡೆಯುವುದು ನಾನು ತೊಟ್ಟಿರುವ ಧೀಕ್ಷೆ. ಇದಕ್ಕೆ ಇಡೀ ಕರ್ನಾಟಕದ ಜನತೆಯ ಆರೈಕೆ/ ಹಾರೈಕೆ ಅಗತ್ಯ ಎಂದು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ನನಗೆ 70 ವರ್ಷ ವಯಸ್ಸಾಗಿದೆ. ನಾನು ಹಾಗೂ ನನ್ನ ಕುಟುಂಬದವರು ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದೇವೆ. 600, 700 ಕಿ.ಮೀ.ಓಡಾಡಲು ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಕಣ್ಣೀರು ಹಾಕಿದ್ದಾರೆ.
ಚುನಾವಣಾ ಪ್ರಚಾರ ಮಾಡುತ್ತಾರೆ, ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ತಮ್ಮ ಕ್ಷೇತ್ರದ ಜನರ ಬಳಿ ಹೋಗುವುದಿಲ್ಲ ಎಂಬುದರ ಕುರಿತು ಕಾರಜೋಳ ಪ್ರತಿಕ್ರಿಯಿಸಿದ್ದು, ನನಗೆ 70 ವರ್ಷ. ನಾನು ಇಷ್ಟು ವರ್ಷ ಯಾವ ರೀತಿ ಕೆಲಸ ಮಾಡಿದ್ದೇನೆ, ಕೊರೊನಾ ಸಂದರ್ಭದಲ್ಲಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ನಿಮಗೆ ತಿಳಿದಿದೆ. ನಾನು, ನನ್ನ ಕುಟುಂಬ ನಿರಂತರವಾಗಿ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದೇವೆ. ಹೀಗಾಗಿ 600-700 ಕಿ.ಮೀ. ಹೋಗಲು ಆಗಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ನನ್ನ ಪರಿಸ್ಥಿತಿ ಅರಿತು ಮುಖ್ಯಮಂತ್ರಿಗಳು ಕಂದಾಯ ಸಚಿವ ಆರ್.ಅಶೋಕ್ ಅವರನ್ನು ರಾಜ್ಯ ಪ್ರವಾಸಕ್ಕೆ ಕಳುಹಿಸಿದ್ದಾರೆ. ನನ್ನ ಕುಟುಂಬದ ಸದಸ್ಯರು ಕೊರೊನಾದಿಂದ ಬಳಲುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ಹೇಳುತಿದ್ದೇನೆ. ದಯಮಾಡಿ ಒಂದು ಘಟನೆಯನ್ನು ಇಟ್ಟುಕೊಂಡು ಒಬ್ಬ ವ್ಯಕ್ತಿಯನ್ನು ಅಳೆಯಬೇಡಿ ಎಂದು ಕೇಳಿಕೊಂಡಿದ್ದಾರೆ.
ಶಿರಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ವಿಚಾರದ ಕುರಿತು ಮಾತನಾಡಿದ ಅವರು, ಅಸಹಾಯಕನಾಗಿ ಶಿರಾಗೆ ಹೋಗಿ ಬಂದಿದ್ದೇನೆ. ಬಂದು ಮುಖ ತೋರಿಸಿ ಎಂದು ಅಭ್ಯರ್ಥಿ ಮನವಿ ಮಾಡಿದ್ದರು. ಹೀಗಾಗಿ ಅಲ್ಲಿಗೆ ಹೋಗಿ ಬಂದೆ. ಅಸಹಾಯಕನಾಗಿ ಹೋಗಿ ಬಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇಡೀ ಸಮಸ್ಯೆಯನ್ನು ಕಂದಾಯ ಸಚಿವರು ನೋಡಿಕೊಳ್ಳುತ್ತಿದ್ದಾರೆ. ಪ್ರಧಾನಿ ಸಹ ನಿನ್ನೆ ಸಿಎಂ ಜೊತೆಗೆ ಮಾತಾಡಿದ್ದಾರೆ. ಸಿಎಂ ಸಮಸ್ಯೆ ಗಮನಿಸುತ್ತಿದ್ದಾರೆ. ಅಧಿಕಾರಿಗಳು ಸಹ ಪ್ರಯತ್ನ ಮಾಡುತ್ತಿದ್ದಾರೆ. ಅಧಿಕಾರಿಗಳ ಜೊತೆಗೆ ಜನರು ಸಹಕಾರ ಮಾಡಬೇಕು. ಸರ್ಕಾರ ಜನರ ಜೊತೆಗೆ ಇದೆ. ಎಲ್ಲ ರೀತಿಯ ಸಹಕಾರ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಪ್ರವಾಹದ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಮನೆ ಕಳೆದುಕೊಂಡವರ ಸಮೀಕ್ಷೆ ಮಾಡಿ, ಮನೆ ಕೊಡಲು ಸೂಚನೆ ಕೊಟ್ಟಿದ್ದೇವೆ. ಮಳೆ ನಿಂತ ಮೇಲೂ ಮನೆ ಬೀಳುವ ಸಾಧ್ಯತೆ ಇದೆ. ಈ ಕುರಿತು ಎಲ್ಲ ಸೂಚನೆಯನ್ನು ಜಿಲ್ಲಾಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.